ಕೋಲಾರ: ಶಾಲೆಗೆಂದು (School) ಹೋದ ಇಬ್ಬರು ವಿದ್ಯಾರ್ಥಿನಿಯರು (Students) ನಾಪತ್ತೆಯಾಗಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.
ನರಸಾಪುರ ಗ್ರಾಮದ ಶರಣ್ಯ ಹಾಗೂ ದೇವಿ ನಾಪತ್ತೆಯಾದ ವಿದ್ಯಾರ್ಥಿನಿತರು. ಶುಕ್ರವಾರ ಬೆಳಗ್ಗೆ ಶಾಲೆಗೆಂದು ಹೋದ ಇಬ್ಬರು ವಿದ್ಯಾರ್ಥಿಗಳು ಇದುವರೆಗೂ ಪತ್ತೆಯಾಗಿಲ್ಲ. ಇತ್ತ ಶಾಲೆಗೂ ಹೋಗದೆ ಮನೆಗೂ ಬಾರದೆ ಕಣ್ಮರೆಯಾಗಿರುವುದು ಪೋಷಕರಲ್ಲಿ ಆತಂಕ ಮೂಡಿಸಿದೆ. ಇನ್ನೂ ಬೆಳಗ್ಗೆ ಶಾಲೆಗೆ ಹೋದವರು ರಾತ್ರಿಯಾದರೂ ಮನೆಗೆ ಬಾರದ ಹಿನ್ನೆಲೆ ಆತಂಕಗೊಂಡ ಪೋಷಕರು ಶುಕ್ರವಾರ ಇಡೀ ದಿನ ಮಕ್ಕಳಿಗಾಗಿ ಹುಡಕಾಟ ನಡೆಸಿದ್ದಾರೆ. ಇದನ್ನೂ ಓದಿ: ಸ್ನೇಹಿತೆಯ ಖಾಸಗಿ ವೀಡಿಯೋ ಕದ್ದು ಹಂಚಿ ಬ್ಲ್ಯಾಕ್‌ಮೇಲ್ ಆರೋಪ; ಕಿರುತೆರೆ ನಟಿ ವಿರುದ್ಧ FIR
ರಾತ್ರಿಯಾದರೂ ಮನೆಗೆ ಬಾರದ ಹಿನ್ನೆಲೆ ಮಕ್ಕಳನ್ನ ಹುಡುಕಿಕೊಡಿ ಎಂದು ಕೋಲಾರದ ಮಹಿಳಾ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಇನ್ನೂ ಇಬ್ಬರು ವಿದ್ಯಾರ್ಥಿನಿಯರು ಹತ್ತನೇ ತರಗತಿ ಓದುತ್ತಿದ್ದು, ಎಲ್ಲಿಗೆ ಹೋಗಿದ್ದಾರೆ ಅನ್ನೋ ಮಾಹಿತಿ 24 ಗಂಟೆಯಾದರೂ ಇನ್ನೂ ಲಭ್ಯವಾಗಿಲ್ಲ. ಹೀಗಾಗಿ ಪೋಷಕರು ಹಾಗೂ ಪೊಲೀಸರು ತೀವ್ರ ಹುಡುಕಾಟ ಆರಂಭಿಸಿದ್ದಾರೆ. ಇದನ್ನೂ ಓದಿ: Mysuru | ಬಾತ್‌ರೂಂನಲ್ಲಿ ಗ್ಯಾಸ್ ಗೀಸರ್ ಸೋರಿಕೆ; ಉಸಿರುಗಟ್ಟಿ ಅಕ್ಕ-ತಂಗಿ ಸಾವು
ಬೆಂಗಳೂರು: ಶಾಲಾ (School) ಪಠ್ಯದಲ್ಲಿ ರಾಮಾಯಣ (Ramayana) ಸೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್‌ನಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ ಪ್ರಶಸ್ತಿಗಳನ್ನು ವಿತರಿಸಿ ಅವರು ಮಾತನಾಡಿದರು. ಈ ವೇಳೆ, ವಾಲ್ಮೀಕಿ ಅವರ ಬಗ್ಗೆ ಮತ್ತು ರಾಮಾಯಣವನ್ನು ಪಠ್ಯದಲ್ಲಿ ಸೇರಿಸಬೇಕು ಎನ್ನುವ ಉಗ್ರಪ್ಪ ಅವರ ಬೇಡಿಕೆ ಬಗ್ಗೆ ಸಕಾರಾತ್ಮಕವಾಗಿ ಪರಿಗಣಿಸಲಾಗುವುದು ಎಂದು ಭರವಸೆ ನೀಡಿದರು. ಇದೇ ವೇಳೆ, ಅಧಿಕಾರದಲ್ಲಿದ್ದಾಗ ನಿಮ್ಮ ಪರವಾಗಿ ಕೆಲಸ ಮಾಡಿ, ನಿಮ್ಮ ಸಮುದಾಯದ ಬದುಕಿನ ಅವಕಾಶಗಳನ್ನು ಹೆಚ್ಚಿಸಿದವರ ಪರವಾಗಿ ನೀವು ಗಟ್ಟಿಯಾಗಿ ನಿಲ್ಲಬೇಕು ಎಂದು ಸಿಎಂ ಸಿದ್ದರಾಮಯ್ಯ ವಾಲ್ಮೀಕಿ ಸಮುದಾಯಕ್ಕೆ ಕರೆ ನೀಡಿದರು.
SC/ST ಸಮುದಾಯಗಳಿಗೆ ಜನಸಂಖ್ಯೆ ಪ್ರಮಾಣದಷ್ಟೇ ಅಭಿವೃದ್ಧಿ ಬಜೆಟ್‌ನಲ್ಲೂ ಹಣ ಮೀಸಲಿಡಲು ಕಾಯ್ದೆ ಮಾಡಿದ್ದು ಇದೇ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ. SC/ST ಸಮುದಾಯಗಳಿಗೆ ಹೋಬಳಿಗೊಂದರಂತೆ ವಸತಿ ಶಾಲೆ, ಮೊರಾರ್ಜಿ ಶಾಲೆಗಳನ್ನು ಮಾಡಿದ್ದು ಇದೇ ಸಿದ್ದರಾಮಯ್ಯ. ಹೀಗಾಗಿ ಈ ಇತಿಹಾಸವನ್ನೆಲ್ಲಾ ಚೆನ್ನಾಗಿ ತಿಳಿದುಕೊಳ್ಳಿ. ಅಧಿಕಾರದಲ್ಲಿದ್ದಾಗ ಯಾರು ನಿಮ್ಮ ಪರವಾಗಿ ಇದ್ದಾರೋ ಅವರ ಪರವಾಗಿ ವಾಲ್ಮೀಕಿ ಸಮುದಾಯ ನಿಲ್ಲಬೇಕು ಎಂದರು. ಇದನ್ನೂ ಓದಿ: ಕುರುಬರನ್ನು ಎಸ್‌ಟಿಗೆ ಸೇರಿಸಿದರೆ ST ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು: ಸಿದ್ದರಾಮಯ್ಯ
ಎಸ್ಸಿ/ಎಸ್ಟಿ ಸಮುದಾಯಗಳಿಗೆ ಜನಸಂಖ್ಯೆ ಪ್ರಮಾಣದಷ್ಟೇ ಅಭಿವೃದ್ಧಿ ಬಜೆಟ್ ನಲ್ಲೂ ಹಣ ಮೀಸಲಿಡಲು ಕಾಯ್ದೆ ಮಾಡಿದ್ದು ನನ್ನದೇ ನೇತೃತ್ವದ ಸರ್ಕಾರ. ಎಸ್ಸಿ/ಎಸ್ಟಿ ಸಮುದಾಯಗಳಿಗೆ ಹೋಬಳಿಗೊಂದರಂತೆ ವಸತಿ ಶಾಲೆ, ಮೊರಾರ್ಜಿ ದೇಸಾಯಿ ಶಾಲೆಗಳನ್ನು ಮಾಡಿದ್ದು ಇದೇ ಸಿದ್ದರಾಮಯ್ಯ. ಹೀಗಾಗಿ ಈ ಇತಿಹಾಸವನ್ನೆಲ್ಲಾ ಚೆನ್ನಾಗಿ ತಿಳಿದುಕೊಳ್ಳಿ.… pic.twitter.com/aaXHzEe1aA
ವಾಲ್ಮೀಕಿ ಮತ್ತು ಕುರುಬ ಸಮುದಾಯವನ್ನು ST ಗೆ ಸೇರಿಸಲು ನಾನು ಮತ್ತು ಉಗ್ರಪ್ಪ ಅವರು ರಾಮಕೃಷ್ಣ ಹೆಗಡೆಯವರಿಗೆ ಮನವಿ ಮಾಡಿದ್ದೆವು. ಹೆಗಡೆಯವರು ನಮ್ಮ ಮನವಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡಿದರೂ ಆಗ ಸೇರಿಸಲು ಆಗಲಿಲ್ಲ. ಆದರೆ, ಉಗ್ರಪ್ಪ ಅವರು ಸುಮ್ಮನೆ ಕೂರಲಿಲ್ಲ. ಉಗ್ರಪ್ಪ ಮತ್ತು ದೇವೇಗೌಡರ ನಡುವಿನ ಒಡನಾಟ ಆಗಲೂ ಚೆನ್ನಾಗಿತ್ತು. ಈಗಲೂ ಚನ್ನಾಗಿದೆ, ದೇವೇಗೌಡರು ಮತ್ತು ಚಂದ್ರಶೇಖರ್ ಅವರ ಒಡನಾಡ ಚನ್ನಾಗಿತ್ತು. ಚಂದ್ರಶೇಖರ್ ಅವರು ಪ್ರಧಾನಿಯಾಗಿದ್ದಾಗ ಅವರನ್ನು ದೇವೇಗೌಡರ ಮೂಲಕ ಒಪ್ಪಿಸಿ ವಾಲ್ಮೀಕಿ ಸಮುದಾಯವನ್ನು ST ಗೆ ಸೇರಿಸಿದರು. ವಾಲ್ಮೀಕಿ, ಬೇಡ ಮತ್ತು ನಾಯಕ ಸಮುದಾಯಕ್ಕೆ ಮೀಸಲಾತಿ ದೊರಕಲು ಉಗ್ರಪ್ಪನವರೇ ಕಾರಣ ಎನ್ನುವುದನ್ನು ಮರೆಯಬಾರದು ಎಂದರು.
ಈಗ ಕುರುಬರನ್ನು ST ಗೆ ಸೇರಿಸಲು ಹೋರಾಟ ಮಾಡಿದವರು ನಾವಲ್ಲ. ಬಿಜೆಪಿಯ ಈಶ್ವರಪ್ಪ ಹೋರಾಟ ಮಾಡಿದರು. ಸಿಎಂ ಆಗಿದ್ದ ಬೊಮ್ಮಾಯಿ ಅವರು ಈಶ್ವರಪ್ಪ ಅವರ ಮನವಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡಿದ್ದಾರೆ. ಆ ಶಿಫಾರಸಿನ ಬಗ್ಗೆ ಕೆಲವು ಸ್ಪಷ್ಟನೆಗಳನ್ನು ಕೇಂದ್ರ ಕೇಳಿದೆ. ಅದಷ್ಟೇ ನಮ್ಮೆದುರಿಗಿದೆ ಎಂದು ಸ್ಪಷ್ಟಪಡಿಸಿದರು.
ಜೆ.ಹೆಚ್.ಪಟೇಲರು ಸಿಎಂ ಆಗಿದ್ದಾಗ ಬೆಸ್ತರು ಸೇರಿ ಹಲವು ಸಮುದಾಯಗಳನ್ನು ST ಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸು ಹೋಗಿದೆ. ಇವತ್ತಿನವರೆಗೂ ಇದು ಸಾಧ್ಯವಾಗಿಲ್ಲ. ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದ ವಾಲ್ಮೀಕಿ ಸಮುದಾಯದ ವಾಲ್ಮೀಕಿ ಅವರು ವಿಶ್ವ ಮಾನವರಾಗಿ ಶ್ರೇಷ್ಠವಾದ ರಾಮಾಯಣ ಮಹಾ ಕಾವ್ಯವನ್ನು ರಚಿಸಿದರು. ಹೀಗಾಗಿ ಸಮುದಾಯದ ಪ್ರತಿಯೊಬ್ಬರೂ ಶಿಕ್ಷಣವನ್ನು ಆದ್ಯತೆಯಾಗಿ ಪರಿಗಣಿಸಬೇಕು. ಸಮುದಾಯಕ್ಕೆ ಬೇಕಾದ ಹಕ್ಕು, ಅವಕಾಶಗಳನ್ನು ಸಂಘಟನೆ, ಹೋರಾಟದ ಮೂಲಕ ಪಡೆದುಕೊಳ್ಳುವುದು ತಪ್ಪಲ್ಲ. ಹೋರಾಟ ಮಾಡಲೇಬೇಕು. ಇದನ್ನೇ ಅಂಬೇಡ್ಕರ್, ಬುದ್ದ, ಬಸವಣ್ಣ ಕೂಡ ಹೇಳಿದ್ದಾರೆ ಎಂದರು.
ಚಂಡೀಗಢ: ಯಾವುದೇ ಒಬ್ಬ ವಿದ್ಯಾರ್ಥಿ ತನ್ನ ಗುರಿ ತಲುಪಬೇಕಾದ್ರೆ ಹಿಂದೆ ಶಿಕ್ಷಕರೊಬ್ಬರು ಇರಲೇಬೇಕು. ವಿದ್ಯಾರ್ಥಿಗಳ ತಪ್ಪುಗಳನ್ನು ತಿದ್ದುತ್ತಾ, ಜೀವನಕ್ಕೆ ದಾರಿ ದೀಪವಾಗಬೇಕಿರುವುದು ಶಿಕ್ಷಕರು (Teachers). ಆದ್ರೆ ಇಲ್ಲೊಬ್ಬಳು ಶಿಕ್ಷಕಿ ಅದಕ್ಕೆ ವ್ಯತಿರಿಕ್ತವಾಗಿದ್ದಾಳೆ. ವಿದ್ಯಾರ್ಥಿ ಹೋಂ ವರ್ಕ್ ಮಾಡಿಲ್ಲ ಅನ್ನೋ ಕಾರಣಕ್ಕೆ ಆತನ ಕೈಕಾಲು ಕಟ್ಟಿ, ತಲೆಕೆಳಗಾಗಿ ನೇತು ಹಾಕಿ ಹಿಂಸೆ ನೀಡಿ ಕ್ರೌರ್ಯ ಮೆರೆದಿದ್ದಾಳೆ.
ಹೌದು. ಹರಿಯಾಣದ (Haryana) ಪಾಣಿಪತ್‌ನ ಶ್ರೀಜನ್ ಪಬ್ಲಿಕ್ ಶಾಲೆಯಲ್ಲಿ (Srijan Public School) ಈ ಘಟನೆ ನಡೆದಿದೆ. ವಿದ್ಯಾರ್ಥಿ ಹೋಂ ವರ್ಕ್ ಮಾಡಿಲ್ಲ ಅಂತ ಶಿಕ್ಷಕಿಯೊಬ್ಬಳು ಆತನ ಕೈಕಾಲು ಕಟ್ಟಿ, ತಲೆಕೆಳಗಾಗಿಸಿ ನೇತುಹಾಕಿದ್ದಾಳೆ, ವಿದ್ಯಾರ್ಥಿಯನ್ನ ಚೆನ್ನಾಗಿ ಥಳಿಸಿದ್ದಾಳೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್‌ಗೆ ಬಿ.ಕಾಂ ಪದವೀಧರೆ ಬಲಿ
ಆಗಸ್ಟ್ 13ರಂದು ನಡೆದಿದ್ದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಶಾಲಾ ಆಡಳಿಯ ಮಂಡಳಿಗೆ ಈ ವಿಷಯ ತಿಳಿದಿದ್ದೂ ಮುಚ್ಚಿಟ್ಟಿದ್ದರು. ಆದ್ರೆ ಹಲ್ಲೆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದಮೇಲೆ ವಿಷಯ ಗೊತ್ತಾಗಿದೆ.
ಮತ್ತೊಂದು ವಿಡಿಯೋ ವೈರಲ್
ಇನ್ನೂ ಅದೇ ಶಾಲೆಯಲ್ಲಿ ಇತರ ಮಕ್ಕಳನ್ನು ಥಳಿಸುತ್ತಿರುವ ಇನ್ನೊಂದು ವಿಡಿಯೋ ಸಹ ವೈರಲ್ ಆಗಿದೆ. ಆ ವಿಡಿಯೋದಲ್ಲಿ ಒಬ್ಬ ಶಿಕ್ಷಕಿ ಮಗುವನ್ನ ಹೊಡೆಯುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಸತತ ಒಂಬತ್ತು ಬಾರಿ ಮಗುವಿಗೆ ಕಪಾಳಮೋಕ್ಷ ಮಾಡುತ್ತಿದ್ದಾಳೆ. ವಿಡಿಯೋಗಳನ್ನ ವಶಕ್ಕೆ ಪಡೆದು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಲ್ಲದೇ ಚಾಲಕನ ಕೈಯಿಂದಲೂ ಥಳಿಸಿದ್ದಳು ಎನ್ನಲಾಗಿ ಕಾಲೇಜು ಪ್ರಾಂಶುಪಾಲರು ಹಾಗೂ ಬಸ್ ಚಾಲಕನನ್ನ ಬಂಧಿಸಲಾಗಿದೆ.
ಅಮರಾವತಿ: ಶಾಲೆಯ (School) ಅಡುಗೆಮನೆಯಲ್ಲಿ ಇಟ್ಟಿದ್ದ ಕುದಿಯುತ್ತಿದ್ದ ಹಾಲಿನ ಪಾತ್ರೆಗೆ ಬಿದ್ದು ಒಂದೂವರೆ ವರ್ಷದ ಹೆಣ್ಣು ಮಗು ತೀವ್ರ ಗಾಯಗೊಂಡು ಮೃತಪಟ್ಟಿರುವ ಘಟನೆ ಅನಂತಪುರ (Anantpur) ಜಿಲ್ಲೆಯ ಬುಕ್ಕರಾಯಸಮುದ್ರಂ (Bukkarayasamudram) ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಅಂಬೇಡ್ಕರ್ ಗುರುಕುಲ ಶಾಲೆಯಲ್ಲಿ ಘಟನೆ ಸಂಭವಿಸಿದ್ದು, ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ. ಅಕ್ಷಿತಾ ಮೃತ ಮಗು. ಮಗುವಿನ ತಾಯಿ ಕೃಷ್ಣವೇಣಿ ಶಾಲೆಯೊಂದರಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ವಿದ್ಯಾರ್ಥಿಗಳಿಗೆ ವಿತರಿಸಲು ಸಿದ್ಧಪಡಿಸಿದ್ಧ ಬಿಸಿ ಹಾಲನ್ನು ತಣ್ಣಗಾಗಿಸಲು ಸೀಲಿಂಗ್ ಫ್ಯಾನ್ ಅಡಿಯಲ್ಲಿ ಇಡಲಾಗಿತ್ತು. ತಾಯಿ ಅಡುಗೆಮನೆಯಲ್ಲಿ ಇಲ್ಲದ ವೇಳೆ ಬೆಕ್ಕನ್ನು ಹಿಂಬಾಲಿಸಿಕೊಡು ಹೋದ ಮಗು ಕುದಿಯುತ್ತಿದ್ದ ಹಾಲಿನ ಪಾತ್ರೆಯೊಳಗೆ ಬಿದ್ದಿದೆ. ಇದನ್ನೂ ಓದಿ: ಮಿಗ್ -21 ತ್ರಿವರ್ಣ ಧ್ವಜದ ಗೌರವ ಹೆಚ್ಚಿಸಿದೆ: ರಾಜನಾಥ್ ಸಿಂಗ್
ಬಿಸಿ ಹಾಲಿನ ಪಾತ್ರೆಗೆ ಬಿದ್ದ ಪರಿಣಾಮ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು. ಮಗುವಿನ ಕಿರುಚಾಟ ಕೇಳಿದ ತಾಯಿ ಕೃಷ್ಣವೇಣಿ, ಕೂಡಲೇ ಮಗುವನ್ನು ಪಾತ್ರೆಯಿಂದ ಹೊರತೆಗೆದು ಅನಂತಪುರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ವೈದ್ಯರ ಶಿಫಾರಸಿನ ಮೇರೆಗೆ, ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಕರ್ನೂಲ್ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಗು ಸಾವನ್ನಪ್ಪಿದೆ. ಇದನ್ನೂ ಓದಿ: ಲಡಾಖ್ ಹಿಂಸಾಚಾರಕ್ಕೆ ಪ್ರಚೋದನೆ – ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅರೆಸ್ಟ್
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ (Delhi) ಹಲವು ಶಾಲೆಗಳಿಗೆ ಶನಿವಾರ ಮುಂಜಾನೆ ಬಾಂಬ್ ಬೆದರಿಕೆ (Bomb Threat) ಕರೆಗಳು ಬಂದಿದ್ದು, ಪೊಲೀಸ್ ತಂಡ ಮತ್ತು ಬಾಂಬ್ ನಿಷ್ಕ್ರಿಯ ದಳ (Bomb Disposal Squads) ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯ ನಡೆಸುತ್ತಿವೆ.
ಬಾಂಬ್ ಬೆದರಿಕೆ ಬಂದಿದ್ದ ಶಾಲೆಗಳ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ನಾವು ಶಾಲೆಗಳ ಆವರಣವನ್ನು ಸಂಪೂರ್ಣವಾಗಿ ಪರಿಶೀಲಿಸಿದ್ದು, ಯಾವುದೇ ಅನುಮಾನಾಸ್ಪದ ರೀತಿಯ ವಸ್ತುಗಳು ಕಂಡುಬಂದಿಲ್ಲ. ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಲೈಂಗಿಕ ಕಿರುಕುಳ, ಕೊಲೆ ಬೆದರಿಕೆ ಸೇರಿ ಸಾಲು ಸಾಲು ಆರೋಪ – ಬೇಲೂರು ಶಿಕ್ಷಣಾಧಿಕಾರಿ ಅಮಾನತು
ದಾವಣಗೆರೆ: ಮಕ್ಕಳನ್ನು ಸರ್ಕಾರಿ ಶಾಲೆಗೆ (School) ಸೇರಿಸುವವರಿಗೆ ಮಾತ್ರ ಗ್ಯಾರಂಟಿ ಯೋಜನೆ (Guarantee scheme) ಕೊಡಿ ಎಂದು ಶಾಸಕ ಕೆ.ಎಸ್.ಬಸವಂತಪ್ಪ (K.S Basavantappa) ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ದಾವಣಗೆರೆಯ (Davanagere) ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಕಲ್ಯಾಣ ಮಂಟಪದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ವೇಳೆ, ಪೋಷಕರಿಗೆ ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಸರ್ಕಾರಿ ಶಾಲೆಗೆ ಸೇರಿಸಿದರೆ ಮಾತ್ರ ಗ್ಯಾರಂಟಿ ಕೊಡ್ತಿವೆ ಎಂದು ಸರ್ಕಾರ ಘೊಷಿಸಬೇಕು. ಆಗ ಸರ್ಕಾರಿ ಶಾಲೆ ಮಕ್ಕಳ ಹಾಜರಾತಿ ಸಂಖ್ಯೆ ಹೆಚ್ಚಳ ಆಗುತ್ತದೆ ಎಂದಿದ್ದಾರೆ. ಇದನ್ನೂ ಓದಿ: ಸಂಪುಟದ ಮುಂದಿಟ್ಟು ತಮಗೆ ಬೇಕಾದವ್ರ ಕೇಸ್ ತೆಗೆದು ಹಾಕಿದ್ದಾರೆ, ಬಿಜೆಪಿ ಇದನ್ನು ಒಪ್ಪಲ್ಲ: ರವಿಕುಮಾರ್
ಈ ವಿಚಾರವಾಗಿ ಸರ್ಕಾರಕ್ಕೆ, ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ. ಮುಖ್ಯಮಂತ್ರಿಗಳು ಈ ಕೆಲಸ ಮಾಡಿದರೆ ಸಾಕು, ಎಲ್ಲಿ 2000 ರೂ, ಹಣ, ವಿದ್ಯುತ್ ಬಿಲ್ ಕೈ ತಪ್ಪಿ ಹೋಗುತ್ತದೆ ಎಂಬ ಭಯ ಬರುತ್ತದೆ. ಭಯದಲ್ಲಾದರೂ ತಾಯಂದಿರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುತ್ತಾರೆ.
ಚಾಮರಾಜನಗರ: ಸರ್ಕಾರಿ ಶಾಲಾ ಕಟ್ಟಡ ಬಿರುಕು ಬಿಟ್ಟಿದ್ದು, ಮೇಲ್ಛಾವಣಿ ಸೀಲಿಂಗ್ ಉದುರುತ್ತಿದೆ. ಇದು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಅಂಚಿಪಾಳ್ಯ ಕಿರಿಯ ಪ್ರಾಥಮಿಕ ಶಾಲೆಯ ದುಸ್ಥಿತಿಯಾಗಿದೆ.
ಮಳೆ ಬಂದರೆ ಕೊಠಡಿಗಳು ಸೋರುತ್ತಿವೆ. ಶೌಚಾಲಯ ವ್ಯವಸ್ಥೆ ಇಲ್ಲ, ಪೀಠೋಪಕರಣಗಳಿಲ್ಲ, ಆಟವಾಡಲು ಮೈದಾನ ಇಲ್ಲ. ಅವ್ಯವಸ್ಥೆಯಿಂದ ಶಾಲಾ ಮಕ್ಕಳು ಕೂಡ ಬೇಸತ್ತು ಹೋಗಿದ್ದಾರೆ. ಶಾಲಾ ಕಟ್ಟಡ ದುರಸ್ತಿಪಡಿಸಿಕೊಡುವಂತೆ ಸಿಎಂ ಸಿದ್ದರಾಮಯ್ಯಗೆ ವಿದ್ಯಾರ್ಥಿಗಳು ಮೊರೆ ಇಟ್ಟಿದ್ದಾರೆ.
ಹಲವು ಬಾರಿ ದೂರು ನೀಡಿದರು ಕೂಡ ಶಿಕ್ಷಣಾಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ. ಶಿಕ್ಷಣ ಇಲಾಖೆ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗ: 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು (Student) ಗಂಡು ಮಗುವಿಗೆ ಜನ್ಮ ನೀಡಿರುವುದು ಶಿವಮೊಗ್ಗ (Shivamogga) ಜಿಲ್ಲೆಯಿಂದ ವರದಿಯಾಗಿದೆ.
ಬಾಲಕಿ ಹೊಟ್ಟೆ ನೋವು ಎಂದು ಶಾಲೆಗೆ ರಜೆ ಹಾಕಿದ್ದಳು. ರಜೆ ಹಾಕಿದ್ದ ಎರಡು ದಿನದ ಬಳಿಕ ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ್ದಾಳೆ. ತಕ್ಷಣವೇ ಆಕೆಯನ್ನ ಕುಟುಂಬಸ್ಥರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. 7 ತಿಂಗಳಿಗೆ ಮಗು ಜನಿಸಿದ್ದು, 1.8 ಕೆಜಿ ತೂಕವಿದ್ದು, ಬಾಲಕಿ ಹಾಗೂ ಮಗು ಆರೋಗ್ಯವಾಗಿದ್ದಾರೆ. ಇದನ್ನೂ ಓದಿ: ಅಪ್ರಾಪ್ತನಿಂದ ರೇಪ್- 2 ತಿಂಗಳ ಗರ್ಭಿಣಿಯಾದ ಅಪ್ರಾಪ್ತೆ
ಘಟನೆ ಬೆಳಕಿಗೆ ಬಂದ ಬೆನ್ನಲ್ಲೆ, ಮಕ್ಕಳ ರಕ್ಷಣಾ ಘಟಕ, ಮಕ್ಕಳ ಕಲ್ಯಾಣ ಸಮಿತಿ ಸಿಬ್ಬಂದಿ ಹಾಗೂ ಪೊಲೀಸರು ದೂರು ದಾಖಲಿಸಿಕೊಂಡು ಬಾಲಕಿಯ ವಿಚಾರಣೆ ನಡೆಸಿದ್ದಾರೆ. ಈ ವೇಳೆ ತನ್ನ ಮೇಲೆ ನಡೆದ ದೌರ್ಜನ್ಯದ ಬಗ್ಗೆ ಬಾಲಕಿ ಗೊಂದಲದ ಹೇಳಿಕೆ ನೀಡಿದ್ದಾಳೆ ಎಂದು ತಿಳಿದು ಬಂದಿದೆ. ಇದರಿಂದ ಬಾಲಕಿಯ ಕೌನ್ಸೆಲಿಂಗ್ ನಡೆಸಿದ ಬಳಿಕ ಹೆಚ್ಚಿನ ವಿಚಾರಣೆ ನಡೆಸಲು ನಿರ್ಧಾರಿಸಲಾಗಿದೆ.
ಹಾಸನ: ಭಾರೀ ಗಾಳಿ ಮಳೆಗೆ (Rain) ಸಕಲೇಶಪುರದ (Sakleshpura) ಕಡಗರವಳ್ಳಿ ಗ್ರಾಮದ ಶಾಲೆಯ ಗೋಡೆ ಕುಸಿದುಬಿದ್ದಿದೆ. ಭಾರೀ ಮಳೆಯಿಂದ ಶಾಲೆಗೆ (School) ರಜೆ ಘೋಷಣೆ ಮಾಡಿದ್ದರಿಂದ ವಿದ್ಯಾರ್ಥಿಗಳಾಗಲಿ, ಶಿಕ್ಷಕರಾಗಲಿ ಇರಲಿಲ್ಲ. ಇದರಿಂದ ನಡೆಯಬೇಕಿದ್ದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.
ಹಾಸನ (Hassan) ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಪರಿಣಾಮ ಇಂದು (ಆ.18) ಶಾಲೆಯ ಕಟ್ಟಡದ ಗೋಡೆ ಹಾಗೂ ಹೆಂಚುಗಳು ಬಿದ್ದಿವೆ. ಅಕಸ್ಮಾತ್ ಶಾಲೆಗೆ ರಜೆ ಇಲ್ಲದೇ ಹೋಗಿದ್ದರೆ, ಹಲವಾರು ಮಕ್ಕಳು ಇಲ್ಲಿ ಸೇರಿರುತ್ತಿದ್ದರು. ಇದರಿಂದ ಅನಾಹುತ ಆಗುವ ಸಾಧ್ಯತೆ ಇತ್ತು. ಅದೃಷ್ಟವಶಾತ್ ಶಾಲೆಗೆ ರಜೆ ಘೋಷಣೆ ಮಾಡಿದ್ದರಿಂದ ಮಕ್ಕಳು ಮತ್ತು ಶಿಕ್ಷಕರು ಬಚಾವ್ ಆಗಿದ್ದಾರೆ. ಇದನ್ನೂ ಓದಿ: ಕೆಆರ್‌ಎಸ್‌ನಿಂದ 91 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ – ಮುಳುಗಡೆ ಭೀತಿಯಲ್ಲಿ ವೆಲ್ಲೆಸ್ಲಿ ಸೇತುವೆ
ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ವರುಣನ ಅಬ್ಬರಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮೊನ್ನೆಯಿಂದ ಸುರಿಯುತ್ತಿರುವ ಭಾರಿ ಮಳೆಗೆ ರಸ್ತೆಯ ತುಂಬೆಲ್ಲ ನೀರು ಹರಿಯುತ್ತಿದೆ. ಹಲವು ಕಡೆಗಳಲ್ಲಿ ಭೂಕುಸಿತ ಉಂಟಾಗಿದ್ದು, ಬಿರುಗಾಳಿ ಸಹಿತ ಮಳೆಯ ಅಬ್ಬರಕ್ಕೆ ಮರಗಳು ನೆಲಕ್ಕುರುಳಿವೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಮನೆಯಿಂದ ಹೊರಬರದ ಪರಿಸ್ಥಿತಿ ನಿರ್ಮಾಣವಾಗಿದೆ.
ಸಕಲೇಶಪುರ ತಾಲೂಕಿನ ಕಡಗರವಳ್ಳಿ ಗ್ರಾಮದಲ್ಲಿ ಗುಡ್ಡ, ಮರಗಳು ಧರೆಗುರುಳಿವೆ. ಗುಡ್ಡ ಕುಸಿತದಿಂದ ಕಡಗರವಳ್ಳಿ, ಬಾಚೀಹಳ್ಳಿ, ವಳಲಹಳ್ಳಿ, ಹೊಂಗಡಹಳ್ಳ ಗ್ರಾಮಗಳಿಗೆ ರಸ್ತೆ ಸಂಪರ್ಕ ಕಡಿತಗೊಂಡಿತ್ತು. ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು ಮತ್ತೆ ಗುಡ್ಡ ಕುಸಿಯುವ ಆತಂಕ ಸಹ ಇದೆ. ಇದನ್ನೂ ಓದಿ: ಜನರೇ ಗಮನಿಸಿ, ಇಂದು 3 ಜಿಲ್ಲೆಗೆ ರೆಡ್, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
ಹಾಸನ/ಉಡುಪಿ: ಮಳೆಯ (Rain) ಅಬ್ಬರ ಹೆಚ್ಚಾದ ಹಿನ್ನೆಲೆ ಹಾಸನ (Hassan) ಜಿಲ್ಲೆಯ ಸಕಲೇಶಪುರ, ಅರಕಲಗೂಡು ತಾಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ (School) ರಜೆ ಘೋಷಣೆ ಮಾಡಲಾಗಿದೆ.
ಆಲೂರು ತಾಲೂಕಿನ ಪಾಳ್ಯ, ಕೆಂಚಮ್ಮನ ಹೊಸಕೋಟೆ ಹೋಬಳಿಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಹಾಗೂ ಬೇಲೂರು ತಾಲೂಕಿನ ಬಿಕ್ಕೋಡು ಮತ್ತು ಅರೇಹಳ್ಳಿ ವ್ಯಾಪ್ತಿಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: ಹಿಮಾಚಲ ಪ್ರದೇಶದಲ್ಲಿ ಮಳೆ ಅವಾಂತರ – ಈವರೆಗೂ 260ಕ್ಕೂ ಅಧಿಕ ಮಂದಿ ಸಾವು
ಉಡುಪಿ (Udupi) ಜಿಲ್ಲೆಯಲ್ಲೂ ಧಾರಾಕಾರ ಮಳೆ ಮುಂದುವರಿದಿದ್ದು, ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ, ಪಿಯುಸಿ, ಐಟಿಐ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಳೆ ಹೆಚ್ಚಾಗುವ ಸಾಧ್ಯತೆ ಇದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: ವಿಲ್ಸನ್ ಗಾರ್ಡನ್ ನಿಗೂಢ ಬ್ಲಾಸ್ಟ್ – ಗಾಯಗೊಂಡಿದ್ದ ತಾಯಿ, ಮಗಳು ಸಾವು