Tag: Satya Pal Malik

  • ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್‌ ಮಲಿಕ್‌ ನಿವಾಸ, ಕಚೇರಿ ಮೇಲೆ ಸಿಬಿಐ ದಾಳಿ

    ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್‌ ಮಲಿಕ್‌ ನಿವಾಸ, ಕಚೇರಿ ಮೇಲೆ ಸಿಬಿಐ ದಾಳಿ

    ನವದೆಹಲಿ: ಕೇಂದ್ರೀಯ ತನಿಖಾ ದಳ (CBI) ಜಮ್ಮು ಮತ್ತು ಕಾಶ್ಮೀರದ (Jammu and Kashmir) ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ (Satya Pal Malik) ಅವರ ನಿವಾಸ, ಕಚೇರಿ ಮೇಲೆ ದಾಳಿ ನಡೆಸಿದೆ.

    ಕಿರು ಜಲವಿದ್ಯುತ್ ಯೋಜನೆಯಲ್ಲಿ ಭಾರೀ ಭ್ರಷ್ಟಾಚಾರ (Corruption) ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಿಬಿಐ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ.

    ಕಳೆದ 3-4 ದಿನಗಳಿಂದ ನಾನು ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದೇನೆ. ಇಷ್ಟೆಲ್ಲಾ ಆದರೂ ಸರ್ಕಾರಿ ಸಂಸ್ಥೆಗಳ ಮೂಲಕ ನನ್ನ ಮನೆ ಮೇಲೆ ದಾಳಿ ನಡೆಸಲಾಗಿದೆ. ನನ್ನ ಚಾಲಕ ಮತ್ತು ನನ್ನ ಸಹಾಯಕರ ಮೇಲೂ ದಾಳಿ ಮಾಡಿ ಅನಗತ್ಯವಾಗಿ ಕಿರುಕುಳ ನೀಡಲಾಗುತ್ತಿದೆ ಎಂದು ಮಲಿಕ್‌ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಗಮನಿಸಿ: ಬೆಂಗಳೂರಿನಲ್ಲಿ 2 ದಿನ ನೀರು ಪೂರೈಕೆ ಇರಲ್ಲ

    https://twitter.com/SatyapalmalikG/status/1760528793934983288

    ಸತ್ಯಪಾಲ್ ಮಲಿಕ್ ಅವರು ಆಗಸ್ಟ್ 2018 ರಿಂದ ಅಕ್ಟೋಬರ್ 2019 ರವರೆಗೆ ಹಿಂದಿನ ಜಮ್ಮು ಮತ್ತು ಕಾಶ್ಮೀರದ 10ನೇ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದರು.  ಇದನ್ನೂ ಓದಿ: ಹ್ಯಾರಿಸ್‍ಗೆ ಸಂಕಷ್ಟ – ಚುನಾವಣಾ ತಕರಾರು ಅರ್ಜಿ ವಿಚಾರಣೆಗೆ ಹೈಕೋರ್ಟ್ ಅಸ್ತು

    ಆರೋಪ ಏನು?
    ಕಿರು ಹೈಡ್ರೊ ಎಲೆಕ್ಟ್ರಿಕ್ ಪವರ್ ಪ್ರಾಜೆಕ್ಟ್ (ಎಚ್‌ಇಪಿ) ಯ ಅಂದಾಜು 2,200 ಕೋಟಿ ರೂಪಾಯಿ ಮೌಲ್ಯದ ಸಿವಿಲ್ ಕಾಮಗಾರಿಯ ಗುತ್ತಿಗೆಯನ್ನು 2019 ರಲ್ಲಿ ಖಾಸಗಿ ಕಂಪನಿಗೆ ನೀಡುವಲ್ಲಿ ಅವ್ಯವಹಾರ ನಡೆದಿದೆ. ಇ ಮಾರ್ಗಸೂಚಿಗಳನ್ನು ಅನುಸರಿಸದೇ ಗುತ್ತಿಗೆ ನೀಡಲಾಗಿದೆ ಎಂದು ಆರೋಪಿಸಲಾಗಿದೆ.

    https://twitter.com/SatyapalmalikG/status/1760554341482594631

    ಜಮ್ಮು ಮತ್ತು ಕಾಶ್ಮೀರದಲ್ಲಿ ಸತ್ಯಪಾಲ್‌ ಮಲಿಕ್‌ ರಾಜ್ಯಪಾಲರಾಗಿದ್ದ ಸಂದರ್ಭದಲ್ಲಿ ಈ ಯೋಜನೆಗೆ ಸಂಬಂಧಿಸಿದಂತೆ ಎರಡು ಕಡತಗಳನ್ನು ತೆರವುಗೊಳಿಸಲು 300 ಕೋಟಿ ರೂ. ಲಂಚ ಪಡೆದಿರುವ ಆರೋಪವನ್ನು ಎದುರಿಸುತ್ತಿದ್ದಾರೆ.

    2022 ರಲ್ಲಿ ಜಮ್ಮು ಮತ್ತು ಕಾಶ್ಮೀರ ಸರ್ಕಾರದ ಕೋರಿಕೆಯ ಮೇರೆಗೆ ಅಂದಿನ ಅಧ್ಯಕ್ಷ ಮತ್ತು ಎಂಡಿ, ಚೆನಾಬ್ ವ್ಯಾಲಿ ಪವರ್ ಪ್ರಾಜೆಕ್ಟ್ಸ್ (ಸಿವಿಪಿಪಿಪಿಎಲ್) ಇಬ್ಬರು ನಿರ್ದೇಶಕರು, ಖಾಸಗಿ ಕಂಪನಿ ಮತ್ತು ಇತರರ ವಿರುದ್ಧ ಅಕ್ರಮಗಳ ಎಸೆಗಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.

  • ರೈತರ ಬೇಡಿಕೆ ಈಡೇರಿಸದಿದ್ದರೆ ಆಗುತ್ತೆ ಹಿಂಸಾಚಾರ: ಮೇಘಾಲಯ ರಾಜ್ಯಪಾಲ ಎಚ್ಚರಿಕೆ

    ರೈತರ ಬೇಡಿಕೆ ಈಡೇರಿಸದಿದ್ದರೆ ಆಗುತ್ತೆ ಹಿಂಸಾಚಾರ: ಮೇಘಾಲಯ ರಾಜ್ಯಪಾಲ ಎಚ್ಚರಿಕೆ

    ಜೋಧಪುರ: ರೈತರ ಬೇಡಿಕೆಗಳನ್ನು ಈಡೇರಿಸದಿದ್ದರೆ ಹಿಂಸಾಚಾರದ ಮೂಲಕ ತಮಗೆ ಬೇಕಾದ್ದನ್ನು ಪಡೆಯಲು ಪ್ರಯತ್ನಿಸುತ್ತಾರೆ ಎಂದು ಕೇಂದ್ರಕ್ಕೆ ಮೇಘಾಲಯ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಎಚ್ಚರಿಕೆ ನೀಡಿದ್ದಾರೆ.

    ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೈತರೊಂದಿಗೆ ಜಗಳವಾಡಬೇಡಿ, ಅವರು ಅಪಾಯಕಾರಿ ಜನರು. ಇದು ದೆಹಲಿಗೆ ನನ್ನ ಸಲಹೆಯಾಗಿದೆ. ರೈತರು ತಮಗೆ ಬೇಕಾದ್ದನ್ನು ತೆಗೆದುಕೊಳ್ಳುತ್ತಾರೆ. ಅದು ಮಾತುಕತೆಯ ಮೂಲಕ ಸಾಧ್ಯವಾಗದಿದ್ದರೆ, ಅದನ್ನು ಹೋರಾಟದ ಮೂಲಕ ತೆಗೆದುಕೊಳ್ಳುತ್ತಾರೆ. ಅದೂ ಸಾಧ್ಯವಾಗದಿದ್ದರೇ ಹಿಂಸಾಚಾರದ ಮೂಲಕ ಪಡೆಕೊಳ್ಳಬಹುದು ಎಂದು ಹೇಳಿದ್ದಾರೆ.

    ರೈತರಿಗೆ ಮೂಗುದಾರ ಹಾಕಲಾಗುವುದಿಲ್ಲ. ಅವರ ಬೇಡಿಕೆಗಳು ಹೇಗೆ ಈಡೇರಿಸಿಕೊಳ್ಳಬೇಕು ಎಂಬುದು ಅವರಿಗೆ ತಿಳಿದಿದೆ. ರೈತರ ವಿರೋಧ ಕಟ್ಟಿಕೊಳ್ಳಬೇಡಿ. ಸಿಖ್ಖರು ಮತ್ತು ಜಾಟ್‌ಗಳು ಮರೆಯುವುದಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬಿಜೆಪಿಯವರು ಹಗಲುಗನಸು ಕಾಣುವುದನ್ನು ಬಿಡಬೇಕು: ಮೋದಿಗೆ ಮಮತಾ ಬ್ಯಾನರ್ಜಿ ಟಾಂಗ್

    ರೈತರ ಬಗ್ಗೆ ಮಾತಾನಾಡಿರುವುದರಿಂದ ದೆಹಲಿಯಿಂದ ಯಾವಾಗ ಬೇಕಾದರೂ ಕರೆ ಬರುವ ಅವಕಾಶವಿದೆ. ರೈತರ ಸಮಸ್ಯೆಯನ್ನು ಎತ್ತುವುದಕ್ಕೆ ನನ್ನ ಹುದ್ದೆಯನ್ನು ಕಳೆದುಕೊಳ್ಳುವ ಭಯವಿಲ್ಲ. ಕೇಂದ್ರದೊಂದಿಗೆ ನನಗೆ ಯಾವುದೇ ದ್ವೇಷವಿಲ್ಲ. ಆದರೆ ರೈತರಿಗಾಗಿ ನನ್ನ ಹುದ್ದೆಯನ್ನು ಬಿಡುತ್ತೇನೆ ಎಂದು ರೈತರ ಆಂದೋಲನದ ನಿರ್ವಹಣೆಯ ಬಗ್ಗೆ ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ. ಇದನ್ನೂ ಓದಿ: ಸೆಲೆಬ್ರಿಟಿ ಆದ್ರೂ ಕಡಲೆಕಾಯಿ ಮಾರುವುದನ್ನು ಬಿಡುವುದಿಲ್ಲ – ಕಚ್ಚಾ ಬಾದಾಮ್ ಸಿಂಗರ್

  • ರೈತರು ನನಗಾಗಿ ಸತ್ತರೇ ಅಂತ ಮೋದಿ ಹೇಳಿದ್ರು – ಮೇಘಾಲಯ ರಾಜ್ಯಪಾಲ ವಾಗ್ದಾಳಿ

    ರೈತರು ನನಗಾಗಿ ಸತ್ತರೇ ಅಂತ ಮೋದಿ ಹೇಳಿದ್ರು – ಮೇಘಾಲಯ ರಾಜ್ಯಪಾಲ ವಾಗ್ದಾಳಿ

    ನವದೆಹಲಿ: ಕೃಷಿ ಕಾಯ್ದೆಗಳ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ರೈತರು ಮೃತಪಟ್ಟಿರುವ ಬಗ್ಗೆ ಪ್ರಧಾನಿ ಮೋದಿ ಅವರು ಹಗುರವಾಗಿ ಮಾತನಾಡಿದ್ದಾರೆ ಎಂದು ಮೇಘಾಲಯ ರಾಜ್ಯಪಾಲ ಸತ್ಯ ಪಾಲ್‌ ಮಲಿಕ್‌ ಗಂಭೀರ ಆರೋಪ ಮಾಡಿದ್ದಾರೆ.

    ದೆಹಲಿ ಗಡಿಭಾಗಗಳಲ್ಲಿ 1 ವರ್ಷ ನಡೆದ ಪ್ರತಿಭಟನೆಯಲ್ಲಿ ಸಾವನ್ನಪ್ಪಿದ ರೈತರ ಬಗ್ಗೆ ಚರ್ಚಿಸಲು ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದೆ. ಪ್ರತಿಭಟನೆಯಲ್ಲಿ 500 ರೈತರು ಮೃತಪಟ್ಟಿದ್ದಾರೆ ಎಂದು ಮೋದಿ ಅವರಿಗೆ ತಿಳಿಸಿದೆ. ʼಅವರು ನನಗಾಗಿ ಸತ್ತರೇʼ ಎಂದು ಪ್ರಧಾನಿ ಮೋದಿ ಅವರು ರೈತರ ಬಗ್ಗೆ ಸೊಕ್ಕಿನಿಂದ ಮಾತನಾಡಿದ್ದಾರೆ ಎಂದು ಮೇಘಾಲಯ ರಾಜ್ಯಪಾಲ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಸೋಂಕು ವೇಗವಾಗಿ ಹರಡುತ್ತಿದೆ, ನಾಳೆ ಸಂಜೆ ತಜ್ಞರ ಜೊತೆ ಸಭೆ ಮಾಡುತ್ತೇವೆ: ಬೊಮ್ಮಾಯಿ

    ಹೌದು, ರೈತರು ಪ್ರತಿಭಟನೆ ಸಂದರ್ಭದಲ್ಲಿ ನಿಮ್ಮದೇ ಸರ್ಕಾರ ಆಡಳಿತದಲ್ಲಿದೆ ಎಂದು ನಾನು ಪ್ರಧಾನಿ ಮೋದಿ ಅವರಿಗೆ ಪ್ರತ್ಯುತ್ತರ ನೀಡಿದೆ. ಈ ವೇಳೆ ಅಮಿತ್‌ ಶಾ ಅವರನ್ನು ಭೇಟಿಯಾಗುವಂತೆ ಮೋದಿ ಅವರು ನನಗೆ ತಿಳಿಸಿದರು. ಅದರಂತೆ ಅವರನ್ನೂ ಭೇಟಿಯಾಗಿದ್ದೇನೆ. ಪ್ರಧಾನಿ ಮೋದಿ ಒಬ್ಬ ಸೊಕ್ಕಿನ ಮನುಷ್ಯ ಎಂದು ಕಿಡಿಕಾರಿದ್ದಾರೆ.

    ನಾಯಿಗಳು ಸತ್ತರೆ, ಪ್ರಧಾನಿಗಳು ಸಂತಾಪ ಸೂಚಿಸುತ್ತಾರೆ ಎಂದು ಮೋದಿ ವಿರುದ್ಧ ಮೇಘಾಲಯ ರಾಜ್ಯಪಾಲ ವ್ಯಂಗ್ಯವಾಡಿದರು. ಇದನ್ನೂ ಓದಿ: ಮಿನಿಸ್ಟರ್‌ಗಳು ಏನೇನೋ ಮಾತಾಡ್ತಿದ್ದಾರೆ, ಅವರಿಗೆ ಒಳ್ಳೆಯದಾಗ್ಲಿ ರಾಜ್ಯಕ್ಕೂ ಹಿತವಾಗ್ಲಿ: ಡಿಕೆಶಿ

    SATYAPAL MALIK

    ಮೋದಿ ಒಬ್ಬ ದುರಹಂಕಾರಿ
    ಪ್ರಧಾನಿ ನರೇಂದ್ರ ಮೋದಿ ಒಬ್ಬ ದುರಹಂಕಾರಿ. ರೈತರ ಬಗ್ಗೆ ಹಗುರವಾಗಿ ಮಾತನಾಡುತ್ತಾರೆ ಎಂದು ಮಲಿಕ್‌ ಗರಂ ಆಗಿದ್ದಾರೆ. ಹರಿಯಾಣದ ದಾದ್ರಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಅವರು, ಮೋದಿ ಅವರ ಭೇಟಿ ಕುರಿತು ಹೀಗೆ ಪ್ರತಿಕ್ರಿಯಿಸಿದ್ದಾರೆ.

    ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ದೆಹಲಿ ಗಡಿ ಭಾಗಗಳಲ್ಲಿ ರೈತರು ಸುಮಾರು 1 ವರ್ಷ ಪ್ರತಿಭಟನೆ ನಡೆಸಿದರು. ರೈತರ ಪ್ರತಿಭಟನೆಗೆ ಮಣಿದ ಕೇಂದ್ರ ಸರ್ಕಾರ ನಂತರ ಕಾಯ್ದೆಗಳನ್ನು ವಾಪಸ್‌ ಪಡೆಯಿತು. ಪ್ರತಿಭಟನೆಯಲ್ಲಿ ಮೃತಪಟ್ಟ ರೈತರಿಗೆ ಪರಿಹಾರ ನೀಡಬೇಕು, ರೈತರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಹಿಂತೆಗೆದುಕೊಳ್ಳಬೇಕು ಎಂದು ರೈತರು ಹಲವು ಬೇಡಿಕೆಗಳನ್ನು ಕೇಂದ್ರ ಸರ್ಕಾರದ ಮುಂದಿಟ್ಟಿದ್ದಾರೆ. ರೈತರ ವಿರುದ್ಧದ ಕೇಸ್‌ಗಳನ್ನು ವಾಪಸ್‌ ಪಡೆದುಕೊಳ್ಳುವ ಭರವಸೆ ನೀಡಿರುವ ಕೇಂದ್ರ ಸರ್ಕಾರ, ಮೃತ ರೈತರ ಕುಟುಂಬದವರಿಗೆ ಪರಿಹಾರ ನೀಡುವ ಬಗ್ಗೆ ಯಾವುದೇ ಭರವಸೆ ನೀಡಿಲ್ಲ.

  • ಉಗ್ರರು ಭ್ರಷ್ಟಾಚಾರ ಮಾಡುವ ರಾಜಕಾರಣಿಗಳನ್ನು ಕೊಲ್ಲಲಿ: ಜಮ್ಮು ಕಾಶ್ಮೀರ ರಾಜ್ಯಪಾಲ

    ಉಗ್ರರು ಭ್ರಷ್ಟಾಚಾರ ಮಾಡುವ ರಾಜಕಾರಣಿಗಳನ್ನು ಕೊಲ್ಲಲಿ: ಜಮ್ಮು ಕಾಶ್ಮೀರ ರಾಜ್ಯಪಾಲ

    ಶ್ರೀನಗರ: ಉಗ್ರರು ಮುಗ್ದ ಜನರು ಹಾಗೂ ಭದ್ರತಾ ಸಿಬ್ಬಂದಿಯನ್ನು ಕೊಲ್ಲುವ ಬದಲು ಸಂಪತ್ತನ್ನು ಲೂಟಿ ಮಾಡಿದ ಭ್ರಷ್ಟ ರಾಜಕಾರಣಿಗಳನ್ನು ಕೊಲ್ಲಲಿ ಎಂದು ಜಮ್ಮು ಕಾಶ್ಮೀರದ ರಾಜ್ಯಪಾಲ ಸತ್ಯ ಪಾಲ್ ಮಲಿಕ್ ಭಾರೀ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಕಾರ್ಗಿಲ್‍ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಗನ್ ಹಿಡಿದ ಉಗ್ರರು ತಮ್ಮ ಜನರು ಹಾಗೂ ಭದ್ರತಾ ಸಿಬ್ಬಂದಿ ಹಾಗೂ ಪೊಲೀಸರನ್ನು ಕೊಲ್ಲುತ್ತಿದ್ದಾರೆ. ಇವರನ್ನು ಯಾಕೆ ಕೊಲ್ಲುತ್ತೀರಿ. ಕಾಶ್ಮೀರದ ಸಂಪತ್ತನ್ನು ಲೂಟಿ ಮಾಡಿದ ಭ್ರಷ್ಟ ರಾಜಕಾರಣಿಗಳನ್ನು ಕೊಲ್ಲಿ. ಲೂಟಿ ಮಾಡಿದವರನ್ನು ಎಂದಾದರೂ ಕೊಲೆ ಮಾಡಿದ್ದೀರಾ ಎಂದು ರಾಜ್ಯಪಾಲರು ಪ್ರಶ್ನಿಸಿದ್ದಾರೆ.

    ತಮ್ಮ ಹೇಳಿಕೆ ಕುರಿತು ವಿವಾದ ಸೃಷ್ಟಿಯಾಗುತ್ತಿದ್ದಂತೆ ಈ ಕುರಿತು ರಾಜ್ಯಪಾಲ ಸತ್ಯ ಪಾಲ್ ಮಲಿಕ್ ಇಂದು ಸ್ಪಷ್ಟನೆ ನೀಡಿದ್ದು, ಭ್ರಷ್ಟಾಚಾರದಿಂದ ಬೇಸತ್ತು ಆಕ್ರೋಶದಲ್ಲಿ ಆ ರೀತಿಯ ಹೇಳಿಕೆ ನೀಡಿದ್ದೇನೆ. ಒಬ್ಬ ರಾಜ್ಯಪಾಲನಾಗಿ ಆ ರೀತಿಯ ಹೇಳಿಕೆ ನೀಡಿಲ್ಲ. ನನ್ನ ವೈಯಕ್ತಿಕ ಭಾವನೆಗಳನ್ನು ವ್ಯಕ್ತಪಡಿಸಿದ್ದೇನೆ. ಹಲವು ರಾಜಕೀಯ ನಾಯಕರು ಹಾಗೂ ಉನ್ನತ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

    ಭಾನುವಾರ ನಾನು ಮಾಡಿದ ಭಾಷಣವನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ. ಅಲ್ಲದೆ, ಕಾಶ್ಮೀರದ ಬೃಹತ್ ಕುಟುಂಬಗಳು ಸಾರ್ವಜನಿಕರ ಹಣವನ್ನು ಲೂಟಿ ಮಾಡಿರುವ ಮೂಲಕ ಪ್ರಪಂಚದಾದ್ಯಂತ ಆಸ್ತಿ ಸಂಪಾದಿಸಿದ್ದಾರೆ ಎಂದು ಕಾಶ್ಮೀರದ ರಾಜಕೀಯ ಮುಖಂಡರ ವಿರುದ್ಧ ರಾಜ್ಯಪಾಲರು ಕಿಡಿಕಾರಿದ್ದಾರೆ.