Tag: Satyendra Jain

  • ಸತ್ಯೇಂದ್ರ ಜೈನ್ ಜಾಮೀನು ಅರ್ಜಿ ವಜಾ – ಕೂಡಲೇ ಜೈಲಾಧಿಕಾರಿಗಳ ಮುಂದೆ ಹಾಜರಾಗುವಂತೆ ಸುಪ್ರೀಂ ಆದೇಶ

    ಸತ್ಯೇಂದ್ರ ಜೈನ್ ಜಾಮೀನು ಅರ್ಜಿ ವಜಾ – ಕೂಡಲೇ ಜೈಲಾಧಿಕಾರಿಗಳ ಮುಂದೆ ಹಾಜರಾಗುವಂತೆ ಸುಪ್ರೀಂ ಆದೇಶ

    ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ (ಪಿಎಂಎಲ್‌ಎ) ಬಂಧನಕ್ಕೊಳಪಟ್ಟಿರುವ ದೆಹಲಿಯ (Delhi) ಮಾಜಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ಗೆ (Satyendra Jain) ಜಾಮೀನು (Bail) ನೀಡಲು ಸುಪ್ರೀಂಕೋರ್ಟ್ (Supreme Court) ನಿರಾಕರಿಸಿದೆ‌. ಈ ಕೂಡಲೇ ಅವರು ಜೈಲು ಅಧಿಕಾರಿಗಳ ಮುಂದೆ ಹಾಜರಾಗುವಂತೆ ನ್ಯಾ.ಬೇಲಾ ಎಂ ತ್ರಿವೇದಿ ನೇತೃತ್ವದ ಪೀಠ ಆದೇಶಿಸಿದೆ.

    ವೈದ್ಯಕೀಯ ಕಾರಣಗಳಿಗೆ ಜಾಮೀನಿನ ಮೇಲೆ ಹೊರಗಿರುವ ಸತ್ಯೇಂದ್ರ ಜೈನ್ ಸಾಮಾನ್ಯ ಜಾಮೀನು ಕೋರಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಪೀಠ ಎಲ್ಲ ಮೇಲ್ಮನವಿ ಅರ್ಜಿಗಳನ್ನು ವಜಾಗೊಳಿಸಿತು‌.

     

    ಸತ್ಯಂದ್ರ ಜೈನ್ ಅವರನ್ನು 2022 ಮೇ ನಲ್ಲಿ ಜಾರಿ ನಿರ್ದೇಶನಾಲಯ (Enforcement Directorate) ಬಂಧಿಸಿತು. ಒಂದು ವರ್ಷದ ಸುದೀರ್ಘ ಜೈಲಿನಲ್ಲಿದ್ದ‌ ಬಳಿಕ ವೈದ್ಯಕೀಯ ಕಾರಣಗಳ ಹಿನ್ನಲೆ ಸುಪ್ರೀಂಕೋರ್ಟ್ ಮೇ 2023 ರಲ್ಲಿ ಮಧ್ಯಂತರ ಜಾಮೀನು ನೀಡಿತ್ತು. ಸದ್ಯ ಅವರು ಜೈಲಿನಿಂದ ಹೊರಗಿದ್ದು ಚಿಕಿತ್ಸೆ ಪಡೆಯುತ್ತಿದ್ದರು.

    ಕೇಂದ್ರೀಯ ತನಿಖಾ ದಳ (CBI) ಆರಂಭದಲ್ಲಿ ಜೈನ್ ವಿರುದ್ಧ ಭ್ರಷ್ಟಾಚಾರ ತಡೆ ಕಾಯಿದೆ, 1988 ರ 13 (ಇ) (ಅಪಮಾನದ ಆಸ್ತಿ) ಸೆಕ್ಷನ್ 13(2) (ಸಾರ್ವಜನಿಕ ಸೇವಕರಿಂದ ಕ್ರಿಮಿನಲ್ ದುಷ್ಕೃತ್ಯ) ಅಡಿಯಲ್ಲಿ ಪ್ರಕರಣ ದಾಖಲಿಸಿತ್ತು. ಜೈನ್ ಅವರು 2015 ಮತ್ತು 2017 ರ ನಡುವೆ ವಿವಿಧ ವ್ಯಕ್ತಿಗಳ ಹೆಸರಿನಲ್ಲಿ ಚರ ಆಸ್ತಿಗಳನ್ನು ಸಂಪಾದಿಸಿದ್ದಾರೆ ಈ ಬಗ್ಗೆ ಅವರು ತೃಪ್ತಿಕರವಾಗಿ ಲೆಕ್ಕ ನೀಡಿಲ್ಲ ಎಂದು ಆರೋಪಿಸಲಾಗಿತ್ತು.  ಇದನ್ನೂ ಓದಿ: ಕಲ್ಲೆಸೆತಕ್ಕೆ ಸುದ್ದಿಯಾಗಿದ್ದ ಕಾಶ್ಮೀರದಲ್ಲಿ ಫಸ್ಟ್‌ ಟೈಂ ಫಾರ್ಮುಲಾ 4 ರೇಸ್‌ – ಮೋದಿ ಮೆಚ್ಚುಗೆ

    ಇದಾದ ಬಳಿಕ ಇಡಿ ಲಾಭದಾಯಕ ಒಡೆತನದ ಹಲವಾರು ಕಂಪನಿಗಳ ಮೂಲಕ ಹವಾಲಾ ಮಾರ್ಗವಾಗಿ ಅಕ್ರಮ ಹಣ ವರ್ಗಾವಣೆ ಮಾಡಿದ್ದಾರೆ. ಶೆಲ್ ಕಂಪನಿಗಳಿಂದ 4.81 ಕೋಟಿ ರೂ. ಮೊತ್ತದ ವಸತಿ ನಮೂದುಗಳನ್ನು ಪಡೆದಿವೆ ಎಂದು ಆರೋಪಿಸಿ ಅವರನ್ನು ಬಂಧಿಸಿತು. ವಿಚಾರಣಾ ನ್ಯಾಯಾಲಯವು ನವೆಂಬರ್ 17, 2022 ರಂದು ಅವರ ಇಡಿ ಪ್ರಕರಣದ ಜಾಮೀನು ಅರ್ಜಿಯನ್ನು ತಿರಸ್ಕರಿಸಿತು. ಇದನ್ನೂ ಓದಿ: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ 16 ಚಕ್ರದ ಲಾರಿ – ಕಿ.ಮೀಗಟ್ಟಲೆ ಟ್ರಾಫಿಕ್‌ ಜಾಮ್‌

    ಈ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಯಿತು. ವಿಚಾರಣೆ ನಡೆಸಿದ ಕೋರ್ಟ್ ಜೈನ್ ಒಬ್ಬ ಪ್ರಭಾವಿ ವ್ಯಕ್ತಿ ಮತ್ತುಅಕ್ರಮ ವರ್ಗಾವಣೆ ತಡೆ ಕಾಯ್ದೆಯ(ಪಿಎಂಎಲ್‌ಎ) ಅಡಿಯಲ್ಲಿ ಜಾಮೀನಿಗೆ ಅವಳಿ ಷರತ್ತುಗಳನ್ನು ಪೂರೈಸಿದ್ದಾರೆ ಎಂದು ಹೇಳಲಾಗುವುದಿಲ್ಲ ಎಂದು ಅರ್ಜಿ ವಜಾ ಮಾಡಿತು. ಈ ಹಿನ್ನಲೆ ಜೈನ್ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.

     

  • ಎಎಪಿ ನಾಯಕ ಸತ್ಯೇಂದ್ರ ಜೈನ್ ಆಸ್ಪತ್ರೆಗೆ ದಾಖಲು

    ಎಎಪಿ ನಾಯಕ ಸತ್ಯೇಂದ್ರ ಜೈನ್ ಆಸ್ಪತ್ರೆಗೆ ದಾಖಲು

    – ಬರೋಬ್ಬರಿ 35 ಕೆ.ಜಿ ತೂಕ ಕಳೆದುಕೊಂಡ ಜೈನ್

    ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿಂತೆ ತಿಹಾರ್ ಜೈಲಿ (Tihar Jail) ನಲ್ಲಿರುವ ಎಎಪಿ ನಾಯಕ ಸತ್ಯೇಂದ್ರ ಜೈನ್ (Satyendra Jain) ಅವರನ್ನು ಇಂದು ದೆಹಲಿಯ ಸಫ್ದರ್‍ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಇಂದು (ಸೋಮವಾರ) ಆರೋಗ್ಯದಲ್ಲಿ ಏರುಪೇರು ಕಂಡ ಹಿನ್ನೆಲೆಯಲ್ಲಿ ಪೊಲೀಸರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಜೈಲಿಗೊಳಗಾದ ಬಳಿಕ ಸತ್ಯೇಂದ್ರ ಜೈನ್ ಅವರು ಸುಮಾರು 35 ಕೆ.ಜಿ ತೂಕ ಇಳಿಸಿಕೊಂಡಿದ್ದಾರೆ. ಈ ಮೂಲಕ ತೀವ್ರ ಅನಾರೋಗ್ಯಕ್ಕೀಡಾಗುತ್ತಿದ್ದಾರೆ ಎಂದು ಅವರ ವಕೀಲರು ತಿಳಿಸಿದ್ದಾರೆ.

    ಜೈಲಿನಲ್ಲಿ ನನಗೆ ಒಂಟಿತನ ಕಾಡುತ್ತಿದೆ. ಹೀಗಾಗಿ ತಾನು ಖಿನ್ನತೆಗೊಳಗಾಗಿರುವುದಾಗಿ ಇತ್ತೀಚೆಗಷ್ಟೇ ಸತ್ಯೇಂದ್ರ ಜೈನ್ ಅವರು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಅವರು ಜೈಲಿನಲ್ಲಿರುವ ಮನೋವೈದ್ಯರನ್ನು ಕೂಡ ಭೇಟಿಯಾಗಿದ್ದರು. ಇದನ್ನೂ ಓದಿ: ಯುವತಿಯ ರಕ್ಷಣೆಗೆ ಪ್ರಯತ್ನ ಪಟ್ಟರೂ ಸಾಧ್ಯವಾಗಲಿಲ್ಲ: ನೀರಿಗೆ ಧುಮುಕಿ ಐವರನ್ನು ರಕ್ಷಿಸಿದ ‘ಪಬ್ಲಿಕ್’ ಹೀರೋ

    ಸತ್ಯೇಂದ್ರ ಜೈನ್ ಇರುವ ಸೆಲ್‍ಗೆ ಇಬ್ಬರು ಕೈದಿಗಳನ್ನು ವರ್ಗಾಯಿಸಿದ್ದಕ್ಕಾಗಿ ತಿಹಾರ್ ಜೈಲಿನ ಆಡಳಿತ ಮಂಡಳಿ ಸೂಪರಿಂಟೆಂಡೆಂಟ್‍ಗೆ ಶೋಕಾಸ್ ನೋಟಿಸ್ ನೀಡಿತ್ತು. ಜೈನ್ ಜೈಲು ಸಂಖ್ಯೆ 7 ರ ಅಧೀಕ್ಷಕರಿಗೆ ಪತ್ರ ಬರೆದ ನಂತರ ಈ ಕ್ರಮ ಕೈಗೊಳ್ಳಲಾಗಿತ್ತು. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮೇ 30ರಂದು ಬಂಧಿತರಾಗಿರುವ ಸತ್ಯೇಂದ್ರ ಜೈನ್‍ಗೆ ತಿಹಾರ್ ಜೈಲಿನಲ್ಲಿ ವಿಐಪಿ ಸೌಕರ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು.

  • ಜೈಲಿನಲ್ಲಿ ಸತ್ಯೇಂದ್ರ ಜೈನ್‍ಗೆ ಮಾಡಿದ್ದು ಮಸಾಜ್ ಅಲ್ಲ, ಫಿಸಿಯೋಥೆರಪಿ – ಬಿಜೆಪಿಗೆ ಕೇಜ್ರಿವಾಲ್ ತಿರುಗೇಟು

    ಜೈಲಿನಲ್ಲಿ ಸತ್ಯೇಂದ್ರ ಜೈನ್‍ಗೆ ಮಾಡಿದ್ದು ಮಸಾಜ್ ಅಲ್ಲ, ಫಿಸಿಯೋಥೆರಪಿ – ಬಿಜೆಪಿಗೆ ಕೇಜ್ರಿವಾಲ್ ತಿರುಗೇಟು

    ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿರುವ ಆಮ್ ಆದ್ಮಿ ಪಕ್ಷದ (Aam Aadmi Party) ಸಚಿವ ಸತ್ಯೇಂದ್ರ ಜೈನ್‍ಗೆ (Satyendar Jain) ತಿಹಾರ್ ಜೈಲಿನಲ್ಲಿ ವಿಐಪಿ ಟ್ರೀಟ್‍ಮೆಂಟ್ ನೀಡಲಾಗುತ್ತಿದೆ ಎಂದು ಇತ್ತೀಚೆಷ್ಟೇ ಬಿಜೆಪಿ ಆರೋಪಿಸಿತ್ತು. ಇದಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು, ಸತ್ಯೇಂದ್ರ ಜೈನ್‍ಗೆ ತಿಹಾರ್ ಜೈಲಿನಲ್ಲಿ ಫಿಸಿಯೋಥೆರಪಿ (Physiotherapy) ಮಾಡಲಾಗುತ್ತಿತ್ತೋ ಹೊರತು ಮಸಾಜ್ ಅಲ್ಲ ಎಂದು ಬಿಜೆಪಿ ಆರೋಪವನ್ನು ತಳ್ಳಿ ಹಾಕಿದ್ದಾರೆ.

    ವಡೋದ್ರಾದಲ್ಲಿ (Vadodra) ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅರವಿಂದ್ ಕೇಜ್ರಿವಾಲ್ ಅವರು, ಬಿಜೆಪಿ ಅವರು ಸತ್ಯೇಂದ್ರ ಜೈನ್ ಅವರಿಗೆ ಜೈಲಿನಲ್ಲಿ ಮಸಾಜ್ ಮತ್ತು ವಿಐಪಿ ಟ್ರೀಟ್‍ಮೆಂಟ್ ನೀಡಲಾಗುತ್ತಿದೆ ಎಂದು ಹೇಳುತ್ತಿದ್ದಾರೆ. ಆದರೆ ಇದು ಮಸಾಜ್ ಅಲ್ಲ ಕೇವಲ ಫಿಸಿಯೋಥೆರಪಿ ಎಂದು ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಭಾರತವನ್ನು ಇಸ್ಲಾಂ ರಾಷ್ಟ್ರ ಮಾಡುವ ಗುರಿ- ಮಂಗಳೂರು ಸ್ಫೋಟಕ್ಕೆ ಬೆಂಗಳೂರು ಲಿಂಕ್

    ಇದೇ ವೇಳೆ ಗುಜರಾತ್‍ನಲ್ಲಿ (Gujrat) ವಿಐಪಿ ಟ್ರೀಟ್‍ಮೆಂಟ್ ಪಡೆದವರು ಗೃಹ ಸಚಿವ ಅಮಿತ್ ಶಾ (Amit Shah) ಎಂದು ಆರೋಪಿಸಿದ ಅವರು, ಅಮಿತ್ ಶಾ ಅವರು ಗುಜರಾತ್‍ನಲ್ಲಿ ಸಚಿವರಾಗಿದ್ದಾಗ ಜೈಲಿನಲ್ಲಿ ವಿಐಪಿ ಟ್ರೀಟ್‍ಮೆಂಟ್ ಪಡೆದರು, ಆದರೆ ಸತ್ಯೇಂದ್ರ ಜೈನ್‍ಗೆ ಅಂತಹದ್ದೇನೂ ಮಾಡಿಲ್ಲ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ತಿಹಾರ್ ಜೈಲಿನಲ್ಲಿ ಸತ್ಯೇಂದ್ರ ಜೈನ್‌ಗೆ ಮಸಾಜ್, ವಿಐಪಿ ಸೌಕರ್ಯ – ವೀಡಿಯೋ ಬಿಡುಗಡೆ

    ಶನಿವಾರ ಸತ್ಯೇಂದ್ರ ಜೈನ್‍ಗೆ ತಿಹಾರ್ ಜೈಲಿನಲ್ಲಿ ವ್ಯಕ್ತಿಯೊಬ್ಬರು ಮಸಾಜ್ ಮಾಡುತ್ತಿರುವ ಹಳೆಯ ವೀಡಿಯೊವನ್ನು ಬಿಜೆಪಿ ಬಿಡುಗಡೆ ಮಾಡಿತ್ತು. ಜೈನ್‍ಗೆ ವಿಐಪಿ ಸೌಕರ್ಯ ನೀಡಿರುವ ಆರೋಪದ ಮೇಲೆ ಕೆಲ ದಿನಗಳ ಹಿಂದೆ ತಿಹಾರ್ ಜೈಲಿನ ಸೂಪರಿಂಟೆಂಡೆಂಟ್ ಅಜಿತ್ ಕುಮಾರ್ ಅವರನ್ನು ಅಮಾನತುಗೊಳಿಸಲಾಗಿತ್ತು.

    Live Tv
    [brid partner=56869869 player=32851 video=960834 autoplay=true]

  • ಕೋವಿಡ್‌ನಿಂದ ಹಳೆಯದೆಲ್ಲಾ ಮರೆತುಹೋಗಿದೆ ಎಂದ ದಿಲ್ಲಿ ಆರೋಗ್ಯ ಸಚಿವ – ಜಾಮೀನು ತೀರ್ಪು ಕಾಯ್ದಿರಿಸಿದ ಕೋರ್ಟ್‌

    ಕೋವಿಡ್‌ನಿಂದ ಹಳೆಯದೆಲ್ಲಾ ಮರೆತುಹೋಗಿದೆ ಎಂದ ದಿಲ್ಲಿ ಆರೋಗ್ಯ ಸಚಿವ – ಜಾಮೀನು ತೀರ್ಪು ಕಾಯ್ದಿರಿಸಿದ ಕೋರ್ಟ್‌

    ನವದೆಹಲಿ: ಕೋವಿಡ್‌ ಪರಿಣಾಮದಿಂದಾಗಿ ಹಳೆಯ ಘಟನೆಗಳೆಲ್ಲ ಮರೆತು ಹೋಗಿದೆ. ನನಗೆ ಸ್ಮರಣೆ ಶಕ್ತಿಯಿಲ್ಲ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ ವಿಚಾರಣೆ ವೇಳೆ ಹೇಳುತ್ತಿದ್ದಾರೆಂದು ವಿಚಾರಣಾ ನ್ಯಾಯಾಲಯಕ್ಕೆ ಜಾರಿ ನಿರ್ದೇಶನಾಲಯ (ಇ.ಡಿ) ಮಾಹಿತಿ ನೀಡಿದೆ.

    ಎಎಪಿ ಸಚಿವರ ಇ.ಡಿ ಬಂಧನವನ್ನು ಜೂನ್ 13ರ ವರೆಗೆ ವಿಸ್ತರಿಸಲಾಗಿತ್ತು. ಜೈನ್‌ಗೆ ಜಾಮೀನು ನೀಡುವ ಸಂಬಂಧದ ವಿಚಾರಣೆಯನ್ನು ಜೂನ್ 14ಕ್ಕೆ ನಿಗದಿಪಡಿಸಲಾಗಿತ್ತು. ನ್ಯಾಯಾಲಯವು ಮಂಗಳವಾರ ಸತ್ಯೇಂದ್ರ ಜೈನ್ ಅವರ ಜಾಮೀನು ಅರ್ಜಿಯನ್ನು ಆಲಿಸಿತು. ಜೈನ್ ಅವರ ಜಾಮೀನು ಅರ್ಜಿಯ ಆದೇಶವನ್ನು ಜೂನ್‌ 18ಕ್ಕೆ ನ್ಯಾಯಾಲಯ ಕಾಯ್ದಿರಿಸಿದೆ. ಇದನ್ನೂ ಓದಿ: ಹಿಂಸಾಚಾರ ಪ್ರತಿಭಟನೆ: ಪೊಲೀಸರಿಂದ ಪರಿಸ್ಥಿತಿ ನಿಯಂತ್ರಿಸಲಾಗದಿದ್ರೆ ಕೇಂದ್ರ ಪಡೆ ಕರೆಸಿ – ಹೈಕೋರ್ಟ್

    ಕಳೆದ ವಾರ ಇ.ಡಿ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಎಸ್‌.ವಿ.ರಾಜು, ಸತ್ಯೇಂದ್ರ ಜೈನ್ ತುಂಬಾ ನಿಧಾನವಾಗಿ ಬರೆಯುತ್ತಾರೆ. ಅವರು ಒಂದು ಪುಟವನ್ನು ಬರೆಯಲು ಸುಮಾರು ಎರಡು ಗಂಟೆಗಳನ್ನು ತೆಗೆದುಕೊಳ್ಳುತ್ತಾರೆ. ಅವರ ಹೇಳಿಕೆಯನ್ನು ಅವರ ಕೈಬರಹದಲ್ಲಿ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಅದು ನನ್ನ ಹೇಳಿಕೆಯಲ್ಲ ಎಂದು ಅವರು ಹೇಳುತ್ತಾರೆ ಎಂದು ವಾದಿಸಿದ್ದರು.

    ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್‌ 6 ಮತ್ತು 7 ರಂದು ಸಚಿವ ಸತ್ಯೇಂದ್ರ ಜೈನ್‌ ಅವರ ನಿವಾಸ ಹಾಗೂ ಅವರಿಗೆ ಸಂಬಂಧಿಸಿದಂತೆ ಇತರೆ ಸ್ಥಳಗಳಲ್ಲಿ ಇ.ಡಿ ದಾಳಿ ನಡೆಸಿತ್ತು. ಮೇ 30 ರಂದು ಜೈನ್‌ ಅವರನ್ನು ಇ.ಡಿ ಬಂಧಿಸಿತ್ತು. ನಂತರ ಮೇ 31 ರಂದು ವಿಚಾರಣಾ ನ್ಯಾಯಾಲಯವು ಜೈನ್‌ ಅವರನ್ನು ಇ.ಡಿ ಕಸ್ಟಡಿಗೆ ವಹಿಸಿತ್ತು. ಇದನ್ನೂ ಓದಿ: ಅಂದು ಜಯಾ ಜೈಲಿಗೆ, ಇಂದು ಸಂಕಷ್ಟದಲ್ಲಿ ಸೋನಿಯಾ, ರಾಹುಲ್‌ – ಇದು ಸ್ವಾಮಿ ದೂರಿನ ಕರಾಮತ್ತು

  • ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್‍ಗೆ ಕೊರೊನಾ ಪಾಸಿಟಿವ್

    ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್‍ಗೆ ಕೊರೊನಾ ಪಾಸಿಟಿವ್

    – ಎಎಪಿ ಶಾಸಕಿ ಅತಿಶಿಗೂ ಸೋಂಕು

    ನವದೆಹಲಿ: ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರಿಗೆ ಇಂದು ಕೋವಿಡ್ 19 ಪಾಸಿಟಿವ್ ಬಂದಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

    ತೀವ್ರ ಜ್ವರದಿಂದ ಬಳಲುತ್ತಿದ್ದ 55 ವರ್ಷದ ಸಚಿವರನ್ನು ಮಂಗಳವಾರ ಮುಂಜಾನೆ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ(ಆರ್‍ಜಿಎಸ್‍ಎಸ್‍ಹೆಚ್)ಗೆ ಕರೆತರಲಾಗಿತ್ತು. ಅಲ್ಲದೆ ನಿನ್ನೆ ಬೆಳಗ್ಗೆ ಕೊರೊನಾ ಟೆಸ್ಟ್ ಮಾಡಲಾಗಿತ್ತು. ಅದರ ವರದಿಯಲ್ಲಿ ಕೊರೊನಾ ನೆಗೆಟಿವ್ ಅಂತ ಬಂದಿತ್ತು.

    ಆದರೆ ಸಚಿವರಿಗೆ ಜ್ವರ ಕಡಿಯಾಗದ ಹಿನ್ನೆಲೆಯಲ್ಲಿ ಮೊದಲ ಟೆಸ್ಟ್ ಆಗಿ 24 ಗಂಟೆಯ ನಂತರ ಇಂದು ಮತ್ತೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರ ವರದಿಯಲ್ಲಿ ಕೊರೊನಾ ಪಾಸಿಟಿವ್ ಎಂದು ಬಂದಿದೆ ಅಂತ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಸಚಿವರ ಆರೋಗ್ಯ ಸ್ಥಿರವಾಗಿದ್ದು, ಆಕ್ಸಿಜನ್ ಸಹಾಯ ನೀಡಲಾಗಿದೆ ಎಂದು ಆರ್‍ಜಿಎಸ್‍ಎಸ್‍ಹೆಚ್ ನ ವೈದ್ಯರು ಹೇಳಿದ್ದಾರೆ.

    ಭಾನುವಾರ ಸತ್ಯೇಂದರ್ ಜೈನ್ ಅವರು ಕೇಂದ್ರ ಸಚಿವ ಅಮಿತ್ ಶಾ, ಆರೋಗ್ಯ ಸಚಿವ ಡಾ. ಹರ್ಷವರ್ಧನ್, ಅರವಿಂದ್ ಕೇಜ್ರಿವಾಲ್ ಹಾಗೂ ಮನಿಶ್ ಸಿಸೋಡಿಯಾರ ಸಭೆಯಲ್ಲಿ ಭಾಗಿಯಾಗಿದ್ದರು. ಈ ಸಭೆಯಲ್ಲಿ ಕೊರೊನಾ ವೈರಸ್ ಬಗ್ಗೆ ಚರ್ಚೆ ನಡೆಸಲಾಗಿತ್ತು. ಆ ಬಳಿಕ ಅಂದರೆ ಸೋಮವಾರ ಜ್ವರ ಹಾಗೂ ಉಸಿರಾಟದ ತೊಂದರೆ ಕಂಡುಬಂದಿದ್ದರಿಂದ ಮುಂಗಳವಾರ ಮುಂಜಾನೆ ಜೈನ್ ಅವರು ದೆಹಲಿಯ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಾದರು.

    ಇತ್ತ ದೆಹಲಿಯ ಎಎಪಿ ಶಾಸಕಿ ಅತಿಶಿ(39) ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಅತಿಶಿಗೆ ಮಂಗಳವಾರ ಕಫ ಹಾಗೂ ಜ್ವರ ಕಾಣಿಸಿಕೊಂಡಿದ್ದು, ಕೊರೊನಾ ಟೆಸ್ಟ್‍ಗೆ ಕಳುಹಿಸಲಾಗಿತ್ತು. ಅದರ ವರದಿ ಇಂದು ಬಂದಿದ್ದು ಪಾಸಿಟಿವ್ ಇರುವುದು ದೃಢಪಟ್ಟಿದೆ. ಸದ್ಯ ಅವರನ್ನು ಹೋಂಕ್ವಾರಂಟೈನ್ ನಲ್ಲಿ ಇರಿಸಲಾಗಿದೆ.

    ಅತಿಶಿ ಕೊರೊನಾ ವೈರಸ್ ಕಾಣಿಸಿಕೊಂಡು ಮೂರನೇ ಶಾಸಕಿಯಾಗಿದ್ದಾರೆ. ಈ ಹಿಂದೆ ತಮ್ಮ ಪಕ್ಷದ ವಿಶೇಷ್ ರವಿ ಹಾಗೂ ರಾಜ್ ಕುಮಾರ್ ಆನಂದ್ ಅವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು.

    ಇಂದು ಬೆಳಗ್ಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿ, ಕೊರೊನಾ ವಿರುದ್ಧದ ಹೋರಾಟದಲ್ಲಿ ಅತಿಶಿ ಪ್ರಮುಖ ಪಾತ್ರ ವಹಿಸಿದ್ದರು. ಹೀಗಾಗಿ ಅವರು ಆದಷ್ಟು ಬೇಗ ಕೊರೊನಾ ವೈರಸ್ ಮಹಾಮಾರಿಯಿಂದ ಗುಣಮುಖರಾಗಿ ಬರುತ್ತಾರೆ ಎಂಬ ನಂಬಿಎಕಯಿದೆ ಎಂದು ಬರೆದುಕೊಂಡಿದ್ದಾರೆ.

  • ದೆಹಲಿ ಅಗ್ನಿ ಅವಘಡ- 11 ಜನರ ಜೀವ ಉಳಿಸಿದ ಫೈರ್ ಮ್ಯಾನ್

    ದೆಹಲಿ ಅಗ್ನಿ ಅವಘಡ- 11 ಜನರ ಜೀವ ಉಳಿಸಿದ ಫೈರ್ ಮ್ಯಾನ್

    – ಗೃಹ ಸಚಿವರಾದಿಯಾಗಿ ಹಲವರಿಂದ ಮೆಚ್ಚುಗೆ

    ನವದೆಹಲಿ: ನಗರದ ಕೃಷಿ ಮಾರುಕಟ್ಟೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 43 ಜನ ಸಾವನ್ನಪ್ಪಿದ್ದು, ಈ ನಡುವೆಯೇ ಬೆಂಕಿಯ ಕೆನ್ನಾಲೆಯಿಂದ 11 ಜನರನ್ನು ರಕ್ಷಿಸುವ ಮೂಲಕ ಅಗ್ನಿ ಶಾಮಕ ದಳದ ಸಿಬ್ಬಂದಿಯೊಬ್ಬರು ಹೀರೋ ಆಗಿದ್ದಾರೆ.

    ಬೆಂಕಿ ಹೊತ್ತಿಕೊಂಡ ಕಟ್ಟಡಕ್ಕೆ ಮೊದಲು ಪ್ರವೇಶಿಸಿ ರಕ್ಷಣಾ ಕಾರ್ಯ ನಡೆಸಿ, ಅಗ್ನಿಶಾಮಕ ಸಿಬ್ಬಂದಿ ರಾಜೇಶ್ ಶುಕ್ಲಾ ತಮ್ಮ ಶಕ್ತಿ ಮೀರಿ ಕಾರ್ಯನಿರ್ವಹಿಸುವ ಮೂಲಕ 11 ಜನರನ್ನು ರಕ್ಷಿಸಿದ್ದಾರೆ. ಇದಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

    ಉತ್ತರ ದೆಹಲಿಯ ಅನಾಜ್ ಮಂಡಿಯ ಫ್ಯಾಕ್ಟರಿಯಲ್ಲಿ ದುರಂತ ಸಂಭವಿಸಿದ್ದು, ಬೃಹತ್ ಬೆಂಕಿಯನ್ನು ಕಂಡು ರಕ್ಷಣಾ ಕಾರ್ಯಕ್ಕೆ ಇಳಿಯಲು ಬಹುತೇಕ ಅಗ್ನಿಶಾಮಕ ಸಿಬ್ಬಂದಿ ಆರಂಭದಲ್ಲಿ ಹಿಂದೇಟು ಹಾಕಿದ್ದರು. ಆದರೆ ಯಾವುದನ್ನೂ ಲೆಕ್ಕಿಸದೆ ಬೆಂಕಿ ಹೊತ್ತಿಕೊಂಡ ಕಟ್ಟಡಕ್ಕೆ ಪ್ರವೇಶಿಸಿ ರಾಜೇಶ್ ಶುಕ್ಲಾ ರಕ್ಷಣಾ ಕಾರ್ಯಚರಣೆ ನಡೆಸಿದ್ದಾರೆ. ಈ ಕಾರ್ಯಚರಣೆಯಲ್ಲಿ ಶುಕ್ಲಾ ಸೇರಿದಂತೆ ಅನೇಕ ಅಗ್ನಿಶಾಮಕ ಸಿಬ್ಬಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

    11 ಜನರನ್ನು ರಕ್ಷಿಸಿದ ಹೀರೋ ಶುಕ್ಲಾ ಅವರಿಗೂ ಸಹ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡ ಸಿಬ್ಬಂದಿಯ ಆರೋಗ್ಯ ವಿಚಾರಿಸಲು ದೆಹಲಿಯ ಗೃಹ ಸಚಿವ ಸತ್ಯೇಂದ್ರ ಜೈನ್ ಅವರು ಎಲ್‍ಎನ್‍ಜೆಪಿ ಆಸ್ಪತ್ರೆಗೆ ಭೇಟಿ ನೀಡಿದ್ದರು. ಈ ವೇಳೆ ಸಿಬ್ಬಂದಿಯ ಕಾರ್ಯವನ್ನು ಶ್ಲಾಘಿಸಿದ್ದಾರೆ. ಅಲ್ಲದೆ ಶುಕ್ಲಾ ಅವರು ಮೊದಲು ಕಟ್ಟಡದೊಳಗೆ ಪ್ರವೇಶಿಸಿ 11 ಜನರನ್ನು ರಕ್ಷಿಸಿದ್ದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅವರೇ ನಿಜವಾದ ಹೀರೋ ಎಂದು ಸಂಬೋಧಿಸಿದ್ದಾರೆ.

    ಗೃಹ ಸಚಿವ ಸತ್ಯೇಂದ್ರ ಜೈನ್ ಅವರು ಶುಕ್ಲಾ ಅವರ ಫೋಟೋವನ್ನು ಟ್ವೀಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದು, ಅಗ್ನಿ ಶಾಮಕ ಸಿಬ್ಬಂದಿ ರಾಜೇಶ್ ಶುಕ್ಲಾ ನಿಜವಾದ ಹೀರೋ. ಬೆಂಕಿ ವ್ಯಾಪಿಸಿದ ಕಟ್ಟಡದೊಳಗೆ ಮೊದಲು ಪ್ರವೇಶಿಸಿ ಕಾರ್ಯಾಚರಣೆ ಪ್ರಾರಂಭಿಸುವ ಮೂಲಕ 11 ಜೀವಗಳನ್ನು ಉಳಿಸಿದ್ದಾರೆ. ಅವರಿಗೆ ಗಂಭೀರ ಗಾಯಗಳಾಗುವವರೆಗೂ ಪ್ರಯತ್ನ ಬಿಡದೆ ಕಾರ್ಯಾಚರಣೆ ನಡೆಸಿದ್ದಾರೆ. ಈ ಧೈರ್ಯಶಾಲಿ ನಾಯಕನಿಗೊಂದು ಸೆಲ್ಯೂಟ್ ಎಂದು ಬರೆದುಕೊಂಡಿದ್ದಾರೆ.

    ಕೃಷಿ ಮಾರುಕಟ್ಟೆಯ ಆವರಣದಲ್ಲಿರುವ ಕಟ್ಟಡಕ್ಕೆ ಬೆಳಗ್ಗೆ 5.22ರ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಘಟನೆಯಲ್ಲಿ 43 ಜನ ಸಾವನ್ನಪ್ಪಿದ್ದಾರೆ. ಫ್ಯಾಕ್ಟರಿಯೊಳಗೆ ಕಾರ್ಮಿಕರು ಮಲಗಿದ್ದ ವೇಳೆ ಬೆಂಕಿ ಹೊತ್ತಿಕೊಂಡಿದ್ದರಿಂದ ತುಂಬಾ ಸಾವು ನೋವು ಸಂಭವಿಸಿದೆ. ಶಾರ್ಟ್ ಸಕ್ರ್ಯೂಟಿನಿಂದ ಅವಘಡ ಸಂಭವಿಸಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

    ಮೃತಪಟ್ಟವರ ಕುಟುಂಬಗಳಿಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 10 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಅಲ್ಲದೆ ಅವಘಡ ಸಂಬಂಧ ತನಿಖೆ ನಡೆಸುವುದಾಗಿ ಸಿಎಂ ಭರವಸೆ ನೀಡಿದ್ದು, ವಾರದೊಳಗೆ ಸಂಪೂರ್ಣ ವರದಿ ನೀಡುವಂತೆ ಸೂಚಿಸಿದ್ದಾರೆ.

    ದುರ್ಘಟನೆ ನಡೆದ ವಿಚಾರ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ದೌಡಾಯಿಸಿದ ಸಿಎಂ, ಮೃತಪಟ್ಟ ಪ್ರತಿಯೊಬ್ಬ ಕಾರ್ಮಿಕನ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ಹಾಗೂ ಗಾಯಗೊಂಡವರ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಅಲ್ಲದೆ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಭರವಸೆ ನೀಡಿದ್ದಾರೆ.

    ಘಟನೆ ನಡೆದ ಬಳಿಕ ಅರವಿಂದ್ ಕೇಜ್ರಿವಾಲ್ ಸೇರಿದಂತೆ, ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಗೃಹ ಸಚಿವ ಅಮಿತ್ ಶಾ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಸಂತಾಪ ಸೂಚಿಸಿದ್ದಾರೆ.