Tag: School Fee

  • ಯೋಗಿ ಮಾತಿಗೂ ಕಿಮ್ಮತ್ತಿಲ್ಲ – ವಿದ್ಯಾರ್ಥಿನಿಗೆ ಶುಲ್ಕ ವಿನಾಯ್ತಿ ಕೊಡಲು ನಿರಾಕರಿಸಿ‌ದ RSS ಮೂಲದ ಶಿಕ್ಷಣ ಸಂಸ್ಥೆ

    ಯೋಗಿ ಮಾತಿಗೂ ಕಿಮ್ಮತ್ತಿಲ್ಲ – ವಿದ್ಯಾರ್ಥಿನಿಗೆ ಶುಲ್ಕ ವಿನಾಯ್ತಿ ಕೊಡಲು ನಿರಾಕರಿಸಿ‌ದ RSS ಮೂಲದ ಶಿಕ್ಷಣ ಸಂಸ್ಥೆ

    – ಆರ್ಥಿಕ ಸಮಸ್ಯೆಯಿಂದ 18,000 ರೂ. ಶುಲ್ಕ ಬಾಕಿ ಉಳಿಸಿಕೊಂಡಿರುವ ವಿದ್ಯಾರ್ಥಿನಿ

    ಲಕ್ನೋ: ಐಎಎಸ್‌ ಅಧಿಕಾರಿ (IAS Officer) ಆಗಬೇಕೆಂಬ ಕನಸು ಹೊತ್ತ 7ನೇ ತರಗತಿ ಬಾಲಕಿಯೊಬ್ಬಳು ಆರ್ಥಿಕ ಸಹಾಯಕ್ಕಾಗಿ ಮನವಿ ಮಾಡಿದ ವಿಷಯ ಈಗ ಉತ್ತರ ಪ್ರದೇಶದಲ್ಲಿ (Uttar Pradesh) ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಇದೇ ವಿಷಯವನ್ನ ಅಸ್ತ್ರವಾಗಿ ಬಳಸಿಕೊಂಡಿರುವ ಪ್ರತಿ ಪಕ್ಷಗಳು ಸಿಎಂ ಯೋಗಿ ಅವರ ಮಾತಿಗೂ ಕಿಮ್ಮತ್ತಿಲ್ಲದಂತಾಯ್ತಾ ಎಂಬ ಪ್ರಶ್ನೆ ಎತ್ತಿವೆ.

    ವಿದ್ಯಾರ್ಥಿನಿಯ ಸಮಸ್ಯೆ ಏನು?
    ಉತ್ತರ ಪ್ರದೇಶದ 7ನೇ ತರಗತಿ ವಿದ್ಯಾರ್ಥಿನಿ (Student) ಪಂಖುರಿ ತ್ರಿಪಾಠಿ ಅವರ ತಂದೆ ರಾಜೀವ್ ಕುಮಾರ್ ತ್ರಿಪಾಠಿ ಕೆಲ ದಿನಗಳ ಹಿಂದೆ ನಡೆದ ಅಪಘಾತದಲ್ಲಿ ಕಾಲಿಗೆ ಗಂಭೀರ ಪೆಟ್ಟು ಮಾಡಿಕೊಂಡರು. ಇದರಿಂದ ಅವರು ತಮ್ಮ ಕೆಲಸ ಕಳೆದುಕೊಳ್ಳಬೇಕಾಯ್ತು. ಇದು ಕುಟುಂಬದ ಆರ್ಥಿಕತೆಯ ಮೇಲೂ ಪರಿಣಾಮ ಬೀರಿತು. ಕೊನೆಗೆ ಬಾಲಕಿಯ ಶಾಲಾ ಶುಲ್ಕ ಪಾವತಿಸುವುದಕ್ಕೂ ಹಣವಿಲ್ಲದಷ್ಟು ಸಮಸ್ಯೆ ಎದುರಾಯಿತು. ನಂತರ ಬಾಲಕಿಯ ಕುಟುಂಬಸ್ಥರು ಆರ್ಥಿಕ ಸಹಾಯಕ್ಕಾಗಿ ಸಿಎಂ ಯೋಗಿ ಆದಿತ್ಯನಾಥ್‌ (Yogi Adityanath) ಅವರ ಮೊರೆ ಹೋದರು. ಆಗ ಯೋಗಿ ಮಗುವಿನ ಶಿಕ್ಷಣಕ್ಕೆ ಯಾವುದೇ ಅಡೆತಡೆ ಎದುರಾಗುವುದಿಲ್ಲ ಎಂದು ಭರವಸೆ ನೀಡಿ ಕಳುಹಿಸಿದ್ದರು. ಆದ್ರೆ ಬಾಲಕಿ ಶಾಲೆಗೆ ಹೋದಾಗ ನಡೆದಿದ್ದೇ ಬೇರೆ. ಶಾಲಾ ಆಡಳಿತ ಮಂಡಳಿ ಆ ವಿದ್ಯಾರ್ಥಿನಿಯ ಶುಲ್ಕವನ್ನ ಯಾವುದೇ ಕಾರಣಕ್ಕೂ ಮನ್ನಾ ಮಾಡೋದಿಲ್ಲ ಎಂದು ನಿರಾಕರಿಸಿತು. ಇದನ್ನೂ ಓದಿ: ಅಧಿಕೃತ ನಿವಾಸದಿಂದ ತಕ್ಷಣವೇ ಚಂದ್ರಚೂಡ್ ತೆರವಿಗೆ ಕೇಂದ್ರಕ್ಕೆ ಸುಪ್ರೀಂ ಪತ್ರ

    ಬಳಿಕ ಘಟನೆ ರಾಜಕೀಯ ತಿರುವು ಪಡೆದುಕೊಂಡಿತು. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಉತ್ತರ ಪ್ರದೇಶದ ಬಿಜೆಪಿ ಸರ್ಕಾರವನ್ನು ತೀವ್ರವಾಗಿ ಖಂಡಿಸಿದ್ರು. ಅಲ್ಲದೇ ಮಗುವಿನ ಶಿಕ್ಷಣಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ. ಆದ್ರೆ ಬಾಲಕಿ ಕುಟುಂಬ ಮುಖ್ಯಮಂತ್ರಿಗಳು ನಮಗೆ ಸಹಾಯ ಮಾಡುತ್ತಾರೆಂಬ ನಂಬಿಕೆಯಿದೆ ಎಂದು ಹೇಳಿದೆ.  ಇದನ್ನೂ ಓದಿ: ಭಾಷೆ ಹೆಸರಲ್ಲಿ ಜನರನ್ನು ವಿಭಜಿಸಬಾರದು: ಮರಾಠಿ-ಹಿಂದಿ ಸಂಘರ್ಷ ಬಗ್ಗೆ ಕಂಗನಾ ಪ್ರತಿಕ್ರಿಯೆ

    ಪ್ರತಿ ತಿಂಗಳು 1,650 ರೂ. ಶುಲ್ಕ ಪಾವತಿ 
    ಬಾಲಕಿ ಪಂಖುರಿ ತ್ರಿಪಾಠಿ ಗೋರಖ್‌ಪುರದ ಪಕ್ಕಿಬಾಗ್‌ನಲ್ಲಿರುವ ಸರಸ್ವತಿ ಶಿಶು ಮಂದಿರದಲ್ಲಿ 7ನೇ ತರಗತಿ ಓದುತ್ತಿದ್ದಾಳೆ. ಆರ್‌ಎಸ್‌ಎಸ್ ಶಿಕ್ಷಣ ವಿಭಾಗ ವಿದ್ಯಾಭಾರತಿ ಫೌಂಡೇಷನ್‌ ನಡೆಸುತ್ತಿರುವ ಈ ಶಾಲೆಯು 7ನೇ ತರಗತಿ ವಿದ್ಯಾರ್ಥಿಗಳಿಗೆ ಮಾಸಿಕ 1,650 ರೂ. ಶುಲ್ಕ ವಿಧಿಸುತ್ತದೆ. ಪಂಖುರಿ ಸುಮಾರು 18,000 ರೂ. ಬಾಕಿ ಪಾವತಿಸಬೇಕಾಗಿದೆ. ಆದ್ರೆ ತಂದೆ ಕೆಲಸ ಕಳೆದುಕೊಂಡು ಕುಟುಂಬ ಆರ್ಥಿಕ ಸಂಕಷ್ಟಕ್ಕೀಡಾಗಿದ್ದರಿಂದ ಸಹಾಯಕ್ಕಾಗಿ ಸಿಎಂ ಮೊರೆ ಹೋಗಿದ್ದರು. ಇದನ್ನೂ ಓದಿ: ಕ್ಯಾಬ್‌ ಚಾಲಕರನ್ನೇ ಟಾರ್ಗೆಟ್‌ ಮಾಡಿ ಹತ್ಯೆ – 24 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಸರಣಿ ಹಂತಕ ಅರೆಸ್ಟ್

    ನನ್ನಪ್ಪ ಅಲ್ಲೇ ಕುಸಿದುಬಿದ್ದರು; ಬಾಲಕಿ ಕಣ್ಣೀರು
    ಘಟನೆ ಕುರಿತು ಮಾತನಾಡಿದ ಬಾಲಕಿ ಪಂಖುರಿ, ನಾನು ಶುಲ್ಕ ವಿನಾಯ್ತಿ ಮಾಡುವಂತೆ ಸಹಾಯ ಕೇಳಿ ಮುಖ್ಯಮಂತ್ರಿಗಳ ಬಳಿ ಹೋಗಿದ್ದೆ. ಅವರು ನನೆ ಚಾಕೊಲೇಟ್‌ ನೀಡಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದರು. ಆದ್ರೆ ನಾನು ನನ್ನಪ್ಪನೊಂದಿಗೆ ಶಾಲೆಗೆ ಹೋದಾಗ ಅವರು ನಮ್ಮೊಂದಿಗೆ ಕೆಟ್ಟದಾಗಿ ವರ್ತಿಸಿದ್ರು. ಶುಲ್ಕ ಮನ್ನಾ ಮಾಡಲು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ. ನಿಮ್ಮ ತರನೇ ಉಳಿದವರು ಶುಲ್ಕ ವಿನಾಯ್ತಿ ಕೊಡಿ ಅಂದ್ರೆ ಶಾಲೆ ಹೇಗೆ ನಡೆಸೋದು, ಶಿಕ್ಷಕರಿಗೆ ಹಣ ನೀಡಬೇಕಲ್ಲವಾ? ಅಂತೆಲ್ಲ ರೇಗಿದ್ರು. ಅವರ ಮಾತುಗಳನ್ನ ಕೇಳಿ ನನ್ನಪ್ಪ ಅಲ್ಲೇ ಕುಸಿದುಬಿದ್ದರು. ಯಾರೂ ಕೂಡ ಅವರೊಟ್ಟಿಗೆ ಈ ರೀತಿ ಮಾತನಾಡಿರಲಿಲ್ಲ ಎಂದು ಬಾಲಕಿ ಕಣ್ಣೀರಿಟ್ಟಳು.

    ಅಲ್ಲದೇ ನಮಗೆ ಇನ್ನೂ ಮುಖ್ಯಮಂತ್ರಿಗಳ ಮೇಲೆ ನಂಬಿಕೆಯಿದೆ. ಅವರು ನಮಗೆ ಸಹಾಯ ಮಾಡೇ ಮಾಡುತ್ತಾರೆ, ನಾನು ಓದಿ ಐಎಎಸ್‌ ಅಧಿಕಾರಿ ಆಗೇ ಆಗುತ್ತೇನೆ ಎಂದು ಬಾಲಕಿ ಶಪಥ ಮಾಡಿದ್ದಾಳೆ. ಇದನ್ನೂ ಓದಿ: PSI ಪರೀಕ್ಷೆಯಲ್ಲಿ ಫೇಲ್‌, ಆದ್ರೂ 2 ವರ್ಷ ಅಧಿಕಾರಿಯಾಗಿ ಕೆಲಸ ಮಾಡಿದ್ದ ಐನಾತಿ ಮಹಿಳೆ ಅಂದರ್‌

    ಘಟನೆ ಬಳಿಕ ಶಾಲಾ ಆಡಳಿತ ಮಂಡಳಿಗೆ ರಾಜ್ಯ ಸರ್ಕಾರ ಪತ್ರ ಬರೆದಿದೆ. ಆದ್ರೆ ಈವರೆಗೆ ಶಾಲಾ ಮಂಡಳಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ವರದಿಗಳು ತಿಳಿಸಿವೆ.

  • ಶುಲ್ಕ ಕಟ್ಟಿಲ್ಲ ಎಂದು ವಿದ್ಯಾರ್ಥಿಯನ್ನು ಹೊರ ಹಾಕಿದ ಶಾಲೆ- ಪ್ರಧಾನಿಗೆ ಪತ್ರ ಬರೆದ ವಿದ್ಯಾರ್ಥಿ ತಂದೆ

    ಶುಲ್ಕ ಕಟ್ಟಿಲ್ಲ ಎಂದು ವಿದ್ಯಾರ್ಥಿಯನ್ನು ಹೊರ ಹಾಕಿದ ಶಾಲೆ- ಪ್ರಧಾನಿಗೆ ಪತ್ರ ಬರೆದ ವಿದ್ಯಾರ್ಥಿ ತಂದೆ

    ಮಡಿಕೇರಿ: ಶುಲ್ಕವನ್ನು ಕಟ್ಟಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿಯನ್ನು ಶಾಲೆಯಿಂದ ಹೊರ ಹಾಕಿದ ಘಟನೆ ಕೊಡಗು ಜಿಲ್ಲೆಯ ಗೋಣಿಕೊಪ್ಪದಲ್ಲಿ ನಡೆದಿದೆ. ಇದರಿಂದ ಬೇಸತ್ತ ವಿದ್ಯಾರ್ಥಿಯ ತಂದೆ ಬೆಳ್ಳಿಯಪ್ಪ ಎಂಬವರು ಪ್ರಧಾನಿ ಮೋದಿ ಅವರಿಗೆ ಇ ಮೇಲ್ ಮೂಲಕ ಪತ್ರ ಬರೆದು ದೂರು ಸಲ್ಲಿಸಿದ್ದಾರೆ. ಜೊತೆಗೆ ಕೊಡಗು ಜಿಲ್ಲಾಧಿಕಾರಿ ಡಾ. ಬಿ.ಸಿ.ಸತೀಶ್ ಅವರಿಗೂ ದೂರು ನೀಡಿದ್ದಾರೆ.

    ಹೌದು, ಗೋಣಿಕೊಪ್ಪದ ಕೂರ್ಗ್ ಪಬ್ಲಿಕ್ ಶಾಲೆಯಲ್ಲಿ ಮುತ್ತಣ್ಣ ವಿದ್ಯಾರ್ಥಿ 5ನೇ ತರಗತಿ ಓದುತ್ತಿದ್ದ. ಆದರೆ ಪೋಷಕರು ಪೂರ್ತಿ ಶುಲ್ಕ ಕಟ್ಟಿಲ್ಲವೆಂದು ವಿದ್ಯಾರ್ಥಿ ಮುತ್ತಣ್ಣ ಸೇರಿದಂತೆ ಒಟ್ಟು 20 ವಿದ್ಯಾರ್ಥಿಗಳನ್ನು ತರಗತಿಯಿಂದ ಹೊರಕ್ಕೆ ಹಾಕಿ ಶಾಲೆಯ ಗ್ರಂಥಾಲಯದಲ್ಲಿ ಮೂರು ದಿನಗಳ ಕಾಲ ಕೂರಿಸಿದ್ದರು ಎನ್ನಲಾಗಿದೆ. ವಿಷಯ ತಿಳಿದು ವಿದ್ಯಾರ್ಥಿಯ ತಂದೆ ಬೆಳ್ಳಿಯಪ್ಪ ಶಾಲೆಯ ಆಡಳಿತ ಮಂಡಳಿಯನ್ನು ಪ್ರಶ್ನಿಸಿದ್ದಾರೆ. ಆದರೆ ಶಾಲೆಯಿಂದ ಸರಿಯಾದ ಉತ್ತರ ಬಂದಿಲ್ಲ. ಇದರಿಂದ ಬೇಸರಗೊಂಡ ವಿದ್ಯಾರ್ಥಿ ತಂದೆ, ಪ್ರಧಾನಿ ಮೋದಿಯವರಿಗೆ ಇ-ಮೇಲ್ ಮೂಲಕವೇ ದೂರು ನೀಡಿದ್ದಾರೆ. ಇದನ್ನೂ ಓದಿ: 100 ಕೋಟಿ ರೂ. ಆಸೆಗೆ ಒಂದು ಮೂಕ್ಕಾಲು ಕೋಟಿ ಹಣ ಕಳ್ಕೊಂಡ

    ಈಗಾಗಲೇ ಶಾಲೆಗೆ 60 ಸಾವಿರ ರೂ. ಶುಲ್ಕ ಕಟ್ಟಿದ್ದೇನೆ. ಕೋವಿಡ್ ಕಾಲದಲ್ಲೂ ಶುಲ್ಕ ಜಾಸ್ತಿ ಮಾಡಿ ತೊಂದರೆ ನೀಡುತ್ತಿದ್ದಾರೆ ಎಂದು ದೂರು ನೀಡಿದ್ದಾರೆ. ದೂರು ನೀಡಿದ ಬಳಿಕ ಶಾಲಾ ಆಡಳಿತ ಮಂಡಳಿ, ವಿದ್ಯಾರ್ಥಿಯ ಅಜ್ಜಿಯನ್ನು ಕರೆಸಿ ಫೀಸ್ ಕಟ್ಟುವಂತೆ ಸೂಚಿಸಿ ಅಂದಿನಿಂದ ವಿದ್ಯಾರ್ಥಿಯನ್ನು ತರಗತಿಗೆ ಸೇರಿಸಿಕೊಂಡಿದ್ದಾರೆ ಎನ್ನಲಾಗಿದೆ. ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಗುರುವಾರ ಕೊಡಗು ಡಿಡಿಪಿಐ ವೇದಮೂರ್ತಿ ಅವರು ಕೂರ್ಗ್ ಪಬ್ಲಿಕ್ ಶಾಲೆಗೆ ಭೇಟಿ ನೀಡಿದ್ದಾರೆ. ಶಾಲೆಗೆ ವಿದ್ಯಾರ್ಥಿಯ ತಾಯಿ ಮತ್ತು ಅಜ್ಜಿಯನ್ನು ಕರೆಸಿ ಘಟನೆಯ ನೈಜತೆ ಬಗ್ಗೆ ವಿಚಾರಿಸಿದ್ದಾರೆ. ಈ ವೇಳೆ ವಿದ್ಯಾರ್ಥಿಯ ತಾಯಿ ಸ್ನೇಹ ಅವರು, ನಮ್ಮ ಮಗನನ್ನು ಮೂರು ದಿನಗಳ ಕಾಲ ಗ್ರಂಥಾಲಯದಲ್ಲಿ ಕೂರಿಸಿದ್ದಾರೆ. ಬಳಿಕ ನಮ್ಮ ಮಗ ತೀವ್ರ ನೋವಿನಿಂದ ಸಹಾಯವಾಣಿಗೂ ಕರೆ ಮಾಡಿ ಹೇಳಿದ್ದಾನೆ. ಶಾಲೆಯ ವರ್ತನೆಗೆ ಬೇಸತ್ತು ನಮ್ಮ ಪತಿ ಕೂಡ ಜಿಲ್ಲಾಧಿಕಾರಿ, ಬಿಇಓ ಮತ್ತು ಪ್ರಧಾನ ಮಂತ್ರಿಯವರಿಗೂ ದೂರು ನೀಡಿದ್ದರು ಎಂದಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ಶಾಲೆಯ ಮ್ಯಾನೇಜರ್ ಮಾನಸಾ, ಇದೆಲ್ಲಾ ಸುಳ್ಳು. ನಮ್ಮ ಶಾಲೆಯ ಹೆಸರು ಹಾಳು ಮಾಡುವುದಕ್ಕಾಗಿ ಇಂತಹ ಹುನ್ನಾರ ನಡೆಯುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಬೀಗ ಹಾಕಿ ಕೆಲಸಕ್ಕೆ ಹೋಗಿದ್ವಿ, ಬಂದು ನೋಡುವಾಗ ಹೆಲಿಕಾಪ್ಟರ್ ಬಿದ್ದು ಮನೆಗೆ ಹಾನಿಯಾಗಿತ್ತು: ಜೈಶಂಕರ್

    ಘಟನೆ ಸಂಬಂಧ ಪ್ರತಿಕ್ರಿಯಿಸಿರುವ ಕೊಡಗು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್, ವಿದ್ಯಾರ್ಥಿಗಳನ್ನು ಪ್ರತ್ಯೇಕವಾಗಿ ಗ್ರಂಥಾಲಯದಲ್ಲಿ ಕೂರಿಸುತ್ತಿದ್ದರು ಎಂಬ ದೂರು ಕೇಳಿಬಂದಿದೆ. ಹೀಗಾಗಿ ಪರಿಶೀಲಿಸಿ ವರದಿ ನೀಡುವಂತೆ ಡಿಡಿಪಿಐ ಅವರಿಗೆ ಸೂಚಿಸಿದ್ದೇನೆ. ವರದಿ ಆಧಾರದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

  • ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಆಯ್ತು, ಈಗ ಖಾಸಗಿ ಶಾಲೆಗಳಿಗೂ ಅಂಕುಶ

    ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಆಯ್ತು, ಈಗ ಖಾಸಗಿ ಶಾಲೆಗಳಿಗೂ ಅಂಕುಶ

    ಬೆಂಗಳೂರು: ಖಾಸಗಿ ಶಾಲೆಗಳ ಧನದಾಹಿ ತನಕ್ಕೆ ಕೊನೆಗೂ ಮುಕ್ತಿ ಸಿಗುವ ಕಾಲ ಬಂದಿದೆ. ಖಾಸಗಿ ಶಾಲೆಗಳ ಶುಲ್ಕ ನಿಗದಿ ಮುಂದಿನ ವರ್ಷದಿಂದ ಜಾರಿ ಮಾಡಲಾಗುತ್ತದೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳಿದ್ದಾರೆ.

    ಪಿಯುಸಿ ಬೋರ್ಡ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಖಾಸಗಿ ಶಾಲೆಗಳ ಶುಲ್ಕ ನಿಗದಿ ಸಂಬಂಧ ಈಗಾಗಲೇ ಕರಡು ಮಸೂದೆ ಸಿದ್ಧವಾಗಿದೆ. ಅಧಿವೇಶನದಲ್ಲಿ ಮಂಡಿಸಿ ಮುಂದಿನ ಶೈಕ್ಷಣಿಕ ವರ್ಷದಿಂದ ಶುಲ್ಕ ನೀತಿ ಜಾರಿಗೆ ತರುತ್ತೇವೆ ಎಂದು ತಿಳಿಸಿದರು.

    ಒಂದು ವೇಳೆ ಶುಲ್ಕ ನಿಗದಿ ಮಾಡಿದ ಮೇಲೆ ಹೆಚ್ಚುವರಿ ಶುಲ್ಕ ಪಡೆದರೆ ಅಂತಹ ಶಾಲೆಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ. ಮಾತ್ರವಲ್ಲ ಹೆಚ್ಚುವರಿ ಶುಲ್ಕ ಮರು ಪಾವತಿ ಮಾಡಲು ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

     

    ಪರೀಕ್ಷಾ ಸಿದ್ಧತೆ: ಪಿಯುಸಿ, ಎಸ್‍ಎಸ್‍ಎಲ್‍ಸಿ ಪರೀಕ್ಷೆ ತಯಾರಿ ನಡೆಸುತ್ತಿದ್ದು, ಮಾರ್ಚ್ 1-13 ದ್ವಿತಿಯ ಪಿಯುಸಿ ಹಾಗೂ ಮಾರ್ಚ್ 23 ರಿಂದ ಏಪ್ರಿಲ್ 6 ವರೆಗೆ ಪರೀಕ್ಷೆ ನಡೆಯಲಿದೆ. ಚುನಾವಣಾ ಆಯೋಗಕ್ಕೂ ಪರೀಕ್ಷಾ ವೇಳಾಪಟ್ಟಿ ಕಳುಹಿಸಿಕೊಟ್ಟಿದ್ದೇವೆ. ಕಳೆದ ವರ್ಷದಂತೆ ಈ ವರ್ಷವೂ ಕರ್ನಾಟಕ ಸೆಕ್ಯೂರ್ ಎಕ್ಸಾಂ ಸಿಸ್ಟಮ್ ಅಳವಡಿಸಲಾಗುತ್ತೆ ಎಂದು ಹೇಳಿದರು.

    ಒಂದೇ ಭಾಷೆಯಲ್ಲಿ ಪ್ರಶ್ನೆ ಪತ್ರಿಕೆ ಮುದ್ರಣವಾಗುತ್ತದೆ ಎನ್ನುವ ಗೊಂದಲಕ್ಕೆ ತೆರೆ ಎಳೆದ ಸಚಿವರು, ಹಿಂದಿನ ವರ್ಷದಂತೆ ಎರಡೂ ಭಾಷೆಯಲ್ಲಿ ಪ್ರಶ್ನೆ ಪತ್ರಿಕೆ ಮುದ್ರಣ ಮಾಡುತ್ತೇವೆ. ಪರೀಕ್ಷಾ ಅಕ್ರಮ ತಡೆಗೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು.

    ಒಂದೇ ಸ್ಥಳದಲ್ಲಿ ಕೆಲಸ ಮಾಡುತ್ತಿರುವ ಪಿಯುಸಿ ಬೋರ್ಡ್ ಸಿಬ್ಬಂದಿಯನ್ನು ಬದಲಾವಣೆ ಮಾಡುವ ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು. ಅಲ್ಲದೆ ಸರ್ಕಾರಿ ಶಾಲೆಗಳ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಪ್ರತಿ ಹೋಬಳಿಗೆ ಒಂದು ಕರ್ನಾಟಕ ಪಬ್ಲಿಕ್ ಶಾಲೆ ಪ್ರಾರಂಭಿಸಿ ಖಾಸಗಿ ಶಾಲೆಗಳ ಸಮಾನ ಶಾಲೆ ನಿರ್ಮಾಣ ಮಾಡುವುದಾಗಿ ತಿಳಿಸಿದರು.

    ಶಿಕ್ಷಕರ ಬಡ್ತಿ: ಇದೇ ಮೊದಲ ಬಾರಿಗೆ ಬಡ್ತಿ ಮೀಸಲಾತಿ ನಿಯಮದಲ್ಲಿ ಈ ಬಾರಿ 11 ಸಾವಿರ ಶಿಕ್ಷಕರಿಗೆ ಬಡ್ತಿ ನೀಡುತ್ತಿದ್ದೇವೆ. 6-8 ತರಗತಿ ಶಿಕ್ಷಕರಿಗೆ ಹೈಸ್ಕೂಲ್ ಶಿಕ್ಷಕರಾಗಿ ಬಡ್ತಿ ನೀಡಲಾಗುತ್ತೆ. ಶಿಕ್ಷಕರಿಗೆ ಪರೀಕ್ಷೆ ನಡೆಸುವ ಮೂಲಕ ಬಡ್ತಿಗೆ ಆಯ್ಕೆ ಮಾಡಲಾಗುತ್ತದೆ. ಹೈಸ್ಕೂಲ್ ಶಿಕ್ಷಕರನ್ನು ಪಿಯುಸಿ ಉಪನ್ಯಾಸಕರಾಗಿ ಹಾಗೂ ಮುಖ್ಯೋಪಾಧ್ಯಾಯರಾಗಿ ಬಡ್ತಿ ನೀಡುವ ನಿರ್ಧಾರ ತೆಗೆದುಕೊಂಡಿವೆ ಎಂದರು.

    ಪ್ರಸ್ತುತ ನಡೆಯುತ್ತಿರುವ ಶಿಕ್ಷಕರ ನೇಮಕಾತಿ ಫೆಬ್ರವರಿಯಲ್ಲಿ ಮುಕ್ತಾಯವಾಗಲಿದ್ದು, ಜನವರಿಯಲ್ಲಿ ಟಿಇಟಿ ಪರೀಕ್ಷೆ ನಡೆಸಲಾಗುತ್ತೆ ಎಂದು ತಿಳಿಸಿದರು.

    ಇದೇ ವೇಳೆ ತಮ್ಮ ಮುಂದಿನ ಚುನಾವಣೆ ಕ್ಷೇತ್ರ ಕುರಿತು ಸ್ಪಷ್ಟಪಡಿಸಿದ ಅವರು, ಪ್ರಸ್ತುತ ನನ್ನ ಸ್ವಕ್ಷೇತ್ರ ಮೈಸೂರು ನರಸಿಂಹರಾಜ ವಿಧಾನಸಭಾ ಕ್ಷೇತ್ರದಿಂದಲೇ ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಾಗಿ ಖಚಿತ ಪಡಿಸಿದರು.

    ಕಾಯ್ದೆ ಹಿನ್ನೆಲೆ: 1998-99 ಶುಲ್ಕ ನಿಗಧಿ ಮಾಡಲಾಗಿತ್ತು. ಇದರ ಅನ್ವಯ ಖಾಸಗಿ ಶಾಲೆಯೊಂದರ ಒಟ್ಟಾರೆ ಸಿಬ್ಬಂದಿಯ ಸಂಬಳ ಹಾಗೂ 30% ಹೆಚ್ಚುವರಿಯನ್ನು ಒಟ್ಟು ಮಾಡಿ ವಿದ್ಯಾರ್ಥಿಗಳ ಅನುಗುಣಕ್ಕೆ ಭಾಗಿಸಿದ ಮೊತ್ತವನ್ನು ಶುಲ್ಕವಾಗಿ ಪಡೆಯುವ ನಿಯಮ ರೂಪಿಸಲಾಗಿತ್ತು. ಇದರ ಅನ್ವಯ ಹೆಚ್ಚುವರಿ ಪಡೆದ 30% ಶುಲ್ಕದಲ್ಲಿ ಶಾಲೆಯ ಇನ್ನಿತರ ಖರ್ಚುಗಳು ಕರೆಂಟ್ ಬಿಲ್, ಬಾಡಿಗೆ ಇತ್ಯಾದಿಗಳನ್ನು ಮಾಡಬೇಕಿತ್ತು.

    ಸುಮಾರು 18- 19 ವರ್ಷಗಳಿಂದ ಶುಲ್ಕ ಪರಿಷ್ಕರಣೆ ಆಗಿರಲಿಲ್ಲ. ಆದರೆ ಹಿಂದಿನ ಶುಲ್ಕ ನಿಗಧಿಯನ್ನ ಗಾಳಿಗೆ ತೂರಿ ಮನಸೋ ಇಚ್ಛೆ ಖಾಸಗಿ ಶಾಲೆಗಳು ಶುಲ್ಕವನ್ನು ತೆಗೆದುಕೊಳ್ಳುತ್ತಿದ್ದವು. ಲಕ್ಷ ಲಕ್ಷ ಹಣವನ್ನು ಪೋಷಕರಿಂದ ಪಡೆಯುತ್ತಿದ್ದರು.

    ಖಾಸಗಿ ಶಾಲೆಗಳ ವಿರೋಧ: ಕಾಯ್ದೆಗೆ ಕೆಲವು ಮಧ್ಯಮ ವರ್ಗದ ಶಾಲೆಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದವು. ಶಿಕ್ಷಣ ಇಲಾಖೆ 2015ರಲ್ಲಿ ಶುಲ್ಕ ಪರಿಷ್ಕರಣೆ ಸಂಬಂಧ ಕರಡು ರಚಿಸಿತ್ತು. ಇದರಲ್ಲಿ ಶಿಕ್ಷಕರ ಸಂಬಳ ಒಟ್ಟು ಮೊತ್ತ ಮತ್ತು ಗ್ರಾಮೀಣ ಪ್ರದೇಶಗಳಿಗೆ 50%, ಅರೆ ನಗರ ಪ್ರದೇಶಗಳಿಗೆ 60%, ನಗರ ಪಾಲಿಕೆಗಳಿಗೆ 75% ಹಾಗೂ ಬಿಬಿಎಂಪಿ ವಲಯಗಳಿಗೆ 100% ಶುಲ್ಕ ಹೆಚ್ಚಳ ಪಡೆಯುವ ಪ್ರಸ್ತಾಪ ಮಾಡಲಾಗಿತ್ತು. ಅಲ್ಲದೆ ಪ್ರತೀ ವರ್ಷ 10% ರಿಂದ 15% ಶುಲ್ಕ ಹೆಚ್ಚಳಕ್ಕೆ ಅನುಮತಿ ನೀಡಿತ್ತು. ಇದಕ್ಕೆ ಅನೇಕ ಖಾಸಗಿ ಶಾಲೆಗಳು ವಿರೋಧ ವ್ಯಕ್ತಪಡಿಸಿದ್ದವು. ಹೀಗಾಗಿ ಖಾಸಗಿ ಶಾಲೆಗಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಖಾಸಗಿ ಶಾಲೆಗಳು ಶುಲ್ಕ ವರ್ಗೀಕರಣ ಸರಿ ಇಲ್ಲ ಎಂದು ಆಕ್ಷೇಪಣೆ ಸಲ್ಲಿಸಿದ ಪರಿಣಾಮವಾಗಿ ಕಳೆದ ಎರಡು ವರ್ಷಗಳಿಂದ ಕರಡು ಮಸೂದೆ ಮಂಡನೆಯಾಗಿರಲಿಲ್ಲ.

    ಏನು ಲಾಭ?
    ಕಾಯ್ದೆ ಜಾರಿಯಾದರೆ ಖಾಸಗಿ ಶಾಲೆಗಳ ಧನದಾಹಿ ತನಕ್ಕೆ ಬ್ರೇಕ್ ಬೀಳಲಿದೆ. ಶಾಲೆಗಳು ಮನಸ್ಸಿಗೆ ಬಂದಂತೆ ಶುಲ್ಕ ಪಡೆಯಲು ಸಾಧ್ಯವಾಗುವುದಿಲ್ಲ. ಲಕ್ಷ ಲಕ್ಷ ರೂ. ಹಣ ಶುಲ್ಕ ಪಡಿಯುವ ಶಾಲೆಗಳಿಗೆ ಬ್ರೇಕ್ ಬೀಳುತ್ತದೆ. ಖಾಸಗಿ ಶಾಲೆಗಳ ಗುಣಮಟ್ಟಕ್ಕೆ ತಕ್ಕಂತೆ ಶುಲ್ಕ ಪರಿಷ್ಕರಣೆ ಮಾಡಲಾಗುತ್ತೆ. ಏಕರೂಪ ಶುಲ್ಕ ಮಾಡಲು ಸಾಧ್ಯವಾಗದೇ ಇದ್ದರೂ ಮನ ಬಂದಂತೆ ಶುಲ್ಕ ಪಡಿಯುವ ಶಾಲೆಗಳಿಗೆ ಬ್ರೇಕ್ ಬೀಳುತ್ತದೆ.