Tag: Saurabh Bharadwaj

  • 4ನೇ ಬಾರಿಗೂ ಕೇಜ್ರಿವಾಲ್‌ ಸಿಎಂ ಆಗ್ತಾರೆ – ಸಚಿವ ಸೌರಭ್ ಭಾರದ್ವಾಜ್ ವಿಶ್ವಾಸ

    4ನೇ ಬಾರಿಗೂ ಕೇಜ್ರಿವಾಲ್‌ ಸಿಎಂ ಆಗ್ತಾರೆ – ಸಚಿವ ಸೌರಭ್ ಭಾರದ್ವಾಜ್ ವಿಶ್ವಾಸ

    ನವದೆಹಲಿ: ಅರವಿಂದ್‌ ಕೇಜ್ರಿವಾಲ್‌ (Arvind Kejriwal) 3ನೇ ಬಾರಿಗೆ ಸಿಎಂ ಆಗಿ ಶೀಘ್ರದಲ್ಲೇ ಪ್ರಮಾಣ ವಚನ ಸ್ವೀಕರಿಸುತ್ತಾರೆ. 4ನೇ ಬಾರಿಗೂ ಸಿಎಂ ಆಗ್ತಾರೆ ಅನ್ನೋ ವಿಶ್ವಾಸ ನನಗಿದೆ ಎಂದು ಆಪ್‌ ಸಚಿವ ಸೌರಭ್ ಭಾರದ್ವಾಜ್ (Saurabh Bharadwaj) ಹೇಳಿದರು.

    ಗ್ರೇಟರ್‌ ಕೈಲಾಶ್‌ ಕ್ಷೇತ್ರದ ಅಭ್ಯರ್ಥಿಯೂ ಆಗಿರುವ ಸಚಿವ ಸೌರಭ್ ಭಾರದ್ವಾಜ್ ಮತ ಎಣಿಕೆ ಆರಂಭಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದರು. ಅರವಿಂದ್‌ ಕೇಜ್ರಿವಾಲ್‌ 4ನೇ ಬಾರಿಗೂ ಸಿಎಂ ಆಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಎಎಪಿಯನ್ನು ಅಧಿಕಾರದಿಂದ ಕಿತ್ತೊಗೆಯಲು ಬಿಜೆಪಿ ಬೇಕಾದ ಎಲ್ಲಾ ಪ್ರಯತ್ನಗಳನ್ನ ಬಿಜೆಪಿ ಮಾಡಿತು. ಇಡಿ, ಐಟಿ, ಸಿಬಿಐ, ಚುನಾವಣಾ ಆಯೋಗ, ಪೊಲೀಸ್‌ ಇಲಾಖೆ ಸೇರಿ ಎಲ್ಲಾ ಅಧಿಕಾರಿಗಳನ್ನು ಆಪ್‌ ವಿರುದ್ಧ ಪ್ರಯೋಗಿಸಿತು. ಆದ್ರೆ ಜನರ ಆಶೀರ್ವಾದ ಎಎಪಿಗೆ ಇದೆ. ಸಾರ್ವಜನಿಕರು ಕೇಜ್ರಿವಾಲ್‌ರನ್ನ 4ನೇ ಬಾರಿಗೂ ಸಿಎಂ ಮಅಡ್ತಾರೆ. ಶೀಘ್ರದಲ್ಲೇ 3ನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ವಿಶ್ವಾಸ ವ್ಯಕ್ತಪಡಿಸಿದರು.

    ಈ ಬಾರಿ ಆಪ್‌ ಕನಿಷ್ಠ 40-45 ಸ್ಥಾನಗಳನ್ನ ಪಡೆಯಲಿದೆ. ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚಿಸಲಿದೆ ಎಂಬ ಮಾಹಿತಿ ವಿವಿಧ ಕ್ಷೇತ್ರಗಳಿಂದ ನಮಗೆ ಬರುತ್ತಿದೆ ಎಂದು ಭಾರದ್ವಾಜ್ ಹೇಳಿದ್ದಾರೆ.

    ಸದ್ಯದ ವರದಿ ಪ್ರಕಾರ ಬಿಜೆಪಿ 48 ಕ್ಷೇತ್ರಗಳಲ್ಲಿ ಆಪ್‌ 21 ಹಾಗೂ ಕಾಂಗ್ರೆಸ್‌ 1 ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿವೆ.

  • ಮುಂದಿನ 24 ಗಂಟೆಯಲ್ಲಿ ದೆಹಲಿ ಗದ್ದುಗೆಗೆ ನೂತನ ಸಾರಥಿ – ಸಿಎಂ ರೇಸ್‌ನಲ್ಲಿರುವ ಟಾಪ್‌ -5 ಕಲಿಗಳು ಯಾರು?

    ಮುಂದಿನ 24 ಗಂಟೆಯಲ್ಲಿ ದೆಹಲಿ ಗದ್ದುಗೆಗೆ ನೂತನ ಸಾರಥಿ – ಸಿಎಂ ರೇಸ್‌ನಲ್ಲಿರುವ ಟಾಪ್‌ -5 ಕಲಿಗಳು ಯಾರು?

    ನವದೆಹಲಿ: ಆಮ್‌ ಆದ್ಮಿ ಪಕ್ಷದ ನಾಯಕರೂ ಆಗಿರುವ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರು ದೆಹಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. 48 ಗಂಟೆಗಳ ಒಳಗಾಗಿ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದು, ಇನ್ನೂ 24 ಗಂಟೆ ಬಾಕಿ ಉಳಿದಿದೆ. ಈ ನಡುವೆ ದೆಹಲಿಯ ಸಿಎಂ ಗದ್ದುಗೆಗೆ ಪೈಪೋಟಿ ಶುರುವಾಗಿದೆ.

    ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ (Liquor Policy Case) ಬರೋಬ್ಬರಿ 6 ತಿಂಗಳು ಜೈಲಿನಲ್ಲಿದ್ದ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಇದೇ ಸೆಪ್ಟೆಂಬರ್‌ 13ರಂದು ಷರತ್ತು ಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಆ ಬಳಿಕ ಮೊದಲ ಭಾಷಣ ಮಾಡಿದ ಕೇಜ್ರಿವಾಲ್‌ ರಾಜೀನಾಮೆ ಘೋಷಿಸಿದರು. ಅಲ್ಲದೇ ಜನತೆ ತೀರ್ಪು ನೀಡುವವರೆಗೂ ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುವುದಿಲ್ಲ ಎಂದು ಶಪಥ ಮಾಡಿದ್ದಾರೆ. ಈ ನಡುವೆ ಆಪ್‌ನಲ್ಲೇ ಇರುವ ದಿಗ್ಗಜ ನಾಯಕರ ನಡುವೆ ಪೈಪೋಟಿ ಶುರುವಾಗಿದೆ.

    ಸದ್ಯ ಸಿಎಂ ರೇಸ್‌ನಲ್ಲಿ ಸಚಿವೆ ಅತಿಶಿ (Atishi), ಮೂರು ಬಾರಿ ಶಾಸಕರಾಗಿರುವ ಸೌರಭ್ ಭಾರದ್ವಾಜ್, ರಾಘವ್‌ ಛಡ್ಡಾ, ಕೈಲಾಶ್‌ ಗೆಹ್ಲೋಟ್‌ ಹಾಗೂ ಸಂಜಯ್‌ ಸಿಂಗ್‌ ಅವರ ಹೆಸರು ಕೇಳಿಬಂದಿದೆ. ಸಚಿವ ಸಂಪುಟ ಸಭೆಯ ಬಳಿಕ ದೆಹಲಿಗೆ ನೂತನ ಸಿಎಂ ಹೆಸರು ಘೋಷಣೆ ಮಾಡಲಾಗುತ್ತದೆ ಎಂದು ವರದಿಗಳು ಉಲ್ಲೇಖಿಸಿವೆ. ಇದನ್ನೂ ಓದಿ: Viral Video | ಜಮ್ಮು-ಕಾಶ್ಮೀರದಲ್ಲಿ ಉಗ್ರರು ಸೇನೆ ನಡುವೆ ಗುಂಡಿನ ಚಕಮಕಿ – ರಕ್ಷಣೆಗಾಗಿ ಓಡಿದ ಭಯೋತ್ಪಾದಕ!

    2025ರ ಫೆಬ್ರವರಿಯಲ್ಲಿ ದೆಹಲಿ ಚುನಾವಣೆ:
    ಮುಂದಿನ ನವೆಂಬರ್‌ನಲ್ಲೇ ಮಹಾರಾಷ್ಟ್ರ ಚುನಾವಣೆಯ ಜೊತೆಗೆ ದೆಹಲಿ ಚುನಾವಣೆ ನಡೆಸುವಂತೆ ಕೇಜ್ರಿವಾಲ್‌ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು. ಆದ್ರೆ ಆಯೋಗ ಮನವಿ ತಿರಸ್ಕರಿಸಿದ್ದು, 2025ರ ಫೆಬ್ರವರಿಯಲ್ಲಿ ದೆಹಲಿಯ ವಿಧಾನಸಭಾ ಚುನಾವಣೆ ನಡೆಯಲಿದೆ.

    ಈ ನಡುವೆ ಮಾತನಾಡಿರುವ ಸಿಎಂ ಕೇಜ್ರಿವಾಲ್‌, ಮಾಡಿ ಡಿಸಿಎಂ ಮನೀಶ್ ಸಿಸೋಡಿಯಾ ಅವರೊಂದಿಗೆ ನಾನು ಜನರ ಬಳಿಗೆ ಹೋಗುತ್ತೇನೆ. ಜನರ ತೀರ್ಪು ಪಡೆದ ನಂತರವೇ ಕಚೇರಿಗೆ ಮರಳುತ್ತೇನೆ ಎಂದು ಗುಡುಗಿದ್ದಾರೆ. ಇದನ್ನೂಓದಿ: Breaking – ಸಿಎಂ ಹುದ್ದೆಗೆ ರಾಜೀನಾಮೆ ಘೋಷಿಸಿದ ಅರವಿಂದ್‌ ಕೇಜ್ರಿವಾಲ್‌!

    ಕೇಸ್‌ ಹಾಕಿದ್ರೆ ರಾಜೀನಾಮೆ ಕೊಡಬೇಡಿ:
    ಭಾನುವಾರ ಕಾರ್ಯಕರ್ತರ ಸಮಾವೇಶವನ್ನುದ್ದೇಶಿಸಿ ಮಾತನಾಡಿದ್ದ ಕೇಜ್ರಿವಾಲ್‌, ಪ್ರಜಾಪ್ರಭುತ್ವ ಉಳಿಸುವ ಉದ್ದೇಶದಿಂದ ಈ ಹಿಂದೆ ಬಂಧನಕ್ಕೊಳಗಾಗಿದ್ದರೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರಲಿಲ್ಲ ಎಂದ ಅವರು, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಪ್ರಕರಣ ದಾಖಲಿಸಿರುವುದನ್ನು ಉಲ್ಲೇಖಿಸಿದ್ದರು. ನಾನು ಬಿಜೆಪಿಯೇತರರಿಗೆ ಮನವಿ ಮಾಡಲು ಬಯಸುತ್ತೇನೆ, ಅವರು ನಿಮ್ಮ ವಿರುದ್ಧ ಪ್ರಕರಣ ದಾಖಲಿಸಿದರೆ ರಾಜೀನಾಮೆ ನೀಡಬೇಡಿ. ಇದು ಅವರ ಹೊಸ ಆಟ ಎಂದು ಕರೆ ನೀಡಿದ್ದರು.

    ಇದು ಬ್ರಿಟಿಷ್ ವಸಾಹತುಶಾಹಿ ಆಳ್ವಿಕೆಗಿಂತ ಹೆಚ್ಚು ಸರ್ವಾಧಿಕಾರಿ ಆಡಳಿತವಾಗಿದೆ. ಕೇಂದ್ರ ಸರ್ಕಾರ ಏನೇ ಪಿತೂರಿ ಮಾಡಿದರೂ ನಮ್ಮ ಸಂಕಲ್ಪ ಮುರಿಯಲು ಸಾಧ್ಯವಿಲ್ಲ, ರಾಷ್ಟ್ರಕ್ಕಾಗಿ ನಮ್ಮ ಹೋರಾಟ ಮುಂದುವರಿಯುತ್ತೆ ಎಂದು ಎಚ್ಚರಿಕೆ ನೀಡಿದ್ದರು. ಇದನ್ನೂ ಓದಿ: ಮುಂಬೈ ಮೂಲದ ಮಾಡೆಲ್‍ಗೆ ಕಿರುಕುಳ – ಆಂಧ್ರದ ಮೂವರು ಐಪಿಎಸ್ ಅಧಿಕಾರಿಗಳು ಸಸ್ಪೆಂಡ್

  • ನೆರವು ಕೇಳಿದ್ದಕ್ಕೆ ನೀವು ದೆಹಲಿ ಪ್ರತಿನಿಧಿಸಿದ್ರಾ ಎಂದು ಪ್ರಶ್ನಿಸಿದ್ದ AAP ಶಾಸಕನಿಗೆ ಸರ್ಟಿಫಿಕೇಟ್‌ ತೋರಿಸಿ ತಿರುಗೇಟು ಕೊಟ್ಟ ಕುಸ್ತಿಪಟು

    ನೆರವು ಕೇಳಿದ್ದಕ್ಕೆ ನೀವು ದೆಹಲಿ ಪ್ರತಿನಿಧಿಸಿದ್ರಾ ಎಂದು ಪ್ರಶ್ನಿಸಿದ್ದ AAP ಶಾಸಕನಿಗೆ ಸರ್ಟಿಫಿಕೇಟ್‌ ತೋರಿಸಿ ತಿರುಗೇಟು ಕೊಟ್ಟ ಕುಸ್ತಿಪಟು

    ನವದೆಹಲಿ: ದೆಹಲಿ ಸರ್ಕಾರದಿಂದ ಆರ್ಥಿಕ ಸಹಕಾರ ನೀಡುವಂತೆ ಮನವಿ ಮಾಡಿದ್ದಕ್ಕೆ, ʼನೀವು ದೆಹಲಿ ರಾಜ್ಯವನ್ನು ಪ್ರತಿನಿಧಿಸಿದ್ರಾʼ ಎಂದು ಪ್ರಶ್ನಿಸಿದ್ದ ಆಮ್‌ ಆದ್ಮಿ ಪಕ್ಷದ ಶಾಸಕನಿಗೆ ಸರ್ಟಿಫಿಕೇಟ್‌ ತೋರಿಸುವ ಮೂಲಕ ಕುಸ್ತಿಪಟು ದಿವ್ಯಾ ಕಕ್ರನ್‌ ತಿರುಗೇಟು ನೀಡಿದ್ದಾರೆ.

    61ನೇ ರಾಷ್ಟ್ರೀಯ ಮಹಿಳಾ ಚಾಂಪಿಯನ್‌ಶಿಪ್‌ನಲ್ಲಿ ದೆಹಲಿಯನ್ನು ಪ್ರತಿನಿಧಿಸಿದ್ದಾರೆ ಎಂದು ತಿಳಿಸಿರುವ ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾದ ಪ್ರಮಾಣಪತ್ರವನ್ನು ದಿವ್ಯಾ ಟ್ವೀಟ್‌ ಮೂಲಕ ಹಂಚಿಕೊಂಡಿದ್ದಾರೆ. ʼನಾನು 2011 ರಿಂದ 2017 ರವರೆಗೆ ದೆಹಲಿಯನ್ನು ಪ್ರತಿನಿಧಿಸಿದ್ದೇನೆ. ಇದು ದೆಹಲಿ ರಾಜ್ಯದಿಂದ ನನ್ನ ಪ್ರಮಾಣಪತ್ರವಾಗಿದೆ. ನೀವು ಇನ್ನೂ ನನ್ನನ್ನು ನಂಬದಿದ್ದರೆ, ನಾನು 17 ಚಿನ್ನದ ಪದಕಗಳಿಗೆ ಸಂಬಂಧಿಸಿದ ಪ್ರಮಾಣ ಪತ್ರಗಳನ್ನು ಅಪ್‌ಲೋಡ್ ಮಾಡುತ್ತೇನೆ ಎಂದು ಎಎಪಿ ಶಾಸಕ ಸೌರಭ್‌ ಭಾರಧ್ವಾಜ್‌ ಅವರಿಗೆ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಮನವಿ ಮಾಡಿದ್ರೂ ನನಗೆ ದೆಹಲಿ ಸರ್ಕಾರದಿಂದ ಸಹಾಯವೇ ಸಿಗಲಿಲ್ಲ; ಗೆದ್ದಾಗ ಪ್ರಶಂಸಿಸುತ್ತಿದ್ದಾರೆ – ಕಾಮನ್‌ವೆಲ್ತ್‌ನಲ್ಲಿ ಕಂಚು ಗೆದ್ದ ಕ್ರೀಡಾಪಟು ಬೇಸರ

    ನಡೆದಿದ್ದೇನು?
    ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದಿರುವ ಕುಸ್ತಿಪಟು ದಿವ್ಯಾ ಕಕ್ರನ್‌ ಅವರು ದೆಹಲಿ ಸರ್ಕಾರ ವಿರುದ್ಧ ಬೇಸರ ವ್ಯಕ್ತಪಡಿಸಿದ್ದರು. ಕಳೆದ 20 ವರ್ಷಗಳಿಂದ ದೆಹಲಿಯಲ್ಲಿ ವಾಸವಾಗಿದ್ದು, ಸ್ಪರ್ಧೆಗಾಗಿ ಅಭ್ಯಾಸ ಮಾಡುತ್ತಿದ್ದೆ. ಆದರೆ ಈವರೆಗೂ ನನಗೆ ದೆಹಲಿ ಸರ್ಕಾರದಿಂದ ಯಾವುದೇ ಸಹಾಯ ಸಿಗಲಿಲ್ಲ ಎಂದು ನೊಂದು ನುಡಿದಿದ್ದರು. ಅಲ್ಲದೇ ದೆಹಲಿಯವರೇ ಆಗಿದ್ದರೂ ಬೇರೆ ರಾಜ್ಯದ ಪರ ಆಡುತ್ತಿರುವ ಇತರ ಆಟಗಾರರನ್ನು ಗೌರವಿಸುವ ರೀತಿಯಲ್ಲಿಯೇ ನನ್ನನ್ನು ಗೌರವಿಸಬೇಕೆಂಬುದು ಟ್ವೀಟ್‌ ಮೂಲಕ ಮನವಿ ಮಾಡಿದ್ದರು.

    ಈ ವೇಳೆ ದಿವ್ಯಾ ಟ್ವೀಟ್‌ಗೆ ಪ್ರತಿಕ್ರಿಯಿಸಿದ್ದ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ವಕ್ತಾರ ಹಾಗೂ ಶಾಸಕ ಸೌರಭ್ ಭಾರದ್ವಾಜ್ ಅವರು, ಸಹೋದರಿ, ಇಡೀ ದೇಶವು ನಿಮ್ಮ ಬಗ್ಗೆ ಹೆಮ್ಮೆಪಡುತ್ತದೆ. ಆದರೆ ನೀವು ದೆಹಲಿಯ ಪರ ಆಡಿದ್ದು ನನಗೆ ನೆನಪಿಲ್ಲ. ಆದರೆ ನೀವು ಉತ್ತರ ಪ್ರದೇಶವನ್ನು ಪ್ರತಿನಿಧಿಸಿ ಆಡಿದ್ದೀರಿ. ಆದರೆ ಒಬ್ಬ ಆಟಗಾರ ದೇಶಕ್ಕೆ ಸೇರಿದವನು. ಯೋಗಿ ಆದಿತ್ಯನಾಥ್ ಅವರಿಂದ ನೀವು ಯಾವುದೇ ಪ್ರಶಸ್ತಿಗಳನ್ನು ನಿರೀಕ್ಷಿಸುವುದಿಲ್ಲ. ದೆಹಲಿ ಸಿಎಂ ನಿಮ್ಮ ಮನವಿಗೆ ಸ್ಪಂದಿಸುತ್ತಾರೆಂಬ ಭರವಸೆ ನನಗಿದೆ ಎಂದು ಟ್ವೀಟ್‌ ಮಾಡಿದ್ದರು. ಇದನ್ನೂ ಓದಿ: Well Done Girls: ಗೋಲ್ಡ್‌ ಜಸ್ಟ್‌ ಮಿಸ್‌ – ಚೊಚ್ಚಲ ಪ್ರಯತ್ನದಲ್ಲೇ ಬೆಳ್ಳಿಗೆದ್ದ ವನಿತೆಯರು

    ದೆಹಲಿ ಸರ್ಕಾರವು ದೇಶದ ಎಲ್ಲಾ ಕ್ರೀಡಾಪಟುಗಳನ್ನು ಗೌರವಿಸುತ್ತದೆ. ಅವರ ಉಜ್ವಲ ಭವಿಷ್ಯಕ್ಕಾಗಿ ಹಾರೈಸುತ್ತದೆ. ದಿವ್ಯಾ ಕಕ್ರನ್ ಸದ್ಯ ಉತ್ತರಪ್ರದೇಶ ಪರ ಆಡುತ್ತಿದ್ದಾರೆ. ಅವರು ದೆಹಲಿಯ ಪರವಾಗಿ ಆಡಿದ್ದರೆ ಅಥವಾ ದೆಹಲಿಯಲ್ಲಿ ಯಾವುದೇ ಕ್ರೀಡಾ ಯೋಜನೆಯ ಭಾಗವಾಗಿದ್ದರೆ ಅಥವಾ ಅಂತಹ ಯಾವುದೇ ಯೋಜನೆಗೆ ಅರ್ಜಿ ಸಲ್ಲಿಸಿದ್ದರೆ, ರಾಜ್ಯ ಸರ್ಕಾರ ಖಂಡಿತವಾಗಿಯೂ ಅದನ್ನು ಪರಿಶೀಲಿಸುತ್ತದೆ ಎಂದು ಸಹ ವಕ್ತಾರ ಪ್ರತಿಕ್ರಿಯಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ಲೈವ್ ಡೆಮೋ ಮಾಡಿ ಆಪ್‍ನಿಂದ ಇವಿಎಂ ಹ್ಯಾಕ್: ಯಾರಿಗೆ ಎಷ್ಟು ವೋಟ್ ಬಿತ್ತು?

    ಲೈವ್ ಡೆಮೋ ಮಾಡಿ ಆಪ್‍ನಿಂದ ಇವಿಎಂ ಹ್ಯಾಕ್: ಯಾರಿಗೆ ಎಷ್ಟು ವೋಟ್ ಬಿತ್ತು?

    – ಆಪ್ ಆರೋಪವನ್ನು ತಿರಸ್ಕರಿಸಿದ ಚುನಾವಣಾ ಆಯೋಗ

    ನವದೆಹಲಿ: ಚುನಾವಣೆಯಲ್ಲಿ ಕೇಂದ್ರ ಸರ್ಕಾರದಿಂದ ಇವಿಎಂ ದುರ್ಬಳಕೆ ಆಗುತ್ತಿದೆ ಎಂದು ಆರೋಪ ಮಾಡಿದ್ದ ಆಪ್ ಇಂದು ವಿಧಾನಸಭೆಯಲ್ಲಿ ಲೈವ್ ಡೆಮೋ ನಡೆಸಿ ಹೇಗೆ ಹ್ಯಾಕ್ ಮಾಡಬಹುದು ಎನ್ನುವುದನ್ನು ವಿವರಿಸಿದೆ.

    ಆಪ್ ಶಾಸಕ ಸೌರಭ್ ಭಾರದ್ವಾಜ್ ಸದನದಲ್ಲಿ ಇವಿಎಂ ಹಿಡಿದು ಲೈವ್ ಡೆಮೋ ನೀಡಿದ್ದಾರೆ. ಕೋಡ್ ಬಳಸಿಕೊಂಡು, ಇವಿಎಂ ತಿರುಚಿ ಯಾವುದೇ ಪಕ್ಷ ಗೆಲುವು ಸಾಧಿಸಬಹುದು. ಆಡಳಿತರೂಢ ಕೇಂದ್ರ ಸರ್ಕಾರಕ್ಕೆ ಇದು ಅಸಾಧ್ಯವಲ್ಲ. ಬಿಜೆಪಿ ಇವಿಎಂ ದುರ್ಬಳಕೆ ಮಾಡಿಕೊಂಡು ಚುನಾವಣೆ ಗೆಲ್ಲುತ್ತಿದೆ ಎಂದು ದೂರಿದರು.

    ಡೆಮೋ ತೋರಿಸುವ ಮುನ್ನ ಮಾತನಾಡಿದ ಅವರು, ಇಲ್ಲಿ ತೋರಿಸುತ್ತಿರುವುದು ಚುನಾವಣೆಯಲ್ಲಿ ಬಳಕೆಯಾಗುತ್ತಿರುವ ಇವಿಎಂ ಅಲ್ಲ. ಇವಿಎಂ ರೀತಿಯಲ್ಲೇ ತಯಾರಾಗಿರುವ ಯಂತ್ರವಿದು. ನಾನು ಕಂಪ್ಯೂಟರ್ ಸೈನ್ಸ್ ಎಂಜಿನಿಯರ್ ಆಗಿದ್ದು, ರಾಜಕೀಯಕ್ಕೆ ಸೇರುವ ಮೊದಲು ಹಲವಾರು ಕಂಪೆನಿಗಳಲ್ಲಿ ಕೆಲಸ ಮಾಡಿದ್ದೇನೆ. ಎವಿಎಂ ಹ್ಯಾಕ್ ಮಾಡುವುದು ಕಷ್ಟದ ಕೆಲಸವಲ್ಲ. ಕೇವಲ 90 ಸೆಕೆಂಡ್ ನಲ್ಲಿ ಮದರ್‍ಬೋರ್ಡ್ ಬದಲಾಯಿಸಿ ಹ್ಯಾಕ್ ಮಾಡಬಹುದು ಎಂದು ಅವರು ವಿವರಿಸಿದರು.

    ಡೆಮೋದಲ್ಲಿ ಏನಾಯ್ತು?
    ಪ್ರಾತ್ಯಕ್ಷಿಕೆ ಸಂದರ್ಭದಲ್ಲಿ ಆಪ್‍ಗೆ 10, ಬಿಎಸ್‍ಪಿ 2, ಬಿಜೆಪಿ 3, ಕಾಂಗ್ರೆಸ್ 2, ಎಸ್‍ಪಿ 2 ಮತಗಳನ್ನು ಹಾಕಿದ್ದಾರೆ. ಆದರೆ ಫಲಿತಾಂಶ ಬಂದಾಗ ಆಪ್‍ಗೆ 2 ವೋಟ್ ಬಿದ್ದಿದ್ದರೆ, ಬಿಜೆಪಿಗೆ ಆಪ್‍ನ ವೋಟ್ ಸೇರಿ 11 ವೋಟ್ ಬಿದ್ದಿದೆ. ಬಿಎಸ್‍ಪಿಗೆ 2, ಕಾಂಗ್ರೆಸ್ 2, ಎಸ್‍ಪಿ 2 ವೋಟ್ ಬಿದ್ದಿದೆ.

    ಇವಿಎಂ ತಯಾರಿಸಿದ್ದು ಯಾರು?
    ಐಐಟಿಯ ಹಳೆ ವಿದ್ಯಾರ್ಥಿಗಳು ವಿಶೇಷ ಇವತ್ತಿನ ಡೆಮೋಗಾಗಿ ಇವಿಎಂ ಹೋಲುವ ಯಂತ್ರವನ್ನು ತಯಾರಿಸಿದ್ದಾರೆ. ಅಷ್ಟೇ ಅಲ್ಲದೇ ಇವಿಎಂ ತಜ್ಞರು ಸಹ ಇದನ್ನು ಪರಿಶೀಲಿಸಿದ್ದಾರೆ ಎಂದು ಎಎಪಿಯ ಮೂಲಗಳು ಮಾಹಿತಿ ನೀಡಿವೆ.

    ಇದೆ ವೇಳೆ, ನಾನು ಸವಾಲು ಎಸೆಯುತ್ತೇನೆ, ಮುಂದೆ ನಡೆಯಲಿರುವ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಪೇಪರ್ ಬ್ಯಾಲೆಟ್ ಬಳಸಿದರೆ ಬಿಜೆಪಿ ಜಯಗಳಿಸಲು ಸಾಧ್ಯವೇ ಇಲ್ಲ ಎಂದು ಸೌರಭ್ ಭಾರದ್ವಾಜ್ ಹೇಳಿದರು. ಈ ವೇಳೆ ವಿಧಾನಸಭೆಯಲ್ಲಿ ತೀವ್ರ ಗದ್ದಲ ಕೋಲಾಹಲ ಸೃಷ್ಟಿಯಾಯ್ತು.

    ಈ ಮಧ್ಯೆ ಚುನಾವಣಾ ಆಯೋಗ ಆಮ್ ಆದ್ಮಿ ಆರೋಪ ನಿರಾಕರಿಸಿದೆ. ಆಯೋಗ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿ, ಆಪ್ ಚುನಾವಣೆಯಲ್ಲಿ ಬಳಕೆಯಾಗದ ಇವಿಎಂ ಬಳಸಿ ಡೆಮೋ ತೋರಿಸಿದ್ದಾರೆ. ಅಷ್ಟೇ ಅಲ್ಲದೇ ನಮ್ಮ ಅನುಮತಿ ಪಡೆಯದೇ ಪ್ರಾತ್ಯಕ್ಷಿಕೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

    ಈ ವಿಚಾರದ ಬಗ್ಗೆ ಮೇ 12ರಂದು ಎಲ್ಲ ಪಕ್ಷಗಳ ಸಭೆಯನ್ನು ಚುನಾವಣಾ ಆಯೋಗ ಕರೆದಿದ್ದು, ಈ ಸಭೆಯ ಬಳಿಕ ಇವಿಎಂ ಹ್ಯಾಕಥಾನ್ ನಡೆಯುವ ದಿನಾಂಕ ಪ್ರಕಟವಾಗಲಿದೆ.