Tag: school bus

  • ಚಾಲಕ, ಸಿಬ್ಬಂದಿ ನಿರ್ಲಕ್ಷ್ಯ – ಶಾಲಾ ಬಸ್‌ನಿಂದ ಬಿದ್ದು 5ರ ಕಂದಮ್ಮ ಸಾವು

    ಚಾಲಕ, ಸಿಬ್ಬಂದಿ ನಿರ್ಲಕ್ಷ್ಯ – ಶಾಲಾ ಬಸ್‌ನಿಂದ ಬಿದ್ದು 5ರ ಕಂದಮ್ಮ ಸಾವು

    ರಾಮನಗರ: ಚಾಲಕ ಮತ್ತು ಸಿಬ್ಬಂದಿಯ ನಿರ್ಲಕ್ಷ್ಯದಿಂದಾಗಿ ಶಾಲಾ ಬಸ್‌ನಿಂದ (School Bus) ಕೆಳಗೆ ಬಿದ್ದು 5 ವರ್ಷದ ಬಾಲಕಿ (Girl) ಸಾವನ್ನಪ್ಪಿರುವ ದಾರುಣ ಘಟನೆ ಜಿಲ್ಲೆಯ ಕನಕಪುರ ತಾಲೂಕಿನ ಹಾರೋಹಳ್ಳಿ ಬಳಿಯ ಪಿಚ್ಚನಕೆರೆಯಲ್ಲಿ ಸೋಮವಾರ ಸಂಜೆ ನಡೆದಿದೆ.

    ತಾಲೂಕಿನ ಸಿದ್ದೇಗೌಡಹಳ್ಳಿ ಗ್ರಾಮದ ನಿವಾಸಿ ಸ್ವಾಮಿ ಅವರ ಪುತ್ರಿ ರಕ್ಷಾ (5) ಸಾವನ್ನಪ್ಪಿರುವ ಬಾಲಕಿ. ರಾಮನಗರ (Ramanagara) ತಾಲೂಕಿನ ಬಿಡದಿ ಬಳಿಯ ಶ್ರೀ ಸಾಯಿ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಬಾಲಕಿ ಯುಕೆಜಿ ತರಗತಿಯಲ್ಲಿ ಓದುತ್ತಿದ್ದಳು. ಸೋಮವಾರ ಸಂಜೆ ಬಾಲಕಿ ಎಂದಿನಂತೆ ಶಾಲೆ ಮುಗಿಸಿ ಬಸ್‌ನಲ್ಲಿ ಬರುತ್ತಿದ್ದಳು. ಶಾಲಾ ಬಸ್‌ನ ಬಾಗಿಲು ಹಾಕಿರದ ಹಿನ್ನೆಲೆಯಲ್ಲಿ ತಿರುವಿನಲ್ಲಿ ಆಕೆ ಬಸ್‌ನಿಂದ ಕೆಳಗೆ ಬಿದ್ದಿದ್ದಾಳೆ.

    ಬಸ್‌ನಿಂದ ಬಾಲಕಿ ಹೊರ ಬಿದ್ದ ಪರಿಣಾಮ ಬಸ್‌ನ ಹಿಂದಿನ ಚಕ್ರ ಆಕೆಯ ತಲೆ ಮೇಲೆ ಹರಿದಿದೆ. ಇದರಿಂದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: ಹನುಮಜಯಂತಿ, ಶೋಭಾಯಾತ್ರೆ ಹಿನ್ನೆಲೆ ಹಾಸನದಲ್ಲಿ ಮದ್ಯ ನಿಷೇಧ, ಬಿಗಿ ಪೊಲೀಸ್ ಭದ್ರತೆ

    ದುರ್ಘಟನೆಗೆ (Accident) ಶಾಲಾ ಬಸ್ ಸಿಬ್ಬಂದಿಯ ಅಜಾಗರೂಕತೆಯೇ ಕಾರಣ ಎಂದು ಸ್ಥಳಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೃತ ಬಾಲಕಿಯ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆಗೆ ಸಂಬಂಧಿಸಿದಂತೆ ಕನಕಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಪತ್ನಿ ವಿರುದ್ಧ ಸುಳ್ಳು ಕೇಸ್‌ – ಸ್ಯಾಂಟ್ರೋ ರವಿಯ ಷಡ್ಯಂತ್ರಕ್ಕೆ ಇನ್‌ಸ್ಪೆಕ್ಟರ್‌ ಸಾಥ್‌

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪಿಕ್ನಿಕ್ ಮುಗಿಸಿ ಬರ್ತಿದ್ದ ಬಸ್ ಪಲ್ಟಿ – ಇಬ್ಬರು ಶಾಲಾ ವಿದ್ಯಾರ್ಥಿಗಳ ದುರ್ಮರಣ

    ಪಿಕ್ನಿಕ್ ಮುಗಿಸಿ ಬರ್ತಿದ್ದ ಬಸ್ ಪಲ್ಟಿ – ಇಬ್ಬರು ಶಾಲಾ ವಿದ್ಯಾರ್ಥಿಗಳ ದುರ್ಮರಣ

    ಮುಂಬೈ: ಪಿಕ್ನಿಕ್ (Picnic) ಮುಗಿಸಿ ಹಿಂದಿರುಗುತ್ತಿದ್ದ ಶಾಲಾ ಬಸ್ ಪಲ್ಟಿಯಾಗಿ (School Bus Accident) ಇಬ್ಬರು ವಿದ್ಯಾರ್ಥಿಗಳು ದುರ್ಮರಣಕ್ಕೀಡಾಗಿದ್ದು, ಹಲವರು ಗಾಯಗೊಂಡಿರುವ ಘಟನೆ ಮುಂಬೈ (Mumbai) ಬಳಿ ಇಂದು ಬೆಳಗ್ಗಿನ ಜಾವ ನಡೆದಿದೆ.

    ಕೋಚಿಂಗ್ ತರಗತಿ ವಿದ್ಯಾರ್ಥಿಗಳು (Coaching Class) ಪಿಕ್ನಿಕ್ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ರಾಯಗಢ ಜಿಲ್ಲೆಯ ಖೋಪೋಲಿ ಎಂಬಲ್ಲಿ ದುರಂತ ಸಂಭವಿಸಿದೆ. ಇದನ್ನೂ ಓದಿ: ಮುಂದುವರಿದ ಮಾಂಡಸ್ ಅಬ್ಬರ: ಇನ್ನೂ 3 ದಿನ ಮಳೆ, ಚಳಿ – ರಾಜ್ಯದ 15 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

    ಮುಂಬೈನ ಚೆಂಬೂರ್‌ನಲ್ಲಿರುವ ಕೋಚಿಂಗ್ ಕೇಂದ್ರದ 10ನೇ ತರಗತಿಯ 48 ವಿದ್ಯಾರ್ಥಿಗಳು (Students) ಮತ್ತು ಇಬ್ಬರು ಶಿಕ್ಷಕರು ಪ್ರಯಾಣಿಸುತ್ತಿದ್ದ ಬಸ್ ಲೋನಾವಾಲಾದಿಂದ ಹಿಂತಿರುಗುತ್ತಿತ್ತು. ಮುಂಬೈ-ಪುಣೆ ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ (Mumbai Pune ExpressWay) ಬೆಳಗಿನ ಜಾವ 4 ಗಂಟೆ ಸುಮಾರಿಗೆ ಬೆಟ್ಟದಿಂದ ಇಳಿಯುತ್ತಿದ್ದ ವೇಳೆ ಬಸ್ ಪಲ್ಟಿಯಾಗಿದೆ. ಇದನ್ನೂ ಓದಿ: ಗೋಕಾಕ್ ತಹಶೀಲ್ದಾರ್ ಮನೆಯಲ್ಲಿ ಕಳ್ಳತನ – ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ಎಗರಿಸಿ ಪರಾರಿ

    ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಇತರ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಲೋನಾವಾಲಾ, ಖೋಪೋಲಿ ಮತ್ತು ಇತರ ಹತ್ತಿರದ ಪ್ರದೇಶಗಳಲ್ಲಿನ ವಿವಿಧ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಖಾಸಗಿ ಸ್ಕೂಲ್ ಬಸ್‍ಗೆ ಸರ್ಕಾರಿ ಶಾಲಾ ವಿದ್ಯಾರ್ಥಿ ಬಲಿ- ಅಜ್ಜಿ, ಕುಟುಂಬಸ್ಥರು ಕಣ್ಣೀರು

    ಖಾಸಗಿ ಸ್ಕೂಲ್ ಬಸ್‍ಗೆ ಸರ್ಕಾರಿ ಶಾಲಾ ವಿದ್ಯಾರ್ಥಿ ಬಲಿ- ಅಜ್ಜಿ, ಕುಟುಂಬಸ್ಥರು ಕಣ್ಣೀರು

    ಬೆಂಗಳೂರು: ಖಾಸಗಿ ಶಾಲೆಯ ಬಸ್ಸಿಗೆ ಸರ್ಕಾರಿ ವಿದ್ಯಾರ್ಥಿ ಬಲಿಯಾದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

    ಬುಧವಾರ ಸ್ಕೂಲ್‍ (School) ಗೆ ಬರಬೇಕಾದರೆ ಈ ಘಟನೆ ನಡೆದಿದೆ. ಅವನ ಮುಖವನ್ನು ಸತ್ತ ಮೇಲೆನೇ ನೋಡಿರೋದು. ದೊಡ್ಡ ಮಗ ಇವನೇ ಇವನು ಇನ್ನ ನಮ್ಮ ಮನೆಗೆ ವಾಪಸ್ ಬರ್ತಾನಾ ಅಂತಾ ಅಜ್ಜಿ ಪರಿಮಳಾ ಕಣ್ಣೀರು ಹಾಕಿದ್ದಾರೆ.

    ಸ್ಕೂಲ್ ಒಳಗಡೆ ಬಂದು ಕುಸಿದು ಬಿದ್ನಾ ಅಥವಾ ರಸ್ತೆಯಲ್ಲಿ ಬಿದ್ನಾ ಏನೂ ಹೇಳ್ತಿಲ್ಲ. ಯಾರು ಕೂಡ ಸರಿಯಾಗಿ ಹೇಳ್ತಿಲ್ಲ. ಚಿಕ್ಕ ವಯಸ್ಸು ಹೋಗೋ ವಯಸ್ಸಾ ಸರ್ ಅವನು. ಮೂರು ಆಸ್ಪತ್ರೆಗೆ ಕರೆದುಕೊಂಡು ಹೋದರೂ ಉಳಿಯಲಿಲ್ಲ ಅಂತಾ ಪರಿಮಳಾ ಅಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ: ವಿಧಾನಸಭೆ ಉಪ ಸಭಾಪತಿ ಆನಂದ ಮಾಮನಿ ಆರೋಗ್ಯದಲ್ಲಿ ಏರುಪೇರು – ಆಸ್ಪತ್ರೆಗೆ ದಾಖಲು

    ಈ ಸಂಬಂಧ ಸರ್ಕಾರಿ ಶಾಲೆಯ ಪ್ರಭಾರಿ ಪ್ರಿನ್ಸಿಪಾಲ್ (Principal) ಸುಜಾತ ಪ್ರತಿಕ್ರಿಯಿಸಿ, ಸ್ಕೂಲ್ ಒಳಗಡೆ ಬಂದು ಕುಸಿದು ಬಿದ್ದರು ಅಂತಾ ಅನ್ನೋದು ಸುಳ್ಳು. ಘಟನೆ ಆದ ಮೇಲೆ ಸ್ಕೂಲ್ ಒಳಗಡೆ ಯಾರೋ ಕರೆದುಕೊಂಡು ಬಂದರು. ಕೂಡಲೇ ನಮ್ಮ ಟೀಚರ್ ಬೈಕ್ ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋದರು. ಮೂರು ಆಸ್ಪತ್ರೆ ಸುತ್ತಾಡಿದರೂ ಉಳಿಯಲಿಲ್ಲ. ರಾಯನ್ ಸ್ಕೂಲ್ ಬಸ್ ಅಂತಾ ಹೇಳ್ತಾ ಇದ್ದಾರೆ. ನಾವು ಅಲ್ಲಿಯ ಮ್ಯಾನೇಜ್ಮೆಂಟ್‍ಗೆ ಕಾಲ್ ಮಾಡಿ ಮಾತಾಡಿದ್ದೇವೆ. ಆದರೆ ಅವರು ನಮ್ಮದು ಅಲ್ಲ ಅಂತಾ ಹೇಳಿದ್ರು. ರಸ್ತೆಯಲ್ಲಿ ದಾಟಬೇಕಾದ್ರೆ ಘಟನೆ ಆಗಿದೆ ಎಂದು ತಿಳಿಸಿದ್ದಾರೆ.

    ಸದ್ಯ ಮುನೇನಕೊಳಲು ಮೃತ ವಿದ್ಯಾರ್ಥಿ ನಿವಾಸದ ಬಳಿ ಆಕ್ರಂದನ ಮುಗಿಲು ಮುಟ್ಟಿದೆ. ಮೃತ ದೇಹದ ಮುಂದೆ ತಾಯಿ ಕಣ್ಣೀರು ಹಾಕುತ್ತಿದ್ದಾರೆ. ತಾಯಿಗೆ ಇಬ್ಬರು ಗಂಡು ಮಕ್ಕಳು ಇದ್ದು, ಮೃತ ವಿದ್ಯಾರ್ಥಿ ದೊಡ್ಡವನು ಇನ್ನೊಬ್ಬ ಮಗ ಅವರ ಗಂಡನ ಹತ್ತಿರ ಇರುವುದಾಗಿ ತಿಳಿದು ಬಂದಿದೆ.

    Live Tv
    [brid partner=56869869 player=32851 video=960834 autoplay=true]

  • ಸ್ಕೂಲ್ ಬಸ್ಸಿನೊಳಗೆ ಉಸಿರುಗಟ್ಟಿ ಬಾಲಕಿ ಸಾವು ಪ್ರಕರಣ- ಶಾಲೆ ಮುಚ್ಚಲು ಆದೇಶ

    ಸ್ಕೂಲ್ ಬಸ್ಸಿನೊಳಗೆ ಉಸಿರುಗಟ್ಟಿ ಬಾಲಕಿ ಸಾವು ಪ್ರಕರಣ- ಶಾಲೆ ಮುಚ್ಚಲು ಆದೇಶ

    ದೋಹಾ: ಉಸಿರುಗಟ್ಟಿ ಶಾಲಾ ವಾಹನ (School Bus) ದಲ್ಲಿಯೇ 4 ವರ್ಷದ ಬಾಲಕಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಖಾಸಗಿ ನರ್ಸರಿ ಶಾಲೆಯನ್ನು ಮುಚ್ಚಲು ಆದೇಶ ನೀಡಲಾಗಿದೆ.

    ಮಿನ್ಸಾ ಮರಿಯಮ್ ಜಾಕೋಬ್ (4) ಮೃತ ದುರ್ದೈವಿ ಬಾಲಕಿ. ಈಕೆ ಕೇರಳ (Kerala) ಮೂಲದ ಅಭಿಲಾಷ್ ಜಾಕೋಬ್ ಮತ್ತು ಸೌಮ್ಯಾ ದಂಪತಿಯ ಎರಡನೇ ಮಗಳು. ಸೆಪ್ಟೆಂಬರ್ 11 ರಂದು ಮಿನ್ಸಾ ಹುಟ್ಟುಹಬ್ಬ (Birthday) ವಾಗಿದ್ದು, ಈ ದಿನವೇ ಆಕೆ ಕತಾರ್ ನ ಶಾಲಾ ಬಸ್‍ನಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಈ ಸಂಬಂಧ ಇದೀಗ ಕತಾರ್ ನ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಸಚಿವಾಲಯವು ಈ ಆದೇಶ ಹೊರಡಿಸಿದೆ. ಪ್ರಾಥಮಿಕ ತನಿಖೆಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

    ಏನಿದು ಘಟನೆ?: ವಕ್ರಾದ ಶಿಶುವಿಹಾರದಲ್ಲಿ ಓದುತ್ತಿದ್ದ ಮಿನ್ಸಾ, ಅದೇ ಶಾಲೆಯ ಬಸ್‍ನಲ್ಲಿಯೇ ಬಂಧಿಯಾಗಿ ಉಸಿರುಗಟ್ಟಿ ಮೃತಪಟ್ಟಿದ್ದಾಳೆ. ಈಕೆ ಭಾನುವಾರ ಬೆಳಗ್ಗೆ ತನ್ನ ಶಾಲಾ ಬಸ್‍ನಲ್ಲಿ ಶಾಲೆಗೆ ಹೋಗಿದ್ದಳು. ಹಿಂದೆ ಕುಳಿತಿದ್ದ ಆಕೆ ದಾರಿ ಮಧ್ಯೆಯೇ ನಿದ್ದೆ ಮಾಡಿದ್ದಾಳೆ. ಆದರೆ ಆಕೆ ನಿದ್ದೆ ಮಾಡಿದ್ದನ್ನು ಬಸ್ (Bus) ಸಿಬ್ಬಂದಿ ಯಾರೂ ಗಮನಿಸಿರಲಿಲ್ಲ. ಹೀಗಾಗಿ ಮಕ್ಕಳನ್ನು ಶಾಲೆಯಲ್ಲಿ ಇಳಿಸಿದ ಸಿಬ್ಬಂದಿ, ಶಾಲಾ ವಾಹನವನ್ನು ಬಿಟ್ಟು ಹೋಗಿದ್ದಾರೆ. ಇದನ್ನೂ ಓದಿ: ಮೂರುವರೆ ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಬಸ್‌ ಚಾಲಕನ ಮನೆ ಧ್ವಂಸ

    ಮಧ್ಯಾಹ್ನ ತರಗತಿಗಳು ಮುಗಿದ ನಂತರ ಡ್ರೈವರ್ ಮತ್ತು ಕಂಡಕ್ಟರ್ ಮಕ್ಕಳನ್ನು ಅವರ ಮನೆಗೆ ಬಿಡಲು ಹಿಂದಿರುಗಿದಾಗ, ಬಾಲಕಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿದ್ದಳು. ಕೂಡಲೇ ಆಕೆಯನ್ನು ವಕ್ರಾ ಆಸ್ಪತ್ರೆ (Hospital) ಗೆ ಕರೆದೊಯ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಶಾಲೆಯಲ್ಲಿ ಬಸ್ ಬಿಟ್ಟು ಡ್ರೈವರ್ ಹಾಗೂ ನಿರ್ವಾಹಕ ‌ ಡೋರ್‌, ವಿಂಡೋಸ್ ಕ್ಲೋಸ್ ಮಾಡಿದ್ದಾರೆ. ಇದರಿಂದ ನಿದ್ದೆಗೆ ಜಾರಿದ್ದ ಬಾಲಕಿಗೆ ಉಸಿರಾಡಲು ಸಾಧ್ಯವಾಗಿಲ್ಲ.

    weather

    ಕತಾರ್ ನಾದ್ಯಂತ ಗರಿಷ್ಠ ತಾಪಮಾನವು 36 ಡಿಗ್ರಿ ಸೆಲ್ಸಿಯಸ್ ಮತ್ತು 43 ಡಿಗ್ರಿ ಸೆಲ್ಸಿಯಸ್ ನಡುವೆ ಇತ್ತು ಎಂದು ಕತಾರ್ ಟ್ರಿಬ್ಯೂನ್ ವರದಿ ಮಾಡಿದೆ. ಇಂತಹ ವಾತಾವರಣದಲ್ಲಿ ಬಿಸಿಯಲ್ಲಿ ಬಾಲಕಿ 4 ಗಂಟೆಗಳ ಕಾಲ ಉಸಿರಾಡಲಾಗದೇ ಒದ್ದಾಡಿದ್ದಾಳೆ ಎನ್ನಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಕೇರಳ ಮೂಲದ ಬಾಲಕಿ ದೋಹಾದ ಶಾಲಾ ಬಸ್ಸಿನೊಳಗೆ ಉಸಿರುಗಟ್ಟಿ ಸಾವು

    ಕೇರಳ ಮೂಲದ ಬಾಲಕಿ ದೋಹಾದ ಶಾಲಾ ಬಸ್ಸಿನೊಳಗೆ ಉಸಿರುಗಟ್ಟಿ ಸಾವು

    ದೋಹಾ: ಕೇರಳ(Kerala) ಮೂಲದ 4 ವರ್ಷದ ಬಾಲಕಿ ಶಾಲಾ ಬಸ್‌(School Bus)ನೊಳಗೆ ವಿಪರೀತ ಬಿಸಿಲಿನಿಂದಾಗಿ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಕತಾರ್‌ನ(Qatar) ದೋಹಾ(Doha)ದಲ್ಲಿ ನಡೆದಿದೆ.

    ಮಿನ್ಸಾ ಮರಿಯಮ್ ಜಾಕೋಬ್ ಎಂದು ಗುರುತಿಸಲಾದ ಬಾಲಕಿ ಸ್ಪ್ರಿಂಗ್‌ಫೀಲ್ಡ್ ಶಾಲಾ ಬಸ್‌ನೊಳಗೆ ಮಲಗಿದ್ದಳು ಎನ್ನಲಾಗಿದೆ. ಬಸ್‌ನ ಸಿಬ್ಬಂದಿ ಬಾಲಕಿ ಅದರಲ್ಲಿ ಮಲಗಿದ್ದುದನ್ನು ಗಮನಿಸದೇ ಪಾರ್ಕಿಗ್ ಪ್ರದೇಶದಲ್ಲಿ ಬಿಟ್ಟು, ಲಾಕ್ ಮಾಡಿ ಅಲ್ಲಿಂದ ಹೊರಟು ಹೋಗಿದ್ದ. ಬಳಿಕ ಮಧ್ಯಾಹ್ನ ಬಸ್‌ನ ಬಾಗಿಲು ತೆರೆದಾಗ ಆಕೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದುದನ್ನು ನೋಡಿದ್ದಾನೆ. ಇದನ್ನೂ ಓದಿ: ದಾಳಿ ನಡೆಸುವ ನಾಯಿಗಳನ್ನು ಕೊಲ್ಲಲು ಸುಪ್ರೀಂ ಕೋರ್ಟ್ ಅನುಮತಿಗೆ ಕೇರಳ ಸರ್ಕಾರ ನಿರ್ಧಾರ

    ಕೂಡಲೇ ಆಕೆಯನ್ನು ಅಲ್ ವಕ್ರಾ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ. ಪ್ರಾಥಮಿಕ ವರದಿಯ ಪ್ರಕಾರ, ವಿಪರೀತ ಬಿಸಿಲಿನಿಂದಾಗಿ ಬಾಲಕಿ ಉಸಿರುಗಟ್ಟಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

    ಈ ಬಗ್ಗೆ ದೋಹಾದ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಸಚಿವಾಲಯ ಸಂತಾಪ ಸೂಚಿಸಿದೆ. ಘಟನೆಯ ಬಗ್ಗೆ ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ವಾಹನದಲ್ಲಿ ಕುಳಿತಿದ್ದ ಪೊಲೀಸರ ಮುಂದೆಯೇ ಕಳ್ಳತನ- ಖದೀಮನಿಗೆ ಜನ ಗೂಸಾ ಕೊಟ್ರೂ ಡೋಂಟ್‍ಕೇರ್!

    Live Tv
    [brid partner=56869869 player=32851 video=960834 autoplay=true]

  • ಸಂಚಾರಿ ನಿಯಮ ಉಲ್ಲಂಘನೆ – ಖಾಸಗಿ ಶಾಲಾ ವಾಹನಗಳಿಗೆ 45 ಸಾವಿರ ರೂ. ದಂಡ

    ಸಂಚಾರಿ ನಿಯಮ ಉಲ್ಲಂಘನೆ – ಖಾಸಗಿ ಶಾಲಾ ವಾಹನಗಳಿಗೆ 45 ಸಾವಿರ ರೂ. ದಂಡ

    ಬೆಳಗಾವಿ: ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಂಚಾರ ನಿಯಮ ಉಲ್ಲಂಘಿಸಿ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಖಾಸಗಿ ಶಿಕ್ಷಣ ಸಂಸ್ಥೆಗಳ 85 ವಾಹನಗಳ ವಿರುದ್ಧ ಜಿಲ್ಲಾ ಪೊಲೀಸರು 129 ಕೇಸ್ ದಾಖಲಿಸಿದ್ದಾರೆ.

    ಬೆಳಗಾವಿ ಜಿಲ್ಲೆಯ ನಿಪ್ಪಾಣಿ, ಮೂಡಲಗಿ ತಾಲೂಕು ಸೇರಿದ್ದಂತೆ ಇತರ ಕಡೆ ಕಾರ್ಯಾಚರಣೆ ನಡೆಸಿದ ಜಿಲ್ಲಾ ಪೊಲೀಸರು ಖಾಸಗಿ ವಾಹನಗಳಲ್ಲಿ ಹೆಚ್ಚುವರಿ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ 85 ವಾಹನಗಳ ವಿರುದ್ಧ 129 ಕೇಸ್ ದಾಖಲಿಸಿ 45,800 ರೂ.ದಂಡ ವಿಧಿಸಿದ್ದಾರೆ. ಇದನ್ನೂ ಓದಿ: ದಲಿತ ಬಾಲಕಿಯರು ಬಡಿಸಿದ ಊಟವನ್ನು ಬಿಸಾಡಿ ಎಂದ ಅಡುಗೆಯವ – ಬಂಧನ

    ಶಾಲಾ ವಾಹನಗಳ ಚಾಲಕರು ಸಂಚಾರಿ ನಿಯಮ ಉಲ್ಲಂಘಿಸಿ ಮಕ್ಕಳನ್ನು ಸೀಟ್‍ಗಿಂತ ಹೆಚ್ಚಾಗಿ ಕರೆದುಕೊಂಡು ಹೋದರೆ ಅಂತಹ ವಾಹನಗಳನ್ನು ಮುಂದಿನ ದಿನಗಳಲ್ಲಿ ಜಪ್ತಿ ಮಾಡಲಾಗುವುದು ಎಂದು ಎಸ್‍ಪಿ ಡಾ.ಸಂಜೀವ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಮಂಗಳೂರಿನ ಜನರ ಪ್ರೀತಿ, ಅಕ್ಕರೆಗೆ ವಿನಮ್ರನಾಗಿರುವೆ – ಕನ್ನಡದಲ್ಲೇ ಟ್ವೀಟ್ ಮಾಡಿದ ಮೋದಿ

    Live Tv
    [brid partner=56869869 player=32851 video=960834 autoplay=true]

  • ಚರಂಡಿಗೆ ಬಿದ್ದ 20ಕ್ಕೂ ಅಧಿಕ ಮಕ್ಕಳಿದ್ದ ಶಾಲಾ ಬಸ್

    ಚರಂಡಿಗೆ ಬಿದ್ದ 20ಕ್ಕೂ ಅಧಿಕ ಮಕ್ಕಳಿದ್ದ ಶಾಲಾ ಬಸ್

    ಭೋಪಾಲ್: ಭಾರೀ ಮಳೆಯಿಂದಾಗಿ 20ಕ್ಕೂ ಅಧಿಕ ಮಕ್ಕಳಿದ್ದ ಶಾಲಾ ಬಸ್‍ವೊಂದು ಚರಂಡಿಗೆ ಬಿದ್ದ ಘಟನೆ ಮಧ್ಯಪ್ರದೇಶದ ಶಾಜಾಪುರ ಜಿಲ್ಲೆಯಲ್ಲಿ ನಡೆದಿದೆ.

    ಗ್ರಾಮಸ್ಥರ ಗುಂಪು ಟ್ರ್ಯಾಕ್ಟರ್ ಮತ್ತು ಹಗ್ಗವನ್ನು ಬಳಸಿ ಚರಂಡಿಯಲ್ಲಿ ಸಿಲುಕಿದ್ದ ಬಸ್‌ನ್ನು ಹೊರತೆಗೆದರು. ಘಟನೆ ಸಂಬಂಧಿಸಿ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: ಕಾಂಗ್ರೆಸ್‍ನಲ್ಲಿ ಒಕ್ಕಲಿಗ ಸಮರ – ಜಮೀರ್ ವಿರುದ್ಧ ಆಪ್ತ ಚೆಲುವರಾಯಸ್ವಾಮಿ ಸಂಧಾನ, ಸಿದ್ದು ಸೈಲೆಂಟ್

    ಈ ವೀಡಿಯೋದಲ್ಲಿ ಬಸ್ ಚರಂಡಿಯಲ್ಲಿ ಸಿಲುಕಿದೆ. ಈ ಸಂದರ್ಭದಲ್ಲಿ ನೀರೆಲ್ಲವೂ ಬಸ್‍ನೊಳಗೆ ಬರುತ್ತಿದ್ದಂತೆ ಸಹಾಯಕ್ಕಾಗಿ ಬಸ್‍ನಲ್ಲಿದ್ದ ಮಕ್ಕಳು ಕೂಗಿದ್ದಾರೆ. ಈ ಹಿನ್ನೆಲೆಯಲ್ಲಿ ಅಲ್ಲೇ ಇದ್ದ ಗ್ರಾಮಸ್ಥರು ಬಂದು ಬಸ್‍ನಲ್ಲಿದ್ದ ಮಕ್ಕಳನ್ನು ಕಾಪಾಡಿದ್ದಾರೆ. ಇದನ್ನೂ ಓದಿ: ಗಬ್ಬೆದ್ದು ನಾರುತ್ತಿದೆ ಬೆಂಗಳೂರಿನ ಚೆಂದದ ಹಲಸೂರು ಕೆರೆ..!

    ಮಧ್ಯಪ್ರದೇಶದ ಈ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ (IMD) ಮಧ್ಯಪ್ರದೇಶದ ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಅತಿ ಹೆಚ್ಚು ಮಳೆಯಾಗುವ ಎಚ್ಚರಿಕೆಯನ್ನು ಆರೆಂಜ್ ಅಲರ್ಟ್ ನೀಡಿದೆ.

    Live Tv
    [brid partner=56869869 player=32851 video=960834 autoplay=true]

  • ಕಣಿವೆಗೆ ಬಿದ್ದ ಶಾಲಾ ಬಸ್ – ಮಕ್ಕಳು ಸೇರಿ 16 ಮಂದಿ ದುರ್ಮರಣ

    ಕಣಿವೆಗೆ ಬಿದ್ದ ಶಾಲಾ ಬಸ್ – ಮಕ್ಕಳು ಸೇರಿ 16 ಮಂದಿ ದುರ್ಮರಣ

    ಶಿಮ್ಲಾ: ಶಾಲಾ ಬಸ್ ಕಣಿವೆಗೆ ಉರುಳಿ ಮಕ್ಕಳು ಸೇರಿದಂತೆ 16 ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಕುಲು ಜಿಲ್ಲೆಯಲ್ಲಿ ನಡೆದಿದೆ.

    ಸೇಮವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಬಸ್ ಕುಲುವಿನಿಂದ ಸೈನ್ಜ್ ಕಡೆಗೆ ಸಾಗುತ್ತಿತ್ತು. ನಿಯೋಲಿ-ಶಂಶೇರ್ ಕಣಿವೆ ರಸ್ತೆಯಲ್ಲಿ ಸಾಗುತ್ತಿದ್ದ ವೇಳೆ ಬಸ್ ಕಣಿವೆಗೆ ಉರುಳಿದೆ. ಮೃತಪಟ್ಟವರಲ್ಲಿ ಹೆಚ್ಚಿನವರು ವಿದ್ಯಾರ್ಥಿಗಳಿದ್ದು, ಗಂಭೀರ ಗಾಯಗಳಾಗಿರುವವರೂ ಇರುವ ಕಾರಣ ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ. ಇದನ್ನೂ ಓದಿ: ಕಾಳಿ ಕೈಲಿ ಸಿಗರೇಟು, ಮತ್ತೊಂದು ಕೈಯಲ್ಲಿ ಎಲ್ಜಿಬಿಟಿಕ್ಯೂ ಧ್ವಜ : ಭುಗಿಲೆದ್ದ ಆಕ್ರೋಶ

    ಅಪಘಾತದ ಮಾಹಿತಿ ಸಿಗುತ್ತಲೇ ಕುಲು ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ.

    ಈ ನಡುವೆ ಅಹಿತಕರ ಘಟನೆಗೆ ಪ್ರತಿಕ್ರಿಯಿಸಿದ ಹಿಮಾಚಲ ಮುಖ್ಯಮಂತ್ರಿ ಜೈರಾಮ್ ಠಾಕೂರ್, ಕುಲುವಿನಲ್ಲಿ ಖಾಸಗಿ ಶಾಲಾ ಬಸ್ ಕಣಿವೆಗೆ ಬಿದ್ದಿರುವ ಸುದ್ದಿ ತಿಳಿದು ಬಂದಿದೆ. ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿದೆ. ಅಗಲಿದ ಆತ್ಮಗಳಿಗೆ ಶಾಂತಿ ಹಾಗೂ ದುಃಖತಪ್ತ ಕುಟುಂಬಗಳಿಗೆ ಶಕ್ತಿ ನೀಡುವಂತೆ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಇಂಡೀಗೋದ ನೂರಾರು ಸಿಬ್ಬಂದಿಗೆ ಒಂದೇ ದಿನ ಅನಾರೋಗ್ಯ – ತನಿಖೆಗೆ ಡಿಜಿಸಿಎ ಸೂಚನೆ

    Live Tv
    [brid partner=56869869 player=32851 video=960834 autoplay=true]

  • ಇನ್ಮುಂದೆ ಸರ್ಕಾರಿ ಶಾಲೆಗಳಿಗೂ ಸ್ಕೂಲ್ ಬಸ್ ವ್ಯವಸ್ಥೆ

    ಇನ್ಮುಂದೆ ಸರ್ಕಾರಿ ಶಾಲೆಗಳಿಗೂ ಸ್ಕೂಲ್ ಬಸ್ ವ್ಯವಸ್ಥೆ

    ಬೆಂಗಳೂರು: ಖಾಸಗಿ ಸಾಲೆಗಳಂತೆ ಇನ್ನು ಮುಂದೆ ಸರ್ಕಾರಿ ಶಾಲೆಗಳಿಗೂ ಸ್ಕೂಲ್ ಬಸ್ ವ್ಯವಸ್ಥೆಗೆ ಸರ್ಕಾರ ಅನುಮತಿ ನೀಡಿದೆ.

    ಮಕ್ಕಳಿಗೆ ಶಾಲಾ ವಾಹನ ಖರೀದಿಗೆ ಈಗಾಗಲೇ ಅನುಮತಿ ನೀಡಿರುವ ಸರ್ಕಾರ ಖಾಸಗಿ ಶಾಲೆಗಳಂತೆ ಮಕ್ಕಳಿಗೆ ಪಿಕ್ ಅಪ್ & ಡ್ರಾಪ್ ಕೊಡಲಾಗುತ್ತದೆ. ಬಸ್ ಖರೀದಿಗೆ ಶಾಸಕರ ಪ್ರದೇಶಾಭಿವೃದ್ಧಿ ಅನುದಾನ ಬಳಕೆ ಮಾಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಸರ್ಕಾರಿ ಶಾಲಾ ಮಕ್ಕಳಿಗೆ ಸರ್ಕಾರ ನೀಡುತ್ತಿದ್ದ ಶೂ & ಸಾಕ್ಸ್ ಈ ವರ್ಷ ಸಿಗೋದು ಡೌಟ್

    ಚಾಲಕರ ವೇತನ, ಡೀಸೆಲ್ ಖರೀದಿಗೆ ಈ ಹಣ ಬಳಕೆಗೆ ಸರ್ಕಾರ ಕೂಡ ಒಪ್ಪಿಗೆ ಸೂಚಿಸಿದೆ. ರಾಜ್ಯದಲ್ಲಿ ಒಟ್ಟು 48,285 ಶಾಲೆಗಳು ಹಾಗೂ 6,312 ಅನುದಾನಿತ ಶಾಲೆಗಳಿದ್ದು ಸುಮಾರು 65 ಲಕ್ಷ ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ.

    Live Tv

  • 100 ಅಡಿ ಆಳದ ಹಳ್ಳಕ್ಕೆ ಬಿದ್ದ ಸ್ಕೂಲ್ ಬಸ್ – ಚಾಲಕನಿಗೆ ಗಂಭೀರ ಗಾಯ

    100 ಅಡಿ ಆಳದ ಹಳ್ಳಕ್ಕೆ ಬಿದ್ದ ಸ್ಕೂಲ್ ಬಸ್ – ಚಾಲಕನಿಗೆ ಗಂಭೀರ ಗಾಯ

    ಬೆಂಗಳೂರು: ಬೆಳ್ಳಂಬೆಳಗ್ಗೆ ಶಾಲಾ ಬಸ್ ಒಂದು ಅಪಘಾತಕ್ಕೀಡಾಗಿ, ಬಸ್ ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ಗುರುವಾರ ಬೆಳಗ್ಗೆ ಬೊಮ್ಮನಹಳ್ಳಿ ಸಮೀಪದ ಕೂಡ್ಲು ಬಳಿ ನಡೆದಿದೆ.

    ಹೆಚ್‌ಎಸ್‌ಆರ್ ಲೇಔಟ್‌ನ ಫ್ರೀಡಂ ಇಂಟರ್‌ನ್ಯಾಷನಲ್ ಸ್ಕೂಲ್‌ಗೆ ಸೇರಿದ ಬಸ್, ಬೆಳಗ್ಗೆ ವಿದ್ಯಾರ್ಥಿಗಳನ್ನು ಕರೆತರಲು ಹೋಗಿತ್ತು. ಈ ವೇಳೆ ಕೂಡ್ಲು ಬಳಿ ಇದ್ದ ಬಂಡೆ ಹಳ್ಳಕ್ಕೆ ಶಾಲಾ ಬಸ್ ಬಿದ್ದಿದೆ. ಇದನ್ನೂ ಓದಿ: ಯೋಧರು ಪ್ರಯಾಣಿಸುತ್ತಿದ್ದ ವಾಹನ ಸ್ಫೋಟ: 3 ಸೈನಿಕರ ಸ್ಥಿತಿ ಗಂಭೀರ

    ಅದೃಷ್ಟವಶಾತ್ ಘಟನೆ ವೇಳೆ ಬಸ್‌ನಲ್ಲಿ ಮಕ್ಕಳು ಇರಲಿಲ್ಲ. ಆದರೆ ಬಸ್ ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಘಟನೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದನ್ನೂ ಓದಿ: ಹಾಸನ ಕಟ್ಟಿನಕೆರೆ ಮಾರುಕಟ್ಟೆ ಬಂದ್ – 500ಕ್ಕೂ ಹೆಚ್ಚು ಪೊಲೀಸರಿಂದ ಬಂದೋಬಸ್ತ್

    ಕೂಡ್ಲು ಬಳಿಯ ರಸ್ತೆ ಪಕ್ಕ ಇರುವ ಬಂಡೆ ಹಳ್ಳ 100 ಅಡಿಗೂ ಹೆಚ್ಚು ಆಳವಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಹಳ್ಳವನ್ನು ಮುಚ್ಚಿಸಲು ಸ್ಥಳೀಯರು ಸಾಕಷ್ಟು ಬಾರಿ ಮನವಿ ಮಾಡಿಕೊಂಡಿದ್ದರು. ಆದರೂ ಯಾವುದೇ ಪ್ರಯೋಜನವಾಗಿರದ ಕಾರಣ ಇದೀಗ ಅಪಘಾತದಿಂದಾಗಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.