– ಯಡಿಯೂರಪ್ಪ ಸುಳ್ಳು ಹೇಳ್ತಾರೆ ಅಂತ ಕಿಡಿ
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ವಿದೇಶಿ ಪ್ರವಾಸದ ಹೋದ ದಿನದಿಂದ ಕಾಂಗ್ರೆಸ್‍ನಲ್ಲಿ ದಿನಕ್ಕೊಂದು ಬೆಳವಣಿಗೆಗಳು ಕಂಡಿತ್ತು. ಅದಕ್ಕೆಲ್ಲಾ ಸಿದ್ದರಾಮಯ್ಯ ವಾಪಸ್ ಬರಬೇಕು. ಸೆ.16 ರಂದೇ ಎಲ್ಲಾ ತೀರ್ಮಾನ ಆಗುತ್ತೆ ಎಂಬೆಲ್ಲಾ ಮಾತುಗಳು ಕೇಳಿ ಬರುತ್ತಿವೆ. ಶನಿವಾರ ತಡರಾತ್ರಿ ಪ್ರವಾಸ ಮುಗಿಸಿ ಬೆಂಗಳೂರಿಗೆ ಆಗಮಿಸಿದ್ದಾರೆ.
ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಿಎಂ, ಜಾರಕಿಹೊಳಿ ಸಹೋದರರ ಸಮಸ್ಯೆ ಬಗ್ಗೆ ಮಾಹಿತಿಗಳಿಲ್ಲ. ವಿದೇಶ ಪ್ರವಾಸ ಚೆನ್ನಾಗಿತ್ತು. ಪ್ರಸ್ತುತ ಯಾವುದೇ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾಹಿತಿ ಇಲ್ಲ ಎಂದು ತಿಳಿಸಿದರು.

ಕಾಂಗ್ರೆಸ್ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂಬ ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅವರು ಯಾವಗಲೂ ಸುಳ್ಳುಗಳನ್ನು ಹೇಳಿಕೊಂಡು ಬರುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಅಗತ್ಯ ಬಿದ್ದರೆ ಮಾತ್ರ ಸಮನ್ವಯ ಸಮಿತಿ ಕರೆಯಲಾಗುತ್ತದೆ ಎಂದು ಸ್ಪಷ್ಟನೆ ನೀಡಿದರು.
ಜಾರಕಿಹೊಳಿ ಸಹೋದರರನ್ನು ಬಿಜೆಪಿ ಸಂಪರ್ಕಿಸಿದ್ದು, ಆಪರೇಷನ್ ಕಮಲದಡಿಯಲ್ಲಿ ಪಕ್ಷ ಕರೆತರುವ ಸಿದ್ಧತೆಯೂ ನಡೆದಿದೆ ಎಂದು ಹೇಳಲಾಗುತ್ತಿದೆ. ಈ ಕುರಿತು ಪ್ರತಿಕ್ರಿಯಿಸಿರುವ ರಮೇಶ್ ಜಾರಕಿಹೊಳಿ, ಸಿದ್ದರಾಮಯ್ಯ ಬಂದ ಮೇಲೆ ತಮ್ಮ ಮುಂದಿನ ನಿರ್ಧಾರ ತಿಳಿಸುವುದಾಗಿ ಸ್ಪಷ್ಟಪಡಿಸಿದ್ದಾರೆ. ಇಂದು ಜಾರಕಿಹೊಳಿ ಸಹೋದರರ ಸಿದ್ದರಾಮಯ್ಯನವರನ್ನು ಭೇಟಿ ಆಗಲಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv





















