Tag: Satish Reddy

  • ಬೆಡ್ ಬ್ಲಾಕಿಂಗ್- ಬಿಜೆಪಿ ಸಂಸದ, ಶಾಸಕನ ವಿರುದ್ಧ ತನಿಖೆ ನಡೆಸುವಂತೆ ದೂರು

    ಬೆಡ್ ಬ್ಲಾಕಿಂಗ್- ಬಿಜೆಪಿ ಸಂಸದ, ಶಾಸಕನ ವಿರುದ್ಧ ತನಿಖೆ ನಡೆಸುವಂತೆ ದೂರು

    ಬೆಂಗಳೂರು: ಬೆಡ್ ಬ್ಲಾಕಿಂಗ್ ದಂಧೆಯ ಹಿಂದೆ ಸಂಸದ ತೇಜಸ್ವಿ ಸೂರ್ಯ, ಶಾಸಕ ಸತೀಶ್ ರೆಡ್ಡಿ ಕೈವಾಡವಿದ್ದು, ಸೂಕ್ತ ತನಿಖೆ ನಡೆಸುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ದೂರು ನೀಡಲಾಗಿದೆ.

    ಈ ಸಂಬಂಧ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು, ಬಿಜೆಪಿ ಶಾಸಕ ಸತೀಶ್ ರೆಡ್ಡಿ ಅಪ್ತ ಬಾಬುವನ್ನು ಬಂಧಿಸಿದ್ದಾರೆ. ಬಾಬು ಮೂಲಕ ಸತೀಶ್ ರೆಡ್ಡಿ ಸೇರಿದಂತೆ ಕೆಲ ಬಿಜೆಪಿ ಗರು ಬೆಡ್ ಬ್ಲಾಕಿಂಗ್ ದಂಧೆ ನಡೆಸುತ್ತಿದ್ದರು. ಇದಕ್ಕೆ ಸಂಸದ ತೇಜಸ್ವಿ ಸೂರ್ಯ ಕೂಡ ಬೆಂಬಲ ನೀಡಿದ್ದಾರೆ. ಹಾಗಾಗಿ ಈ ಇಬ್ಬರು ನಾಯಕರನ್ನು ಬಂಧಿಸಿ ಸೂಕ್ತ ತನಿಖೆ ಮಾಡಬೇಕು ಅಂತಾ ದೂರಿನಲ್ಲಿ ತಿಳಿಸಲಾಗಿದೆ.

    ಕೊರೋನಾ ಲಸಿಕೆ ಯನ್ನು ಉಚಿತವಾಗಿ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ಕೊಟ್ಟಿದ್ರು. ಆದ್ರೆ ಸಂಸದ ತೇಜಸ್ವಿ ಸೂರ್ಯ ಕ್ಷೇತ್ರದಲ್ಲೇ ಖಾಸಗಿ ಆಸ್ಪತ್ರೆಗಳು ಲಸಿಕೆ ಯನ್ನು ಹಣಕ್ಕೆ ಮಾರಾಟ ಮಾಡುತ್ತಿದ್ದಾರೆ. ಪ್ರತಿ ಖಾಸಗಿ ಆಸ್ಪತ್ರೆ ಮುಂದೆ ಯಾವ್ಯಾವ ಲಸಿಕೆಗೆ ಎಷ್ಟು ಹಣ ಅಂತಾ ಬ್ಯಾನರ್ ಹಾಕಲಾಗಿದೆ, ವಿಪರ್ಯಾಸವೆಂದರೆ ಸಂಸದ ತೇಜಸ್ವಿ ಸೂರ್ಯರವರ ಫೋಟೋ ಕೂಡ ಅದೇ ಬ್ಯಾನರ್‍ಗಳಲ್ಲಿ ಹಾಕಲಾಗಿದೆ. ಖಾಸಗಿ ಆಸ್ಪತ್ರೆಗಳ ಲಸಿಕೆ ದಂಧೆಯಲ್ಲೂ ಸಂಸದರ ಕೈವಾಡ ವ್ಯಕ್ತವಾಗಿದೆ. ಹಾಗಾಗಿ ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಬಿಜೆಪಿಯ ಈ ಇಬ್ಬರು ಪ್ರಭಾವಿ ನಾಯಕರು ಮತ್ತು ಕೆಲ ಕಾರ್ಯಕರ್ತರು ಕೂಡ ಭಾಗಿಯಾಗಿದ್ದು, ಸೂಕ್ತ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಬೇಕು ಅಂತಾ ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ದೂರು ನೀಡಲಾಗಿದೆ.

  • ಬೆಡ್ ಬ್ಲಾಕಿಂಗ್ ಕೇಸ್ – ಸತೀಶ್ ರೆಡ್ಡಿ ಆಪ್ತ ಅರೆಸ್ಟ್

    ಬೆಡ್ ಬ್ಲಾಕಿಂಗ್ ಕೇಸ್ – ಸತೀಶ್ ರೆಡ್ಡಿ ಆಪ್ತ ಅರೆಸ್ಟ್

    ಬೆಂಗಳೂರು: ಬೆಡ್ ಬ್ಲಾಕಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಆಪ್ತ ಬಾಬು ಎಂಬಾತನನ್ನು ಬಂಧಿಸಲಾಗಿದೆ.

    ಕೋವಿಡ್ ವಾರ್ ರೂಂ ಸಿಬ್ಬಂದಿಯನ್ನು ಬೆದರಿಸಿ ಬೇಕಾದವರಿಗೆ ಬೆಡ್ ಹಂಚಿಕೆ ಮಾಡುತ್ತಿದ್ದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಇಂದು ಬಂಧಿಸಲಾಗಿದೆ. ಬೊಮ್ಮನಹಳ್ಳಿ ವಾರ್ ರೂಂ ಸಿಬ್ಬಂದಿಯ ಹೇಳಿಕೆ ಮತ್ತು ರೂಂನಲ್ಲಿದ್ದ ಸಿಸಿ ಟಿವಿ ಮಾಹಿತಿ ಆಧರಿಸಿ ಬಂಧನವಾಗಿದೆ.

    ಈ ಹಿಂದೆ ವಿಚಾರಣೆಗೆ ಕರೆದಾಗ ಕೋವಿಡ್ ಬಂದಿದೆ ಎಂದು ಹೇಳಿ ಆಸ್ಪತ್ರೆಗೆ ದಾಖಲಾಗಿದ್ದ. ಸೋಂಕು ಗುಣಮುಖವಾದ ಬಳಿಕ ಸಿಸಿಬಿ ಪೊಲೀಸರು ಈಗ ಬಾಬುವನ್ನು ಬಂಧಿಸಿದ್ದಾರೆ.