Tag: Savadatti Yallamma

  • ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ – ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಜಲದಿಗ್ಬಂಧನ

    ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ – ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಜಲದಿಗ್ಬಂಧನ

    – ಹಲವು ರಸ್ತೆಗಳು ಜಲಾವೃತ, ಸವಾರರಿಗೆ ಸಂಕಷ್ಟ

    ಬೆಳಗಾವಿ: ಜಿಲ್ಲೆಯಾದ್ಯಂತ ಸುರಿದ ಧಾರಾಕಾರ ಮಳೆಗೆ (Rain) ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿದ್ದು, ಜಲಾವೃತಗೊಂಡ ರಸ್ತೆ ದಾಟಲು ಆಗದೇ ಯಲ್ಲಮ್ಮನ (Savadatti Yallamma) ಗುಡ್ಡದ ಭಕ್ತರು ಪರದಾಡಿದ್ದಾರೆ. ಮತ್ತೊಂದೆಡೆ ನಿರಂತರ ಮಳೆಗೆ ಯಲ್ಲಮ್ಮನ ಗುಡ್ಡದ ಪ್ರದೇಶದಲ್ಲಿ ಸಹ್ಯಾದ್ರಿ, ಕೊಡಚಾದ್ರಿ ಸೃಷ್ಟಿಯಾಗಿದ್ದು ಪ್ರವಾಸಿಗರನ್ನ ಕೈಬೀಸಿ ಕರೆಯುತ್ತಿದೆ.

    ಸುಡುಬಿಸಿಲಿನ ಬೇಗೆಗೆ ಬೆಂದಿದ್ದ ಸವದತ್ತಿ ಜನರಿಗೆ ಮಳೆರಾಯನ ತಂಪೆರಿದಿದ್ದಷ್ಟೇ ಅಲ್ಲಾ, ಸಾಕಷ್ಟು ಅವಾಂತರಗಳನ್ನೇ ಸೃಷ್ಟಿಸಿದ್ದಾನೆ. ರಭಸವಾಗಿ ಸುರಿದ ಧಾರಾಕಾರ ಮಳೆಗೆ ಯಲ್ಲಮ್ಮನ ಗುಡ್ಡಕ್ಕೆ ಸಂಪರ್ಕಿಸುವ ರಸ್ತೆಗಳು ಹಳ್ಳಗಳಿಂದ ಜಲಾವೃತಗೊಂಡು ಸಂಪೂರ್ಣ ಬಂದ್ ಆಗಿದೆ. ಇದರಿಂದಾಗಿ ದೇವಸ್ಥಾನಕ್ಕೆ ಬರೋ ಭಕ್ತರು ದೇವಿಯ ದರ್ಶನವಿಲ್ಲದೇ ಪರದಾಡಿದ್ದಾರೆ. ನೂಲಹುಣ್ಣಿಮೆ ಹಿನ್ನೆಲೆ ರೇಣುಕಾ ಯಲ್ಲಮ್ಮನ ದೇವಸ್ಥಾನದಲ್ಲಿ ಜಾತ್ರೆ ಪ್ರಾರಂಭವಾಗುತ್ತದೆ. ಹಾಗಾಗಿ ಯಲ್ಲಮ್ಮನ ಗುಡ್ಡಕ್ಕೆ ಮಹಾರಾಷ್ಟ್ರ, ಗೋವಾ, ವಿಜಯಪುರ, ಬಾಗಲಕೋಟೆ, ಗದಗ, ಧಾರವಾಡ, ಹುಬ್ಬಳ್ಳಿ ಸೇರಿದಂತೆ ಕರ್ನಾಟಕದ ಮೂಲೆಮೂಲೆಗಳಿಂದ ಭಕ್ತರು ದೇವಿಯ ದರ್ಶನಕ್ಕೆ ಆಗಮಿಸುತ್ತಾರೆ. ಇದನ್ನೂ ಓದಿ: ಮೇಘಸ್ಪೋಟಕ್ಕೆ ನಾಶವಾಯ್ತು ಧರಾಲಿ – ಗ್ರಾಮದ ವಿಶೇಷತೆ ಏನು? ಮೊದಲು ಹೇಗಿತ್ತು?

    ಆದರೆ ಉಗರಗೋಳದಲ್ಲಿ ರಸ್ತೆ ಸಂಪೂರ್ಣವಾಗಿ ಬಂದ್ ಆಗಿದ್ದರಿಂದ ಭಕ್ತರು ಪರದಾಡಿದ್ದರು. ಅಷ್ಟೇ ಅಲ್ಲದೇ ಉಗರಗೋಳ ಗ್ರಾಮದಲ್ಲಿ ಕೊಚ್ಚಿಕೊಂಡು ಹೋಗುತ್ತಿರುವ ಬೈಕ್ ರಕ್ಷಣೆಗೆ ವ್ಯಕ್ತಿಯೊಬ್ಬರು ಹರಸಾಹಸ ಪಟ್ಟಿದ್ದಾರೆ. ಜೊತೆಗೆ ಯಲ್ಲಮ್ಮನ ಗುಡ್ಡದ ಎಣ್ಣೆ ಹೊಂಡದಲ್ಲಿ ರಭಸವಾಗಿ ಹರಿಯುತ್ತಿರುವ ಮಳೆಯ ನೀರಿನಲ್ಲಿ ವ್ಯಕ್ತಿಯೊಬ್ಬರು ಸಿಲುಕಿದ್ದರು. ಇದನ್ನೂ ಓದಿ: `ಪಬ್ಲಿಕ್ ಟಿವಿ’ ವಿದ್ಯಾಮಂದಿರಕ್ಕೆ ಇಂದು ಚಾಲನೆ

    ಇನ್ನು, ಸವದತ್ತಿ ತಾಲೂಕಿನಾದ್ಯಂತ ಸುರಿದ ಭಾರೀ ಮಳೆಯಿಂದಾಗಿ ಸಹ್ಯಾದ್ರಿ-ಕೊಡಚಾದ್ರಿಯನ್ನೇ ಮೀರಿಸುವಂತೆ ಸುಕ್ಷೇತ್ರ ಯಮ್ಮಲ್ಲನ ಗುಡ್ಡದ ಸುತ್ತಮುತ್ತಲಿನ ಪ್ರದೇಶ ನಿರ್ಮಾಣವಾಗಿದೆ. ಬೆಟ್ಟ-ಕಲ್ಲುಬಂಡೆಗಳ ಮೇಲೆ ಎಲ್ಲೆಂದರಲ್ಲಿ ಸುಂದರ ಕಿರುಜಲಪಾತಗಳು ಸೃಷ್ಟಿಯಾಗಿದ್ದು, ಬೆಟ್ಟದಿಂದ ನೀರು ಜಾರಿ ದುಮ್ಮಿಕ್ಕುತ್ತಿದೆ. ಬೆಟ್ಟದಿಂದ ಜಾರುವ ನೀರ್ಝರಿಗಳ ದೃಶ್ಯ ನೋಡುಗರ ಕಣ್ಮನ ಸೆಳೆಯುತ್ತಿದೆ. ಮತ್ತೊಂದೆಡೆ ಯಲ್ಲಮ್ಮನ ಗುಡ್ಡದಲ್ಲಿ ಭಾರಿ ಮಳೆಗೆ ಎಣ್ಣೆಹೊಂಡ ಸಂಪೂರ್ಣ ಜಲಾವೃತಗೊಂಡರೆ, ಧಾರಾಕಾರ ಮಳೆಯ ನೀರು ಶ್ರೀರೇಣುಕಾ ಯಲ್ಲಮ್ಮನ ದೇವಸ್ಥಾನಕ್ಕೆ ನುಗ್ಗಿದೆ. ದೇವಸ್ಥಾನ ಕೌಂಟರ್‌ಗಳು, ದೇವಸ್ಥಾನ ಗರ್ಭಗುಡಿ ಹೀಗೆ ದೇವಸ್ಥಾನ ಸುತ್ತಲೂ ಮಳೆ ನೀರು ಆವರಿಸಿಕೊಂಡಿದೆ. ಉತ್ತರ ಕರ್ನಾಟಕ ಶಕ್ತಿದೇವಿ ಯಲ್ಲಮ್ಮನ ದೇವಿಗೂ ಮಳೆರಾಯ ಜಲದಿಗ್ಭಂಧನ ಹಾಕಿದ್ದಾನೆ. ಇದನ್ನೂ ಓದಿ: ಭಾರತದ ಮೋಸ್ಟ್‌ ವಾಂಟೆಡ್‌ ʻಸಲೀಂ ಪಿಸ್ತೂಲ್ʼ ನೇಪಾಳದಲ್ಲಿ ಅರೆಸ್ಟ್‌

    ರಾಮದುರ್ಗ ತಾಲೂಕಿನಲ್ಲೂ ಭಾರೀ ಪ್ರಮಾಣದಲ್ಲಿ ಮಳೆಯಾಗಿದ್ದು, ತಾಲೂಕಿನ ಕಿಲ್ಲಾತೋರಗಲ್ ಬಳಿ ಗುಡ್ಡ ಕುಸಿತವಾಗಿದೆ. ನಡುರಸ್ತೆಯಲ್ಲೇ ಬೃಹತ್ ಕಲ್ಲು ಬಂಡೆಗಳು ಉರುಳಿ ಬಿದಿದ್ದು, ಯಾವುದೇ ವಾಹನ ಸಂಚಾರವಿಲ್ಲದೇ ಭಾರೀ ಅನಾಹುತವೊಂದು ತಪ್ಪಿದೆ. ಮಳೆಯಿಂದ ಏನೆಲ್ಲಾ ಅನಾಹುತ ಆಗಿದೇ ಅನೋದನ್ನ ಪರಿಶೀಲನೆ ಮಾಡುತ್ತಿದ್ದೇವೆ ಎಂದು ಸವದತ್ತಿ ತಹಶಿಲ್ದಾರರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬಿಹಾರದಲ್ಲಿ ಮತಪಟ್ಟಿ ವಿಶೇಷ ಪರಿಷ್ಕರಣೆಗೆ ವಿರೋಧವೇಕೆ?- ಕಾಂಗ್ರೆಸ್ಸಿಗರಿಗೆ ಬಿ.ವೈ.ವಿಜಯೇಂದ್ರ ಪ್ರಶ್ನೆ

  • ರಾಜ್ಯದ ಜನರ ಆಶೀರ್ವಾದ ಇರೋವರೆಗೂ ನನ್ನ ಯಾರೂ ಅಲ್ಲಾಡಿಸೋಕೆ ಆಗಲ್ಲ: ಸಿದ್ದರಾಮಯ್ಯ

    ರಾಜ್ಯದ ಜನರ ಆಶೀರ್ವಾದ ಇರೋವರೆಗೂ ನನ್ನ ಯಾರೂ ಅಲ್ಲಾಡಿಸೋಕೆ ಆಗಲ್ಲ: ಸಿದ್ದರಾಮಯ್ಯ

    ಬೆಳಗಾವಿ: ಹೇಗಾದರೂ ಮಾಡಿ ನನ್ನನ್ನು ಅಧಿಕಾರದಿಂದ ತೆಗೆಯಬೇಕು ಎಂದು ಈಗಲೂ ಬಿಜೆಪಿಯವರು (BJP) ಪ್ರಯತ್ನಿಸುತ್ತಿದ್ದಾರೆ. ರಾಜ್ಯದ ಜನರ ಆಶೀರ್ವಾದ ಇರೋವರೆಗೂ ನನ್ನನ್ನು ಯಾರೂ ಅಲ್ಲಾಡಿಸೋಕೆ ಆಗಲ್ಲ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ವಿಶ್ವಾಸ ವ್ಯಕ್ತಪಡಿಸಿದರು.

    ಸವದತ್ತಿ ಯಲ್ಲಮ್ಮನ (Savadatti Yallamma) ಗುಡ್ಡದಲ್ಲಿ ಪ್ರವಾಸೋದ್ಯಮ ಇಲಾಖೆಯ ವತಿಯಿಂದ 22.45 ಕೋಟಿ ರೂ. ವೆಚ್ಚದಲ್ಲಿ ಪ್ರವಾಸಿಗರಿಗೆ ನಿರ್ಮಿಸಲಾಗಿರುವ ಕೊಠಡಿಗಳು, ಡಾರ್ಮಿಟರಿ, ಪಾರ್ಕಿಂಗ್, ಉದ್ಯಾನ ಮತ್ತಿತರ ಮೂಲಸೌಕರ್ಯಗಳು ಮತ್ತು ಮಹಿಳಾ ಅಭಿವೃದ್ಧಿ ನಿಗಮದಿಂದ 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ವಾಣಿಜ್ಯ ಮಳಿಗೆಗಳು ಮತ್ತು ಅತಿಥಿಗೃಹವನ್ನು ಉದ್ಘಾಟಿಸಿ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇದನ್ನೂ ಓದಿ: ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ: ಓರ್ವ ಕೊಲೆ ಆರೋಪಿಗೆ ನ್ಯಾಯಾಂಗ ಬಂಧನ

    ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯವರು 17 ಸ್ಥಾನ ಗೆದ್ದರು. ನಾವು 9 ಸ್ಥಾನ ಗೆದ್ದೆವು. ಜೆಡಿಎಸ್ 2 ಸ್ಥಾನ ಗೆದ್ದಿತು. ಅವರು ಏನೂ ಮಾಡದೇ ನೀವು ಅವರನ್ನು ಗೆಲ್ಲಿಸುತ್ತೀರಿ. ಏನೂ ಮಾಡದೇ ಬಿಜೆಪಿ ಪ್ರಚಾರ ಪಡೆಯುತ್ತದೆ. ಹಿಂದೂಗಳು, ಹಿಂದುತ್ವದ ಹೆಸರಲ್ಲಿ ಜನರನ್ನು ಒಡೆಯುವ ಕೆಲಸ ಮಾಡುತ್ತಿದೆ. ಈ ನಾಡು ಉಳಿಯಬೇಕಾದರೆ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕು. ನಮ್ಮ ಸರ್ಕಾರ ಇನ್ನೂ ಮೂರುವರೆ ವರ್ಷ ಇರುತ್ತದೆ. ಆ ಅವಧಿಯಲ್ಲಿ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಎನ್‌ಐಎಗೆ ನೀಡಿರುವ ಪ್ರಕರಣ ವಾಪಸ್ ಪಡೆಯಲು ಸರ್ಕಾರಕ್ಕೆ ಅಧಿಕಾರ ಇಲ್ಲ: ಬಸವರಾಜ ಬೊಮ್ಮಾಯಿ

    ಬಿಜೆಪಿಯವರು ಧರ್ಮ, ಆಚಾರ, ಸಂಸ್ಕೃತಿ, ಸಂಸ್ಕಾರಗಳ ಬಗ್ಗೆ ಮಾತನಾಡುತ್ತಾರೆ. ಆದರೆ ಇಂತಹ ಕೆಲಸ ಮಾಡಿದ್ದಾರಾ? ಈ ದೇವಸ್ಥಾನಕ್ಕೆ ಕೆಳವರ್ಗದ ಜನರೇ ಜಾಸ್ತಿ ಬರೋದು. ದೇಶ, ವಿದೇಶಗಳಿಂದಲೂ ಸಹ ಭಕ್ತಾದಿಗಳು ಇಲ್ಲಿಗೆ ಬರುತ್ತಾರೆ. ಯಲ್ಲಮ್ಮ ತಾಯಿ ಬಹಳ ಶಕ್ತಿ ದೇವತೆ ಅಂತ ನಂಬಿದ್ದಾರೆ. ಆದರೆ ದೇವರು ಕೂಡ ಕೆಟ್ಟದ್ದು ಮಾಡಿ ಎಂದು ಬಯಸುವುದಿಲ್ಲ. ದೇವರು ಮತ್ತು ಧರ್ಮ ಮನುಷ್ಯನನ್ನು ಪ್ರೀತಿಸಿ ಎನ್ನುತ್ತವೆ. ಬಿಜೆಪಿಯವರ ರೀತಿ ಧರ್ಮದ ಹೆಸರಲ್ಲಿ ಜಾತಿ ಹೆಸರಲ್ಲಿ ಸಮಾಜ ಒಡೆಯಿರಿ ಎಂದು ಹೇಳುವುದಿಲ್ಲ. ಬಸವಣ್ಣನೂ ಸಹ ಇವನಾರವ ಎಂದೆನಿಸದಿರಯ್ಯ ಅಂತ ಹೇಳಿದ್ದಾರೆ. ಇದನ್ನೂ ಓದಿ: ಎರಡು ದಿನದಿಂದ ಸುರಿದ ಧಾರಾಕಾರ ಮಳೆಗೆ ಕುಸಿದು ಬಿದ್ದ ಸೇತುವೆ

    ಬಸವಣ್ಣನವರನ್ನು ನಾವು ಸಾಂಸ್ಕೃತಿಕ ನಾಯಕನನ್ನಾಗಿ ಮಾಡಿದ್ದೇವೆ. ಸಮಾಜದಲ್ಲಿ ಅಸಮಾನತೆ ಹೋಗಬೇಕು. ಎಲ್ಲರ ಸರ್ವೋದಯಕ್ಕಾಗಿಯೇ ನಾವು ಶಕ್ತಿ ಯೋಜನೆ ಜಾರಿ ಮಾಡಿದ್ದು, ಗೃಹಲಕ್ಷ್ಮಿ ಹಣದಲ್ಲಿ ಮಹಿಳೆಯರು ಊರಿಗೆ ಹೋಳಿಗೆ ಊಟ ಹಾಕುತ್ತಿದ್ದಾರೆ. ಅತ್ತೆ ಸೊಸೆಗೆ ಜಗಳ ಶುರುವಾಗುತ್ತದೆ ಅಂತಾ ಬಿಜೆಪಿಯವರು ಹೇಳುತ್ತಾರೆ. ಜಗಳ ಆಯ್ತಾ? ಬರೀ ಬುರುಡೆ ಹೊಡೆಯುತ್ತಾರೆ ಎಂದು ವಾಗ್ದಾಳಿ ಮಾಡಿದರು. ಇದನ್ನೂ ಓದಿ: ಟೆಡ್ಡಿಬೇರ್ ವೇಷ ಧರಿಸಿ ದರ್ಶನ್ ನೋಡಲು ಬಂದ ಅಭಿಮಾನಿ

    ಯಲ್ಲಮ್ಮ ಕ್ಷೇತ್ರದಲ್ಲಿ 7ರಿಂದ 8 ಸಾವಿರ ಜನಕ್ಕಾದರೂ ಕುಡಿಯುವ ನೀರು, ವಸತಿ ವ್ಯವಸ್ಥೆ ಮಾಡಬೇಕು. ಇದನ್ನೆಲ್ಲಾ ಮಾಡುವ ಪ್ರಾಮಾಣಿಕ ಪ್ರಯತ್ನವನ್ನು ನಾವು ಮಾಡುತ್ತೇವೆ. ಅದಕ್ಕೆ ನಿಮ್ಮ ಸಹಕಾರ ಬೇಕು. ಯಾವ ಕಾರಣಕ್ಕೂ ಕಾನೂನು ಬಾಹಿರವಾಗಿ ಮಳಿಗೆಗಳನ್ನು ಮಾಡಿಕೊಳ್ಳಬೇಡಿ. ಇದರಿಂದ ಈ ಕ್ಷೇತ್ರವೇ ಕಾನೂನು ಬಾಹಿರ ಆಗುತ್ತದೆ. ವ್ಯವಸ್ಥಿತವಾಗಿ ಅಭಿವೃದ್ಧಿ ಮಾಡುವ ಸಲುವಾಗಿ ಪ್ರಾಧಿಕಾರಿಗಳನ್ನು ಸ್ಥಾಪಿಸಲಾಗಿದೆ. ಕನಿಷ್ಠ 3,000 ಸಾವಿರ ಜನರ ದಾಸೋಹಕ್ಕೆ ದಾಸೋಹ ಕೇಂದ್ರ ಸ್ಥಾಪಿಸುತ್ತೇವೆ. ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಮಾಡಿದ್ದೇವೆ. ಈ ರೀತಿ ಯಾವ ಸರ್ಕಾರಗಳು ಮಾಡಿಕೊಟ್ಟಿರಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ಇದನ್ನೂ ಓದಿ: ವಿಜಯೇಂದ್ರ ಏನು ಪುರೋಹಿತನಾ, ಜ್ಯೋತಿಷಿನಾ?: ಸಿಎಂ ಸಿದ್ದರಾಮಯ್ಯ

    ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿ, ಬಿಜೆಪಿಯವರು ದೇವರು, ಧರ್ಮ ಅವರ ಆಸ್ತಿ ಅಂದುಕೊಂಡಿದ್ದಾರೆ. ಬಿಜೆಪಿಯವರು ಧರ್ಮದಲ್ಲಿ ರಾಜಕಾರಣ ಮಾಡೋಕೆ ಪ್ರಯತ್ನಿಸುತ್ತಾರೆ. ಧರ್ಮ ಯಾರೊಬ್ಬನ ಸ್ವತ್ತಲ್ಲ. ದೇವನೊಬ್ಬ ನಾಮ ಹಲವು. ಧರ್ಮ ಪಾಲನೆ ವೈಯಕ್ತಿಕ ವಿಚಾರ. ಯಾವ ಧರ್ಮವನ್ನು ಬೇಕಾದರೂ ನೀವು ಪಾಲನೆ ಮಾಡಬಹುದು ಎಂದು ಕಿಡಿಕಾರಿದರು. ಇದನ್ನೂ ಓದಿ: ಸವದತ್ತಿ ಯಲ್ಲಮ್ಮನ ದರ್ಶನ ಪಡೆದ ಸಿಎಂ – ಪತ್ನಿ ಹೆಸರಲ್ಲಿ ವಿಶೇಷ ಪೂಜೆ

    ಇನ್ನು ಗ್ಯಾರಂಟಿ ಯೋಜನೆಯನ್ನು ನಡೆಸಿಕೊಡುವ ಶಕ್ತಿ ಕೊಡು ಎಂದು ಪ್ರಾರ್ಥಿಸಿದ್ದೇವೆ. ಗ್ಯಾರಂಟಿ ಯೋಜನೆ ಜಾರಿಯಾದ ಮೇಲೆ ಧರ್ಮಸ್ಥಳಕ್ಕೆ ಬರುವ ಜನರ ಸಂಖ್ಯೆ ಹೆಚ್ಚಾಗಿದೆ ಅಂತ ಪತ್ರ ಬರೆದಿದ್ದಾರೆ. ರಾಮಲಿಂಗಾ ರೆಡ್ಡಿಯವರು ಅರ್ಚಕರಿಗೆ ವಿಮೆ ಯೋಜನೆಗೆ 5 ಲಕ್ಷ ಜೀವನೋದ್ಧಾರಕ್ಕೆ ಕೊಡುವ ಯೋಜನೆ ಮಾಡಿದ್ದರು. ನಾವು ಮಾಡಿದ ಬಿಲ್ ವಿರೋಧ ಮಾಡಿ ಅದನ್ನು ನಿಲ್ಲಿಸಿದ್ದಾರೆ. ಸಿಎಂ ಹೆಸರು ಅವರ ಪತ್ನಿ ಹೆಸರು, ಸಚಿವರ ಹೆಸರನ್ನು ಹೇಳಿ ಅರ್ಚಕರು ಅರ್ಚನೆ ಮಾಡಿದರು. ಅಂಥ ಅರ್ಚಕರಿಗೆ ಯೋಜನೆ ತಂದರೆ ಇದನ್ನು ವಿರೋಧ ಮಾಡುತ್ತೀರಿ. ಇಂದು ಸಿದ್ದರಾಮಯ್ಯ 30 ಕೋಟಿ ರೂ. ಅನುದಾನ ನೀಡಿ ಅಭಿವೃದ್ಧಿ ಮಾಡಿದ್ದಾರೆ. ಯಾಕೆ ಯಡಿಯೂರಪ್ಪ, ಬೊಮ್ಮಾಯಿ ಮಾಡಲಿಲ್ಲ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಮುರುಡೇಶ್ವರದಲ್ಲಿ ಸಮುದ್ರ ಪಾಲಾಗುತ್ತಿದ್ದ ಪ್ರವಾಸಿಗನ ರಕ್ಷಣೆ

    ಕಾರ್ಯಕ್ರಮದಲ್ಲಿ ಸಚಿವರಾದ ಹೆಚ್‌ಕೆ ಪಾಟೀಲ್, ರಾಮಲಿಂಗಾ ರೆಡ್ಡಿ, ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್, ಶಾಸಕರಾದ ವಿಶ್ವಾಸ್ ವೈದ್ಯ, ರಾಜು ಕಾಗೆ, ಬಾಬಾ ಸಾಹೇಬ್ ಪಾಟೀಲ್, ಆಸಿಫ್ ಸೇಠ್, ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಸೇರಿ ಮತ್ತಿತರರು ಇದ್ದರು. ಇದನ್ನೂ ಓದಿ: ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ ಪಡೆದು ಸಿಎಂ ಭಯೋತ್ಪಾದಕರ ಬೆಂಬಲಿಗ: ಜೋಶಿ ವಾಗ್ದಾಳಿ

  • ಸವದತ್ತಿ ಯಲ್ಲಮ್ಮನ ದರ್ಶನ ಪಡೆದ ಸಿಎಂ – ಪತ್ನಿ ಹೆಸರಲ್ಲಿ ವಿಶೇಷ ಪೂಜೆ

    ಸವದತ್ತಿ ಯಲ್ಲಮ್ಮನ ದರ್ಶನ ಪಡೆದ ಸಿಎಂ – ಪತ್ನಿ ಹೆಸರಲ್ಲಿ ವಿಶೇಷ ಪೂಜೆ

    ಬೆಳಗಾವಿ: ಸಿಎಂ ಸಿದ್ದರಾಮಯ್ಯ (Siddaramaiah) ಇಂದು (ಭಾನುವಾರ) ಶಕ್ತಿ ಪೀಠಗಳಲ್ಲಿ ಒಂದಾದ ಸವದತ್ತಿ ಯಲ್ಲಮ್ಮ ದೇಗುಲಕ್ಕೆ (Savadatti Yallamma Temple) ಭೇಟಿ ನೀಡಿ ದರ್ಶನ ಪಡೆದರು.

    ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಗೆ ಯಲ್ಲಮ್ಮ ಗುಡ್ಡಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ವಾದ್ಯ ಮೇಳಗಳೊಂದಿಗೆ ಸ್ವಾಗತಿಸಲಾಯಿತು. ಮಂತ್ರ ಘೋಷಗಳೊಂದಿಗೆ ದೇವಿಯ ದರ್ಶನಕ್ಕೆ ಅರ್ಚಕರು ಆಹ್ವಾನಿಸಿದರು. ಇದೇ ವೇಳೆ ದೇವಸ್ಥಾನದ ಅರ್ಚಕ ಕೊಟ್ಟ ಎರಡು ನಿಂಬೆ ಹಣ್ಣುಗಳನ್ನು ಕೈಯಲ್ಲಿ ಹಿಡಿದುಕೊಂಡು ದೇವಸ್ಥಾನ ಪ್ರವೇಶಿಸಿದ ಸಿದ್ದರಾಮಯ್ಯ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಪತ್ನಿ ಪಾರ್ವತಿ ಹೆಸರಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಇದನ್ನೂ ಓದಿ: ಮುರುಡೇಶ್ವರದಲ್ಲಿ ಸಮುದ್ರ ಪಾಲಾಗುತ್ತಿದ್ದ ಪ್ರವಾಸಿಗನ ರಕ್ಷಣೆ

    ಈ ವೇಳೆ ಅರ್ಚಕರು ಅವರ ಹೆಸರಲ್ಲಿ ಪೂಜೆ ಸಲ್ಲಿಸಿ, ತಿಲಕ ಇಟ್ಟು, ಮಂಗಳಾರತಿ ನೀಡಿ, ನಾಗಮೂರ್ತಿ ದೇವಿಯ ಬೆಳ್ಳಿ ಕಿರೀಟವನ್ನು ಸಿದ್ದರಾಮಯ್ಯ ಅವರ ತಲೆಗೆ ಮುಟ್ಟಿಸಿ ಆಶೀರ್ವಾದ ಮಾಡಿದರು. ದೇವಿಯ ಆರತಿ ಆಗುವವರೆಗೂ ದೇವಿ ಸನ್ನಿಧಾನದಲ್ಲಿ ನಿಂತು ದರ್ಶನ ಪಡೆದ ಸಿಎಂ, ತಾವೇ ಕುಂಕುಮ ಹಚ್ಚಿಕೊಂಡರು. ಬಳಿಕ 500 ರೂ. ಆರತಿ ತಟ್ಟೆಗೆ ಹಾಕಿದರು. ಇದನ್ನೂ ಓದಿ: ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ ಪಡೆದು ಸಿಎಂ ಭಯೋತ್ಪಾದಕರ ಬೆಂಬಲಿಗ: ಜೋಶಿ ವಾಗ್ದಾಳಿ

    ದೇವಿ ಮುಂದೆ 10 ನಿಮಿಷ ಕುಳಿತು ಡಿಸಿಎಂ ಡಿ.ಕೆ.ಶಿವಕುಮಾರ ಪ್ರಾರ್ಥಿಸಿದರು. ದೇವಸ್ಥಾನದ ಹೊರಗೆ ಡಿಕೆಶಿ ಬರುವವರೆಗೆ ಸಿಎಂ ಸಿದ್ದರಾಮಯ್ಯ ಕಾದು ನಿಂತಿದ್ದರು. ಈ ವೇಳೆ ಸಚಿವರಾದ ಹೆಚ್.ಕೆ.ಪಾಟೀಲ್, ರಾಮಲಿಂಗಾ ರೆಡ್ಡಿ, ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್, ಶಾಸಕರಾದ ವಿಶ್ವಾಸ್ ವೈದ್ಯ, ಬಾಬಾಸಾಹೇಬ ಪಾಟೀಲ್, ಭರಮಗೌಡ ಕಾಗೆ, ಆಸೀಫ್ ಸೇಠ್, ಎನ್.ಹೆಚ್.ಕೋನರೆಡ್ಡಿ, ಚನ್ನರಾಜ ಹಟ್ಟಿಹೊಳಿ ಸೇರಿ ಮತ್ತಿತರರು ಸಿಎಂ ಸಿದ್ದರಾಮಯ್ಯ ಅವರಿಗೆ ಸಾಥ್ ಕೊಟ್ಟರು. ಇದನ್ನೂ ಓದಿ: ಒಳಮೀಸಲಾತಿಗೆ ಕಾಂಗ್ರೆಸ್ ಮಾತ್ರ ಮೀನಾಮೇಷ ಎಣಿಸುತ್ತಿದೆ – ಆರ್.ಅಶೋಕ್

    ದೇವಿ ದರ್ಶನ ಪಡೆದು ವಾಪಸ್ ಆಗುವಾಗ ಸಿಎಂ ಸಿದ್ದರಾಮಯ್ಯ ಅವರಿಗೆ ಸವದತ್ತಿ ಯಲ್ಲಮ್ಮ ದೇವಿಯ ಅರ್ಚಕ ರಾಜ್ಯದಲ್ಲಿರುವ ಅರ್ಚಕರ ವೇತನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದರು. ಸಂಬಂಧಿಸಿದ ಸಚಿವರ ಜೊತೆ ಚರ್ಚಿಸಿ ವೇತನ ಬಿಡುಗಡೆ ಕ್ರಮ ಕೈಗೊಳ್ಳುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದರು. ಇದನ್ನೂ ಓದಿ: ಶಾಸಕ ಶಿವಲಿಂಗೇಗೌಡಗೆ ಗ್ರಾಮಸ್ಥರಿಂದ ಘೇರಾವ್

  • ಬೆಳಗಾವಿಯನ್ನು ವಿಭಜಿಸಲು ಸಿಎಂಗೆ ಒಳ್ಳೆ ಬುದ್ಧಿ ನೀಡಲಿ- ಭಕ್ತನಿಂದ ಸವದತ್ತಿ ಯಲ್ಲಮ್ಮನಿಗೆ ಹರಕೆ

    ಬೆಳಗಾವಿಯನ್ನು ವಿಭಜಿಸಲು ಸಿಎಂಗೆ ಒಳ್ಳೆ ಬುದ್ಧಿ ನೀಡಲಿ- ಭಕ್ತನಿಂದ ಸವದತ್ತಿ ಯಲ್ಲಮ್ಮನಿಗೆ ಹರಕೆ

    ಬೆಳಗಾವಿ: ಭಕ್ತರೊಬ್ಬ ಬೆಳಗಾವಿ (Belagavi) ಜಿಲ್ಲೆ ವಿಭಜನೆ ಮಾಡುವಂತೆ ಆಗ್ರಹಿಸಿ ಸವದತ್ತಿ ಯಲ್ಲಮ್ಮದೇವಿಗೆ (Savadatti Yallamma) ಹರಕೆ ಪತ್ರ ಬರೆದಿದ್ದು, ಬೆಳಗಾವಿಯನ್ನು 4 ಜಿಲ್ಲೆಗಳಾಗಿ ವಿಭಜಿಸಲು ಸಿಎಂಗೆ ಒಳ್ಳೆ ಬುದ್ಧಿ ನೀಡಲೆಂದು ಹರಕೆ ಪತ್ರ ಬರೆದು ಬೇಡಿಕೆ ಇಟ್ಟಿದ್ದಾನೆ.

    ಬೆಳಗಾವಿ ಜಿಲ್ಲೆ ಸವದತ್ತಿ ಹೊರವಲಯದಲ್ಲಿರುವ ರೇಣುಕಾ ಯಲ್ಲಮ್ಮ ದೇವಿಗೆ ಪತ್ರ ಬರೆಯಲಾಗಿದೆ. ಬೆಳಗಾವಿ ಜಿಲ್ಲೆಯನ್ನು ನಾಲ್ಕು ಜಿಲ್ಲೆಯಾಗಿ ವಿಭಜಿಸುವಂತೆ ಸುದೀರ್ಘ 4 ಪುಟಗಳ ಪತ್ರ ಬರೆದಿದ್ದು, ಬೆಳಗಾವಿಯನ್ನು 4 ಜಿಲ್ಲೆಗಳಾಗಿ ವಿಭಜಿಸಲು ಸಿಎಂಗೆ ಒಳ್ಳೆ ಬುದ್ಧಿ ನೀಡಲೆಂದು ಬೇಡಿಕೆ ಇಟ್ಟಿದ್ದಾನೆ. ಅದರಲ್ಲಿ ಪ್ರಮುಖವಾಗಿ ಬೆಳಗಾವಿ, ಗೋಕಾಕ, ಚಿಕ್ಕೋಡಿ, ಬೈಲಹೊಂಗಲ ಜಿಲ್ಲೆಯನ್ನು ಮಾಡುವಂತೆ ಹರಕೆ ಹೊತ್ತು ದೇವರ ಕಾಣಿಕೆ ಹುಂಡಿಯಲ್ಲಿ ಪತ್ರ ಬರೆದು ಹಾಕಿದ್ದಾರೆ. ಜೆ.ಹೆಚ್.ಪಟೇಲ್ ಸಿಎಂ ಆಗಿದ್ದಾಗ ಬೆಳಗಾವಿ ಜಿಲ್ಲೆಯಲ್ಲಿ 10 ತಾಲೂಕು ಇದ್ದವು.

    1997ರಲ್ಲಿ ಬೆಳಗಾವಿ, ಚಿಕ್ಕೋಡಿ, ಗೋಕಾಕ ಸೇರಿ ಮೂರು ಜಿಲ್ಲೆಗಳಾಗಿ ಘೋಷಣೆ ಮಾಡಲಾಗಿತ್ತು. ಈಗ 14 ತಾಲೂಕು ಆಗಿದ್ದು, ಈಗ 4 ಜಿಲ್ಲೆಗಳನ್ನಾಗಿ ಮಾಡಬೇಕು. ಯಾದಗಿರಿಯಲ್ಲಿ 3 ತಾಲೂಕು ಇದ್ದರೂ, ಅದನ್ನು ಜಿಲ್ಲೆ ಮಾಡಿದ್ದಾರೆ. ಕೊಡಗುವಿನಲ್ಲಿ 2 ವಿಧಾನ ಸಭಾ ಕ್ಷೇತ್ರ ಇದ್ದರೂ, ಅದನ್ನು ಜಿಲ್ಲೆ ಮಾಡಿದ್ದಾರೆ. ಹಾಗೇ ನಮ್ಮ ಜಿಲ್ಲೆಯಲ್ಲಿ 14 ತಾಲೂಕು, 18 ವಿಧಾನ ಸಭಾ ಕ್ಷೇತ್ರವಿದ್ದು, 4 ಜಿಲ್ಲೆಗಳನ್ನಾಗಿ ಮಾಡಬೇಕು. 4 ಜಿಲ್ಲೆ ಮಾಡಿ ಎರಡು ಪ್ರತ್ಯೇಕ ಉಪವಿಭಾಗಾಧಿಕಾರಿ ಕಚೇರಿಯನ್ನು ಮಾಡಬೇಕು. ಈಗಾಗಲೇ ಹುಂಡೇಕರ್, ವಾಸುದೇವ, ಗದ್ದಿಗೌಡರ ಸಮಿತಿ ಗೋಕಾಕ ಜಿಲ್ಲೆಗೆ ಶಿಫಾರಸು ಮಾಡಿವೆ. ಇದನ್ನೂ ಓದಿ: PFI ನಾಯಕನ ಮನೆಯಲ್ಲಿ ಸಾವರ್ಕರ್‌ ಪುಸ್ತಕ – ಶಿವಮೊಗ್ಗದಲ್ಲಿ 19 ಲಕ್ಷ ಪತ್ತೆ

    ಎಲ್‍ಎಲ್‍ಬಿ ಪಾಸ್ ಆದವರಿಗೆ ವಕೀಲರು ಅಂತಾರೆ ಹೊರತು ಎಸ್‍ಎಸ್‍ಎಲ್ಸಿ ಪಾಸ್ ಆದವರಿಗೆ ವಕೀಲರು ಎನ್ನಲಾಗದು. 3 ಸಮಿತಿಗಳು ಮಾಡಿದ ಶಿಫಾರಸ್ಸಿನಂತೆ ಗೋಕಾಕನ್ನು ಜಿಲ್ಲೆಯಾಗಿ ಮಾಡಿ ಎಂದು 4 ಪುಟಗಳ ಸುದೀರ್ಘ ಪತ್ರವನ್ನ ಬರೆದ ಭಕ್ತರು ಸವದತ್ತಿ ಯಲ್ಲಮ್ಮ ದೇವಿಗೆ ಹುಂಡಿಗೆ ಹಾಕಿದ್ದಾನೆ. ಸತತ 5 ದಿನಗಳ ಕಾಲ ಸವದತ್ತಿ ಯಲ್ಲಮ್ಮ ದೇವಸ್ಥಾನದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯುತ್ತಿದೆ. ಈ ವೇಳೆ ಭಕ್ತರು ಚಿತ್ರ, ವಿಚಿತ್ರ ಹರಕೆ ಪತ್ರ ಪತ್ತೆಯಾಗಿವೆ. ಇದನ್ನೂ ಓದಿ: ಸಾಲದ ಸುಳಿಯಲ್ಲಿ ಬಿಎಂಟಿಸಿ ನಿಗಮ : ಶ್ರೀರಾಮುಲು

    Live Tv
    [brid partner=56869869 player=32851 video=960834 autoplay=true]