Tag: Satyendar Jain

  • ಮಾಜಿ ಸಚಿವ ಸತ್ಯೇಂದ್ರ ಜೈನ್ ಜೈಲಲ್ಲಿ ಸ್ವಿಮ್ಮಿಂಗ್ ಪೂಲ್ ಕೇಳ್ತಿದ್ದಾರೆ – ಸುಪ್ರೀಂ ಕೋರ್ಟ್‌ಗೆ ED ಮಾಹಿತಿ

    ಮಾಜಿ ಸಚಿವ ಸತ್ಯೇಂದ್ರ ಜೈನ್ ಜೈಲಲ್ಲಿ ಸ್ವಿಮ್ಮಿಂಗ್ ಪೂಲ್ ಕೇಳ್ತಿದ್ದಾರೆ – ಸುಪ್ರೀಂ ಕೋರ್ಟ್‌ಗೆ ED ಮಾಹಿತಿ

    ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಎಎಪಿ ಮಾಜಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ (Satyendar Jain) ಅವರಿಗೆ ಕೋರಲಾದ ಮಧ್ಯಂತರ ವೈದ್ಯಕೀಯ ಜಾಮೀನು (Medical Bail) ವಿಸ್ತರಣೆಯನ್ನು ಜಾರಿ ನಿರ್ದೇಶನಾಲಯ ಆಕ್ಷೇಪ ವ್ಯಕ್ತಪಡಿಸಿದೆ. ಅಲ್ಲದೇ ಸತ್ಯೇಂದರ್ ಜೈನ್ ಅವರು ಜೈಲಿನ ಆವರಣದಲ್ಲಿ ಸ್ವಿಮ್ಮಿಂಗ್ ಪೂಲ್ ಬೇಕೆಂದು ಕೇಳುತ್ತಿದ್ದಾರೆ ಎಂಬುದಾಗಿ ಜಾರಿ ನಿರ್ದೇಶನಾಲಯ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ (Supreme Court) ತಿಳಿಸಿದೆ.

    ಜೈನ್ ಅವರ ವೈದ್ಯಕೀಯ ಸಲಹೆಯನ್ನ ಉಲ್ಲೇಖಿಸಿ ಅವರ ಮಧ್ಯಂತರ ಜಾಮೀನು ವಿಸ್ತರಣೆ ಮಾಡುವಂತೆ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಸುಪ್ರೀಂಕೋರ್ಟ್‌ಗೆ ಮನವಿ ಮಾಡಿದ್ದರು. ಸತ್ಯೇಂದರ್ ಜೈನ್ ಅವರು ಮಹತ್ವದ ಬೆನ್ನುಹುರಿ ಶಸ್ತ್ರಚಿಕಿತ್ಸೆಗೆ ಒಳಗಾದ ಬಳಿಕ ಕೆಲವು ಬಹುಮುಖ್ಯ ಚಿಕಿತ್ಸೆಗಳಿಗೆ ಒಳಗಾಗುತ್ತಿದ್ದಾರೆ. ಹೀಗಾಗಿ ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಿಸಬೇಕು ಎಂದು ಸಿಂಘ್ವಿ ಕೋರಿದ್ದರು.

    ಜೈನ್ ಅವರಿಗೆ ಮಧ್ಯಂತರ ಜಾಮೀನು ವಿಸ್ತರಣೆ ಮಾಡಲು ವೈದ್ಯರ ಸಲಹೆ ಸಾಲುವುದಿಲ್ಲ ಎಂದು ಪ್ರತಿಪಾದಿಸಿದ ಜಾರಿ ನಿರ್ದೇಶನಾಲಯ, ಜಾಮೀನು ವಿಸ್ತರಣೆ ನೀಡುವ ಮನವಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿತು. ಅವರು ಜೈಲಿನಲ್ಲಿ ಈಜುಕೊಳ ಬೇಕೆಂದು ಕೇಳುತ್ತಿದ್ದಾರೆ. ಎಲ್ಲರಿಗೂ ಇದು ಸಾಧ್ಯವಾಗಲ್ಲ ಎಂದು ಇಡಿ ಪರ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ ರಾಜು ತಿಳಿಸಿದ್ದಾರೆ. ಇದನ್ನೂ ಓದಿ: ಹನಿಟ್ರ್ಯಾಪ್ ಭೀತಿ – ಯೂನಿಫಾರಂ ಧರಿಸಿ ಫೋಟೊ, ವೀಡಿಯೋ ಅಪ್ಲೋಡ್ ಮಾಡದಂತೆ ಅರೆಸೇನಾ ಪಡೆಗಳಿಗೆ ಸೂಚನೆ

    ಜೈನ್ ಅವರನ್ನು ಏಮ್ಸ್ ವೈದ್ಯರ ತಂಡ ಸ್ವತಂತ್ರವಾಗಿ ತಪಾಸಣೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದ ರಾಜು, ಅಗತ್ಯಬಿದ್ದರೆ, ಜೈನ್ ಅವರಿಗೆ ಫಿಸಿಯೋ ಥೆರಪಿ ನೀಡಲು ಅವರು ಈಜುಕೊಳಕ್ಕೆ ಕರೆದೊಯ್ಯಬಹುದು ಎಂದು ಹೇಳಿದರು. ಈ ವೇಳೆ ಕೋರ್ಟ್, ಆದ್ರೆ ಏನ್ ಮಾಡೋದು ಅವರು ಫಿಸಿಯೋಥೆರಪಿಗೆ ಒಳಗಾದ್ರೆ ನೀವು ಫೋಟೋ ತೆಗೆದು ಅವುಗಳನ್ನೂ ಪ್ರಕಟಿಸಿಬಿಡ್ತೀರಿ ಎಂದು ಹೇಳಿತು. ಬಳಿಕ ಜೈನ್ ಅವರ ಮಧ್ಯಂತರ ವೈದ್ಯಕೀಯ ಜಾಮೀನು ಅವಧಿಯನ್ನ ಸೆಪ್ಟೆಂಬರ್ 1ರವರೆಗೂ ವಿಸ್ತರಿಸಲು ಕೋರ್ಟ್ ಒಪ್ಪಿಗೆ ಸೂಚಿಸಿತು.

    ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 2022ರಿಂದಲೂ ಜೈಲಿನಲ್ಲಿರುವ ಜೈನ್ ಅವರಿಗೆ ಜಾಮೀನು ನೀಡಲು ದೆಹಲಿ ಹೈಕೋರ್ಟ್ ಏಪ್ರಿಲ್ 6ರಂದು ನಿರಾಕರಿಸಿತ್ತು. ಜಾಮೀನು ನಿರಾಕರಿಸಿದ ವಿಚಾರಣಾ ನ್ಯಾಯಾಲಯದ ಆದೇಶದಲ್ಲಿ ಯಾವುದೇ ಕಾನೂನುಬಾಹಿರ ಅಂಶ ಕಂಡುಬಂದಿಲ್ಲ ಎಂದು ಹೈಕೋರ್ಟ್ ಹೇಳಿತ್ತು. ಇದನ್ನು ಜೈನ್ ಅವರು ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತಿಹಾರ್ ಜೈಲಿನ ಶೌಚಾಲಯದಲ್ಲಿ ಕುಸಿದು ಬಿದ್ದ ಸತ್ಯೇಂದ್ರ ಜೈನ್ – 3 ದಿನದ ಬಳಿಕ ಮತ್ತೆ ಆಸ್ಪತ್ರೆ ದಾಖಲು

    ತಿಹಾರ್ ಜೈಲಿನ ಶೌಚಾಲಯದಲ್ಲಿ ಕುಸಿದು ಬಿದ್ದ ಸತ್ಯೇಂದ್ರ ಜೈನ್ – 3 ದಿನದ ಬಳಿಕ ಮತ್ತೆ ಆಸ್ಪತ್ರೆ ದಾಖಲು

    ನವದೆಹಲಿ: ತಿಹಾರ್ ಜೈಲಿನ (Tihar Jail) ಶೌಚಾಲಯದಲ್ಲಿ (Washroom) ಕುಸಿದು ಬಿದ್ದ ಪರಿಣಾಮ ದೆಹಲಿಯ ಮಾಜಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ (Satyendar Jain) ಅವರನ್ನು ಗುರುವಾರ ಆಸ್ಪತ್ರೆಗೆ ದಾಖಲಿಸಲಾಗಿದೆ. ಸತ್ಯೇಂದ್ರ ಜೈನ್ ಕೇವಲ 3 ದಿನಗಳ ಬಳಿಕ ಮತ್ತೆ ಆಸ್ಪತ್ರೆ (Hospital) ಸೇರಿದ್ದಾರೆ.

    ಅನಾರೋಗ್ಯದ ಕಾರಣದಿಂದಾಗಿ ಸತ್ಯೇಂದ್ರ ಜೈನ್ ಸೋಮವಾರ ಆಸ್ಪತ್ರೆ ದಾಖಲಾಗಿದ್ದರು. ಬಳಿಕ ಗುರುವಾರ ಅವರು ತಿಹಾರ್ ಜೈಲಿನ ಶೌಚಾಲಯದಲ್ಲಿ ಕುಸಿದು ಬಿದ್ದಿದ್ದರು. ಈ ಹಿನ್ನೆಲೆ ಅವರನ್ನು ರಾಜಧಾನಿಯ ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

    ಜೈಲು ಆವರಣದ ಸೆಲ್ ಸಂಖ್ಯೆ 7 ರಲ್ಲಿ ಸತ್ಯೇಂದ್ರ ಜೈನ್ ಅವರನ್ನು ಇರಿಸಲಾಗಿತ್ತು. ಗುರುವಾರ ಮುಂಜಾನೆ ಸುಮಾರು 6 ಗಂಟೆ ವೇಳೆಗೆ ಅವರು ಶೌಚಾಲಯದಲ್ಲಿ ಕುಸಿದು ಬಿದ್ದಿರುವುದು ಕಂಡುಬಂದಿದೆ. ಕೂಡಲೆ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಸತ್ಯೇಂದ್ರ ಜೈನ್ ಬೆನ್ನು ಮೂಳೆಯ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ತಿಹಾರ್ ಜೈಲಿನ ಡಿಜಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮಂಗಳೂರಿನಲ್ಲಿ ಟೇಕಾಫ್‍ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ – ಸಮಯಪ್ರಜ್ಞೆ ಮೆರೆದ ಪೈಲೆಟ್

    ಕಳೆದ ವರ್ಷ ಭ್ರಷ್ಟಾಚಾರ ಪ್ರಕರಣದಲ್ಲಿ ಜೈನ್ ಅವರನ್ನು ಬಂಧಿಸಲಾಗಿತ್ತು. ಜೈಲಿಗೊಳಗಾದ ಬಳಿಕ ಸತ್ಯೇಂದ್ರ ಜೈನ್ ಅವರು ಸುಮಾರು 35 ಕೆಜಿ ತೂಕವನ್ನು ಕಳೆದುಕೊಂಡಿದ್ದಾರೆ. ಇದರಿಂದ ತೀವ್ರ ಅನಾರೋಗ್ಯಕ್ಕೊಳಗಾಗುತ್ತಿದ್ದಾರೆ ಎಂದು ಅವರ ಪರ ವಕೀಲರು ತಿಳಿಸಿದ್ದರು.

    ಜೈಲಿನಲ್ಲಿ ನನಗೆ ಒಂಟಿತನ ಕಾಡುತ್ತಿದೆ. ಹೀಗಾಗಿ ತಾನು ಖಿನ್ನತೆಗೊಳಗಾಗಿರುವುದಾಗಿ ಇತ್ತೀಚೆಗಷ್ಟೇ ಸತ್ಯೇಂದ್ರ ಜೈನ್ ಅವರು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಅವರು ಜೈಲಿನಲ್ಲಿರುವ ಮನೋವೈದ್ಯರನ್ನು ಕೂಡ ಭೇಟಿಯಾಗಿದ್ದರು. ಇದನ್ನೂ ಓದಿ: ಸಂಸತ್‌ ಭವನ ಲೋಕಾರ್ಪಣೆ ಕಾರ್ಯಕ್ರಮಕ್ಕೆ ವಿಪಕ್ಷಗಳ ಬಹಿಷ್ಕಾರ – ಭಾಗವಹಿಸುತ್ತೇವೆ ಎಂದ 2 ಪಕ್ಷಗಳು

  • ಅಕ್ರಮ ಹಣ ವರ್ಗಾವಣೆ ಪ್ರಕರಣ – ಸತ್ಯೇಂದರ್ ಜೈನ್ ಜಾಮೀನು ಅರ್ಜಿ ವಜಾ

    ಅಕ್ರಮ ಹಣ ವರ್ಗಾವಣೆ ಪ್ರಕರಣ – ಸತ್ಯೇಂದರ್ ಜೈನ್ ಜಾಮೀನು ಅರ್ಜಿ ವಜಾ

    ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಆಪ್ (AAP) ಮಾಜಿ ಸಚಿವ ಸತ್ಯೇಂದರ್ ಜೈನ್‌ಗೆ (Satyendar Jain) ದೆಹಲಿ (Delhi) ಹೈಕೋರ್ಟ್ ಗುರುವಾರ ಜಾಮೀನು ನಿರಾಕರಿಸಿದೆ.

    ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕನ ಜಾಮೀನು (Bail) ಅರ್ಜಿಯನ್ನು ಹೈಕೋರ್ಟ್ (High Court) ನ್ಯಾಯಾಧೀಶ ದಿನೇಶ್ ಕುಮಾರ್ ಶರ್ಮ ವಜಾಗೊಳಿಸಿದ್ದಾರೆ. ಇವರೊಂದಿಗೆ ಆರೋಪಿಗಳಾದ ವೈಭವ್ ಜೈನ್ ಮತ್ತು ಅಂಕುಶ್ ಜೈನ್ ಅವರಿಗೂ ಜಾಮೀನು ನಿರಾಕರಿಸಿದೆ. ಈ ಮೂವರು ಆರೋಪಿಗಳು ನ್ಯಾಯಾಲಯ ವಿಧಿಸಿದ ಎರಡು ಷರತ್ತುಗಳನ್ನು ಪೂರೈಸುವಲ್ಲಿ ವಿಫಲರಾಗಿದ್ದಾರೆ. ಅವರು ಪ್ರಭಾವಿ ವ್ಯಕ್ತಿಯಾಗಿದ್ದು, ಜಾಮೀನು ನೀಡಿದರೆ ಸಾಕ್ಷ್ಯ ನಾಶಮಾಡಬಹುದು ಎಂದು ನ್ಯಾಯಾಲಯ ಹೇಳಿದೆ. ಇದನ್ನೂ ಓದಿ: ಯುಪಿಎಯಿಂದ ನಿರೀಕ್ಷಿಸಿದ್ದೆ, ಬಿಜೆಪಿ ಮುಸ್ಲಿಮರಿಗೆ ಪದ್ಮ ಪ್ರಶಸ್ತಿ ನೀಡಲ್ಲ ಎಂದು ಭಾವಿಸಿದ್ದೆ: ಮೋದಿಗೆ ರಶೀದ್ ಅಹ್ಮದ್ ಖಾದ್ರಿ ಧನ್ಯವಾದ 

    ನಾಲ್ಕು ಕಂಪನಿಗಳ ಮೂಲಕ ಅಕ್ರಮ ಹಣ ವರ್ಗಾವಣೆ ಮಾಡಿದ ಆರೋಪದಡಿ 2022ರ ಮೇ 30ರಂದು ಸತ್ಯೇಂದರ್ ಜೈನ್ ಅವರನ್ನು ಬಂಧಿಸಲಾಯಿತು. ಅದೇ ವರ್ಷ ನವೆಂಬರ್ 17ರಲ್ಲಿ ವಿಚಾರಣಾ ನ್ಯಾಯಾಲಯವು ಜಾಮೀನು ಅರ್ಜಿಯನ್ನು ವಜಾಗೊಳಿಸಿದ ಬಳಿಕ ಸತ್ಯೇಂದರ್ ಜೈನ್ ಹೈಕೋರ್ಟ್ ಮೊರೆ ಹೋಗಿದ್ದರು. ಇದನ್ನೂ ಓದಿ: ಸುಧಾಮೂರ್ತಿ, ಎಸ್.ಎಲ್ ಭೈರಪ್ಪಗೆ ಪದ್ಮ ಭೂಷಣ ಪ್ರಶಸ್ತಿ ಪ್ರದಾನ 

    ಸಿಬಿಐ 2017ರ ಆಗಸ್ಟ್‌ನಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಒಂದು ವರ್ಷದ ಬಳಿಕ ಸತ್ಯೇಂದರ್ ಜೈನ್, ಅವರ ಪತ್ನಿ ಮತ್ತು ಅವರ ನಾಲ್ವರು ಸಹಚರರ ವಿರುದ್ಧ ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಆರೋಪಪಟ್ಟಿ ಸಲ್ಲಿಸಿದೆ. ಈ ಪ್ರಕರಣದ ನಂತರ, ಅಕಿಂಚನ್ ಡೆವಲಪರ್ಸ್ ಪ್ರೈವೆಟ್ ಲಿಮಿಟೆಡ್, ಇಂಡೋ ಮೆಟಲ್ ಇಂಪೆಕ್ಸ್ ಪ್ರೈವೆಟ್ ಲಿಮಿಟೆಡ್, ಪರ್ಯಾಸ್ ಇನ್ಫೋ ಸೊಲ್ಯೂಷನ್ಸ್ ಪ್ರೈವೆಟ್ ಲಿಮಿಟೆಡ್, ಮಂಗಳಾಯತನ್ ಪ್ರಾಜೆಕ್ಟ್ ಪ್ರೈವೆಟ್ ಲಿಮಿಟೆಡ್ ಮತ್ತು ಜೆಜೆ ಐಡಿಯಲ್ ಎಸ್ಟೇಟ್ ಪ್ರೈವೆಟ್ ಲಿಮಿಟೆಡ್‌ಗೆ ಸೇರಿದ 4.81 ಕೋಟಿ ಮೌಲ್ಯದ ಸ್ಥಿರಾಸ್ತಿಗಳನ್ನು ಇಡಿ ತಾತ್ಕಾಲಿಕವಾಗಿ ಜಪ್ತಿ ಮಾಡಿದೆ. ಇದನ್ನೂ ಓದಿ: ಸರ್ಕಾರವನ್ನು ಟೀಕಿಸಿದ ಮಾತ್ರಕ್ಕೆ ಮಾಧ್ಯಮ ನಿಯಂತ್ರಿಸಲು ಸಾಧ್ಯವಿಲ್ಲ: ಕೇಂದ್ರಕ್ಕೆ ಸುಪ್ರೀಂ ತರಾಟೆ

  • ಆಪ್ ನಾಯಕರ ಬಂಧನ – ಹೋಳಿ ತೊರೆದು ಧ್ಯಾನ ಆರಂಭಿಸಿದ ಕೇಜ್ರಿವಾಲ್

    ಆಪ್ ನಾಯಕರ ಬಂಧನ – ಹೋಳಿ ತೊರೆದು ಧ್ಯಾನ ಆರಂಭಿಸಿದ ಕೇಜ್ರಿವಾಲ್

    ನವದೆಹಲಿ: ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ (AAP) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ದೇಶಕ್ಕಾಗಿ ಪ್ರಾರ್ಥನೆಯನ್ನು ಪ್ರಾರಂಭಿಸಿದ್ದಾರೆ. ಪಕ್ಷದ ನಾಯಕರಾದ ಸತ್ಯೇಂದ್ರ ಜೈನ್ (Satyendar Jain) ಮತ್ತು ಮನೀಶ್ ಸಿಸೋಡಿಯಾ (Manish Sisodia) ಬಂಧನವನ್ನು ಖಂಡಿಸಿ ಅವರು ಹೋಳಿಯನ್ನು (Holi) ಆಚರಿಸದೆ ಧ್ಯಾನ ಆರಂಭಿಸಿದ್ದಾರೆ.

    ಬೆಳಗ್ಗೆ 10 ಗಂಟೆಯಿಂದ ಸಂಜೆ ಐದು ಗಂಟೆವರೆಗೂ ದೇಶದ ಒಳಿತಿಗಾಗಿ ಧ್ಯಾನ ಮಾಡುವುದಾಗಿ ಅವರು ಮಂಗಳವಾರ ಹೇಳಿದ್ದರು. ಅಂತೆಯೇ ಕೇಜ್ರಿವಾಲ್ ಧ್ಯಾನ ಆರಂಭಿಸಿದ್ದಾರೆ. ಇದಕ್ಕೂ ಮೊದಲು ಅವರು ರಾಜಘಾಟ್‌ಗೆ ತೆರಳಿ ಮಹಾತ್ಮಗಾಂಧಿ ಸ್ಮಾರಕಕ್ಕೆ ನಮನ ಸಲ್ಲಿಸಿದರು‌.

    ಶಾಲೆ ಕಾಲೇಜು, ಆಸ್ಪತ್ರೆಗಳನ್ನು ಕಟ್ಟುವ ನಾಯಕರನ್ನು ಜೈಲಿಗೆ ಕಳುಹಿಸಲಾಗುತ್ತಿದೆ. ದೇಶವನ್ನು ದರೋಡೆ ಮಾಡುವ ಜನರನ್ನು ಪ್ರಧಾನಿ ನರೇಂದ್ರ ಮೋದಿ ಅಪ್ಪಿಕೊಳ್ಳುತ್ತಿದ್ದಾರೆ. ಇದು ಆತಂಕಕಾರಿ ಬೆಳವಣಿಗೆ ಎಂದು ಅವರು ಹೇಳಿದ್ದಾರೆ. ಜೈನ್ ಮತ್ತು ಸಿಸೋಡಿಯಾ ಜೈಲಿನಲ್ಲಿರುವ ಬಗ್ಗೆ ನನಗೆ ಆತಂಕವಿಲ್ಲ. ಅವರು ಧೈರ್ಯಶಾಲಿಗಳು ಮತ್ತು ದೇಶಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಲು ಸಿದ್ಧರಾಗಿದ್ದಾರೆ. ಆದರೆ ದೇಶದ ದುರದೃಷ್ಟಕರ ಸ್ಥಿತಿಯು ನನ್ನನ್ನು ಚಿಂತೆಗೀಡು ಮಾಡಿದೆ. ಇದನ್ನೂ ಓದಿ: ಮೀಸಲು ಅರಣ್ಯದಲ್ಲಿ 60ಕ್ಕೂ ಹೆಚ್ಚು ಫೈರಿಂಗ್ ಕಾಟ್ರೇಜ್ ಪತ್ತೆ, ತನಿಖೆಗೆ ಇಳಿದ ಅರಣ್ಯ ಇಲಾಖೆ

    ನಾನು ದೇಶಕ್ಕಾಗಿ ಧ್ಯಾನ ಮಾಡುತ್ತೇನೆ, ಪ್ರಾರ್ಥಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಾಡುತ್ತಿರುವುದು ತಪ್ಪು ಎಂದು ನೀವು ಭಾವಿಸಿದರೆ ಮತ್ತು ನಿಮಗೂ ದೇಶದ ಬಗ್ಗೆ ಚಿಂತೆ ಇದ್ದರೆ ಹೋಳಿ ಆಚರಿಸಿದ ನಂತರ, ದಯವಿಟ್ಟು ಪ್ರಾರ್ಥಿಸಲು ಸಮಯ ಮೀಸಲಿಡಿ ಎಂದು ಸಾರ್ವಜನಿಕರಿಗೆ ಕೇಜ್ರಿವಾಲ್ ಕರೆ ನೀಡಿದ್ದರು. ಇದನ್ನೂ ಓದಿ: ಮಾ.9ರ ಕರ್ನಾಟಕ ಬಂದ್‌ ವಾಪಸ್ ಪಡೆದ ಕಾಂಗ್ರೆಸ್

  • ಸತ್ಯೇಂದ್ರ ಜೈನ್, ಮನೀಶ್ ಸಿಸೋಡಿಯಾ ರಾಜೀನಾಮೆ – ಸೌರಭ್ ಭಾರದ್ವಾಜ್ ಮತ್ತು ಅತಿಶಿಗೆ ಮಂತ್ರಿ ಸ್ಥಾನ?

    ಸತ್ಯೇಂದ್ರ ಜೈನ್, ಮನೀಶ್ ಸಿಸೋಡಿಯಾ ರಾಜೀನಾಮೆ – ಸೌರಭ್ ಭಾರದ್ವಾಜ್ ಮತ್ತು ಅತಿಶಿಗೆ ಮಂತ್ರಿ ಸ್ಥಾನ?

    ನವದೆಹಲಿ: ಆರೋಗ್ಯ ಸಚಿವ ಸತ್ಯೇಂದ್ರ ಜೈನ್ (Satyendar Jain) ಮತ್ತು ಡಿಸಿಎಂ ಮನೀಶ್ ಸಿಸೋಡಿಯಾ (Manish Sisodia) ರಾಜೀನಾಮೆಯಿಂದ ತೆರವಾದ 2 ಸಚಿವ ಸ್ಥಾನಗಳನ್ನು ಭರ್ತಿ ಮಾಡಲು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ನಿರ್ಧರಿಸಿದ್ದು, ಶಾಸಕರಾದ ಸೌರಭ್ ಭಾರದ್ವಾಜ್ (Saurabh Bhardwaj) ಮತ್ತು ಅತಿಶಿ (Atishi) ಹೆಸರನ್ನು ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೆನಾ ಅನುಮತಿಗಾಗಿ ಕಳುಹಿಸಿದೆ.

    ಹೊಸ ಮದ್ಯ ನೀತಿಯಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಆರೋಪದಲ್ಲಿ ಬಂಧನಕ್ಕೊಳಗಾದ ಹಿನ್ನೆಲೆಯಲ್ಲಿ ಸತ್ಯೇಂದ್ರ ಜೈನ್ ಮತ್ತು ಮನೀಶ್ ಸಿಸೋಡಿಯಾ ರಾಜೀನಾಮೆ ನೀಡಿದ್ದರು. ರಾಜೀನಾಮೆ ಅಂಗೀಕರಿಸಿ ಲೆಫ್ಟಿನೆಂಟ್ ಗವರ್ನರ್ ಮಾಹಿತಿ ನೀಡಿದ್ದ ಕೇಜ್ರಿವಾಲ್ ಹೊಸ ಹೆಸರುಗಳನ್ನು ಕಳುಹಿಸಿಕೊಟ್ಟಿದ್ದಾರೆ.

    ಮನೀಶ್ ಸಿಸೋಡಿಯಾ ಡಿಸಿಎಂ ಮಾತ್ರವಲ್ಲದೇ ಶಿಕ್ಷಣ, ಹಣಕಾಸು, ಯೋಜನೆ, ಭೂಮಿ ಮತ್ತು ಕಟ್ಟಡ, ಸೇವೆಗಳು, ಪ್ರವಾಸೋದ್ಯಮ, ಕಲೆ-ಸಂಸ್ಕೃತಿ ಮತ್ತು ಭಾಷೆ, ಕಾರ್ಮಿಕ ಮತ್ತು ಉದ್ಯೋಗ, ಆರೋಗ್ಯ, ಕೈಗಾರಿಕೆ, ವಿದ್ಯುತ್, ಗೃಹ, ನಗರಾಭಿವೃದ್ಧಿ, ನೀರಾವರಿ, ಲೋಕೋಪಯೋಗಿ ಸೇರಿ 18 ಇಲಾಖೆಗಳನ್ನು ನಿಭಾಯಿಸುತ್ತಿದ್ದರು. ಸತ್ಯೇಂದ್ರ ಜೈನ್ ಆರೋಗ್ಯ, ಗೃಹ, ಕೈಗಾರಿಕೆ ಸೇರಿದಂತೆ 7 ಖಾತೆಗಳನ್ನು ನಿರ್ವಹಿಸುತ್ತಿದ್ದರು. ಇಬ್ಬರ ರಾಜೀನಾಮೆ ಬಳಿಕ ಖಾತೆಗಳನ್ನು ಸಾರಿಗೆ ಸಚಿವ ಕೈಲಾಶ್ ಗೆಹ್ಲೋಟ್ ಮತ್ತು ಸಮಾಜ ಕಲ್ಯಾಣ ಸಚಿವ ರಾಜ್ ಕುಮಾರ್ ಆನಂದ್ ನಡುವೆ ಹಂಚಿಕೆ ಮಾಡಿದೆ. ಇದನ್ನೂ ಓದಿ: ಬಿಜೆಪಿ ಮಾಡದಿದ್ರೆ, ನಾವು ಅಧಿಕಾರಕ್ಕೆ ಬಂದ್ಮೇಲೆ 7ನೇ ವೇತನ ಆಯೋಗ ಜಾರಿ ಮಾಡ್ತೀವಿ: ಸಿದ್ದರಾಮಯ್ಯ

    3 ಬಾರಿ ಶಾಸಕರಾಗಿರುವ ಮತ್ತು ಪ್ರಸ್ತುತ ದೆಹಲಿ ಜಲ ಮಂಡಳಿಯ ಉಪಾಧ್ಯಕ್ಷ ಹುದ್ದೆಯನ್ನು ಹೊಂದಿರುವ ಎಎಪಿ ಮುಖ್ಯ ವಕ್ತಾರ ಸೌರಭ್ ಭಾರದ್ವಾಜ್ ಮತ್ತು ಮನೀಶ್ ಸಿಸೋಡಿಯಾ ಜೊತೆಗೆ ಕಾರ್ಯ ನಿರ್ವಹಿಸಿದ ಕಾಲ್ಕಾಜಿ ಶಾಸಕಿ ಅತಿಶಿ ಅವರಿಗೆ ರಾಜ್ಯ ಖಾತೆ ನೀಡಲು ನಿರ್ಧರಿಸಿದ್ದು, ಲೆಫ್ಟಿನೆಂಟ್ ಗವರ್ನರ್ ಅನುಮತಿ ಮಾತ್ರ ಬಾಕಿ ಉಳಿದಿದೆ. ಇದನ್ನೂ ಓದಿ: ಏಪ್ರಿಲ್ 1 ರಿಂದಲೇ ವೇತನ ಹೆಚ್ಚಳ ಜಾರಿಗೆ- ಸರ್ಕಾರದಿಂದ ಅಧಿಕೃತ ಆದೇಶ

  • ತಿಹಾರ್ ಜೈಲಿನಲ್ಲಿ ಸತ್ಯೇಂದ್ರ ಜೈನ್ ಸೇವೆ ಮಾಡಲು ನೇಮಕವಾಗಿದ್ರು 10 ಜನ!

    ತಿಹಾರ್ ಜೈಲಿನಲ್ಲಿ ಸತ್ಯೇಂದ್ರ ಜೈನ್ ಸೇವೆ ಮಾಡಲು ನೇಮಕವಾಗಿದ್ರು 10 ಜನ!

    ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿಯ (Delhi) ಸಚಿವ, ಆಮ್ ಆದ್ಮಿ ಪಕ್ಷದ (AAP) ನಾಯಕ ಸತ್ಯೇಂದ್ರ ಜೈನ್ (Satyendar Jain) ಅವರಿಗೆ ತಿಹಾರ್ ಜೈಲಿನಲ್ಲಿ (Tihar Jail) ವಿವಿಐಪಿ ಸೌಕರ್ಯ ನೀಡಿರುವ ವೀಡಿಯೋಗಳು ಹೊರಬಂದಿತ್ತು. ಇದೀಗ ಅವರಿಗೆ ಜೈಲಿನಲ್ಲಿ ಒಟ್ಟು 10 ಜನರನ್ನು ಸೇವೆ ಒದಗಿಸಲೆಂದೇ ನಿಯೋಜಿಸಲಾಗಿತ್ತು ಎಂಬ ಸ್ಫೋಟಕ ಮಾಹಿತಿ ಹೊರಬಿದ್ದಿದೆ.

    ಸತ್ಯೇಂದ್ರ ಜೈನ್ ಅವರ ಅಗತ್ಯಗಳನ್ನು ನೋಡಿಕೊಳ್ಳಲು, ಅವರ ಕೋಣೆಯನ್ನು ಸ್ವಚ್ಛಗೊಳಿಸಲು, ಹಾಸಿಗೆಯನ್ನು ಮಡಚಲು, ಹೊರಗಿನ ಆಹಾರ, ಮಿನರಲ್ ವಾಟರ್, ಹಣ್ಣು, ಬಟ್ಟೆ ಹೀಗೆ ಹಲವು ವಸ್ತುಗಳನ್ನು ಒದಗಿಸಲು 8 ಜನರನ್ನು ನಿಯೋಜಿಸಲಾಗಿದ್ದು, ಇನ್ನೂ ಇಬ್ಬರು ಅವರ ಮೇಲ್ವಿಚಾರಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ.

    ಸತ್ಯೇಂದ್ರ ಜೈನ್ ತಮಗೆ ಜೈಲಿನಲ್ಲಿ ವಿಶೇಷ ಸೌಕರ್ಯ, ಆಹಾರ ಸಿಗುತ್ತಿರುವ ವಿಚಾರ ಬಯಲಿಗೆ ಬರುತ್ತಿದ್ದಂತೆಯೇ ಅವರು ವಿಶೇಷ ಆಹಾರವನ್ನು ಕೋರಿ ಸಲ್ಲಿಸಿದ್ದ ಮನವಿಯನ್ನು ರೋಸ್ ಅವೆನ್ಯೂ ನ್ಯಾಯಾಲಯ ಶನಿವಾರ ವಜಾಗೊಳಿಸಿದೆ. ಇದನ್ನೂ ಓದಿ: ಪ್ರತಿಯೊಬ್ಬರಿಗೂ ಅನ್ವಯವಾಗುವಂತೆ ಜನಸಂಖ್ಯಾ ನಿಯಂತ್ರಣ ಮಸೂದೆ ಜಾರಿಗೊಳಿಸಿ – ಗಿರಿರಾಜ್ ಸಿಂಗ್

    ಸತ್ಯೇಂದ್ರ ಜೈನ್ ತಮ್ಮ ಮನವಿಯಲ್ಲಿ, ನಾನು ದೇವಾಲಯಕ್ಕೆ ಹೋಗದೇ ಆಹಾರವನ್ನು ಸೇವಿಸುವುದಿಲ್ಲ. ಇಲ್ಲಿ ತಮಗೆ ಜೈನ ಆಹಾರ ಹಾಗೂ ದೇವಾಲಯಕ್ಕೆ ಹೋಗಲು ಅನುಮತಿಯಿಲ್ಲ. ನಾನು ಧಾರ್ಮಿಕ ಆಚರಣೆ ವೇಳೆ ಹಣ್ಣು ಹಾಗೂ ತರಕಾರಿಗಳನ್ನು ಮಾತ್ರವೇ ಸೇವಿಸುತ್ತಿದ್ದು, ಕೆಲವು ದಿನಗಳಿಂದ ನನಗೆ ಅದು ಕೂಡ ಸಿಗುತ್ತಿಲ್ಲ ಎಂದು ಹೇಳಿದ್ದಾರೆ.

    ಜೈಲಿನಲ್ಲಿ ಹಣ್ಣುಗಳು ಮತ್ತು ಒಣ ಹಣ್ಣುಗಳನ್ನು ಪಡೆಯಲು ಜೈನ್ ಸಲ್ಲಿಸಿದ್ದ ಅರ್ಜಿಯನ್ನು ವಿಶೇಷ ನ್ಯಾಯಾಧೀಶ ವಿಕಾಸ್ ಧುಲ್ ವಜಾಗೊಳಿಸಿದ್ದಾರೆ. ಇದಲ್ಲದೆ ಜೈನ್‌ಗೆ ರಿಂಕು ಎಂದು ಗುರುತಿಸಲಾದ ಅತ್ಯಾಚಾರ ಆರೋಪಿ ಮಸಾಜ್ ಮಾಡಿರುವುದು ತಿಳಿದುಬಂದಿದೆ. ಇದೀಗ ಜೈನ್‌ಗೆ ಸೇವೆ ನೀಡಲು ನಿಯೋಜಿಸಲಾಗಿದ್ದ 10 ಜನರು ಅದೇ ಜೈಲಿನಲ್ಲಿದ್ದ ಕೈದಿಗಳಾ ಅಥವಾ ಹೊರಗಿನವರಾ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಬರುತ್ತೆ.. ಧೈರ್ಯವಿದ್ರೆ ನಿಲ್ಲಿಸಿ – ದೀದಿಗೆ ಬಿಜೆಪಿ ಸವಾಲು

    ಮೇ ತಿಂಗಳಲ್ಲಿ ಸತ್ಯೇಂದ್ರ ಜೈನ್ ಅವರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ED) ಬಂಧಿಸಿತ್ತು. ಬಳಿಕ ಅವರನ್ನು ತಿಹಾರ್ ಜೈಲಿನಲ್ಲಿ ಇರಿಸಲಾಗಿತ್ತು.

    Live Tv
    [brid partner=56869869 player=32851 video=960834 autoplay=true]

  • ತಿಹಾರ್ ಜೈಲಿನಲ್ಲಿ ಸತ್ಯೇಂದ್ರ ಜೈನ್‌ಗೆ ಮಸಾಜ್, ವಿಐಪಿ ಸೌಕರ್ಯ – ವೀಡಿಯೋ ಬಿಡುಗಡೆ

    ತಿಹಾರ್ ಜೈಲಿನಲ್ಲಿ ಸತ್ಯೇಂದ್ರ ಜೈನ್‌ಗೆ ಮಸಾಜ್, ವಿಐಪಿ ಸೌಕರ್ಯ – ವೀಡಿಯೋ ಬಿಡುಗಡೆ

    ನವದೆಹಲಿ: ಆಮ್ ಆದ್ಮಿ ಪಕ್ಷದ (AAP) ಸಚಿವ ಸತ್ಯೇಂದ್ರ ಜೈನ್‌ಗೆ (Satyendar Jain) ತಿಹಾರ್ ಜೈಲಿನಲ್ಲಿ (Tihar Jail) ವ್ಯಕ್ತಿಯೊಬ್ಬರು ಮಸಾಜ್ (Massage) ಮಾಡುತ್ತಿರುವ ಹಳೆಯ ವೀಡಿಯೊವನ್ನು ಬಿಜೆಪಿ (BJP)ಶನಿವಾರ ಬಿಡುಗಡೆ ಮಾಡಿದೆ. ಜೈನ್‌ಗೆ ವಿಐಪಿ ಸೌಕರ್ಯ ನೀಡಿರುವ ಆರೋಪದ ಮೇಲೆ ಕೆಲ ದಿನಗಳ ಹಿಂದೆ ತಿಹಾರ್ ಜೈಲಿನ ಸೂಪರಿಂಟೆಂಡೆಂಟ್ ಅಜಿತ್ ಕುಮಾರ್ ಅವರನ್ನು ಅಮಾನತುಗೊಳಿಸಲಾಗಿತ್ತು.

    ಮೂಲಗಳ ಪ್ರಕಾರ, ಈ ವೀಡಿಯೋ ಹಳೆಯದ್ದಾಗಿದೆ. ಘಟನೆಗೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜೈಲು ಸಿಬ್ಬಂದಿ ವಿರುದ್ಧ ಜೈಲು ಅಧಿಕಾರಿಗಳು ಈಗಾಗಲೇ ಕ್ರಮ ಕೈಗೊಂಡಿದ್ದಾರೆ.

    ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮೇ 30ರಂದು ಬಂಧಿತರಾಗಿರುವ ಸತ್ಯೇಂದ್ರ ಜೈನ್‌ಗೆ ತಿಹಾರ್ ಜೈಲಿನಲ್ಲಿ ವಿಐಪಿ ಸೌಕರ್ಯ ನೀಡಲಾಗುತ್ತಿದೆ. ತಲೆ, ಪಾದ ಮತ್ತು ಬೆನ್ನಿಗೆ ಮಸಾಜ್ ಮಾಡುವಂತಹ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ. ಇದನ್ನೂ ಓದಿ: ಪಾಕ್ ಪರ ಘೋಷಣೆ ಕೂಗಿದ್ದ ಮೂವರು ವಿದ್ಯಾರ್ಥಿಗಳು ರಿಲೀಸ್

    ದೆಹಲಿ ಸಚಿವರು ಜೈಲಿನಲ್ಲಿ ಐಷಾರಾಮಿ ಜೀವನವನ್ನು ನಡೆಸಿರುವುದಕ್ಕೆ ಸಂಬಂಧಿಸಿದಂತೆ ಹಣಕಾಸು ಸಂಸ್ಥೆ ನ್ಯಾಯಾಲಯಕ್ಕೆ ಪುರಾವೆಗಳನ್ನು ಸಲ್ಲಿಸಿದೆ. ಅಪರಿಚಿತ ವ್ಯಕ್ತಿಗಳು ಸತ್ಯೇಂದ್ರ ಜೈನ್‌ಗೆ ಮಸಾಜ್ ಹಾಗೂ ವಿಶೇಷ ಆಹಾರವನ್ನು ನೀಡಲಾಗುತ್ತಿದೆ ಎಂದು ಇಡಿ ಪರ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ (ASG) ಎಸ್‌ವಿ ರಾಜು ಹೇಳಿದ್ದಾರೆ.

    ಈ ಹಿಂದೆ ಜೈನ್‌ಗೆ ವಿಶೇಷ ಸೌಲಭ್ಯ ನೀಡಿದ ಆರೋಪಗಳನ್ನು ಆಮ್ ಆದ್ಮಿ ಪಕ್ಷ ತಳ್ಳಿಹಾಕಿತ್ತು, ಅವುಗಳನ್ನು ಅಸಂಬದ್ಧ ಮತ್ತು ಆಧಾರರಹಿತ ಎಂದು ಕರೆದಿತ್ತು. ಇದನ್ನೂ ಓದಿ: ಹಾಸನದಲ್ಲಿ ನಾಪತ್ತೆಯಾಗಿದ್ದ 7ನೇ ತರಗತಿ ವಿದ್ಯಾರ್ಥಿನಿ ಪತ್ತೆ – ಬಾಲಕಿಯನ್ನು ಕರೆದೊಯ್ದಿದ್ದ ಮಹಿಳೆ

    Live Tv
    [brid partner=56869869 player=32851 video=960834 autoplay=true]

  • CRPF ನನ್ನ ಮೇಲೆ ಜೈಲಿನಲ್ಲಿ ಹಲ್ಲೆ ನಡೆಸಿದೆ – ಸುಕೇಶ್ ಚಂದ್ರಶೇಖರ್ ಆರೋಪ

    CRPF ನನ್ನ ಮೇಲೆ ಜೈಲಿನಲ್ಲಿ ಹಲ್ಲೆ ನಡೆಸಿದೆ – ಸುಕೇಶ್ ಚಂದ್ರಶೇಖರ್ ಆರೋಪ

    ದೆಹಲಿ: ಬಹುಕೋಟಿ ರೂ. ವಂಚನೆ ಪ್ರಕರಣದಲ್ಲಿ ಜೈಲು ಸೇರಿರುವ ಬೆಂಗಳೂರು ಮೂಲದ ವಂಚಕ ಸುಕೇಶ್ ಚಂದ್ರಶೇಖರ್ (Sukesh Chandrashekhar) ನನ್ನ ಮೇಲೆ ಜೈಲಿನಲ್ಲಿ CRPF ಹಲ್ಲೆ ನಡೆಸಿದೆ ಎಂದು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾಗೆ (Lieutenant Governor Vinai Kumar Saxena) ಪತ್ರ ಬರೆದು ಎಎಪಿ (AAP) ಸಚಿವರ ವಿರುದ್ಧ ಗಂಭೀರ ಆರೋಪ ಹೊರಿಸಿದ್ದಾನೆ.

    215 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಜೈಲು ಸೇರಿರುವ ಬೆಂಗಳೂರು ಮೂಲದ ಸುಕೇಶ್ ಚಂದ್ರಶೇಖರ್ ನಡುವಿನ ಪ್ರಕರಣಕ್ಕೆ ನಾನಾ ರೀತಿಯ ತಿರುವುಗಳು ಸಿಗುತ್ತಿವೆ. ದೆಹಲಿ ಲೆಫ್ಟಿನೆಂಟ್ ಗವರ್ನರ್‌ಗೆ ಬರೆದಿರುವ ಪತ್ರದಲ್ಲಿ, ಜೈಲು ಆಡಳಿತದಿಂದ ನಿರಂತರ ಬೆದರಿಕೆ ಮತ್ತು ಒತ್ತಡ ಹಾಕಲಾಗುತ್ತಿದೆ. ಎಎಪಿ ನಾಯಕರ ವಿರುದ್ಧ ನೀಡಿರುವ ಕೇಸ್‌ ವಾಪಸ್‌ ತೆಗೆದುಕೊಳ್ಳುವಂತೆ ಒತ್ತಡವಿದೆ. ಜೈಲಿನಲ್ಲಿ ನನ್ನ ಮೇಲೆ ಹಲ್ಲೆ ನಡೆದಿದೆ. ಪಂಜಾಬ್ ಮತ್ತು ಗೋವಾ ಚುನಾವಣೆ ಸಂದರ್ಭದಲ್ಲಿ ಹಣ ನೀಡುವಂತೆ ಆಮ್ ಆದ್ಮಿ ಪಕ್ಷದ ಸತ್ಯೇಂದರ್ ಜೈನ್ (Satyendar Jain) ನನ್ನನ್ನು ಕೇಳಿದ್ದರು. ಹೀಗಾಗಿ ಕಾನೂನಿನಂತೆ ನಡೆಯಲು ನಿರ್ಧರಿಸಿದ್ದೇನೆ. ಯಾರ ಸಹಾಯವನ್ನು ಪಡೆಯುವುದಿಲ್ಲ. ನನ್ನ ಕೇಸ್ ನಿರ್ವಹಿಸುವ ಸಾಮರ್ಥ್ಯ ನನಗಿದ್ದು ಅಮಾಯಕ ಎಂದು ಸಾಬೀತುಪಡಿಸುತ್ತೇನೆ. ನನ್ನ ಕೇಸ್‍ಗೆ ಸಂಬಂಧಿಸಿದ ಎಲ್ಲಾ ಮೂಲಗಳನ್ನು ಹೊಂದಿದ್ದೇನೆ. ಯಾರ ಸಹಾಯವೂ ಬೇಡ ಎಂದು ಮಾಂಡೊಲಿ ಜೈಲಿನಲ್ಲಿರುವ ಸುಕೇಶ್ ಚಂದ್ರಶೇಖರ್ ತಿಳಿಸಿದ್ದಾನೆ. ಇದನ್ನೂ ಓದಿ: ಗುಜರಾತ್‍ನಲ್ಲಿ ಕಾಂಗ್ರೆಸ್‍ಗೆ ಮತ್ತೆ ಆಘಾತ – ಝಲೋದ್ ಭವೇಶ್ ಕಟಾರಾ ರಾಜೀನಾಮೆ

    ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಮತ್ತು ಸತ್ಯೇಂದರ್ ಜೈನ್ ಅವರಿಗೆ ಸಂಬಂಧಿಸಿದ ಹಲವು ವೈಯಕ್ತಿಕ ವಿಚಾರಗಳು ನನಗೆ ಗೊತ್ತು ಎಂದು ಬೆದರಿಕೆ ಹಾಕಿರುವ ಚಂದ್ರಶೇಖರ್, ನಾನು ಅವರ ವೈಯಕ್ತಿಕ ವಿಚಾರಗಳನ್ನು ಬಿಚ್ಚಿಟ್ಟರೆ ದೇಶವನ್ನೇ ಅಲುಗಾಡಿಸುವಂತಹ ಸ್ಫೋಟಕ ಸತ್ಯವದು. ಕೇಜ್ರಿವಾಲ್ ಅವರೇ, ನೀವು ಮತ್ತು ನಿಮ್ಮ ಸಹಚರರು ಹೇಳುತ್ತಿರುವಂತೆ, ದೆಹಲಿ ಲೆಫ್ಟಿನೆಂಟ್ ಗವರ್ನರ್ ಮುಂದೆ ತಾನು ಪ್ರಸ್ತಾಪಿಸಿರುವ ಯಾವುದೇ ವಿಷಯ ಸುಳ್ಳಾದರೆ ತಾನು ನೇಣಿಗೇರಲು ಸಿದ್ಧನಿದ್ದೇನೆ. ಆದರೆ, ಒಂದು ವೇಳೆ ದೂರು ಸಾಬೀತಾದರೆ, ನೀವು ರಾಜೀನಾಮೆ ನೀಡುತ್ತೀರಾ? ರಾಜಕೀಯದಿಂದ ನಿವೃತ್ತಿ ಹೊಂದುವಿರಾ ಎಂದು ಪ್ರಶ್ನೆ ಹಾಕಿದ್ದಾನೆ. ಇದನ್ನೂ ಓದಿ: ಜಾಕ್ವೆಲಿನ್‌ಗೆ ಕಿಸ್ ಮಾಡುತ್ತಿರುವ ಸುಕೇಶ್ ಚಂದ್ರಶೇಖರ್ – ರೋಮ್ಯಾಂಟಿಕ್ ಫೋಟೋ ವೈರಲ್

    ಗೋವಾ ಮತ್ತು ಪಂಜಾಬ್ ಚುನಾವಣೆಗಾಗಿ ಸತ್ಯೇಂದರ್ ಜೈನ್ ನನ್ನ ಬಳಿ ಹಣ ಕೇಳಿದರು. ಜೈಲಿನ ಸಿಬ್ಬಂದಿ ಮೂಲಕ ನಿರಂತರ ಒತ್ತಡ, ಬೆದರಿಕೆಗಳಿತ್ತು. ಪಂಜಾಬ್ ಮತ್ತು ಗೋವಾ ಚುನಾವಣೆಯ ಸಂದರ್ಭದಲ್ಲಿ ನಾನು ತನಿಖೆಗೆ ಒಳಪಡುತ್ತಿದ್ದರೂ ಧೈರ್ಯದಿಂದ ಹಣ ನೀಡುವಂತೆ ಜೈನ್ ನನ್ನನ್ನು ಕೇಳಿದರು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾನೆ. ಈ ಆರೋಪವನ್ನು ಎಎಪಿ ತಿರಸ್ಕರಿಸಿದ್ದು, ಸುಳ್ಳು ಹೇಳುತ್ತಿದ್ದಾನೆ ಎಂದು ಪ್ರತ್ಯಾರೋಪ ಮಾಡಿದೆ.

    Live Tv
    [brid partner=56869869 player=32851 video=960834 autoplay=true]

  • ಅಕ್ರಮ ಹಣ ವರ್ಗಾವಣೆ ಪ್ರಕರಣ – ಸತ್ಯೇಂದ್ರ ಜೈನ್ ಪತ್ನಿಗೆ ಜಾಮೀನು ಮಂಜೂರು

    ಅಕ್ರಮ ಹಣ ವರ್ಗಾವಣೆ ಪ್ರಕರಣ – ಸತ್ಯೇಂದ್ರ ಜೈನ್ ಪತ್ನಿಗೆ ಜಾಮೀನು ಮಂಜೂರು

    ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರ ಪತ್ನಿ ಪೂನಂ ಜೈನ್ ಅವರಿಗೆ ರೋಸ್ ಅವೆನ್ಯೂ ಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ.

    ಈ ನಡುವೆ ಸತ್ಯೇಂದರ್ ಜೈನ್ ಅವರು ಹೊಸ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದು, ಇದರಲ್ಲಿ ಶನಿವಾರ ನ್ಯಾಯಾಲಯವು ಭಾಗಶಃ ವಾದಗಳನ್ನು ಆಲಿಸಿದೆ. ಅವರ ಜಾಮೀನು ಅರ್ಜಿಯನ್ನು ಆಗಸ್ಟ್ 27 ರಂದು ನ್ಯಾಯಾಲಯ ಪರಿಶೀಲಿಸಲಿದೆ. ಸಹ ಆರೋಪಿಗಳಾದ ಅಂಕುಶ್ ಮತ್ತು ವೈಭವ್ ಜೈನ್ ಅವರ ಜಾಮೀನು ಅರ್ಜಿಗಳ ವಿಚಾರಣೆಯೂ ಆಗಸ್ಟ್ 27 ರಂದು ನಡೆಯಲಿದೆ. ಇದನ್ನೂ ಓದಿ: ಪಾಕ್ ಮೇಲೆ ಬ್ರಹ್ಮೋಸ್ ಕ್ಷಿಪಣಿ ಉಡಾವಣೆ – ವಾಯುಪಡೆಯ ಮೂವರು ಅಧಿಕಾರಿಗಳು ವಜಾ

    ಪೂನಂ ಜೈನ್, ಸುನೀಲ್ ಕುಮಾರ್ ಜೈನ್ ಮತ್ತು ಅಜಿತ್ ಕುಮಾರ್ ಜೈನ್ ಅವರನ್ನು ತನಿಖೆಯ ಸಮಯದಲ್ಲಿ ಬಂಧಿಸಲಾಗಿಲ್ಲ ಹಾಗೂ ಈಗಾಗಲೇ ಜಾರಿ ನಿರ್ದೇಶನಾಲಯ(ಇಡಿ) ಆರೋಪಪಟ್ಟಿ ಸಲ್ಲಿಸಿದೆ ಎಂದು ಆಗಸ್ಟ್ 6 ರಂದು ನ್ಯಾಯಾಲಯ ಪೂನಂ ಜೈನ್‌ಗೆ ಮಧ್ಯಂತರ ಜಾಮೀನು ನೀಡಿತ್ತು. ಇದನ್ನೂ ಓದಿ: ರಾಹುಲ್‌ ಗಾಂಧಿಯನ್ನು ಬಲವಂತವಾಗಿ ಕಾಂಗ್ರೆಸ್‌ ಅಧ್ಯಕ್ಷರನ್ನಾಗಿ ಮಾಡಲು ಸಾಧ್ಯವಿಲ್ಲ: ದಿಗ್ವಿಜಯ ಸಿಂಗ್‌

    4 ಖಾಸಗಿ ಸಂಸ್ಥೆಗಳು ಹಾಗೂ ದೆಹಲಿ ಕ್ಯಾಬಿನೆಟ್ ಸಚಿವ ಸತ್ಯೇಂದ್ರ ಜೈನ್ ಸೇರಿದಂತೆ ಒಟ್ಟು 10 ಜನರು ಅಕ್ರಮ ಹಣ ವರ್ಗಾವಣೆ ಕೇಸ್‌ನಲ್ಲಿ ಆರೋಪಿಗಳಾಗಿದ್ದಾರೆ. ಸತ್ಯೇಂದ್ರ ಜೈನ್, ಅಂಕುಶ್ ಜೈನ್ ಹಾಗೂ ವೈಭವ್ ಜೈನ್ ಅವರನ್ನು ಇಡಿ ಬಂಧಿಸಿದ್ದು, ಪ್ರಸ್ತುತ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ಗಿಲ್ಲ ರಿಲೀಫ್ – ಜಾಮೀನು ಅರ್ಜಿ ವಜಾ

    ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ಗಿಲ್ಲ ರಿಲೀಫ್ – ಜಾಮೀನು ಅರ್ಜಿ ವಜಾ

    ನವದೆಹಲಿ: ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಇಡಿಯಿಂದ ಬಂಧನಕ್ಕೆ ಒಳಗಾಗಿರುವ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ಗೆ ಜಾಮೀನು ನೀಡಲು ಸಿಬಿಐ ವಿಶೇಷ ನ್ಯಾಯಾಲಯ ನಿರಾಕರಿಸಿದೆ.

    ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಗೀತಾಂಜಲಿ ಗೋಯೆಲ್ ಜಾಮೀನು ಅರ್ಜಿ ವಜಾಗೊಳಿಸಿದ್ದಾರೆ. ಇದನ್ನೂ ಓದಿ: ದಾವೂದ್ ಇಬ್ರಾಹಿಂ ಸಹೋದರನ ಕಡೆಯಿಂದ ಸಾಧ್ವಿ ಪ್ರಜ್ಞಾ ಠಾಕೂರ್‌ಗೆ ಕೊಲೆ ಬೆದರಿಕೆ 

    ಮೇ 30 ರಂದು ಇಡಿಯಿಂದ ಬಂಧನಕ್ಕೊಳಗಾಗಿದ್ದ ಸತ್ಯೇಂದ್ರ ಜೈನ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಗೀತಾಂಜಲಿ ಗೋಯೆಲ್ ಆದೇಶ ಕಾಯ್ದಿರಿಸಿದ್ದರು.

    ಭ್ರಷ್ಟಾಚಾರ ತಡೆ ಕಾಯ್ದೆಯಡಿ 2017ರ ಆಗಸ್ಟ್‌ನಲ್ಲಿ ಸಿಬಿಐ ದಾಖಲಿಸಿದ್ದ ಪ್ರಕರಣದ ಆಧಾರದ ಮೇಲೆ ಜಾರಿ ನಿರ್ದೇಶನಾಲಯವು (ED) ಇಸಿಐಆರ್ ದಾಖಲಿಸಿಕೊಂಡು, ವಿಚಾರಣೆಗೆ ಸಮನ್ಸ್ ನೀಡಿತ್ತು. ಮೇ 30 ರಂದು ಜೈನ್ ಅವರನ್ನು ವಶಕ್ಕೆ ಪಡೆದುಕೊಂಡಿತ್ತು. ಜೂನ್ 13ರ ಬಳಿಕ ಅವರು ನ್ಯಾಯಂಗ ಬಂಧನದಲ್ಲಿದ್ದಾರೆ. ಇದನ್ನೂ ಓದಿ: ಗುರುದ್ವಾರದ ಮೇಲೆ ಭಯೋತ್ಪಾದಕರಿಂದ ಗುಂಡಿನ ದಾಳಿ – ಭದ್ರತಾ ಸಿಬ್ಬಂದಿ ಸಾವು 

    ವಿಚಾರಣೆ ವೇಳೆ ಸತ್ಯೇಂದ್ರ ಜೈನ್, ಕನಿಷ್ಠ ನಾಲ್ಕು ಕಂಪನಿಗಳ ಮೂಲಕ ಹಣ ಲಪಟಾಯಿಸಿದ್ದಾರೆ. ಅಕ್ರಮ ಹಣ ವರ್ಗಾವಣೆಯಲ್ಲಿ ಸಚಿವರು ಭಾಗಿಯಾಗಿದ್ದಾರೆ. ಅವರ ಬಂಧನ ಬಳಿಕವೂ ಹಲವು ದಾಳಿ ನಡೆಸಿದ್ದು ಆಪ್ತರ ಮನೆಯಲ್ಲಿ ಹಲವು ಮಹತ್ವದ ದಾಖಲೆಗಳು ಲಭ್ಯವಾಗಿದ್ದು ಇವುಗಳ ತನಿಖೆ ಮಾಡಬೇಕಿದೆ. ಆದರೆ ಆರೋಪಿ ತನಿಖೆಗೆ ಸಹಕಾರ ನೀಡುತ್ತಿಲ್ಲ, ಪ್ರಭಾವಿಯಾಗಿರುವ ಹಿನ್ನಲೆ ಸಾಕ್ಷ್ಯ ನಾಶ ಸಾಧ್ಯತೆಗಳಿವೆ ಎಂದು ಇಡಿ ವಾದಿಸಿತ್ತು.

    ನಿದ್ರೆಯಲ್ಲಿ ಉಸಿರುಗಟ್ಟುವ ಕಾಯಿಲೆಯಿದೆ: ಸತ್ಯೇಂದ್ರ ಜೈನ್ ಪರ ವಾದ ಮಂಡಿಸಿದ್ದ ವಕೀಲ ಹರಿಹರನ್, ಈವರೆಗೂ ಜೈನ್ ತನಿಖೆಗೆ ಸಹಕರಿಸಿದ್ದಾರೆ, ಮುಂದೆಯೂ ಸಹಕಾರ ನೀಡಲಿದ್ದಾರೆ. ಈಗಾಗಲೇ ಎಲ್ಲ ಹೇಳಿಕೆಯನ್ನು ನೀಡಿರುವ ಹಿನ್ನೆಲೆ ಸಾಕ್ಷ್ಯದ ಮೇಲೆ ಪ್ರಭಾವ ಬೀರಲು ಸಾಧ್ಯವಿಲ್ಲ. ಜೈನ್‌ಗೆ ನಿದ್ದೆಯಲ್ಲಿ ಉಸಿರುಗಟ್ಟುವ ಸಮಸ್ಯೆ ಇದ್ದು ಆರೋಗ್ಯ ಕಾರಣಗಳಿಂದ ಜಾಮೀನು ನೀಡಬೇಕು ಒಂದು ಮನವಿ ಮಾಡಿದ್ದರು.

    Live Tv