Tag: Satyajit

  • ಧರ್ಮ ಕೀರ್ತಿರಾಜ್ ನಟನೆಯ ಹೊಸ ಸಿನಿಮಾ ‘ಬುಲೆಟ್’ ಗೆ ಚಾಲನೆ

    ಧರ್ಮ ಕೀರ್ತಿರಾಜ್ ನಟನೆಯ ಹೊಸ ಸಿನಿಮಾ ‘ಬುಲೆಟ್’ ಗೆ ಚಾಲನೆ

    ರ್ಮ ಕೀರ್ತಿರಾಜ್ ನಾಯಕರಾಗಿ ನಟಿಸುತ್ತಿರುವ, ಸತ್ಯಜಿತ್ ನಿರ್ಮಿಸಿ, ನಿರ್ದೇಶಿಸುತ್ತಿರುವ “ಬುಲೆಟ್” ಚಿತ್ರದ ಮುಹೂರ್ತ ಸಮಾರಂಭ ಆರ್ ಟಿ ನಗರದ ವಿನಾಯಕನ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ದೃಶ್ಯಕ್ಕೆ ಶಾಸಕ ಭೈರತಿ ಸುರೇಶ್, ಕರ್ನಾಟಕ ರಕ್ಷಣ ವೇದಿಕೆ ಅಧ್ಯಕ್ಷ ಪ್ರವೀಣ್ ಶೆಟ್ಟಿ ಆರಂಭ ಫಲಕ ತೋರಿದರು. ಮಹಿಮ್ ಕ್ಯಾಮೆರಾ ಚಾಲನೆ ಮಾಡಿ ಶುಭ ಕೋರಿದರು.

    ವಿನಾಯಕನ ಸನ್ನಿಧಿಯಲ್ಲಿ ಮುಹೂರ್ತ‌ ಮಾಡಿದ್ದೇವೆ. ಒಂದೇ ಹಂತದಲ್ಲಿ ಚಿತ್ರೀಕರಣ ನಡೆಯಲಿದೆ. ಬೆಂಗಳೂರು, ಗೋವಾ, ಮಂಗಳೂರಿನಲ್ಲಿ ಚಿತ್ರೀಕರಣ ನಡೆಯಲಿದೆ.‌ ಈ ಚಿತ್ರದ ನಾಯಕನಾಗಿ ಧರ್ಮ ಕೀರ್ತಿರಾಜ್ ನಟಿಸುತ್ತಿದ್ದಾರೆ. ಮುಂಬೈನ ಶ್ರೀಯಾ ಶುಕ್ಲಾ ಹಾಗೂ ಅಜಿತಾ ಜಾ ನಾಯಕಿಯರು. ಶ್ರೀಯಾ ಅವರು ಸುಶಾಂತ್ ಸಿಂಗ್ ಅವರ ಬಯೋಪಿಕ್ ಚಿತ್ರದಲ್ಲಿ ನಟಿಸಿದ್ದಾರೆ.   ಅಜಿತಾ ವೆಬ್ ಸೀರಿಸ್ ಗಳಲ್ಲಿ ನಟಿಸಿದ್ದಾರೆ. ಚಿತ್ರ ಕ್ರೈಮ್ ಥ್ರಿಲ್ಲರ್ ಹಾಗೂ ಫ್ಯಾಮಿಲಿ ಸೆಂಟಿಮೆಂಟ್ ಕಥೆ ಆಧರಿಸಿದೆ ಎಂದು ನಿರ್ಮಾಪಕ ಹಾಗೂ ನಿರ್ದೇಶಕ ಸತ್ಯಜಿತ್ ಮಾಹಿತಿ ನೀಡಿದರು. ಇದನ್ನೂ ಓದಿ: ಕನ್ನಡತಿ ಅನುಷಾ ಶೆಟ್ಟಿ ಜೊತೆ ತೆಲುಗು ಸ್ಟಾರ್ ನಾಗಶೌರ್ಯ ಮದುವೆ

    ಸತ್ಯಜಿತ್ ಅವರು ಹಿಂದಿ, ತಮಿಳಿನಲ್ಲಿ ಕೆಲವು ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಈ ಚಿತ್ರವನ್ನು ಅವರೆ ನಿರ್ಮಿಸಿ, ನಿರ್ದೇಶಿಸುತ್ತಿದ್ದಾರೆ. ಕಥೆ ತುಂಬಾ ಚೆನ್ನಾಗಿದೆ. ಅಪ್ಪ, ಮಗನ ಸೆಂಟಿಮೆಂಟ್ ಸನ್ನಿವೇಶಗಳು ಜನರಿಗೆ ಹತ್ತಿರವಾಗಲಿದೆ. ನನ್ನ ತಂದೆಯ ಪಾತ್ರದಲ್ಲಿ ಸತ್ಯಜಿತ್ ಅವರೆ ಅಭಿನಯಿಸುತ್ತಿದ್ದಾರೆ. ಎರಡು ಶೇಡ್ ಗಳಲ್ಲಿ ನನ್ನ ಪಾತ್ರವಿರುತ್ತದೆ. ಒಳ್ಳೆಯ ತಂಡದೊಂದಿಗೆ ಕೆಲಸ ಮಾಡುತ್ತಿರುವ ಖುಷಿಯಿದೆ.‌ ನಮ್ಮ ತಂಡಕ್ಕೆ ಎಲ್ಲರ ಪ್ರೋತ್ಸಾಹವಿರಲಿ ಎಂದರು ನಾಯಕ ಧರ್ಮ ಕೀರ್ತಿರಾಜ್.

    ನಾಯಕಿಯರಾದ ಶ್ರೀಯಾ ಶುಕ್ಲ ಹಾಗೂ ಅಜಿತಾ ಜಾ ತಮ್ಮ ಪಾತ್ರ ಪರಿಚಯ ಮಾಡಿಕೊಂಡು, ಕನ್ನಡ ಚಿತ್ರದಲ್ಲಿ ಅಭಿನಯಿಸುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ಸಹ ನಿರ್ದೇಶಕ , ನಟ ಇಶ್ಯಾಕ್ ಬಾಜಿ, ಛಾಯಾಗ್ರಹಕ ಪಿ.ವಿ.ಆರ್ ಸ್ವಾಮಿ, ಸಂಗೀತ ನಿರ್ದೇಶಕ ರಾಜ್ ಭಾಸ್ಕರ್ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದು, ಚಿತ್ರದ ಕುರಿತು ಮಾತನಾಡಿದರು.

    Live Tv
    [brid partner=56869869 player=32851 video=960834 autoplay=true]

  • ಹಣಕ್ಕಾಗಿ ಪೀಡನೆ – ತಂದೆ ಸತ್ಯಜೀತ್ ವಿರುದ್ಧ ಮಗಳಿಂದ ದೂರು

    ಹಣಕ್ಕಾಗಿ ಪೀಡನೆ – ತಂದೆ ಸತ್ಯಜೀತ್ ವಿರುದ್ಧ ಮಗಳಿಂದ ದೂರು

    ಬೆಂಗಳೂರು: ಸ್ಯಾಂಡಲ್‍ವುಡ್ ಖ್ಯಾತ ನಟ ಸತ್ಯಜಿತ್ ಹಣಕ್ಕಾಗಿ ಪೀಡಿಸುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

    ತಂದೆ ಸತ್ಯಜಿತ್ ಹಣ ಕೊಡುವಂತೆ ಪ್ರತಿನಿತ್ಯ ಪೀಡಿಸುತ್ತಾ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಮಗಳು ಅಖ್ತರ್ ಸ್ವಲೇಹಾ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

    ಅಪ್ಪನ ಜೀವನಾಂಶಕ್ಕೆ ತಿಂಗಳು 1 ಲಕ್ಷ ರೂಪಾಯಿ ದುಡ್ಡು ಕೊಡುತ್ತಿದ್ದೆ. ನಾನೀಗ ತುಂಬು ಗರ್ಭಿಣಿ, ಕೆಲಸಕ್ಕೆ ಹೋಗುತ್ತಿಲ್ಲ. ಹೀಗಾಗಿ ಮೊದಲಿನ ಹಾಗೆ ಸಹಾಯ ಮಾಡಲಾಗುತ್ತಿಲ್ಲ. ಹಣ ಕೊಡೋದು ನಿಲ್ಲಿಸಿದ್ದರಿಂದ ಅಪ್ಪನ ಟಾರ್ಚರ್ ಕೊಡಲು ಆರಂಭಿಸಿದ್ದಾರೆ. ಪ್ರತಿದಿನ ಬೆದರಿಕೆ ಕರೆಗಳು ಬರುತ್ತಿವೆ. ತಂದೆ ಸತ್ಯಜಿತ್ ಇದನ್ನೆಲ್ಲಾ ಮಾಡಿಸುತ್ತಿದ್ದಾರೆ ಎಂದು ಆರೋಪ ಬಾಣಸವಾಡಿ ಪೊಲೀಸರಿಗೆ ಮಗಳು ಲಿಖಿತ ದೂರು ನೀಡಿದ್ದಾರೆ.

    ನಾನು ಮಗಳಿಂದ ಯಾವುದೇ ಹಣ ಕೇಳಿಲ್ಲ. ಮಗಳನ್ನು ಬಳಸಿ ಯಾರೋ ನನಗೆ ಡ್ಯಾಮೇಜ್ ಮಾಡಿದ್ದಾರೆ. ಮಗಳ ವಿದ್ಯಾಭ್ಯಾಸಕ್ಕೆ ಮನೆ ಮಾರಿದ್ದೇನೆ. ಮನೆ ಬಿಡಿಸಿಕೊಡಲು ಹೇಳಿದ್ದೇ ಅಷ್ಟೇ. ಸಾಯೋ ಟೈಮ್‍ನಲ್ಲಿ ಮಗಳ ಏಳಿಗೆ ಬಯಸುತ್ತೇನೆ. ಮಗಳೇ ನನ್ನ ವಿರುದ್ಧ ನಿಲ್ತಾಳೆ ಅಂತಾ ಅನ್ಕೊಂಡು ಇರಲಿಲ್ಲ ಎಂದು ಮಗಳ ಆರೋಪ ಕೇಳಿ ತಂದೆ ಸತ್ಯಜಿತ್ ಕಣ್ಣೀರು ಹಾಕಿದ್ದಾರೆ.

    ಸತ್ಯಜಿತ್ ಮಗಳು ಅಖ್ತರ್ ಸ್ವಲೇಹಾ ವೃತ್ತಿಯಲ್ಲಿ ಪೈಲಟ್. ಪ್ರತಿಷ್ಠಿತ ಏರ್ ಲೈನ್ಸ್ ನಲ್ಲಿ ಕಂಪನಿಯಲ್ಲಿ ಪೈಲಟ್ ಆಗಿರುವ ಸ್ವಲೇಹಾ ಪ್ರತಿ ತಿಂಗಳು ಸತ್ಯಜಿತ್‍ಗೆ 1 ಲಕ್ಷ ಕೊಡುತ್ತಿದ್ದೇನೆ. ಆದರೆ ಈದೀಗ ಹಣ ಕೊಡಲು ಆಗುತ್ತಿಲ್ಲ ತಂದೆ ಕಿರುಕುಳ ನೀಡುತ್ತಿದ್ದಾರೆ ಎಂದಿದ್ದಾರೆ.