Tag: Satish Jarakiholi

  • ಬಿಜೆಪಿ ಆಡಳಿತಕ್ಕೆ ಬೇಸತ್ತು ಯುವಕರು ಕಾಂಗ್ರೆಸ್ ಸೇರ್ಪಡೆ: ಸತೀಶ್ ಜಾರಕಿಹೊಳಿ

    ಬಿಜೆಪಿ ಆಡಳಿತಕ್ಕೆ ಬೇಸತ್ತು ಯುವಕರು ಕಾಂಗ್ರೆಸ್ ಸೇರ್ಪಡೆ: ಸತೀಶ್ ಜಾರಕಿಹೊಳಿ

    ಬೆಳಗಾವಿ: ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದ ಆಡಳಿತಕ್ಕೆ ಬೇಸತ್ತು ಯುವಕರು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ (Sathish Jarakiholi) ಅವರು ಹೇಳಿದರು.

    ಗೋಕಾಕ್ ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಕಾಂಗ್ರೆಸ್ ಮುಖಂಡಾರದ ಸುಭಾಷ್ ಗಿರಗೌಡ, ಭರತೇಶ್ ವೀರಭದ್ರನವರ, ಮಲ್ಲಪ್ಪ ರುದ್ರಗೌಡ, ಸುನಿಲ್ ರಾಠೋಡ, ಟಿಪ್ಪುಸುಲ್ತಾನನ ಮುಲ್ಲಾ, ಶಿವಾನಂದ ಬಸಪ್ಪ ಮಾಳಗಿ, ಪರುಶುರಾಮ ಜಾಮುನಿ ಅವರ ನೇತೃತ್ವದಲ್ಲಿ ಯಮಕನಮರಡಿ ಮತಕ್ಷೇತ್ರದ ಉಳ್ಳಾಗಡ್ಡಿ ಖಾನಾಪುರ, ಕುರಣಿ, ಕಟಾಂಬಳೆ ಗ್ರಾಮದ ಹಲವು ಯುವಕರನ್ನು ಶಾಸಕ ಸತೀಶ್ ಜಾರಕಿಹೊಳಿ ಅವರು ಕಾಂಗ್ರೆಸ್ (Congress) ಸೇರ್ಪಡೆ ಮಾಡಿಕೊಂಡು ಮಾತನಾಡಿದರು.

    ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಯುವಕರಿಗೆ ನಿರುದ್ಯೋಗ ಸಮಸ್ಯೆ ಕಾಡುತ್ತಿದೆ. ಆದರೆ ಈ ಎಲ್ಲ ಸಮಸ್ಯೆಗಳಿಗೆ ಯಾವ ಬಿಜೆಪಿ ನಾಯಕರು ಸ್ಪಂದಿಸುತ್ತಿಲ್ಲ. ಹೀಗಾಗಿ ಸಾರ್ವಜನಿಕರು ಕಾಂಗ್ರೆಸ್ ಕಡೆ ಒಲವು ತೋರುತ್ತಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಅದಾನಿ ವಿರುದ್ಧ ತನಿಖೆಗೆ ಆಗ್ರಹಿಸಿ ಹಲವು ರಾಜ್ಯಗಳಲ್ಲಿ ಕಾಂಗ್ರೆಸ್ ಪ್ರತಿಭಟನೆ

    ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದ ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಮೆಚ್ಚಿಕೊಂಡು ಯುವಕರು ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವುದು ಸಂತೋಷದ ವಿಚಾರ. ಹೀಗೆ ಅನೇಕ ಯುವಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ 2023ರಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದು ಕರೆ ನೀಡಿದರು.

    ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಸೇರ್ಪಡೆಯಾದ ಯುವಕರನ್ನು ಸತೀಶ್ ಜಾರಕಿಹೊಳಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಯಮಕನಮರಡಿ ಮತಕ್ಷೇತ್ರದ ಉಳ್ಳಾಗಡ್ಡಿ ಖಾನಾಪುರ, ಕುರಣಿ ಗ್ರಾಮದ ಅನೇಕ ಮುಖಂಡರು ಇದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸುದೀಪ್ ಕಾಂಗ್ರೆಸ್ ಸೇರಿದರೆ ಸ್ವಾಗತ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

    ಸುದೀಪ್ ಕಾಂಗ್ರೆಸ್ ಸೇರಿದರೆ ಸ್ವಾಗತ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

    ಟ ಕಿಚ್ಚ ಸುದೀಪ್ (Sudeep) ಕಾಂಗ್ರೆಸ್ (Congress) ಪಕ್ಷಕ್ಕೆ ಬರುವುದಾದರೆ ಸ್ವಾಗತಿಸುತ್ತೇನೆ ಎಂದಿದ್ದಾರೆ ಕರ್ನಾಟಕ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ (Satish Jarakiholi). ಮಾಧ್ಯಮಗಳ ಜೊತೆ ಮಾತನಾಡಿದ ಅವರು, ‘ಸುದೀಪ್ ಅವರು ಹೆಸರಾಂತ ನಟ. ಸಮಾಜದ ಬಗ್ಗೆ ಕಾಳಜಿ ಇರುವಂತವರು. ಅವರು ನಮ್ಮ ಪಕ್ಷಕ್ಕೆ ಬಂದರೆ ಸ್ವಾಗತಿಸುವುದಾಗಿ ಅವರು ತಿಳಿಸಿದ್ದಾರೆ.

    ಕರ್ನಾಟಕ ಕಾಂಗ್ರೆಸ್ (Congress) ಪಕ್ಷದ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ಇಂದು ದಿಢೀರ್ ಅಂತ ಕಿಚ್ಚ ಸುದೀಪ್ (Sudeep) ಮನೆಯಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದರು. ಮೊನ್ನೆಯಷ್ಟೇ ನಟಿ ರಮ್ಯಾ ಮೂಲಕ ಸುದೀಪ್ ಅವರನ್ನು ಕಾಂಗ್ರೆಸ್ ಗೆ ಕರೆತರುವ ಪ್ರಯತ್ನ ನಡೆದಿದೆ ಎನ್ನುವ ಸುದ್ದಿಯೂ ಹರಡಿತ್ತು. ಈ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಸುದೀಪ್ ಮನೆಗೆ ಹೋಗಿರುವುದು ಮತ್ತೊಂದು ಸುತ್ತಿನ ಚರ್ಚೆಗೆ ಕಾರಣವಾಗಿತ್ತು. ಇದನ್ನೂ ಓದಿ: ಆದಿಲ್ ಬೇರೆ ಹುಡುಗಿ ಜೊತೆ ಸಂಬಂಧ ಇಟ್ಟುಕೊಂಡಿದ್ದಾನೆ : ಕಣ್ಣೀರಿಟ್ಟ ನಟಿ ರಾಖಿ ಸಾವಂತ್

    ನಾನೊಬ್ಬ ನಟ, ನನಗೆ ರಾಜಕೀಯ (Politics) ಗೊತ್ತಿಲ್ಲ. ಹಾಗಾಗಿ ಆ ಕ್ಷೇತ್ರಕ್ಕೆ ಹೋಗಲಾರೆ ಎಂದು ಹಲವಾರು ಬಾರಿ ಸುದೀಪ್ ಹೇಳಿದ್ದರೂ, ಪದೇ ಪದೇ ರಾಜಕಾರಣದಲ್ಲಿ ಸುದೀಪ್ ಹೆಸರು ಕೇಳಿ ಬರುತ್ತಲೇ ಇದೆ. ಕಳೆದ ಬಾರಿ ವಿಧಾನಸಭಾ ಚುನಾವಣೆ ವೇಳೆ, ಟಿಕೆಟ್ ಘೋಷಣೆಯಷ್ಟೇ ಬಾಕಿ ಎಂದು ಸುದ್ದಿ ಹರಿದಾಡಿತು. ಮಾಜಿಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆದಿಯಾಗಿ ಅನೇಕ ಗಣ್ಯರು ಸುದೀಪ್ ಅವರನ್ನು ಭೇಟಿ ಮಾಡಿದ್ದರು. ಆದರೂ, ಸುದೀಪ್ ಯಾರ ಕೈಗೂ ಸಿಗಲಿಲ್ಲ.

    ಡಿ.ಕೆ. ಶಿವಕುಮಾರ್ ಭೇಟಿಯ ಹಿಂದೆ ಯಾವ ಉದ್ದೇಶ ಇರಬಹುದು ಎಂದು ಸುದೀಪ್ ಆಪ್ತರಲ್ಲಿ ವಿಚಾರಿಸಿದಾಗ, ಅದು ರಾಜಕೀಯ ಭೇಟಿ ಅಲ್ಲ ಎಂದು ಗೊತ್ತಾಗಿದೆ. ಡಿಕೆಶಿ ಒಡೆತನದ ಮಾಲ್ ವೊಂದರಲ್ಲಿ ಮಲ್ಟಿಪ್ಲೆಕ್ಸ್ ಚಿತ್ರಮಂದಿರದ ಉದ್ಘಾಟನೆಗೆ ಸುದೀಪ್ ಅವರನ್ನು ಆಹ್ವಾನಿಸಲು ಹೋಗಿದ್ದರು ಎಂದು ಹೇಳಲಾಗುತ್ತಿದೆ. ಡಿಕೆಶಿಗೆ ನಲಪಾಡ್ ಕೂಡ ಜೊತೆಯಾಗಿದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ತಾಯಿ, ಮಗಳ ವ್ಯತ್ಯಾಸ ಗೊತ್ತಿಲ್ಲದವರು ಹಿಂದೂ ಧರ್ಮದ ಬಗ್ಗೆ ಮಾತಾಡ್ತಾರೆ: ಭೀಮಾಶಂಕರ್

    ತಾಯಿ, ಮಗಳ ವ್ಯತ್ಯಾಸ ಗೊತ್ತಿಲ್ಲದವರು ಹಿಂದೂ ಧರ್ಮದ ಬಗ್ಗೆ ಮಾತಾಡ್ತಾರೆ: ಭೀಮಾಶಂಕರ್

    ಧಾರವಾಡ: ಹಿಂದೂ ಎಂಬ ಪದ ಅಶ್ಲೀಲವಾದದ್ದು ಎಂಬ ಹೇಳಿಕೆ ಕೊಟ್ಟಿದ್ದ ಶಾಸಕ ಸತೀಶ್ ಜಾರಕಿಹೊಳಿಗೆ (Satish Jarkiholi) ಬಿಜೆಪಿ ಯುವ ಮುಖಂಡ ಭೀಮಾಶಂಕರ್‌ ಪಾಟೀಲ್ (Bheema Shankar Patil) ತಿರುಗೇಟು ನೀಡಿದ್ದಾರೆ.

    ಧಾರವಾಡದಲ್ಲಿ (Dharwad) ಮಾತನಾಡಿದ ಅವರು, ಬೆಳಗಾವಿಯ (Belgavi) ರಾಜಕಾರಣಿಯೊಬ್ಬರು ಉಡಾಫೆಯಿಂದ ಮಾತನಾಡುತ್ತಾರೆ. ನಾನು ಅದನ್ನು ಖಂಡಿಸುತ್ತೇನೆ. ತಾಯಿ, ಮಗಳ ವ್ಯತ್ಯಾಸ ಗೊತ್ತಿಲ್ಲದವರಿಂದ ಇಂತ ಮಾತು ಬರಲು ಸಾಧ್ಯ. ಭಾರತದ ಕೋಟ್ಯಂತರ ಜನ ಹಿಂದೂ ಜೀವನ ಪದ್ಧತಿಯೇ ಧರ್ಮ ಎಂದು ಸ್ವೀಕಾರ ಮಾಡಿದ್ದಾರೆ. ಆ ಧರ್ಮಕ್ಕೆ ಅಶ್ಲೀಲ ಎಂಬ ಪದ ಜೋಡಿಸಿದ ವ್ಯಕ್ತಿಯ ನಾಲಿಗೆ ಶುದ್ಧಗೊಳಿಸುವ ಕೆಲಸವನ್ನು ನಾವು ಮಾಡಬೇಕಿದೆ ಎಂದು ಕಿಡಿಕಾರಿದ್ದಾರೆ.

    ರಾಜಕಾರಣದ ತೆವಲಿಗಾಗಿ, ಮತಬ್ಯಾಂಕ್‍ಗಾಗಿ, ಇನ್ಯಾರನ್ನೋ ತೃಪ್ತಿಪಡಿಸಲು ಧರ್ಮದ ದ್ವೇಷ ಬಿತ್ತುವ ರಣ ಹೇಡಿಗಳಿಂದ ಹಿಂದುತ್ವ ಪಾಠ ಕಲಿಯುವ ಅಗತ್ಯವಿಲ್ಲ. ಹಿಂದೂ ಧರ್ಮಕ್ಕೆ ಅದರದ್ದೇ ಆದ ಹಿನ್ನೆಲೆ ಇದೆ. ವೇದ ಪುರಾಣಗಳ ದಾಖಲೆ ಇವೆ. ಯಾರೋ ಎಡಬಿಡಂಗಿಗಳು ಅದನ್ನು ವಿವಾದಾತ್ಮಕವಾಗಿ ಮಾತನಾಡುವುದು ಸಮಾಜಕ್ಕೆ ದೊಡ್ಡ ಕೆಟ್ಟ ಸಂದೇಶ ಕೊಟ್ಟಂತೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಿನ್ನ ಯಾರು ಮದುವೆ ಆಗ್ತಾರೆ ಎಂದು ಗೇಲಿ ಮಾಡಿದವರಿಗೆ ಗೀತಾ ಭಟ್ ಖಡಕ್ ಉತ್ತರ

    ಇಂತವರೆಲ್ಲ ವೈಚಾರಿಕ ಭಯೋತ್ಪಾದಕರು, ವೈಚಾರಿಕ ಹೆಸರಿನಲ್ಲಿ ಭಯೋತ್ಪಾದಕ ಕೆಲಸ ಮಾಡುವ ತಂಡ ಇದು. ಹೀಗಾಗಿ ಈ ತಂಡದ ಬಗ್ಗೆ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ. ಹಿಂದೂ ಧರ್ಮದ ಕೂದಲೆಳೆಯನ್ನು ಕೂಡ ಅವರಿಂದ ಅಲ್ಲಾಡಿಸಲು ಆಗುವುದಿಲ್ಲ. ಅಂತಹ ಸಂದರ್ಭ ಬಂದರೆ ನಾವು ಅದಕ್ಕೆ ಸರಿಯಾದ ಉತ್ತರ ಕೊಡಲು ತಯಾರಿದ್ದೇವೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಮಂಗಳೂರು ಬಾಂಬ್ ಸ್ಫೋಟದ ತನಿಖೆ NIA ಹೆಗಲಿಗೆ : ನಳಿನ್ ಕುಮಾರ್ ಕಟೀಲ್

    Live Tv
    [brid partner=56869869 player=32851 video=960834 autoplay=true]

  • ಪಕ್ಷಕ್ಕೆ ಡ್ಯಾಮೇಜ್‌ ತಡೆಯಲು ಹೇಳಿಕೆ ವಾಪಸ್‌ – ಸತೀಶ್‌ ಜಾರಕಿಹೊಳಿ

    ಪಕ್ಷಕ್ಕೆ ಡ್ಯಾಮೇಜ್‌ ತಡೆಯಲು ಹೇಳಿಕೆ ವಾಪಸ್‌ – ಸತೀಶ್‌ ಜಾರಕಿಹೊಳಿ

    ಬೆಳಗಾವಿ: ಪಕ್ಷಕ್ಕೆ ಡ್ಯಾಮೇಜ್‌ ಆಗುವುದನ್ನು ತಡೆಯಲು ಹಿಂದೂ ಧರ್ಮದ ಹೇಳಿಕೆಯನ್ನು ವಾಪಸ್ ಪಡೆದಿದ್ದೇನೆ‌ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿನ್ನೆ ನಾನು ಹೇಳಿದ ಮಾತನ್ನು ವಾಪಸ್ ಪಡೆಯಲು ಒತ್ತಡ ಇತ್ತು. ಬೇರೆ ಬೇರೆ ಕಾರಣದಿಂದ ಒತ್ತಡ ಇತ್ತು. ನನ್ನ ಹೇಳಿಕೆಯನ್ನು ವಾಪಸ್ ಪಡೆದಿರುವೆ. ನಿನ್ನೆ ಎಲ್ಲ ನಾಯಕರೊಂದಿಗೆ ಚರ್ಚೆ ನಡೆಸಿ ವಾಪಸ್ ಪಡೆದಿದ್ದೇನೆ‌ ಎಂದರು. ಇದನ್ನೂ ಓದಿ: ಗುಜರಾತ್ ವಿಧಾನಸಭೆ ಚುನಾವಣೆ: ಕಾಂಗ್ರೆಸ್, ಬಿಜೆಪಿ ಪೈಪೋಟಿ – ಆಪ್ ಅಸ್ತಿತ್ವಕ್ಕಾಗಿ ಹೋರಾಟ

    ನೈಜ ಸುದ್ದಿ ಬಿಟ್ಟು ಬೇರೆ ಬೇರೆ ಆಯಾಮದಲ್ಲಿ ಚರ್ಚೆ ಆರಂಭ ಆಗಿದೆ. ವೈಯಕ್ತಿಕವಾಗಿ ಪಕ್ಷಕ್ಕೆ ಡ್ಯಾಮೇಜ್‌ ಆಯಿತು. ಬೇರೆ ನಾಯಕರು ಸಮರ್ಥನೆ ಮಾಡುವ ಪ್ರಶ್ನೆ ಇಲ್ಲ. ಅದು ಖಾಸಗಿ ಕಾರ್ಯಕ್ರಮ, ಪಕ್ಷದ ಕಾರ್ಯಕ್ರಮ ಅಲ್ಲ ಎಲ್ಲರೂ ಬೆಂಬಲಿಸುವ ನಿರೀಕ್ಷೆ ಇರಲಿಲ್ಲ. ಆದರೂ ಕೆಲವರು ಮಾತನಾಡಿದ್ದಾರೆ ಎಂದರು.

    ಇದು ಇಷ್ಟಕ್ಕೆ ನಿಂತಿಲ್ಲ ಸ್ವಪಕ್ಷ, ವಿರೋಧ ಪಕ್ಷ ಹಾಗೂ ಮಾಧ್ಯಮಗಳ ಮುಂದೆ ಕೆಲ ಸಂಗತಿ ಹೇಳುತ್ತೇವೆ. ನನಗೆ ಪಕ್ಷ ದೊಡ್ಡದು ಹೀಗಾಗಿ ಪಕ್ಷದ ಡ್ಯಾಮೇಜ್‌ ಆಗಬಾರದೆಂದು ಆ ಪದ ವಾಪಸ್ ಪಡೆದಿರುವೆ ನನ್ನ ಮೇಲಿನ ಆರೋಪದ ಬಗ್ಗೆ ಎಲ್ಲರಿಗೂ ತಿಳಿಸುವ ಕೆಲಸ ಮಾಡುತ್ತೇವೆ. ಮುಖ್ಯಮಂತ್ರಿಗಳು ನನ್ನ ಪತ್ರದ ತನಿಖೆ ಮಾಡಬೇಕು ಎಂದು ಜಾರಕಿಹೊಳಿ ಆಗ್ರಹಿಸಿದರು.

    ನನ್ನ ಮೇಲೆ ಯಾರ ಒತ್ತಡವು ಇಲ್ಲ. ಜಿಲ್ಲೆಯ ನಾಯಕರ ಜೊತೆಗೆ ಚರ್ಚೆ ಮಾಡಿ ಹೇಳಿಕೆ ವಾಪಸ್ ಪಡೆದಿರುವೆ. ಪ್ರತಿ ಗಂಟೆ ಲೆಕ್ಕದಲ್ಲಿ ಡ್ಯಾಮೇಜ್‌  ಆರಂಭ ಆಯ್ತು. ಹೀಗಾಗಿ ನಿನ್ನೆಯೇ ಸಿಎಂಗೆ ಪತ್ರ ಬರೆದಿರುವೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

    Live Tv
    [brid partner=56869869 player=32851 video=960834 autoplay=true]

  • ಸತೀಶ್ ಜಾರಕಿಹೊಳಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಬೇಕು: ಕಟೀಲ್ ಕಿಡಿ

    ಸತೀಶ್ ಜಾರಕಿಹೊಳಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಬೇಕು: ಕಟೀಲ್ ಕಿಡಿ

    ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಹಿಂದೂ ಎಂಬ ಪದ ಅಶ್ಲೀಲ ಎನ್ನುವ ಮೂಲಕ ಕಾಂಗ್ರೆಸ್ (Congress) ಪಕ್ಷದ ಹಿಂದೂ ವಿರೋಧಿ ನೀತಿಯನ್ನು ಮತ್ತೆ ಅನಾವರಣಗೊಳಿಸಿದ್ದಾರೆ. ಹಿಂದೂಗಳ ಭಾವನೆಗೆ ಧಕ್ಕೆ ತಂದಿರುವ ಸತೀಶ್ ಜಾರಕಿಹೊಳಿ (Satish Jarakiholi) ಅವರ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಅವರು ಮಾಧ್ಯಮ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

    ಈ ರೀತಿಯಾಗಿ ಹಿಂದೂಗಳನ್ನು ಟೀಕಿಸುವ ಮಾನಸಿಕತೆಯನ್ನು ಕಾಂಗ್ರೆಸ್ ಪಕ್ಷ ಮೊದಲಿನಿಂದಲೂ ಬೆಳೆಸಿಕೊಂಡು ಬಂದಿದೆ. ಹಿಂದೂಗಳನ್ನು ಅವಮಾನಿಸುವುದು, ಕಡೆಗಣಿಸುವುದನ್ನು ಕಾಂಗ್ರೆಸ್ ಪಕ್ಷವು ಸಾಮಾನ್ಯ ಕಾರ್ಯಸೂಚಿಯಾಗಿ ಪಾಲಿಸುತ್ತಲೇ ಬಂದಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಹಿಂದೂ ಪದ ಬಗ್ಗೆ ಮಾತನಾಡಿದ್ದು ತಪ್ಪು ಅಂತ ಪ್ರೂವ್‌ ಮಾಡಿದ್ರೆ, ರಾಜಕೀಯ ನಿವೃತ್ತಿ: ಸತೀಶ್ ಜಾರಕಿಹೊಳಿ

    ಹಿಂದೂ ಎಂಬುದು ಭಾರತದ ಜೀವನ ಪದ್ಧತಿ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಸತೀಶ್ ಜಾರಕಿಹೊಳಿ ಅವರು ಹಾಗಿದ್ದರೆ, ಸುಪ್ರೀಂಕೋರ್ಟಿಗಿಂತ ದೊಡ್ಡವರೇ ಎಂದು ಪ್ರಶ್ನಿಸಿದ್ದಾರೆ. ಬಾಬಾಸಾಹೇಬ ಡಾ. ಬಿ.ಆರ್.ಅಂಬೇಡ್ಕರ್ ಅವರು ಹಿಂದೂ ಧರ್ಮದ ಬಗ್ಗೆ ಇದೊಂದು ಜೀವನ ಪದ್ಧತಿ ಎಂದು ಹಲವೆಡೆ ಉಲ್ಲೇಖಿಸಿದ್ದಾರೆ. ಹಿಂದೂಗಳು ಒಗ್ಗಟ್ಟಾಗಬೇಕೆಂದು. ಆ ಮೂಲಕ ರಾಷ್ಟ್ರ ರಕ್ಷಣೆ ಆಗಲಿದೆ ಎಂದು ತಿಳಿಸಿದ್ದರು ಅಂತ ಹೇಳಿದ್ದಾರೆ. ಇದನ್ನೂ ಓದಿ: ಒಬ್ಬ ಹಿಂದೂವಾಗಿ ಸತೀಶ್ ಜಾರಕಿಹೊಳಿ ಹೇಳಿಕೆಯನ್ನು ನಾನೂ ಒಪ್ಪಲ್ಲ: ಡಿಕೆಶಿ

    Live Tv
    [brid partner=56869869 player=32851 video=960834 autoplay=true]

  • ಒಬ್ಬ ಹಿಂದೂವಾಗಿ ಸತೀಶ್ ಜಾರಕಿಹೊಳಿ ಹೇಳಿಕೆಯನ್ನು ನಾನೂ ಒಪ್ಪಲ್ಲ: ಡಿಕೆಶಿ

    ಒಬ್ಬ ಹಿಂದೂವಾಗಿ ಸತೀಶ್ ಜಾರಕಿಹೊಳಿ ಹೇಳಿಕೆಯನ್ನು ನಾನೂ ಒಪ್ಪಲ್ಲ: ಡಿಕೆಶಿ

    ಹುಬ್ಬಳ್ಳಿ: ಸತೀಶ್ ಜಾರಕಿಹೊಳಿ (Satish Jarakiholi) ಹೇಳಿಕೆಯನ್ನು ನಾನು ಒಬ್ಬ ಹಿಂದೂವಾಗಿ ಒಪ್ಪುವುದಿಲ್ಲ. ಅದು ಅವರ ವೈಯಕ್ತಿಕ ಅಭಿಪ್ರಾಯ. ನಾವು ಮತ್ತು ಕಾಂಗ್ರೆಸ್ ಪಕ್ಷ ಅವರ ಹೇಳಿಕೆಯನ್ನ ಒಪ್ಪುವುದಿಲ್ಲ. ನಮ್ಮ ಸಂಸ್ಕೃತಿ ಎಲ್ಲ ಧರ್ಮ, ಜಾತಿ ಒಟ್ಟಿಗೆ ತೆಗೆದುಕೊಂಡು ಹೋಗುವುದು ನಮ್ಮ ಕರ್ತವ್ಯ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

    ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ನಾನು ಒಬ್ಬ ಹಿಂದೂ (Hindu) ಧರ್ಮದವನು ಧರ್ಮಕ್ಕೆ ನಮ್ಮದೇ ಆದ ಇತಿಹಾಸವಿದೆ. ಸತೀಶ್ ಹೇಳಿಕೆಯಿಂದ ಪಕ್ಷಕ್ಕೆ ಡ್ಯಾಮೇಜ್ ಆಗೋದಿಲ್ಲ. KPCC ಇಂದ ಈ ಬಗ್ಗೆ ಸ್ಪಷ್ಟನೆ ಪಡೆಯುತ್ತೇವೆ. ಸಾರ್ವಜನಿಕ ಬದುಕಿನಲ್ಲಿ ಈ ರೀತಿ ಹೇಳಿಕೆ ನೀಡುವುದು ಖಂಡನೀಯ ಎಂದರು. ಇದನ್ನೂ ಓದಿ: ಚುನಾವಣೆಗೂ ಮುನ್ನ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ಗೆ ಬಿಗ್ ಶಾಕ್ – 26 ನಾಯಕರು BJP ಸೇರ್ಪಡೆ

    ಬೀದಿಬದಿ ವ್ಯಾಪಾರಸ್ಥರಿಂದ ಬೈರತಿ ಬಸವರಾಜ್ (Byrati Basavaraj) ಕಮಿಷನ್ ಪಡೆದ ಆರೋಪ ಬಗ್ಗೆ ಮಾತನಾಡಿದ ಅವರು, ಸರ್ಕಾರ ನಿಂತಿರುವುದೇ ಕಮಿಷನ್ ಮೇಲೆ ಬಸವರಾಜ ಬೊಮ್ಮಾಯಿ ಅವರು ಇದಕ್ಕೆ ಉತ್ತರ ಕೊಡಬೇಕು. ಬೀದಿ ಬದಿ ವ್ಯಾಪಾರಿಗಳಿಂದಲೂ ಹಣ ಪಡೆಯುವ ಮಟ್ಟಕ್ಕೆ ಸರ್ಕಾರ ಬಂದಿದೆ ಅಂತ ಆರೋಪ ಮಾಡಿದರು.

    Live Tv
    [brid partner=56869869 player=32851 video=960834 autoplay=true]

  • ಹಿಂದೂ ಪದ ಬಗ್ಗೆ ಮಾತನಾಡಿದ್ದು ತಪ್ಪು ಅಂತ ಪ್ರೂವ್‌ ಮಾಡಿದ್ರೆ, ರಾಜಕೀಯ ನಿವೃತ್ತಿ: ಸತೀಶ್ ಜಾರಕಿಹೊಳಿ

    ಹಿಂದೂ ಪದ ಬಗ್ಗೆ ಮಾತನಾಡಿದ್ದು ತಪ್ಪು ಅಂತ ಪ್ರೂವ್‌ ಮಾಡಿದ್ರೆ, ರಾಜಕೀಯ ನಿವೃತ್ತಿ: ಸತೀಶ್ ಜಾರಕಿಹೊಳಿ

    -ಅಶ್ಲೀಲ ಪದ ಅನ್ನೋದು ಡಿಕ್ಷನರಿಯಲ್ಲಿದೆ, ನಾನು ಬರೆದಿದ್ದೀನಾ?
    – ನಾನು ಭಾರತೀಯ ಎಂದ ಸತೀಶ್ ಜಾರಕಿಹೊಳಿ

    ಬೆಳಗಾವಿ: ಹಿಂದೂ ಪದದ ಬಗ್ಗೆ ನಾನು ತಪ್ಪು ಮಾತನಾಡಿದ್ದೇನೆ ಅಂತಾ ಪ್ರೂವ್ ಮಾಡಿದರೆ ಕ್ಷಮೆಯಷ್ಟೇ ಅಲ್ಲ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಷ್ಟು ಜನ ನಾವು ಹೇಳಿದ್ದನ್ನು ಅರ್ಥ ಮಾಡಿಕೊಂಡಿದ್ದಾರೆ. ಅಶ್ಲೀಲ ಎಂಬ ಪದದಿಂದ ತಮಗೆ ಬೇಕಾದ ಹಾಗೇ ಓದಿದ್ದಾರೆ. ಹಿಂದೂ ಶಬ್ದ ಪರ್ಷಿಯನ್ ಶಬ್ದ. ದಾಖಲೆ ಇದೆ. ವಿಕಿಪೀಡಿಯಾದಲ್ಲಿ ನೋಡಬಹುದು ಅಂತಾ ಹೇಳಿದ್ದೇನೆ. ಕೆಟ್ಟ ಶಬ್ದ ಬಳಸಿದ್ದು ಡಿಕ್ಷನರಿಯಲ್ಲಿ ಇದೆ. ಆ ಡಿಕ್ಷನರಿ 1963ರಲ್ಲಿ ಪ್ರಿಂಟ್ ಆಗಿದೆ. ನಾನು ಏನು ಹೇಳಿದ್ದೇನೋ, ಇದರ ಬಗ್ಗೆ ಚರ್ಚೆ ಆಗಬೇಕು ಅಂತ ಹೇಳಿದ್ದೇನೆ ಎಂದರು.

    ಹಿಂದೂ ಪದ ಅಶ್ಲೀಲವಾಗಿ ಅಂತಾ ಇದ್ದಿದ್ದು ಆ ಡಿಕ್ಷನರಿಯಲ್ಲಿ ಇದೆ. ಇವರು ತಮಗೆ ಬೇಕಾದ ಹಾಗೇ ಹೇಳಿದರೆ ನಾನು ಹೇಗೆ ಉತ್ತರ ಕೊಡಬೇಕಾಗುತ್ತದೆ. ವಿಕಿಪೀಡಿಯಾದಲ್ಲಿ ಇದ್ದಿದ್ದನ್ನು ಹೇಳಿದ್ದೇನೆ. ಅದನ್ನು ನೋಡಿ ಇಡೀ ರಾಷ್ಟ್ರದಲ್ಲಿ ಮುಂದುವರಿಸಿದ್ದಾರೆ. ವಿಕಿಪೀಡಿಯದಲ್ಲಿ ಯಾರಾದರೂ ಬರೆಯಬೇಕಿದರೂ ಕಮೀಟಿ ಇದೆ. ಹಾಗೇ ಅದನ್ನು ಅಪ್‍ಲೋಡ್ ಮಾಡಬಹುದು. ನಾವು ಯಾರ ಬಗ್ಗೆಯೂ ಮಾತನಾಡಲ್ಲ. ನಿಮ್ಮ ಪ್ಯಾನಲ್ ಡಿಸ್ಕಷನ್‍ಲ್ಲಿ ಚರ್ಚೆ ಮಾಡಬೇಕು. ಯಾರು ಬೇಕಾದರೂ ಬರಲಿ ನನ್ನ ಸ್ಟ್ಯಾಂಡ್ ಏನಿದೆ ಅದನ್ನು ಹೇಳುತ್ತೇನೆ. ಯಾರೂ ಸಹ ನಮ್ಮ ನಿಲುವು ನೋಡೇ ಇಲ್ಲ. ನ್ಯಾಷನಲ್ ಮೀಡಿಯಾದಲ್ಲಿ ಬಂದ ತಕ್ಷಣ ಒಂದ್ ಸ್ಟ್ಯಾಂಡ್ ಆಗಿದೆ. ನಾನು ತಪ್ಪು ಹೇಳೆದ್ದೇನೆ ಅಂತ ಪ್ರೂವ್ ಮಾಡಿದರೆ, ಕ್ಷಮೆ ಅಷ್ಟೇ ಅಲ್ಲ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ರಾಜಕೀಯ ನಿವೃತ್ತಿ ಹೊಂದುತ್ತೇನೆ ಎಂದ ತಿಳಿಸಿದರು. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಮತ್ತೆ ಮೊಳಗಿದ `ಮುಂದಿನ ಸಿಎಂ ಸಿದ್ದರಾಮಯ್ಯ’ ಘೋಷಣೆ

    ತಮಗೆ ಬೈದಿದ್ದನ್ನು ತಾವು ನೋಡಿಕೊಂಡಿಲ್ಲ. ಇದರ ಬಗ್ಗೆ ಹೀಗೆ ಹೇಳಿದ್ದೀರಿ ಅದನ್ನು ಚರ್ಚೆ ಮಾಡಿ ಅಂದಿದ್ದೇನೆ. ಡಿಕ್ಷನರಿಯಲ್ಲಿ ಹಿಂದೂ ಪದದ ಅರ್ಥ ಏನು ಅಂತಾ ಇದೆ. ಕೆಟ್ಟ ಶಬ್ದ ಉಪಯೋಗ ಮಾಡಿದ್ದಾರೆ ಎಂದರ್ಥ. ಆ ಡಿಕ್ಷನರಿಯಲ್ಲಿ ಹಿಂದೂ ಪದದ ಅರ್ಥ ಅಶ್ಲೀಲ ಎಂಬುವುದು ಇದೆ. ವಾಜಪೇಯಿಯವರು ಸಹ ಹಿಂದೂ ಪದ ಪರ್ಷಿಯನ್‍ನಿಂದ ಬಂದಿದ್ದು ಅಂತಾ ಹೇಳಿದ್ದಾರೆ. ನಾವು ಯಾವುದೇ ಜಾತಿ ನೋಡಿ ಕೆಲಸ ಮಾಡಲ್ಲ ಎಂದು ಹೇಳಿದರು.

    ನೀವು ಹಿಂದೂನಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಭಾರತೀಯ ಎಂದ ಸತೀಶ್ ಜಾರಕಿಹೊಳಿ ಅವರು, ಪಕ್ಷದ ಬೇರೆ ಇದು ವೈಯಕ್ತಿಕ, ನಾನು ಪಕ್ಷದ ವೇದಿಕೆಯಲ್ಲಿ ಮಾತನಾಡಿಲ್ಲ. ಪಕ್ಷಕ್ಕೂ ನನ್ನ ಹೇಳಿಕೆಗೂ ಸಂಬಂಧ ಇಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ತಿಂಗಳಿಗೆ 655 ರೂ. ಪಾವತಿಸಿ ಟ್ವಿಟ್ಟರ್ ಬ್ಲೂಟಿಕ್ ಪಡೆದ ಭಾರತದ ಮೊದಲ ಮಹಿಳೆ

    ಸತೀಶ್ ಜಾರಕಿಹೊಳಿ ಅರೆ ಬರೆ ಓದಿಕೊಂಡಿದ್ದಾರೆ ಎಂಬ ಸಿಎಂ ಬೊಮ್ಮಾಯಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಾನು ಅರೆ ಬರೆ ಓದಿಕೊಂಡಿಲ್ಲ. ನಾವು ಹಿಂದೂಗೆ ಎಲ್ಲಿ ಅವಮಾನ ಮಾಡಿದ್ದೀವಿ ಅಂತ ಸಾಬೀತು ಮಾಡಬೇಕು. ಹಲವು ಬಿಜೆಪಿ ನಾಯಕರೇ ಹಿಂದೂ ಪದ ಪರ್ಷಿಯನ್‍ನಿಂದ ಬಂದಿದೆ ಅಂತಾ ಹೇಳಿದ್ದಾರೆ. ಮನುವಾದಿಗಳು ಹಾಗೂ ಸಿಸ್ಟಮ್ ಇದೆ, ವ್ಯವಸ್ಥಿತವಾಗಿ ಇದನ್ನು ಷಡ್ಯಂತ್ರ ಮಾಡುತ್ತಿದ್ದಾರೆ. ನನ್ನ ಹೇಳಿಕೆ ಸುರ್ಜೇವಾಲಾ ಖಂಡನೆ ಮಾಡಿದ್ದಾರೆ. ಅವರು ನಮಗಿಂತ ಹಿರಿಯರು ಆಕ್ಷೇಪ ಮಾಡಲ್ಲ. ನಾವು ಮಾಡಿದ್ದಾದರೂ ಏನು? ನಾವು ಕ್ಷಮೆ ಕೇಳುವ ಪ್ರಶ್ನೆ ಇಲ್ಲ. ಸಿಎಂ ಬೊಮ್ಮಾಯಿ ಬೇಕಾದರೆ ಒಂದು ಕಮಿಟಿ ಮಾಡಲಿ. ಆ ಡಿಕ್ಷನರಿಯಲ್ಲಿ ಹಿಂದೂ ಪದದ ಅಶ್ಲೀಲ ಅಂತ ಬರೆದಿದ್ದಾರೆ, ಆ ಬಗ್ಗೆ ಚರ್ಚೆ ಮಾಡಿ ಅಂತ ಹೇಳಿದ್ದೇನೆ ಎಂದರು.

    1963ರಲ್ಲಿ ಆ ಡಿಕ್ಷನರಿ ಪ್ರಕಟ ಆಗಿದೆ. ಅದನ್ನು ನೋಡಿ. ಯಾವುದೇ ಸಮಾಜದವರಿಗೆ ಬೈದರೆ ಹರ್ಟ್ ಆಗುತ್ತದೆ. ಅಶ್ಲೀಲ ಪದ ಅನ್ನೋದು ಡಿಕ್ಷನರಿಯಲ್ಲಿದೆ. ನಾನು ಬರೆದಿದ್ದೀನಾ? “ಹಿಂದೂ ಪದದ ಅರ್ಥ ಕೆಟ್ಟದಿದೆ ನೋಡಿ ಅದರ ಬಗ್ಗೆ ಚರ್ಚೆ ಮಾಡಿ ಅಂತಾ ಹೇಳಿದ್ದೇನೆ. ನಿಮ್ಮ ಕಡೆ ಏನಾದರೂ ಕರೆಕ್ಟ್ ಇದ್ದರೆ ಮಾಡಿ, ದಾಖಲೆ ಇದ್ದರೆ ಮುಂದುವರಿಸಿ. ಅವರದ್ದೇ ಸರ್ಕಾರ ಇದೆ. ಸಿಎಂ ತನಿಖೆ ಮಾಡಲಿ ಒಂದು ಕಮಿಟಿ ಮಾಡಿ ಸತ್ಯಾಸತ್ಯತೆ ಹೊರಗೆ ಬರುತ್ತದೆ. ಬೇರೆ ಪುಸ್ತಕಗಳಲ್ಲಿ ಉಲ್ಲೇಖ ಇದೆ. ವಿಕಿಪೀಡಿಯಾದಲ್ಲಿ ಇದೆ ಅಂತಾ ಸುರ್ಜೆವಾಲಾರಿಗೂ ತಿಳಿಸಿದ್ದೇನೆ. ನಾನು ಚುನಾವಣೆ ದೃಷ್ಟಿಯಿಂದ ಹೇಳಿದ್ದಲ್ಲ. ಈ ಬಗ್ಗೆ ಸಾಮೂಹಿಕ ಚರ್ಚೆ ಮಾಡಬೇಕು. ನಾಲ್ಕು ಜನ ಚರ್ಚೆ ಮಾಡಿದ್ದನ್ನು ನಾವು ಒಪ್ಪಿಕೊಳ್ಳಲ್ಲ. ಸತ್ಯ ಹೇಳೋದೇ ಅಪರಾಧ. ಎಲ್ಲರಿಗೂ ನ್ಯಾಯ ಕೊಡಿಸುವುದೇ ಅಪರಾಧ ಆಗಿದೆ. ನಾನು ಪರ್ಷಿಯನ್ ಪದ ಅಂತಾ ಹೇಳಿದ್ದು, ಅದರ ಬಗ್ಗೆ ಚರ್ಚೆ ಆಗಬೇಕು ಅಂತ ಹೇಳಿದ್ದೇನೆ. ಅದು ಸತೀಶ್ ಜಾರಕಿಹೊಳಿ ಸಂಶೋಧನೆ ಮಾಡಿ ಬರೆದ ಬುಕ್ ಅಲ್ಲ. ಯಾರು ಚರ್ಚೆಗೆ ಬರುತ್ತಾರೋ ಬರಲಿ, ಚರ್ಚೆಗೆ ನಾನು ಸಿದ್ಧ ಎಂದು ಕಿಡಿಕಾರಿದರು.

    ಯಡಿಯೂರಪ್ಪ, ಬೊಮ್ಮಾಯಿಗೆ ಒಂದು ಕಮಿಟಿ ರಚನೆ ಮಾಡಲು ಹೇಳಿ. ಅದರಲ್ಲಿ ಪ್ರೂವ್ ಆದರೆ ಕ್ಷಮೆ ಅಲ್ಲ, ರಾಜೀನಾಮೆ ಸಹ ನೀಡುತ್ತೇನೆ. ಯಾರು ಬರೆದಿದ್ದಾರೆ ಅವರ ಮೇಲೆ ಕೇಸ್ ಹಾಕಿ ಫೈಟ್ ಮಾಡಬೇಕು. ಇಂತಹ ವಿಷಯಗಳ ಮೇಲೆ ಹಿಂದುತ್ವ ಗಟ್ಟಿ ಮಾಡುವುದು ಬಿಜೆಪಿಯವರ ಉದ್ದೇಶವಾಗಿದೆ. ಬೊಮ್ಮಾಯಿಯವರಿಗೆ ಕಮಿಟಿ ರಚಿಸಿ ಒಂದು ತಿಂಗಳಲ್ಲಿ ವರದಿ ನೀಡಿ ಅಂತ ಹೇಳಿ ಎಂದು ಹೇಳಿದರು.

    Live Tv
    [brid partner=56869869 player=32851 video=960834 autoplay=true]

  • ಸತೀಶ್ ಜಾರಕಿಹೊಳಿ ಅರೆಬರೆ ಓದಿದ ವ್ಯಕ್ತಿ: ಸಿಎಂ ಗರಂ

    ಸತೀಶ್ ಜಾರಕಿಹೊಳಿ ಅರೆಬರೆ ಓದಿದ ವ್ಯಕ್ತಿ: ಸಿಎಂ ಗರಂ

    ಉಡುಪಿ: ಹಿಂದೂ ಪದದ ಅರ್ಥ ಅಶ್ಲೀಲವಾಗಿದೆ ಎಂಬ ಸತೀಶ್ ಜಾರಕಿಹೊಳಿ (Satish Jarakiholi) ಹೇಳಿಕೆಗೆ ಇದೀಗ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಕೂಡ ಕೆಂಡಾಮಂಡಲರಾಗಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ಅರೆಬರೆ ಓದಿದ ವ್ಯಕ್ತಿ. ಯಾವುದೇ ಆಳವಾದ ಅಧ್ಯಯನ ಇಲ್ಲದೆ ಮಾತನಾಡಿದ್ದಾರೆ. ಅಲ್ಪಸಂಖ್ಯಾತ ಮತ ಬರುತ್ತೆ ಎಂಬ ಭ್ರಮೆಯಲ್ಲಿದ್ದಾರೆ. ಸತೀಶ್ ಹೇಳಿಕೆಯಿಂದ ಭಾರತದ ಭಾವನೆಗೆ ಧಕ್ಕೆಯಾಗಿದೆ. ಕ್ಷೋಭೆಭರಿತ ಹೇಳಿಕೆ ಎಂಬೂದು ದೇಶದ್ರೋಹದ ಕೆಲಸ ಎಂದು ಕಿಡಿಕಾರಿದರು.

    ರಾಹುಲ್ ಗಾಂಧಿ (Rahul Gandhi) ಹಾಗೂ ಸಿದ್ದರಾಮಯ್ಯ (Siddaramaiah) ಈ ವಿಚಾರದಲ್ಲಿ ಯಾಕೆ ಮೌನವಹಿಸಿದ್ದಾರೆ. ನಿಮ್ಮ ಮೌನ ಸತೀಶ್ ಮಾತಿಗೆ ಸಮ್ಮತಿನಾ? ಸತೀಶ್ ಇನ್ನೂ ಸಮರ್ಥನೆ ಮಾಡ್ತಾರೆ ಹುಳಿ ಹಿಂಡುವ ಕೆಲಸ ಮಾಡುತ್ತಾರೆ. ದೇಶದಲ್ಲಿ ಕಾಂಗ್ರೆಸ್ ಅಲ್ಪ ಸ್ಪಲ್ಪ ಉಳಿದಿದೆ. ನೆಪಮಾತ್ರದ ಕಾಂಗ್ರೆಸ್ (Congress) ಪಕ್ಷ ರಾಜ್ಯದಲ್ಲಿ ಜನ ಮೂಲೆಯ ಸ್ಥಾನ ತೋರಿಸ್ತಾರೆ. ಇದೊಂದು ಪೂರ್ವಗ್ರಹ ಹೇಳಿಕೆ ಮತ್ತು ಯೋಜನಾಬದ್ಧವಾದ ಹೇಳಿಕೆ. ಹಿಂದೂ ಭಾವನೆ ವಿಚಾರ ಮನಸ್ಸಿಗೆ ಘಾಸಿಯಾಗುವ ಹೇಳಿಕೆ ನೀಡಿದ್ದಾರೆ. ರಾಜ್ಯದ ಜನ ಒಕ್ಕೊರಲಿನಿಂದ ಇದನ್ನು ವಿರೋಧಿಸಬೇಕು ಎಂದು ಸಿಎಂ ಕರೆ ನೀಡಿದರು.

    ಇದೇ ವೇಳೆ ಡಿಕೆ ಸುರೇಶ್ ಸಿಬಿಐಯನ್ನು ಕಿರುಕುಳ ಬ್ಯೂರೊ ಆಫ್ ಇಂಡಿಯಾ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಡಿಕೆ ಸುರೇಶ್ (DK Suresh) ತಪ್ಪು ಮಾಡದೇ ಇದ್ರೆ ಯಾಕೆ ಭಯ ಪಡುತ್ತಾರೆ?. ಯಾವ ತನಿಖೆ ಬಂದ್ರೂ ನಾನು ಸಿದ್ಧ ಅಂತಾರಲ್ಲ. ಒಂದು ಕಡೆ ಅದನ್ನು ಹೇಳ್ತಾರೆ, ಇನ್ನೊಂದು ಕಡೆ ಇದನ್ನು ಹೇಳ್ತಾರೆ. ತಪ್ಪು ಮಾಡದೇ ಇದ್ರೆ ಭಯ ಪಡುವ ಅವಶ್ಯಕತೆ ಇಲ್ಲ ಎಂದು ಸಿಎಂ ಹೇಳಿದರು. ಇದನ್ನೂ ಓದಿ: ಸತೀಶ್ ಜಾರಕಿಹೊಳಿ ವಿರುದ್ಧ ಕೆರಳಿದ ಕೇಸರಿಪಡೆ- ಸುನಿಲ್ ಕುಮಾರ್‌ರಿಂದ ಸ್ವಾಭಿಮಾನಿ ಹಿಂದು ಅಭಿಯಾನ

    ಕಾಂಗ್ರೆಸ್ ಗೆದ್ದು ಖರ್ಗೆ ಅವರಿಗೆ ಗಿಫ್ಟ್ ನೀಡುತ್ತೇವೆ ಎಂಬ ಕಾಂಗ್ರೆಸ್ ಹೇಳಿಕೆ ಸಂಬಂಧ ಮಾತನಾಡಿ, ಖರ್ಗೆಯವರು ಕೂಡ ಹಿಂದೂಗಳ ಬಗ್ಗೆ ಮಾತನಾಡಿದ್ದಾರೆ. ಹಿಂದೂ ಪರ್ಷಿಯನ್‍ಯಂತ ಹೇಳಿದ್ದಾರೆ. ಅವರೂ ಕೂಡ ಜಾರಕಿಹೋಳಿ ಹೇಳಿಕೆ ಭಾಗ ಆಗಿದ್ದಾರೆ. ಯಾರು ಯಾರಿಗೆ ಗಿಫ್ಟ್ ನೀಡುತ್ತಾರೆ ನೋಡೋಣ ಎಂದರು.

    Live Tv
    [brid partner=56869869 player=32851 video=960834 autoplay=true]

  • ‘ಹಿಂದೂ’ ಭಾರತೀಯ ಪದವೇ ಅಲ್ಲ, ಪರ್ಷಿಯನ್ ಪದ – ಅರ್ಥ ಬಹಳ ಅಶ್ಲೀಲವಾಗಿದೆ: ಸತೀಶ್ ಜಾರಕಿಹೊಳಿ

    ‘ಹಿಂದೂ’ ಭಾರತೀಯ ಪದವೇ ಅಲ್ಲ, ಪರ್ಷಿಯನ್ ಪದ – ಅರ್ಥ ಬಹಳ ಅಶ್ಲೀಲವಾಗಿದೆ: ಸತೀಶ್ ಜಾರಕಿಹೊಳಿ

    ಚಿಕ್ಕೋಡಿ: ಭಾರತಕ್ಕೂ, ಪರ್ಷಿಯನ್‍ಗೂ ಏನ್ ಸಂಬಂಧ? ಹಿಂದೂ (Hindu) ಭಾರತೀಯ ಪದವೇ ಅಲ್ಲ, ಅದು ಪರ್ಷಿಯನ್ (Persian) ಪದ. ಹಿಂದೂ ನಮ್ಮದು ಹೇಗೆ ಆಯಿತು ಅನ್ನೋದು ಚರ್ಚೆ ಆಗಬೇಕಿದೆ. ಹಿಂದೂ ಪದದ ಅರ್ಥ ಬಹಳ ಅಶ್ಲೀಲವಾಗಿದೆ. ಅದು ನಿಮಗೆ ತಿಳಿದರೆ ನಿಮಗೆ ನಾಚಿಕೆ ಆಗುತ್ತೆ. ಎಲ್ಲಿಂದಲೋ ಬಂದಿರೋ ಧರ್ಮವನ್ನು ತಂದು ಒತ್ತಾಯಪೂರ್ವಕವಾಗಿ ಹೇರಲಾಗುತ್ತಿದೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ (Satish Jarakiholi) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಮಾನವ ಬಂಧುತ್ವ ವೇದಿಕೆಯಿಂದ ಆಯೋಜಿಸಿದ್ದ ಮನೆ ಮನೆಗೆ ಬುದ್ಧ ಬಸವ ಅಂಬೇಡ್ಕರ್‌ ಎನ್ನುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಹಾತ್ಮಾ ಜ್ಯೋತಿಬಾ ಫುಲೆ ಇಲ್ಲದಿದ್ದರೇ ಛತ್ರಪತಿ ಶಿವಾಜಿ (Shivaji) ಅವರ ಇತಿಹಾಸ ಹೊರಗೆ ಬರುತ್ತಿರಲಿಲ್ಲ. ಅವರ ಇತಿಹಾಸವನ್ನು ಮುಚ್ಚಿಡಲಾಗಿತ್ತು. ಸತ್ಯ ಶೋಧಕ ಸಂಸ್ಥೆಯಿಂದ ಅವರ ಇತಿಹಾಸ ಹೊರಗೆ ಬಂದಿದೆ. ಶಿವಾಜಿ ಎಲ್ಲರನ್ನು ಸಮಾನತೆಯಿಂದ ನೋಡುತ್ತಿದ್ದರು. ವಿಶ್ವದಲ್ಲಿ ಶಿವಾಜಿ ಅವರ ಒಂದೇ ಪೇಂಟಿಂಗ್‌ ಇರುವುದು ಅದನ್ನು ಯಾರೋ ಕುಲಕರ್ಣಿ, ದೇಶಪಾಂಡೆ ಅವರು ತಯಾರಿಸಿಲ್ಲ. ಮೊಹಮ್ಮದ್‌ ಮದಾರಿ ಎನ್ನುವ ಚಿತ್ರಕಾರ ಆ ಪೇಂಟಿಂಗ್‌ ತಯಾರಿಸಿದ್ದರು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಂತ್ರಾಲಯದಲ್ಲಿ ತೆಪ್ಪೋತ್ಸವ – ತುಂಗಭದ್ರಾ ನದಿಯಲ್ಲಿ ಬೆಳಕಿನ ಸಂಭ್ರಮ

    ಪ್ರತಾಪಗಡ್ ಕೋಟೆಯಲ್ಲಿ ಶಿವಾಜಿ ಮಸೀದಿ ನಿರ್ಮಾಣ ಮಾಡಿರುವ ಇತಿಹಾಸವಿದೆ. ಅವರ ಕಾಲದಲ್ಲಿ ಸಮಾನತೆಯಿತ್ತು. ಆದರೆ ಈಗ ಮರಾಠಾ, ಮುಸ್ಲಿಂ, ದಲಿತರ ನಡುವೆ ದಿನನಿತ್ಯ ಜಗಳವಾಗುತ್ತಿವೆ. ಇತಿಹಾಸ ಬೇರೆ ಇದೆ. ನಮಗೆ ಬೇರೆ ಇತಿಹಾಸ ತೋರಿಸಲಾಗುತ್ತಿದೆ. ಬಸವಣ್ಣ, ಶಿವಾಜಿ, ಸಂತ ತುಕಾರಾಮ ಸೇರಿದಂತೆ ಮಹಾನ್ ಪುರುಷರ ಇತಿಹಾಸವನ್ನು ಬೇರೆ ತೋರಿಸಲಾಗುತ್ತಿದೆ. ಬಸವಣ್ಣವರ ಕಾಲದಲ್ಲಿ ಸಾಕಷ್ಟು ಹತ್ಯೆಗಳು ನಡೆದವು ಅದನ್ನು ಮುಸ್ಲಿಮರು ಮಾಡಿದ್ರಾ? ಒಂದು ಲಕ್ಷ ಜೈನರ ಹತ್ಯೆಗಳಾಗಿವೆ ಎಂದು ಜೈನ್ ಸ್ವಾಮೀಜಿ ಹೇಳಿದ್ದಾರೆ. ಜೈನರ ಹತ್ಯೆಯನ್ನು ಆದೀಲ್ ಶಾ ಮಾಡಿದ್ರಾ? ಈ ಎಲ್ಲದರ ಕುರಿತು ಚರ್ಚೆ ಆಗಬೇಕಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಚಂದ್ರು ದೇಹದಲ್ಲಿ ಒಳ ಉಡುಪು ಇರಲಿಲ್ಲ – ಸ್ನೇಹಿತರ ಸಲಿಂಗಕಾಮಕ್ಕೆ ಬಲಿಯಾದ್ರಾ ಯುವ ನಾಯಕ?

    Live Tv
    [brid partner=56869869 player=32851 video=960834 autoplay=true]

  • ಮಂತ್ರಿಗಾಗಿ ಕಾದು ಕುಳಿತ ರಮೇಶ್ ಜಾರಕಿಹೊಳಿಗೆ ಬಿಜೆಪಿಯವರು ಚಾಕಲೇಟ್ ತಿನ್ನಿಸುತ್ತಿದ್ದಾರೆ: ಸತೀಶ್ ಜಾರಕಿಹೊಳಿ ವ್ಯಂಗ್ಯ

    ಮಂತ್ರಿಗಾಗಿ ಕಾದು ಕುಳಿತ ರಮೇಶ್ ಜಾರಕಿಹೊಳಿಗೆ ಬಿಜೆಪಿಯವರು ಚಾಕಲೇಟ್ ತಿನ್ನಿಸುತ್ತಿದ್ದಾರೆ: ಸತೀಶ್ ಜಾರಕಿಹೊಳಿ ವ್ಯಂಗ್ಯ

    ಬೆಳಗಾವಿ: ಮಂತ್ರಿಗಾಗಿ ಕಾದು ಕುಳಿತ ರಮೇಶ್ ಜಾರಕಿಹೊಳಿ (Ramesh Jarakiholi) ಕಲ್ಲು ಹೊಡೆಯಬಾರದು ಅಂತಾ ಚಾಕಲೇಟ್ ತಿನ್ನಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಸಹೋದರ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ (Satish Jarakiholi) ವ್ಯಂಗ್ಯವಾಡಿದ್ದಾರೆ.

    ಮುಂದಿನ ಚುನಾವಣೆಯಲ್ಲಿ ಬೆಳಗಾವಿ (Belgavi) ಜಿಲ್ಲೆಗೆ ರಮೇಶ್ ಜಾರಕಿಹೊಳಿ ನೇತೃತ್ವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಪಕ್ಷ ಕಟ್ಟಿದ ಯಡಿಯೂರಪ್ಪ ಅವರನ್ನೇ ಸೈಡ್ ಲೈನ್ ಮಾಡಿದ್ದಾರೆ. ಯಡಿಯೂರಪ್ಪನವರಿಗೆ (Yediyurappa) ನೇತೃತ್ವ ಕೊಡುತ್ತಿಲ್ಲ. ಇನ್ನೂ ರಮೇಶ್ ಜಾರಕಿಹೊಳಿ ಯಾವ ಲೆಕ್ಕ? ಬಿಜೆಪಿ (BJP) ನಾಯಕರು ರಮೇಶ್ ಜಾರಕಿಹೊಳಿ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದ್ದಾರೆ. ಮಂತ್ರಿಗಾಗಿ ಕಾದು ಕುಳಿತ ರಮೇಶ್ ಕಲ್ಲು ಎಸೆಯಬಾರದು ಅಂತಾ ಚಾಕಲೇಟ್ ತಿನ್ನಿಸುವ ಕೆಲಸ ಮಾಡುತ್ತಿದ್ದಾರೆ. ರಮೇಶ್ ಜಾಕಿಹೊಳಿ ಸಿಟ್ಟಾದರೆ ಏನಾದರೂ ಮಾಡಬಹುದು ಎಂಬ ಭಯ ಬಿಜೆಪಿ ನಾಯಕರಿಗೆ ಇದೆ. ಹಿಂದಿನ ಸರ್ಕಾರ ಕೆಡವಿದ ರಮೇಶ್ ಜಾರಕಿಹೊಳಿಗೆ ಈ ಸರ್ಕಾರ ಕೆಡುವುದು ದೊಡ್ಡ ಮಾತಲ್ಲ. ಒಂದು ಬಾರಿ ಬೈಪಾಸ್ ಸರ್ಜರಿ ಮಾಡಿದವನಿಗೆ ಎರಡನೇ ಬೈಪಾಸ್ ಸರ್ಜರಿ ಮಾಡುವುದು ದೊಡ್ಡ ಕೆಲಸವಲ್ಲ. ಹಾಗಾಗಿ ರಮೇಶ್ ಜಾರಕಿಹೊಳಿಗೆ ತಿಂಗಳಿಗೊಮ್ಮೆ ಚಾಕಲೇಟ್ ನೀಡುವ ಕೆಲಸ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: ರಿಲಯನ್ಸ್ ಆಸ್ಪತ್ರೆಯನ್ನು ಸ್ಫೋಟಿಸುತ್ತೇನೆ- ಮುಖೇಶ್ ಅಂಬಾನಿ, ಕುಟುಂಬಸ್ಥರಿಗೆ ಜೀವ ಬೆದರಿಕೆ

    ಸಿಎಂ (BasavarajBommai) ಈಗಾಗಲೇ ಸಚಿವ ಸಂಪುಟದ ವಿಸ್ತರಣೆ ಬಗ್ಗೆ ಮೂರು ಬಾರಿ ಮಾತನಾಡಿದ್ದಾರೆ. ಈಗ ಮತ್ತೆ ಈ ಕುರಿತಂತೆ ಬಿಜೆಪಿ ಹೈಕಮಾಂಡ್ ಭೇಟಿಗೆ ದೆಹಲಿಗೆ ಹೊರಟಿದ್ದಾರೆ. ಆದರೆ ಬಿಜೆಪಿ ಹೈಕಮಾಂಡ್ ಗುಜರಾತ್ ಚುನಾವಣೆಯಲ್ಲಿ (Gujrat Election) ಬ್ಯೂಸಿ ಆಗಿದ್ದಾರೆ. ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಬೆಳಗಾವಿ ಚುನಾವಣಾ ನಡೆಸುವ ಪ್ರಶ್ನೆಯೇ ಇಲ್ಲ. ಯಡಿಯೂರಪ್ಪನವರನ್ನು ನಮ್ಮ ನಾಯಕ ಅಂತಾ ಒಪ್ಪಿಕೊಂಡಿಲ್ಲ. ಇನ್ನೂ ರಮೇಶ್ ಜಾರಕಿಹೊಳಿ ಯಾವ ಲೆಕ್ಕ? ರಮೇಶ್ ಜಾರಕಿಹೊಳಿಗೆ ಆಗಾಗ ಏನಿದ್ದರೂ ಸಮಾಧಾನಕರ ಬಹುಮಾನ ಕೊಡುತ್ತಾರೆ. ಹೀಗಾಗಿ ರಮೇಶ್‍ಗೆ ಬಂದಾಗೊಮ್ಮೆ ಚಾಕಲೇಟ್ ಕೊಟ್ಟು ಹೋಗುತ್ತಾರೆ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ ಕಾಂಗ್ರೆಸ್ಸಿಗರ ಭಾರತ ಬಿಟ್ಟು ಓಡೋ ಯಾತ್ರೆ: ನಳೀನ್ ಕುಮಾರ್ ಕಟೀಲ್

    Live Tv
    [brid partner=56869869 player=32851 video=960834 autoplay=true]