Tag: Satish Jarakiholi

  • ಸತೀಶ್‌ ಜಾರಕಿಹೊಳಿಗೆ ಮುಖಭಂಗ – 15ಕ್ಕೆ 15 ಕ್ಷೇತ್ರ ಗೆದ್ದ ಕತ್ತಿ ಬಣ

    ಸತೀಶ್‌ ಜಾರಕಿಹೊಳಿಗೆ ಮುಖಭಂಗ – 15ಕ್ಕೆ 15 ಕ್ಷೇತ್ರ ಗೆದ್ದ ಕತ್ತಿ ಬಣ

    ಬೆಳಗಾವಿ: ಹುಕ್ಕೇರಿ (Hukeeri)  ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯಲ್ಲಿ ರಮೇಶ್ ಕತ್ತಿ (Ramesh Katti) ಬಣ ಇತಿಹಾಸ ನಿರ್ಮಿಸಿದೆ. ಒಟ್ಟು 15 ಜನ ನಿರ್ದೇಶಕರ ಸ್ಥಾನಕ್ಕೆ ನಡೆದಿದ್ದ ಚುನಾವಣೆಯಲ್ಲಿ 15ಕ್ಕೆ 15 ಕ್ಷೇತ್ರಗಳನ್ನ  ರಮೇಶ್ ಕತ್ತಿ ಬಣ ಗೆದ್ದು ಬೀಗಿದೆ.

    ಕಳೆದ ಒಂದು ತಿಂಗಳಿನಿಂದ ಹುಕ್ಕೇರಿಯಲ್ಲೇಬಿಟ್ಟಿದ್ದ ಸತೀಶ್ ಜಾರಕಿಹೊಳಿ (Satish Jarkiholi) ಕುಟುಂಬಕ್ಕೆ ಭಾರಿ ಮುಖಭಂಗವಾಗಿದೆ. ಹುಕ್ಕೇರಿ ಪಟ್ಟಣದ ಬಾಪೂಜಿ ಕಾಲೇಜು ಬಳಿ ಕತ್ತಿ ಬೆಂಬಲಿಗರು ಸತೀಶ್ ಜಾರಕಿಹೊಳಿ ಬೆಂಬಗಲಿಗರು ಪ್ರಯಾಣಿಸುತ್ತಿದ್ದ ಕಾರಿಗೆ ಕಲ್ಲು ಹೊಡೆದಿದ್ದಾರೆ ಎಂದ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ:  ಮತ್ತೆ ಹೊಸ ನಾಟಕ- ಕಪ್‌ ನೀಡಲು ಹೊಸ ಷರತ್ತು ಮುಂದಿಟ್ಟ ನಖ್ವಿ

     

    ಮಲಪ್ರಭಾ ಸಕ್ಕರೆ ಕಾರ್ಖಾನೆ ಚುನಾವಣೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ನೇತೃತ್ವದ ಪುನಶ್ಚೇತನ ಪ್ಯಾನೆಲ್ ಭರ್ಜರಿ ಗೆಲುವು ಸಾಧಿಸಿದೆ. ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಶಾಸಕ ಬಾಬಾ ಸಾಹೇಬ್ ಪಾಟೀಲ್, ವಿಠ್ಠಲ ಹಲಗೇಕರ್ ನೇತೃತ್ವದ ಪ್ಯಾನೆಲ್‌ನಿಂದ ಸ್ಫರ್ಧಿಸಿದ್ದ 12ಕ್ಕೂ ಹೆಚ್ಚು ಸದಸ್ಯರು ಗೆಲುವು ಸಾಧಿಸಿದ್ದಾರೆ. ಇದನ್ನೂ ಓದಿ: ಮದ್ದೂರು ಕಲ್ಲು ತೂರಾಟಕ್ಕೆ ಟ್ವಿಸ್ಟ್ ಟಾರ್ಗೆಟ್ ಮಾಡಿದ್ದೇ ಒಂದು, ಕಲ್ಲು ತೂರಿದ್ದೇ ಮತ್ತೊಂದು ಗಣೇಶನ ಮೇಲೆ

    ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯಲ್ಲಿ ಮತ ಎಣಿಕೆ ಕಾರ್ಯ ನಡೆಯಿತು. ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಕಾರ್ಖಾನೆಯ ಎದುರು ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು.

  • ಸಿಎಂ ಭೇಟಿ ಹೊತ್ತಲ್ಲೇ ಬೆಳಗಾವಿಯಲ್ಲಿ ʻಭವಿಷ್ಯದ ಮುಖ್ಯಮಂತ್ರಿʼ ಬ್ಯಾನರ್ – ರಾಜಕೀಯದಲ್ಲಿ ಸಂಚಲನ

    ಸಿಎಂ ಭೇಟಿ ಹೊತ್ತಲ್ಲೇ ಬೆಳಗಾವಿಯಲ್ಲಿ ʻಭವಿಷ್ಯದ ಮುಖ್ಯಮಂತ್ರಿʼ ಬ್ಯಾನರ್ – ರಾಜಕೀಯದಲ್ಲಿ ಸಂಚಲನ

    ಬೆಳಗಾವಿ: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಚರ್ಚೆಯಲ್ಲಿರುವ ಹೊತ್ತಿನಲ್ಲಿ ಮಹತ್ವದ ವಿಚಾರಗಳು ಬೆಳಕಿಗೆ ಬರುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಭೇಟಿ ನೀಡುವ ಹೊತ್ತಿನಲ್ಲೇ ಕುಂದಾನಗರಿ ಬೆಳಗಾವಿಯಲ್ಲಿ (Belagavi) `ವಿಷ್ಯದ ಮುಖ್ಯಮಂತ್ರಿ’ ಬ್ಯಾನರ್ ಭಾರೀ ಕುತೂಹಲ ಮೂಡಿಸಿದೆ.

    ಭಾನುವಾರ ಬೆಳಗಾವಿ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರ ಕರ್ನಾಟಕದ ಆದಿಶಕ್ತಿ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಈ ಹೊತ್ತಿನಲ್ಲೇ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ (Satish Jarakiholi) ಭಾವಚಿತ್ರ ಇರೋ ಬ್ಯಾನರ್ ಅಳವಡಿಕೆ ಮಾಡಲಾಗಿದೆ. ಇದನ್ನೂ ಓದಿ: Mysuru Dasara Photo Gallery: ಮೈಸೂರಲ್ಲಿ ಪಂಜಿನ ಕಮಾಯತ್‌ ಕಮಾಲ್..‌ ಬೆಳಕಿನ ಝಲಕ್‌

    ಈ ಬ್ಯಾನರ್‌ನಲ್ಲಿ ಜಾರಕಿಹೊಳಿ ಭಾವಚಿತ್ರದ ಕೆಳಗೆ ʻಭವಿಷ್ಯದ ಮುಂದಿನ ಮುಖ್ಯಮಂತ್ರಿʼ ಎಂದು ಬರೆಯಲಾಗಿದೆ. ಜೊತೆಗೆ ಉಳಿದ ಸಹೋದರರು ಹಾಗೂ ಅವರ ಮಕ್ಕಳ ಭಾವಚಿತ್ರಗಳನ್ನು ಬ್ಯಾನರ್‌ನಲ್ಲಿ ಹಾಕಿಸಲಾಗಿದೆ. ಬಿಜೆಪಿ ಶಾಸಕರಾದ ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ಭೀಮಶಿ ಜಾರಕಿಹೊಳಿ, ಎಂಎಲ್‌ಸಿ ಲಖನ್ ಜಾರಕಿಹೊಳಿ, ಸತೀಶ್ ಪುತ್ರಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ, ಪುತ್ರ ರಾಹುಲ್ ಜಾರಕಿಹೊಳಿ ಅವರ ಭಾವಚಿತ್ರಗಳೂ ಇವೆ.

    ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಮುಖಂಡರಿಂದ ಬ್ಯಾನರ್ ಅಳವಡಿಕೆ ಮಾಡಿದ್ದು, ಬ್ಯಾನರ್‌ನಲ್ಲಿ ಕನ್ನಡ ರಾಜ್ಯೋತ್ಸವ, ದೀಪಾವಳಿ ಹಬ್ಬ ಹಾಗೂ ವಾಲ್ಮೀಕಿ ಜಯಂತಿ ಶುಭಾಶಯಗನ್ನು ಅಭಿಮಾನಿಗಳು ಕೋರಿದ್ದಾರೆ. ಇದನ್ನೂ ಓದಿ: ಮಾಜಿ ಸಚಿವ ಸಿದ್ದಿಕಿ ಹತ್ಯೆ ಹಿಂದೆ ಬಿಷ್ಣೋಯ್‌ ಗ್ಯಾಂಗ್‌ ಕೈವಾಡ – ಬೆಚ್ಚಿಬೀಳಿಸುವ ರಹಸ್ಯ ಬಯಲು

    ಕಳೆದ ಕೆಲ ದಿನಗಳಲ್ಲಿ ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಭಾರೀ ಚರ್ಚೆಯಲ್ಲಿದೆ. ಬಿಜೆಪಿ ನಾಯಕರೂ ಸಹ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ಇತ್ತ ಸತೀಶ್‌ ಜಾರಕಿಹೊಳಿ, ಡಿ.ಕೆ ಶಿವಕುಮಾರ್‌ ಅಥವಾ ಹೆಚ್‌.ಸಿ ಮಹದೇವಪ್ಪ ಮೂವರಲ್ಲಿ ಒಬ್ಬರಿಗೆ ಚಾನ್ಸ್‌ ಸಿಗಬಹುದು ಎಂಬ ವದಂತಿಗಳೂ ಹರಿದಾಡುತ್ತಿವೆ. ಈ ನಡುವೆ ಸತೀಶ್‌ ಜಾರಕಿಹೊಳಿ ಅವರ ನಡೆ ದಿನದಿಂದ ದಿನಕ್ಕೆ ರಾಜಕೀಯದಲ್ಲಿ ಸಂಚಲನ ಸೃಷ್ಟಿ ಮಾಡುತ್ತಿದೆ. ಇದನ್ನೂ ಓದಿ: ಸಂಜು, ಸೂರ್ಯ ಬ್ಯಾಟಿಂಗ್‌ ಅಬ್ಬರ – ಬಾಂಗ್ಲಾ ವಿರುದ್ಧ ಭಾರತಕ್ಕೆ 133 ರನ್‌ ಭರ್ಜರಿ ಜಯ; 3-0 ಅಂತರದಲ್ಲಿ ಕ್ಲೀನ್‌ಸ್ವೀಪ್‌ 

  • `ಅಹಿಂದ’ ನಾಯಕರ ಡಿನ್ನರ್‌ ಮೀಟಿಂಗ್‌ – ರಾಜ್ಯ ರಾಜಕೀಯದಲ್ಲಿ ಸಂಚಲನ

    `ಅಹಿಂದ’ ನಾಯಕರ ಡಿನ್ನರ್‌ ಮೀಟಿಂಗ್‌ – ರಾಜ್ಯ ರಾಜಕೀಯದಲ್ಲಿ ಸಂಚಲನ

    ಮೈಸೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲೇ ಸಚಿವ ಸತೀಶ್‌ ಜಾರಕಿಹೊಳಿ (Satish Jarakiholi) ಸಿಎಂ ತವರು ಜಿಲ್ಲೆಗೆ ಭೇಟಿ ನೀಡಿ, ಸ್ಥಳೀಯ ಶಾಸಕರು ಹಾಗೂ ಸಚಿವರೊಂದಿಗೆ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

    ಮಂಗಳವಾರ ಮೈಸೂರಿಗೆ ಭೇಟಿ ನೀಡಿದ್ದ ಸತೀಶ್‌ ಜಾರಕಿಹೊಳಿ ಸ್ಥಳೀಯ ಶಾಸಕರೊಂದಿಗೆ ಚರ್ಚೆ ನಡೆಸಿದ್ದಾರೆ. ಅಲ್ಲದೇ ಚಾಮರಾಜನಗರ ಸಂಸದ ಸುನೀಲ್ ಬೋಸ್ ಮನೆಯಲ್ಲಿ ʻಅಹಿಂದʼ ನಾಯಕರ ಡಿನ್ನರ್ ಮೀಟಿಂಗ್‌ನಲ್ಲೂ ಭಾಗಿಯಾಗಿದ್ದಾರೆ. ಡಿನ್ನರ್‌ ಸಭೆಯಲ್ಲಿ ಸಚಿವತ್ರಯರಾದ ಡಾ.ಹೆಚ್.ಸಿ ಮಹದೇವಪ್ಪ (HC Mahadevappa), ಗೃಹ ಸಚಿವ ಡಾ.ಜಿ ಪರಮೇಶ್ವರ್, ಸಚಿವ ಸತೀಶ್ ಜಾರಕಿಹೊಳಿ ಭಾಗಿಯಾಗಿದ್ದಾರೆ. ಮೂವರು ಹಿರಿಯ ಸಚಿವರು ಡಿನ್ನರ್ ನೆಪದಲ್ಲಿ ಮಹತ್ವದ ಸಭೆ ನಡೆಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ‘ಕಾಂತಾರ’ ಚಿತ್ರದ ಪ್ರತಿ ಹಂತವು ವಿಶೇಷವಾಗಿತ್ತು – ರಾಷ್ಟ್ರ ಪ್ರಶಸ್ತಿ ವಿಜೇತ ರಿಷಬ್ ಶೆಟ್ಟಿ

    ಈ ಸಭೆಗಾಗಿಯೆ ಇಡೀ ದಿನ ಮೈಸೂರಿನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಉಳಿದಿದ್ದರು. ಯಾವುದೇ ಅಧಿಕೃತ ಕಾರ್ಯಕ್ರಮ ಇರದಿದ್ದರೂ ಇಡೀ ದಿನ ಮೈಸೂರಿನಲ್ಲಿ ಇದ್ದು ರಾತ್ರಿ ಸಭೆಯಲ್ಲಿ ಪಾಲ್ಗೊಂಡಿದ್ದರು ಎಂದು ಆಪ್ತ ಮೂಲಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ ಸಿಎಂ ಬದಲಾವಣೆ ಚರ್ಚೆ ವಿಚಾರದಲ್ಲಿ ಇದೀಗ ಡಿನ್ನರ್‌ ಮೀಟಿಂಗ್‌ ಸಹ ಮಹತ್ವ ಪಡೆದುಕೊಂಡಿದೆ. ಇದನ್ನೂ ಓದಿ: ಬಿಜೆಪಿಗೆ ಸತತ 3ನೇ ಬಾರಿಗೆ ಅಧಿಕಾರ ನೀಡಿ ಹರಿಯಾಣ ಇತಿಹಾಸ ಬರೆದಿದೆ: ಮೋದಿ ಸೆಲ್ಯೂಟ್‌

    ಜಾರಕಿಹೊಳಿ ಭೇಟಿಯಾಗಿದ್ದ ವಿಜಯೇಂದ್ರ:
    ಸೋಮವಾರವಷ್ಟೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಅವರ ಸರ್ಕಾರಿ ನಿವಾಸದಲ್ಲಿ ಭೇಟಿಯಾಗಿದ್ದರು. ಈ ಸಂದರ್ಭದಲ್ಲಿ ಶಿಕಾರಿಪುರದಲ್ಲಿ ಹೊಸದಾಗಿ ನಿರ್ಮಾಣವಾಗಲಿರುವ ಕುಟ್ರಳ್ಳಿ ಟೋಲ್‌ನಿಂದ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಯ ಬಗ್ಗೆ ಚರ್ಚೆ ನಡೆಸಿದರು.

  • ಮಲ್ಲಿಕಾರ್ಜುನ್ ಖರ್ಗೆಯನ್ನು ಭೇಟಿಯಾದ ಸತೀಶ್ ಜಾರಕಿಹೊಳಿ

    ಮಲ್ಲಿಕಾರ್ಜುನ್ ಖರ್ಗೆಯನ್ನು ಭೇಟಿಯಾದ ಸತೀಶ್ ಜಾರಕಿಹೊಳಿ

    – ದಲಿತ ಸಿಎಂ ಚರ್ಚೆ ಮತ್ತೆ ಮುನ್ನೆಲೆಗೆ

    ನವದೆಹಲಿ: ಮೂಡಾ ಪ್ರಕರಣದಲ್ಲಿ (MUDA Scam) ಸಿಎಂ ರಾಜೀನಾಮೆಗೆ (CM Siddaramaiah) ಒತ್ತಾಯ ವ್ಯಕ್ತವಾಗುತ್ತಿರುವ ಹೊತ್ತಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ (Mallikarjun Kharge) ಅವರನ್ನು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ (Satish Jarakholi) ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ದಲಿತ ಸಚಿವರೊಂದಿಗೆ ಸಭೆ ನಡೆಸಿದ ಬೆನ್ನಲ್ಲೇ ಜಾರಕಿಹೊಳಿ ಹಾಗೂ ಖರ್ಗೆಯವರ ಭೇಟಿ ಮಹತ್ವ ಪಡೆದುಕೊಂಡಿದೆ.

    ದೆಹಲಿಯಲ್ಲಿ (Delhi) ಮಲ್ಲಿಕಾರ್ಜುನ್ ಖರ್ಗೆ ನಿವಾಸದಲ್ಲಿ ಭೇಟಿಯಾಗಿರುವ ಸತೀಶ್ ಜಾರಕಿಹೊಳಿ, ಪ್ರಸಕ್ತ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಮೂಡಾ ಪ್ರಕರಣದಲ್ಲಿ ನಾವು ಸಿಎಂ ಸಿದ್ದರಾಮಯ್ಯ ಬೆನ್ನಿಗೆ ನಿಂತಿದ್ದೇವೆ. ಪ್ರತಿ ಹಂತದಲ್ಲೂ ನಾವು ಸಮರ್ಥಿಸಿಕೊಳ್ಳುತ್ತಿದ್ದೇವೆ ಎಂದಿದ್ದಾರೆ.ಇದನ್ನೂ ಓದಿ: ಪುಣೆಯಲ್ಲಿ 21ರ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

    ಒಂದು ವೇಳೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸಂದರ್ಭ ಎದುರಾದರೆ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ನಾಯಕರಿಗೆ ಸಿಎಂ ಸ್ಥಾನ ಸಿಗಬೇಕು. ಇದಕ್ಕೆ ನಾವೆಲ್ಲ ಒಗ್ಗಟ್ಟಾಗಿ ನಿಂತು ಸಿಎಂ ಸ್ಥಾನವನ್ನು ಸಮುದಾಯಕ್ಕೆ ಪಡೆಯಬೇಕು ಎನ್ನುವ ನಿಟ್ಟಿನಲ್ಲಿ ಖರ್ಗೆ ಅವರ ಜೊತೆಗೆ ಚರ್ಚೆ ನಡೆದಿದೆ ಎನ್ನಲಾಗಿದೆ.

    ಇದಕ್ಕೂ ಮುನ್ನ ಎರಡು ದಿನಗಳ ಹಿಂದೆ ಸಮಾಜ ಕಲ್ಯಾಣ ಸಚಿವ ಮಹದೇವಪ್ಪ, ಗೃಹ ಸಚಿವ ಪರಮೇಶ್ವರ್ ಜೊತೆಗೆ ಸತೀಶ್ ಜಾರಕಿಹೊಳಿ ರಹಸ್ಯ ಮಾತುಕತೆ ನಡೆಸಿದ್ದರು. ಈ ಸಭೆಯಲ್ಲೂ ಮುಂದಿನ ರಾಜಕೀಯ ಬೆಳವಣಿಗೆ ಹಾಗೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವ ಸನ್ನಿವೇಶ ಒದಗಿ ಬಂದರೆ ಮುಂದಿನ ನಿಲುವುಗಳ ಬಗ್ಗೆ ಚರ್ಚೆ ನಡೆದಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಶೀಘ್ರದಲ್ಲೇ ದರ ಏರಿಕೆ ಶಾಕ್!

  • ಫೋನ್‌ನಲ್ಲಿ ಮಾತಾಡಿದ್ದಕ್ಕೆ ಡಿಕೆಶಿ ರಾಜೀನಾಮೆ ಕೊಡೋದಕ್ಕೆ ಆಗುತ್ತಾ..?: HDKಗೆ ಸತೀಶ್ ತಿರುಗೇಟು

    ಫೋನ್‌ನಲ್ಲಿ ಮಾತಾಡಿದ್ದಕ್ಕೆ ಡಿಕೆಶಿ ರಾಜೀನಾಮೆ ಕೊಡೋದಕ್ಕೆ ಆಗುತ್ತಾ..?: HDKಗೆ ಸತೀಶ್ ತಿರುಗೇಟು

    ಬೆಂಗಳೂರು: ಫೋನ್ ಕದ್ದಾಲಿಕೆ (Phone Tapping) ಆರೋಪ ಮಾಡಿರುವ ಹೆಚ್‌ಡಿಕೆ, ಆರ್.ಅಶೋಕ್ ಗೆ ಸಚಿವ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ.

    ಕೇಂದ್ರದಲ್ಲಿ ಬಿಜೆಪಿಯವರದ್ದೇ (BJP) ಸರ್ಕಾರ ಇದೆಯಲ್ಲವಾ..!? ತನಿಖೆ ಮಾಡಬಹುದಲ್ಲವಾ.? ಇದರಲ್ಲಿ ರಾಷ್ಟ್ರೀಯ ಭದ್ರತಾ ವಿಚಾರ ಬರುತ್ತೆ. ಕದ್ದಾಲಿಕೆ ಮಾಡಿದ್ರೆ ತನಿಖೆ ನಡೆಸಲಿ, ಬೇಡ ಅಂದವರು ಯಾರು.? ಅಂತಾ ಸವಾಲು ಹಾಕಿದ್ರು. ಗೃಹ ಇಲಾಖೆಯಲ್ಲಿ ಕೆಲ ಸಚಿವರ ಹಸ್ತಕ್ಷೇಪ ಎಂಬ ವಿಪಕ್ಷಗಳ‌ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಆ ರೀತಿ ಯಾವುದೂ ಇಲ್ಲ. ‌ನಾವು‌ ಕೂಡ ಏನೇ ಇದ್ರೂ ಪೊಲೀಸ್ ಇಲಾಖೆ ಸಂಬಂಧ ಪರಮೇಶ್ವರ್ (G Parameshwar) ಜೊತೆಯೇ ಚರ್ಚಿಸುತ್ತೇವೆ. ಆ ರೀತಿ ಯಾರೂ ಹಸ್ತಕ್ಷೇಪ ಮಾಡಿಲ್ಲ ಅಂದ್ರು.

    ಇದೇ ವೇಳೆ ಸಿಡಿ ಶಿವು ಎಂದು ಡಿಸಿಎಂ ವಿರುದ್ಧ ಹೆಚ್ ಡಿಕೆ ವಾಗ್ದಾಳಿ‌ ವಿಚಾರವಾಗಿ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿ, ಆರೋಪ ಮಾಡಿದ ಮೇಲೆ ದಾಖಲೆ‌ ಕೊಡಬೇಕಿರೋದು ಅವರ‌ ಜವಬ್ದಾರಿ. ನಾವೇ ಅಂತಿಮವಲ್ಲ, ಕೋರ್ಟ್‌ ಇದೆ. ಕೋರ್ಟ್‌ನಲ್ಲಿ‌ ಕೇಳಲಿ ಎಂದ್ರು. ಡಿಕೆಶಿ ಆಡಿಯೋಗೆ ಮಾತನಾಡಿರೋದೆ ಸಾಕ್ಷಿ ಎಂಬ HDK ಆರೋಪ ವಿಚಾರವಾಗಿ ಗೃಹ ಸಚಿವರು ಉತ್ತರ ಕೊಡಬೇಕು, ನನಗೆ ಸಂಭಂದಪಟ್ಟ ಇಲಾಖೆ ಅಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಇನ್‍ಸ್ಟಾ ರೀಲ್ ಮಾಡಲು 100 ಅಡಿ ಎತ್ತರದಿಂದ ನೀರಿಗೆ ಹಾರಿ ಪ್ರಾಣ ಕಳೆದುಕೊಂಡ!

    SIT ಚೀಫ್ ಗೆ ಕೇಳಬೇಕು ಅವರು ಹೇಳ್ತಾರೆ. ಅದು ಕಾನೂನು ಕ್ರಮ ಆಗುತ್ತೆ, ಒಬ್ಬೊಬ್ಬರು ಒಂದು ಹೇಳಿಕೆ ಕೊಡೋದು ಬೇಡ ಕಾದು ನೋಡೋಣ. ಕಾಂಗ್ರೆಸ್ ನವರು ದೇವೇಗೌಡರ ಕುಟುಂಬಕ್ಕೆ ನಾವ್ಯಾರು ಕಳಂಕ ತರೋದಿಕ್ಕೆ ಹೋಗಿಲ್ಲ, ಅದು ಆದ ಘಟನೆ. ನಮ್ಮ ಪಕ್ಷ, ಒಕ್ಷದ ಮುಖಂಡರು ಯಾರು ಅದಕ್ಕೆ ಸಂಭಂದಪಟ್ಟವರಲ್ಲ ಅಂತಾ ಟಾಂಗ್ ಕೊಟ್ಟರು. ಡಿಕೆಶಿ ಮಾತಾಡಿದಕ್ಕೆ ರಾಜೀನಾಮೆ ಕೊಡೋಕೆ ಆಗುತ್ತಾ.? ಪ್ರಜ್ವಲ್ ಕೇಸ್ ಅನ್ನು ಪೊಲೀಸ್ ನವರಿಗೆ ಬಿಟ್ರೆ ಒಳ್ಳೆಯದು. ವೀಡಿಯೋ ಮಾಡಿರೋದು ಹಂಚಿರೋದು ಅವರ ಪಕ್ಷದವರೇ, ನಮಗೂ ಅದಕ್ಕೂ ಸಂಬಂಧ ಇಲ್ಲ ಅಂದ್ರು.

  • ಮೀಸಲಾತಿ ಒಂದರಿಂದಲೇ ಸಮಾಜದ ಅಭಿವೃದ್ಧಿ ಸಾಧ್ಯವಿಲ್ಲ: ಸತೀಶ್‌ ಜಾರಕಿಹೊಳಿ

    ಮೀಸಲಾತಿ ಒಂದರಿಂದಲೇ ಸಮಾಜದ ಅಭಿವೃದ್ಧಿ ಸಾಧ್ಯವಿಲ್ಲ: ಸತೀಶ್‌ ಜಾರಕಿಹೊಳಿ

    ಕೊಪ್ಪಳ: ಮೀಸಲಾತಿಯೊಂದರಿಂದಲೇ ನಾಯಕ ಸಮಾಜ (Nayak Community) ಅಭಿವೃದ್ಧಿ ಸಾಧ್ಯವಿಲ್ಲ. ಅಂಬೇಡ್ಕರ್ ಶೋಷಿತ ವರ್ಗಕ್ಕೆ ನೀಡಿದ ಶಿಕ್ಷಣ, ಸಂಘಟನೆ, ಹೋರಾಟದಂತಹ 3 ಮಂತ್ರಗಳನ್ನ ಪಾಲಿಸಿದಾಗ ಮಾತ್ರ ಸಾಧ್ಯವಾಗುತ್ತದೆ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ (Satish Jarakiholi) ಅಭಿಪ್ರಾಯಪಟ್ಟಿದ್ದಾರೆ.

    ಕೊಪ್ಪಳದ (Koppal) ಗಂಗಾವತಿ ತಾಲೂಕಿನ ಆನೆಗೊಂದಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಮಹರ್ಷಿ ವಾಲ್ಮೀಕಿ ನೂತನ ಸಂಘದ ಉದ್ಘಾಟನೆ ಹಾಗೂ ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದಾರೆ. ಇದನ್ನೂ ಓದಿ: ಆಂತರಿಕ ವಿಚಾರಗಳನ್ನ ಹೊರಗಡೆ ಹೇಳಬೇಡಿ ಅಂತ ಡಿಕೆಶಿ ಹೇಳಿದ್ದಾರೆ: ಸತೀಶ್ ಜಾರಕಿಹೊಳಿ

    ಸಂವಿಧಾನ ನಮ್ಮ ಬದುಕಿಗೆ ಉಸಿರಾಟವಿದ್ದಂತೆ, ಅದನ್ನು ಉಳಿಸಿಕೊಂಡರೆ ಮಾತ್ರ ನಮಗೆ ಬದುಕು. ಇಲ್ಲವಾದರೆ ಬದುಕು ಬಹಳ ಕಠಿಣ. ಈ ಹಿಂದೆ ಸರ್ಕಾರಿ ಹುದ್ದೆಗಳಲ್ಲಿ 5 ಲಕ್ಷ ಜನ ನಾಯಕ ಸಮಾಜದವರು ಕೆಲಸ ಮಾಡುತ್ತಿದ್ದರು. ಈಗ ಮೀಸಲಾತಿ, ಒಳ ಮೀಸಲಾತಿ ಎಂಬ ಗೊಂದಲಗಳಿಂದ 3 ಲಕ್ಷಕ್ಕೆ ಇಳಿದಿದೆ. ಈ ಬಗ್ಗೆ ಸಮಾಜದವರು ವಿಚಾರ ಮಾಡಬೇಕು ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಹೆಗ್ಗಡೆ ಶಾಂತವಾಗಿದ್ದಾರೆ ಅಂದ್ರೆ ಅದಕ್ಕೆ ಮಂಜುನಾಥ ಸ್ವಾಮಿ ಕಾರಣ: ಡಾ.ವೀರೇಂದ್ರ ಹೆಗ್ಗಡೆ

    ನಾಯಕ ಸಮಾಜ ಕಳೆದ 30 ವರ್ಷಗಳಿಂದ ವಿವಿಧ ಸಮಸ್ಯೆಗಳಿಗಾಗಿ ಹೋರಾಟ ನಡೆಸುತ್ತಾ ಬರುತ್ತಿದೆ. ಎಲವನ್ನೂ ಸರ್ಕಾರವೇ ಈಡೇರಿಸಬೇಕು ಎಂದರೆ ಆಗಲ್ಲ. ಯಾವ ರಾಜಕಾರಣಿಗೂ ಅಧಿಕಾರ ಶಾಶ್ವತವಲ್ಲ. ಇರುವ ಸಮಯದಲ್ಲಿ ಎಲ್ಲ ಸಮುದಾಯದ ಜನರಿಗೆ ಉತ್ತಮ ಕೆಲಸ ಮಾಡಿಕೊಡಬೇಕು. ಎಸ್ಸಿ-ಎಸ್ಟಿ ಮೀಸಲಾತಿ ಹೆಚ್ಚಳ ಮಾಡಿದ್ದನ್ನು ಸಂವಿಧಾನದ 9ನೇ ಪರಿಚ್ಛೇದಕ್ಕೆ ಸೇರಿಸಲು ರಾಜ್ಯ ಸರ್ಕಾರ ಮನವಿ ಮಾಡಿದರೂ, ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿಲ್ಲ. ಈಗಲಾದರೂ ಕೇಂದ್ರ ಸರ್ಕಾರ ಮನಸ್ಸು ಮಾಡಬೇಕು. ಯಾವುದೇ ಜನಪ್ರತಿನಿಧಿ ಕಾರ್ಯಕ್ರಮಗಳಿಗೆ ಹೋದಾಗ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಿದಾಗ ಮಾತ್ರ ಅದಕ್ಕೊಂದು ಅರ್ಥ ಸಿಗುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: World Cup 2023: ಮಾರಕ ಬೌಲಿಂಗ್‌ ದಾಳಿಗೆ ತಿಣುಕಾಡಿದ ಭಾರತ – ಇಂಗ್ಲೆಂಡ್‌ಗೆ 230 ರನ್‌ ಗುರಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪರಮೇಶ್ವರ್ ಮನೆಯಲ್ಲಿ ಡಿನ್ನರ್ ಪಾರ್ಟಿ- ಗೃಹಸಚಿವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾದ್ರಾ ಸಿಎಂ?

    ಪರಮೇಶ್ವರ್ ಮನೆಯಲ್ಲಿ ಡಿನ್ನರ್ ಪಾರ್ಟಿ- ಗೃಹಸಚಿವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾದ್ರಾ ಸಿಎಂ?

    ಬೆಂಗಳೂರು: ಗೃಹ ಸಚಿವ ಪರಮೇಶ್ವರ್ (Dr. G Parameshwar) ಅವರ ಸದಾಶಿವನಗರ ನಿವಾಸದಲ್ಲಿ ಭೋಜನ ಕೂಟ (Dnner Party) ಏರ್ಪಡಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಡಿನ್ನರ್ ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ.

    ಈ ಭೇಟಿಯಲ್ಲಿ ನಿಗಮ ಮಂಡಳಿ ನೇಮಕದ ಬಗ್ಗೆ ನೂತನ ಕಾರ್ಯಾಧ್ಯಕ್ಷರ ನೇಮಕದ ಬಗ್ಗೆ ಉಭಯ ನಾಯಕರ ಮಧ್ಯೆ ಸಾಕಷ್ಟು ಚರ್ಚೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಮೂಲಕ ಸಿಎಂ ಅವರು ಪರಮೇಶ್ವರ್ ರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾದ್ರಾ ಎಂಬ ಪ್ರಶ್ನೆ ಎದ್ದಿದೆ.

    8 ವರ್ಷ ಕೆಪಿಸಿಸಿ ಅಧ್ಯಕ್ಷರಾಗಿ, ಉಪಮುಖ್ಯಮಂತ್ರಿ ಆಗಿದ್ದ ಪರಮೇಶ್ವರ್ ಅವರನ್ನು ಈ ಹಿಂದೆ 2013 ರಲ್ಲಿ ಕೊರಟಗೆರೆಯಲ್ಲಿ ಸೋಲಿಸಿದ ಅಪವಾದವನ್ನು ಸಿದ್ದರಾಮಯ್ಯ (Siddaramaiah) ಹೊತ್ತಿದ್ದರು. ಹೀಗಾಗಿ ಸದ್ಯ ಈ ಮೂಲಕ ಪರಮೇಶ್ವರ್ ಅವರನ್ನ ವಿಶ್ವಾಸಕ್ಕೆ ತಗೆದುಕೊಳ್ಳುವ ಪ್ರಯತ್ನ ಮಾಡಲಾಗುತ್ತಿದೆ ಎಂಬ ಚರ್ಚೆ ಪಕ್ಷದ ವಲಯದಲ್ಲಿ ಕೇಳಿಬರುತ್ತಿದೆ. ಒಟ್ಟಿನಲ್ಲಿ ಪರಮೇಶ್ವರ್ ಸಿದ್ದರಾಮಯ್ಯ ಸ್ನೇಹ ಮುಂದಿನ ದಿನಗಳಲ್ಲಿ ಕಾಂಗ್ರೆಸ್‍ನ ಸಾಕಷ್ಟು ಆಂತರಿಕ ಬೆಳವಣಿಗೆಗಳಿಗೆ ಕಾರಣವಾಗುತ್ತಾ ಎಂಬುದನ್ನು ಕಾದುನೋಡಬೇಕಿದೆ.

    ಭೇಟಿ ಬಳಿಕ ಗೃಹ ಸಚಿವ ಪರಮೇಶ್ವರ್ ಮಾತನಾಡಿ, ಸಿಎಂ ಅವರು ನಮ್ಮ ಮನೆಗೆ ಬಂದಿದ್ರು. ನಾನು ಸತೀಶ್, ಮಹಾದೇವಪ್ಪನವರು ಊಟಕ್ಕೆ ಸೇರಿದ್ವಿ. ಊಟ ಮಾಡಿದ್ವಿ ಅಷ್ಟೇ ಬೇರೆ ಏನೂ ಚರ್ಚೆಯಾಗಿಲ್ಲ. ನಿಗಮ ಮಂಡಳಿಯ ಬಗ್ಗೆ ಇಲ್ಲಿ ಚರ್ಚೆ ಮಾಡೋಕಾಗುತ್ತಾ..?. ರಾಜಕೀಯವಾಗಿ ಯಾವುದೇ ಚರ್ಚೆಯಾಗಿಲ್ಲ ಎಂದು ಹೇಳಿದರು. ಇದನ್ನೂ ಓದಿ: Hombale Films: ನ.4ರಂದು ರಿಲೀಸ್ ಆಗಲಿದೆ ಹುಲಿ ಸಂರಕ್ಷಣೆಯ ಸಾಕ್ಷ್ಯ ಚಿತ್ರ

    ಇತ್ತ ಸಚಿವ ಸತೀಶ್ ಜಾರಕಿಹೊಳಿ (Sathish Jarakiholi) ಪ್ರತಿಕ್ರಿಯಿಸಿ, ನಾನು ಸಿಎಂ ಎಲ್ಲಾ ಊಟಕ್ಕೆ ಬಂದಿದ್ವಿ. ನಾವು ಸೇರಿದ ಮೇಲೆ ರಾಜಕೀಯ ಅಲ್ಲದೇ ಬೇರೆ ಏನು ಮಾತಾಡೋದು..?. ಸಣ್ಣಪುಟ್ಟ ರಾಜಕೀಯ ಚರ್ಚೆಯಾಗಿದೆ. ರಾಜಕೀಯ, ರಾಜಕಾರಣ ಎಂದ ಮೇಲೆ ಸಣ್ಣ ಪುಟ್ಟ ಅಸಮಾಧಾನ ಇದ್ದೇ ಇರುತ್ತದೆ. ಮಾತುಕತೆಗಳು ಅಗಾಗ ಅಗ್ತಿರ್ತಾವೆ ಅದು ಬಿಟ್ಟು ಬೇರೆ ಏನೂ ಇಲ್ಲ. ನಿಗಮ ಮಂಡಳಿಯ ನೇಮಕದ ಬಗ್ಗೆ ಚರ್ಚೆಯಾಗಿಲ್ಲ ಅಂದ್ರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಿಜೆಪಿಯವರು ಹೆಜ್ಜೆ ಹೆಜ್ಜೆಗೂ ತಪ್ಪು ಮಾಡಿದ್ದಾರೆ: ಸತೀಶ್ ಜಾರಕಿಹೊಳಿ

    ಬಿಜೆಪಿಯವರು ಹೆಜ್ಜೆ ಹೆಜ್ಜೆಗೂ ತಪ್ಪು ಮಾಡಿದ್ದಾರೆ: ಸತೀಶ್ ಜಾರಕಿಹೊಳಿ

    ಬೆಳಗಾವಿ: ಇಲ್ಲಿನ ಮಹಾನಗರ ಪಾಲಿಕೆಯಲ್ಲಿ ಪ್ರಮುಖ ಕಡತಗಳೇ ಕಳುವಾಗಿವೆ. ಈ ಸಂಬಂಧ ಪೊಲೀಸ್‌ ಠಾಣೆಯಲ್ಲಿ (Police Station) ದೂರು ನೀಡುವಂತೆ ಪಾಲಿಕೆ ಆಯುಕ್ತರಿಗೆ ಸೂಚನೆ ಕೊಟ್ಟಿದ್ದೇನೆ. ಇದರಲ್ಲಿ ಬಿಜೆಪಿಯರು (BJP) ಹೆಜ್ಜೆ ಹೆಜ್ಜೆಗೂ ತಪ್ಪು ಮಾಡಿದ್ದು, ನಮ್ಮವರೂ ಇದ್ದಾರೆಂಬ ಸಂಶಯವಿದೆ ಎಂದು ಸಚಿವ ಸತೀಶ್‌ ಜಾರಕಿಹೊಳಿ (Satish Jarakiholi) ತಿಳಿಸಿದ್ದಾರೆ.

    ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ (Belagavi Municipal Corporation) ಪ್ರಮುಖ ಕಡತ ಕಳವು (File Theft) ವಿಚಾರಕ್ಕೆ ಉಸ್ತುವಾರಿ ಸಚಿವರು ಪ್ರತಿಕ್ರಿಯೆ ನೀಡಿದ್ದು, ಮೇಯರ್ ಅವರು ಸಹಿ ಮಾಡಿರುವ ಕಡತಗಳೇ ಕಾಣೆಯಾಗಿವೆ. ಮಿಸ್ಸಿಂಗ್‌ ಮಾಡಿದವರ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲು ಆಯುಕ್ತರಿಗೆ ಹೇಳಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಸೋಲಿನ ಸಂಪೂರ್ಣ ಹತಾಶೆಯಿಂದ ಬಿಜೆಪಿ ನನ್ನ ರಾಜೀನಾಮೆ ಕೇಳುತ್ತಿದೆ: ಡಾ.ಶರಣಪ್ರಕಾಶ್ ಪಾಟೀಲ್

    ನಮ್ಮವರೂ ಕೃತ್ಯದಲ್ಲಿ ಭಾಗಿಯಾಗಿರಬಹುದು:
    ದೂರು ನೀಡುವ ವಿಚಾರ ಬಗ್ಗೆ ಚರ್ಚೆಯಾಗುತ್ತಿದೆ. ಅದು ಆಯುಕ್ತರ ಜವಾಬ್ದಾರಿಯೂ ಹೌದು. ಕಡತಗಳು ಕಾರ್ಯದರ್ಶಿಗಳ ಬಳಿ ಇರಬೇಕಿತ್ತು. ಆದರೀಗ ಮೇಯರ್ ಸಹಿ ಮಾಡಿರುವ ಒರಿಜಿನಲ್‌ ಪ್ರತಿಗಳೇ ಕಳವು ಆಗಿದೆ. ಅದೇ ವಿಚಾರ ಇಟ್ಟುಕೊಂಡು ಬಿಜೆಪಿಯವರು ಆಯುಕ್ತರ ವಿರುದ್ಧ ಆರೋಪ ಮಾಡ್ತಿದ್ದಾರೆ. ಮೊದಲು ತಾವೇ ಸಹಿ ಮಾಡಿದ್ದ ಮಾಡಿರುವುದಾಗಿ ಹೇಳಿದ್ದ ಆಯುಕ್ತರು ಈಗ ಅವರೇ ನಮ್ಮನ್ನು ದೂರುತ್ತಿದ್ದಾರೆ. ಹಾಗಾಗಿ ನಮ್ಮವರೂ ಸಹ ಕೃತ್ಯದಲ್ಲಿ ಭಾಗಿಯಾಗಿರುವ ಸಂಶಯ ಬರುತ್ತಿದೆ. ಆದ್ದರಿಂದ ದೂರು ನೀಡಲು ಹೇಳಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:  ಅಕ್ರಮ ಮರಳು ದಂಧೆ ಪ್ರಶ್ನಿಸಿದ್ದಕ್ಕೆ ಮಾರಣಾಂತಿಕ ಹಲ್ಲೆ – ನದಿಗೆ ಎಸೆಯಲು ಪ್ಲಾನ್

    ಪಾಲಿಕೆ ರದ್ದು ಮಾಡಲು ಅವಕಾಶವಿದೆ: ನಗರಪಾಲಿಕೆಯಲ್ಲಿ ಸೂಪರ್ ಸೀಡಿಂಗ್ ಮಾಡುವ ಅವಶ್ಯಕತೆ ಇಲ್ಲ. ಕಾನೂನು ಏನಿದೆ ಅದನ್ನ ತಿಳಿದುಕೊಂಡು ಎಲ್ಲರೂ ಹೋಗಬೇಕು. ಬಿಜೆಪಿಯವರು ನಾವು ಗೆದ್ದು ಬಂದಿದ್ದೇವೆ ಅನೋ ಭ್ರಮಯಲ್ಲಿ ಇದ್ದಾರೆ. ಹೆಜ್ಜೆ ಹೆಜ್ಜೆಗೂ ತಪ್ಪು ಮಾಡಿದ್ದಾರೆ. ಬೆಳಗಾವಿ ಪಾಲಿಕೆ ರದ್ದು ಮಾಡಲು ಸಾಕಷ್ಟು ಅವಕಾಶ ಇದೆ, ಆದ್ರೆ ಅದು ಸೂಕ್ತವಲ್ಲ. ಪೊಲೀಸ್ ತನಿಖೆಯಲ್ಲಿ ಎಲ್ಲವೂ ಗೊತ್ತಾಗುತ್ತೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹೆಬ್ಬಾಳ್ಕರ್, ಜಾರಕಿಹೊಳಿ ಮಧ್ಯೆ ಭಿನ್ನಾಭಿಪ್ರಾಯ – ಸ್ಥಳೀಯ ನಿಗಮಗಳ ವಿಚಾರಕ್ಕೇ ಗುದ್ದಾಟ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೆಲ ಬಿಜೆಪಿ ನಾಯಕರು ಕಾಂಗ್ರೆಸ್‌ ಸರ್ಕಾರವೇ ಇರಲಿ ಅಂತ ಬಯಸುತ್ತಿದ್ದಾರೆ: ಸತೀಶ್ ಜಾರಕಿಹೊಳಿ

    ಕೆಲ ಬಿಜೆಪಿ ನಾಯಕರು ಕಾಂಗ್ರೆಸ್‌ ಸರ್ಕಾರವೇ ಇರಲಿ ಅಂತ ಬಯಸುತ್ತಿದ್ದಾರೆ: ಸತೀಶ್ ಜಾರಕಿಹೊಳಿ

    ಬೆಂಗಳೂರು: ಬಿಜೆಪಿಯಲ್ಲೇ ಬಿ.ಎಲ್‌ ಸಂತೋಷ್‌ (BL Santosh) ವಿರುದ್ಧ ಮಾತನಾಡುತ್ತಿದ್ದಾರೆ. ಬಿಜೆಪಿಯ ಕೆಲ ನಾಯಕರು ಕಾಂಗ್ರೆಸ್‌ ಸರ್ಕಾರವೇ ಇರಲಿ ಅಂತ ಬಯಸುತ್ತಿದ್ದಾರೆ. ಅವರ ಆಶೀರ್ವಾದ ನಮ್ಮ ಮೇಲೆ ಹೀಗೆ ಇರಲಿ ಎಂದು ಸಚಿವ ಸತೀಶ್ ಜಾರಕಿಹೊಳಿ (Satish Jarakiholi) ಟಾಂಗ್‌ ನೀಡಿದ್ದಾರೆ.

    40 ಜನ ಬಿಜೆಪಿ (BJP) ಸೇರ್ತಾರೆ ಎಂಬ ಬಿ.ಎಲ್‌ ಸಂತೋಷ್‌ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಜಾರಕಿಹೊಳಿ, ಈ ಸನ್ನಿವೇಶಕ್ಕೆ ಇಂತಹ ಮಾತು ಸರಿಯಲ್ಲ. ಬಿ.ಎಲ್‌ ಸಂತೋಷ್‌ ಅವರು ರಾಷ್ಟ್ರಮಟ್ಟದ ರಾಜಕಾರಣ ಮಾಡುವವರು. 40 ಜನರನ್ನ ತೆಗೆದುಕೊಂಡು ಏನು ಮಾಡ್ತಾರೆ ಅಂತಾ ತಿರುಗೇಟು ಕೊಟ್ಟಿದ್ದಾರೆ. ಇದನ್ನೂ ಓದಿ: G20ಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸ

    ಯಾವುದೇ ಸರ್ಕಾರ ಬೀಳುತ್ತೆ ಅನ್ನೋದು ಸರಿಯಲ್ಲ. ಸರ್ಕಾರ ಬಂದು 3 ತಿಂಗಳಾಗಿದೆ. ಸರ್ಕಾರ ಬೀಳುತ್ತೆ ಅಂತ 5 ವರ್ಷದ ವರೆಗೂ ಈ ಮಾತು ಇದ್ದೇ ಇರುತ್ತದೆ. ಆದರೆ ಆ ಕಾರ್ಯ ಸಫಲ ಆಗೋದಿಲ್ಲ. ಪ್ರಯತ್ನ ಅಂತೂ ಅವರದ್ದು ಇದ್ದೇ ಇರುತ್ತದೆ ಅಂತ ಕುಟುಕಿದ್ದಾರೆ. ಇದನ್ನೂ ಓದಿ: 11% ಏರಿಕೆ, ಆಗಸ್ಟ್‌ನಲ್ಲಿ 1.59 ಲಕ್ಷ ಕೋಟಿ ಜಿಎಸ್‌ಟಿ ಸಂಗ್ರಹ – ಕರ್ನಾಟಕದ ಪಾಲು ಎಷ್ಟು?

    ಬೆಳಗಾವಿ ಭಾಗದಲ್ಲಿ ಕಾಂಗ್ರೆಸ್‌ಗೆ ಬರುವ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ಆ ಭಾಗದಲ್ಲಿ ಸದ್ಯಕ್ಕೆ ಯಾರೂ ಇಲ್ಲ. ಇದ್ದರೆ ನೇರವಾಗಿ ಸಿಎಂ, ಡಿಸಿಎಂ ಭೇಟಿ ಮಾಡ್ತಾರೆ. ಬಿಜೆಪಿ ಹಾಗೂ ಜೆಡಿಎಸ್‌ನ ಕೆಲವರು ಬರೋದಕ್ಕೆ ರೆಡಿ ಇದ್ದಾರೆ. ಅನೇಕರು ಭೇಟಿಯಾಗ್ತಾ ಇದ್ದಾರೆ. ಓಪನ್ ಆಗಿಯೇ ಭೇಟಿ ಆಗುತ್ತಿದೆ. ಕೆಲವೊಂದು ಪರೋಕ್ಷವಾಗಿ ಸಂಪರ್ಕ ಆಗ್ತಾ ಇದೆ. ಎಲ್ಲದಕ್ಕೂ ಸಮಯ ಸಂದರ್ಭ ಬೇಕಲ್ಲವೇ? ಯಾರೇ ಬಂದರೂ ಸ್ವಾಗತ ಮಾಡ್ತೀವಿ ಅಂತಾ ಸ್ಪಷ್ಟಪಡಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜಾರಕಿಹೊಳಿ ಸಹೋದರರ ಹಿರಿಯ ಸಹೋದರಿ ಹೃದಯಾಘಾತದಿಂದ ನಿಧನ

    ಜಾರಕಿಹೊಳಿ ಸಹೋದರರ ಹಿರಿಯ ಸಹೋದರಿ ಹೃದಯಾಘಾತದಿಂದ ನಿಧನ

    ಬೆಳಗಾವಿ: ಜಾರಕಿಹೊಳಿ ಸಹೋದರರ ಹಿರಿಯ ಸಹೋದರಿ (Jarakiholi Brothers Sister) ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.

    ಗೋಕಾಕ್ ನಗರದ ಖಾಸಗಿ ಆಸ್ಪತ್ರೆಯಲ್ಲಿ ಲಗಮವ್ವ ನಿಂಗಪ್ಪ ಸುಲಧಾಳ (67) ನಿಧನರಾಗಿದ್ದಾರೆ. ಇವರು ಗೋಕಾಕ್ ನಗರಸಭೆಯ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪತಿ, ಇಬ್ಬರು ಪುತ್ರರು, ಪುತ್ರಿಯನ್ನು ಲಗಮವ್ವ ಸುಲಧಾಳ ಅಗಲಿದ್ದಾರೆ.

    ಕೆಲವೇ ಹೊತ್ತಿನಲ್ಲಿ ಗೋಕಾಕ್ (Gokak) ನಗರದ ಕುಂಬಾರ ಗಲ್ಲಿಯ ರುದ್ರಭೂಮಿಯಲ್ಲಿ ಲಗಮವ್ವ ಅವರ ಅಂತ್ಯಕ್ರಿಯೆ ನಡೆಯಲಿದೆ. ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಸಹೋದರಿಯ ಅಂತ್ಯಕ್ರಿಯೆಗೆ ಸತೀಶ್ ಜಾರಕಿಹೊಳಿ (Satish Jarakiholi) ಗೈರಾಗಲಿದ್ದಾರೆ. ಇದನ್ನೂ ಓದಿ: ಹೆಂಡ್ತಿ, ಮಕ್ಕಳನ್ನು ನೋಡಲು ಅಮೆರಿಕಾಗೆ ತೆರಳಿದ ಶಾಸಕ ದರ್ಶನ್ ಪುಟ್ಟಣ್ಣಯ್ಯ

    ಸಹೋದರಿ ಅಕಾಲಿಕ ನಿಧನಕ್ಕೆ ಸಚಿವ ಸತೀಶ್ ಜಾರಕಿಹೊಳಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸರಳತೆ, ಸೌಜನ್ಯತೆಯ ಆಗರವಾಗಿದ್ದ ಸಹೋದರಿ ಬಾಲ್ಯದಿಂದಲೂ ಪ್ರೋತ್ಸಾಹಿಸಿ ಮುನ್ನಡೆಸಿದ್ದಾರೆ. ಅವರ ಮಾರ್ಗದರ್ಶನ ನನ್ನ ರಾಜಕೀಯ ಬೆಳವಣಿಗೆಯಲ್ಲಿ ಪ್ರಧಾನ ಪಾತ್ರವಹಿಸಿದೆ. ತನ್ನ ತಾಯಿ ಸ್ವರೂಪಳಾಗಿದ್ದ ಸಹೋದರಿ ಕಳೆದುಕೊಂಡು ತೀವ್ರ ಆಘಾತವಾಗಿದೆ ಎಂದು ಸತೀಶ್ ಸಂತಾಪ ಸೂಚಿಸಿದ್ದಾರೆ.