Tag: school

  • ದಾವಣಗೆರೆ, ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ – ಇಂದು ಶಾಲೆಗಳಿಗೆ ರಜೆ ಘೋಷಣೆ

    ದಾವಣಗೆರೆ, ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ – ಇಂದು ಶಾಲೆಗಳಿಗೆ ರಜೆ ಘೋಷಣೆ

    • ಉಡುಪಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

    ದಾವಣಗೆರೆ/ ಉಡುಪಿ: ಜಿಲ್ಲೆಯಾದ್ಯಂತ  (Davanagere) ನಿರಂತರ ಮಳೆಯಾಗುತ್ತಿದ್ದ, ಇಂದು (ಆ.18) ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ (School) ರಜೆ ಘೋಷಿಸಲಾಗಿದೆ.

    ಮಕ್ಕಳ ಸುರಕ್ಷತೆ ದೃಷ್ಟಿಯಿಂದ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಈ ದಿನವನ್ನು ಮುಂದಿನ ಶನಿವಾರ (ಆ.23) ರಂದು ಪೂರ್ತಿ ದಿನ ಶಾಲೆಯನ್ನು ನಡೆಸಿ, ಸರಿದೂಗಿಸಿಕೊಳ್ಳಲು ಆದೇಶದಲ್ಲಿ ಸೂಚಿಸಲಾಗಿದೆ. ಇದನ್ನೂ ಓದಿ: ಉತ್ತರ ಕನ್ನಡ, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಭಾರೀ ಮಳೆ – ಯಾವ ತಾಲೂಕಿನ ಶಾಲೆಗಳಿಗೆ ರಜೆ?

    ಉಡುಪಿ ಜಿಲ್ಲೆಯಲ್ಲಿಯೂ ಸಹ ಧಾರಾಕಾರ ಮಳೆಯಾಗುತ್ತಿದ್ದು, ಅಂಗನವಾಡಿ, ಪ್ರಾಥಮಿಕ ಪ್ರೌಢಶಾಲೆ ಹಾಗೂ ಪದವಿಪೂರ್ವ, ಐಟಿಐ ಕಾಲೇಜು ರಜೆ ಘೋಷಿಸಲಾಗಿದೆ.

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಸಾಧ್ಯತೆ ಹಿನ್ನೆಲೆ, ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆ ಮುನ್ಸೂಚನೆ (Rain Alert) ನೀಡಲಾಗಿದೆ. ಕರಾವಳಿಯ ಮೂರು ಜಿಲ್ಲೆಗಳಿಗೆ ಭಾರಿ ಮಳೆ ಸಾಧ್ಯತೆಯಿದ್ದು, ಕರಾವಳಿ ಭಾಗದ ದಕ್ಷಿಣ ಕನ್ನಡ (Dakshina Kannada), ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

    ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಬೆಳಗಾವಿ (Belagavi), ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಿಗೆ ಎರಡು ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: Rain Alert | ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆ – ಮಲೆನಾಡು ಭಾಗದಲ್ಲಿ ರೆಡ್‌ ಅಲರ್ಟ್‌

  • ಕಾರಲ್ಲಿ ಇಬ್ರು ಬಾಲಕಿಯರಿದ್ರೂ.. ಕಣ್ಣೀರಿಡುತ್ತಾ ಓಡಿ ಬಂದ ವಿದ್ಯಾರ್ಥಿನಿ – ಕಿಡ್ನ್ಯಾಪ್‌ಗೆ ನಡೆಯಿತಾ ಯತ್ನ?

    ಕಾರಲ್ಲಿ ಇಬ್ರು ಬಾಲಕಿಯರಿದ್ರೂ.. ಕಣ್ಣೀರಿಡುತ್ತಾ ಓಡಿ ಬಂದ ವಿದ್ಯಾರ್ಥಿನಿ – ಕಿಡ್ನ್ಯಾಪ್‌ಗೆ ನಡೆಯಿತಾ ಯತ್ನ?

    ಹಾಸನ: ಕಾರಲ್ಲಿ (Car) ಇಬ್ರು ಬಾಲಕಿಯರಿದ್ರೂ… ಕಾರಲ್ಲಿದ್ದವರು ನನ್ನನ್ನೂ ಕಿಡ್ನ್ಯಾಪ್‌ ಮಾಡಲು ಯತ್ನಿಸಿದ್ರೂ ಎಂದು ಶಾಲಾ ವಿದ್ಯಾರ್ಥಿನಿಯೊಬ್ಬಳು (Student) ಅಳುತ್ತ ಓಡಿ ಶಾಲೆಗೆ ಬಂದ ಪ್ರಸಂಗ ಆಲೂರು ತಾಲೂಕಿನ ಹಂಚೂರು ಗ್ರಾಮದಲ್ಲಿ ನಡೆದಿದೆ.

    ಶಾಲೆಗೆ (School) ಓಡಿ ಬಂದ ವಿದ್ಯಾರ್ಥಿನಿ, ಬಿಳಿ ಬಣ್ಣದ ಮಾರುತಿ ಓಮ್ನಿಯಲ್ಲಿ ಬಂದವರು ಅಪಹರಣಕ್ಕೆ ಯತ್ನಿಸಿದ್ರು, ಕಾರಿನಲ್ಲಿ ಮತ್ತಿಬ್ಬರು ವಿದ್ಯಾರ್ಥಿನಿಯರು ಇದ್ದರು ಎಂದು ಹೇಳಿಕೊಂಡಿದ್ದಾಳೆ. ಈ ವೇಳೆ ಗಾಬರಿಯಿಂದ ಬಾಲಕಿ ಬ್ಯಾಗ್‌ ಸಹ ಎಸೆದು ಬಂದಿದ್ದಾಳೆ. ಈ ಮಾಹಿತಿಯನ್ನು ಶಾಲಾ ಮುಖ್ಯ ಶಿಕ್ಷಕರು ಪೊಲೀಸರಿಗೆ ತಿಳಿಸಿದ್ದಾರೆ. ಬಳಿಕ ಸ್ಥಳಕ್ಕೆ ಆಲೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇದನ್ನೂ ಓದಿ: ಮನೆಯವರಿಂದ ನನ್ನನ್ನು ಕಾಪಾಡು – ಬಾಯ್‌ಫ್ರೆಂಡ್‌ಗೆ ಮೆಸೇಜ್‌ ಕಳಿಸಿದವಳು ಶವವಾಗಿ ಪತ್ತೆ

    ಪ್ರಕರಣ ಸುಖಾಂತ್ಯ
    ಪೊಲೀಸರ ಮಾಹಿತಿ ಕಲೆಹಾಕಿದಾಗ, ಅದೇ ಶಾಲೆಯ ವಿದ್ಯಾರ್ಥಿನಿಯೊಬ್ಬಳನ್ನು ಕಾರಿನಲ್ಲಿ ಪರಿಚಯಸ್ಥ ಯುವಕ ಶಾಲೆಗೆ ಬಿಡಲು ಕರೆದುಕೊಂಡು ಬರುತ್ತಿದ್ದ. ಈ ಬಾಲಕಿಯನ್ನು ಸಹ ಕಾರಿಗೆ ಹತ್ತಿಸಿಕೊಂಡು ಶಾಲೆಯ ಬಳಿ ಬಿಡಲು ಸಮೀಪ ಬಂದು ಕಾರು ನಿಲ್ಲಿಸಿ ಡೋರ್‌ ತೆಗೆದಿದ್ದಾನೆ. ಅಷ್ಟರಲ್ಲೇ ಬಾಲಕಿ ಕೂಗಾಡಿಕೊಂಡು ಅಲ್ಲಿಂದ ಓಡಿದ್ದಾಳೆ ಎಂದು ತಿಳಿದು ಬಂದಿದೆ. ಯುವಕನನ್ನು ಪೊಲೀಸರು ಠಾಣೆಗೆ ಕರೆಸಿ ಮಾಹಿತಿ ಪಡೆದುಕೊಂಡು ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಚಿಕ್ಕಮಗಳೂರು | ಬ್ರೆಡ್‌ ಜೊತೆ ಮತ್ತು ಬರೋ ಔಷಧಿ ತಿನ್ನಿಸಿ ದನ ಕದ್ದೊಯ್ದ ಕಳ್ಳರು

  • ಕಾಫಿನಾಡಲ್ಲಿ ಮಳೆ ಅಬ್ಬರ – 5 ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

    ಕಾಫಿನಾಡಲ್ಲಿ ಮಳೆ ಅಬ್ಬರ – 5 ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

    ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ (Chikkamagaluru) ಮಳೆಯ ಆರ್ಭಟ ಮುಂದುವರೆದಿದೆ. ಕಳೆದ 2-3 ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ (Rain) ಜನಜೀವನ ಅಸ್ತವ್ಯಸ್ತಗೊಂಡಿದೆ. ಮಲೆನಾಡು ಭಾಗದಲ್ಲಿ ಮಳೆ ಹೆಚ್ಚಾಗಿರುವ ಪರಿಣಾಮ ಮುಂಜಾಗ್ರತಾ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲೆಯ ಐದು ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಇಂದು (ಶನಿವಾರ) ರಜೆ (Holiday) ಘೋಷಿಸಲಾಗಿದೆ.

    ಕೊಪ್ಪ, ಶೃಂಗೇರಿ, ಮೂಡಿಗೆರೆ, ಕಳಸ, ನರಸಿಂಹರಾಜಪುರ ತಾಲೂಕು ಸೇರಿದಂತೆ ಚಿಕ್ಕಮಗಳೂರು ತಾಲೂಕಿನ ಮಲೆನಾಡು ಭಾಗದ ಐದು ಹೋಬಳಿಗಳಾದ ಆವುತಿ, ಜಾಗರ, ವಸ್ತಾರೆ, ಖಾಂಡ್ಯದ ಅಂಗನವಾಡಿ, ಶಿಶುಪಾಲನಾ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಶವಗಳ ಹೂತಿಟ್ಟ ಪ್ರಕರಣ – ಇಂದಿನಿಂದ ಎಸ್‌ಐಟಿ ತನಿಖೆ ಆರಂಭ

    ಇನ್ನು ಚಿಕ್ಕಮಗಳೂರು ತಾಲೂಕಿನ ಮೂಗ್ತಿಹಳ್ಳಿ ಬಳಿ ಶುಕ್ರವಾರ ಬೃಹತ್ ಮರವೊಂದು ರಾಷ್ಟ್ರೀಯ ಹೆದ್ದಾರಿ 173ರಲ್ಲಿ ರಸ್ತೆಗುರುಳಿದ ಪರಿಣಾಮ ಎರಡು ಕಿ.ಮೀ. ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಹಾಗೂ ಪ್ರಯಾಣಿಕರು ಪರದಾಡಿದ್ದಾರೆ. ಮಳೆ ಮಧ್ಯೆ ಮರ ತೆರವು ಕಾರ್ಯಾಚರಣೆಗೆ ಗ್ರಾಮಾಂತರ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಪರದಾಡಿದ್ದಾರೆ. ಬಳಿಕ ಪೊಲೀಸರು ಕಾರು-ಬೈಕ್ ಹೋಗಲು ಅನುವು ಮಾಡಿಕೊಟ್ಟು ಮರ ತೆರವು ಮಾಡಿದ ಬಳಿಕ ಲಾರಿ ಹಾಗೂ ಬಸ್ಸುಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಇದನ್ನೂ ಓದಿ: ಥೈಲ್ಯಾಂಡ್‌ನಲ್ಲಿ ಶೂಟಿಂಗ್‌ ಮುಗಿಸಿ ಬೆಂಗಳೂರಿಗೆ ನಟ ದರ್ಶನ್ ವಾಪಸ್

  • ದಕ್ಷಿಣ ಕನ್ನಡದಲ್ಲಿ ಮಳೆ ಪೀಡಿತ ಪ್ರದೇಶದ 11 ಶಾಲೆಗಳ ದುರಸ್ತಿಗೆ ಕೇಂದ್ರ ಸರ್ಕಾರದ ಅನುಮೋದನೆ

    ದಕ್ಷಿಣ ಕನ್ನಡದಲ್ಲಿ ಮಳೆ ಪೀಡಿತ ಪ್ರದೇಶದ 11 ಶಾಲೆಗಳ ದುರಸ್ತಿಗೆ ಕೇಂದ್ರ ಸರ್ಕಾರದ ಅನುಮೋದನೆ

    – ಲೋಕಸಭೆಯಲ್ಲಿ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಪ್ರಶ್ನೆಗೆ ಶಿಕ್ಷಣ ಸಚಿವ ಜಯಂತ್ ಚೌಧರಿ ಉತ್ತರ

    ನವದೆಹಲಿ: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದಿಂದ ಹಾನಿಗೊಂಡಿರುವ 11 ಶಾಲೆಗಳನ್ನು ಕೇಂದ್ರ ಸರ್ಕಾರದ ಸಮಗ್ರ ಶಿಕ್ಷಾ ಯೋಜನೆಯಡಿ (Samagra Shiksha) 2023-24 ಹಾಗೂ 2024-25ನೇ ಸಾಲಿನಲ್ಲಿ ದುರಸ್ತಿಗೊಳಿಸುವುದಕ್ಕೆ ಅನುಮೋದನೆ ನೀಡಲಾಗಿದೆ ಎಂದು ಶಿಕ್ಷಣ ಖಾತೆ ರಾಜ್ಯ ಸಚಿವ ಜಯಂತ್ ಚೌಧರಿ (Jayant Chaudhary) ತಿಳಿಸಿದ್ದಾರೆ.

    ಲೋಕಸಭೆಯಲ್ಲಿ (Lok Sabha) ಸಂಸದ ಕ್ಯಾ. ಬ್ರಿಜೇಶ್ ಚೌಟ (Captain Brijesh Chowta) ಅವರು ಕೇಳಿದ್ದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಚಿವರು, ಸಮಗ್ರ ಶಿಕ್ಷಾ ಯೋಜನೆಡಿ ರಾಜ್ಯ ಸರ್ಕಾರದ ಶಿಫಾರಸ್ಸಿನ ಮೇಲೆ ಆದ್ಯತೆಯಾಗಿ ಶಾಲೆಗಳನ್ನು ದುರಸ್ತಿಗೊಳಿಸುವ (Repair of Schools) ಕಾರ್ಯ ನಡೆಯುತ್ತಿದೆ. ಪ್ರಬಂಧ್ ಪೋರ್ಟಲ್ ಪ್ರಕಾರ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಮಗ್ರ ಶಿಕ್ಷಾ ಯೋಜನೆಯಡಿ ಕಳೆದ ಎರಡು ಸಾಲಿನಲ್ಲಿ 11 ಶಾಲೆಗಳನ್ನು ದೊಡ್ಡ ಮಟ್ಟದಲ್ಲಿ ದುರಸ್ತಿಗೊಳಿಸಲು ಅನುಮೋದನೆ ನೀಡಲಾಗಿದೆ. ಕೇಂದ್ರದ ಈ ಸಮಗ್ರ ಶಿಕ್ಷಾ ಯೋಜನೆಯು ರಿಪೇರಿಗೆ ಕಾಯುತ್ತಿರುವ ಶಾಲೆಗಳನ್ನು ಆದ್ಯತೆ ಮೇರೆಗೆ ದುರಸ್ತಿಗೊಳಿಸುವುದಕ್ಕೆ ರಾಜ್ಯ ಸರ್ಕಾರಗಳಿಗೆ ಹೆಚ್ಚಿನ ಅನುಕೂಲ ಕಲ್ಪಿಸುತ್ತದೆ. ಆ ಮೂಲಕ, ನೈಸರ್ಗಿಕ ವಿಕೋಪದಿಂದ ಹಾನಿಗೊಳಗಾಗುವ ಶಾಲೆಗಳನ್ನು ಯಥಾಸ್ಥಿತಿಗೆ ತರುವುದಕ್ಕೆ ಕೇಂದ್ರ ಸರ್ಕಾರದ ಸೂಕ್ತ ಆರ್ಥಿಕ ನೆರವು ಪಡೆದುಕೊಳ್ಳಬಹುದು ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಮುಂಬೈಯಲ್ಲಿ ರನ್‌ವೇಯಿಂದ ಜಾರಿದ ಏರ್ ಇಂಡಿಯಾ ವಿಮಾನ – ತಪ್ಪಿದ ಭಾರೀ ಅವಘಡ

    ಮಳೆ ಪೀಡಿತ ಪ್ರದೇಶಗಳ ಶಾಲೆಗಳನ್ನು ತುರ್ತಾಗಿ ದುರಸ್ತಿಗೊಳಿಸಿ ಅವುಗಳಿಗೆ ಸೂಕ್ತ ಮೂಲಸೌಕರ್ಯ ಮರುಸ್ಥಾಪಿಸುವುದಕ್ಕೆ ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಮನ್ವಯದಲ್ಲಿ ಪ್ರತ್ಯೇಕ ಮಾರ್ಗಸೂಚಿ ಹಾಗೂ ಸಲಹೆಗಳನ್ನು ಬಿಡುಗಡೆಗೊಳಿಸಿದೆ. ಈ ನಡುವೆ ಕೇಂದ್ರ ಸರ್ಕಾರವು ನೈಸರ್ಗಿಕ ವಿಪತ್ತು ನಿರ್ವಹಣಾ ನಿಧಿಯಡಿ ದಕ್ಷಿಣ ಕನ್ನಡದಲ್ಲಿ 2024-25ನೇ ಸಾಲಿನಲ್ಲಿ 240 ಹಾಗೂ ರಾಜ್ಯ ಸರ್ಕಾರದ ನಿಧಿಯಡಿ 312 ಶಾಲಾ ಕಟ್ಟಡಗಳ ದುರಸ್ತಿ ಕಾರ್ಯ ಕೈಗೊಂಡಿರುವುದಾಗಿ ಸಚಿವ ಚೌಧರಿ ವಿವರಿಸಿದರು. ಇದನ್ನೂ ಓದಿ: ಕನಕಪುರದ 250ಕ್ಕೂ ಹೆಚ್ಚು ಹಳ್ಳಿಗಳಿಗೆ ಕಾವೇರಿ ಕುಡಿಯುವ ನೀರು ಪೂರೈಕೆ: ಡಿಕೆಶಿ

    ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಸಂಸದ ಕ್ಯಾ. ಚೌಟ ಅವರು ದಕ್ಷಿಣ ಕನ್ನಡದಲ್ಲಿ ಅತಿವೃಷ್ಟಿಗೆ 290ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳ ಮೂಲಸೌಕರ್ಯಕ್ಕೆ ಹಾನಿಯಾಗಿದ್ದು, ಅವುಗಳ ದುರಸ್ತಿ ಕಾರ್ಯಕ್ಕೆ ತುರ್ತಾಗಿ ಕೇಂದ್ರ ಸರ್ಕಾರದ ನೆರವು ಕೋರಿದ್ದರು. ದಕ್ಷಿಣ ಕನ್ನಡವು ಸೇರಿದಂತೆ ಕರಾವಳಿ ಭಾಗದಲ್ಲಿ ಮಳೆ ಪೀಡಿತ ಪ್ರದೇಶಗಳಲ್ಲಿ ಹಾನಿಗೊಂಡಿರುವ ಶಾಲೆಗಳ ರಿಪೇರಿ ಹಾಗೂ ಅಗತ್ಯ ಮೂಲಸೌಕರ್ಯ ಒದಗಿಸುವುದಕ್ಕೆ ಏನೆಲ್ಲ ತುರ್ತು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬುದರ ಬಗ್ಗೆ ಚುಕ್ಕೆಗುರುತಿಲ್ಲದ ಪ್ರಶ್ನೆಯಡಿ ಮಾಹಿತಿ ಕೋರಿದ್ದರು. ಇದನ್ನೂ ಓದಿ: CBSE ಯಿಂದ ಸೇಫ್ಟಿ ಗೈಡ್‌ಲೈನ್ಸ್ ‌- ಶೌಚಾಲಯ ಹೊರತುಪಡಿಸಿ ಶಾಲೆಯ ಉಳಿದೆಲ್ಲಕಡೆ ಆಡಿಯೋವಿಶುವಲ್ ಸಿಸಿಟಿವಿ ಕಡ್ಡಾಯ

    ಈ ಬಗ್ಗೆ ಪ್ರತಿಕ್ರಿಯಿಸಿರುವ ಕ್ಯಾ. ಚೌಟ ಅವರು, ಮಳೆ ಪೀಡಿತ ಪ್ರದೇಶಗಳ ಶಾಲೆಗಳನ್ನು ಸಮಗ್ರ ಶಿಕ್ಷಾ ಯೋಜನೆಯಡಿ ರಿಪೇರಿಗೆ ಆದ್ಯತೆಯಡಿ ಅನುಮೋದನೆ ನೀಡಿರುವುದು ಸ್ವಾಗತಾರ್ಹ ಕ್ರಮ. ಆರಂಭಿಕ ಹಂತದಲ್ಲಿ ಜಿಲ್ಲೆಯ 11 ಶಾಲೆಗಳ ದುರಸ್ತಿಗೆ ಅನುಮೋದನೆ ಸಿಕ್ಕಿದೆ. ಮುಂದೆ ಮಳೆಯಿಂದ ಹಾನಿಗೊಳಗಾಗಿರುವ ದಕ್ಷಿಣ ಕನ್ನಡದ 290 ಶಾಲೆಗಳ ದುರಸ್ತಿ ಕಾರ್ಯಕ್ಕೂ ಕೇಂದ್ರ ಸರ್ಕಾರದಿಂದ ಹೆಚ್ಚಿನ ಆರ್ಥಿಕ ನೆರವು ಪಡೆಯುವುದಕ್ಕೆ ಎಲ್ಲ ರೀತಿಯ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಸೋಪ್ ಬಾಕ್ಸ್‌ಲ್ಲಿ 14.69 ಕೋಟಿ ಮೌಲ್ಯದ ಕೊಕೇನ್ ಸ್ಮಗ್ಲಿಂಗ್ – ಇಬ್ಬರು ಮಹಿಳೆಯರು ಅರೆಸ್ಟ್

  • ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ – 2 ತಾಲೂಕುಗಳ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

    ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ – 2 ತಾಲೂಕುಗಳ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಭಾರೀ ಮಳೆಯಾಗುತ್ತಿದ್ದು (Rain), ಮಂಗಳೂರಿನ (Mangaluru) ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

    ಅಂಗನವಾಡಿಯಿಂದ ದ್ವಿತೀಯ ಪಿಯುಸಿವರೆಗಿನ ಸರ್ಕಾರಿ, ಅನುದಾನಿತ, ಖಾಸಗಿ ಶಾಲಾ, ಕಾಲೇಜುಗಳಿಗೆ ಇಂದು (ಜು.19) ರಜೆ ಘೋಷಣೆ ಮಾಡಲಾಗಿದೆ.

    ಬಂಟ್ವಾಳ (Bantwal) ತಾಲೂಕಿನ ಪ್ರೌಢ ಶಾಲೆಯವರೆಗೆ ರಜೆ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ಮುಂದುವರಿದ ಮಳೆ: ಮಣ್ಣಗುಂಡಿ ಬಳಿ ಗುಡ್ಡಕುಸಿತ, ಬೆಂ-ಮಂ ರಾ.ಹೆದ್ದಾರಿ ಬಂದ್

  • ಶಾಲಾ ವಾಹನ ಏರಲು ರಸ್ತೆಗೆ ಓಡಿದ ಬಾಲಕನಿಗೆ ಬಿಎಂಟಿಸಿ ಬಸ್ ಡಿಕ್ಕಿ – ವಿದ್ಯಾರ್ಥಿ ಸ್ಥಿತಿ ಗಂಭೀರ

    ಶಾಲಾ ವಾಹನ ಏರಲು ರಸ್ತೆಗೆ ಓಡಿದ ಬಾಲಕನಿಗೆ ಬಿಎಂಟಿಸಿ ಬಸ್ ಡಿಕ್ಕಿ – ವಿದ್ಯಾರ್ಥಿ ಸ್ಥಿತಿ ಗಂಭೀರ

    ಬೆಂಗಳೂರು: ಶಾಲಾ ವಾಹನ ಏರಲು ರಸ್ತೆಗೆ ಓಡಿದ ಬಾಲಕನಿಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡ ಘಟನೆ ಜಿಗಣಿಯಲ್ಲಿ ನಡೆದಿದೆ.

    ರಸ್ತೆಯ ಇನ್ನೊಂದು ಬದಿ ಇದ್ದ ಶಾಲಾ ವಾಹನ ಏರಲು ಬಾಲಕ ರಸ್ತೆ ದಾಟಲು ಮುಂದಾಗಿದ್ದಾನೆ. ಈ ವೇಳೆ ವೇಗವಾಗಿ ಬಂದ ಬಿಎಂಟಿಸಿ ಬಸ್ ಆತನಿಗೆ ಡಿಕ್ಕಿಯಾಗಿದೆ. ಇದರಿಂದ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಇದನ್ನೂ ಓದಿ: ದೆಹಲಿಯಲ್ಲಿ ಡಬಲ್ ಮರ್ಡರ್ – ಮನೆ ಕೆಲಸದವನಿಂದಲೇ ಕೃತ್ಯ

    ಸ್ಕೂಲ್ ಬಸ್ ಚಾಲಕ, ಬಾಲಕ ಓಡಿ ಬರುತ್ತಿರುವುದನ್ನು ನೋಡಿದರೂ ಬಸ್ ನಿಲ್ಲಿಸದೇ ಮುಂದೆ ತೆರಳಿದ್ದಾನೆ. ಇದರಿಂದ ಬಾಲಕ ಆತುರದಿಂದ ರಸ್ತೆ ದಾಟಲು ಮುಂದಾಗಿದ್ದಾನೆ ಎನ್ನಲಾಗುತ್ತಿದೆ.

    ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ. ಇದನ್ನೂ ಓದಿ: ಕಾರವಾರ| ಕೊಡಸಳ್ಳಿ ವಿದ್ಯುತ್‌ಗಾರದ ಬಳಿ ಗುಡ್ಡ ಕುಸಿತ; ರಸ್ತೆ ಸಂಚಾರ ಬಂದ್

  • ಚಾ.ನಗರ ಜಿಲ್ಲೆಯಲ್ಲಿ ಇದೆಂಥಾ ಘಟನೆ?- ಮುಖ್ಯ ಅಡುಗೆ ಸಿಬ್ಬಂದಿಯಾಗಿ ದಲಿತ ಮಹಿಳೆ ನೇಮಕಕ್ಕೆ ಅಸಮಾಧಾನ

    ಚಾ.ನಗರ ಜಿಲ್ಲೆಯಲ್ಲಿ ಇದೆಂಥಾ ಘಟನೆ?- ಮುಖ್ಯ ಅಡುಗೆ ಸಿಬ್ಬಂದಿಯಾಗಿ ದಲಿತ ಮಹಿಳೆ ನೇಮಕಕ್ಕೆ ಅಸಮಾಧಾನ

    – ಮಕ್ಕಳಿಗೆ ಟಿಸಿ ಕೊಡಿಸಿ ಬೇರೆಡೆ ಸೇರಿಸುತ್ತಿರುವ ಪೋಷಕರು
    – ಆ ಶಾಲೆಯಲ್ಲೀಗ ಒಬ್ಬನೇ ವಿದ್ಯಾರ್ಥಿ

    ಚಾಮರಾಜನಗರ: ಜಿಲ್ಲೆಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಮುಖ್ಯ ಅಡುಗೆ ಸಿಬ್ಬಂದಿಯಾಗಿ ದಲಿತ ಮಹಿಳೆ (Dalit Women) ನೇಮಕಕ್ಕೆ ಅಸಮಾಧಾನ ವ್ಯಕ್ತವಾಗಿದೆ.

    ಹೊಮ್ಮ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಪೋಷಕರು ತಮ್ಮ ಮಕ್ಕಳ ಟಿಸಿ ಪಡೆದು ಬೇರೆ ಬೇರೆ ಶಾಲೆಗಳಿಗೆ ಸೇರಿಸುತ್ತಿದ್ದಾರೆ. ಪರಿಣಾಮವಾಗಿ ಶಾಲೆ ಮುಚ್ಚುವ ಹಂತಕ್ಕೆ ತಲುಪಿದೆ. ಇದನ್ನೂ ಓದಿ: `ಕೈ’ ಕಂಪನ ಸಂಕಟ: 2 ವರ್ಷ ಗ್ಯಾರಂಟಿ ಪಿರಿಯೆಡ್, ವೇಯ್ಟಿಂಗ್ ಪಿರಿಯೆಡ್ ಮುಗಿತು, ಇನ್ನೇನಿದ್ರೂ ಫೈಟಿಂಗ್ ಪಿರಿಯೆಡ್!

    ಅಡುಗೆ ಸಿಬ್ಬಂದಿ ದಲಿತ ಮಹಿಳೆ ಎಂಬ ಕಾರಣಕ್ಕೆ ಮಕ್ಕಳ ಟಿಸಿ ಪಡೆದು ಬೇರೆಡೆ ಸೇರಿಸುತ್ತಿದ್ದಾರೆಂದು ಸ್ಥಳೀಯರು ಆರೋಪಿಸಿದ್ದಾರೆ. ಆದರೆ, ಈ ಬಗ್ಗೆ ಪ್ರತಿಕ್ರಿಯಿಸಲು ಪೋಷಕರ ನಿರಾಕರಿಸಿದ್ದಾರೆ. ಸದ್ಯ ಶಾಲೆಗೆ ಒಬ್ಬ ವಿದ್ಯಾರ್ಥಿ ಮಾತ್ರ ದಾಖಲಾಗಿದ್ದಾನೆ.

    2024-25 ನೇ ಸಾಲಿನಲ್ಲಿ ಶಾಲೆಯಲ್ಲಿ 22 ವಿದ್ಯಾರ್ಥಿಗಳಿದ್ದರು. ಈಗಾಗಲೇ 12 ಮಕ್ಕಳು ಟಿಸಿ ಪಡೆದಿದ್ದಾರೆ. ಉಳಿದವರಿಂದಲೂ ಟಿಸಿ ಪಡೆಯಲು ಅರ್ಜಿ ಸಲ್ಲಿಕೆಯಾಗಿದೆ. ವಿದ್ಯಾರ್ಥಿಗಳಿಲ್ಲದೆ ಶಾಲೆ ಬಿಕೋ ಎನ್ನುತ್ತಿದೆ. ಇದನ್ನೂ ಓದಿ: ಮುಂಗಾರು ಚುರುಕು – ಕರಾವಳಿಗೆ ಮೂರು ದಿನ ರೆಡ್ ಅಲರ್ಟ್

    ಈ ಶಾಲೆಯಲ್ಲೀಗ ಕೇವಲ ಒಬ್ಬ ವಿದ್ಯಾರ್ಥಿ, ಇಬ್ಬರು ಶಿಕ್ಷಕರು ಇದ್ದಾರೆ. ಆ ಒಬ್ಬ ವಿದ್ಯಾರ್ಥಿಯನ್ನೂ ಬೇರೆಡೆ ಸೇರಿಸಲು ಪೋಷಕರು ಟಿಸಿ ಕೇಳಿದ್ದಾರೆ. ಹಿಂದೆ ಶಿಕ್ಷಕರು ಸರಿಯಾಗಿ ಪಾಠಪ್ರವಚನ ಮಾಡುತ್ತಿಲ್ಲ ಎಂದು ಪೋಷಕರು ಪ್ರತಿಭಟಿಸಿದ್ದರು. ಆ ವೇಳೆ ಶಿಕ್ಷಣ ಇಲಾಖೆಯು ಶಿಕ್ಷಕರನ್ನು ಬೇರೆಡೆಗೆ ಸ್ಥಳಾಂತರಿಸಿತ್ತು. ಇದೀಗ ಶಾಲೆಯಲ್ಲಿ ಮತ್ತೊಂದು ಸಮಸ್ಯೆ ಉದ್ಭವವಾಗಿದೆ.

  • 24 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ಸಭೆಯಲ್ಲಿ ಶಿಕ್ಷಕನ ವಿರುದ್ಧ ತಿರುಗಿಬಿದ್ದ ಬಾಲಕಿಯರು

    24 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ಸಭೆಯಲ್ಲಿ ಶಿಕ್ಷಕನ ವಿರುದ್ಧ ತಿರುಗಿಬಿದ್ದ ಬಾಲಕಿಯರು

    ಶಿಮ್ಲಾ: ಹಿಮಾಚಲ ಪ್ರದೇಶದ (Himachal Pradesh) ಸಿರ್ಮೌರ್ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ (School) 24 ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿಕ್ಷಕನೊಬ್ಬನನ್ನು (Teacher) ಪೊಲೀಸರು ಬಂಧಿಸಿದ್ದಾರೆ.

    ಶಾಲೆಯಲ್ಲಿ ನಡೆದ ಲೈಂಗಿಕ ಕಿರುಕುಳ ಸಮಿತಿಯ ಸಭೆಯಲ್ಲಿ ವಿದ್ಯಾರ್ಥಿಗಳು ಗಣಿತ ಶಿಕ್ಷಕನ ವಿರುದ್ಧ ಲಿಖಿತ ದೂರು ನೀಡಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಬಂಧಿತನ ವಿರುದ್ಧ ಪೋಕ್ಸೋ ಕೇಸ್‌ ದಾಖಲಾಗಿದೆ. ಆರೋಪಿಯನ್ನು ಭಾನುವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಇದನ್ನೂ ಓದಿ: ಪಬ್‌ನಲ್ಲಿ ಸಹೋದ್ಯೋಗಿ ಮೇಲೆ ಲೈಂಗಿಕ ದೌರ್ಜನ್ಯ – ಟೆಕ್ಕಿ ಅರೆಸ್ಟ್‌

    ಶಾಲೆಯಲ್ಲಿ ‘ಶಿಕ್ಷಾ ಸಂವಾದ’ ಕಾರ್ಯಕ್ರಮದ ಸಂದರ್ಭದಲ್ಲಿ, 8, 9 ಹಾಗೂ 10ನೇ ತರಗತಿಯ ವಿದ್ಯಾರ್ಥಿನಿಯರು ಶಿಕ್ಷಕನ ಕಿರುಕುಳದ ಬಗ್ಗೆ ಮುಖ್ಯ ಶಿಕ್ಷಕರಿಗೆ ದೂರು ನೀಡಿದ್ದರು. ದೂರಿನಲ್ಲಿ ಶಿಕ್ಷಕ ತಮ್ಮನ್ನು ಅನುಚಿತವಾಗಿ ಮುಟ್ಟಿದ್ದಾನೆ ಎಂದು ವಿದ್ಯಾರ್ಥಿನಿಯರು ಉಲ್ಲೇಖಿಸಿದ್ದಾರೆ.

    ಈ ವಿಚಾರ ಬಹಿರಂಗವಾಗುತ್ತಿದ್ದಂತೆ ಶಾಲೆಯ ಬಳಿ ಪೋಷಕರು ಜಮಾಯಿಸಿ, ಶಿಕ್ಷಕನ ವಿರುದ್ಧ ಘೋಷಣೆ ಕೂಗಿದ್ದಾರೆ. ಆತನ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಆರೋಪಿ ಶಿಕ್ಷಕನನ್ನು ಅಮಾನತು ಮಾಡಲಾಗಿದೆ.

    ಸಿರ್ಮೌರ್‌ನ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಯೋಗೇಶ್ ರೋಲ್ಟಾ ಪ್ರತಿಕ್ರಿಯಿಸಿ, ಈ ಪ್ರಕರಣ ಗಂಭೀರವಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಸ್ಥಳ ಪರಿಶೀಲನೆ ನಡೆಸಿ, ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಓವರ್ ಟೇಕ್ ಮಾಡಿದ್ದಕ್ಕೆ ಹಲ್ಲೆ ಆರೋಪ – ಅನಂತ್ ಕುಮಾರ್ ಹೆಗಡೆ ಸೇರಿ ಮೂವರ ವಿರುದ್ಧ ಎಫ್‌ಐಆರ್

  • Gadag | ಶಾಲಾ ಮೇಲ್ಛಾವಣಿ ಪದರ ಕುಸಿತ – ಓರ್ವ ಶಿಕ್ಷಕ, ಐವರು ವಿದ್ಯಾರ್ಥಿಗಳಿಗೆ ಗಾಯ

    Gadag | ಶಾಲಾ ಮೇಲ್ಛಾವಣಿ ಪದರ ಕುಸಿತ – ಓರ್ವ ಶಿಕ್ಷಕ, ಐವರು ವಿದ್ಯಾರ್ಥಿಗಳಿಗೆ ಗಾಯ

    ಗದಗ: ಶಾಲೆಯ ಮೇಲ್ಛಾವಣಿ (Roof) ಪದರ ಕುಸಿದು ಐವರು ವಿದ್ಯಾರ್ಥಿಗಳು ಹಾಗೂ ಓರ್ವ ಶಿಕ್ಷಕರು ಗಾಯಗೊಂಡ ಘಟನೆ ಗದಗ (Gadag) ಜಿಲ್ಲೆ ಗಜೇಂದ್ರಗಡ ತಾಲೂಕಿನ ಚಿಲಝೆರಿ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ದುರಂತ ನಡೆದಿದೆ. 6ನೇ ತರಗತಿ ಕೊಠಡಿ ಮೇಲ್ಛಾವಣಿ ಕಾಂಕ್ರೀಟ್ ಪದರ ಏಕಾಏಕಿ ಕುಸಿದು ಬಿದ್ದಿದೆ. ಘಟನೆಯಲ್ಲಿ ಎಮ್.ಡಿ ಒಂಟಿ ಎಂಬ ಶಿಕ್ಷಕರ ತಲೆಗೆ ಗಂಭೀರ ಗಾಯಗಳಾಗಿವೆ. ಮಕ್ಕಳ ತಲೆ, ಕೈ, ಕಾಲು, ಮುಖಕ್ಕೆ ಗಾಯಗಳಾಗಿವೆ. ಗಾಯಾಳು ಮಕ್ಕಳು ಹಾಗೂ ಶಿಕ್ಷಕರನ್ನು ಕೂಡಲೇ ಗಜೇಂದ್ರಗಡ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸ್ಥಳಕ್ಕೆ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದನ್ನೂ ಓದಿ: ಕಾಂಗ್ರೆಸ್‌ಗೆ ಕಮಿಷನ್ ಬಿಸಿ, ಹೈಕಮಾಂಡ್‌ಗೆ ತಲೆನೋವು – ಸಿಎಂ ಮಧ್ಯಪ್ರವೇಶ?

    ಶಿಥಿಲಗೊಂಡ ಹಳೆಯ ಕೊಠಡಿಯಲ್ಲಿ ಮಕ್ಕಳು ಶಿಕ್ಷಣ ಪಡೆಯುವ ಅನಿವಾರ್ಯತೆ ಎದುರಾಗಿತ್ತು. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು, ಜನ ಪ್ರತಿನಿಧಿಗಳ ಗಮನಕ್ಕೆ ತರಲಾಗಿದೆ. ಆದರೂ ಪ್ರಯೋಜನವಾಗಿಲ್ಲ ಎಂದು ಶಿಕ್ಷಣ ಇಲಾಖೆ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಘಟನೆ ಸಂಬಂಧ ಗದಗ ಜಿಲ್ಲೆಯ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್ ಲೂಟಿಕೋರರ ಸರ್ಕಾರ, ಮಾನ ಮರ್ಯಾದೆ ಇದ್ದರೆ ಸಿಎಂ, ಡಿಕೆಶಿ ರಾಜೀನಾಮೆ ಕೊಡಲಿ: ಛಲವಾದಿ ನಾರಾಯಣಸ್ವಾಮಿ

  • SSLC ಫಲಿತಾಂಶ ಕಡಿಮೆ ಬಂದ್ರೆ  ಶಿಕ್ಷಕರ ವಾರ್ಷಿಕ ವೇತನ ಬಡ್ತಿಗೆ ತಡೆ – ಶಾಲೆಯ ಅನುದಾನ ಬಂದ್‌

    SSLC ಫಲಿತಾಂಶ ಕಡಿಮೆ ಬಂದ್ರೆ ಶಿಕ್ಷಕರ ವಾರ್ಷಿಕ ವೇತನ ಬಡ್ತಿಗೆ ತಡೆ – ಶಾಲೆಯ ಅನುದಾನ ಬಂದ್‌

    – ಸರ್ಕಾರಿ, ಅನುದಾನಿತ ಶಾಲೆಗಳ ಮೇಲೆ ಶಿಕ್ಷಣ ಇಲಾಖೆ ಕ್ರಮ

    ಬೆಂಗಳೂರು : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ (SSLC Exam) ಕಡಿಮೆ ಫಲಿತಾಂಶ ಪಡೆದಿರುವ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮೇಲೆ ಕ್ರಮಕ್ಕೆ ಶಿಕ್ಷಣ ಇಲಾಖೆ (Education Department) ಮುಂದಾಗಿದೆ. ಈ ವರ್ಷದ ಫಲಿತಾಂಶದ ಬಗ್ಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಮತ್ತು ಮುಂದಿನ ವರ್ಷ 75% ಫಲಿತಾಂಶದ ಟಾರ್ಗೆಟ್ ನೀಡಿದ ಬಳಿಕ ಕಡಿಮೆ ಫಲಿತಾಂಶದ ಶಾಲೆಗಳ ಮೇಲೆ ಶಿಕ್ಷಣ ಇಲಾಖೆ ಕ್ರಮಕ್ಕೆ ಮುಂದಾಗಿದೆ.

    60%ಕ್ಕಿಂತ ಕಡಿಮೆ ಫಲಿತಾಂಶ ಬಂದಿರೋ ಸರ್ಕಾರಿ ಶಾಲಾ ಮುಖ್ಯ ಶಿಕ್ಷಕರಿಗೆ ಇಲಾಖೆ ನೋಟಿಸ್‌ ಜಾರಿ ಮಾಡಿದೆ. ಎಲ್ಲಾ ಸೌಲಭ್ಯ ನೀಡಿದರೂ ಫಲಿತಾಂಶ ಕಡಿಮೆ ಬಂದಿದೆ. ನಿಮ್ಮ ಮೇಲೆ ಯಾಕೆ ಕ್ರಮ ತೆಗೆದುಕೊಳ್ಳಬಾರದು ಅಂತ ನೋಟಿಸ್‌ ಜಾರಿ ಮಾಡಿದೆ.

    ಫಲಿತಾಂಶ ಉತ್ತಮಗೊಳಿಸುವ ನಿಟ್ಟಿನಲ್ಲಿ ನೀವು ಕ್ರಮ ತೆಗೆದುಕೊಂಡಿಲ್ಲ. ಇದು ಕರ್ತವ್ಯ ಲೋಪ ಅಲ್ಲವೇ ಅಂತ ನೋಟಿಸ್‌ನಲ್ಲಿ ಉಲ್ಲೇಖ ಮಾಡಿದ್ದು ಉತ್ತರ ಕೊಡುವಂತೆ ಶಿಕ್ಷಣ ‌ಇಲಾಖೆ ಸೂಚನೆ ನೀಡಿದೆ. ನೋಟಿಸ್‌ಗೆ ಉತ್ತರ ಕೊಟ್ಟ ಬಳಿಕ ಅಂತಹ ಶಾಲಾ ಮುಖ್ಯ ಶಿಕ್ಷಕರ ಕ್ರಮ ತೆಗೆದುಕೊಳ್ಳುವ ಎಚ್ಚರಿಕೆಯನ್ನು ನೀಡಲಾಗಿದೆ.  ಇದನ್ನೂ ಓದಿ: ವಾರದಲ್ಲಿ 2 ದಿನ ರಜೆ – ಕಾರ್ಮಿಕರ ಕೆಲಸದ ಅವಧಿ 10 ಗಂಟೆಗೆ ಹೆಚ್ಚಳ?

    ಖಾಸಗಿ ಅನುದಾನಿತ ಶಾಲೆಗಳ ಮೇಲೆ ಕಠಿಣ ಕ್ರಮಕ್ಕೆ ಮುಂದಾಗಿದೆ. 60% ಕ್ಕಿಂತ ಕಡಿಮೆ ಫಲಿತಾಂಶ ಬಂದಿರುವ ಶಾಲಾ ಶಿಕ್ಷಕರು, ಸಂಸ್ಥೆಗಳ ಅನುದಾನವನ್ನೇ ಕಡಿತ ಮಾಡುವ ಆದೇಶವನ್ನು ಶಿಕ್ಷಣ ‌ಇಲಾಖೆ ಮಾಡಿದೆ. ವಿಷಯವಾರು ಫಲಿತಾಂಶ ನೋಡಿ ಶಿಕ್ಷಕರ ವಾರ್ಷಿಕ ಬಡ್ತಿ, ವೇತನಾನುದಾನ ತಡೆಗೆ ಸರ್ಕಾರ ನಿರ್ಧಾರ ಮಾಡಿದೆ. ಬಿಇಓಗಳು ಎಲ್ಲವನ್ನೂ ಪರಿಶೀಲಿಸಿ ಆಯುಕ್ತರಿಗೆ ವರದಿ ನೀಡಬೇಕು ಎಂದು ಸೂಚಿಸಲಾಗಿದೆ.

    ಶಾಲೆಗಳ ಮೇಲೆ ಏನ್ ಕ್ರಮ?
    60%ಕ್ಕಿಂತ ಕಡಿಮೆ ಫಲಿತಾಂಶ ಬಂದಿರೋ ಅನುದಾನಿತ ಶಾಲೆಗಳ ವಿಷಯವಾರು ಶಿಕ್ಷಕರ ವಾರ್ಷಿಕ ಬಡ್ತಿ ತಡೆಹಿಡಿಯುವುದು.

    ವಿಷಯವಾರು ನಿರಂತರವಾಗಿ 3 ವರ್ಷ 60% ಕ್ಕಿಂತ ಕಡಿಮೆ ಫಲಿತಾಂಶ ಬಂದಿದ್ದರೆ ಅಂತ ಶಿಕ್ಷಕರ ವೇತನಾನುದಾನ ತಡೆಹಿಡಿಯಲಾಗುತ್ತದೆ.

    ಒಂದು ಶಾಲೆಯೂ ಸತತ 5 ವರ್ಷಗಳಲ್ಲಿ 50% ಫಲಿತಾಂಶ ಬಾರದಿದ್ದರೆ ಶಾಲೆಯ ಅನುದಾನವೇ ತಡೆಹಿಡಿಯುವುದು.