ಕಲಬುರಗಿ: ಎಂಆರ್‌ಎಂಸಿ ಮೆಡಿಕಲ್ ಕಾಲೇಜಿನ ಶಿಷ್ಯವೇತನ (Scholarship) ಹಗರಣದ ಸಂಬಂಧ ಕಾಂಗ್ರೆಸ್ (Congress) ಮುಖಂಡ ಹೆಚ್‍ಕೆಇ ಸೊಸೈಟಿ ಮಾಜಿ ಅಧ್ಯಕ್ಷನ ಮನೆ ಮೇಲೆ ಇಡಿ ದಾಳಿ (ED Raids) ನಡೆಸಿದೆ.
ಕಲಬುರಗಿಯ (Kalaburagi) ರಿಂಗ್ ರಸ್ತೆಯಲ್ಲಿರುವ ಭೀಮಾಶಂಕರ್ ಬಿಲಗುಂದಿಯವರ ಮನೆ ಮೇಲೆ ನಾಲ್ವರು ಅಧಿಕಾರಿಗಳ ತಂಡ ದಾಳಿ ಮಾಡಿದೆ. ಎಂಆರ್‌ಎಂಸಿ ಮೆಡಿಕಲ್ ಕಾಲೇಜ್ ಶಿಷ್ಯವೇತನ ಹಗರಣ ವಿಚಾರವಾಗಿ ಈ ದಾಳಿ ನಡೆದಿದೆ.
2018 ರಿಂದ 2024ರ ವರೆಗೆ ಎರಡು ಅವಧಿಗೆ ಭೀಮಾಶಂಕರ್ ಅಧ್ಯಕ್ಷರಾಗಿದ್ದರು. 700 ಜನ ಎಂಬಿಬಿಎಸ್ (MBBS) ವಿದ್ಯಾರ್ಥಿಗಳಿಗೆ ಶಿಷ್ಯವೇತನ ಹಣ ಕೊಡದೆ ವಂಚಿಸಲಾಗಿದೆ ಎಂದು ಆರೋಪಿಸಲಾಗಿದೆ. ಸುಮಾರು 80 ಕೋಟಿ ರೂ.ಗೂ ಅಧಿಕ ಹಣ ನೀಡದೆ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ.
ಪ್ರಕರಣ ದಾಖಲಾಗಿದ್ದು ಯಾವಾಗ.?
ಎಂಆರ್‌ಎಂಸಿಯ 282ಕ್ಕೂ ಹೆಚ್ಚು ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳಿಗೆ ಸೇರಬೇಕಿದ್ದ 81.21 ಕೋಟಿ ರೂ. ಸ್ಟೈಫಂಡ್ ಹಣವನ್ನು ಭೀಮಾಶಂಕರ ಸೇರಿದಂತೆ ನಾಲ್ವರು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು. ಬಳಿಕ 2023ರ ಮಾರ್ಚ್ 31ರಂದು ನಗರದಲ್ಲಿರುವ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ವಿದ್ಯಾರ್ಥಿಗಳ ಖಾತೆಗೆ ಸ್ಟೈಫಂಡ್ ಹಣ ಜಮೆ ಮಾಡಿಸಿ, ಬಳಿಕ ವಿದ್ಯಾರ್ಥಿಗಳಿಂದ ಖಾಲಿ ಚೆಕ್‌ಗಳಿಗೆ ಅಕ್ರಮವಾಗಿ ಸಹಿ ಪಡೆದುಕೊಂಡಿದ್ದರು. ನಂತರ ಅಕ್ರಮವಾಗಿ ಸ್ಟೈಫಂಡ್ ಹಣವನ್ನು ವಿತ್‌ಡ್ರಾ ಮಾಡಿಕೊಂಡ ಈ ನಾಲ್ವರು, ತಮ್ಮ ಸ್ವಂತಕ್ಕೆ ಬಳಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿತ್ತು. ಈ ಪ್ರಕರಣ ಕುರಿತಾಗಿ ಸಮರ್ಪಕ ಮಾಹಿತಿ ಪಡೆಯಲು ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ ಪ್ರಾಥಮಿಕ ಹಂತದಿಂದ ಉನ್ನತ ಶಿಕ್ಷಣದವರೆಗೆ 7.85 ಲಕ್ಷ ವಿದ್ಯಾರ್ಥಿಗಳಿಗೆ 290 ಕೋಟಿ ರೂ. ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ ಎಂದು ಸಚಿವ ಜಮೀರ್ ಅಹಮದ್ ಖಾನ್ (Zameer Ahmed Khan) ತಿಳಿಸಿದರು.
ಈಗಾಗಲೇ 6.25 ಲಕ್ಷ ವಿದ್ಯಾರ್ಥಿಗಳಿಗೆ ಡಿಬಿಟಿ ಮೂಲಕ 180 ಕೋಟಿ ರೂ. ವರ್ಗಾವಣೆ ಮಾಡಲಾಗಿದ್ದು, 1.60 ಲಕ್ಷ ವಿದ್ಯಾರ್ಥಿಗಳಿಗೆ 100 ಕೋಟಿ ರೂ. ಅನುದಾನ ಅಗತ್ಯವಿರುವ ಬಗ್ಗೆ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.ಇದನ್ನೂ ಓದಿ: ಹಾಸನ | ಕುಡಿದ ಮತ್ತಿನಲ್ಲಿ ಕಾರು ಅಡ್ಡಗಟ್ಟಿ ಗುಂಡು ಹಾರಿಸಿದ ಯುವಕ ಅರೆಸ್ಟ್
ವಿದ್ಯಾಸಿರಿ ಯೋಜನೆಯಡಿಯಲ್ಲಿ ಜನವರಿ ಅಂತ್ಯದವರೆಗೆ ಹಾಸ್ಟೆಲ್‌ಗಳಲ್ಲಿ 23 ಸಾವಿರ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗಿದ್ದು, ಹಾಸ್ಟೆಲ್‌ನಲ್ಲಿ ಪ್ರವೇಶ ಸಿಗದ 5,753 ವಿದ್ಯಾರ್ಥಿಗಳಿಗೆ ಮಾಸಿಕ 1,500 ರೂ.ನಂತೆ ಹತ್ತು ತಿಂಗಳ ಮೊತ್ತ 15 ಸಾವಿರ ರೂ. ವರ್ಗಾವಣೆ ಮಾಡಲಾಗಿದೆ. ಅದಕ್ಕಾಗಿ 8.63 ಕೋಟಿ ರೂ. ವೆಚ್ಚ ಮಾಡಲಾಗಿದೆ. ಇನ್ನೂ 200 ವಿದ್ಯಾರ್ಥಿಗಳ ಆಧಾರ್ ಲಿಂಕ್ ಸಮಸ್ಯೆ ಇದ್ದು, ಅದು ಸರಿಹೋದ ನಂತರ ಅವರಿಗೂ ಹಣ ವರ್ಗಾವಣೆ ಆಗಲಿದ್ದು, ಶೇ.100 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಿದಂತಾಗಲಿದೆ ಎಂದು ವಿವರಿಸಿದರು.
ನಿರ್ದೇಶನಾಲಯಕ್ಕೆ ಪ್ರಸಕ್ತ ವರ್ಷ 2,292 ಕೋಟಿ ರೂ. ನಿಗದಿಯಾಗಿ 1,941 ಕೋಟಿ ರೂ. ಬಿಡುಗಡೆಯಾಗಿದ್ದು, ಅದರಲ್ಲಿ 1,608 ಕೋಟಿ ರೂ. ಅಂದರೆ ಶೇ. 83ರಷ್ಟು ಖರ್ಚು ಮಾಡಲಾಗಿದೆ. ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ 7,500 ವಿದ್ಯಾರ್ಥಿಗಳಿಗೆ ಅರಿವು ಯೋಜನೆ ಹಾಗೂ ವಿದೇಶಿ ವಿದ್ಯಾಭ್ಯಾಸ ನೆರವು ಯೋಜನೆಯಡಿಯಲ್ಲಿ 92.50 ಕೋಟಿ ರೂ. ಸಾಲ ವಿತರಿಸಲಾಗಿದೆ. ಇದೇ ರೀತಿ ವಕ್ಫ್ ಬೋರ್ಡ್ಗೆ 157 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, 125 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಹೇಳಿದರು.ಇದನ್ನೂ ಓದಿ: ಇಂಗ್ಲೆಂಡ್ ವಿರುದ್ಧ ಫಿಫ್ಟಿ – ಕೊಹ್ಲಿ ಬ್ಯಾಟಿಂಗ್ ಮೋಡಿಗೆ ಸಚಿನ್, ಸಂಗಕ್ಕಾರ ದಾಖಲೆ ಉಡೀಸ್
– ಯುವನಿಧಿ ಬೇಡ.. ಸ್ಕಾಲರ್‌ಶಿಪ್ ಕೊಡಿ ಸ್ವಾಮಿ ಎನ್ನುತ್ತಿದ್ದಾರೆ ವಿದ್ಯಾರ್ಥಿಗಳು
ಬೆಂಗಳೂರು: ರಾಜ್ಯದಲ್ಲಿ ವಿದ್ಯಾರ್ಥಿಗಳ ಸ್ಕಾಲರ್‌ಶಿಪ್‌ಗೆ ಕೊಕ್ಕೆ ಬಿದ್ದಿದೆ ಎನ್ನಲಾಗಿದೆ. ವಿದ್ಯಾರ್ಥಿ ವೇತನ ಸಿಗದೇ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರೆ.
ರಾಜ್ಯದಲ್ಲಿ ಈಗ ವಿದ್ಯಾರ್ಥಿಗಳು ಸ್ಕಾಲರ್‌ಶಿಪ್‌ಗಾಗಿ ಅಲೆದಾಡುವ ಪರಿಸ್ಥಿತಿ ಉದ್ಭವವಾಗಿದೆ. ಎಂಬಿಎ, ಎಂಬಿಬಿಎಸ್ ಹೀಗೆ ಬಹುತೇಕ ಕೋರ್ಸ್ ಓದುತ್ತಿರುವ ಒಬಿಸಿ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಸಿಕ್ಕಿಲ್ಲ ಎನ್ನುವುದು ವಿದ್ಯಾರ್ಥಿಗಳ ಅಳಲು. ನಿರುದ್ಯೋಗ ಭತ್ಯೆ ಕೊಡುವ ಬದಲು ನಮಗೆ ಓದಲು ಪ್ರೋತ್ಸಾಹಕ್ಕೆ ಸ್ಕಾಲರ್‌ಶಿಪ್ ಕೊಡಿ ಎಂದು ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ.
ಎಸ್ಸಿಎಸ್ಟಿ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಸಿಗುತ್ತಿದೆ. ಆದರೆ, ಒಬಿಸಿ ವಿದ್ಯಾರ್ಥಿಗಳಿಗೆ ಈ ಅನ್ಯಾಯವಾಗುತ್ತಿದೆ ಅಂತಾ ವಿದಾರ್ಥಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆ ಕೂಡ ಸ್ಕಾಲರ್‌ಶಿಪ್ ಬಗ್ಗೆ ಸಮೀಕ್ಷೆ ಮಾಡಿದ್ದು, 97% ನಷ್ಟು ವಿದ್ಯಾರ್ಥಿಗಳು ಸ್ಕಾಲರ್‌ಶಿಪ್ ಪಡೆದಿಲ್ಲ ಎಂದು ಹೇಳಿದ್ದಾರೆ.
ಮುಂಬೈ: ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದವರ ಪಟ್ಟಿಯನ್ನು ರಿಲಯನ್ಸ್ ಫೌಂಡೇಷನ್ (Reliance Foundation) ಘೋಷಣೆ ಮಾಡಿದೆ.
2024-25ನೇ ಸಾಲಿನ, ಭಾರತದಾದ್ಯಂತ ಐದು ಸಾವಿರ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಭಾರತದ ಭವಿಷ್ಯವನ್ನು ರೂಪಿಸುವುದಕ್ಕೆ ಸಬಲಗೊಳಿಸಬೇಕು, ಯುವ ಪ್ರತಿಭಾವಂತರನ್ನು ಉತ್ತೇಜಿಸಬೇಕು ಎಂಬ ಉದ್ದೇಶದಿಂದ ರಿಲಯನ್ಸ್ ಫೌಂಡೇಷನ್ ಇಂಥದ್ದೊಂದು ಕಾರ್ಯಕ್ರಮವನ್ನು ರೂಪಿಸಿದೆ. ಈ ವಿದ್ಯಾರ್ಥಿ ವೇತನಕ್ಕಾಗಿ ಭಾರತದ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಂದ, ವಿವಿಧ ಹಿನ್ನೆಲೆಯ ಒಂದು ಲಕ್ಷ ಸಂಖ್ಯೆಯ ಪ್ರಥಮ ವರ್ಷದ ಪದವಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ: ಬೆಂಗಳೂರಿನ 1ಎಂಜಿ ಮಾಲ್‌ನಲ್ಲಿ ರಿಲಯನ್ಸ್‌ನ ಫ್ರೆಶ್‌ಪಿಕ್ ಮಳಿಗೆ
ಆಯ್ಕೆಯಾದ ವಿದ್ಯಾರ್ಥಿಗಳು ವಿವಿಧ ಹಿನ್ನೆಲೆಯ ಹಾಗೂ ಶೈಕ್ಷಣಿಕ ವಿಭಾಗಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಈ ವಿದ್ಯಾರ್ಥಿಗಳು ಹಣಕಾಸಿನ ನೆರವು, ಮಾರ್ಗದರ್ಶನ ಮತ್ತು ಸರ್ವತೋಮುಖ ಬೆಳವಣಿಗೆಯ ಅವಕಾಶವನ್ನು ಪಡೆದುಕೊಳ್ಳಲಿದ್ದಾರೆ. ಇದರಲ್ಲಿ ಉಲ್ಲೇಖಿಸಲೇ ಬೇಕಾದ ಸಂಗತಿ ಏನೆಂದರೆ, 1300ರಲ್ಲಿ 670 ಸಂಸ್ಥೆಗಳು ಹಾಗೂ 5000 ವಿದ್ಯಾರ್ಥಿಗಳ ಪೈಕಿ 590 ಮಂದಿ ಕರ್ನಾಟಕಕ್ಕೆ ಸೇರಿರುವುದು. ರಿಲಯನ್ಸ್ ಫೌಂಡೇಷನ್ ವಿದ್ಯಾರ್ಥಿ ವೇತನದ ಸಿಂಹಪಾಲು ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿನ ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ. ಇನ್ನು ಒಟ್ಟಾರೆಯಾಗಿ ನೋಡಿದರೆ, ವಿದ್ಯಾರ್ಥಿವೇತನಕ್ಕೆ ಆಯ್ಕೆಯಾಗಿರುವುದರಲ್ಲಿ ಶೇಕಡಾ 70ರಷ್ಟು ಕುಟುಂಬಗಳ ವಾರ್ಷಿಕ ಆದಾಯವು 2.50 ಲಕ್ಷ ರೂಪಾಯಿಗಿಂತ ಕಡಿಮೆ ಇದೆ.
ಈ ಸ್ಕಾಲರ್‌ಷಿಪ್ ವಿದ್ಯಾರ್ಥಿಯ ಬೋಧನಾ ಶುಲ್ಕ (ಟ್ಯೂಷನ್ ಫೀ), ಹಾಸ್ಟೆಲ್ ವೆಚ್ಚ ಮತ್ತು ಇತರ ಶೈಕ್ಷಣಿಕ ಶುಲ್ಕವನ್ನು ಭರಿಸುತ್ತದೆ. ಆ ಮೂಲಕವಾಗಿ ಪ್ರತಿಭಾವಂತ ವಿದ್ಯಾರ್ಥಿಗಳು ಆರ್ಥಿಕವಾದ ಸಮಸ್ಯೆಗಳ ಕಡೆಗೆ ಆಲೋಚನೆ ಮಾಡುವ ಅಗತ್ಯವಿಲ್ಲದೆ ಓದಿನ ಕಡೆಗೆ ಗಮನ ಕೊಡಬಹುದಾಗಿರುತ್ತದೆ. ಹಣಕಾಸಿನ ನೆರವು ಮಾತ್ರವಲ್ಲದೆ, ಈ ವಿದ್ಯಾರ್ಥಿಗಳಿಗೆ ಸಮಗ್ರವಾದ ಬೆಂಬಲ, ಮಾರ್ಗದರ್ಶನ, ವೃತ್ತಿಪರವಾದ ಬೆಳವಣಿಗೆಗೆ ಅವಕಾಶಗಳನ್ನು ಒದಗಿಸಿಕೊಡಲಾಗುವುದು. ಇದನ್ನೂ ಓದಿ: ಡೇಟಾ ಟ್ರಾಫಿಕ್- ಚೀನಾ ಕಂಪನಿ ಹಿಂದಿಕ್ಕಿದ ರಿಲಯನ್ಸ್
ರಿಲಯನ್ಸ್ ವಕ್ತಾರರು ಈ ಕಾರ್ಯಕ್ರಮದ ಬಗ್ಗೆ ಮಾತನಾಡಿ, ಈ ಅಸಾಧಾರಣ ಯುವ ಮನಸ್ಸುಗಳನ್ನು ಗುರುತಿಸಲು ಮತ್ತು ಬೆಂಬಲಿಸಲು ನಾವು ಸಂತೋಷಪಡುತ್ತೇವೆ. ಪ್ರತಿಷ್ಠಿತ ರಿಲಯನ್ಸ್ ಫೌಂಡೇಷನ್ ಪದವಿ ಹಂತದ ಸ್ಕಾಲರ್‌ಷಿಪ್‌ಗಳ ಮೂಲಕವಾಗಿ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಸಾಮರ್ಥ್ಯವನ್ನು ಬಳಸುವುದಕ್ಕೆ ಮತ್ತು ಭಾರತದ ಬೆಳವಣಿಗೆಗೆ ಗಮನಾರ್ಹ ಕೊಡುಗೆಗಳನ್ನು ನೀಡಲು ಸಶಕ್ತಗೊಳಿಸುವ ಗುರಿಯನ್ನು ಹೊಂದಿದೆ.ಈ ವರ್ಷ ನಾವು ಸುಮಾರು ಒಂದು ಲಕ್ಷ ಅರ್ಜಿಗಳನ್ನು ಸ್ವೀಕರಿಸಿದ್ದೇವೆ. ಆಯ್ಕೆಯಾದವರು ದೇಶದ ಅತ್ಯಂತ ಪ್ರತಿಭಾವಂತ ವಿದ್ಯಾರ್ಥಿಗಳಲ್ಲಿ ಒಬ್ಬರಾಗಿದ್ದಾರೆ. ಶಿಕ್ಷಣವು ಅವಕಾಶಗಳನ್ನು ತೆರೆಯುವಂಥ ಕೀಲಿಯಾಗಿದೆ. ಈ ವಿದ್ಯಾರ್ಥಿಗಳ ಪರಿವರ್ತನೆಯ ಪ್ರಯಾಣದ ಭಾಗವಾಗಿರುವುದಕ್ಕೆ ನಾವು ಹೆಮ್ಮೆಪಡುತ್ತೇವೆ ಎಂದು ಹೇಳಿದ್ದಾರೆ.
ಆಯ್ಕೆಯಾದ ವಿದ್ಯಾರ್ಥಿಗಳಿಗೆ ಎರಡು ಲಕ್ಷ ರೂಪಾಯಿ ತನಕ ವಿದ್ಯಾರ್ಥಿ ವೇತನ ದೊರೆಯುತ್ತದೆ. 1996ನೇ ಇಸವಿಯಲ್ಲಿ ಆರಂಭವಾದ ಈ ಕಾರ್ಯಕ್ರಮವು 2020ರ ಹೊತ್ತಿಗೆ ಭಾರತದಾದ್ಯಂತ 28,000 ವಿದ್ಯಾರ್ಥಿಗಳನ್ನು ತಲುಪಿತ್ತು. 2022ರ ಡಿಸೆಂಬರ್‌ನಲ್ಲಿ ರಿಲಯನ್ಸ್ ಸ್ಥಾಪಕರಾದ ಧೀರೂಭಾಯಿ ಅಂಬಾನಿ ಅವರ ತೊಂಬತ್ತನೇ ಜನ್ಮ ವರ್ಷಾಚರಣೆ ಸಂದರ್ಭದಲ್ಲಿ, ‘ಮುಂದಿನ ಹತ್ತು ವರ್ಷಗಳಲ್ಲಿ ಇನ್ನೂ ಐವತ್ತು ಸಾವಿರ ಸ್ಕಾಲರ್‌ಶಿಪ್‌ಗಳನ್ನು ನೀಡುತ್ತೇವೆ ಎಂದು ರಿಲಯನ್ಸ್ ಫೌಂಡೇಷನ್ ಸ್ಥಾಪಕಿ ಹಾಗೂ ಮುಖ್ಯಸ್ಥೆಯಾದ ನೀತಾ ಅಂಬಾನಿ ಘೋಷಣೆ ಮಾಡಿದರು. ಆ ನಂತರದಲ್ಲಿ ಪ್ರತಿ ವರ್ಷ 5,100 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ.
ಚಿಕ್ಕಬಳ್ಳಾಪುರ: ಇಲ್ಲಿನ ವಿಧಾನಸಭಾ ಕ್ಷೇತ್ರದ ಎಲ್ಲಾ ಖಾಸಗಿ ಹಾಗೂ ಸರ್ಕಾರಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ವೈಯಕ್ತಿಕ ಸ್ಕಾಲರ್ಶಿಪ್ ಸ್ಕೀಂ (Scholarship Scheme) ಘೋಷಣೆ ಮಾಡಿದ್ದಾರೆ.
ಬುಧವಾರ ಚಿಕ್ಕಬಳ್ಳಾಪುರ ನಗರದ (Chikkaballapur City) ಗೃಹಕಚೇರಿಯಲ್ಲಿ ಮಾತನಾಡಿರುವ ಶಾಸಕರು, ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಎಸ್‍ಎಸ್‍ಎಲ್‍ಸಿ, ದ್ವೀತಿಯ ಪಿಯುಸಿ, ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳು, ಅಂತಿಮ ವರ್ಷದ ಪಿಜಿ ಹಾಗೂ ಐಟಿಐ ಸೇರಿದಂತೆ ಡಿಪ್ಲೋಮಾ ಎಲ್ಲಾ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿವೇತನ ನೀಡಲು ಶಾಸಕ ಪ್ರದೀಪ್ ಈಶ್ವರ್ ಮುಂದಾಗಿದ್ದಾರೆ.
ಎಸ್‍ಎಸ್‍ಎಲ್‌ಸಿ ವಿದ್ಯಾರ್ಥಿಗಳಿಗೆ ತಲಾ 1,000 ರೂ., ಡಿಪ್ಲೋಮೋ-ಐಟಿಐ ವಿದ್ಯಾರ್ಥಿಗಳಿಗೆ 1,500 ರೂ., ಪದವಿ ಹಾಗೂ ಪಿಜಿ ವಿದ್ಯಾರ್ಥಿಗಳಿಗೆ 3,000 ರೂ. ವಿದ್ಯಾರ್ಥಿವೇತನ ನೀಡಲು ತೀರ್ಮಾನಿಸಿದ್ದಾರೆ. ಹೀಗಾಗಿ ಕ್ಷೇತ್ರದ ವಿದ್ಯಾರ್ಥಿಗಳು ಎಂಎಲ್‍ಎ ಪ್ರದೀಪ್ ಈಶ್ವರ್ ವೆಬ್‌ಸೈಟ್‌ನಲ್ಲಿ ತಮ್ಮ ಹೆಸರನ್ನ ನೊಂದಾಯಿಸಿಕೊಳ್ಳಿವಂತೆ ಮನವಿ ಮಾಡಿದ್ದಾರೆ. ಇದಕ್ಕಾಗಿ ಕ್ಯೂಆರ್ ಕೋಡ್ ಇರುವ ಸ್ಕ್ಯಾನರ್ ಸಿದ್ದಪಡಿಸಲಾಗಿದ್ದು, ವಿದ್ಯಾರ್ಥಿಗಳು ತಮ್ಮ ಮೊಬೈಲ್ ಮೂಲಕವೇ ಸ್ಕ್ಯಾನ್ ಮಾಡಿ ನೊಂದಣಿ ಮಾಡಿಕೊಳ್ಳಿ, ಯಾವುದೇ ಭೌತಿಕ ದಾಖಲಾತಿಗಳನ್ನ ನೀಡುವುದು ಬೇಡ ಅಂತ ಶಾಸಕರು ಮನವಿ ಮಾಡಿಕೊಂಡಿದ್ದಾರೆ.
ಇನ್ನೂ ಅಕ್ಟೋಬರ್ 15 ರಿಂದ ನವೆಂಬರ್ 15ರ ವರೆಗೂ ನೊಂದಣಿಗೆ ಅವಕಾಶ ಕಲ್ಪಿಸಲಾಗಿದೆ. 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಈ ಸೌಲಭ್ಯ ಸಿಗಲಿದೆ ಅಂತ ಶಾಸಕ ಪ್ರದೀಪ್ ಈಶ್ವರ್ ಮಾಹಿತಿ ಹಂಚಿಕೊಂಡಿದ್ದಾರೆ.
ಲಕ್ನೋ: ಉತ್ತರ ಪ್ರದೇಶ (UttarPradesh) ದ ಮದರಸಾಗಳಲ್ಲಿ 1 ರಿಂದ 8 ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದನ್ನು ಕೇಂದ್ರ ಸರ್ಕಾರ ನಿರ್ಬಂಧಿಸಿದೆ. ಪ್ರತಿ ಶೈಕ್ಷಣಿಕ ವರ್ಷ ನೀಡಲಾಗುತ್ತಿದ್ದ ಸ್ಕಾಲರ್‌ಶಿಪ್ (Scholarship) ಗೆ ಈ ಬಾರಿ ತಡೆ ಹಾಕಿದೆ.
ಈವರೆಗೂ 1 ರಿಂದ 5 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ 1,000 ರೂ. ಶಿಷ್ಯವೇತನವನ್ನು ನೀಡಲಾಗುತ್ತಿತ್ತು. 6 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ವಿವಿಧ ಕೋರ್ಸ್‍ಗಳ ಆಧಾರದ ಮೇಲೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿತ್ತು.
ಕೇಂದ್ರ ಸರ್ಕಾರದ ಪ್ರಕಾರ, ಶಿಕ್ಷಣ ಹಕ್ಕು ಕಾಯ್ದೆಯಡಿ 1 ರಿಂದ 8 ನೇ ತರಗತಿವರೆಗೆ ಶಿಕ್ಷಣವನ್ನು ಉಚಿತವಾಗಿ ನೀಡಲಾಗುತ್ತದೆ. ಮದರಸಾ (Madarasa) ಗಳಲ್ಲಿ ಮಧ್ಯಾಹ್ನದ ಊಟ ಮತ್ತು ಪುಸ್ತಕಗಳನ್ನು ಕೂಡ ಉಚಿತವಾಗಿ ನೀಡಲಾಗುತ್ತಿದೆ. ಇದರೊಂದಿಗೆ ವಿದ್ಯಾರ್ಥಿಗಳಿಗೆ ಇತರ ಅಗತ್ಯ ವಸ್ತುಗಳನ್ನು ಸಹ ನೀಡಲಾಗುತ್ತದೆ. ಹೀಗಾಗಿ ವಿದ್ಯಾರ್ಥಿ ವೇತನವನ್ನು ನಿಲ್ಲಿಸಲಾಗಿದೆ ಎಂದು ಸ್ಪಷ್ಟನೆ ನೀಡಲಾಗಿದೆ. ಇದನ್ನೂ ಓದಿ: ಜೋಡೋ ಯಾತ್ರೆ ವೇಳೆ ಪಾಕ್ ಪರ ಘೋಷ – ಕಾಂಗ್ರೆಸ್ ನಾಯಕರ ವಿರುದ್ಧ ಎಫ್‌ಐಆರ್
ಆದ್ದರಿಂದ 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾತ್ರ ವಿದ್ಯಾರ್ಥಿವೇತನವನ್ನು ನೀಡಲಾಗುವುದು ಮತ್ತು ಅವರ ಅರ್ಜಿಗಳನ್ನು ರವಾನಿಸಬೇಕು ಎಂದು ಆದೇಶದಲ್ಲಿ ತಿಳಿಸಿದೆ. ಕಳೆದ ವರ್ಷ ಸುಮಾರು 5 ಲಕ್ಷ ಮಕ್ಕಳು ಸ್ಕಾಲರ್‍ಶಿಪ್ ಪಡೆದುಕೊಂಡಿದ್ದರು. ಈ ಪೈಕಿ 16,558 ಮದರಸಾ ವಿದ್ಯಾರ್ಥಿಗಳು ಫಲಾನುಭವಿಗಳಾಗಿದ್ದರು.
Live Tv
[brid partner=56869869 player=32851 video=960834 autoplay=true]
ಶಿವಮೊಗ್ಗ: ಹಿಂದುಳಿದ ವರ್ಗಗಳ ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ತಿಳಿಸಿದರು.
ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನ, ಪ್ರಗತಿ ಮತ್ತು ಜಾತಿ ಪ್ರಮಾಣ ಪತ್ರದಲ್ಲಿ ಹೆಸರು ನಮೂದಿಸುವಲ್ಲಿನ ಗೊಂದಲದ ಕುರಿತು ಅಧಿಕಾರಿಗಳ ಸಮಾಲೋಚನಾ ಸಭೆ ನಡೆಸಿದರು.
ಕೆಲವು ಉಪಜಾತಿಗಳು ಪರಿಶಿಷ್ಠ ಜಾತಿ ಅಥವಾ ಪಂಗಡ ಮತ್ತು ಹಿಂದುಳಿದ ವರ್ಗಗಳ ಪಟ್ಟಿಯಲ್ಲಿಯೂ ಇದ್ದು, ಅಂತಹ ಜಾತಿಗಳ ಪಟ್ಟಿಯನ್ನು ಸರಿಪಡಿಸಲು ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಇದರಿಂದಾಗಿ ಜಾತಿ ಪ್ರಮಾಣ ಪತ್ರ ನೀಡಲು ತೊಡಕು ಉಂಟಾಗುತ್ತಿದ್ದು, ಸರಿಯಾದ ಜಾತಿ ಪ್ರಮಾಣ ಪತ್ರ ದೊರೆಯದೆ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿರುವುದು ಆಯೋಗದ ಗಮನಕ್ಕೆ ಬಂದಿದೆ ಎಂದರು.
ಎರಡು ಪಟ್ಟಿಯಲ್ಲಿರುವ 17 ಜಾತಿಗಳನ್ನು ಆಯೋಗ ಗುರುತಿಸಿದೆ. ಇದೇ ರೀತಿ ಉಪ ಜಾತಿಗಳ ಬಗ್ಗೆಯೂ ಕೆಲವು ಗೊಂದಲಗಳಿದ್ದು, ಈ ಕುರಿತು ಆಯೋಗ ಸುದೀರ್ಘವಾಗಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಿದೆ. ಕೆಲವು ಸಣ್ಣ ಜಾತಿಗಳಿಗೆ ಮೀಸಲಾತಿಯಲ್ಲಿ ಸೇರಿರುವ ಬಗ್ಗೆ ಸ್ಪಷ್ಟ ಕಲ್ಪನೆ ಇಲ್ಲದಿರುವ ಕಾರಣ ಫಲಾನುಭವವನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಈ ಕುರಿತು ಅರಿವು ಮೂಡಿಸುವ ಕಾರ್ಯ ನಡೆಯಬೇಕಿದೆ. ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದ ಸಮಸ್ಯೆ ಕುರಿತು ಚರ್ಚಿಸಲು ಪ್ರತ್ಯೇಕ ಸಭೆಯನ್ನು ಕರೆಯಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ತಾಲಿಬಾನ್ ಉಗ್ರರಿಗಾಗಿ ಕಾಯುತ್ತಿದ್ದೇನೆ, ನನ್ನನ್ನು ಕೊಲ್ಲುತ್ತಾರೆ: ಅಫ್ಘಾನಿಸ್ತಾನದ ಮಹಿಳಾ ಮೇಯರ್
ಜಿಲ್ಲೆಯಲ್ಲಿ 2020-21ನೇ ಸಾಲಿನಲ್ಲಿ 34918 ವಿದ್ಯಾರ್ಥಿಗಳಿಗೆ ಒಟ್ಟು 3.28 ಕೋಟಿ ರೂ. ವಿದ್ಯಾರ್ಥಿ ವೇತನ ಅವರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮಾ ಮಾಡಲಾಗಿದೆ. 10ನೇ ತರಗತಿಯ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ 75.92 ಲಕ್ಷ ರೂ. ಬಿಡುಗಡೆಯಾಗಿದ್ದು, 7423 ವಿದ್ಯಾರ್ಥಿಗಳಿಗೆ 74.23 ಲಕ್ಷ ರೂ. ವಿದ್ಯಾರ್ಥಿ ವೇತನ ಒದಗಿಸಲಾಗಿದೆ. ಎಸ್‍ಎಸ್‍ಪಿಯಲ್ಲಿ ಸ್ವೀಕೃತವಾದ ಎಲ್ಲಾ ಅರ್ಜಿಗಳಿಗೆ ಅನುದಾನ ಮಂಜೂರು ಮಾಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಮಾಹಿತಿ ನೀಡಿದರು.
ವಿಧಾನ ಪರಿಷತ್ ಸದಸ್ಯ ಪ್ರಸನ್ನ ಕುಮಾರ್, ಆಯೋಗದ ಸದಸ್ಯರಾದ ಕಲ್ಯಾಣ್ ಕುಮಾರ್, ಬಿ.ಎಸ್.ರಾಜಶೇಖರ್, ಕೆ.ಟಿ.ಶಿವಣ್ಣ, ಅರುಣ್ ಕುಮಾರ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿ.ಪಂ. ಸಿಇಒ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ನಾಗೇಂದ್ರ ಹೊನ್ನಳ್ಳಿ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಎಲ್‍ಎಲ್‍ಬಿ, ಪ್ಯಾರಾ ಮೆಡಿಕಲ್, ನರ್ಸಿಂಗ್, ಬಿ ಫಾರ್ಮಾ ಕೋರ್ಸುಗಳ ವಿದ್ಯಾರ್ಥಿಗಳಿಗೆ 7,500, ವಿದ್ಯಾರ್ಥಿನಿಯರಿಗೆ 8,000 ರೂಪಾಯಿ ಸ್ಕಾಲರ್‍ಶಿಪ್ ಸಿಗಲಿದೆ. ಎಂಬಿಬಿಎಸ್, ಬಿಟೆಕ್, ಬಿಇ ಮತ್ತು ಎಲ್ಲ ಪಿಜಿ ಕೋರ್ಸ್‍ಗಳನ್ನು ಮಾಡುವ ವಿದ್ಯಾರ್ಥಿಗಳಿಗೆ ವಾರ್ಷಿಕ 10,000, ವಿದ್ಯಾರ್ಥಿನಿಯರಿಗೆ 11,000 ರೂಪಾಯಿ ಸಿಗಲಿದೆ ಎಂದು ಸರ್ಕಾರ ತಿಳಿಸಿದೆ.
– ಆರೋಗ್ಯ ಕಾರ್ಯಕರ್ತರನ್ನು ಗುರುತಿಸಿ ಸನ್ಮಾನಿಸಿ ಕೃತಜ್ಞ ವಾಹನಕ್ಕೆ ಚಾಲನೆ – ಹುತಾತ್ಮ ಆರೋಗ್ಯ ಕಾರ್ಯಕರ್ತರ ಮಕ್ಕಳಿಗೆ 2 ಲಕ್ಷ ರೂ. ವಿದ್ಯಾರ್ಥಿ ವೇತನ
ಬೆಂಗಳೂರು: ಪ್ರತಿಯೊಬ್ಬ ಕೋವಿಡ್ ವಾರಿಯರ್ಸ್‍ಗಳಿಗೆ ಕೃತಜ್ಞತೆ ಸಲ್ಲಿಸುವುದು ಪ್ರತಿಯೊಬ್ಬರ ಜವಾಬ್ದಾರಿ, ಅವರ ಋಣ ಎಲ್ಲರ ಮೇಲೂ ಇದೆ ಎಂದು ನಟ ರಮೇಶ್ ಅರವಿಂದ್ ಹೇಳಿದ್ದಾರೆ.
ಕಾವೇರಿ ಆಸ್ಪತ್ರೆ ವತಿಯಿಂದ ಟೆನ್ನಿಸ್ ಅಸೋಸಿಯೇಷನ್‍ನಲ್ಲಿ ಸೋಮವಾರ ಆಯೋಜಿಸಿದ್ದ ಪತ್ರಿಕಾಗೋಷ್ಠಿ ಹಾಗೂ ಕೃತಜ್ಞಾ ವಾಹನಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಕಳೆದ 2 ವರ್ಷದಿಂದ ವಿಶ್ವಾದ್ಯಂತ ಆರೋಗ್ಯ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ಕೋವಿಡ್ ವಾರಿಯರ್ಸ್‍ಗಳಿಂದ ಇಂದು ನಾವೆಲ್ಲಾ ಜೀವಿಸುತ್ತಿದ್ದೇವೆ. ತಾಯಿಯ ಋಣದಂತೆ ಕೋವಿಡ್ ವಾರಿಯರ್ಸ್‍ಗಳ ಋಣ ತೀರಿಸುವುದು ಅಸಾಧ್ಯ. ಕಾವೇರಿ ಆಸ್ಪತ್ರೆ ವತಿಯಿಂದ ಕೃತಜ್ಞಾ ಕಾರ್ಯಕ್ರಮದ ಭಾಗವಾಗಿ ನಗರದಲ್ಲಿರುವ ಎಲ್ಲಾ ಕೋವಿಡ್ ವಾರಿಯರ್ಸ್‍ಗಳಿಗೆ ಕೃತಜ್ಞತೆ ಸಲ್ಲಿಸಿ ಪ್ರಶಸ್ತಿ ನೀಡುವ ಸಾರ್ಥಕ ಹೆಜ್ಜೆ ಇಟ್ಟಿರುವುದು ಶ್ಲಾಘನೀಯ ಎಂದಿದ್ದಾರೆ.
ಕಾವೇರಿ ಆಸ್ಪತ್ರೆಯ ಕಾರ್ಯನಿರ್ವಾಹಕರ ನಿರ್ದೇಶಕ ವಿಜಯ ಭಾಸ್ಕರನ್ ಮಾತನಾಡಿ, ಕೋವಿಡ್ ವಾರಿಯರ್ಸ್‍ಗಳಿಗೆ ಕೃತಜ್ಞತೆ ಸಲ್ಲಿಸುವ ಉದ್ದೇಶದಿಂದ ಕೃತಜ್ಞಾ ಕಾರ್ಯಕ್ರಮವನ್ನು ಜುಲೈ 31ರಂದು ಹಮ್ಮಿಕೊಂಡಿದ್ದೇವೆ. ಇದರ ಭಾಗವಾಗಿ ಇಂದಿನಿಂದ 5 ವಾಹನಗಳಲ್ಲಿ ನಗರದಲ್ಲಿರುವ 300ಕ್ಕೂ ಹೆಚ್ಚು ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ತೆರಳಲಿರುವ ನಮ್ಮ ತಂಡವು ಕೋವಿಡ್ ವಾರಿಯರ್ಸ್‍ಗಳನ್ನು ಅಲ್ಲಿಯೇ ಸನ್ಮಾನಿಸಿ ಪ್ರಶಸ್ತಿ ನೀಡಲಿದೆ. ಇದರ ಜೊತೆಗೆ ಕೋವಿಡ್ ಚಿಕಿತ್ಸೆಗಾಗಿ ಹೊಸ ಆವಿಷ್ಕಾರ ಮಾಡಿದ ಆಸ್ಪತ್ರೆಗಳಿಗೆ ವಿಶೇಷ ಕ್ಯಾಟಗರಿಯಲ್ಲಿ ಪಶಸ್ತಿ ನೀಡಲಿದ್ದೇವೆ ಎಂದು ಹೇಳಿದ್ದಾರೆ.
ಶಿಕ್ಷಣ ಹಾಗೂ ಉದ್ಯೋಗದ ಭರವಸೆ:
ಕೋವಿಡ್ ಸಂದರ್ಭದಲ್ಲಿ ಮೃತಪಟ್ಟ ವಾರಿಯರ್ಸ್ ಮಕ್ಕಳಿಗೆ ಶಿಕ್ಷಣ ನೀಡುವ ಉದ್ದೇಶ 2 ಲಕ್ಷದವರೆಗೆ ವಿದ್ಯಾರ್ಥಿ ವೇತನ ಹಾಗೂ ಪದವೀದರ ಮಕ್ಕಳಿಗೆ ಉದ್ಯೋಗ ಕೊಡಿಸಲು ಮುಂದಾಗಿದ್ದೇವೆ. ಸಂಬಂಧಪಟ್ಟ ಕುಟುಂಬಗಳು ನೋಂದಣಿ ಮಾಡಿಕೊಳ್ಳಬಹುದು ಎಂದು ಹೇಳಿದ್ದಾರೆ.
5 ಕೃತಜ್ಞಾ ವಾಹನಗಳಿಗೆ ಚಾಲನೆ:
ಇಂದಿನಿಂದ 12 ದಿನಗಳ ಕಾಲ 5 ಕೃತಜ್ಞಾ ವಾಹನಗಳಲ್ಲಿ ತೆರಳಲಿರುವ ಕಾವೇರಿ ಆಸ್ಪತ್ರೆಯ ತಂಡವರು, 300 ಆಸ್ಪತ್ರೆಗಳಿಗೆ ತೆರಳಿ ಅಲ್ಲಿನ ಆರೋಗ್ಯ ಕಾರ್ಯಕರ್ತರಿಗೆ ಸನ್ಮಾನ ಮಾಡಲಿದ್ದಾರೆ. ಮೊದಲ ದಿನದಂದು ವಿಕ್ಟೋರಿಯಾ ಆಸ್ಪತ್ರೆಗೆ ತೆರಳಿ ಅಲ್ಲಿನ ಸಿಬ್ಬಂದಿಗೆ ಸನ್ಮಾನ ಮಾಡಿದರು. ಇಂದು ಆ ವಾಹನಗಳಿಗೆ ನಟ ರಮೇಶ್ ಅರವಿಂದ್ ಅವರು ಚಾಲನೆ ನೀಡಿದರು. ಈ ವೇಳೆ ಕಾವೇರಿ ಆಸ್ಪತ್ರೆ ನಿರ್ದೇಶಕ ಡಾ. ವಿಲ್ಫೆಂಡ್ ಸ್ಯಾಮ್ಸನ್ ಉಪಸ್ಥಿತರಿದ್ದರು. ಇದನ್ನೂ ಓದಿ: ಪಡಿತರ ಅಕ್ಕಿ ಕಳ್ಳ ಸಾಗಾಣಿಕೆ – ವಾಹನ ಸಮೇತ ಓರ್ವನ ಬಂಧನ
ಮುಂಬೈ: ಬಾಲಿವುಡ್ ನಟ ಸೋನು ಸೂದ್ ಕೊರೊನಾ ಹಿನ್ನೆಲೆ ಲಾಕ್‍ಡೌನ್ ಸಂದರ್ಭದಲ್ಲಿ ಲಕ್ಷಾಂತರ ಮಂದಿಗೆ ಸಹಾಯ ಮಾಡಿದ್ದಾರೆ. ಇದೀಗ ತಮ್ಮ ದಿವಂಗತ ತಾಯಿಯ ಹೆಸರಿನಲ್ಲಿ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡಲು ಮುಂದಾಗಿದ್ದಾರೆ. ಇದನ್ನೂ ಓದಿ: ಆನ್‍ಲೈನ್ ಕ್ಲಾಸಿಗೆ ಹಾಜರಾಗಲು ಮಕ್ಕಳಿಗೆ ಮೊಬೈಲ್ ಕಳುಹಿಸಿದ ಸೋನು ಸೂದ್
ನಟ ಸೋನು ಸೂದ್ ಲಾಕ್‍ಡೌನ್ ಸಂದರ್ಭದಲ್ಲಿ ವಲಸೆ ಕಾರ್ಮಿಕರಿಗೆ ಬಸ್ ವ್ಯವಸ್ಥೆ ಮಾಡಿದ್ದರು. ಅಲ್ಲದೇ ವಿದೇಶದಲ್ಲಿ ಸಿಲುಕಿಕೊಂಡಿದ್ದವರಿಗೆ ನೆರವು ನೀಡಿದ್ದರು. ಬಡ ರೈತ ಕುಟುಂಬವೊಂದಕ್ಕೆ ಟ್ರ್ಯಾಕ್ಟರ್ ಕೊಡಿಸಿದ್ದರು. ಇದೇ ರೀತಿ ಅನೇಕರಿಗೆ ಸೋನು ಸೂದ್ ಇಂದಿಗೂ ತಮ್ಮ ಕೈಲಾದ ಸಹಾಯವನ್ನು ಮಾಡುತ್ತಿದ್ದಾರೆ. ಇದೀಗ ತಮ್ಮ ದಿವಂಗತ ತಾಯಿ ಸರೋಜ್ ಸೂದ್ ಅವರ ಹೆಸರಿನಲ್ಲಿ ಬಡ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಕೊಟ್ಟ ಮಾತಿನಂತೆ ನಡೆದ ಸೋನು ಸೂದ್ – ಯಾದಗಿರಿಯ ಕುಟುಂಬಕ್ಕೆ ಬಂತು ದಿನಸಿ
ಈ ಬಗ್ಗೆ ಮಾತನಾಡಿದ ಸೋನು ಸೂದ್, “ಕಳೆದ ಕೆಲವು ತಿಂಗಳುಗಳಲ್ಲಿ ಬಡವರು ತಮ್ಮ ಮಕ್ಕಳ ಶಿಕ್ಷಣಕ್ಕಾಗಿ ಹಣ ಪಾವತಿಸಲು ಹೇಗೆ ಹೆಣಗಾಡುತ್ತಿದ್ದಾರೆಂದು ನಾನು ನೋಡಿದ್ದೇನೆ. ಕೆಲವರಿಗೆ ಆನ್‍ಲೈನ್ ತರಗತಿಗಳಿಗೆ ಹಾಜರಾಗಲು ಫೋನ್‍ಗಳಿಲ್ಲ. ಇತರರಿಗೆ ಶುಲ್ಕವನ್ನು ಪಾವತಿಸಲು ಹಣವಿಲ್ಲ. ಆದ್ದರಿಂದ ನನ್ನ ತಾಯಿ ಪ್ರೊಫೆಸರ್ ಸರೋಜ್ ಸೂದ್ ಹೆಸರಿನಲ್ಲಿ ವಿದ್ಯಾರ್ಥಿವೇತನವನ್ನು ನೀಡಲು ನಾನು ದೇಶಾದ್ಯಂತದ ವಿಶ್ವವಿದ್ಯಾಲಯಗಳೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇನೆ” ಎಂದು ಹೇಳಿದರು.
“ವಾರ್ಷಿಕ ಆದಾಯವು 2 ಲಕ್ಷ ರೂ.ಗಿಂತ ಕಡಿಮೆ ಇರುವ ಕುಟುಂಬಗಳಿಂದ ಬರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಯ ಶೈಕ್ಷಣಿಕ ದಾಖಲೆ ಉತ್ತಮವಾಗಿರಬೇಕು ಎಂದು ನಟ ಷರತ್ತು ವಿಧಿಸಿದ್ದಾರೆ. ಅಂತವರ ಎಲ್ಲಾ ವೆಚ್ಚಗಳು, ಕೋರ್ಸ್ ಶುಲ್ಕಗಳು, ಹಾಸ್ಟೆಲ್ ವಸತಿ ಮತ್ತು ಆಹಾರ ಎಲ್ಲವನ್ನು ನೋಡಿಕೊಳ್ಳಲಾಗುತ್ತದೆ ಎಂದು ಸೋನು ಸೂದ್ ತಿಳಿಸಿದರು.
ವರದಿಗಳು ಪ್ರಕಾರ, ವಿದ್ಯಾರ್ಥಿವೇತನವು ಮೆಡಿಸಿನ್, ಎಂಜಿನಿಯರಿಂಗ್, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್, ರೊಬೊಟಿಕ್ಸ್ ಮತ್ತು ಆಟೋಮೇಷನ್, ಸೈಬರ್ ಸೆಕ್ಯೂರಿಟಿ, ಡಾಟಾ ಸೈನ್ಸ್, ಫ್ಯಾಶನ್, ಪತ್ರಿಕೋದ್ಯಮ ಮತ್ತು ಬಿಸಿನೆಸ್ ಸ್ಟಡೀಸ್ ಕೋರ್ಸ್ ನ ವಿದ್ಯಾರ್ಥಿಗಳಿಗೆ ಲಭ್ಯವಿರುತ್ತದೆ.
ನಮ್ಮ ತಾಯಿ ಸರೋಜ್ ಸೂದ್ ಅವರು ಮೊಗಾ (ಪಂಜಾಬ್) ನಲ್ಲಿ ಉಚಿತವಾಗಿ ಬೋಧಿಸುತ್ತಿದ್ದರು. ಅವರು ತಮ್ಮ ಕೆಲಸವನ್ನು ಮುಂದುವರಿಸಿಕೊಂಡು ಹೋಗಬೇಕೆಂದು ಹೇಳಿದ್ದರು. ಅದಕ್ಕೆ ಈಗ ಸರಿಯಾದ ಸಮಯ ಬಂದಿದೆ ಎಂದು ನಾನು ಭಾವಿಸುತ್ತೇನೆ ಎಂದರು.
ಶಿಕ್ಷಕರ ದಿನದಂದು ನಟ ಸೋನು ಸೂದ್ ಅವರು ತಮ್ಮ ತಾಯಿಯ ಫೋಟೋವನ್ನು ಪೋಸ್ಟ್ ಮಾಡಿ ಶುಭಾಶಯ ತಿಳಿಸಿದ್ದರು. ಅಲ್ಲದೇ “ನಾನು ನಮ್ಮ ತಾಯಿ ತೋರಿಸಿದ ಹಾದಿಯಲ್ಲಿ ನಡೆಯುತ್ತಿದ್ದೇನೆ” ಎಂದು ಬರೆದುಕೊಂಡಿದ್ದರು.
ಇತ್ತೀಚೆಗಷ್ಟೆ ಕರ್ನಾಟಕದಲ್ಲಿ ತ್ರಿವಳಿ ಮಕ್ಕಳ ಜನನದಿಂದಾಗಿ ಚಿಂತೆಗೀಡಾಗಿದ್ದ, ಯಾದಗಿರಿ ತಾಲೂಕಿನ ರಾಮಸಮುದ್ರ ಗ್ರಾಮದ ಪದ್ಮಾ ಕುಟುಂಬಕ್ಕೆ ನಟ ಸೋನು ಸೂದ್ ಕೊಟ್ಟ ಮಾತಿನಂತೆ ಸಹಾಯವನ್ನು ಮಾಡಿದ್ದರು. ಪದ್ಮಾ ದಂಪತಿಗೆ ಏಕಕಾಲದಲ್ಲಿ ಮೂರು ಗಂಡು ಮಕ್ಕಳು ಜನಿಸಿದ್ದವು. ಕಡು ಬಡತನದಲ್ಲಿದ್ದ ಈ ಕುಟುಂಬ ಪಬ್ಲಿಕ್ ಟಿವಿ ಮೂಲಕ ಸಹಾಯ ಹಸ್ತವನ್ನು ಚಾಚಿದ್ದರು, ಈ ಸುದ್ದಿಯನ್ನು ಯಾದಗಿರಿಯ ಮಲ್ಲಿಕಾರ್ಜುನ ರೆಡ್ಡಿಯವರು ನಟ ಸೋನು ಸೂದ್‍ಗೆ ಕಳುಹಿಸಿದ್ದರು. ಸುದ್ದಿ ನೋಡಿದ ಸೋನು ಸೂದ್ ಪದ್ಮಾ ಕುಟುಂಬಕ್ಕೆ ರೇಷನ್ ನೀಡುವ ಭರವಸೆ ನೀಡಿದ್ದರು. ಭರವಸೆ ನೀಡಿದ ಎರಡೇ ದಿನಕ್ಕೆ ಮುಂಬೈಯಿಂದ ದಿನಸಿ ಕಳುಹಿಸಿದ್ದರು.