Tag: Satyendar Jain

  • ಸತ್ಯೇಂದ್ರ ಜೈನ್ ಸಹಚರರ ಮನೆ ಮೇಲೆ ಇಡಿ ದಾಳಿ – ನೋಟಿನ ಕಂತೆಗಳನ್ನೇ ಬಳಸಿ `ED’ ವಿನ್ಯಾಸ

    ಸತ್ಯೇಂದ್ರ ಜೈನ್ ಸಹಚರರ ಮನೆ ಮೇಲೆ ಇಡಿ ದಾಳಿ – ನೋಟಿನ ಕಂತೆಗಳನ್ನೇ ಬಳಸಿ `ED’ ವಿನ್ಯಾಸ

    ನವದೆಹಲಿ: ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರ ಪತ್ನಿ ಪೂನಂ ಜೈನ್ ಹಾಗೂ ಸಹಚರರ ಮನೆಗಳಲ್ಲಿ ಜಾರಿ ನಿರ್ದೇಶನಾಲಯ(ಇಡಿ) ಮಂಗಳವಾರ ಶೋಧ ಕಾರ್ಯ ನಡೆಸಿ, 2.85 ಕೋಟಿ ರೂ. ನಗದು ಹಾಗೂ 1.8 ಕೆಜಿಯಷ್ಟು ಚಿನ್ನವನ್ನು ವಶಪಡಿಸಿಕೊಂಡಿದೆ.

    ಸತ್ಯೇಂದ್ರ ಜೈನ್ ತಮ್ಮ ಪತ್ನಿ, ಪುತ್ರಿಯರು, ಸ್ನೇಹಿತರು ಹಾಗೂ ಸಹಚರರ ಸಹಾಯದಿಂದ 16 ಕೋಟಿ ರೂ. ಅಕ್ರಮ ಹಣ ವರ್ಗಾವಣೆ ಮಾಡಿರುವ ಆರೋಪ ಹೊತ್ತಿದ್ದಾರೆ. ಮೇ 20 ರಂದು ಸತ್ಯೇಂದ್ರ ಜೈನ್ ಅವರನ್ನು ಇಡಿ ಬಂಧಿಸಿತ್ತು. ಪ್ರಸ್ತುತ ಸತ್ಯೇಂದ್ರ ಜೈನ್ ಇಡಿ ವಶದಲ್ಲಿದ್ದಾರೆ. ಇದನ್ನೂ ಓದಿ: ಮೇಕೆದಾಟು ಅಣೆಕಟ್ಟು ನಿರ್ಮಾಣ ವಿಚಾರ – ತಮಿಳುನಾಡಿನಿಂದ ಹೊಸ ತಕರಾರು

    ಶೋಧ ಕಾರ್ಯದ ವೇಳೆ ಸಿಕ್ಕಿರುವ 500 ಹಾಗೂ 2,000 ರೂ. ಮುಖಬೆಲೆಯ ಕಂತೆ ಕಂತೆ ನೋಟುಗಳನ್ನು ಜೋಡಿಸಿ `ಇಡಿ’ ಎಂದು ವಿನ್ಯಾಸಗೊಳಿಸಲಾಗಿದೆ. ನೋಟಿನ ಕಂತೆಗಳಿಂದಲೇ ಇಡಿ ಎಂದು ವಿನ್ಯಾಸಗೊಳಿಸಿ ತೆಗೆದಿರುವ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

    2015 ಫೆಬ್ರವರಿಯಿಂದ 2017ರ ಮೇ ತಿಂಗಳಿನ ವರೆಗೆ ದೆಹಲಿ ಸರ್ಕಾರದ ಸಚಿವರಾಗಿದ್ದ ಸತ್ಯೇಂದ್ರ ಜೈನ್ ಅಕ್ರಮ ಆಸ್ತಿ ಗಳಿಸಿದ್ದಾರೆ ಎಂದು ಸಿಬಿಐ ಆರೋಪಿಸಿ, 2018ರಲ್ಲಿ ಪ್ರಕರಣ ದಾಖಲಿಸಿತ್ತು. ಇದೀಗ ಇಡಿ, ಸಿಬಿಐ ದಾಖಲಿಸಿರುವ ಎಫ್‌ಐಆರ್ ಆಧಾರದ ಮೇಲೆ ಐಪಿಸಿ ಸೆಕ್ಷನ್ 109 ಹಾಗೂ ಸೆಕ್ಷನ್ 13(2)ರ ಅಡಿ ತನಿಖೆ ನಡೆಸುತ್ತಿದೆ. ಇದನ್ನೂ ಓದಿ: ಆಮ್ ಆದ್ಮಿ ಪಾರ್ಟಿ ಸೇರಿಕೊಂಡ ‘ಮುಖ್ಯಮಂತ್ರಿ’

  • ದೆಹಲಿ ಸಚಿವ ಸತ್ಯೇಂದ್ರ ಜೈನ್‌ ನಿವಾಸದ ಮೇಲೆ ಇಡಿ ದಾಳಿ

    ದೆಹಲಿ ಸಚಿವ ಸತ್ಯೇಂದ್ರ ಜೈನ್‌ ನಿವಾಸದ ಮೇಲೆ ಇಡಿ ದಾಳಿ

    ನವದೆಹಲಿ: ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ದಾಳಿ ಮಾಡಿದೆ.

    ಕೋಲ್ಕತ್ತಾ ಮೂಲದ ಕಂಪನಿಗೆ ಸಂಬಂಧಿಸಿದಂತೆ ಹವಾಲಾ ವಹಿವಾಟು ನಡೆಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ.  ಇದನ್ನೂ ಓದಿ: ಕಲುಷಿತ ನೀರಿಗೆ ಮೂರನೇ ಬಲಿ – ರಾಯಚೂರು ಬಂದ್‌ಗೆ ಕರೆ

    ಮೇ 30 ರಂದು ಸತ್ಯೇಂದ್ರ ಜೈನ್‌ ಅವರನ್ನು ಬಂಧಿಸಿದ ಇಡಿ ಜೂನ್ 9ರ ವರೆಗೆ ಕಸ್ಟಡಿಗೆ ಪಡೆದುಕೊಂಡಿದೆ. ಏಪ್ರಿಲ್ ತಿಂಗಳಲ್ಲಿ ಸತ್ಯೇಂದ್ರ ಜೈನ್ ಕುಟುಂಬದ ಒಡೆತನದಲ್ಲಿರುವ 4.81 ಕೋಟಿ ರೂ. ಮೌಲ್ಯದ 5 ಸಂಸ್ಥೆಗಳಿಗೆ ಸೇರಿದ ಸ್ಥಿರಾಸ್ತಿಯನ್ನು ಇಡಿ ಜಪ್ತಿ ಮಾಡಿತ್ತು.

    4 ವರ್ಷಗಳ ಹಿಂದೆ 2018ರಲ್ಲಿ ಇಡಿ ಸತ್ಯೇಂದ್ರ ಜೈನ್‌ರನ್ನು ವಿಚಾರಣೆಗೆ ಒಳಪಡಿಸಿತ್ತು. ಆ ಬಳಿಕ ಇದೀಗ ಐಪಿಸಿ ಸೆಕ್ಷನ್ 109 ಮತ್ತು ಸೆಕ್ಷನ್ 13(2)ರ ಅಡಿ ಸತ್ಯೇಂದ್ರ ಜೈನ್ ಮತ್ತು ಇತರರ ವಿರುದ್ಧ ಸಿಬಿಐ ದಾಖಲಿಸಿರುವ ಎಫ್‌ಐಆರ್ ಆಧಾರದ ಮೇಲೆ ಇಡಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿದೆ.

  • ಜೂನ್ 9ರ ವರೆಗೆ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ED ಕಸ್ಟಡಿಗೆ

    ಜೂನ್ 9ರ ವರೆಗೆ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ED ಕಸ್ಟಡಿಗೆ

    ನವದೆಹಲಿ: ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಅರೆಸ್ಟ್ ಆಗಿದ್ದ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ನನ್ನು ಜಾರಿ ನಿರ್ದೇಶನಾಲಯವು ಜೂನ್ 9ರ ವರೆಗೆ ಕಸ್ಟಡಿಗೆ ಪಡೆದುಕೊಂಡಿದೆ.

    ಜೈನ್ ಅವರನ್ನು ರೋಸ್ ರೆವೆನ್ಯೂ ನ್ಯಾಯಾಲಯಕ್ಕೆ ಮಂಗಳವಾರ ಹಾಜರುಪಡಿಸಲಾಗಿತ್ತು. ಜೈನ್ ಪರವಾಗಿ ಹಿರಿಯ ವಕೀಲ ಎನ್.ಹರಿಹರನ್ ಅವರು ವಾದ ಮಂಡಿಸಿದರು. ಕೇಂದ್ರೀಯ ಸಂಸ್ಥೆಯ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು. ಇದನ್ನೂ ಓದಿ: ಕರ್ನಾಟದಲ್ಲಿದ್ದಿದ್ದರೆ ನಿಮ್ಮ ಸಂತೋಷದಲ್ಲಿ ನಾನೂ ಭಾಗಿಯಾಗ್ತಿದ್ದೆ: ಮೋದಿ

    ಹಿನ್ನೆಲೆ ಏನು?: ಏಪ್ರಿಲ್ ತಿಂಗಳಲ್ಲಿ ಸತ್ಯೇಂದ್ರ ಜೈನ್ ಕುಟುಂಬದ ಒಡೆತನದಲ್ಲಿರುವ 4.81 ಕೋಟಿ ರೂ. ಮೌಲ್ಯದ 5 ಸಂಸ್ಥೆಗಳಿಗೆ ಸೇರಿದ ಸ್ಥಿರಾಸ್ತಿಯನ್ನು ಇಡಿ ಜಪ್ತಿ ಮಾಡಿತ್ತು. 4 ವರ್ಷಗಳ ಹಿಂದೆ 2018ರಲ್ಲಿ ಇಡಿ ಸತ್ಯೇಂದ್ರ ಜೈನ್‌ರನ್ನು ವಿಚಾರಣೆಗೆ ಒಳಪಡಿಸಿತ್ತು. ಆ ಬಳಿಕ ಇದೀಗ ಐಪಿಸಿ ಸೆಕ್ಷನ್ 109 ಮತ್ತು ಸೆಕ್ಷನ್ 13(2)ರ ಅಡಿ ಸತ್ಯೇಂದ್ರ ಜೈನ್ ಮತ್ತು ಇತರರ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆ (CBI) ದಾಖಲಿಸಿರುವ ಎಫ್‌ಐಆರ್ ಆಧಾರದ ಮೇಲೆ ಇಡಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿದ್ದು, ಇದೀಗ ಸತ್ಯೇಂದ್ರ ಜೈನ್‌ರನ್ನು ಬಂಧಿಸಿದೆ. ಇದನ್ನೂ ಓದಿ: ಶ್ರೀಲಂಕಾದಲ್ಲಿ ಇಂಧನ ಕೊರತೆ – ಪರಿಹಾರಕ್ಕೆ ಸೈಕಲ್ ಸೇವೆ ಅನಾವರಣ

    ಹಿಮಾಚಲ ಪ್ರದೇಶದಲ್ಲಿ ಮುಂಬರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸತ್ಯೇಂದ್ರ ಜೈನ್ ಬಂಧನವಾಗಿದೆ ಎನ್ನಲಾಗಿದೆ. ಇವರು ಹಿಮಾಚಲ ಪ್ರದೇಶದ ಚುನಾವಣೆಯ ಎಎಪಿ ಉಸ್ತುವಾರಿಯಾಗಿದ್ದರು. ಸತ್ಯೇಂದ್ರ ಜೈನ್ ವಿರುದ್ಧ 8 ವರ್ಷಗಳಿಂದ ನಕಲಿ ಕೇಸ್ ಮುಂದುವರಿಯುತ್ತಿತ್ತು. ಇದುವರೆಗೆ ಇಡಿ ಹಲವು ಬಾರಿ ವಿಚಾರಣೆಗೆ ಒಳಪಡಿಸಿ ಕ್ಲೀನ್ ಚಿಟ್ ನೀಡಿತ್ತು. ಇದೀಗ ಮತ್ತೆ ಬಂಧಿಸಿ ಕಸ್ಟಡಿಗೆ ತೆಗೆದುಕೊಂಡಿದೆ.

  • ಅಕ್ರಮ ಹಣ ವರ್ಗಾವಣೆ ಪ್ರಕರಣ – ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅರೆಸ್ಟ್

    ಅಕ್ರಮ ಹಣ ವರ್ಗಾವಣೆ ಪ್ರಕರಣ – ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅರೆಸ್ಟ್

    ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‍ರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ.

    ಏಪ್ರಿಲ್ ತಿಂಗಳಲ್ಲಿ ಸತ್ಯೇಂದ್ರ ಜೈನ್ ಕುಟುಂಬದ ಒಡೆತನದಲ್ಲಿರುವ 4.81 ಕೋಟಿ ರೂ. ಮೌಲ್ಯದ ಐದು ಸಂಸ್ಥೆಗಳಿಗೆ ಸೇರಿದ ಸ್ಥಿರಾಸ್ತಿಯನ್ನು ಇಡಿ ಜಪ್ತಿ ಮಾಡಿತ್ತು. 4 ವರ್ಷಗಳ ಹಿಂದೆ 2018ರಲ್ಲಿ ಇಡಿ ಸತ್ಯೇಂದ್ರ ಜೈನ್‍ರನ್ನು ವಿಚಾರಣೆಗೆ ಒಳಪಡಿಸಿತ್ತು. ಆ ಬಳಿಕ ಇದೀಗ ಐಪಿಸಿ ಸೆಕ್ಷನ್ 109 ಮತ್ತು ಸೆಕ್ಷನ್ 13(2)ರ ಅಡಿ ಸತ್ಯೇಂದ್ರ ಜೈನ್ ಮತ್ತು ಇತರರ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ದಾಖಲಿಸಿರುವ ಎಫ್‍ಐಆರ್ ಆಧಾರದ ಮೇಲೆ ಇಡಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿದ್ದು, ಇದೀಗ ಸತ್ಯೇಂದ್ರ ಜೈನ್‍ರನ್ನು ಬಂಧಿಸಿದೆ. ಇದನ್ನೂ ಓದಿ: ಯತ್ನಾಳ್‍ರಂತೆ ನನಗೂ ಸಚಿವರನ್ನಾಗಿ ಮಾಡ್ತೀವಿ ಎಂದು ಹಣ ಕೇಳಿದ್ರು: ರೇಣುಕಾಚಾರ್ಯ ಬಾಂಬ್

    ಸತ್ಯೇಂದ್ರ ಜೈನ್ ಬಂಧನದ ಬಳಿಕ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಇಡಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಟ್ವಿಟ್ಟರ್ ಮೂಲಕ ಹರಿಹಾಯ್ದಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಮುಂಬರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸತ್ಯೇಂದ್ರ ಜೈನ್ ಬಂಧನವಾಗಿದೆ. ಇವರು ಹಿಮಾಚಲ ಪ್ರದೇಶದ ಚುನಾವಣೆಯ ಎಎಪಿ ಉಸ್ತುವಾರಿಯಾಗಿದ್ದಾರೆ. ಸತ್ಯೇಂದ್ರ ಜೈನ್ ವಿರುದ್ಧ ಎಂಟು ವರ್ಷಗಳಿಂದ ನಕಲಿ ಕೇಸ್ ಮುಂದುವರಿಯುತ್ತಿದೆ. ಇದುವರೆಗೆ ಇಡಿ ಹಲವು ಬಾರಿ ವಿಚಾರಣೆಗೆ ಒಳಪಡಿಸಿ ಕ್ಲೀನ್ ಚಿಟ್ ನೀಡಿದೆ. ಆದರೂ ಇದೀಗ ಬಂಧಿಸಲಾಗಿದೆ. ಇದನ್ನೂ ಓದಿ: ಖಾದರ್ ಸರಿಯಾಗಿ ಪ್ರತಿಕ್ರಿಯಿಸುತ್ತಿಲ್ಲ, ಅಡ್ಯಾರ್‌ಗೆ ಹೋಗಿ ಕ್ರಿಕೆಟ್ ಆಡ್ತಿದ್ದಾರೆ- ಹಿಜಬ್ ವಿದ್ಯಾರ್ಥಿನಿ ಅಸಮಾಧಾನ

    ಹಿಮಾಚಲ ಪ್ರದೇಶದಲ್ಲಿ ನಡೆಯಲಿರುವ ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲುತ್ತದೆ. ಎಎಪಿ ಅಲ್ಲೂ ಕೂಡ ಗೆಲುವು ದಾಖಲಿಸುತ್ತದೆ. ಅದಕ್ಕಾಗಿಯೇ ಸತ್ಯೇಂದ್ರ ಜೈನ್ ಅವರನ್ನು ಹಿಮಾಚಲ ಪ್ರದೇಶಕ್ಕೆ ಹೋಗದಂತೆ ತಡೆಯಲು ಬಂಧಿಸಲಾಗಿದೆ. ಇದು ಬಿಜೆಪಿಯ ಪಿತೂರಿ ಕೆಲವೇ ದಿನಗಳಲ್ಲಿ ಅವರನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

  • ಕೊರೊನಾನಿಂದ ದೆಹಲಿ ಆರೋಗ್ಯ ಸಚಿವರ ಪರಿಸ್ಥಿತಿ ಗಂಭೀರ- ಪ್ಲಾಸ್ಮಾ ಥೆರಪಿಗೆ ನಿರ್ಧಾರ

    ಕೊರೊನಾನಿಂದ ದೆಹಲಿ ಆರೋಗ್ಯ ಸಚಿವರ ಪರಿಸ್ಥಿತಿ ಗಂಭೀರ- ಪ್ಲಾಸ್ಮಾ ಥೆರಪಿಗೆ ನಿರ್ಧಾರ

    ನವದೆಹಲಿ: ಕೊರೊನಾ ವೈರಸ್ ಸೋಂಕಿನಿಂದ ಬಳಲುತ್ತಿರುವ ದೆಹಲಿಯ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದು ಪ್ಲಾಸ್ಮ ಥೆರಪಿ ಮಾಡಲು ನಿರ್ಧರಿಸಲಾಗಿದೆ.

    ದೆಹಲಿ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸತ್ಯೇಂದರ್ ಜೈನ್ ಅವರ ಶ್ವಾಸಕೋಶದಲ್ಲಿ ಸೋಂಕಿನ ಪ್ರಮಾಣ ಏರಿಕೆ ಕಂಡಿದೆ. ಹೀಗಾಗಿ ಇಂದು ತೀವ್ರ ಉಸಿರಾಟದ ಸಮಸ್ಯೆ ಎದುರಾಗಿತ್ತು. ಈ ಹಿನ್ನೆಲೆ ವೆಂಟಿಲೇಟರ್ ಸಹಾಯದಿಂದ ಚಿಕಿತ್ಸೆ ಮುಂದುವರಿಸಲಾಗಿತ್ತು.

    ಕುಟುಂಬಸ್ಥರ ಒಪ್ಪಿಗೆ ಬಳಿಕ ಅವರಿಗೆ ಪ್ಲಾಸ್ಮಾ ಥೆರಪಿ ನೀಡಲು ನಿರ್ಧರಿಸಲಾಗಿದೆ. ಸದ್ಯ ಸತ್ಯೇಂದರ್ ಜೈನ್ ಅವರನ್ನು ಸಾಕೇತ್‍ನಲ್ಲಿರುವ ಮ್ಯಾಕ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ನಾಳೆ ಅಥವಾ ಮಾಡಿದ್ದು ಪ್ಲಾಸ್ಮಾ ಥೆರಪಿ ನಡೆಸುವ ಸಾಧ್ಯತೆ ಇದೆ.

    ಸತ್ಯೇಂದರ್ ಜೈನ್ ಆರಂಭದಲ್ಲಿ ತೀವ್ರ ಜ್ವರ ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಮೊದಲು ಕೊರೊನಾ ಪರೀಕ್ಷೆ ನಡೆಸಿದಾಗ ನೆಗೆಟಿವ್ ವರದಿ ಬಂದಿತ್ತು. ಬಳಿಕ ಮತ್ತೊಮ್ಮೆ ಪರೀಕ್ಷೆ ನಡೆಸಿದಾದ ಪಾಸಿಟಿವ್ ವರದಿ ಬಂದಿತ್ತು. ಅವರು ಬಹುಬೇಗ ಗುಣಮುಖರಾಗಲಿ ಎಂದು ಗೃಹ ಸಚಿವ ಅಮಿತ್ ಶಾ, ದೆಹಲಿ ಲೆಫ್ಟಿನೆಂಟ್ ಅನೀಲ್ ಬೈಜಾಲ್ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾರೈಸಿದ್ದಾರೆ.