ಈಗ ಬಂಧಿಸಲಾ ಮೂವರು ಆರೋಪಿಗಳು ಅಕ್ರಮವಾಗಿ ಪಿಸ್ತೂಲ್ ಪೂರೈಕೆ ಹಾಗೂ ಕೃತ್ಯಕ್ಕೆ ಸಹಕಾರ ನೀಡಿದ್ದರು. ಮತ್ತೋರ್ವ ಆರೋಪಿ ಮಹಾರಾಷ್ಟ್ರ ರಾಜ್ಯದ ಪ್ರಮುಖ ಆರೋಪಿಯಾಗಿದ್ದು, ಅ.7ರಂದೇ ಬಂಧಿಸಿ ನ್ಯಾಯಾಂಗ ತನಿಖೆಗೆ ಒಪ್ಪಿಸಲಾಗಿತ್ತು. ಆದ್ರೆ ಆತನ ಹೆಸರನ್ನ ಬಹಿರಂಗಪಡಿಸಿಲ್ಲ.
ಏನಿದು ಕೇಸ್?
ಜಿಲ್ಲೆಯ ಚಡಚಣ ಎಸ್‌ಬಿಐ ಬ್ಯಾಂಕ್‌ನಲ್ಲಿ 1 ಕೋಟಿ ರೂ. ನಗದು, 12 ರಿಂದ 13 ಕೆ.ಜಿ ಚಿನ್ನ ದರೋಡೆಯಾಗಿದೆ. ಸಾಲಕ್ಕಾಗಿ ಅಡವಿಟ್ಟಿದ್ದ 12-13 ಕೆಜಿ ಚಿನ್ನ ದರೋಡೆಯಾಗಿರುವುದಾಗಿ ವಿಜಯಪುರ ಎಸ್ಪಿ ಲಕ್ಷ್ಮಣ ನಿಂಬರಗಿ ಪ್ರಾಥಮಿಕ ಮಾಹಿತಿ ನೀಡಿದ್ದರು.
ಐದಕ್ಕೂ ಹೆಚ್ಚು ಮಂದಿ ಮುಸುಕುಧಾರಿ ದರೋಡೆಕೋರರಿಂದ ಕೃತ್ಯ ನಡೆದಿತ್ತು. ಚಡಚಣ ಪಟ್ಟಣದ ಎಸ್‌ಬಿಐ ಬ್ಯಾಂಕ್‌ನಲ್ಲಿನ ಮ್ಯಾನೇಜರ್, ಕ್ಯಾಶಿಯರ್ ಹಾಗೂ ಇತರೆ ಸಿಬ್ಬಂದಿ ಕೈಕಾಲು ಕಟ್ಟಿ ಹಾಕಿ ಕೂಡಿ ಹಾಕಿ ದರೋಡೆ ನಡೆಸಲಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಕೈಗೊಂಡಿದ್ದರು. ಬ್ಯಾಂಕ್‌ನಲ್ಲಿದ್ದ ಸಿಸಿಟಿವಿ ಕ್ಯಾಮೆರಾ, ಹಾರ್ಡ್ ಡಿಸ್ಕ್ ವಶಕ್ಕೆ ಪಡೆದು ತೀವ್ರ ತಪಾಸಣೆ ನಡೆಸಿದ್ದರು. ಇದನ್ನೂ ಓದಿ: ಉ.ಕರ್ನಾಟಕದಲ್ಲಿ ಪ್ರವಾಹ – ಕೇಂದ್ರದಿಂದ ನೆರೆಪೀಡಿತ ಜಿಲ್ಲೆಗಳಿಗೆ ಪರಿಹಾರ ನೀಡುವಂತೆ ಮೋದಿಗೆ ಯತ್ನಾಳ್ ಪತ್ರ
ವಿಜಯಪುರ: 1 ಕೋಟಿ ರೂ. ನಗದು, 20 ಕೆಜಿ ಚಿನ್ನಾಭರಣ ಸೇರಿ ಒಟ್ಟು 21 ಕೋಟಿ ದರೋಡೆಯಾಗಿದೆ ಎಂದು ವಿಜಯಪುರ (Vijayapura) ಎಸ್ಪಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದ್ದಾರೆ.
ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬ್ಯಾಂಕ್ ದರೋಡೆಗೆ 5 ಜನರು ಬಂದಿದ್ದರು. 6 ಜನ ಬ್ಯಾಂಕ್ ಸಿಬ್ಬಂದಿ ಹಾಗೂ 4 ಜನ ಗ್ರಾಹಕರನ್ನು ದರೋಡೆಕೋರರು ಲಾಕ್ ಮಾಡಿದ್ದಾರೆ. ಕೋಣೆಯಲ್ಲಿ ಕೂಡಿ ಹಾಕಿ, ಪ್ಲಾಸ್ಟಿಕ್ ಬ್ಯಾಂಡ್‌ಗಳಿಂದ ಕೈ, ಕಾಲು ಕಟ್ಟಿ ದರೋಡೆ ಮಾಡಿ ಪರಾರಿಯಾಗಿದ್ದಾರೆ. ಪಂಡರಾಪುರ ಕಡೆ ಪರಾರಿಯಾಗಿರುವುದಾಗಿ ತಿಳಿದುಬಂದಿದೆ. ಸದ್ಯದ ಮಾಹಿತಿ ಪ್ರಕಾರ 1 ಕೋಟಿ ರೂ. ನಗದು, ಅಂದಾಜು 20 ಕೆಜಿ ಚಿನ್ನಾಭರಣ ಸೇರಿದಂತೆ 21 ಕೋಟಿ ರೂ. ಮೌಲ್ಯದ ನಗದು ಚಿನ್ನಾಭರಣ ದರೋಡೆಯಾಗಿದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ವಿಜಯಪುರ| ಎಸ್‌ಬಿಐ ಬ್ಯಾಂಕ್ ದರೋಡೆ ಕೇಸ್ – 3 ತಿಂಗಳು ರಜೆಯಲ್ಲಿದ್ದ ಸೆಕ್ಯುರಿಟಿ ಗಾರ್ಡ್; ಚಿನ್ನಾಭರಣ ಇಟ್ಟ ಗ್ರಾಹಕರು ಕಂಗಾಲು
ಮಂಗಳವಾರ (ಸೆ.17) ಸಂಜೆ 6:30 ರಿಂದ 7:30ರ ನಡುವೆ ಬ್ಯಾಂಕ್ ಕ್ಲೋಸಿಂಗ್ ಟೈಂನಲ್ಲಿ ದರೋಡೆ ನಡೆದಿದೆ. ದರೋಡೆಕೋರರ ಪೈಕಿ ಒಬ್ಬ ವ್ಯಕ್ತಿ ಮೊದಲೇ ಒಳಗೆ ಬಂದು ಕುಳಿತಿದ್ದ. ಬ್ಯಾಂಕ್ ಕ್ಲೋಸಿಂಗ್ ಟೈಂನಲ್ಲಿ ಲಾಕರ್ ಓಪನ್ ಇತ್ತು. ಆಗ ಬಂದೂಕಿನಿಂದ ಬೆದರಿಸಿ, ಕಟ್ಟಿ ಹಾಕಿ ದರೋಡೆ ಮಾಡಿದ್ದಾರೆ. ಒಟ್ಟು 398 ಪ್ಯಾಕ್ ಚಿನ್ನ ಅಂದರೆ 21 ಕೋಟಿ ರೂ. ಮೌಲ್ಯದ ಚಿನ್ನ, ನಗದು ದರೋಡೆಯಾಗಿದೆ ಎಂದಿದ್ದಾರೆ.
ವಿಜಯಪುರ: ಚಡಚಣ ಎಸ್‌ಬಿಐ ಬ್ಯಾಂಕ್‌ನಲ್ಲಿ ದರೋಡೆಯಾಗಿದ್ದು, ದರೋಡೆಕೋರರು ಮಹಾರಾಷ್ಟ್ರಕ್ಕೆ ಎಸ್ಕೇಪ್ ಆಗಿರುವ ಶಂಕೆ ವ್ಯಕ್ತವಾಗಿದೆ. ಇತ್ತ ಬ್ಯಾಂಕ್‌ನಲ್ಲಿ ಠೇವಣಿ, ಚಿನ್ನಾಭರಣ ಇಟ್ಟ ಗ್ರಾಹಕರು ಕಂಗಾಲಾಗಿದ್ದಾರೆ.
ಬ್ಯಾಂಕ್‌ನಲ್ಲಿ 1 ಕೋಟಿ ನಗದು, 12 ರಿಂದ 13 ಕೆ.ಜಿ ಚಿನ್ನ ದರೋಡೆಯಾಗಿದೆ. ಸಾಲಕ್ಕಾಗಿ ಅಡವಿಟ್ಟಿದ್ದ 12-13 ಕೆಜಿ ಚಿನ್ನ ದರೋಡೆಯಾಗಿರುವ ಸಾಧ್ಯತೆ ಇದೆ ಎಂದು ವಿಜಯಪುರ ಎಸ್ಪಿ ಲಕ್ಷ್ಮಣ ನಿಂಬರಗಿ ಪ್ರಾಥಮಿಕ ಮಾಹಿತಿ ನೀಡಿದ್ದಾರೆ. ಬ್ಯಾಂಕ್ ಮೂಲಗಳಿಂದ ಮಾಹಿತಿ ಸಿಗಬೇಕಿದೆ ಎಂದು ತಿಳಿಸಿದ್ದಾರೆ.
ಐದಕ್ಕೂ ಅಧಿಕ ಮುಸುಕುಧಾರಿ ದರೋಡೆಕೋರರಿಂದ ಕೃತ್ಯ ನಡೆದಿದೆ. ಚಡಚಣ ಪಟ್ಟಣದ ಎಸ್‌ಬಿಐ ಬ್ಯಾಂಕ್‌ನಲ್ಲಿನ ಮ್ಯಾನೇಜರ್, ಕ್ಯಾಶಿಯರ್ ಹಾಗೂ ಇತರೆ ಸಿಬ್ಬಂದಿ ಕೈಕಾಲು ಕಟ್ಟಿ ಹಾಕಿ ಕೂಡಿ ಹಾಕಿ ದರೋಡೆ ನಡೆಸಲಾಗಿದೆ. ಎಸ್ಪಿ ಲಕ್ಷ್ಮಣ ನಿಂಬರಗಿ ಹಾಗೂ ಆಧಿಕಾರಿಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ. ಘಟನೆ ಕುರಿತು ಪೊಲೀಸ್ ಅಧಿಕಾರಿಗಳಿಗೆ ಮ್ಯಾನೇಜರ್ ಹಾಗೂ ಇತರರು ಮಾಹಿತಿ ನೀಡಿದ್ದಾರೆ. ಬ್ಯಾಂಕ್‌ನಲ್ಲಿದ್ದ ನಗದು ಹಣ, ಚಿನ್ನಾಭರಣಗಳ ಕುರಿತು ಮೇಲಧಿಕಾರಿಗಳು ಬಂದ ಬಳಿಕ ಮಾಹಿತಿ ನೀಡುವುದಾಗಿ ಮ್ಯಾನೇಜರ್ ಹೇಳಿದ್ದಾರೆ.
ರಜೆಯಲ್ಲಿದ್ದ ಬ್ಯಾಂಕ್ ಸೆಕ್ಯುರಿಟಿ
ಬ್ಯಾಂಕ್ ಸೆಕ್ಯುರಿಟಿ ಮೂರು ತಿಂಗಳಿಂದ ರಜೆಯಲ್ಲಿದ್ದಾರೆ. ಬ್ಯಾಂಕ್ ಪಕ್ಕದಲ್ಲೇ ಇರುವ ಎಟಿಎಂ ಸೆಕ್ಯುರಿಟಿಯನ್ನು ಕೂಡ ಒಳಗಡೆ ಲಾಕ್ ಮಾಡಿದ್ದರು. ಐದು ಜನ ದರೋಡೆಕೋರರು ಬಂದಿದ್ದರು. ಇಬ್ಬರು ಬ್ಯಾಂಕ್ ಹೊರಗಡೆ ನಿಂತರೆ, ಮೂವರು ಬ್ಯಾಂಕ್ ಒಳಗಡೆ ಹೋಗಿ ದರೋಡೆ ಮಾಡಿದ್ದಾರೆ. ಬ್ಯಾಂಕ್‌ಗೆ ಎಂಟ್ರಿ ಕೊಡ್ತಿದ್ದಂತೆ ಮೊದಲು ಪಿಸ್ತೂಲ್ ತೋರಿಸಿ ಬೆದರಿಸಿದ್ದಾರೆ. ನಂತರ ಬ್ಯಾಂಕ್‌ನ ಎಲ್ಲ ಸಿಬ್ಬಂದಿ ಹಾಗೂ ಎಟಿಎಂ ಸೆಕ್ಯುರಿಟಿಯನ್ನ ಒಂದು ಕೋಣೆಯಲ್ಲಿ ಕೂಡ ಹಾಕಿ, ಕೈ-ಕಾಲು ಕಟ್ಟಿ ದರೋಡೆ ಮಾಡಿದ್ದಾರೆ. ಹುಲ್ಲಜಂತಿ ಗ್ರಾಮದಲ್ಲಿ ವಾಹನ ಬಿಟ್ಟು ಪರಾರಿಯಾಗಿದ್ದಾರೆ. ಇದಕ್ಕೂ ಮುನ್ನ ಬ್ಯಾಂಕ್‌ಗೆ ಮೂರು ದಿನದಿಂದ ಭೇಟಿ ಕೊಟ್ಟಿದ್ದರು. ಆಗ ಮುಖಕ್ಕೆ ಮಾಸ್ಕ್ ಕಟ್ಟಿಕೊಂಡೆ ಬ್ಯಾಂಕ್‌ಗೆ ಎಂಟ್ರಿ ಕೊಟ್ಟಿದ್ದರು. ಮೂರು ದಿನಗಳಿಂದ ಬ್ಯಾಂಕ್ ಸಿಬ್ಬಂದಿ ಚಲನವಲನದ ಮೇಲೆ ಕಣ್ಣಿಟ್ಟಿದ್ದರು. ಈ ಮುಸುಕುಧಾರಿ ದರೋಡೆಕೋರರನ್ನು ಎಟಿಎಂ ಸೆಕ್ಯುರಿಟಿ ಗುರುತಿಸಿದ್ದಾರೆ.
ಬ್ಯಾಂಕ್‌ನಲ್ಲಿದ್ದ ಸಿಸಿ ಕ್ಯಾಮೆರಾ, ಹಾರ್ಡ್ ಡಿಸ್ಕ್ ವಶಕ್ಕೆ ಪಡೆದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಸುತ್ತಮುತ್ತಲ ಸಿಸಿ ಕ್ಯಾಮೆರಾಗಳ ಪರಿಶೀಲನೆಯಲ್ಲಿ ಖಾಕಿ ಪಡೆ ನಿರತವಾಗಿದೆ. ಸ್ಥಳಕ್ಕೆ ಹೆಚ್ಚಿನ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಗಸ್ತು ನಡೆಸುತ್ತಿದ್ದಾರೆ. ಮಹಾರಾಷ್ಟ್ರ ಸಂಪರ್ಕಿಸುವ ಹಾಗೂ ಚಡಚಣದ ಇತರೆ ರಸ್ತೆಗಳಿಗೂ ನಾಕಾ ಬಂದಿ ಹಾಕಿದ್ದಾರೆ. ಮಹಾರಾಷ್ಟ್ರದ ದರೋಡೆಕೋರರ ಗ್ಯಾಂಗ್‌ನಿಂದ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ. ದರೋಡೆಕೋರರಲ್ಲಿ ಓರ್ವ ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಹುಲಜಂತಿ ಗ್ರಾಮದಲ್ಲಿ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಹುಲ್ಲಜಂತಿ ಗ್ರಾಮದಲ್ಲಿ ದರೋಡೆಕೋರರು ಬೈಕ್‌ಗೆ ಡಿಕ್ಕಿ ಹೊಡೆದಿದ್ದಾರೆ. ದರೋಡೆಕೋರನನ್ನು ಬೈಕ್ ಸವಾರ ಹಾಗೂ ಗ್ರಾಮಸ್ಥರು ಬೆನ್ನುಹತ್ತಿದ್ದರು. ಗ್ರಾಮದಲ್ಲೇ ವಾಹನ ಚಲಾಯಿಸಿ ರಸ್ತೆ ಬಂದ್ ಆದ ಕಾರಣ ಗ್ರಾಮಸ್ಥರ ಮಧ್ಯೆ ಲಾಕ್ ಆಗಿದ್ದರು. ಗ್ರಾಮಸ್ಥರಿಗೆ ಪಿಸ್ತೂಲ್ ತೋರಿಸಿ ವಾಹನ ಬಿಟ್ಟು ದರೋಡೆ ಮಾಡಿದ ನಗದು, ಚಿನ್ನಾಭರಣದ ಮೂಟೆ ಹೊತ್ತು ದರೋಡೆಕೋರರು ಪರಾರಿಯಾಗಿದ್ದಾರೆ. ಪರಾರಿಯಾಗಿರುವ ದರೋಡೆಕೋರರ ಸೆರೆಗೆ ಪೊಲೀಸರು ಬಲೆ ಬೀಸಿದ್ದಾರೆ. ದರೋಡೆ ನಂತರ ದರೋಡೆಕೋರರು ಬೇರೆ ಬೇರೆಯಾಗಿ ಪರಾರಿಯಾಗಿದ್ದಾರೆ. ಪೊಲೀಸರು ಪರಿಶೀಲನೆ ಮುಂದುವರಿಸಿದ್ದಾರೆ.
ಗ್ರಾಹಕರಲ್ಲಿ ಆತಂಕ
ಬ್ಯಾಂಕ್‌ನಲ್ಲಿ ಚಿನ್ನಾಭರಣ ಇಟ್ಟ ಗ್ರಾಹಕರಲ್ಲಿ ಆತಂಕ ಮನೆ ಮಾಡಿದೆ. ದರೋಡೆಕೋರನ ಕೃತ್ಯಕ್ಕೆ ಹುಲಜಂತಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಸದ್ಯ ವಾಹನ ಬಿಟ್ಟ ಸ್ಥಳ ಹಾಗೂ ಬ್ಯಾಂಕ್ ಹತ್ತಿರ ಪೊಲೀಸರ ಕಣ್ಗಾವಲು ಇಡಲಾಗಿದೆ. ವಾಹನ ಬಿಟ್ಟಲ್ಲಿ ಹಾಗೂ ಬ್ಯಾಂಕ್‌ನಲ್ಲಿ ಶ್ವಾನದಳ, ಬೆರಳಚ್ಚು ತಜ್ಞರಿಂದ ತಪಾಸಣೆ ನಡೆಸಿದ್ದಾರೆ.
ಬ್ಯಾಂಕ್ ಲಾಕರ್‌ನಲ್ಲಿ ಚಿನ್ನಾಭರಣ ಇಟ್ಟ ಗ್ರಾಹಕರು ಕಂಗಾಲಾಗಿದ್ದಾರೆ. ‘ಲಾಕರ್‌ನಲ್ಲಿ 100 ಗ್ರಾಂ ಚಿನ್ನದ ಆಭರಣ, ಅರ್ಧ ಕೆಜಿ ಬೆಳ್ಳಿ ಇಟ್ಟಿದ್ದೆ. 40 ಗ್ರಾಂ ಚಿನ್ನಾಭರಣ ಪ್ಲಜ್ ಮಾಡಿ 2.5 ಲಕ್ಷ ಲೋನ್ ಪಡದಿದ್ದೆ. ಇದೀಗ ದರೋಡೆ ಸುದ್ದಿ ಕೇಳಿ ಆತಂಕ ಮೂಡಿದೆ ಎಂದು ಗ್ರಾಹಕ ಸಂಗಮೇಶ್ ಬೇಸರ ವ್ಯಕ್ತಪಡಿಸಿದ್ದಾರೆ.
ಚಡಚಣ ಪಟ್ಟಣದ ಎಸ್‌ಬಿಐ ಬ್ಯಾಂಕ್ ದರೋಡೆ ಸುದ್ದಿ ಕೇಳುತ್ತಿದ್ದಂತೆ ಎಲ್ಲರೂ ಜಮಾಯಿಸುತ್ತಿದ್ದಾರೆ. ನಮ್ಮ ಚಿನ್ನಾಭರಣ ಹೋಗಿದೆಯಾ ಅನ್ನೋದರ ಬಗ್ಗೆ ಮಾಹಿತಿ ಪಡೆಯಲು ಗ್ರಾಹಕರು ಬಂದಿದ್ದಾರೆ. ಮತ್ತೊಂದು ಕಡೆ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿ ಆರೋಪಿಗಳಿಗಾಗಿ ತಲಾಷ್ ನಡೆಸಿದ್ದಾರೆ.
ಬೆಂಗಳೂರು: ಬ್ಯಾಂಕ್‌ಗೆ (SBI Bank) 20 ಕೋಟಿ ವಂಚಿಸಿ ತಲೆಮರೆಸಿಕೊಂಡಿದ್ದ ಮಹಿಳೆಯನ್ನ ಬರೋಬ್ಬರಿ 20 ವರ್ಷದ ಬಳಿಕ ಸಿಬಿಐ ಪೊಲೀಸರು (CBI Police) ಬಂಧಿಸಿದ್ದಾರೆ.
ಮಣಿ ಸೇಖರ್ ಬಂಧಿತ ಮಹಿಳೆ. ಎಸ್‌ಬಿಐ ಶಾಖೆಯೊಂದಕ್ಕೆ 8 ಕೋಟಿ ವಂಚನೆ ಮಾಡಿದ್ದ ದಂಪತಿ ಮುತ್ತು ರಾಮಲಿಂಗಂ ಸೇಖರ್ ಮತ್ತು ಪತ್ನಿ ಮಣಿ ಸೇಖರ್ ತಲೆ ಮರೆಸಿಕೊಂಡಿದ್ರು. 2002 -05ರ ನಡ್ವೆ ನಡೆದಿದ್ದ ವಂಚನೆ ಪ್ರಕರಣ ಸಂಬಂಧ ಬೆಂಗಳೂರು ಸಿಬಿಐನಲ್ಲಿ 2006ರಲ್ಲಿ ಎಫ್‌ಐಆರ್ ದಾಖಲಾಗಿತ್ತು. ಇದನ್ನೂ ಓದಿ: 10 ವರ್ಷಗಳಿಂದ ಭಾರತದಲ್ಲಿ ಮಂಗಳಮುಖಿ ವೇಷದಲ್ಲಿದ್ದ ಅಬ್ದುಲ್ ಕಲಾಂ ಅರೆಸ್ಟ್
ಕೇಸ್ ದಾಖಲಾಗ್ತಿದ್ದಂತೆ ತಲೆಮರೆಸಿಕೊಂಡಿದ್ದ ದಂಪತಿ ಮೇಲೆ 2007 ರಲ್ಲಿ ಸಿಬಿಐ ಚಾರ್ಜ್ ಶೀಟ್ ಹಾಕಿತ್ತು. ಆರೋಪಿಗಳ ವಿರುದ್ಧ ನ್ಯಾಯಲಯ 2009 ರಲ್ಲಿ ಪ್ರೊಕ್ಲೈಮೇಷನ್ ಆದೇಶ ಹೊರಡಿಸಿತ್ತು. ಆರೋಪಿಗಳು ತಮ್ಮ ಗುರುತು ಸಿಗದಂತೆ ಕೆವೈಸಿ ಬದಲಿಸಿ ಕೃಷ್ಣ ಕುಮಾರ್ ಗುಪ್ತ ಹಾಗೂ ಗೀತಾ ಕೃಷ್ಣ ಕುಮಾರ್ ಗುಪ್ತ ಎಂದು ಹೆಸರು ಬದಲಾವಣೆ ಮಾಡಿಕೊಂಡಿದ್ರಂತೆ. ಮೊಬೈಲ್ ನಂಬರ್, ಇಮೇಲ್, ಪ್ಯಾನ್ ಎಲ್ಲವನ್ನೂ ಬದಲಿಸಿದ್ದ ದಂಪತಿ ಮಧ್ಯಪ್ರದೇಶದ ಇಂದೋರ್ ನಲ್ಲಿ ತಲೆಮರೆಸಿಕೊಂಡು ವಾಸ ಮಾಡ್ತಿದ್ರು. ಇದನ್ನೂ ಓದಿ: Uttar Pradesh | ಸ್ಕೂಲ್ ವ್ಯಾನ್‌ನಲ್ಲಿ 4 ವರ್ಷದ ಬಾಲಕಿ ಮೇಲೆ ರೇಪ್ – ಡ್ರೈವರ್ ಬಂಧನ
ಸಿಬಿಐ ಅತ್ಯಾಧುನಿಕ ಇಮೇಜ್ ಸರ್ಚ್ ಅನಾಲಿಟಿಕ್ಸ್ ಸಾಫ್ಟ್‌ವೇರ್ ಮೂಲಕ ಆರೊಪಿಯನ್ನ ಬಂಧಿಸಿದೆ. ಹಳೇ ಕೇಸ್ ಆರೋಪಿಗಳ ಬಗ್ಗೆ ಸರ್ಚ್ ಮಾಡುವಾಗ ಸುಳಿವು ಪತ್ತೆಯಾಗಿದ್ದು ಹಳೇ ಇಮೇಜ್ ಇಟ್ಟುಕೊಂಡು ಶೋಧ ನಡೆಸಿದಾಗ ಮಹಿಳೆ ಇಂದೋರ್‌ನಲ್ಲಿ ಪತ್ತೆಯಾಗಿದ್ದಾಳೆ. ಸದ್ಯ ಸಿಬಿಐ ಮಹಿಳೆಯನ್ನ ಬಂಧಿಸಿ ವಿಚಾರಣೆ ನಡೆಸುತ್ತಿದೆ. ವಿಚಾರಣೆ ವೇಳೆ ಗಂಡ ಮುತ್ತು ರಾಮಲಿಂಗಂ ಸಾವಿನ ಕುರಿತು ವಿಚಾರ ತಿಳಿಸಿದ್ದಾಳೆ. ಎಂಟು ಕೋಟಿ ಬ್ಯಾಂಕ್ ಸಾಲ ಪಡೆದು ವಂಚಿಸಿದ್ದ ದಂಪತಿ ಪತ್ತೆಗೆ ಸಿಬಿಐ ತಲಾ 50 ಸಾವಿರ ಬಹುಮಾನ ಕೂಡ ಘೋಷಿಸಿತ್ತು. ಸದ್ಯ ಮಹಿಳೆಯನ್ನ ಬಂಧಿಸಿ ಸಿಬಿಐ ಜೈಲಿಗಟ್ಟಿದೆ. ಇದನ್ನೂ ಓದಿ: Chitradurga | ಮದುವೆಯಾಗಲು ಹೆಣ್ಣು ಸಿಕ್ಕಿಲ್ಲವೆಂದು ಹೋಂ ಗಾರ್ಡ್ ನೇಣಿಗೆ ಶರಣು
ಗ್ರಾಹಕರೊಬ್ಬರು ಕೆಲಸದ ನಿಮಿತ್ತ ಬೆಂಗಳೂರು ಹೊರವಲಯದ ಚಂದಾಪುರ ಎಸ್‌ಬಿಐ ಬ್ಯಾಂಕ್‌ಗೆ(SBI Bank) ಹೋದಾಗ ಕನ್ನಡ ಮಾತನಾಡುವಂತೆ ಮಹಿಳಾ ಬ್ಯಾಂಕ್ ಮ್ಯಾನೇಜರ್(Bank Manager) ಬಳಿ ಕೇಳಿದ್ದಾರೆ. ಆದರೆ ಕನ್ನಡ ಮಾತನಾಡಲು ಒಪ್ಪದ ಮಹಿಳಾ ಮ್ಯಾನೇಜರ್ ಗ್ರಾಹಕನಿಗೆ ಹಿಂದಿಯಲ್ಲಿ ಮಾತನಾಡುವಂತೆ ಅವಾಜ್ ಹಾಕಿದ್ದು, ಇದು ಭಾರತ.. ಬರೀ ಕರ್ನಾಟಕ ಮಾತ್ರ ಅಲ್ಲ. ನಾನು ಯಾವತ್ತೂ ಕನ್ನಡವನ್ನೇ ಮಾತಾಡಲ್ಲ. ಏನೇ ಆದರೂ ಅಂತ ಹೇಳುವ ಮೂಲಕ ಕನ್ನಡಿಗರನ್ನು(Kannadigas) ಕೆರಳಿಸಿದ್ದರು. ಇದನ್ನೂ ಓದಿ: ಆ್ಯಕ್ಷನ್ ಸೀನ್ ಶೂಟಿಂಗ್ ವೇಳೆ ರಾಶಿ ಖನ್ನಾಗೆ ಗಾಯ- ಪೋಸ್ಟ್ ಹಂಚಿಕೊಂಡ ನಟಿ
ಬ್ಯಾಂಕ್ ಮ್ಯಾನೇಜರ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಎಚ್ಚೆತ್ತುಕೊಂಡ ಎಸ್‌ಬಿಐ ಮಹಿಳಾ ಮ್ಯಾನೇಜರ್‌ನನ್ನು ರಾತ್ರೋರಾತ್ರಿ ವರ್ಗಾವಣೆ ಮಾಡಿದೆ.
ಬೆಂಗಳೂರು: ಇಲ್ಲಿನ ಸರ್ಜಾಪುರದ ಎಸ್‌ಬಿಐ ಬ್ಯಾಂಕ್‌ಗೆ (SBI Bank) ಹೋಗಿದ್ದ ಗ್ರಾಹಕರೊಬ್ಬರ ಜೊತೆ ಭಾಷಾ ವಿಷಯಕ್ಕೆ ಬ್ಯಾಂಕ್ ಮ್ಯಾನೇಜರ್ ಉದ್ಧಟತನದಲ್ಲಿ ವರ್ತಿಸಿದ್ದಾರೆ. ಕನ್ನಡ ಮಾತನಾಡಿ ಅಂದಿದ್ದಕ್ಕೆ ನಾನು ಯಾವತ್ತೂ ಕನ್ನಡ ಮಾತಾಡಲ್ಲ ಅಂತ ದರ್ಪ ಮೆರೆಯುವ ಮೂಲಕ ಕನ್ನಡಿಗರನ್ನ (Kannadigas) ಕೆಣಕುವ ಕೆಲಸ ಮಾಡಿದ್ದಾರೆ.
ಸರ್ಜಾಪುರದ ಎಸ್‌ಬಿಐ ಬ್ಯಾಂಕ್‌ಗೆ ಕೆಲಸದ ನಿಮಿತ್ತ ಗ್ರಾಹಕ ಹೋದಾಗ ಕನ್ನಡ ಮಾತನಾಡುವಂತೆ ಕೇಳಿದ್ದಾರೆ. ಆದರೆ ಕನ್ನಡ ಮಾತನಾಡಲು ಒಪ್ಪದ ಮಹಿಳಾ ಮ್ಯಾನೇಜರ್ ಗ್ರಾಹಕನಿಗೆ ಹಿಂದಿಯಲ್ಲಿ ಮಾತನಾಡುವಂತೆ ಅವಾಜ್ ಹಾಕಿದ್ದು, ಇದು ಭಾರತ ಬರೀ ಕರ್ನಾಟಕ ಮಾತ್ರ ಅಲ್ಲ. ನಾನು ಯಾವತ್ತೂ ಕನ್ನಡವನ್ನೇ ಮಾತಾಡಲ್ಲ. ಏನೇ ಆದರೂ ಅಂತ ಹೇಳುವ ಮೂಲಕ ಕರ್ನಾಟಕದಲ್ಲಿ ಮತ್ತೆ ಕನ್ನಡಿಗರನ್ನ ಕೆರಳಿಸುವಂತ ಹೇಳಿಕೆ ಕೊಟ್ಟು, ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇದನ್ನೂ ಓದಿ: ಬೆಂಗಳೂರು ರಣಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
– ಲೋನ್ ಅರ್ಜಿ ತಿರಸ್ಕಾರಿಸಿದ್ದಕ್ಕೆ ಪ್ರತೀಕಾರ – ವೆಬ್ ಸೀರಿಸ್ ನೋಡಿ ಪ್ಲ್ಯಾನ್! – ಕುಟುಂಬದೊಂದಿಗೂ ಮಾಹಿತಿ ಹಂಚಿಕೊಳ್ಳದ ಖದೀಮರು!
ದಾವಣಗೆರೆ: ನ್ಯಾಮತಿ ಎಸ್‍ಬಿಐ ಬ್ಯಾಂಕ್ (Nyamathi SBI Bank) ದರೋಡೆ ಪ್ರಕರಣದಲ್ಲಿ (Bank Robbery) ಆರು ತಿಂಗಳ ಬಳಿಕ ಚಿನ್ನಾಭರಣ (Gold) ಸಹಿತ ಅರೋಪಿಗಳ ಬಂಧನವಾಗಿದೆ. ಆರೋಪಿಗಳ ವಿಚಾರಣೆ ವೇಳೆ ಸ್ಫೋಟಕ ವಿಚಾರ ಬಯಲಾಗಿದ್ದು, ಚಿನ್ನ ಮುಚ್ಚಿಟ್ಟಿದ್ದು, ದರೋಡೆಗೆ ಕಾರಣ, ಸಂಚು ಎಲ್ಲವನ್ನೂ ಆರೋಪಿಗಳು ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾರೆ.
ಪ್ರಕರಣದಲ್ಲಿ 6 ಜನ ಆರೋಪಿಗಳ ಬಂಧನವಾಗಿದೆ. ಕದ್ದಿದ್ದ 17 ಕೆಜಿ ಬಂಗಾರ ವಶಪಡಿಸಿಕೊಳ್ಳಲಾಗಿದೆ. ದರೋಡೆ ಪ್ರಕರಣದ ಮಾಸ್ಟರ್ ಮೈಂಡ್ ವಿಜಯ್ ಕುಮಾರ್ ನ್ಯಾಮತಿಯಲ್ಲಿ ಬೇಕರಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದ. ಬ್ಯಾಂಕ್‍ನಲ್ಲಿ ಲೋನ್ ಪಡೆಯಲು ಎರಡು ಬಾರಿ ಅರ್ಜಿ ಹಾಕಿದ್ದ, ಈ ಅರ್ಜಿ ತಿರಸ್ಕಾರವಾಗಿತ್ತು. ಇದರಿಂದ ರೋಸಿ ಹೋಗಿದ್ದ. ಇದೇ ಕಾರಣಕ್ಕೆ ಬ್ಯಾಂಕ್ ದರೋಡೆಗೆ ಹಿಂದಿ ವೆಬ್ ಸೀರಿಸ್ ನೋಡಿ ದರೋಡೆಗೆ ಸಂಚು ರೂಪಿಸಿದ್ದ. ಇದನ್ನೂ ಓದಿ: ಎಸ್‌ಬಿಐ ಬ್ಯಾಂಕ್ ದರೋಡೆ ಕೇಸ್ – 12.96 ಕೋಟಿ ಮೌಲ್ಯದ ಚಿನ್ನಾಭರಣ ದೋಚಿದ್ದ 5 ಆರೋಪಿಗಳು ಅರೆಸ್ಟ್
ಆರೋಪಿಗಳು ಮೊಬೈಲ್, ವಾಹನ ಬಳಸದೇ, ಯಾವ ಸಾಕ್ಷಿಯನ್ನೂ ಬಿಡದೆ ದರೋಡೆ ಮಾಡಿದ್ದರು. ದರೋಡೆ ಮಾಡಿದ 17 ಕೆಜಿ ಚಿನ್ನವನ್ನು ತಮಿಳುನಾಡಿನ ಮಧುರೈನಲ್ಲಿರುವ ತೋಟದ ಮನೆಯ ಪಾಳು ಬಿದ್ದ ಬಾವಿಯಲ್ಲಿ ಲಾಕರ್‍ನಲ್ಲಿ ಇಟ್ಟಿದ್ದರು.
ದರೋಡೆಗೆ ಮೊದಲು, ದರೋಡೆಯ ನಂತರ ದರೋಡೆಕೋರರು ಗಡಿ ಚೌಡಮ್ಮನ ಅಷ್ಟಧಿಗ್ಬಂಧನ ಪೂಜೆ ಮಾಡಿದ್ದರು. ಅಲ್ಲದೇ ದರೋಡೆಯ ಮಾಹಿತಿಯನ್ನು ಕುಟುಂಭಸ್ಥರ ಜೊತೆಯೂ ಹಂಚಿಕೊಂಡಿರಲಿಲ್ಲ. ಪೊಲೀಸರು ಆರೋಪಿಗಳನ್ನು ಟೆಕ್ನಿಕಲ್ ಎವಿಡೆನ್ಸ್ ಮೂಲಕ ಬಂಧಿಸಿದ್ದರು.
-ನ್ಯಾಮತಿ ಇತಿಹಾಸದಲ್ಲೇ ಮೊದಲ ಬಾರಿಗೆ ಬ್ಯಾಂಕ್ ದರೋಡೆ ಕೇಸ್ ಭೇದಿಸಿದ ಪೊಲೀಸರು
ದಾವಣಗೆರೆ: ಜಿಲ್ಲೆಯ ನ್ಯಾಮತಿ (Nyamathi) ಪಟ್ಟಣದ ಎಸ್‌ಬಿಐ ಬ್ಯಾಂಕ್ (SBI Bank) ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ 12.96 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕದ್ದೊಯ್ದಿದ್ದ 5 ಆರೋಪಿಗಳನ್ನು ಬಂಧಿಸಿದ್ದಾರೆ.
ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ಈ ದರೋಡೆ ನಡೆದಿತ್ತು. ಬ್ಯಾಂಕ್ ಕಿಟಕಿಯ ಸರಳನ್ನು ಮುರಿದು, 12.96 ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ದೋಚಿಕೊಂಡು ಹೋಗುವಾಗ ಬ್ಯಾಂಕ್ ತುಂಬೆಲ್ಲಾ ಕಾರದ ಪುಡಿಯನ್ನು ಚೆಲ್ಲಿ ಎಸ್ಕೇಪ್ ಆಗಿದ್ದರು.
ಪೊಲೀಸ್ ಇಲಾಖೆಗೆ ದರೋಡೆಕೋರರನ್ನು ಪತ್ತೆ ಹಚ್ಚುವುದೇ ದೊಡ್ಡ ತಲೆನೋವಾಗಿತ್ತು. ಎಸ್‌ಪಿ ಉಮಾ ಪ್ರಶಾಂತ್ ಹಾಗೂ ಎಎಸ್ಪಿ ಸ್ಯಾಮ್ ವರ್ಗೀಸ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ, ತನಿಖೆ ನಡೆಸಿದಾಗ ದರೋಡೆಕೋರರ ಪತ್ತೆಯಾಗಿದ್ದು, ಮೂವರು ಸ್ಥಳೀಯರನ್ನು ಸೇರಿ ಒಟ್ಟು 5 ಜನ ದರೋಡೆಕೋರರನ್ನು ಅರೆಸ್ಟ್ ಮಾಡಿದ್ದಾರೆ. ತಮಿಳುನಾಡು ಮೂಲದ ಪರಮಾನಂದ ಎನ್ನುವ ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದು, ಸದ್ಯ ಆತನ ಬಂಧನಕ್ಕೆ ಬಲೆ ಬೀಸಿದ್ದಾರೆ.
ಇನ್ನು ಆರೋಪಿಗಳು ದರೋಡೆ ಮಾಡಲು ನ್ಯಾಮತಿಯಲ್ಲಿ ಬೇಕರಿ ಹಾಕಿಕೊಂಡು ಹಲವು ವರ್ಷಗಳಿಂದ ಸ್ಕೆಚ್ ಹಾಕಿದ್ದರು ಎನ್ನಲಾಗಿದೆ. ಪೊಲೀಸರು ಕೆಲ ತಾಂತ್ರಿಕ ಸಾಕ್ಷ್ಯಧಾರದ ಮೇರೆಗೆ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಈ ದರೋಡೆ ಪ್ರಕರಣ ಹೊರಬಂದಿದೆ. ಹೆಚ್ಚಿನ ವಿಚಾರಣೆ ನಡೆಯುತ್ತಿದ್ದು, ದರೋಡೆ ಮಾಡಿದ ಚಿನ್ನಾಭರಣ ಎಲ್ಲಿದೆ? ಎಂಬುದರ ಬಗ್ಗೆಯೂ ತನಿಖೆ ನಡೆಯುತ್ತಿದೆ. ಇನ್ನೂ ಚಿನ್ನಾಭರಣವನ್ನು ಕಳೆದುಕೊಂಡು ಕಂಗಾಲಾಗಿದ್ದ ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದು, ಪೊಲೀಸರ ಕಾರ್ಯಕ್ಕೆ ಶ್ಲಾಘಿಸಿದ್ದಾರೆ.ಇದನ್ನೂ ಓದಿ:ಕುಡಿಯುವ ನೀರಿಗೂ ಕಂಟಕವಾ? – ಮಿನರಲ್ ವಾಟರ್‌ಬಾಟಲ್‌ನಲ್ಲಿ ಹಾನಿಕಾರಕ ಅಂಶ ಪತ್ತೆ!
– ನಮ್ಮ ಮನೆ ಆಧಾರ ಸ್ಥಂಭವೇ ಅಣ್ಣ ಆಗಿದ್ದ – ಪ್ರತಿದಿನ ಇರುತ್ತಿದ್ದ ಗನ್ ಮ್ಯಾನ್ ಇಂದು ಯಾಕಿಲ್ಲ?
ಬೀದರ್: ಗನ್‌ಮ್ಯಾನ್ ಇಲ್ಲದೇ ಎಟಿಎಂಗೆ (ATM) ಹಣ ಹೇಗೆ ಹಾಕುತ್ತಾರೆ? ಇದು ಪ್ರೀ ಪ್ಲಾನ್ ಮಾಡಿ ಮಾಡಿದ ಕೃತ್ಯವಾಗಿದೆ ಎಂದು ಗುಂಡಿನ ದಾಳಿಯಲ್ಲಿ ಮೃತಪಟ್ಟ ಬ್ಯಾಂಕ್ ಸಿಬ್ಬಂದಿ ಗಿರಿ ವೆಂಕಟೇಶ್ ತಂಗಿ ಮಂಜುಳಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೀದರ್‌ನಲ್ಲಿ (Bidar) ಎಸ್‌ಬಿಐ ಬ್ಯಾಂಕ್ (SBI Bank) ಸಿಬ್ಬಂದಿ ಮೇಲೆ ಖಾರದ ಪುಡಿ ಎರಚಿ, ಗುಂಡಿನ ದಾಳಿ ನಡೆಸಿ ಹಣ ದೋಚಿ ಪರಾರಿಯಾದ ಪ್ರಕರಣದ ಕುರಿತು ಅವರು ಮಾತನಾಡಿದರು. ನಮ್ಮ ಮನೆ ಆಧಾರ ಸ್ಥಂಭವೇ ನಮ್ಮ ಅಣ್ಣ ಆಗಿದ್ದ. ಇದು ಪ್ರೀ ಪ್ಲಾನ್ ಮಾಡಿ ಮಾಡಿದ ಕೃತ್ಯವಾಗಿದೆ. ಅದು ಡಿಸಿ ಆಫೀಸ್ ಹತ್ತಿರವೇ ಘಟನೆ ನಡೆದಿದೆ. ಈ ಬಗ್ಗೆ ತನಿಖೆ ಮಾಡಿ ನಮಗೆ ನ್ಯಾಯ ಕೊಡಿಸಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ವಿಶ್ವದ ಪ್ರತಿ ದೇಶದಲ್ಲೂ ನನ್ನದೊಂದು ಮಗು ಇರಬೇಕು – ಅಮೆರಿಕದ ವೀರ್ಯದಾನಿಯ ಹೆಬ್ಬಯಕೆ
ಗನ್ ಮ್ಯಾನ್ ಇಂದು ಕರ್ತವ್ಯಕ್ಕೆ ಗೈರಾಗಿದ್ದರಾ? ಪ್ರತಿದಿನ ಗನ್‌ಮ್ಯಾನ್ ಇರುತ್ತಿದ್ದ. ಇಂದು ಬಂದಿಲ್ಲ ಎಂದು ಸಿಎಂಎಸ್ ಸಂಸ್ಥೆಯ ನಿರ್ಲಕ್ಷ್ಯದ ವಿರುದ್ಧ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ ಸಂಸ್ಥೆಯ ನಿರ್ಲಕ್ಷ್ಯದಿಂದ ನನ್ನ ಮಗ ಸಾವನ್ನಪ್ಪಿದ್ದಾನೆ ಎಂದು ತಾಯಿ ಕಣ್ಣೀರು ಹಾಕಿದ್ದಾರೆ. ಬ್ರಿಮ್ಸ್ ಶವಗಾರದ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಇದನ್ನೂ ಓದಿ: ಹೃದಯಾಘಾತದಿಂದ ಪ್ರಥಮ ಪಿಯುಸಿ ವಿದ್ಯಾರ್ಥಿ ಸಾವು
ಇನ್ನು ಈ ಕುರಿತು ಬೀದರ್ ಎಸ್ಪಿ ಪ್ರದೀಪ್ ಗುಂಟಿ ಮಾತನಾಡಿ, ಎಸ್‌ಬಿಐ ಕಚೇರಿ ಮುಂದೆ ದರೋಡೆ ಮತ್ತು ಮರ್ಡರ್ ಆಗಿದೆ. ಇಬ್ಬರು ಆರೋಪಿಗಳು ಬೈಕ್ ಮೇಲೆ ಬಂದು ದರೋಡೆ ಮಾಡಿದ್ದಾರೆ. ಇಬ್ಬರು ಸಿಬ್ಬಂದಿಗಳು ಎಟಿಎಂಗೆ ಹಣ ತುಂಬುವಾಗ ದಾಳಿ ಮಾಡಿದ್ದಾರೆ. ಈ ವೇಳೆ ಫೈರಿಂಗ್ ಮಾಡಿದ್ದು, ಓರ್ವ ಸಿಬ್ಬಂದಿ ಸಾವಾಗಿದೆ. ಇನ್ನೊಬ್ಬ ಸಿಬ್ಬಂದಿ ಸ್ಥಿತಿ ಗಂಭೀರವಾಗಿದೆ. ಎಟಿಎಂಗೆ ಹಾಕುವ ಹಣದ ಪೆಟ್ಟಿಗೆ ಜೊತೆ ದರೋಡೆ ಮಾಡಿ ಪರಾರಿಯಾಗಿದ್ದಾರೆ. ನಮ್ಮಿಂದ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ. ಹಣದ ಪೆಟ್ಟಿಗೆ ಹೇಗೆ ಓಪನ್ ಮಾಡಿದ್ದಾರೆ ಗೊತ್ತಿಲ್ಲ. ಇದರಲ್ಲಿ ಹಣ ಎಷ್ಟಿತ್ತು ಎಂದು ಬ್ಯಾಂಕ್ ಅಧಿಕಾರಿಗಳು ಪರಿಶೀಲನೆ ಮಾಡುತ್ತಿದ್ದಾರೆ ಎಂದರು. ಇದನ್ನೂ ಓದಿ: ನಂಜನಗೂಡು| ಕಿಡಿಗೇಡಿಗಳಿಂದ ಹಸುವಿನ ಬಾಲಕ್ಕೆ ಮಚ್ಚಿನಿಂದ ಹಲ್ಲೆ
ಯಾದಗಿರಿ: ಸರ್ಕಾರದ ಯೋಜನೆಗಳಿಂದ ಜನರ ಖಾತೆಗೆ ಬೀಳುತ್ತಿರುವ ಹಣವನ್ನು ಬ್ಯಾಂಕ್‍ನಿಂದ ಸಾಲಕ್ಕೆ ಜಮೆ ಮಾಡಿಕೊಳ್ಳಲಾಗುತ್ತಿದೆ ಎಂಬ ಆರೋಪ ಖಾನಾಪುರದ ಎಸ್‍ಬಿಐ ಬ್ಯಾಂಕ್ (SBI Bank) ವಿರುದ್ಧ ಕೇಳಿ ಬಂದಿದೆ.
ಗೃಹಲಕ್ಷ್ಮಿ (Gruha Lakshmi), ಅನ್ನಭಾಗ್ಯ, ಪಿಂಚಣಿ, ಪಿಎಂ ಕಿಸಾನ್ ಹಣ ಸೇರಿದಂತೆ ಬೆಳೆ ಪರಿಹಾರದ ಹಣವನ್ನು ಸರ್ಕಾರ ಪಾವತಿ ಮಾಡಿದರೂ ಬ್ಯಾಂಕ್‍ನಲ್ಲಿ ತಡೆಹಿಡಿಯಲಾಗುತ್ತಿದೆ. ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸರ್ಕಾರದ ಆದೇಶ ಇದ್ದರೂ ಸಹ ಆದೇಶ ಉಲ್ಲಂಘನೆ ಮಾಡುತ್ತಿದ್ದಾರೆ ಎಂದು ಜನ ಆರೋಪಿಸಿದ್ದಾರೆ. ಇದನ್ನೂ ಓದಿ: ನಾಗಮಂಗಲ ಗಲಭೆಗೆ ತಲೆದಂಡ – ಟೌನ್ ಇನ್ಸ್‌ಪೆಕ್ಟರ್ ಅಮಾನತು
ಹಣ ಕೇಳಲು ಹೋದರೆ ಸಾಲ ತೀರಿಸಿ ಹಣವನ್ನು ತೆಗೆದುಕೊಳ್ಳಿ ಎಂದು ಬ್ಯಾಂಕ್ ಸಿಬ್ಬಂದಿ ಹಾಗೂ ಮ್ಯಾನೇಜರ್ ಧಮ್ಕಿ ಹಾಕುತ್ತಿದ್ದಾರೆ. ಮಗಳ ಚಿಕಿತ್ಸೆಗೆ ಹಣ ಬೇಕು ಎಂದರೂ ಕೊಡುತ್ತಿಲ್ಲ. ನೂರಾರು ಮಹಿಳೆಯರಿಗೆ ಈ ರೀತಿ ಸಮಸ್ಯೆಯಾಗಿದೆ ಎಂದು ಜನ ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ.