Tag: SBSP

  • SBSP ಮಹಿಳಾ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯ ಬರ್ಬರ ಹತ್ಯೆ

    SBSP ಮಹಿಳಾ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯ ಬರ್ಬರ ಹತ್ಯೆ

    ಲಕ್ನೋ: ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷದ (SBSP) ಮಹಿಳಾ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ನಂದಿನಿ ರಾಜ್‌ಭರ್ (30) (Nandini Rajbhar) ಅವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.

    ಕೊತ್ವಾಲಿ ಖಲೀಲಾಬಾದ್ ಪ್ರದೇಶದ ಆಕೆಯ ನಿವಾಸದಲ್ಲಿ ಭಾನುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಉತ್ತರ ಪ್ರದೇಶದ ಸಂತ ಕಬೀರ್ ನಗರದಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಈ ಕೊಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ನಂದಿನಿ ದೇಹದ ಮೇಲೆ ಅನೇಕ ಇರಿತದ ಗಾಯಗಳಿವೆ. ಸುಮಾರು 10 ದಿನಗಳ ಹಿಂದೆ ವರದಿಯಾದ ವಿವಾದದ ಕುರಿತು ಅಪರಿಚಿತ ವ್ಯಕ್ತಿಗಳು ನಂದಿನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ ಎಂದು ಐಜಿ ರಾಮ್ ಕೃಷ್ಣ ಭಾರದ್ವಾಜ್ ಹೇಳಿದ್ದಾರೆ.

    ಮಾಹಿತಿ ಪಡೆದ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಕೊಲೆ ಪ್ರಕರಣ ಸಂಬಂಧ ಸ್ಥಳೀಯರು 3-4 ಜನರನ್ನು ಹೆಸರಿಸಿದ್ದು, ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ಸ್ಥಳದಲ್ಲಿ ಭಾರೀ ಭದ್ರತೆಯನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಆಸ್ಟ್ರೇಲಿಯಾದಲ್ಲಿ ಹೈದರಾಬಾದ್ ಮಹಿಳೆಯ ಶವ ಪತ್ತೆ – ಪತಿಯಿಂದಲೇ ಕೊಲೆ ಶಂಕೆ

    ಪೊಲೀಸರ ಪ್ರಕಾರ, ಎಸ್‌ಬಿಎಸ್‌ಪಿ ನಾಯಕಿಯ ಶವವನ್ನು ಸ್ಥಳೀಯ ಮಹಿಳೆಯೊಬ್ಬರು ಮೊದಲು ಪತ್ತೆ ಹಚ್ಚಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನೆಯ ಸಂದರ್ಭದಲ್ಲಿ ನಂದಿನಿ ಪತಿ ಮತ್ತು ಏಳು ವರ್ಷದ ಮಗ ದೂರದಲ್ಲಿದ್ದರು.

    ಶವವಾಗಿ ಪತ್ತೆಯಾಗಿದ್ದ ಮಾವ: ಈ ಹಿಂದೆ ಎಸ್‌ಬಿಎಸ್‌ಪಿ ನಾಯಕಿಯ ಮಾವ ರೈಲ್ವೇ ಹಳಿಗಳ ಮೇಲೆ ಶವವಾಗಿ ಪತ್ತೆಯಾಗಿದ್ದರು. ಈ ಸಂಬಂಧ ತನಿಖೆ ಇನ್ನೂ ನಡೆಯುತ್ತಿದೆ. ನಂದಿನಿ ರಾಜ್‌ಭರ್‌ನನ್ನು ಕೊಲೆ ಮಾಡಲಾಗಿದೆ. ಇದಕ್ಕೂ ಮೊದಲು ಅಂದರೆ ಫೆಬ್ರವರಿ 29 ರಂದು ನಂದಿನಿಯ ಮಾವ ಕೂಡ ಕೊಲೆಯಾದರು. ಆದರೆ ಇದನ್ನು ‘ಆತ್ಮಹತ್ಯೆ’ ಎಂದು ಬಿಂಬಿಸಲಾಗಿದೆ. ನಂದಿನಿ ತನ್ನ ಕುಟುಂಬದ ನ್ಯಾಯಕ್ಕಾಗಿ ಹೋರಾಡುತ್ತಿದ್ದಳು ಎಂದು ನಂದಿನಿ ಚಿಕ್ಕಪ್ಪ ರಾಮಗೋಪಾಲ್ ರಾಜಭರ್ ಬೇಸರ ವ್ಯಕ್ತಪಡಿಸಿಸದ್ದಾರೆ.

    ಎಸ್‌ಬಿಎಸ್‌ಪಿ ನಾಯಕಿಯ ಹತ್ಯೆಯಲ್ಲಿ ಭಾಗಿಯಾಗಿರುವವರ ವಿರುದ್ಧ ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ. ಪ್ರಕರಣ ಕುರಿತು ಉನ್ನತ ಮಟ್ಟದ ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.

  • ಅಧಿಕಾರಕ್ಕೆ ಬಂದ್ರೆ ಟ್ರಿಪಲ್‌ ರೈಡಿಂಗ್‌ಗೆ ಅವಕಾಶ: SBSP ಭರವಸೆ

    ಅಧಿಕಾರಕ್ಕೆ ಬಂದ್ರೆ ಟ್ರಿಪಲ್‌ ರೈಡಿಂಗ್‌ಗೆ ಅವಕಾಶ: SBSP ಭರವಸೆ

    ಲಕ್ನೋ: ಪಂಚರಾಜ್ಯಗಳ ಚುನಾವಣೆಯ ಕೇಂದ್ರಬಿಂದುವಾಗಿರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳು ಇನ್ನಿಲ್ಲದ ಕಸರತ್ತು ನಡೆಸುತ್ತಿವೆ. ತಮ್ಮ ಪ್ರಣಾಳಿಕೆಗಳಲ್ಲಿ ಭರವಸೆಗಳ ಮಹಾಪೂರವನ್ನೇ ಹರಿಸಿವೆ. ಈ ನಡುವೆ ಸಮಾಜವಾದಿ ಪಕ್ಷದೊಂದಿಗೆ (ಎಸ್‌ಪಿ) ಮೈತ್ರಿ ಸಾಧಿಸಿರುವ ಸುಹೆಲ್‌ದೇವ್‌ ಭಾರತೀಯ ಸಮಾಜ ಪಕ್ಷ (ಎಸ್‌ಬಿಎಸ್‌ಪಿ) ಅಚ್ಚರಿ ಮೂಡಿಸುವಂತಹ ಭರವಸೆಯೊಂದನ್ನು ನೀಡಿದೆ.

    ನಮ್ಮ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ, ಬೈಕ್‌ಗಳಲ್ಲಿ ಟ್ರಿಪಲ್‌ ರೈಡ್‌ಗೆ ಅನುಮತಿ ನೀಡಲಾಗುವುದು ಎಂದು ಎಸ್‌ಬಿಎಸ್‌ಪಿ ಅಧ್ಯಕ್ಷ ಹಾಗೂ ಯುಪಿ ಮಾಜಿ ಸಚಿವ ಓಂ ಪ್ರಕಾಶ್‌ ರಾಜ್‌ಭರ್‌ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಬ್ರಿಟಿಷರು ಬಿಜೆಪಿ ರೂಪದಲ್ಲಿ ಮತ್ತೆ ಭಾರತಕ್ಕೆ ಬಂದಿದ್ದಾರೆ: ಲಾಲೂ ಪ್ರಸಾದ್ ಯಾದವ್

    ಬೈಕ್‌ಗಳಲ್ಲಿ ಟ್ರಪಲ್‌ ರೈಡ್‌ಗೆ ಅನುಮತಿ ನೀಡುತ್ತೇವೆ. ಅಂತಹವರಿಗೆ ಯಾವುದೇ ದಂಡ ವಿಧಿಸುವುದಿಲ್ಲ ಎಂದು ರಾಜ್‌ಭರ್‌ ತಿಳಿಸಿದ್ದಾರೆ.

    ಸೀಮಿತ ಆಸನ ಸಾಮರ್ಥ್ಯವಿರುವ ರೈಲುಗಳ ಕೋಚ್‌ಗಳಲ್ಲಿ ನೂರಾರು ಜನರು ಪ್ರಯಾಣಿಸುತ್ತಾರೆ. ಅವರಿಗೆ ಸರ್ಕಾರವಾಗಲಿ ಅಥವಾ ರೈಲ್ವೆ ವಿಭಾಗದವರಾಗಲಿ ದಂಡ ಹಾಕುತ್ತಾರೆಯೇ ಎಂದು ರಾಜ್‌ಭರ್‌ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಹಿಜಬ್‌ ವಿವಾದ ಇಲ್ಲ, ನಿಷೇಧ ಪ್ರಸ್ತಾಪವೂ ಇಲ್ಲ: ಗೃಹ ಸಚಿವ

    ಫೆ.10ರಿಂದ ವಿವಿಧ ಹಂತಗಳಲ್ಲಿ ಉತ್ತರ ಪ್ರದೇಶ ಚುನಾವಣೆ ನಡೆಯಲಿದೆ. ಮಾರ್ಚ್‌ 10ಕ್ಕೆ ಚುನಾವಣಾ ಫಲಿತಾಂಶ ಹೊರ ಬೀಳಲಿದೆ.