ಕಾರವಾರ: ಮಾರ್ಚ್‌ನಲ್ಲಿ ಮುಖ್ಯಮಂತ್ರಿಗಳು ಅನುದಾನ ಕೊಡದಿದ್ರೆ ರಾಜಕೀಯ ನಿವೃತ್ತಿಯಾಗುವುದಾಗಿ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ Satish Sail) ಘೋಷಿಸಿದ್ದಾರೆ.
ಕಾರವಾರದ (Karar ಸದಾಶಿವಗಡದ ಕಾಳಿ ಸಂಗಮದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆಗಬೇಕು ಎಂದು ಮೂರು ವರ್ಷದಿಂದ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತಾ ಬಂದಿದ್ದೇನೆ. ಮೂರು ವರ್ಷದಿಂದ ಅನುದಾನ ಬಿಡುಗಡೆ ಆಗಿಲ್ಲ, ಘೋಷಣೆಯೂ ಆಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಇಂಟರ್‌ನ್ಯಾಷನಲ್ ನಂಬರ್‌ನಿಂದ ಬೆದರಿಕೆ ಕರೆ, ನಾನು ಹೆದರಲ್ಲ: ಪ್ರಿಯಾಂಕ್ ಖರ್ಗೆ
ಚಿಕಿತ್ಸೆಗಾಗಿ ಜನ ಗೋವಾಕ್ಕೆ ಹೋಗಬೇಕು. ನಾನೇ ನನ್ನ ಚಿಕಿತ್ಸೆಗಾಗಿ ದೆಹಲಿಗೆ ಹೋಗುವಂತೆ ಆಗಿದೆ. ಹೀಗಾಗಿ, ಕಾರವಾರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ತುಂಬಾ ಅವಶ್ಯವಿದೆ. ಜನ ತೊಂದರೆಯಲ್ಲಿ ಇದ್ದಾರೆ. ನಾನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡಿಯೇ ಸಿದ್ಧ ಎಂದು ಶಪಥ ಮಾಡಿದ್ದಾರೆ.
ಮಾರ್ಚ್‌ನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಘೋಷಣೆ ಆಗಬೇಕು. ಆಗದೇ ಇದ್ದರೆ ನಾನು ಪಕ್ಷ ಬಿಟ್ಟು ಹೋಗಲ್ಲ. ರಾಜೀನಾಮೆ ಕೊಟ್ಟು ಮನೆಯಲ್ಲಿ ಇರ್ತೀನಿ. ರಾಜಕೀಯ ನಿವೃತ್ತಿ ತೆಗೆದುಕೊಳ್ತೇನೆ. ಆಸ್ಪತ್ರೆಗೆ ಅನುದಾನ ಬಿಡುಗಡೆ ಆಗಬೇಕು. ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡಿಕೊಡುವಂತೆ ಸಿಎಂಗೆ ಕೇಳಿಕೊಂಡಿದ್ದೆ. ಹಿಂದೆ ಅನುದಾನ ಕೊಡಲಿಲ್ಲ. ಮೂರು ವರ್ಷದಿಂದ ಈ ಬಗ್ಗೆ ಮನವಿ ಮಾಡಿದ್ದೇನೆ. ಈ ಬಜೆಟ್‌ನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಘೋಷಣೆ ಆಗದಿದ್ರೆ ಬಜೆಟ್ ಆದ ಮಾರನೇ ದಿವಸ ಸತೀಶ್ ಬಜೆಟ್ ಮನೆಯಲ್ಲಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಂಜೇಗೌಡಗೆ ತಾತ್ಕಾಲಿಕ ರಿಲೀಫ್ – ಶಾಸಕ ಸ್ಥಾನದಿಂದ ಅಸಿಂಧುಗೊಳಿಸಿದ್ದ ಆದೇಶಕ್ಕೆ ಸುಪ್ರೀಂ ತಡೆ
ಯಾವ ಪಕ್ಷಕ್ಕೂ ಹೋಗುವುದಿಲ್ಲ. ಯಾವ ಕೆಲಸವನ್ನೂ ಮಾಡುವುದಿಲ್ಲ. ಐ ಯಾಮ್ ಎ ನಾಟ್ ಫಿಟ್ ಫಾರ್ ಪೀಪಲ್ ಅಂತ ತಿಳಿದುಕೊಳ್ಳುತ್ತೇನೆ. ಅನುದಾನ ಬಿಡುಗಡೆಯಾಗದಿದ್ದರೆ ರಾಜಕೀಯ ನಿವೃತ್ತಿ ಘೋಷಿಸಿ ರಾಜಕೀಯದಿಂದ ದೂರ ಇರುತ್ತೇನೆಂದು ಹೇಳಿದ್ದಾರೆ.
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪದಡಿ (Money Laundering Case) ಬಂಧನವಾಗಿರುವ ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ (Satish Sail) ಜನಪ್ರತಿನಿಧಿಗಳ ನ್ಯಾಯಾಲಯ 7 ದಿನಗಳ ಕಾಲ ಮಧ್ಯಂತರ ಜಾಮೀನು (Interim Bail) ಮಂಜೂರು ಮಾಡಿದೆ.
ಸತೀಶ್ ಸೈಲ್ ಉಸಿರಾಟದ ಸಮಸ್ಯೆ, ಡಯಾಬಿಟಿಸ್‌ನಿಂದ ಬಳಲುತ್ತಿದ್ದು, ಕಸ್ಟಡಿಯಲ್ಲಿ ಇದ್ದಾಗ ಅನಾರೋಗ್ಯ ಹಿನ್ನೆಲೆ ಜಾಮೀನು ಮಂಜೂರು ಮಾಡಿದೆ. ಇತ್ತೀಚೆಗೆ ಅವರ ಮನೆ ಮೇಲೆ ದಾಳಿ ನಡೆಸಿದ್ದ ಇ.ಡಿ ಕೋಟ್ಯಂತರ ರೂ. ಹಣ ಹಾಗೂ ಚಿನ್ನದ ಬಿಸ್ಕೆಟ್‌ಗಳನ್ನು ವಶಕ್ಕೆ ಪಡೆದಿತ್ತು. 1.68 ಕೋಟಿ ನಗದು, 6.75 ಕೆಜಿ ಚಿನ್ನದ ಬಿಸ್ಕೆಟ್‌ಗಳು ಮತ್ತು 14.13 ಕೋಟಿ ಹಣ ಹೊಂದಿರುವ ಬ್ಯಾಂಕ್ ಖಾತೆಯನ್ನು ಜಾರಿ ನಿರ್ದೇಶನಾಲಯ ಸೀಜ್ ಮಾಡಿತ್ತು. ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಕೇಸ್ – ಇ.ಡಿಯಿಂದ ಶಾಸಕ ಸತೀಶ್ ಸೈಲ್ ಅರೆಸ್ಟ್
ಅಕ್ರಮ ಅದಿರು ಪ್ರಕರಣದಲ್ಲಿ ಜಾಮೀನಿನ ಮೇಲೆ ಶಾಸಕ ಸತೀಶ್ ಸೈಲ್ ಹೊರಗಿದ್ದರು. ಆ.13 ಮತ್ತು 14 ರಂದು ಇ.ಡಿ ಅಧಿಕಾರಿಗಳು, ಶಾಸಕರ ಮನೆ ಮೇಲೆ ದಾಳಿ ನಡೆಸಿ ಪರಿಶೀಲಿಸಿದ್ದರು. ಈ ವೇಳೆ ಅಪಾರ ದಾಖಲೆಗಳನ್ನು ವಶಕ್ಕೆ ಪಡೆದಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಸತೀಶ್ ಸೈಲ್ ಅವರನ್ನು ಮಂಗಳವಾರ ಇ.ಡಿ ಅಧಿಕಾರಿಗಳು ಬಂಧಿಸಿದ್ದರು. ಇದನ್ನೂ ಓದಿ: Rain Alert | ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತ – ಬೆಳೆಹಾನಿಗೆ ರೈತರು ಕಂಗಾಲು, ಸೇತುವೆಗಳು ಜಲಾವೃತ
ಬೆಂಗಳೂರು: ಅಕ್ರಮ ಹಣ ವರ್ಗಾವಣೆ (Money Laundering Case) ಆರೋಪದಡಿ ಬಂಧನಕ್ಕೊಳಗಾಗಿರುವ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ (Satish Sail) ಅವರನ್ನು 2 ದಿನ ಇ.ಡಿ ಕಸ್ಟಡಿಗೆ (ED Custody) ನೀಡಿ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ಹೊರಡಿಸಿದೆ.
ಮಧ್ಯಂತರ ಜಾಮೀನು ನೀಡುವಂತೆ ಸೈಲ್ ಪರ ವಕೀಲರು ಅರ್ಜಿ ಸಲ್ಲಿಸಿದ್ದು, ಅನಾರೋಗ್ಯದ ಹಿನ್ನೆಲೆ ಜಾಮೀನು ನೀಡಲು ಮನವಿ ಮಾಡಿದ್ದರು. ಇನ್ನು ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಸುವ ಸಲುವಾಗಿ ಅಧಿಕಾರಿಗಳು ಶಾಸಕ ಸತೀಶ್ ಸೈಲ್ ಅವರನ್ನು ಇ.ಡಿ ಕಸ್ಟಡಿಗೆ ಕೇಳಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾ.ಸಂತೋಷ್ ಗಜಾನನ ಭಟ್, ಸತೀಶ್ ಸೈಲ್ ಅವರನ್ನು 2 ದಿನ ಇ.ಡಿ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದ್ದಾರೆ. ಸೆ.12ರಂದು ಸಂಜೆ 5 ಗಂಟೆಗೆ ಮತ್ತೆ ಕೋರ್ಟ್ ಮುಂದೆ ಹಾಜರುಪಡಿಸಲು ಸೂಚಿಸಲಾಗಿದೆ. ಇದನ್ನೂ ಓದಿ: ಬಿಜೆಪಿಯವ್ರೇ ನಿಮ್ಮ ಮಕ್ಳನ್ನು ವಿದೇಶದಿಂದ ಕರೆಸಿ, ಅವ್ರನ್ನ ಮುಂದೆ ಬಿಟ್ಟು ಹೋರಾಟ ಮಾಡಿ: ಪ್ರಿಯಾಂಕ್ ಖರ್ಗೆ
ಇತ್ತೀಚೆಗೆ ಅವರ ಮನೆ ಮೇಲೆ ದಾಳಿ ನಡೆಸಿದ್ದ ಇ.ಡಿ ಕೋಟ್ಯಂತರ ರೂ. ಹಣ ಹಾಗೂ ಚಿನ್ನದ ಬಿಸ್ಕೆಟ್‌ಗಳನ್ನು ವಶಕ್ಕೆ ಪಡೆದಿತ್ತು. 1.68 ಕೋಟಿ ನಗದು, 6.75 ಕೆಜಿ ಚಿನ್ನದ ಬಿಸ್ಕೆಟ್‌ಗಳು ಮತ್ತು 14.13 ಕೋಟಿ ಹಣ ಹೊಂದಿರುವ ಬ್ಯಾಂಕ್ ಖಾತೆಯನ್ನು ಜಾರಿ ನಿರ್ದೇಶನಾಲಯ ಸೀಜ್ ಮಾಡಿತ್ತು. ಇದನ್ನೂ ಓದಿ: ಬುರುಡೆ ಗ್ಯಾಂಗ್ ಲಾಕ್ ಮಾಡಲು ಎಸ್‌ಐಟಿಗೆ ಸಾಕ್ಷ್ಯಾಧಾರದ ಕೊರತೆ – ಚಿನ್ನಯ್ಯ ಮಾತ್ರ ಬಲಿಪಶು?
ಅಕ್ರಮ ಅದಿರು ಪ್ರಕರಣದಲ್ಲಿ ಜಾಮೀನಿನ ಮೇಲೆ ಶಾಸಕ ಸತೀಶ್ ಸೈಲ್ ಹೊರಗಿದ್ದಾರೆ. ಆ.13 ಮತ್ತು 14 ರಂದು ಇ.ಡಿ ಅಧಿಕಾರಿಗಳು, ಶಾಸಕರ ಮನೆ ಮೇಲೆ ದಾಳಿ ನಡೆಸಿ ಪರಿಶೀಲಿಸಿದ್ದರು. ಈ ವೇಳೆ ಅಪಾರ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.
ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದ ತನಿಖೆಯನ್ನು ಸತೀಶ್ ಸೈಲ್ ಎದುರಿಸುತ್ತಿದ್ದಾರೆ. ಪ್ರಕರಣ ಹೈಕೋರ್ಟ್‌ನಲ್ಲಿ ವಿಚಾರಣೆ ಹಂತದಲ್ಲಿರುವ ಹೊತ್ತಲ್ಲೇ ಇ.ಡಿ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ. ಕಾರವಾರ (ಉತ್ತರ ಕನ್ನಡ), ಗೋವಾ, ಮುಂಬೈ ಮತ್ತು ನವದೆಹಲಿಯ ಅನೇಕ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆಗಳನ್ನು ನಡೆಸಲಾಗಿದೆ. ಇದನ್ನೂ ಓದಿ: ಬೇಲೆಕೇರಿ ಅದಿರು ನಾಪತ್ತೆ ಕೇಸ್ – 6 ಪ್ರಕರಣಗಳಲ್ಲೂ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು
ಕಾರವಾರ: ಬೆಳಂಬೆಳಗ್ಗೆ ಕಾರವಾರ (Karwar) ತಾಲೂಕಿನ ಚಿತ್ತಾಕುಲದಲ್ಲಿರುವ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ (Satish Sail) ಮನೆಯ ಮೇಲೆ ಇ.ಡಿ (ED Raid) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇಡಿ ಅಧಿಕಾರಿ ಕೇಶವ್ ನೇತೃತ್ವದಲ್ಲಿ 12 ಪ್ಯಾರಾ ಮಿಲಿಟರಿ ಶಸಸ್ತ್ರ ತಂಡದೊಂದಿಗೆ ಸುಮಾರು 6 ಅಧಿಕಾರಿಗಳ ತಂಡ ದಾಳಿ ಮಾಡಿದೆ. ಈ ವೇಳೆ ಶಾಸಕರಾಗಲಿ ಅಥವಾ ಅವರ ಕುಟುಂಬದವರಾಗಲಿ ಮನೆಯಲ್ಲಿ ಇರಲಿಲ್ಲ. ಹೀಗಾಗಿ ಮನೆಯಲ್ಲಿ ಇರುವ ಕೆಲಸದವನನ್ನು ವಿಚಾರಣೆ ನಡೆಸುತಿದ್ದು, ಶಾಸಕರಿಗೂ ಬುಲಾವ್ ಹೋಗಿದೆ. ಇದನ್ನೂ ಓದಿ: ಮಾಜಿ ಐಜಿಪಿ ಓಂ ಪ್ರಕಾಶ್ ಹತ್ಯೆಯಲ್ಲಿ ಮಗಳ ಪಾತ್ರವಿಲ್ಲ – ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಕೆ
ಮಲ್ಲಿಕಾರ್ಜುನ ಶಿಪ್ಪಿಂಗ್ ಕಂಪನಿ ಮೂಲಕ ಅದಿರು ಸಾಗಾಟ ನಡೆಸುತ್ತಿದ್ದ ಸತೀಶ್ ಸೈಲ್ ಈ ಹಿಂದೆ ಆಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸಿದ್ದರು. ಈ ಕುರಿತು ಈ ಹಿಂದೆ ಮಾಜಿ ಲೋಕಾಯುಕ್ತ ಸಂತೋಷ್ ಹೆಗಡೆ ತಂಡದಿಂದ ದೂರು ದಾಖಲಿಸಲಾಗಿತ್ತು. ಜನಪ್ರತಿನಿಧಿಗಳ ನ್ಯಾಯಾಲದಿಂದ ಜೈಲು ಶಿಕ್ಷೆ ವಿಧಿಸಲಾಗಿತ್ತು. ಹೈಕೋರ್ಟ್ ಮೂಲಕ ಜಾಮೀನು ಪಡೆದು ಸತೀಶ್ ಸೈಲ್ ಹೊರಬಂದಿದ್ದರು. ಇದನ್ನೂ ಓದಿ: ರಾಜ್ಯಾದ್ಯಂತ ಮುಂದಿನ ಒಂದು ವಾರ ಭಾರೀ ಮಳೆ – ಎಲ್ಲಾ ಜಿಲ್ಲೆಗೂ ಯೆಲ್ಲೋ ಅಲರ್ಟ್
ಕಾರವಾರ: ಮ್ಯಾರಥಾನ್ ವೇಳೆ ಕುಸಿದು ಬಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿ ಶಾಸಕ ಸತೀಶ್ ಸೈಲ್ ಮಾನವೀಯತೆ ಮೆರೆದಿದ್ದಾರೆ.
ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಮಾದಕ ವಸ್ತು ನಿಯಂತ್ರಣ ಜಾಗೃತಿಗಾಗಿ ಮ್ಯಾರಥಾನ್ ಆಯೋಜಿಸಲಾಗಿತ್ತು. ನಗರದ ಮಾಲಾದೇವಿ ಮೈದಾನದ ಬಳಿ ನೌಕಾದಳ ಉದ್ಯೋಗಿ ಗುರುಚರಣ್ ಕುಸಿದು ಬಿದ್ದರು.
ತಕ್ಷಣ ಅವರನ್ನು ಅಂಬುಲೆನ್ಸ್ನಲ್ಲಿ ಶಾಸಕ ಸೈಲ್ ಆಸ್ಪತ್ರೆಗೆ ಕರೆದುಕೊಂಡು ಹೋದರು. ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯರನ್ನ ಕರೆಸಿ ಚಿಕಿತ್ಸೆಗೆ ಸಹಕರಿಸಿದರು. ಚಿಕಿತ್ಸೆ ನಂತರ ವ್ಯಕ್ತಿ ಚೇತರಿಸಿಕೊಂಡರು.
ಕಾರವಾರ: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರ ಶಾಸಕ ಸತೀಶ್ ಸೈಲ್‌ಗೆ (Satish Sail) ಏಳು ವರ್ಷಗಳು ಜೈಲು ಶಿಕ್ಷೆಯನ್ನು ಕೋರ್ಟ್ ವಿಧಿಸಿದೆ. ಆದರೆ, ಶಾಸಕ ಸತೀಶ್ ಸೈಲ್ ಗೆ ಬಾಡದ ಗುರುಮಠದ ಶಾಪ, ಇಂದು ಅವರ ಈ ಸ್ಥಿತಿಗೆ ಕಾರಣ ಎಂಬ ಸುದ್ದಿ ಹರಿದಾಡುತ್ತಿದೆ.
ಅಕ್ರಮ ಅದಿರು ರಫ್ತು ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ಕೋರ್ಟ್ 7 ವರ್ಷ ಜೈಲು ಶಿಕ್ಷೆ ವಿಧಿಸಿದ್ದು, 44 ಕೋಟಿಗೂ ಅಧಿಕ ದಂಡ ವಿಧಿಸಿದೆ. ಬರೋಬ್ಬರಿ 14 ವರ್ಷಗಳ ಹಿಂದಿನ ಪ್ರಕರಣದಲ್ಲಿ ಶಾಸಕ ಸತೀಶ್ ಸೈಲ್‌ಗೆ ಈಗ ಶಿಕ್ಷೆ ಆಗಿರುವುದಕ್ಕೆ ಆ ಗುರುಮಠದ ಶಾಪ ಕಾರಣ ಎಂದು ಕಾರವಾರದಲ್ಲಿ ಭಾರಿ ಚರ್ಚೆ ನಡೆದಿದೆ. 2013ರಲ್ಲಿ ಇದೆ ಪ್ರಕರಣದಲ್ಲಿ ಒಂದು ವರ್ಷಕ್ಕೂ ಹೆಚ್ಚು ಕಾಲ ಸೆರೆವಾಸ ಅನುಭವಿಸಿ ಬಂದಿದ್ದ ಶಾಸಕ ಸೈಲ್ ಎರಡನೇ ಬಾರಿ ಶಾಸಕನಾಗಿ ನೆಮ್ಮದಿಯ ಜೀವನ ಸಾಗಿಸುತ್ತಿದ್ದರು. ಆದರೆ, 2023ರ ಅಗಸ್ಟ್ 30ರಂದು ಕಾರವಾರ ನಗರದ ಬಾಡದಲ್ಲಿರುವ ಗುರುಮಠದ ಆಸ್ತಿಯನ್ನ ಕೊಳ್ಳೆ ಹೊಡೆಯಲು ಸಂಚು ರೂಪಿಸಿದ್ದರು ಎನ್ನಲಾಗಿದೆ. ತಮ್ಮ ಆಪ್ತರೇ ಈ ಮಠದ ಆಡಳಿತ ನಡೆಸಬೇಕೆಂದು ದೊಡ್ಡ ಗಲಾಟೆ ಮಾಡಿದ್ದಲ್ಲದೆ, ಮಠಕ್ಕೆ ಸೇರಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಒಡವೆಯನ್ನು ದೊಚ್ಚಿದ್ದಾರೆ. ಅಂದು ನಾನು ಅವರಿಗೆ ಮಠದ ವಿಷಯದಲ್ಲಿ ಹೋಗಬೇಡಿ ಎಂದರೂ ಬಿಡದೇ ಮಠವನ್ನು ಒಡೆದರು, ನಗ ನಾಣ್ಯ ಲೂಟಿ ಮಾಡಿಸಿದರು. ಈ ವಿಚಾರವಾಗಿ ನಾನು ಕೂಡ ಕೇಸ್ ದಾಖಲಿಸಿದ್ದು ಕೊರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ ಎಂದು ಗುರುಮಠದ ಮಾಜಿ ಅಧ್ಯಕ್ಷ ಸಂತೋಷ್ ಗುರುಮಠ ಆರೋಪಿಸಿದ್ದಾರೆ.
19ನೇ ಶತಮಾನದಲ್ಲಿ ಮಹಾರಾಷ್ಟ್ರದಿಂದ ಬಂದು ಕಾರವಾರದಲ್ಲಿ ನೆಲೆಸಿದ್ದ ಪದ್ಮನಾಭ ತೀರ್ಥ ಗುರುಗಳು ಕಾರವಾರದ ನಗರದ ಹೃದಯ ಭಾಗದಲ್ಲಿ ವಿಶಾಲವಾದ ಸ್ಮಶಾನ ಭೂಮಿಯಲ್ಲಿ ಸುಂದರವಾದ ಮಠವನ್ನು ನಿರ್ಮಾಣ ಮಾಡಿದ್ದಾರೆ. ಬಂದ ಭಕ್ತರಿಗೆ ಸಂಕಷ್ಟ ನಿವಾರಣೆ ಮಾಡುತ್ತಾ ಅಪಾರ ಭಕ್ತರನ್ನು ಗಳಿಸಿದ್ದ ಅವರು, ಜೀವಂತವಾಗಿಯೇ ಸಮಾಧಿಯಾಗಿದ್ದರು. ಮಠಕ್ಕೆ ಉತ್ತರಾಧಿಕಾರಿ ಮಾಡದೇ ಭಕ್ತರಿಂದಲೇ ನಡೆದುಕೊಂಡು ಹೋಗುವಂತೆ ಸೂಚಿಸಿದ್ದರು. ಗುರುಮಠದ ದೈವ ಶಕ್ತಿಯಿಂದ ಭಕ್ತರು ಕೋಟ್ಯಂತರ ರೂಪಾಯಿ ಮೌಲ್ಯದ ಭೂಮಿ, ಒಡವೆ ಹಾಗೂ ಕೆಲವರು ಹಣವನ್ನು ನೀಡಿದ್ದಾರೆ. ಸದ್ಯ ಕಾರವಾರದ ಶ್ರೀಮಂತ ಮಠಗಳಲ್ಲಿ ಒಂದಾದ ಈ ಗುರುಮಠದ ಮೇಲೆ ಕಣ್ಣು ಹಾಕಿದ್ದ ಸತೀಶ್ ಸೈಲ್ 2023ರ ಅಗಸ್ಟ್ 30ರಂದು ಭಾರಿ ಗಲಾಟೆ ಮಾಡಿ ಮಠವನ್ನು ತನ್ನ ಸುಪರ್ದಿಗೆ ತೆಗೆದುಕೊಂಡು ಮಠದಲ್ಲಿರುವ ಕೋಟ್ಯಂತರ ರೂಪಾಯಿ ಆಸ್ತಿಯನ್ನು ಲೂಟಿ ಮಾಡುತ್ತಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಸಂಡೂರು| ಕಾಂಗ್ರೆಸ್‌ಗೆ ಮಾಸ್ಟರ್ ಸ್ಟ್ರೋಕ್ ನೀಡಲು ರೆಡ್ಡಿ ಗೇಮ್!
ಬೆಂಗಳೂರು: ಬೇಲೆಕೇರಿ (Belekere) ಅದಿರು ನಾಪತ್ತೆ ಪ್ರಕರಣದಲ್ಲಿ ಶಾಸಕ ಸತೀಶ್ ಸೈಲ್‌ಗೆ (Satish Sail) ಪ್ರಕರಣಗಳಲ್ಲಿ ತಲಾ 7 ವರ್ಷ ಜೈಲು ಶಿಕ್ಷೆ ಎಂದು ಕೋರ್ಟ್ ತೀರ್ಪು ನೀಡಿದ್ದು, ಕೋರ್ಟ್ ಆದೇಶ ಕೇಳಿ ನನಗೆ ಶಾಕ್ ಎಂದು ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಹೇಳಿದ್ದಾರೆ.
ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೇಲೆಕೇರಿ ಅದಿರು ನಾಪತ್ತೆ ಕೇಸ್‌ನ 6 ಪ್ರಕರಣಗಳಲ್ಲೂ ಕಾಂಗ್ರೆಸ್ ಶಾಸಕ ಸತೀಶ್‌ಗೆ 7 ವರ್ಷ ಜೈಲು ಎಂದು ಕೋರ್ಟ್ ಆದೇಶ ಹೊರಡಿಸಿದೆ. ಕೋರ್ಟ್ ಆದೇಶ ಕೇಳಿ ನನಗೆ ಶಾಕ್ ಆಗಿದೆ. ಅಫೀಲು ಮಾಡಲು ಶಾಸಕರಿಗೆ ಅವಕಾಶವಿದೆ. ಅವರು ಲೀಗಲ್ ಟೀಂ ಜೊತೆ ಮಾತನಾಡುತ್ತಾರೆ. ಶಾಸಕ ಸ್ಥಾನದಿಂದ ಅನರ್ಹ ಆಗುವ ಕುರಿತು ನನಗೆ ತಿಳಿದಿಲ್ಲ. ಮುಂದೆ ಏನು ಆಗುತ್ತದೆ ನೋಡೋಣ ಎಂದರು.ಇದನ್ನೂ ಓದಿ: ಕಾರವಾರ| ಗಾಂಜಾ ಜೊತೆ ನಿಷೇಧಿತ ಮಾದಕ ವಸ್ತು ವಶ; ನಾಲ್ವರ ಬಂಧನ
ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ದೋಷಿಯಾಗಿರುವ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ ಆರು ಪ್ರಕರಣಗಳಲ್ಲೂ 7 ವರ್ಷ ಜೈಲು ಶಿಕ್ಷೆ ವಿಧಿಸಿ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
ಒಟ್ಟು ಆರು ಪ್ರಕರಣಗಳಲ್ಲಿ ಕಾಂಗ್ರೆಸ್ ಶಾಸಕ ದೋಷಿ ಎಂದು ವಿಶೇಷ ನ್ಯಾಯಾಲಯ ತೀರ್ಪು ನೀಡಿತ್ತು. ಶಿಕ್ಷೆಯ ಪ್ರಮಾಣವನ್ನು ಶನಿವಾರಕ್ಕೆ ಕಾಯ್ದಿರಿಸಿತ್ತು. ಈಗ ಎಲ್ಲಾ ಪ್ರಕರಣಗಳಲ್ಲೂ ದೋಷಿ ಸತೀಶ್ ಸೈಲ್ ಇತರೆ ಅಪರಾಧಿಗಳಿಗೆ ಶಿಕ್ಷೆಯನ್ನು ಕೋರ್ಟ್ ಪ್ರಕಟಿಸಿದೆ.
– 6 ಕೇಸ್ ಪೈಕಿ ಯಾವ್ಯಾವ ಪ್ರಕರಣದಲ್ಲಿ ಎಷ್ಟು ವರ್ಷ ಜೈಲು?
ಕಾರವಾರ: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ದೋಷಿಯಾಗಿರುವ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ ಆರು ಪ್ರಕರಣಗಳಲ್ಲೂ 7 ವರ್ಷ ಜೈಲು ಶಿಕ್ಷೆ ವಿಧಿಸಿ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
ಒಟ್ಟು ಆರು ಪ್ರಕರಣಗಳಲ್ಲಿ ಕಾಂಗ್ರೆಸ್ ಶಾಸಕ ದೋಷಿ ಎಂದು ವಿಶೇಷ ನ್ಯಾಯಾಲಯ ತೀರ್ಪು ನೀಡಿತ್ತು. ಶಿಕ್ಷೆಯ ಪ್ರಮಾಣವನ್ನು ಶನಿವಾರಕ್ಕೆ ಕಾಯ್ದಿರಿಸಿತ್ತು. ಈಗ ಎಲ್ಲಾ ಪ್ರಕರಣಗಳಲ್ಲೂ ದೋಷಿ ಸತೀಶ್ ಸೈಲ್ ಇತರೆ ಅಪರಾಧಿಗಳಿಗೆ ಶಿಕ್ಷೆಯನ್ನು ಕೋರ್ಟ್ ಪ್ರಟಿಸಿದೆ.
ಎಲ್ಲಾ ಪ್ರಕರಣಗಳಲ್ಲೂ ಸತೀಶ್ ಸೈಲ್‌ಗೆ 7 ವರ್ಷ ಶಿಕ್ಷೆ ಪ್ರಕಟಿಸಲಾಗಿದ್ದು, ದಂಡವನ್ನೂ ವಿಧಿಸಲಾಗಿದೆ.
ಕಾರವಾರ: ರಾಜ್ಯದಲ್ಲಿ 2010 ರಲ್ಲಿ ನಡೆದ ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ (Satish Sail) ಆರೋಪಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ನಾಳೆಗೆ ಶಿಕ್ಷೆ ಪ್ರಮಾಣವನ್ನೂ ಕಾಯ್ದಿರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಶಾಸಕ ಸತೀಶ್ ಸೈಲ್ ಅವರನ್ನು ವಶಕ್ಕೆ ಪಡೆಯುವಂತೆ ಕೋರ್ಟ್‌ನಿಂದ ಸೂಚನೆ ನೀಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 6 ಪ್ರಕರಣಗಳಲ್ಲಿ ಇಂದು ಅಂತಿಮ ಆದೇಶ ಹೊರಡಿಸಲಾಗಿದೆ.
ಸಿಬಿಐನಿಂದ ಬೇಲೆಕೇರಿ ಅದಿರು ನಾಪತ್ತೆಗೆ ಸಂಬಂಧಿಸಿದಂತೆ ದಾಖಲಾದ 6 ಪ್ರಕರಣಗಳ ಬಗ್ಗೆ ತನಿಖೆ ನಡೆಸಿ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿತ್ತು. ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ವಾದ ಪ್ರತಿವಾದ ಆಲಿಸಿ ಅಂತಿಮ ಆದೇಶವನ್ನು ಹೊರಡಿಸಿದ್ದಾರೆ.
ಎಷ್ಟು ಆರೋಪಿಗಳು? ಎಷ್ಟು ಪ್ರಕರಣ?
ಶಾಸಕ ಸೈಲ್‌ರನ್ನು ಮೊದಲ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಲಾಗಿದೆ. ಈ ಪ್ರಕರಣದಲ್ಲಿ A1 ಆರೋಪಿ ಮಹೇಶ್ ಬಿಳಿಯಾ, A2 ಆರೋಪಿ ಸತೀಶ್ ಸೈಲ್, A3 ಇವರಿಗೆ ಸೇರಿದ ಕಂಪನಿ.
ಎರಡನೇ ಪ್ರಕರಣದಲ್ಲಿ A1 ಆರೋಪಿ ಮಹೇಶ್ ಬಿಳಿಯಾ, A2 ಚೇತನ್ ಷಾ, A3 ಆರೋಪಿ ಸತೀಶ್ ಸೈಲ್.
ಮೂರನೇ ಪ್ರಕರಣದಲ್ಲಿ A1 ಮಹೇಶ್ ಬಿಳಿಯ, A2 ಆರೋಪಿ ಸೋಮಶೇಖರ್, A3 ಆರೋಪಿ ಸತೀಶ್ ಸೈಲ್.
ನಾಲ್ಕನೇ ಪ್ರಕರಣದಲ್ಲಿ A1 ಮಹೇಶ್ ಬಿಳಿಯೇ, A2 ಸ್ವಸ್ತಿಕ್ ನಾಗರಾಜ್, A3 KVN ಗೋವಿಂದರಾಜು, A4 ಸತೀಶ್ ಸೈಲ್.
ಐದನೇ ಪ್ರಕರಣದಲ್ಲಿ A1 ಮಹೇಶ್ ಬಿಳಿಯೇ, A2 ಮಹೇಶ್ ಕುಮಾರ್ ಕೆ, A3 ಸತೀಶ್ ಸೈಲ್.
ಆರನೇ ಪ್ರಕರಣದಲ್ಲಿ A1 ಮಹೇಶ್ ಬಿಳಿಯೇ, A2 ಪ್ರೇಮಚಂದ್ ಗರ್ಗ, A3 ಸುಶೀಲ್ ಕುಮಾರ್ ವಲೇಚ, A4 ಸತೀಶ್ ಸೈಲ್, A5 ರಾಜ್ ಕುಮಾರ್.
ಶಾಸಕ ಸತೀಶ್ ಸೈಲ್, ಅರಣ್ಯ ಸಂರಕ್ಷಣಾಧಿಕಾರಿ ಆಗಿದ್ದ ಮಹೇಶ್ ಬಿಳೆಯಿ, ಶಾಸಕ ಸತೀಶ್ ಸೇರಿ ಎಲ್ಲಾ ಆರೋಪಿಗಳು ದೋಷಿಗಳು ಎಂದು ಕೋರ್ಟ್ ತೀರ್ಪು ನೀಡಿದೆ.
ಸೈಲ್ ಮೇಲಿದ್ದ ಪ್ರಕರಣ ಏನು?
ಶಾಸಕ ಸತೀಶ್ ಸೈಲ್ ಮಾಲೀಕತ್ವದ ಕಂಪನಿ ವಿರುದ್ಧ 2013ರ ಸೆ.13 ರಂದು ಸಿಬಿಐ ಪ್ರಥಮ ಮಾಹಿತಿ ವರದಿ ದಾಖಲಿಸಿತ್ತು. ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ 2009ರ ಆರಂಭದಿಂದ 2010 ರ ಮೇ ತಿಂಗಳ ನಡುವೆ ರಾಜ್ಯದಲ್ಲಿ ನಡೆದ ಅಕ್ರಮ ಗಣಿಗಾರಿಕೆ ಹಾಗೂ ಅದಿರು ಸಾಗಣೆ ಕುರಿತು ತನಿಖೆ ಆರಂಭಿಸಲಾಗಿತ್ತು.
ಈ ಸಮಯದಲ್ಲೇ ಸಿಬಿಐ ದಾಖಲಿಸಿದ್ದ ಐದು ಪ್ರತ್ಯೇಕ ಎಫ್‌ಐಆರ್‌ಗಳ ಪೈಕಿ ಶಾಸಕ ಸತೀಶ್ ಸೈಲ್ ಮಾಲೀಕತ್ವ ಹೊಂದಿರುವ ‘ಮಲ್ಲಿಕಾರ್ಜುನ ಶಿಪ್ಪಿಂಗ್ ಪ್ರೈ. ಲಿ.’ ಪ್ರಮುಖ ಸ್ಥಾನ ಪಡೆದುಕೊಂಡಿದ್ದು. ಆರ್‌ಸಿ 16 ‘ಎ’ ಹೆಸರಿನಲ್ಲಿ ಸಿಬಿಐ ದಾಖಲಿಸಿದ್ದ ಎಫ್‌ಐಆರ್, ‘ಎಂಟು ತಿಂಗಳ ಅವಧಿಯಲ್ಲಿ ಸೈಲ್ ಮಾಲೀಕತ್ವದ ಕಂಪನಿ ಸುಮಾರು 7.23 ಲಕ್ಷ ಟನ್ ಮೆಟ್ರಿಕ್ ಅದಿರನ್ನು ಬೇಲೆಕೇರಿ ಮೂಲಕ ವಿದೇಶಕ್ಕೆ ರಫ್ತು ಮಾಡಿರುವುದು ಮೇಲ್ನೋಟಕ್ಕೆ ಕಂಡು ಬರುತ್ತದೆ’ ಎಂದು ತಿಳಿಸಿತ್ತು.
2009ರಿಂದ 2010ರ ಮೇ ತಿಂಗಳವರೆಗೆ ಬೇಲೆಕೇರಿ ಬಂದರಿನ ಮೂಲಕ ಸುಮಾರು 88.06 ಲಕ್ಷ ಮೆಟ್ರಿಕ್ ಟನ್ ಅದಿರು, 73 ರಫ್ತು ಕಂಪನಿಗಳ ಮೂಲಕ ವಿದೇಶಕ್ಕೆ ಹೋಗಿತ್ತು ಎಂಬುದನ್ನು ಸಿಇಸಿ ವರದಿಯಲ್ಲಿ ಪಟ್ಟಿ ಮಾಡಲಾಗಿತ್ತು.
ಇಷ್ಟು ಪ್ರಮಾಣ ಅದಿರುವು ರಫ್ತಾಗಿದ್ದರೂ, ಕೇವಲ 38.22 ಲಕ್ಷ ಮೆಟ್ರಿಕ್ ಟನ್‌ನಷ್ಟು ಅದಿರಿಗೆ ಮಾತ್ರವೇ ಅದಿರು ಕಳುಹಿಸಲು ಪರವಾನಗಿ (ಎಂಡಿಪಿ)ಯನ್ನು ಪಡೆಯಲಾಗಿತ್ತು. ಒಟ್ಟಾರೆ ಸುಮಾರು 50 ಲಕ್ಷ ಮೆಟ್ರಿಕ್‌ನಷ್ಟು ಅದಿರು ಅಕ್ರಮವಾಗಿ ವಿದೇಶಗಳಿಗೆ ಹೋಗಿತ್ತು ಎಂಬುದನ್ನು ತನಿಖೆ ವೇಳೆ ಕಂಡುಕೊಳ್ಳಲಾಗಿತ್ತು.
ಹೀಗೆ ರಫ್ತಾಗಿರುವ ಅದಿರನಲ್ಲಿ 7.23 ಲಕ್ಷ ಮೆಟ್ರಿಕ್ ಟನ್ ಅದಿರನ್ನು ಕಳುಹಿಸಿರುವುದು ಸತೀಶ್ ಸೈಲ್ ಒಡೆತನದ ಮಲ್ಲಿಕಾರ್ಜುನ ಶಿಪ್ಪಿಂಗ್ ಪ್ರೈ. ಲಿ. ಎಂಬುದು ಆರೋಪ. ಜುಂಜುನ್‌ಬೈಲ್ ಸ್ಟಾಕ್‌ಯಾರ್ಡ್ ಸೇರಿದಂತೆ ಇತರೆ ಅದಿರು ಸಾಗಣೆದಾರರ ಜತೆ ಮಲ್ಲಿಕಾರ್ಜುನ ಶಿಪ್ಪಿಂಗ್ ಕಂಪನಿ ನಿಕಟ ವ್ಯವಹಾರ ನಡೆಸಿತ್ತು ಎಂಬುದಕ್ಕೆ ಸಿಬಿಐ ತನಿಖಾ ತಂಡ ದಾಖಲೆಗಳನ್ನು ಕಲೆ ಹಾಕಿ ವರದಿ ಸಲ್ಲಿಸಿತ್ತು.
ಶಾಸಕರಾಗಿದ್ದಾಗಲೇ ಸೈಲ್ ಎರಡನೇ ಬಾರಿ ಬಂಧನ!
ಅದಿರು ಅಕ್ರಮ ರಫ್ತು ಪ್ರಕರಣದಲ್ಲಿ ಸಿಬಿಐ 2012 ರ ಸೆ. 16 ರಂದು ಕಾರವಾರ- ಅಂಕೋಲಾ ಶಾಸಕ ಸತೀಶ್ ಸೈಲ್ ಮನೆಯ ಮೇಲೆ ದಾಳಿ ಮಾಡಿ ಮಹತ್ವದ ದಾಖಲೆ ವಶಪಡಿಸಿಕೊಂಡಿತ್ತು.
ಇದರ ನಂತರ 2013ರ ಸೆ.20 ರಂದು ಸೈಲ್ ಅವರನ್ನು ಬಂಧಿಸಿತ್ತು. ಇದರಿಂದಾಗಿ ಸೈಲ್ ವರ್ಷಕ್ಕೂ ಅಧಿಕ ಕಾಲ ಜೈಲು ವಾಸ ಅನುಭವಿಸಬೇಕಾಯಿತು. ಅದರ ನಂತರ 2014ರ ಡಿ.16 ಕ್ಕೆ ಜಾಮೀನು ಪಡೆದು ಹೊರಬಂದಿದ್ದರು.
ನಂತರ ಕಾಂಗ್ರೆಸ್ ಪಕ್ಷದಿಂದ ಚುನಾವಣೆಯಲ್ಲಿ ಸ್ಪರ್ಧಿಸಿ ಬಿಜೆಪಿಯ ರೂಪಾಲಿ ನಾಯ್ಕ ವಿರುದ್ಧ ಸೋತಿದ್ದರು. ಈ ಬಾರಿಯ 2023 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಪಡೆದು ಕಾರವಾರ ವಿಧಾನಸಭಾ ಕ್ಷೇತ್ರದಿಂದ ಗೆಲುವು ಕಂಡಿದ್ದರು.