ಬೀದರ್: ಖಾಸಗಿ ಶಾಲಾ ಬಸ್ (School Bus) ಹರಿದು ಯುಕೆಜಿ ಓದುತ್ತಿದ್ದ 6 ವರ್ಷದ ಬಾಲಕಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಬೀದರ್ (Bidar) ಜಿಲ್ಲೆಯ ಔರಾದ್ (Aurad) ತಾಲೂಕಿನ ಎಕ್ಕಂಬಾ ಗ್ರಾಮದಲ್ಲಿ ನಡೆದಿದೆ.
ಬೆಂಗಳೂರು: ಬಾಣಸವಾಡಿ ಅಗ್ನಿಶಾಮಕದಳ ಕಚೇರಿ ಬಳಿಯೇ ಶಾಲಾ ವಾಹನವೊಂದು ಹೊತ್ತಿ ಉರಿದಿದ್ದು, ಅದರೊಳಗಿದ್ದ ವ್ಯಕ್ತಿ ಸಜೀವ ದಹನ ಆಗಿದ್ದಾರೆ.
OMBR ಲೇಔಟ್‌ನಲ್ಲಿ ರಾತ್ರಿ 10:08 ಕ್ಕೆ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಅಗ್ನಿಶಾಮಕದಳ ವಾಹನ ದೌಡಾಯಿಸಿ ಬೆಂಕಿ ನಂದಿಸಲಾಗಿದೆ. ಬಸ್ಸಿನ ಒಳಗೆ ಒಬ್ಬರು ಸಜೀವ ದಹನವಾಗಿದ್ದಾರೆ ಎಂದು ಬಾಣಸವಾಡಿ ಅಗ್ನಿಶಾಮಕದಳ ಕಚೇರಿ ಮಾಹಿತಿ ನೀಡಿದೆ.
ಬಸ್‌ನ ಓಳಗೆ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಸುಮಾರು 30 ವರ್ಷದ ಆಸುಪಾಸಿನ ವ್ಯಕ್ತಿ ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ರಾಮಮೂರ್ತಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅರುಣ್ ಎಂಬವರಿಗೆ ಸೇರಿದ ಖಾಸಗಿ ಶಾಲೆ ಬಸ್ ಇದಾಗಿದೆ. ಘಟನೆಯಲ್ಲಿ ಮೃತ ವ್ಯಕ್ತಿ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಗುರುತು ಇನ್ನೂ ಪತ್ತೆಯಾಗಿಲ್ಲ. ಘಟನೆ ಸಂಬಂಧ ಪೊಲೀಸರು ಯುಡಿಆರ್ ದಾಖಲಿಸಿಕೊಂಡಿದ್ದಾರೆ. ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಖಾಸಗಿ ಬಸ್‌ನಲ್ಲಿ ಚಾಪೆ, ದಿಂಬು ತಂದು ವ್ಯಕ್ತಿ ಮಲಗಿದ್ದ ಎಂಬುದು ಪರಿಶೀಲನೆಯಿಂದ ಗೊತ್ತಾಗಿದೆ. ಸುಮಾರು ಮೂರು ತಿಂಗಳಿನಿಂದ ಶಾಲಾ ಬಸ್ ಕೆಟ್ಟು ನಿಂತಿತ್ತು. 14 ವರ್ಷದ ಹಳೆ ಬಸ್‌ಗೆ ಎಫ್‌ಸಿ, ಇನ್ಯೂರೆನ್ಸ್ ಮುಗಿದಿತ್ತು. ಹೀಗಾಗಿ, OMBR ಲೇಔಟ್ ರಸ್ತೆಯಲ್ಲಿ ಮಾಲೀಕ ಅರುಣ್ ಬಸ್ ನಿಲ್ಲಿಸಿದ್ದರು. ನಿನ್ನೆ ಸಂಜೆ ಕೂಡ ಬಸ್ ಬಳಿ ಬಂದು ನೋಡಿಕೊಂಡು ಹೋಗಿದ್ದರು.
ಬಸ್‌ಗೆ ಸರಿಯಾಗಿ ಡೋರ್ ಲಾಕ್ ಆಗಿರಲಿಲ್ಲ. ಹೀಗಾಗಿ, ಬಸ್‌ನ ಒಳಗೆ ಹೋಗಿ ವ್ಯಕ್ತಿ ಧೂಮಪಾನ ಮಾಡಿ ಮಲಗಿದ್ದ. ಬಸ್‌ನಲ್ಲಿ ಕೆಲ ಬೀಡಿ ತುಂಡುಗಳು ಪತ್ತೆಯಾಗಿದೆ ಎನ್ನಲಾಗಿದೆ. ಬೀಡಿ ಸೇದಿದ ತುಂಡಿನಿಂದ ಬಸ್‌ನಲ್ಲಿ ಬೆಂಕಿ ಹೊತ್ತಿಕೊಂಡಿದ್ಯಾ ಅಥವಾ ಬೇರೆ ಯಾರಾದರೂ ಬಸ್‌ಗೆ ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರಾ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಹಾವೇರಿ: ಶಾಲಾ ಬಸ್ (School Bus) ಚಾಲನೆ ವೇಳೆಯೇ ಹೃದಯಾಘಾತದಿಂದ (Heart Attack) ಚಾಲಕ ಮೃತಪಟ್ಟ ಘಟನೆ ಹಾವೇರಿ (Haveri) ಜಿಲ್ಲೆ ಸವಣೂರು (Savanur) ತಾಲೂಕಿನ ಕಳಲಗೊಂಡ ಗ್ರಾಮದ ಬಳಿ ನಡೆದಿದೆ.
ಪಕ್ಕಿರೇಶ ಮಲ್ಲೇಶಣ್ಣನವರ್ (25) ಮೃತ ಚಾಲಕ. ಖಾಸಗಿ ಶಾಲೆಯ ಬಸ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಪಕ್ಕಿರೇಶ ಸಂಜೆ ಶಾಲೆಯಿಂದ ವಾಪಸ್ ಮಕ್ಕಳನ್ನು ಮನೆಗೆ ಡ್ರಾಪ್ ಮಾಡುತ್ತಿದ್ದ ವೇಳೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ. ಇದನ್ನೂ ಓದಿ: ಬಿಜೆಪಿ ಶಾಸಕ ವಿ ಸುನಿಲ್ ಕುಮಾರ್‌ಗೆ ಪಿತೃ ವಿಯೋಗ
ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಚಾಲಕ ರಸ್ತೆಬದಿಯಲ್ಲಿ ಬಸ್ ನಿಲ್ಲಿಸಿದ್ದಾರೆ. ಈ ವೇಳೆ ಮಕ್ಕಳು ಕೂಗಾಡಿ, ಚೀರಾಡಿ ಸ್ಥಳೀಯರನ್ನು ಕರೆದಿದ್ದಾರೆ. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅದೃಷ್ಟವಶಾತ್ ಶಾಲಾ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಅಮೆರಿಕದ ಅಲಾಸ್ಕಾದಲ್ಲಿ 7.3 ತೀವ್ರತೆಯ ಭೂಕಂಪ – ಸುನಾಮಿ ಎಚ್ಚರಿಕೆ
ಚಿತ್ರದುರ್ಗ: ಖಾಸಗಿ ಶಾಲೆಯ ಬಸ್ ನಿರ್ವಾಹಕಿಯ (Women conductors )ತಲೆಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಹೊಳಲ್ಕೆರೆ ತಾಲೂಕಿನ ಕೆಂಗುಂಟೆ ಗ್ರಾಮದ ಅರಣ್ಯದಲ್ಲಿ ನಡೆದಿದೆ.
ಕಳೆದ ಎರಡು ದಿನಗಳ ಹಿಂದೆ ಹಣ ನೀಡುವುದಾಗಿ ಕರೆ ಮಾಡಿದ್ದ ಅನಿಲಾಸನ್ ಕೆಂಗುಂಟೆ ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಹತ್ಯೆ ಮಾಡಿದ್ದಾನೆ. ಅಲ್ಲದೇ ಅತ್ಯಾಚಾರ ಎಸಗಿರುವ ಶಂಕೆಯೂ ಇದೆ ಎಂದು ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆರೋಪಿಸಿದ್ದಾರೆ.
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ (Silicon City) ರೋಡ್ ರೇಜ್ ಪ್ರಕರಣಗಳು ಹೆಚ್ಚಾಗಿದ್ದು, ಶಾಲಾ ಬಸ್ ಮೇಲೆ ಅಟ್ಯಾಕ್ ಮಾಡಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ.
ನಿನ್ನೆ (ಸೆ.16) ಸಂಜೆ ವೇಳೆ ಎಲೆಕ್ಟ್ರಾನಿಕ್ ಸಿಟಿಯಲ್ಲಿ (Electronic City) ಶಾಲಾ ಬಸ್ ಮೇಲೆ ಅಟ್ಯಾಕ್ ಮಾಡಿ ಪುಂಡರು ಅಟ್ಟಹಾಸ ಮೆರೆದಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಇದನ್ನೂ ಓದಿ: ಕೊಲೆ ಆರೋಪಿ ದರ್ಶನ್ ಸೆಲ್‌ಗೆ ಬರಲಿದೆ 32 ಇಂಚಿನ ಟಿವಿ
KA 01 MB 5796 ವಾಹನ ನೋಂದಣಿ ಸಂಖ್ಯೆಯ ಸ್ಕಾರ್ಪಿಯೋದಲ್ಲಿದ್ದ 6-8 ಕ್ಕೂ ಹೆಚ್ಚು ದುಷ್ಕರ್ಮಿಗಳು ಶಾಲಾ ಬಸ್ ಮೇಲೆ ಅಟ್ಯಾಕ್ ಮಾಡಿದ್ದಾರೆ. ಬಸ್ ಕಿಟಕಿಯನ್ನು ಒಡೆಯುವ ಮೂಲಕ ಬಸ್‌ನಲ್ಲಿದ್ದ ಮಕ್ಕಳಿಗೆ ತೀವ್ರ ತೊಂದರೆ ನೀಡಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಶಾಲಾ ಬಸ್‌ಗಳ ಮೇಲೆಯೂ ರೋಡ್ ರೇಜ್ ಮಾಡುತ್ತಾರಾ? ಶಾಲಾ ಮಕ್ಕಳಿಗೂ ಬೆಂಗಳೂರು ಸುರಕ್ಷಿತವಾಗಿಲ್ವಾ ಎಂದು ಪೋಷಕರು ಹಾಗೂ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ಘಟನೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ದಿವಾಳಿಯಾಗಿರುವ ಪಾಕಿಸ್ತಾನಕ್ಕೆ ಐಎಂಎಫ್‌ನಿಂದ ಸಿಗುತ್ತಾ ಬೂಸ್ಟರ್ ಡೋಸ್!
ಕಲಬುರಗಿ: ತಲೆ ಮೇಲೆ ಶಾಲಾ ವಾಹನ (School Bus) ಹರಿದ ಪರಿಣಾಮ 3 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರಗಿ (Kalaburagi) ಜಿಲ್ಲೆಯ ಅಫಜಲಪುರ (Afzalpur) ತಾಲೂಕಿನ ಶಿವಪುರ ಗ್ರಾಮದಲ್ಲಿ ನಡೆದಿದೆ.
ರಾಜಶೇಖರ್ ಎಂಬವರ ಪುತ್ರಿ ಖುಷಿ ಬನ್ನಟ್ಟಿ (3) ಮೃತ ಬಾಲಕಿ. ಶಾಲಾ ವಾಹನದಲ್ಲಿ ಅಣ್ಣ ಬಂದಿದ್ದ ವೇಳೆ ಆತನನ್ನು ಕರೆಯಲು ತಂದೆಯ ಹಿಂದೆ ಖುಷಿ ಹೋಗಿದ್ದಳು. ಆದರೆ ತಂದೆ ಈಕೆ ಬಂದಿರುವುದನ್ನು ಗಮನಿಸಿರಲಿಲ್ಲ. ಅಣ್ಣ ಬಸ್‌ನಿಂದ ಇಳಿದ ಬಳಿಕ ಶಾಲಾ ವಾಹನದ ಚಾಲಕ ಬಸ್ ಹಿಂದೆ ತಿರುಗಿಸಿದ್ದಾನೆ. ಈ ವೇಳೆ ಖುಷಿ ಬಸ್‌ನಡಿಗೆ ಸಿಲುಕಿದ್ದು, ಆಕೆಯ ತಲೆ ಮೇಲೆ ಶಾಲಾ ಬಸ್ ಹರಿದಿದೆ. ಘಟನೆಯ ಪರಿಣಾಮ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಇದನ್ನೂ ಓದಿ: ಕಲ್ಲು ತೂರಾಟ, ತಲವಾರ್ ಪ್ರದರ್ಶನ, ಸಿಕ್ಕ ಸಿಕ್ಕ ವಾಹನಗಳ ಮೇಲೆ ದಾಳಿ – ನಾಗಮಂಗಲ ಧಗಧಗಿಸಿದ್ದು ಹೇಗೆ? ಇಲ್ಲಿದೆ ಪೂರ್ಣ ಸುದ್ದಿ
ರಾಯಚೂರು: ಶಾಲಾ ಬಸ್ (School Bus)ಹಾಗೂ ಸರ್ಕಾರಿ ಬಸ್ (Government Bus) ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿದ್ದು, 40ಕ್ಕೂ ಹೆಚ್ವು ಜನರು ಗಾಯಗೊಂಡಿರುವ ಘಟನೆ ಜಿಲ್ಲೆಯ ಮಾನ್ವಿ (Manavi) ತಾಲೂಕಿನ ಕಪಗಲ್ ಬಳಿ ನಡೆದಿದೆ.
ಸಮರ್ಥ (7) ಹಾಗೂ ಶ್ರೀಕಾಂತ (12) ಮೃತ ವಿದ್ಯಾರ್ಥಿಗಳು. ಅಪಘಾತ ಸಂಭವಿಸಿದ ಕೂಡಲೇ ರಿಮ್ಸ್ (RIMS) ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಗಾಯಗೊಂಡ 40ಕ್ಕೂ ಹೆಚ್ವು ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.ಇದನ್ನೂ ಓದಿ: ಮೂರು ತಿಂಗಳಲ್ಲಿ ದರ್ಶನ್ ಬಿಡುಗಡೆ ಆಗ್ತಾರೆ – ಬೀರಲಿಂಗೇಶ್ವರ ದೈವ ಭವಿಷ್ಯವಾಣಿ
40 ಜನ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ ಹಾಗೂ ಸರ್ಕಾರಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದಿವೆ. ಶಾಲಾ ಬಸ್ಸಿನಲ್ಲಿದ್ದ 17 ಜನರಿಗೆ ಗಂಭೀರ ಗಾಯಗಳಾಗಿದ್ದು, ನಾಲ್ಕು ವಿದ್ಯಾರ್ಥಿಗಳ ಕಾಲುಗಳು ತುಂಡಾಗಿವೆ. 23 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇನ್ನೂ ಮೂವರ ಸ್ಥಿತಿ ಗಂಭೀರವಾಗಿದೆ. ಸರ್ಕಾರಿ ಬಸ್ಸಿನಲ್ಲಿದ್ದ 17 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ರಾಯಚೂರು ಜಿಲ್ಲಾಧಿಕಾರಿ ನಿತೀಶ್.ಕೆ (Nitish K) ಈ ಘಟನೆ ಕುರಿತು ಸಿಎಂ ಜೊತೆ ದೂರವಾಣಿಯಲ್ಲಿ ಮಾತನಾಡಿ, ಗಾಯಾಳುಗಳಿಗೆ ಅಗತ್ಯ ಚಿಕಿತ್ಸೆಗೆ ಪರಿಹಾರ ನೀಡಲು ಸೂಚಿಸಿದ್ದಾರೆ. ಕೂಡಲೇ ಪರಿಹಾರ ಒದಗಿಸಲು ಆದೇಶ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಕೆಎಸ್‌ಆರ್‌ಟಿಸಿಯಿಂದ (KSRTC) ಮೃತ ಇಬ್ಬರು ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂ. ಹಾಗೂ ಗಂಭೀರವಾಗಿ ಗಾಯಗೊಂಡ ಗಾಯಾಳುಗಳಿಗೆ 3 ಲಕ್ಷ ರೂ. ಪರಿಹಾರ ಕೊಡಿಸಲಾಗುವುದು. ಚಿಕಿತ್ಸೆಗೆ ಇಲ್ಲಿ ವ್ಯವಸ್ಥೆ ಇಲ್ಲದಿದ್ದರೆ ಬೇರೆಕಡೆ ಸ್ಥಳಾಂತರಕ್ಕೆ ಸೂಚನೆ ನೀಡಿದ್ದಾರೆ. ಇಂತಹ ಘಟನೆ ಮರುಕಳಿದಂತೆ ಎಚ್ಚರಿಕೆ ನೀಡಲು ಸೂಚಿಸಿದ್ದಾರೆ.
ಮಾನ್ವಿ ಶಾಸಕ ಹಂಪಯ್ಯ ನಾಯಕ್, ಎಂಎಲ್‌ಸಿ ಶಶೀಲ್ ನಮೋಶಿ ರಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಪರಸ್ಥಿತಿ ಪರಿಶೀಲನೆ ಮಾಡಿ, ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕೂಡಲೇ ಅಗತ್ಯ ಪರಿಹಾರ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.
ಬಾಗಲಕೋಟೆ: ಶಾಲಾ ಬಸ್ ಹಾಗೂ ಟ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ನಾಲ್ವರು ವಿದ್ಯಾರ್ಥಿಗಳು ದುರ್ಮರಣಕ್ಕೀಡಾಗಿರುವ ಘಟನೆ ಬಾಗಲಕೋಟೆಯ (Bagalkot) ಜಿಲ್ಲೆ ಜಮಖಂಡಿ ತಾಲ್ಲೂಕಿನ ಅಲಗೂರು ಗ್ರಾಮದಲ್ಲಿ ನಡೆದಿದೆ.
ಮೃತರು ವರ್ಧಮಾನ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಾಗಿದ್ದು, ಇಬ್ಬರು ಪಿಯುಸಿ, ಮತ್ತಿಬ್ಬರು 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ಪ್ರಾಥಮಿಕ ಮೂಲಗಳು ತಿಳಿಸಿವೆ.
ಭಾನುವಾರ ಸ್ನೇಹಿತರೊಟ್ಟಿಗೆ ಕಾರ್ಯಕ್ರಮ ಮುಗಿಸಿಕೊಂಡು ಕವಟಗಿ ಗ್ರಾಮದ ಕಡೆಗೆ ಸ್ಕೂಲ್‌ಬಸ್ ಹೊರಟಿತ್ತು. ರಾತ್ರಿ 12 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಸದ್ಯ ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಅಪಘಾತದ ಭಯನಕ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ. ಖಾಲಿ ರಸ್ತೆಯಲ್ಲಿ ಅತಿ ವೇಗವಾಗಿ ಲಾಲ್‌ಬಾಗ್ ರಸ್ತೆ ಮೂಲಕ ಜಯ ನಗರದ ಕಡೆ ಹೋಗುತ್ತಿದ್ದ ಕಾರ್‌ನ ಟಯರ್ ಇದ್ದಕ್ಕಿದ್ದಂತೆ ಬ್ಲಾಸ್ಟ್ ಆಗಿದೆ. ಬ್ಲಾಸ್ಟ್ ಆದ ಕ್ಷಣದಲ್ಲೇ ಯಮ ಸ್ವರೂಪಿಯಂತೆ ಕಾರು ನುಗ್ಗಿದ್ದು, ಕೂದಲೆಳೆ ಅಂತರಲ್ಲಿ ವೃದ್ಧ ಪಾರಾಗಿದ್ದಾರೆ. ಘಟನೆಯಲ್ಲಿ ಕಾಂಪೌಂಡ್ ನೆಲಕ್ಕುರುಳಿದ್ದು, ಆಟೋ ಹಾಗೂ ಕಾರು ಜಖಂಗೊಂಡಿದೆ. ಘಟನೆ ಸಂಬಂಧ ವಿವಿಪುರಂ ಸಂಚಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಇದನ್ನೂ ಓದಿ: ಹೆಚ್‍ಡಿಕೆ ಸಹವಾಸ ಮಾಡಿದವರು ಉದ್ಧಾರ ಆದ ಇತಿಹಾಸವಿಲ್ಲ: ವೀರಪ್ಪ ಮೊಯ್ಲಿ
ಪಾಟ್ನಾ: ಪುಟ್ಟ ಮಕ್ಕಳಿದ್ದ ಶಾಲಾ ವಾಹನವನ್ನು ಕಿಡಿಗೇಡಿಗಳ ಗುಂಪೊಂದು ಏಕಾಏಕಿ ನಿಲ್ಲಿಸಿ, ಗನ್ ಝಳಪಿಸಿ ವೀಡಿಯೋ ಮಾಡಿದ ಪ್ರಸಂಗವೊಂದು ಬಿಹಾರದಲ್ಲಿ (Bihar) ನಡೆದಿದೆ.
ಸದ್ಯ ಇದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಹರಿದಾಡುತ್ತಿದೆ. ಬಿಹಾರದ ಮುಜಾಫರ್ ಪುರ್ ಜಿಲ್ಲೆಯಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಶಾಲಾ ವಾಹನವನ್ನು ಬೈಕ್ ಸವಾರರ ಗುಂಪು ತಡೆದಿದೆ. ಬಳಿಕ ಆ ವಾಹನದ ಮುಂದೆ ಗನ್ ಝಳಪಿಸಿ ವೀಡಿಯೋ ಮಾಡಿಕೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನೆಯ ವೀಡಿಯೋಗಳನ್ನು ಗುರುವಾರ ಸಾಮಾಜಿಕ ಮಾಧ್ಯಮದಲ್ಲಿ ಅಪ್‍ಲೋಡ್ ಮಾಡಲಾಗಿದ್ದು, ಬಳಿಕ ಘಟನೆ ಬೆಳಕಿಗೆ ಬಂದಿದೆ. ವಿಷಯ ತಿಳಿದು ಮುಜಾಫರ್ ಪುರ್ ಪೊಲೀಸರು ತನಿಖೆ ಆರಂಭಿಸಿದ್ದಾರೆ. ವೀಡಿಯೋಗಳು ನಿಜವೆಂದು ಕಂಡುಬಂದರೆ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಡಿಎಸ್ಪಿ ಅಭಿಷೇಕ್ ಆನಂದ್ ತಿಳಿಸಿದ್ದಾರೆ. ಇದನ್ನೂ ಓದಿ: ಆತ್ಮಹತ್ಯೆಗೆ ಶರಣಾದ ಮಗಳ ಬಗ್ಗೆ ಭಾವುಕ ಪತ್ರ ಬರೆದ ನಟ ವಿಜಯ್
ಜಿಲ್ಲೆಯ ಮನಿಯಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೊದಲ ವೀಡಿಯೊದಲ್ಲಿ, ಬೈಕ್ ಸವಾರರು ಅಪ್ರಾಪ್ತ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಶಾಲಾ ವಾಹನವನ್ನು ನಿಲ್ಲಿಸಿ ಅವರ ಮುಂದೆ ಬಂದೂಕುಗಳನ್ನು ಬೀಸುತ್ತಿರುವುದು ಕಂಡುಬಂದಿದೆ. ಇನ್ನೊಂದು ವೀಡಿಯೋದಲ್ಲಿ ಬೈಕ್ ಸವಾರರು ನಿರ್ಜನ ಸ್ಥಳದಲ್ಲಿ ಪಾರ್ಟಿ ಮಾಡುತ್ತಿದ್ದು, ಅಲ್ಲಿಯೂ ಆಯುಧಗಳನ್ನು ಝಳಪಿಸುತ್ತಿರುವುದು ಕಂಡುಬಂದಿದೆ.
ನವದೆಹಲಿ: ಗಾಜಿಯಾಬಾದ್ (Ghaziabad) ಬಳಿಯ ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯಲ್ಲಿ (Delhi-Meerut Expressway) ಮಂಗಳವಾರ ಭೀಕರ ರಸ್ತೆ ಅಪಘಾತ (Bus Accident) ಸಂಭವಿಸಿ ಆರು ಮಂದಿ ಸಾವನ್ನಪ್ಪಿದ್ದಾರೆ. ಶಾಲಾ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.
ಖಾಲಿ ಇದ್ದ ಬಸ್ ವಿರುದ್ಧ ದಿಕ್ಕಿನಲ್ಲಿ ಚಲಿಸುತ್ತಿತ್ತು, ಇದೇ ಮಾರ್ಗದಲ್ಲಿ ವೇಗವಾಗಿ ಬಂದ ಕಾರ್ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಆರು ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಇದನ್ನೂ ಓದಿ: 6 ಮಂದಿ ಪ್ರಯಾಣಿಕರಿದ್ದ ಹೆಲಿಕಾಪ್ಟರ್ ನೇಪಾಳದಲ್ಲಿ ನಾಪತ್ತೆ
ಅಪಘಾತದ ಕುರಿತು ಪ್ರತಿಕ್ರಿಯಿಸಿದ ಎಡಿಸಿಪಿ ಆರ್‌ಕೆ ಕುಶ್ವಾಹ, ಆರು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ದೆಹಲಿಯ ಗಾಜಿಪುರದಿಂದ ಸಿಎನ್‌ಜಿ ಪಡೆದು ಬಸ್ ಚಾಲಕ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ, ಟಿಯುವಿ ಮೀರತ್‌ನಿಂದ ಗುರುಗ್ರಾಮ್‌ಗೆ ತೆರಳುತ್ತಿತ್ತು.