Tag: Satya Hegde

  • ಕಿರುಚಿತ್ರ ತಯಾರಕರಿಗೆ ವೇದಿಕೆ ಕಲ್ಪಿಸಿದ ಖ್ಯಾತ ಸಿನಿಮಾಟೋಗ್ರಾಫರ್ ಸತ್ಯ ಹೆಗಡೆ

    ಕಿರುಚಿತ್ರ ತಯಾರಕರಿಗೆ ವೇದಿಕೆ ಕಲ್ಪಿಸಿದ ಖ್ಯಾತ ಸಿನಿಮಾಟೋಗ್ರಾಫರ್ ಸತ್ಯ ಹೆಗಡೆ

    ಚಂದನವನದಲ್ಲಿ ಯುವ ಪ್ರತಿಭೆಗಳ ಅದೃಷ್ಟ ಪರೀಕ್ಷೆಗೆ ‘ಸತ್ಯ ಹೆಗಡೆ (Satya Hegde) ಸ್ಟುಡಿಯೋಸ್’ ವರದಾನವಾಗುತ್ತಿದೆ. ಹೌದು ಛಾಯಾಗ್ರಾಹಕನಾಗಿ ಹೆಸರು ಮಾಡಿರುವ ಸತ್ಯ ಹೆಗಡೆ ‘ಸತ್ಯ ಹೆಗಡೆ ಸ್ಟುಡಿಯೋ’ ಹುಟ್ಟುಹಾಕಿ ಹೊಸ ಪ್ರತಿಭೆಗಳಿಗೆ ಬೆನ್ನೆಲುಬಾಗಿ ನಿಂತಿದ್ದು, ಈ ಸಂಸ್ಥೆಯ ಮುಖೇನ ಶಾರ್ಟ್ ಫಿಲ್ಮಗಳನ್ನು ನಿರ್ಮಾಣ ಮಾಡುವ ಜೊತೆಗೆ ಸತ್ಯ ಹೆಗಡೆ ಸ್ಟುಡಿಯೋಸ್ ಯೂಟ್ಯೂಬ್ ಚಾನೆಲ್ ನಲ್ಲಿ ಅವುಗಳನ್ನು ಬಿಡುಗಡೆ ಮಾಡುತ್ತಿದ್ದಾರೆ. ಈ ಮೂಲಕ ಯುವಕರು ತಮ್ಮ ನಿರ್ದೇಶಕನಾಗುವ ಕನಸನ್ನು ನನಸು ಮಾಡಿಕೊಳ್ಳುತ್ತಿದ್ದು, ಈಗಾಗಲೇ ಈ ಯೂಟ್ಯೂಬ್ ಚಾನಲ್ ಮೂಲಕ 11 ಕಿರು ಚಿತ್ರಗಳು ಬಿಡುಗಡೆ ಆಗಿವೆ.‌

    ಇದೀಗ ಮೂರು ಫಿಲ್ಮ್ ಗಳು ಈ ಚಾನಲ್ ನಲ್ಲಿ ಬಿಡುಗಡೆಗೆ ಸಿದ್ದವಾಗಿದ್ದು, ಆ ಪೈಕಿ ಕಳೆದ ಶನಿವಾರ ‘ಗ್ರಾಚಾರ’ ಎಂಬ ಕಿರುಚಿತ್ರ ರಿಲೀಸ್ ಆಗಿದ್ದು ಮುಂದಿನ ದಿನಗಳಲ್ಲಿ ‘ಕಥೆಗಾರನ ಕತೆ’ ಹಾಗೂ ‘ಅಹಂ ಪರಂ’ ಶಾರ್ಟ್ ಫಿಲಂ ಗಳು ಈ ಸತ್ಯ ಹೆಗಡೆ ಸ್ಟುಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿವೆ. ಹಾಗಾಗಿ ಇತ್ತೀಚಿಗಷ್ಟೇ ಸತ್ಯ ಹೆಗಡೆ ಹಾಗೂ ಅವರ ತಂಡ ಆ ಮೂರು ಕಿರು ಚಿತ್ರಗಳ ಪ್ರದರ್ಶನ ಹಾಗೂ ಪತ್ರಿಕಾಗೋಷ್ಠಿ ಆಯೋಜಿಸಿತ್ತು. ಇದನ್ನೂ ಓದಿ: ಭಾರತದ ದಿ ಎಲಿಫೆಂಟ್ ವಿಸ್ಪರರ್ಸ್ ಕಿರುಚಿತ್ರಕ್ಕೆ ಆಸ್ಕರ್ ಪ್ರಶಸ್ತಿ

    ಒಂಬತ್ತು ನಿಮಿಷಗಳ ‘ಕತೆಗಾರನ ಕಥೆ’ ಕಿರು ಚಿತ್ರವನ್ನು ಯುವ ಬರಹಗಾರ ಹಾಗೂ ನಿರ್ದೇಶಕ ಕೌಶಿಕ ಕೂಡುರಸ್ತೆ ನಿರ್ದೇಶನ ಮಾಡಿದ್ದಾರೆ. ಹಾಸನ ಮೂಲದವರಾದ ಕೌಶಿಕ ‘ಹೃದಯದ ಮಾತು’ ಸೇರಿದಂತೆ ೮ ಕಾದಂಬರಿಗಳನ್ನು ಬರೆದಿದ್ದು ಕೆಲವೊಂದು ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಕೂಡ ಮಾಡಿದ್ದಾರೆ. ಇಂಜಿನಿಯರಿಂಗ್ ಓದಿಕೊಂಡಿರುವ ಕೌಶಿಕಗೆ ಇದು ಮೊದಲ ಪ್ರಯತ್ನ. ಈಗಷ್ಟೇ ಬಿಡುಗಡೆ ಆಗಿರುವ ‘ಗ್ರಾಚಾರ’ ಕಿರು ಚಿತ್ರವನ್ನು ಅಜಯ್ ಪಂಡಿತ್ ನಿರ್ದೇಶನ ಮಾಡಿದ್ದು, ಇವರು ಮೂಲತಃ ಸಾಗರನವರು. ಇವರು ಕೂಡ ಸಾಫ್ಟವೇರ್ ಇಂಜಿನಿಯರಿಂಗ್ ಓದಿಕೊಂಡಿದ್ದಾರೆ. ಇನ್ನು ವಿಭಿನ್ನ ಪ್ರಯತ್ನದಂತೆ ‘ಅಹಂ ಪರಂ’ ಕಿರುಚಿತ್ರ ಸಿದ್ಧವಾಗಿದ್ದು ಇದನ್ನು ವಿನಯ್ ಚಂದ್ರಹಾಸ ನಿರ್ದೇಶನ ಮಾಡಿದ್ದಾರೆ.

    ಈ ಕಿರುಚಿತ್ರಗಳ ವೀಕ್ಷಣೆಗೆ ಅಥಿತಿಗಳಾಗಿ ಆಗಮಿಸಿದ್ದರು ನಿದರ್ಶಕರಾದ ಗಿರಿರಾಜ್, ಚೇತನ ಕುಮಾರ್, ನಟ ‘ಗುಲ್ಟು’ ನವೀನ ಮುಂತಾದವರು. ಆ ಪೈಕಿ ನಿರ್ದೇಶಕ ಗಿರಿರಾಜ್ ಮಾತನಾಡಿ, ‘ಇಂದಿನ ಯುವಕರಿಗೆ ಶಾರ್ಟ್ ಫಿಲಂಗಳು ಒಂದು ಒಳ್ಳೆ ಅವಕಾಶ ಆಗುತ್ತಿವೆ. ಯುವಕರ ಪ್ರಯತ್ನಗಳಿಗೆ ಸತ್ಯ ಹೆಗಡೆ ಸ್ಟುಡಿಯೋಸ್ ಸಾಕಷ್ಟು ಸಹಾಯ ಮಾಡುತ್ತಿದೆ. ನಮ್ಮಗಳ ಕಾಲದಲ್ಲಿ ಇಂತಹ ಅವಕಾಶ ಇರಲಿಲ್ಲ. ಈಗಿನ ಯುವಕರಿಗೆ ಒಳ್ಳೆಯ ಅವಕಾಶವನ್ನು ಸತ್ಯ ಹೆಗಡೆ ಮಾಡಿಕೊಡುತ್ತಿದ್ದಾರೆ. ಮೂರು ಚಿತ್ರಗಳು ಚೆನ್ನಾಗಿ ಬಂದಿದ್ದು, ಒಳ್ಳೆಯ ಕೆಲಸ ಮಾಡಿದ್ದಾರೆ. ಈ ಯುವ ಪ್ರತಿಭೆಗಳಿಗೆ ಒಳ್ಳೆಯದಾಗಲಿ’ ಎಂದು ಶುಭ ಹಾರೈಸಿದರು.

    ನಟ ನವೀನ್ ಮಾತನಾಡಿ, ‘ನಾನು ಕೂಡ ಶಾರ್ಟ್ ಫಿಲಂಗಳಲ್ಲಿ ಅಭಿನಯಿಸುತ್ತಾ ಬಂದವನು. ನಾವು ಶಾರ್ಟ್ ಫಿಲಂ ತಯಾರಿಸುವಾಗ ಸತ್ಯ ಹೆಗಡೆಯಂತವರು ನಮಗೆ ಯಾರು ಸಾಥ್ ನೀಡಿರಲಿಲ್ಲ. ಈಗಿನವರೆಗೆ ಒಳ್ಳೆಯ ಅವಕಾಶ ಸಿಗುತ್ತದೆ ಕಿರುಚಿತ್ರಗಳನ್ನು ಬಿಡುಗಡೆ ಮಾಡಲು. ಇಂತಹ ಅವಕಾಶವನ್ನು ಇನ್ನಷ್ಟು ಯುವ ಜನರಿಗೆ ಸಿಕ್ಕು ಒಳ್ಳೆಯ ಚಿತ್ರಗಳನ್ನು ತರಬೇಕು. ಈ ಶಾರ್ಟ್ ಫಿಲಂ ವೇದಿಕೆ ಯುವ ಪ್ರತಿಭೆಗಳಿಗೆ ತುಂಬಾ ಅನುಕೂಲವಾಗುತ್ತದೆ’ ಎಂದರು.

  • ಖ್ಯಾತ ಸಿನಿಮಾಟೋಗ್ರಾಫರ್ ಸತ್ಯ ಹೆಗಡೆ ಸಂಸ್ಥೆಯಿಂದ ಮತ್ತೊಂದು ಕಿರುಚಿತ್ರ

    ಖ್ಯಾತ ಸಿನಿಮಾಟೋಗ್ರಾಫರ್ ಸತ್ಯ ಹೆಗಡೆ ಸಂಸ್ಥೆಯಿಂದ ಮತ್ತೊಂದು ಕಿರುಚಿತ್ರ

    ತಂತ್ರಜ್ಞಾನ ಮುಂದುವರೆದ ಹಾಗೆ ಜನರ ಆಲೋಚನೆ ಶಕ್ತಿಯು ಬೆಳೆಯುತ್ತಾ ಹೋಗುತ್ತಿದೆ. ಎರಡು, ಮೂರು ಗಂಟೆಗಳಲ್ಲಿ ಹೇಳ ಬೇಕಾದ ವಿಷಯವನ್ನು ಇಪ್ಪತ್ತು, ಮೂವತ್ತು ನಿಮಿಷಗಳ ಕಿರುಚಿತ್ರಗಳಲ್ಲಿ ಮನತಟ್ಟುವಂತೆ ಹೇಳುವ ನಿರ್ದೇಶಕರು ಈಗ ಹೆಚ್ಚಾಗುತ್ತಿದ್ದಾರೆ.‌ ಅಂತಹ ಉತ್ತಮ ಕಿರುಚಿತ್ರಗಳು ಕನ್ನಡದಲ್ಲಿ ಹೆಚ್ಚು ಬರುತ್ತಿದೆ.

    ಸತ್ಯ ಹೆಗಡೆ (Satya Hegde) ಸ್ಟುಡಿಯೋಸ್ ಅರ್ಪಿಸುವ, ಸೌಮ್ಯ ಚಂದ್ರಶೇಖರ್ ನಿರ್ಮಿಸಿರುವ ಹಾಗೂ ಪ್ರದೀಪ್ ಕೃಷ್ಣಮೂರ್ತಿ ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ” ದಿ ಲಾಸ್ಟ್ ಕೇಸ್” ಕಿರುಚಿತ್ರದ ಪ್ರದರ್ಶನ ಹಾಗು ಪತ್ರಿಕಾಗೋಷ್ಠಿ ಇತ್ತೀಚೆಗೆ ನಡೆಯಿತು. ಎಲ್ಲಾ ಸಾಕ್ಷಿಗಿಂತ ಮನಸಾಕ್ಷಿಯೇ ದೊಡ್ಡದು ಎಂಬ ಅಂಶವನ್ನು ನಿರ್ದೇಶಕರು ಈ ಕಿರುಚಿತ್ರದಲ್ಲಿ ಮನಮುಟ್ಟುವಂತೆ ತೋರಿದ್ದಾರೆ. ಇದನ್ನೂ ಓದಿ:ಸೋಮಣ್ಣ – ಗುರೂಜಿ ಗೆಲುವು ನೋಡಿ, ಗಳಗಳನೆ ಅತ್ತ ಸಾನ್ಯ ಅಯ್ಯರ್

    ನನಗೆ ಈ ಕಿರುಚಿತ್ರದ ಕಥೆ ಬಹಳ‌ ಮೆಚ್ಚುಗೆಯಾಯಿತು.‌ ಅಪರಾಧಿಯೊಬ್ಬ ನಾನೇ ಕೊಲೆಗಾರ ಎಂದು‌ ಹೇಳಿ ಪೊಲೀಸರ ಬಳಿ‌ ಶರಣಾಗುವ ವಿಷಯ ಬಹಳ ಮನಸ್ಸಿಗೆ ಹತ್ತಿರವಾಯಿತು. ಉತ್ತಮ ಕಿರುಚಿತ್ರ ನಿರ್ಮಿಸಿರುವ ಇಡೀ ತಂಡಕ್ಕೆ ಧನ್ಯವಾದ ಎಂದರು ಈ ಕಿರುಚಿತ್ರದಲ್ಲಿ ಅಭಿನಯಿಸಿರುವ ನಟ ರಮೇಶ್ ಪಂಡಿತ್.  ಈ ಕಿರುಚಿತ್ರ ಚೆನ್ನಾಗಿ ಮೂಡಿಬರಲು ಸಹಕಾರ ನೀಡಿದ ತಮ್ಮ ತಂಡಕ್ಕೆ ನಿರ್ದೇಶಕ ಪ್ರದೀಪ್ ಕೃಷ್ಣಮೂರ್ತಿ ಧನ್ಯವಾದ ತಿಳಿಸಿದರು.

    “ದಿ ಲಾಸ್ಟ್ ಕೇಸ್” ಕಿರುಚಿತ್ರ ಚೆನ್ನಾಗಿದೆ. ಈ ತಂಡದಿಂದ ಆದಷ್ಟು ಬೇಗ ಹಿರಿತೆರೆಯಲ್ಲಿ ನಾನು ಚಿತ್ರವನ್ನು ನಿರೀಕ್ಷಿಸುತ್ತೇನೆ ಎಂದರು ಸತ್ಯ ಹೆಗಡೆ.‌ ಕಿರುಚಿತ್ರ ತಂಡದ ಸದಸ್ಯರು ತಮ್ಮ ಅನುಭವಗಳನ್ನು ಹಂಚಿಕೊಂಡರು. ಹಿರಿಯ ನಿರ್ದೇಶಕ ಚಿಂದೋಡಿ ಬಂಗಾರೇಶ್, ಸಾಹಿತಿ ಕವಿರಾಜ್ ಹಾಗೂ ಸಂಭಾಷಣೆಕಾರ ಮಾಸ್ತಿ ಮುಂತಾದ ಗಣ್ಯರು ಕಿರುಚಿತ್ರವನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ವಾಸುದೇವ ಮೂರ್ತಿ ಕಥೆ ಬರೆದಿದ್ದು, ಗಿರೀಶ್ ಸಂಗೀತ ನೀಡಿದ್ದಾರೆ. ರಂಗನಾಥ್ ಛಾಯಾಗ್ರಹಣ ಹಾಗೂ ಉಜ್ವಲ್ ಸಂಕಲನ ಈ ಕಿರುಚಿತ್ರಕ್ಕಿದೆ.‌ ರಮೇಶ್ ಪಂಡಿತ್, ಶಂಕರ್ ಅಶ್ವತ್ಥ್, ಪುನೀತ್ ಬಾಬು, ಪ್ರದೀಪ್ ಅಂಚೆ “ದಿ‌ ಲಾಸ್ಟ್ ಕೇಸ್” ನಲ್ಲಿ ನಟಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸದ್ದಿಲ್ಲದೇ ಶೂಟಿಂಗ್ ಮುಗಿಸಿದ ಮಂಸೋರೆ ನಿರ್ದೇಶನದ ‘19.20.21’ ಸಿನಿಮಾ

    ಸದ್ದಿಲ್ಲದೇ ಶೂಟಿಂಗ್ ಮುಗಿಸಿದ ಮಂಸೋರೆ ನಿರ್ದೇಶನದ ‘19.20.21’ ಸಿನಿಮಾ

    ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ ಸದ್ದಿಲ್ಲದೇ ಅವರ ಹೊಸ ಸಿನಿಮಾದ ಶೂಟಿಂಗ್ ಅನ್ನು ಮುಗಿಸಿದ್ದಾರೆ.  ಬಿಡುವಿಲ್ಲದೇ ಚಿತ್ರೀಕರಣದಲ್ಲಿ ಪಾಲ್ಗೊಂಡಿರುವ ಅವರ ತಂಡ ದಾಖಲೆ ಅನ್ನುವಂತೆ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. 19.20.21 ಅನ್ನುವ ಕುತೂಹಲದ ಶೀರ್ಷಿಕೆ ಹೊತ್ತು ಈ ಸಿನಿಮಾ ಬರುತ್ತಿದೆ. ಇದನ್ನೂ ಓದಿ : ‘ಮುದುಕನ ಲವ್ ಸ್ಟೋರಿ’ಗೆ ಕೆಜಿಎಫ್ ತಾತ ಕೃಷ್ಣರಾವ್ ಹೀರೋ

    ಈ ಸಿನಿಮಾ  ಕುರಿತು ನಿರ್ದೇಶಕ ಮಂಸೋರೆ ಮಾತನಾಡಿ, “ಎರಡು ತಿಂಗಳ ಅವಧಿ, ಸತತ 51 ದಿನಗಳ ಚಿತ್ರೀಕರಣ, ಬಿಸಿಲು, ಚಳಿ, ಮಳೆ, ಹಗಲು-ರಾತ್ರಿ ಚಿತ್ರೀಕರಣ, ನೂರಕ್ಕೂ ಹೆಚ್ಚು ದೊಡ್ಡ-ಚಿಕ್ಕ ಮುಖ್ಯ ಪಾತ್ರದಲ್ಲಿ ನಟಿಸಿರುವ ಕಲಾವಿದರ ದಂಡು, ಓಡಾಟ-ಹಾರಾಟ, ಕಾಡು, ಗುಡ್ಡ, ನಾಡು, ನದಿ, ಬಯಲು, ಧುತ್ತನೆ ಎದುರಾಗುವ ಹವಾಮಾನದ ವೈಪರೀತ್ಯಗಳ ನಡುವೆ, ನಾವು ಹೇಳಬೇಕೆಂದು ಬಯಸಿದ, ಈ ನೆಲದ ಕತೆಯೊಂದನ್ನು ಸಿನೆಮಾ ಮಾಡಬೇಕೆನ್ನುವ ನಮ್ಮಾಸೆಯ ಮೊದಲ ಹಂತವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದೇವೆ ಎಂದು ತಿಳಿಸಲು ಹರ್ಷವಾಗುತ್ತಿದೆ” ಎಂದಿದ್ದಾರೆ. ಇದನ್ನೂ ಓದಿ : ಅಪ್ಪು ಅಗಲಿ ಇಂದಿಗೆ 7 ತಿಂಗಳು : ಸಮಾಧಿ ಮುಂದೆ ಜನಸಾಗರ

    ಮುಂದುವರೆದು ಮಾತನಾಡಿದ ಅವರು, “ಸಿನೆಮಾದ ಚಿತ್ರೀಕರಣ ಪೂರ್ತಿಯಾಗಿದೆ. ಇದನ್ನು ಸಾಧ್ಯವಾಗಿಸಿದ ನನ್ನೆಲ್ಲಾ ತಂಡದ ಸದಸ್ಯರಿಗೆ ಹಾಗೂ ಚಿತ್ರೀಕರಣ ನಡೆಸಿದ ಪ್ರತೀ ಊರಿನಲ್ಲೂ ಸಹಕರಿಸಿದ, ಸಹಾಯ ಮಾಡಿದ ಸ್ನೇಹಿತರೆಲ್ಲರಿಗೂ ನಾನು ಆಭಾರಿಯಾಗಿದ್ದೇನೆ. ಚಿತ್ರೀಕರಣ ಯಶಸ್ವಿಯಾಗಿ ಪೂರ್ತಿಗೊಳ್ಳಲು ಶ್ರಮಿಸಿದ ನನ್ನೆಲ್ಲಾ ನಿರ್ದೇಶನ ವಿಭಾಗದ ಸದಸ್ಯರಿಗೂ ಧನ್ಯವಾದಗಳು” ಎಂದಿದ್ದಾರೆ. ಇದನ್ನೂ ಓದಿ : ರೆಬೆಲ್ ಅಂಬಿಗೆ ಇಂದು 70ನೇ ಹುಟ್ಟು ಹಬ್ಬ : ಭಾವುಕರಾಗಿ ಕವನ ಬರೆದ ಸುಮಲತಾ ಅಂಬರೀಶ್

    ಇಂತಹ ಒಂದು ಕತೆಯನ್ನು ಸಿನೆಮಾ ಮಾಡಲು ಮಂಸೋರೆ ಅವರಿಗೆ ಬೆನ್ನೆಲುಬಾಗಿ ನಿಂತವರು ನಿರ್ಮಾಪಕರಾದ ಆರ್.ದೇವರಾಜ್. ಸತ್ಯ ಹೆಗಡೆ  ಅವರ ಸಿನಿಮಾಟೋಗ್ರಫಿ ಚಿತ್ರಕ್ಕಿದೆ. ವೀರೇಂದ್ರ ಮಲ್ಲಣ್ಣ, ಸಂತೋಷ್ ಟೆಮ್ಕರ್  ಸೇರಿದಂತೆ ಹಲವರು ಈ ಚಿತ್ರಕ್ಕಾಗಿ ಕೆಲಸ ಮಾಡಿದ್ದಾರೆ.