Tag: School Childrens

  • ಶಾಲಾ ಕಟ್ಟಡ ಕುಸಿದು 4 ಮಕ್ಕಳ ದಾರುಣ ಸಾವು – ಅವಶೇಷಗಳ ಅಡಿ ಸಿಲುಕಿದ 60 ಮಕ್ಕಳು

    ಶಾಲಾ ಕಟ್ಟಡ ಕುಸಿದು 4 ಮಕ್ಕಳ ದಾರುಣ ಸಾವು – ಅವಶೇಷಗಳ ಅಡಿ ಸಿಲುಕಿದ 60 ಮಕ್ಕಳು

    ಜೈಪುರ: ಪ್ರಾಥಮಿಕ ಶಾಲಾ ಕಟ್ಟದ ಮೇಲ್ಛಾವಣಿ ಕುಸಿದು (School Building Collapses) ಕನಿಷ್ಠ ನಾಲ್ವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಝಲಾವರ್‌ನಲ್ಲಿ (Rajasthan’s Jhalawar) ನಡೆದಿದೆ.

    ಇಂದು (ಜು.25) ಬೆಳಗ್ಗೆ ಝಲಾವರ್‌ನಲ್ಲಿರುವ ಪಿಪ್ಲೋಡಿ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿದಿದ್ದು, ಘಟನೆಯಲ್ಲಿ ಕನಿಷ್ಠ ನಾಲ್ವರು ಮಕ್ಕಳು ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಅಲ್ಲದೇ 60ಕ್ಕೂ ಹೆಚ್ಚು ಮಕ್ಕಳು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದು, ರಕ್ಷಣಾ ತಂಡಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಸ್ಥಳೀಯರು ಸಹ ಅಧಿಕಾರಿಗಳೊಂದಿಗೆ ಕೈಜೋಡಿಸಿದ್ದಾರೆ. ಇದನ್ನೂ ಓದಿ: ರಸ್ತೆ ಕುಸಿದು ಉಕ್ಕಿ ಹರಿದ ನೀರು – ಮಾನವ ಸೇತುವೆ ನಿರ್ಮಿಸಿ 35 ಶಾಲಾ ಮಕ್ಕಳನ್ನು ರಸ್ತೆ ದಾಟಿಸಿದ ಗ್ರಾಮಸ್ಥರು

    ಮೃತಪಟ್ಟ ಮಕ್ಕಳ ಶವಗಳನ್ನ ಹೊರತೆಗೆಯಲಾಗಿದೆ. ಗಾಯಗೊಂಡವರನ್ನ ಆಸ್ಪತ್ರೆಗೆ (Hospital) ಸಾಗಿಸಲಾಗಿದ್ದು, ಅವಶೇಷಗಳ ಅಡಿ ಸಿಲುಕಿರುವ ಮಕ್ಕಳ ರಕ್ಷಣಾ ಕಾರ್ಯ ನಡೆಯುತ್ತಿದೆ. ಕ್ರೇನ್‌ಗಳ ಮೂಲಕ ಕಟ್ಟಡದ ಅವಶೇಷಗಳನ್ನು ತೆರವುಗೊಳಿಸಲಾಗುತ್ತಿದೆ. ಇದನ್ನೂ ಓದಿ: ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ 6 ತಿಂಗಳು ವಿಸ್ತರಣೆ – ಸದನದಲ್ಲಿ ಅನುಮೋದನೆ

    ಪ್ರಾಥಮಿಕ ಮಾಹಿತಿ ಪ್ರಕಾರ, ಇಂದು ಬೆಳಗ್ಗೆ 8:30ಕ್ಕೆ ಶಾಲೆ ಶುರುವಾದ ವೇಳೆ ದುರಂತ ಸಂಭವಿಸಿದೆ. ಈ ಮೊದಲೇ ಶಿಥಿಲಾವಸ್ಥೆಯಲ್ಲಿದ್ದ ಶಾಲಾ ಕಟ್ಟಡ ಭಾರೀ ಮಳೆಯ ಕಾರಣ ಮೇಲ್ಛಾವಣಿ ಕುಸಿದಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಚಾ.ನಗರದಲ್ಲಿ 5 ಹುಲಿಗಳ ಸಾವು ಕೇಸ್‌ – ಪ್ರತಿಕ್ರಿಯೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಸೂಚನೆ

    ಸಿಎಂ ಸಂತಾಪ
    ಇನ್ನೂ ದುರಂತದಲ್ಲಿ ಮೃತಪಟ್ಟ ಮಕ್ಕಳಿಗೆ ರಾಜಸ್ಥಾನ ಸಿಎಂ ಭಜನ್‌ಲಾಲ್‌ ಶರ್ಮಾ (Bhajanlal Sharma) ಎಕ್ಸ್‌ನಲ್ಲಿ ಸಂತಾಪ ಸೂಚಿಸಿದ್ದಾರೆ. ಈ ಘಟನೆ ನಿಜಕ್ಕೂ ಹೃದಯವಿದ್ರಾವಕವಾದದ್ದು ಅಂತ ಕಂಬನಿ ಮಿಡಿದಿದ್ದಾರೆ. ಅಲ್ಲದೇ ಗಾಯಗೊಂಡ ಮಕ್ಕಳಿಗೆ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

  • 6 ವರ್ಷಗಳ ಹಿಂದೆಯೇ ಎಫ್‌ಸಿ ಮುಗಿದಿದ್ದ ಶಾಲಾ ಬಸ್‌ ಪಲ್ಟಿ – 6 ಮಕ್ಕಳ ದಾರುಣ ಸಾವು!

    6 ವರ್ಷಗಳ ಹಿಂದೆಯೇ ಎಫ್‌ಸಿ ಮುಗಿದಿದ್ದ ಶಾಲಾ ಬಸ್‌ ಪಲ್ಟಿ – 6 ಮಕ್ಕಳ ದಾರುಣ ಸಾವು!

    – 20ಕ್ಕೂ ಹೆಚ್ಚು ಮಂದಿಗೆ ಗಾಯ

    ಚಂಡೀಗಢ: ಶಾಲಾ ಬಸ್‌ ಪಲ್ಟಿಯಾಗಿ 6 ಮಕ್ಕಳು (School Childrens) ದಾರುಣ ಸಾವಿಗೀಡಾಗಿದ್ದು, 20ಕ್ಕೂ ಮಂದಿ ಗಾಯಗೊಂಡಿರುವ ಘಟನೆ ಹರಿಯಾಣದ (Haryana) ನರ್ನಾಲ್‌ನಲ್ಲಿ ಇಂದು ಬೆಳಗ್ಗೆ (ಏ.11) ನಡೆದಿದೆ.

    ಜಿ.ಎಲ್ ಪಬ್ಲಿಕ್ ಸ್ಕೂಲ್‌ಗೆ ಸೇರಿದ ಬಸ್ ಕನಿನಾದ ಉನ್ಹಾನಿ ಗ್ರಾಮದ ಬಳಿ ಶಾಲಾ ಬಸ್‌ ಪಲ್ಟಿಯಾಗಿದೆ (School bus Overturns). ಈದ್‌ ಉಲ್‌ ಫ್ರಿತ್‌ (ರಂಜಾನ್‌) ಹೊರತಾಗಿಯೂ ಶಾಲೆಯು ರಜೆ ಘೋಷಿಸಿರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಇಂದು ಎಲ್ಲೆಲ್ಲಿ ಮದ್ಯ ಸಿಗಲ್ಲ?- ದೇಶದಲ್ಲಿ ಎಣ್ಣೆ ಸಿಗದ ದಿನಗಳ ಸಂಪೂರ್ಣ ಪಟ್ಟಿ ಇಲ್ಲಿದೆ

    ಪ್ರಾಥಮಿಕ ತನಿಖೆಯ ನಂತರ ಚಾಲಕನ (Bus Driver) ನಿಯಂತ್ರಣ ತಪ್ಪಿ ಬಸ್ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿರುವುದಾಗಿ ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಜಿಲ್ಲಾ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ. ಅಲ್ಲದೇ ಚಾಲಕ ಮದ್ಯ ಸೇವಿಸಿ ವಾಹನ ಚಲಾಯಿಸಿದ್ದಾನೆ ಎಂದು ಶಂಕಿಸಿದ್ದಾರೆ.

    ಸದ್ಯ ಗಾಯಗೊಂಡ ವಿದ್ಯಾರ್ಥಿಗಳನ್ನು ಸ್ಥಳೀಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ಅಧಿಕಾರಕ್ಕೆ ಬಂದರೆ ಮೊಬೈಲ್‌ ಡೇಟಾಗೆ 500 ರೂ. ಫ್ರೀ – ಅಖಿಲೇಶ್‌ ಯಾದವ್‌ ಘೋಷಣೆ

    6 ವರ್ಷಗಳ ಹಿಂದೆಯೇ ಅಂದ್ರೆ 2018 ರಲ್ಲಿ ಬಸ್‌ನ ಫಿಟ್‌ನೆಸ್ ಪ್ರಮಾಣಪತ್ರದ (Vehicle Fitness Certificate) ಅವಧಿ ಮುಗಿದಿದೆ ಎಂದು ಅಧಿಕೃತ ದಾಖಲೆಗಳು ತೋರಿಸುತ್ತವೆ.

  • ಬೆಳಿಗ್ಗೆ 7 ಗಂಟೆಗೆ ಮಕ್ಕಳು ಶಾಲೆಗೆ ಹೋಗ್ಬೋದಾದ್ರೆ, ನ್ಯಾಯಾಧೀಶರೇಕೆ 9 ಗಂಟೆಗೆ ಬರಬಾರದು – ಯು.ಯು.ಲಲಿತ್ ಪ್ರಶ್ನೆ

    ಬೆಳಿಗ್ಗೆ 7 ಗಂಟೆಗೆ ಮಕ್ಕಳು ಶಾಲೆಗೆ ಹೋಗ್ಬೋದಾದ್ರೆ, ನ್ಯಾಯಾಧೀಶರೇಕೆ 9 ಗಂಟೆಗೆ ಬರಬಾರದು – ಯು.ಯು.ಲಲಿತ್ ಪ್ರಶ್ನೆ

    ನವದೆಹಲಿ: ಮಕ್ಕಳು ಬೆಳಿಗ್ಗೆ 7 ಗಂಟೆಗೆ ಶಾಲೆಗೆ ಹೋಗಬಹುದು ಅನ್ನೋದಾದ್ರೆ ನ್ಯಾಯಾಧೀಶರು, ವಕೀಲರೇಕೆ ತಮ್ಮ ದಿನವನ್ನು 9 ಗಂಟೆಗೆ ಪ್ರಾರಂಭಿಸಬಾರದು ಎಂದು ನ್ಯಾಯಮೂರ್ತಿ ಯು.ಯು.ಲಲಿತ್ ಹೇಳಿದ್ದಾರೆ.

    ಮುಂದಿನ ಆಗಸ್ಟ್ ತಿಂಗಳಿನಲ್ಲಿ ಮುಖ್ಯ ನ್ಯಾಯಮೂರ್ತಿಯಾಗಲಿರುವ ಲಲಿತ್ ಅವರಿದ್ದ ತ್ರಿಸದಸ್ಯ ಪೀಠವು ಇಂದು ನಿಗದಿತ ಸಮಯಕ್ಕಿಂತ ಒಂದು ಗಂಟೆ ಮುಂಚಿತವಾಗಿಯೇ ಕುಳಿತು ವಿಚಾರಣೆ ಆರಂಭಿಸಿತು. ಸಾಮಾನ್ಯವಾಗಿ ನ್ಯಾಯಾಲಯವು ಬೆಳಿಗ್ಗೆ 10:30ಕ್ಕೆ ತನ್ನ ವಿಚಾರಣೆ ಪ್ರಾರಂಭಿಸುತ್ತದೆ. ಆದರೆ ನ್ಯಾ. ಯು.ಯು.ಲಲಿತ್ ಇಂದು ಬೆಳಿಗ್ಗೆ 9:30ಕ್ಕೆ ಪ್ರಕರಣದ ವಿಚಾರಣೆ ಪ್ರಾರಂಭಿಸಿದರು. ಇದನ್ನೂ ಓದಿ: ಲಿಪ್‍ಸ್ಟಿಕ್, ಕಾಸ್ಟ್ಲಿ ಮೊಬೈಲ್ ತಗೋತಿರಾ, ಫೀಸ್ ಕಟ್ಟೋಕೆ ಆಗಲ್ವಾ?- ವಿವಿ ವಿರುದ್ಧ ಸಿಡಿದೆದ್ದ ವಿದ್ಯಾರ್ಥಿನಿಯರು

    SUPREME COURT

    ವಿಚಾರಣೆ ಆರಂಭಿಸಿದ ಬಗ್ಗೆ ಮಾಜಿ ಅಟಾರ್ನಿ ಜನರಲ್ ಮುಕುಲ್ ರೋಹಟಗಿ ಹರ್ಷ ವ್ಯಕ್ತಪಡಿಸಿದರು. ಈ ವೇಳೆ ಯು.ಯು.ಲಲಿತ್ `ಮಕ್ಕಳು ಬೆಳಿಗ್ಗೆ 7 ಗಂಟೆಯಿಂದಲೇ ಶಾಲೆಗೆ ಹೋಗಬಹುದಾದರೆ ನ್ಯಾಯಾಧೀಶರು ಹಾಗೂ ವಕೀಲರು ತಮ್ಮ ದಿನವನ್ನು ಏಕೆ 9 ಗಂಟೆಗೆ ಪ್ರಾರಂಭಿಸಬಾರದು? ಎಂದು ಪ್ರಶ್ನಿಸಿದರು.

    ನ್ಯಾಯಮೂರ್ತಿ ಲಲಿತ್, ನ್ಯಾ. ಎಸ್.ರವೀಂದ್ರ ಭಟ್, ನ್ಯಾ. ಸುಧಾಂಶು ಧುಲಿಯಾ ಅವರಿದ್ದ ತ್ರಿಸದಸ್ಯ ಪೀಠದಲ್ಲಿ 2ನೇ ದರ್ಜೆಯ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ರೋಹಟಗಿ, 9.30 ಈ ಸಮಯ ನ್ಯಾಯಾಲಯದ ಚಟುವಟಿಕೆಗಳನ್ನು ಪ್ರಾರಂಭಿಸಲು ಸೂಕ್ತ ಸಮಯ ಎಂದು ಹೇಳಿದರು. ಇದನ್ನೂ ಓದಿ: ಅಲ್ಟ್‌ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್‌ಗೆ ಮತ್ತೊಂದು ಪ್ರಕರಣದಲ್ಲಿ ಜಾಮೀನು

    ಇದಕ್ಕೆ ಉತ್ತರಿಸಿದ ನ್ಯಾಯಮೂರ್ತಿ ಲಲಿತ್ ಅವರು ನಾವು 9 ಗಂಟೆಗೆ ಕೋರ್ಟ್ನಲ್ಲಿ ಕುಳಿತುಕೊಳ್ಳಬೇಕು ಎಂದು ಶಾಲಾ ಮಕ್ಕಳನ್ನು ಉದಾಹರಣೆ ನೀಡಿದರು. ಇದನ್ನೂ ಓದಿ: ಟೀ ಶರ್ಟ್ ವಿಚಾರಕ್ಕೆ ಲವರ್ಸ್‌ ಕಿತ್ತಾಟ – ಮೆಟ್ರೋದಲ್ಲೇ ಬಾಯ್ ಫ್ರೆಂಡ್ ಕೆನ್ನೆಗೆ ಬಾರಿಸಿದ್ಲು

    ಹೇಗಿರಬೇಕು ವಿಚಾರಣೆ?: ವಾರದಲ್ಲಿ 5 ದಿನಗಳವರೆಗೆ, ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರು ಬೆಳಿಗ್ಗೆ 10.30ಕ್ಕೆ ಪ್ರಕರಣಗಳ ವಿಚಾರಣೆಯನ್ನು ಪ್ರಾರಂಭಿಸುತ್ತಾರೆ. ಸಂಜೆ 4ರ ವರೆಗೆ ಕುಳಿತುಕೊಳ್ಳುತ್ತಾರೆ. ಮಧ್ಯಾಹ್ನ 1 ರಿಂದ 2ರ ವರೆಗೆ ಒಂದು ಗಂಟೆಯ ಊಟದ ವಿರಾಮ ತೆಗೆದುಕೊಳ್ಳುತ್ತಾರೆ. ಆದ್ದರಿಂದ ಇನ್ನು ಮುಂದೆ ಸುದೀರ್ಘ ವಿಚಾರಣೆ ಅಗತ್ಯವಿಲ್ಲದಿದ್ದಾಗ ಸುಪ್ರೀಂ ಕೋರ್ಟ್ ಬೆಳಿಗ್ಗೆ 9 ಗಂಟೆಗೇ ಪ್ರಾರಂಭವಾಗಬೇಕು. 11.30ಕ್ಕೆ ಅರ್ಧಗಂಟೆ ವಿರಾಮಕ್ಕಾಗಿ ಎದ್ದೇಳಬೇಕು. ತೀರ್ಪುಗಾರರು ಮತ್ತೆ ವಿಚಾರಣೆ ಪ್ರಾರಂಭಿಸಿ ಮಧ್ಯಾಹ್ನ 2 ಗಂಟೆಗೆ ಮುಕ್ತಾಗೊಳಿಸಬೇಕು. ಇದರಿಂದ ಸಂಜೆ ವೇಳೆ ಹೆಚ್ಚಿನ ಕೆಲಸ ಮಾಡಲು ಸಮಯ ಸಿಗುತ್ತದೆ ಎಂದು ಲಲಿತ್ ಸಲಹೆ ನೀಡಿದರು.

    ಯು.ಯು.ಲಲಿತ್ ಮುಂದಿನ ಆಗಸ್ಟ್ 27ರಂದು ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಆಗಲಿದ್ದಾರೆ. ಹಾಲಿ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರಿಂದ ಅಧಿಕಾರ ವಹಿಸಿಕೊಳ್ಳಲಿದ್ದು, ನವೆಂಬರ್ 8ರ ಮಾತ್ರವೇ ಅಧಿಕಾರದಲ್ಲಿ ಇರುಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಯಡಿಯೂರಪ್ಪ ಸರ್ಕಾರದ ಯೋಜನೆ ಕೈ ಬಿಟ್ಟ ಎಚ್‌ಡಿಕೆ..!

    ಯಡಿಯೂರಪ್ಪ ಸರ್ಕಾರದ ಯೋಜನೆ ಕೈ ಬಿಟ್ಟ ಎಚ್‌ಡಿಕೆ..!

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸರ್ಕಾರದ ಯೋಜನೆಯನ್ನು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕೈ ಬಿಟ್ಟಿದ್ದಾರೆ.

    ಹೌದು. ಇನ್ಮುಂದೆ ಗ್ರಾಮೀಣ ಭಾಗದ ಮಕ್ಕಳು ಶಾಲೆಗೆ ನಡೆದುಕೊಂಡೇ ಹೋಗ್ಬೇಕು. ಯಾಕಂದ್ರೆ ಶಾಲಾ ಮಕ್ಕಳಿಗೆ ಇನ್ಮುಂದೆ ಸರ್ಕಾರದಿಂದ ಸೈಕಲ್ ಸಿಗಲ್ಲ. ಈ ಮೂಲಕ ಎಚ್ ಡಿಕೆ ಅವರು ಬಿಎಸ್‍ವೈ ಸರ್ಕಾರದ ಒಂದು ಯೋಜನೆಗೆ ಇತಿಶ್ರೀ ಹಾಡಿದ್ದಾರೆ.

    ಸೈಕಲ್ ವಿತರಣೆಯಲ್ಲಿ ಅಕ್ರಮ ನಡೆದಿದೆ. ಹೀಗಾಗಿ ಮಕ್ಕಳಿಗೆ ಸೈಕಲ್ ವಿತರಣೆ ಮಾಡುವುದನ್ನು ನಿಲ್ಲಿಸಿದ್ದೇವೆ. ಅಲ್ಲದೇ ಅಕ್ರಮದ ಕುರಿತು ತನಿಖೆಗೆ ಆದೇಶಿಸಿದ್ದೇನೆ ಅಂತ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಆದ್ರೆ ಇದೀಗ ಯಡಿಯೂರಪ್ಪ ಅವರ ವಿರುದ್ಧ ಕುಮಾರಸ್ವಾಮಿ ಸರ್ಕಾರ ಈ ಮೂಲಕ ದ್ವೇಷ ಸಾಧಿಸುತ್ತಿದ್ದಾರೆ ಅಂತ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.

    ಗ್ರಾಮೀಣ ಭಾಗದಲ್ಲಿ ಕಳೆದ 2, 3 ವರ್ಷಗಳಿಂದ ಕಳಪೆ ಗುಣಮಟ್ಟದ ಸೈಕಲ್ ವಿತರಣೆಯಾಗುತ್ತಿದೆ ಅನ್ನೋ ಆರೋಪ ಪ್ರಬಲವಾಗಿ ಕೇಳಿಬಂದಿತ್ತು. ಈ ಕುರಿತಾಗಿ ಮಕ್ಕಳು, ಪೋಷಕರು ಹಾಗೂ ಶಾಲಾ ಮುಖ್ಯ ಶಿಕ್ಷಕರು ಶಿಕ್ಷಣ ಇಲಾಖೆಗೆ ದೂರು ಕೂಡ ನೀಡಿದ್ದರು.

    ಗುತ್ತಿಗೆದಾರರು ಹಾಗೂ ಪೂರೈಕೆದಾರರು ಕಳಪೆ ಮಟ್ಟದ ಸೈಕಲ್ ತಂದುಕೊಡುತ್ತಾರೆ. ಸೈಕಲ್ ತಂದ ಬಳಿಕ ಅದನ್ನು ಮತ್ತೆ ರಿಪೇರಿ ಮಾಡಿಸಬೇಕಿತ್ತು. ಹೀಗಾಗಿ ಈ ಕುರಿತು ವ್ಯಾಪಕವಾಗಿ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ 2 ಸಮಿತಿಗಳನ್ನು ಮಾಡಿ ತನಿಖೆಗೆ ಆದೇಶ ಮಾಡಿದೆ. ಸಮಿತಿಯಲ್ಲಿ ಕೂಡ ಕಳಪೆ ಮಟ್ಟದ ಸೈಕಲ್ ವಿತರಣೆಯಾಗುತ್ತಿರುವ ಆರೋಪ ಸಾಬೀತಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ರಾಜ್ಯ ಸರ್ಕಾರ ಸೈಕಲ್ ವಿತರಣೆಯನ್ನು ಸ್ಥಗಿತಗೊಳಿಸಿ, ತನಿಖೆಗೆ ಆದೇಶಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರಕ್ಷಣೆಗಾಗಿ ಶಾಲೆಗೆ ಬಿಲ್ಲು ಬಾಣವನ್ನು ಒಯ್ಯುವ ಮಕ್ಕಳು

    ರಕ್ಷಣೆಗಾಗಿ ಶಾಲೆಗೆ ಬಿಲ್ಲು ಬಾಣವನ್ನು ಒಯ್ಯುವ ಮಕ್ಕಳು

    ರಾಂಚಿ: ಜಾರ್ಖಂಡ್‍ನ ಕೈಗಾರಿಕಾ ಪಟ್ಟಣ ಜಮ್‍ಶೆಡಪುರ ಬಳಿಯ ಪೋಚ್ಪಾಣಿ ಎಂಬ ಹಳ್ಳಿಯೊಂದರಲ್ಲಿ ಶಾಲೆಗೆ ಮಕ್ಕಳು ಮಾವೋವಾದಿಗಳಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಬಿಲ್ಲು ಬಾಣವನ್ನು ತೆಗೆದುಕೊಂದು ಹೋಗುತ್ತಾರೆ.

    ಪೋಚ್ಪಾಣಿಯು ಜಾರ್ಖಂಡ್ ಹಾಗೂ ಪಶ್ಚಿಮ ಬಂಗಾಳದ ಗಡಿಭಾಗದಲ್ಲಿದೆ. ಇದೊಂದು ಬುಡಕಟ್ಟು ಜನಾಂಗದವರು ವಾಸಿಸುವ ಸ್ಥಳವಾಗಿದ್ದು, ಇಲ್ಲಿ ಮಾವೋವಾದಿಗಳ ಕಾಟ ತುಸು ಹೆಚ್ಚಾಗಿಯೇ ಇರುತ್ತದೆ. ಈ ಭಾಗದಿಂದ ಶಾಲೆಗೆ ಹೋಗಬೇಕು ಎಂದರೆ ದಟ್ಟ ಅರಣ್ಯವನ್ನು ದಾಟಿ ಹೋಗಬೇಕು ಅಲ್ಲಿ ಮಾವೋವಾದಿಗಳು ಇರುತ್ತಾರೆ. ಅವರ ಭಾಷೆ ನಮಗೆ ಅರ್ಥವಾಗೋಲ್ಲ. ಅವರು ಬಿಲ್ಲು ಬಾಣಕ್ಕೆ ಹೆದರುತ್ತಾರೆ ಎಂದು ಸ್ಥಳೀಯರೊಬ್ಬರು ತಿಳಿಸಿದ್ದಾರೆ.

    ಮಾವೋವಾದಿಗಳು ಯಾವಾಗ ಆಕ್ರಮಣ ಮಾಡುತ್ತಾರೆ ಅಂತಾ ಗೊತ್ತಾಗಲ್ಲ. ಅವರಿಂದ ರಕ್ಷಣೆಗಾಗಿ ಈ ಭಾಗದ ಮಕ್ಕಳು ಶಾಲೆಗೆ ಹೋಗುವಾಗ ತಮ್ಮೊಡನೆ ಬಿಲ್ಲು ಬಾಣವನ್ನು ಕೊಂಡೊಯ್ಯುತ್ತಾರೆ ಎಂದು ಬುಡಕಟ್ಟಿನ ಬಾಲಕನೊಬ್ಬ ಹೇಳುತ್ತಾನೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಕಾರಿನಲ್ಲಿ ಬಂದು ಶಾಲಾ ಮಕ್ಕಳಿಗೆ ಹಣ, ಚಾಕ್ಲೇಟ್ ನೀಡಿ ಹೋಗ್ತಾರೆ ಅಪರಿಚಿತ ಮಹಿಳೆಯರು

    ಕಾರಿನಲ್ಲಿ ಬಂದು ಶಾಲಾ ಮಕ್ಕಳಿಗೆ ಹಣ, ಚಾಕ್ಲೇಟ್ ನೀಡಿ ಹೋಗ್ತಾರೆ ಅಪರಿಚಿತ ಮಹಿಳೆಯರು

    ಬೆಳಗಾವಿ: ಅಪರಿಚಿತ ವಾಹನದಲ್ಲಿ ಮಹಿಳೆಯರು ಬಂದು ಶಾಲಾ ಮಕ್ಕಳಿಗೆ ಹಣ ಹಾಗೂ ಚಾಕ್ಲೇಟ್ ನೀಡಿ ಹೋಗುತ್ತಿರುವ ಘಟನೆ ಬೆಳಗಾವಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ಜಿಲ್ಲೆಯ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣ ಸಮೀಪದ ಚಿಂಚಲಿ ತೋಟದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಈ ಘಟನೆಯಿಂದ ಶಾಲಾ ಮಕ್ಕಳು, ಪಾಲಕರು ಹಾಗೂ ಶಾಲಾ ಸಿಬ್ಬಂದಿಯಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಮಹಾರಾಷ್ಟ್ರ ನೊಂದಣಿಯ ಓಮಿನಿ ವಾಹನದಲ್ಲಿ ಬರುತ್ತಿರುವ ಓರ್ವ ಚಾಲಕ ಹಾಗೂ ಇಬ್ಬರು ಮಹಿಳೆಯರು ಶಾಲಾ ಮಕ್ಕಳಿಗೆ ಚಿಲ್ಲರೆ ಹಣ ಹಾಗೂ ಚಾಕಲೇಟ್ ನೀಡಿ ಹೋಗುತ್ತಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

    ಇವರು ಮಕ್ಕಳ ಕಳ್ಳರಿರಬಹುದು ಎಂಬ ಭಯ ಪಾಲಕರು ಹಾಗೂ ಶಿಕ್ಷಕರಲ್ಲಿ ಮೂಡಿದ್ದು, ಈ ಕುರಿತು ಕುಡಚಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಒಂದೆರಡು ದಿನ ಪೊಲೀಸರು ಬಂದು ಪರಿಶೀಲನೆ ನಡೆಸಿದ ಹೋದ ಮೇಲೆ ಮತ್ತೊಮ್ಮೆ ಈ ವಾಹನ ಹಾಗೂ ಮಹೊಳೆಯರು ಕಂಡಿದ್ದು ಮತ್ತಷ್ಟು ಭಯ ಮೂಡಿಸಿದೆ.

    ಯಾರೇ ಆಮಿಷ ತೋರಿದರೂ ಅವರ ಬಳಿ ಹೋಗದಂತೆ ಮಕ್ಕಳಿಗೆ ಶಾಲಾ ಶಿಕ್ಷಕರು ಹಾಗೂ ಪೊಷಕರು ತಿಳುವಳಿಕೆ ನೀಡಿದ್ದಾರೆ. ರಾಯಬಾಗ ತಾಲೂಕಿನ ತೋಟದ ಎರಡು ಮೂರು ಶಾಲೆಗಳಲ್ಲಿ ಇಂಥ ಘಟನೆಗಳು ಸಂಭವಿಸಿದೆ. ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ ಅನಾಮಧೇಯ ವ್ಯಕ್ತಿಗಳಾರು ಎಂಬುದನ್ನು ಕಂಡು ಹಿಡಿಯಬೇಕಿದೆ.