Tag: savanalu

  • ಅಪ್ರಾಪ್ತೆಯ ಮೇಲೆ ರೇಪ್ – ಬೆಳ್ತಂಗಡಿ ಪೊಲೀಸರಿಂದ ಇಬ್ಬರು ಅರೆಸ್ಟ್

    ಅಪ್ರಾಪ್ತೆಯ ಮೇಲೆ ರೇಪ್ – ಬೆಳ್ತಂಗಡಿ ಪೊಲೀಸರಿಂದ ಇಬ್ಬರು ಅರೆಸ್ಟ್

    ಮಂಗಳೂರು: ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ನಡೆಸಿ ಬಳಿಕ ಆಕೆ ಏಳು ತಿಂಗಳ ಗರ್ಭಿಣಿಯಾದ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸವಣಾಲು ಎಂಬಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

    ಅತ್ಯಾಚಾರ ಎಸಗಿದ ಇಬ್ಬರು ಆರೋಪಿಗಳಾದ ಸ್ಥಳೀಯ ನಿವಾಸಿ ರವೀಂದ್ರ ಹಾಗೂ ಯೋಗೀಶ್ ನನ್ನು ಬೆಳ್ತಂಗಡಿ ಪೆÇಲೀಸರು ಪೋಕ್ಸೋ ಕಾಯ್ದೆಯಡಿ ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.  ಇದನ್ನೂ ಓದಿ: ಮುಂಬೈ ಮಾಜಿ ಪೊಲೀಸ್ ಆಯುಕ್ತ ನಾಪತ್ತೆ, ರಷ್ಯಾಗೆ ಪರಾರಿ?

    10ನೇ ತರಗತಿ ವಿದ್ಯಾಭ್ಯಾಸ ಮಾಡಿಕೊಂಡಿದ್ದ ಬಾಲಕಿಯನ್ನು ಜೆಸಿಬಿ ಚಾಲಕನಾಗಿದ್ದ ರವೀಂದ್ರ ಐದು ಬಾರಿ ಅತ್ಯಾಚಾರ ನಡೆಸಿದ್ದು, ಬಾಲಕಿಯ ಸಂಬಂಧಿ ಯೋಗೀಶ್ ಎಂಬಾತ ಎರಡು ಬಾರಿ ಅತ್ಯಾಚಾರ ನಡೆಸಿದ್ದಾನೆ. ಇದನ್ನೂ ಓದಿ: 14ನೇ ಐಪಿಎಲ್‍ಗೆ ಗುಡ್‍ಬೈ ಹೇಳಿದ ಗೇಲ್

    ಬಾಲಕಿಯ ಶಾಲೆಗೆ ಆರೋಗ್ಯ ತಪಾಸಣೆಗೆ ಬಂದಿದ್ದ ವೈದ್ಯರು ವಿದ್ಯಾರ್ಥಿಯ ದೇಹಸ್ಥಿತಿ ನೋಡಿ ಅನುಮಾನಗೊಂಡಿದ್ದು, ಬಳಿಕ ಬೆಳ್ತಂಗಡಿ ವೈದ್ಯರಲ್ಲಿ ಪರೀಕ್ಷಿಸಿದಾಗ ಬಾಲಕಿ ಗರ್ಭಿಣಿಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ಇದನ್ನೂ ಓದಿ: ನನ್ನ ಮಗಳ ಸಾವಿಗೆ ತೆಲುಗು ನಟ ಕಾರಣ- ಸೌಜನ್ಯ ತಂದೆ ದೂರು 

  • ಸವಣಾಲಿನ ಕಾಳಿಕಾಂಬೆಯನ್ನು ಸ್ತುತಿಸಿದ ಮುಸ್ಲಿಂ ಯುವಕ- ಮತ್ತೊಮ್ಮೆ ಸಾಮರಸ್ಯಕ್ಕೆ ದ.ಕ ಜಿಲ್ಲೆ ಸಾಕ್ಷಿ

    ಸವಣಾಲಿನ ಕಾಳಿಕಾಂಬೆಯನ್ನು ಸ್ತುತಿಸಿದ ಮುಸ್ಲಿಂ ಯುವಕ- ಮತ್ತೊಮ್ಮೆ ಸಾಮರಸ್ಯಕ್ಕೆ ದ.ಕ ಜಿಲ್ಲೆ ಸಾಕ್ಷಿ

    ಮಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳು ಅಂದರೆ ಕೋಮುಸೂಕ್ಷ್ಮ ಪ್ರದೇಶ. ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗ್ಗಾಗ್ಗೆ ಸಣ್ಣಪುಟ್ಟ ವಿಷಯಗಳಿಗೂ ಕೋಮು ಗಲಭೆ ನಡೆಯುತ್ತಿರುತ್ತದೆ. ಆದರೆ ಕೆಲವೊಂದು ವಿಚಾರಗಳಲ್ಲಿ ಕೋಮು ಸಾಮರಸ್ಯವೂ ಈ ಜಿಲ್ಲೆಯಲ್ಲಿ ಕಾಣ ಸಿಗುತ್ತದೆ. ಇಂತಹ ಕೋಮು ಸಾಮರಸ್ಯಕ್ಕೆ ಮತ್ತೊಂದು ಸೇರ್ಪಡೆ ಅನ್ನುವಂತೆ ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದಲ್ಲಿ ಒಂದು ಅಪರೂಪದ ವಿಷಯ ಬೆಳಕಿಗೆ ಬಂದಿದೆ.

    ಸವಣಾಲು ಗ್ರಾಮದ ಇತಿಹಾಸ ಪ್ರಸಿದ್ಧ ಕಾಳಿಕಾಬೆಟ್ಟದ ಶ್ರೀ ದುರ್ಗಾ ಕಾಳಿಕಾಂಬ ಕ್ಷೇತ್ರದಲ್ಲಿ ಕಾಳಿಕಾಂಬೆಯ ಸ್ಥುತಿಯನ್ನು ಅದೇ ಗ್ರಾಮದ ಮುಸ್ಲಿಂ ಯುವಕ ರಮ್ಲಾನ್ ಎಂಬಾತ ಕಾಳಿಕಾಮಾತೆಗಾಗಿ ಹಾಡನ್ನು ರಚಿಸಿ, ಗಾಯನ ಮಾಡಿ ಕಾಳಿಕಾಂಬೆಗೆ ಅರ್ಪಣೆ ಮಾಡಿದ್ದಾರೆ.

    ರಮ್ಲಾನ್ ಕಾಳಿಕಾಂಬ ದೇಗುಲದ ಪಕ್ಕದಲ್ಲೇ ವಾಸವಾಗಿದ್ದು, ಕಾಳಿಕಾಮಾತೆಯ ಪರಮ ಭಕ್ತನಾಗಿದ್ದಾರೆ. ಶ್ರೀ ದುರ್ಗಾ ಕಾಳಿಕಾಂಬ ಕ್ಷೇತ್ರದ ಪ್ರತಿಯೊಂದು ಕಾರ್ಯಕ್ರಮದಲ್ಲೂ ಶ್ರದ್ಧಾ ಭಕ್ತಿಯಿಂದ ಭಾಗವಹಿಸಿ ಸಾಮರಸ್ಯ ಮೆರೆದಿದ್ದಾರೆ. ಮುಸ್ಲಿಂನಾದರೂ ದುರ್ಗೆಯ ಆರಾಧನೆಯನ್ನು ಮುಕ್ತ ಮನಸ್ಸಿನಿಂದ ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.. “ಮಹಿಮೆದ ಕಾರಣಿಕ ಕ್ಷೇತ್ರ ಕಾಳಿಕಾಬೆಟ್ಟ” ಎಂಬ ಭಕ್ತಿಗೀತೆಯನ್ನು ರಮ್ಲಾನ್ ಹಾಡಿದ್ದಾರೆ. ಎಲೆಕ್ಟ್ರೀಷಿಯನ್ ಆಗಿ ಕೆಲಸ ಮಾಡುತ್ತಿರುವ ರಮ್ಲಾನ್ ದುರ್ಗೆಯ ಬಗ್ಗೆ ಹಾಡನ್ನು ರಚಿಸಿ ಸ್ವ ಗಾಯನವನ್ನು ಮಾಡಿದ್ದಾರೆ. ರಮ್ಲಾನ್ ಶುಶ್ರಾವ್ಯ ಕಂಠದಿಂದ ದುರ್ಗೆಯ ಹಾಡು ಅದ್ಭುತವಾಗಿ ಮೂಡಿ ಬಂದಿದೆ. ರಮ್ಲಾನ್ ಹಾಡನ್ನು ಎಸ್.ಕೆ ಕ್ರಿಯೇಷನ್ ಎಂಬ ಯೂಟ್ಯೂಬ್ ಪೇಜ್ ನಲ್ಲಿ ನೋಡಬಹುದಾಗಿದೆ.

    ಸವಣಾಲಿನ ಶ್ರೀ ಕಾಳಿಕಾಂಬ ಕ್ಷೇತ್ರ 1,200 ವರ್ಷಗಳ ಇತಿಹಾಸವುಳ್ಳ ಪುಣ್ಯ ಪ್ರಸಿದ್ಧ ಕ್ಷೇತ್ರ. ಕುದುರೆ ಮುಖ ತಪ್ಪಲಿನಲ್ಲಿರುವ ಈ ಕ್ಷೇತ್ರ ಸುತ್ತಲೂ ಕಾಡಿನಿಂದ ಆವೃತ್ತವಾದ ನೈಸರ್ಗಿಕವಾಗಿ ಅದ್ಭುತ ಸೌಂದರ್ಯ ಹೊಂದಿದೆ. ದುರ್ಗಾ ದೇವತೆ, ಕಾಳಿಕಾಂಬ ದೇವತೆಯನ್ನು ಇಲ್ಲಿ ಪ್ರಧಾನವಾಗಿ ಪೂಜಿಸಲಾಗುತ್ತದರ. ಅಲ್ಲದೆ ಗಣಪತಿ, ಶ್ರೀಧರ ಸ್ವಾಮಿ, ಶಿವ ದಕ್ಷಿಣ ಮೂರ್ತಿ, ರಣಗುಳಿಗ, ಶ್ರೀ ನಾಗರಾಜ, ಭೈರವ ರನ್ನು ಶ್ರದ್ಧಾ ಭಕ್ತಿಯಿಂದ ಪೂಜಿಸಲಾಗುತ್ತದೆ.