Tag: Sathanur Police

  • ಅರಣ್ಯದಲ್ಲಿ ಪಾರ್ಟಿ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಇಲಾಖೆ ಸಿಬ್ಬಂದಿ, ಪೊಲೀಸರ ಮೇಲೆ ಪುಂಡರಿಂದ ಹಲ್ಲೆ

    ಅರಣ್ಯದಲ್ಲಿ ಪಾರ್ಟಿ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಇಲಾಖೆ ಸಿಬ್ಬಂದಿ, ಪೊಲೀಸರ ಮೇಲೆ ಪುಂಡರಿಂದ ಹಲ್ಲೆ

    – ರೌಡಿಶೀಟರ್ ಸೇರಿ ಮೂವರು ಆರೋಪಿಗಳು ಅರೆಸ್ಟ್

    ರಾಮನಗರ: ಅರಣ್ಯ ಪ್ರದೇಶದಲ್ಲಿ ಎಣ್ಣೆ ಪಾರ್ಟಿ ಮಾಡುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರ ಮೇಲೆ ರೌಡಿಶೀಟರ್ ಸೇರಿ ಪುಂಡರ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಕನಕಪುರ (Kanakapura) ತಾಲೂಕಿನ ಕುರುಬಳ್ಳಿದೊಡ್ಡಿ ಗ್ರಾಮದ ಬಳಿ ನಡೆದಿದೆ.

    ಆರೋಪಿಗಳನ್ನು ರೌಡಿಶೀಟರ್ ಕಿರಣ್, ಗುರುಪ್ರಸಾದ್, ಸುಂದರ್ ಎಂದು ಗುರುತಿಸಲಾಗಿದ್ದು, ಈ ಮೂವರನ್ನು ಸಾತನೂರು ಪೊಲೀಸರು ಬಂಧಿಸಿದ್ದಾರೆ.ಇದನ್ನೂ ಓದಿ: ಬಾಯಿ ಸುಡಲಿದೆ ಕಾಫಿ – ತಿಂಗಳಾಂತ್ಯಕ್ಕೆ ಕಪ್ ಕಾಫಿ ಬೆಲೆ 3 ರೂ. ಏರಿಕೆ ಸಾಧ್ಯತೆ

    ಸೋಮವಾರ ರಾತ್ರಿ ಗ್ರಾಮದ ಐವರು ಯುವಕರು ಕಬ್ಬಾಳು ಅರಣ್ಯ ವ್ಯಾಪ್ತಿಯಲ್ಲಿ ಪಾರ್ಟಿ ಮಾಡುತ್ತಿದ್ದರು. ಈ ವೇಳೆ ಗಸ್ತಿನಲ್ಲಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಯುವಕರನ್ನ ಪ್ರಶ್ನೆ ಮಾಡಿದ್ದಕ್ಕೆ ಗಲಾಟೆ ಆರಂಭವಾಗಿದೆ.

    ಗಲಾಟೆ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿದ್ದು, ಅರಣ್ಯ ಇಲಾಖೆ ವಾಹನಕ್ಕೆ ಬೆಂಕಿ ಹಚ್ಚಲು ಮುಂದಾಗಿದ್ದಾರೆ. ಕೂಡಲೇ 112 ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ಜಗಳ ಬಿಡಿಸಲು ಮುಂದಾಗಿದ್ದಾರೆ. ಈ ವೇಳೆ ಕುಡಿದ ಮತ್ತಿನಲ್ಲಿದ್ದ ಯುವಕರು ಪೊಲೀಸರ ಮೇಲೆಯೂ ಹಲ್ಲೆ ಮಾಡಿ, ಪೊಲೀಸರ ಟ್ಯಾಬ್ ಒಡೆದು ಹಾಕಿದ್ದಾರೆ. ಬಳಿಕ ಸ್ಥಳಕ್ಕೆ ಸಾತನೂರು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

    ಸದ್ಯ ಮೂವರು ಆರೋಪಿಗಳನ್ನು ಸಾತನೂರು ಪೊಲೀಸರು ಬಂಧಿಸಿದ್ದು, ಪರಾರಿಯಾಗಿದ್ದ ಇನ್ನಿಬ್ಬರ ಪತ್ತೆಗಾಗಿ ಶೋಧ ನಡೆಸಿದ್ದಾರೆ. ಈ ಸಂಬಂಧ ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಕೇರಳದ ಅನಂತ ಪದ್ಮನಾಭ ದೇವಸ್ಥಾನಕ್ಕೆ ಭೇಟಿ ನೀಡಿದ ತಾರಾ

  • ರಸ್ತೆ ಬದಿ ಮಹಿಳೆ ಅನುಮಾನಾಸ್ಪದ ಸಾವು

    ರಸ್ತೆ ಬದಿ ಮಹಿಳೆ ಅನುಮಾನಾಸ್ಪದ ಸಾವು

    ರಾಮನಗರ: ಮಹಿಳೆಯೊಬ್ಬರು (Women) ರಸ್ತೆ ಬದಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ರಾಮನಗರ (Ramanagara) ಜಿಲ್ಲೆಯಲ್ಲಿ ನಡೆದಿದೆ.

    ಕನಕಪುರ (Kanakapura) ತಾಲ್ಲೂಕಿನ ಮಾರಣ್ಣ ದೊಡ್ಡಿಯ ರಸ್ತೆ ಬಳಿ ಮಹಿಳೆಯೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ. ಮೃತ ಮಗಿಳೆ ಶೃತಿ (32) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ತೋಟದ ಮನೆಗೆ ಹೋಗಲು ಅಡ್ಡಿಯಾಗಿದ್ದನೆಂದು ಗಂಡನನ್ನೇ ಕೊಲೆಗೈದ ಪತ್ನಿ

    ಕನಕಪುರ ಟೌನ್ ಕುರುಪೇಟೆ ಸೊಲ್ಲಾಪುರದಮ್ಮ ಬೀದಿ ನಿವಾಸಿ ಶೃತಿಯನ್ನ ಕೊಲೆ ಮಾಡಿ ರಸ್ತೆ ಬದಿ ಮೃತದೇಹ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಸಾತನೂರು ಪೊಲೀಸರು (Sathanur Police) ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಬಿಗ್ ಬಾಸ್ ಫಿನಾಲೆಗೆ 6 ಸ್ಪರ್ಧಿಗಳ ಎಂಟ್ರಿ: ಕಾದಿದೆ ಮತ್ತೊಂದು ಶಾಕ್

    ಇತ್ತೀಚೆಗೆ ರಾಮನಗರ ಜಿಲ್ಲೆಯ ಕೆಂಪೇಗೌಡನ ದೊಡ್ಡಿ ಬಳಿ ದಶಪಥ ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿತ್ತು. ಈ ಬಗ್ಗೆ ಪೊಲೀಸರು ತನಿಖೆ ನಡೆಸಿದಾಗ ಹೆಂಡತಿಯೇ ತನ್ನ ಪ್ರಿಯಕರನೊಂದಿಗೆ ಸೇರಿ ಚನ್ನಪಟ್ಟಣ ತಾಲೂಕಿನ ರಾಮನರಸಿಂಹರಾಜಪುರ (ಕೃಷ್ಣಾಪುರ) ನಿವಾಸಿ ದೇಸೇಗೌಡನನ್ನು(45) ಕೊಲೆಗೈದಿರುವುದು ಸಾಬೀತಾಗಿತ್ತು. ಬಳಿಕ ಹೆಂಡತಿ ಹಾಗೂ ಪ್ರಿಯಕರನನ್ನ ಬಂಧಿಸಲಾಗಿತ್ತು.

    Live Tv
    [brid partner=56869869 player=32851 video=960834 autoplay=true]