Tag: School headmaster

  • Belagavi | ಮುಸ್ಲಿಂ ಹೆಡ್ ಮಾಸ್ಟರ್ ವರ್ಗಾವಣೆ ಮಾಡಲು ಮಕ್ಕಳಿಗೆ ವಿಷವಿಟ್ಟ ಪಾಪಿಗಳು

    Belagavi | ಮುಸ್ಲಿಂ ಹೆಡ್ ಮಾಸ್ಟರ್ ವರ್ಗಾವಣೆ ಮಾಡಲು ಮಕ್ಕಳಿಗೆ ವಿಷವಿಟ್ಟ ಪಾಪಿಗಳು

    ಬೆಳಗಾವಿ: ಶಾಲಾ ಮುಖ್ಯ ಶಿಕ್ಷಕ (School Head Master) ಮುಸ್ಲಿಂ ಎಂಬ ಕಾರಣಕ್ಕೆ ಆತನನ್ನು ಶಾಲೆಯಿಂದ ಎತ್ತಂಗಡಿ ಮಾಡಿಸಬೇಕು ಎಂದು ಶಾಲೆಯ ಆವರಣದಲ್ಲಿದ್ದ ಮಕ್ಕಳು ಕುಡಿಯುವ ನೀರಿನ ಟ್ಯಾಂಕ್‌ಗೆ ಅಪ್ರಾಪ್ತ ಮಗುವಿನ ಕಡೆಯಿಂದಲೇ ವಿಷ ಪ್ರಾಷಣ ಮಾಡಿಸಿದ ಘಟನೆ ಬೆಳಗಾವಿ (Belagavi) ಜಿಲ್ಲೆಯ ಸವದತ್ತಿ (Savadatti) ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನಡೆದಿದೆ.

    ಹೂಲಿಕಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 41 ಮಕ್ಕಳು ವ್ಯಾಸಾಂಗ ಮಾಡುತ್ತಿದ್ದು, ಮುಖ್ಯ ಶಿಕ್ಷಕ ಸುಲೇಮಾನ್ ಗೋರಿನಾಯಕ್ ಹಾಗೂ ಮತ್ತೋರ್ವ ಮೇಷ್ಟ್ರು ಕೆಲಸ ಮಾಡುತ್ತಿದ್ದಾರೆ. ಸುಲೇಮಾನ್ ಗೋರಿನಾಯಕ್ ಕಳೆದ 13 ವರ್ಷಗಳಿಂದ ಒಂದೇ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಎಂಬ ಕಾರಣ ಹಾಗೂ ಆತ ಮುಸ್ಲಿಂ ಸಮುದಾಯಕ್ಕೆ ಸೇರಿದವ ಎಂಬ ಕಾರಣಕ್ಕೆ ಆತನನ್ನು ಶಾಲೆಯಿಂದ ಎತ್ತಂಗಡಿ ಮಾಡಿಸಬೇಕು ಎಂದು ಸಾಗರ್ ಪಾಟೀಲ್ ಪ್ಲಾನ್ ಮಾಡಿ ಕೃಷ್ಣಾ ಪಾಟೀಲ್ ಎಂಬಾತನನ್ನು ಬ್ಲಾಕ್ ಮೇಲ್ ಮಾಡಿ ಮನವಳ್ಳಿಯಿಂದ ಕೀಟನಾಶಕ ತರಿಸಿ ಮಾಜಾ ಬಾಟಲ್‌ನಲ್ಲಿ ವಿಷ ಬೆರೆಸಿ ಅಪ್ರಾಪ್ತ ಮಗುವನ್ನು ಬಳಸಿಕೊಂಡು ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ್ದರು. ಇದನ್ನೂ ಓದಿ: ಕಲಬುರಗಿ ಕರ್ನಾಟಕ ಕೇಂದ್ರಿಯ ವಿವಿ ವಿದ್ಯಾರ್ಥಿನಿ ಕೆನ್ನೆಗೆ ಮುತ್ತಿಟ್ಟ ಕ್ಯಾಂಟೀನ್ ಓನರ್

    ಕೃಷ್ಣಾ ಮಾದರ್ ಅದೇ ಗ್ರಾಮದ ಅನ್ಯ ಜಾತಿಯ ಯುವತಿಯನ್ನು ಪ್ರೀತಿಸುತ್ತಿದ್ದ. ತಾನು ಹೇಳಿದ ಕೆಲಸವನ್ನು ಮಾಡದಿದ್ದರೆ ನೀನು ಅನ್ಯಜಾತಿಯ ಹುಡುಗಿಯ ಪ್ರೀತಿಸುತ್ತಿರುವ ವಿಚಾರವನ್ನು ಊರಿಗೆಲ್ಲ ಪುಕಾರು ಮಾಡುತ್ತೇನೆ ಎಂದು ಬ್ಲಾಕ್ ಮೇಲ್ ಮಾಡಿದ್ದ. ಹೀಗಾಗಿ ಕೃಷ್ಣಾ ಮಾದರ್ ತನ್ನ ಸ್ನೇಹಿತ ನಾಗನಗೌಡ ಪಾಟೀಲ್ ಜೊತೆ ಸೇರಿ ಕೃತ್ಯ ಮಾಡಲು ಸಜ್ಜಾಗುತ್ತಾರೆ. ಮುನವಳ್ಳಿಯಿಂದ ವಿಷ ತೆಗೆದುಕೊಂಡು ಬಂದು ಅದೇ ಶಾಲೆಯ ಮಗುವಿಗೆ 500 ರೂಪಾಯಿ ದುಡ್ಡು ನೀಡಿ ಅದೂ ಅಲ್ಲದೆ ತಿನ್ನಲು ಕುರ್ಕುರೆ ಹಾಗೂ ಚಾಕಲೇಟ್ ನೀಡಿ ನೀರಿನ ಟ್ಯಾಂಕ್‌ಗೆ ಹಾಕುವಂತೆ ಹೇಳಿದ್ದರು. ಕೃಷ್ಣಾ ಮಾದರ್ ಹಾಗೂ ನಾಗನಗೌಡ ಹೇಳಿದಂತೆ ಆ ಅಪ್ರಾಪ್ತ ಮಗು ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿತ್ತು. ಇದನ್ನೂ ಓದಿ: ಭಾರತದ ಮೇಲೆ ಅಮೆರಿಕ 25% ಟ್ಯಾರಿಫ್‌ – ‘ಸ್ವದೇಶಿ’ ವಸ್ತು ಖರೀದಿಸಿ: ಮೋದಿ ಕರೆ

    ವಿಷ ಬೆರೆಸಿದ ನಂತರ ಮಕ್ಕಳು ಅದೇ ನೀರು ಕುಡಿದು ಜುಲೈ 14 ರಂದು ಅಸ್ವಸ್ಥರಾಗಿದ್ದರು. ಅಸ್ವಸ್ಥರಾದ 11 ಮಕ್ಕಳನ್ನು ಕೂಡಲೇ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಸದ್ಯ ಮಕ್ಕಳು ಚೇತರಿಸಿಕೊಂಡಿದ್ದಾರೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸಾಗರ್ ಪಾಟೀಲ್, ಕೃಷ್ಣಾ ಮಾದರ್, ಹಾಗೂ ನಾಗನಗೌಡ ಪಾಟೀಲ್‌ರನ್ನು ಬಂಧಿಸಿದ್ದಾರೆ. ಈ ಕುರಿತು ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮಾಧ್ಯಮಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ ಮಾಹಿತಿ ನೀಡಿದರು. ಇದನ್ನೂ ಓದಿ: ಪತ್ನಿಗೆ ಅಕ್ರಮ ಸಂಬಂಧ – ಎರಡು ಮಕ್ಕಳಿಗೆ ವಿಷವುಣಿಸಿ ಪತಿ ಆತ್ಮಹತ್ಯೆ

  • ಕಿವಿಯ ಉದ್ದನೆಯ ಕೂದಲಿಗಾಗಿ ಗಿನ್ನಿಸ್ ವರ್ಲ್ಡ್‌ ದಾಖಲೆ ಬರೆದ ನಿವೃತ್ತ ಶಿಕ್ಷಕ

    ಕಿವಿಯ ಉದ್ದನೆಯ ಕೂದಲಿಗಾಗಿ ಗಿನ್ನಿಸ್ ವರ್ಲ್ಡ್‌ ದಾಖಲೆ ಬರೆದ ನಿವೃತ್ತ ಶಿಕ್ಷಕ

    ನವದೆಹಲಿ: ನಿವೃತ್ತ ಶಿಕ್ಷಕರೊಬ್ಬರು  ಕಿವಿಯಲ್ಲಿ (Ear) ಉದ್ದನೆಯ ಕೂದಲನ್ನು (Hair) ಬೆಳೆಸಿ ಗಿನ್ನಿಸ್ ವಿಶ್ವ ದಾಖಲೆಯನ್ನು (Guinness World Record) ಬರೆದಿದ್ದಾರೆ.

    ನಿವೃತ್ತ ಶಿಕ್ಷಕರಾದ ಆಂಟೋನಿ ವಿಕ್ಟರ್ ಎನ್ನುವವರು ಈ ದಾಖಲೆಗೆ ಪಾತ್ರರಾದವರು. ಆಂಟೋನಿ ತನ್ನ ಹೊರಗಿನ ಕಿವಿಗಳ ಮಧ್ಯಭಾಗದಿಂದ ಕೂದಲನ್ನು 18.1 ಸೆ.ಮೀ (7.12 ಇಂಚು) ಅಳತೆಯ ಉದ್ದದಲ್ಲಿ ಬೆಳೆಸಿದ್ದಾರೆ. ಅವರು 2007ರಿಂದ ಕಿವಿಯಲ್ಲಿ ಕೂದಲನ್ನು ಬೆಳೆಸಲು ಪ್ರಾರಂಭಿಸಿದ್ದು, ಇದೀಗ ವಿಶ್ವದಾಖಲೆಯನ್ನು ಬರೆದಿದ್ದಾರೆ. ಈ ಬಗ್ಗೆ ದಿ ಗಿನ್ನಿಸ್ ವರ್ಲ್ಡ್‌ ರೆಕಾರ್ಡ್ ಇನ್‍ಸ್ಟಾಗ್ರಾಮ್ ಖಾತೆ ಈ ವಿಷಯವನ್ನು ಹಂಚಿಕೊಂಡಿದೆ.

    ಇನ್‍ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಏನಿದೆ?: ಕಿವಿಯ ಕೂದಲಿನ ಶಿಕ್ಷಕರೆಂದು ಜನರು ಆಂಟೋನಿ ಅವರನ್ನು ಕರೆಯುತ್ತಾರೆ. ಆಂಟೋನಿ ಅವರ ಕಿವಿಯಲ್ಲಿರುವ ಉದ್ದನೆಯ ಕೂದಲು ದಾಖಲೆಯಾಗಿದೆ. ಭಾರತದ (India) ಆಂಟೋನಿ ವಿಕ್ಟರ್ ನಿವೃತ್ತ ಶಾಲಾ ಮುಖ್ಯೋಧ್ಯಾಯರು. (School Headmaster) ಇವರು 2007ರಿಂದ ತಮ್ಮ ಕಿವಿಯ ಮಧ್ಯಭಾಗದಿಂದ ಕೂದಲನ್ನು ಬಿಡಲು ಪ್ರಾರಂಭಿಸಿದ್ದಾರೆ. ಇದೀಗ ಈ ಕೂದಲು 18.1 ಸೆ.ಮೀ. (7.12) ಬೆಳೆದಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಸುನಂದಾ ಕೇಸ್‌ನಲ್ಲಿ ತರೂರ್‌ಗೆ ಕ್ಲೀನ್‌ ಚಿಟ್‌ – ಹೈಕೋರ್ಟ್‌ ಮೊರೆ ಹೋದ ದೆಹಲಿ ಪೊಲೀಸ್

    ದಿ ಗಿನ್ನಿಸ್ ವರ್ಲ್ಡ್‌ ರೆಕಾರ್ಡ್ ಹಾಕಿರುವ ಈ ಪೋಸ್ಟ್‌ಗೆ ವಿಚಿತ್ರ ರೀತಿಯ ಕಾಮೆಂಟ್‍ಗಳು ಬಂದಿದ್ದು, ಬಳಕೆದಾರನೊಬ್ಬ ಇದು, ದಾಖಲೆಯಲ್ಲ, ಹೆಚ್ಚಿನ ಪುರುಷರಿಗೆ ಇದು ಕಾಮನ್ ಆಗಿದೆ ಎಂದಿದ್ದಾರೆ. ಮತ್ತೊಬ್ಬ ನೆಟ್ಟಿಗ ಕಾಮೆಂಟ್ ಮಾಡಿದ್ದು, ಮೂಗಿನ ಉದ್ದನೆಯ ಕೂದಲಿನ ಬಗ್ಗೆ ಮುಂದಿನ ದಾಖಲೆ ಎಂದು ತಮಾಷೆ ಮಾಡಿದ್ದಾನೆ. ಇನ್ನೊಬ್ಬ ಕಾಮೆಂಟ್ ಮಾಡಿದ್ದು, ನನ್ನ ಹಳ್ಳಿಗರು ಈ ದಾಖಲೆಯನ್ನು ಮುರಿಯಲು ಬರುತ್ತಿದ್ದಾರೆ ಎಂದು ತಿಳಿಸಿದ್ದಾನೆ. ಇದನ್ನೂ ಓದಿ: ಕರ್ತವ್ಯ ನಿರತ ಪೊಲೀಸ್ ಮುಖ್ಯಪೇದೆ ಹೃದಯಾಘಾತದಿಂದ ಸಾವು

    Live Tv
    [brid partner=56869869 player=32851 video=960834 autoplay=true]

  • ನಿರಾಶ್ರಿತರ ಕೇಂದ್ರದ ಅಕ್ಕಿ ಅಕ್ರಮ ಸಂಗ್ರಹ: ರಾತ್ರೋರಾತ್ರಿ 60 ಕ್ವಿಂಟಾಲ್ ಅಕ್ಕಿ ಮಾಯ

    ನಿರಾಶ್ರಿತರ ಕೇಂದ್ರದ ಅಕ್ಕಿ ಅಕ್ರಮ ಸಂಗ್ರಹ: ರಾತ್ರೋರಾತ್ರಿ 60 ಕ್ವಿಂಟಾಲ್ ಅಕ್ಕಿ ಮಾಯ

    ರಾಯಚೂರು: ನೆರೆ ಹಾವಳಿ ಸಂದರ್ಭದಲ್ಲಿ ತೆರೆಯಲಾಗಿದ್ದ ನಿರಾಶ್ರಿತರ ಕೇಂದ್ರಗಳಲ್ಲಿ ಪ್ರವಾಹ ಸಂತ್ರಸ್ತರಿಗೆ ಊಟ, ವಸತಿ ವ್ಯವಸ್ಥೆ ಮಾಡಲಾಗಿತ್ತು. ಪ್ರವಾಹ ಇಳಿದ ಬಳಿಕ ನಿರಾಶ್ರಿತರ ಕೇಂದ್ರಗಳಲ್ಲಿನ ದಾಸ್ತಾನು ಲೆಕ್ಕವನ್ನ ಕಂದಾಯ ಇಲಾಖೆ ಅಧಿಕಾರಿಗಳು ನೋಡಿಕೊಂಡಿದ್ದರು. ಇಷ್ಟಾದರೂ ಇಲ್ಲಿಯವರೆಗೆ ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿಯಲ್ಲಿ ಗಂಜಿ ಕೇಂದ್ರ ತೆರೆದಿದ್ದ ಕನ್ಯಾ ಸರ್ಕಾರಿ ಪ್ರೌಢಶಾಲೆಯಲ್ಲಿ 70 ಕ್ವಿಂಟಾಲ್ ಅಕ್ಕಿ ಪತ್ತೆಯಾಗಿದ್ದು ಅಕ್ರಮದ ವಾಸನೆ ಹರಡಿದೆ.

    ಶಾಲೆಯ ಮುಖ್ಯೋಪಾಧ್ಯಾಯ ವಿಜಯ್ ಕುಮಾರ್ ನಿರಾಶ್ರಿತರ ಕೇಂದ್ರದ ದಾಸ್ತಾನು ಸಂಪೂರ್ಣ ಖಾಲಿಯಾಗಿದೆ ಎಂದು ಕಂದಾಯ ಇಲಾಖೆಗೆ ಮಾಹಿತಿ ನೀಡಿದ್ದರು. ಆದರೆ ಶಾಲೆಯಲ್ಲಿ ಉಳಿದಿದ್ದ ದಾಸ್ತಾನು ಬಿಸಿಯೂಟದ್ದು ಅಂತ ಹೇಳಿಕೊಂಡು ಬಂದಿದ್ದಾರೆ. ಸ್ಥಳೀಯರು ದಾಸ್ತಾನಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಬಳಿಕ ರಾತ್ರೋರಾತ್ರಿ 60 ಕ್ವಿಂಟಾಲ್ ಅಕ್ಕಿಯನ್ನ ಬೇರೆಡೆ ಸ್ಥಳಾಂತರಿಸಿ 10 ಕ್ವಿಂಟಾಲ್ ಮಾತ್ರ ಉಳಿಸಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

    ನಿರಾಶ್ರಿತರ ಕೇಂದ್ರಕ್ಕೆ ದಾನಿಗಳು ನೀಡಿದ ವಸ್ತುಗಳು ಸಹ ಇದೇ ರೀತಿ ದುರ್ಬಳಕೆಯಾಗಿವೆ. ಹೀಗಾಗಿ ಸೂಕ್ತ ತನಿಖೆ ನಡೆಸಿ ಮುಖ್ಯೋಪಾಧ್ಯಾಯ ವಿಜಯ್ ಕುಮಾರ್ ಅವರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಶಿಕ್ಷಣ ಇಲಾಖೆ ಉಪನಿರ್ದೇಶಕರು ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.