Tag: schools-colleges

  • ಕಾಲೇಜುಗಳಿಗೆ ರಜೆ ಘೋಷಣೆ ಸುಳ್ಳು ಸುತ್ತೋಲೆ ಸೃಷ್ಟಿಸಿದವರ ವಿರುದ್ಧ ಕ್ರಿಮಿನಲ್ ಕೇಸ್- ಡಿಸಿಎಂ

    ಕಾಲೇಜುಗಳಿಗೆ ರಜೆ ಘೋಷಣೆ ಸುಳ್ಳು ಸುತ್ತೋಲೆ ಸೃಷ್ಟಿಸಿದವರ ವಿರುದ್ಧ ಕ್ರಿಮಿನಲ್ ಕೇಸ್- ಡಿಸಿಎಂ

    ಹುಬ್ಬಳ್ಳಿ: ಕೋವಿಡ್-19 ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ (ಸೋಮವಾರ) ಯಿಂದ 15 ದಿನಗಳ ಕಾಲ ಸರ್ಕಾರಿ-ಅನುದಾನಿತ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂಬ ಸುಳ್ಳುಸುದ್ದಿ ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿದೆ. ಈ ಸುಳ್ಳು ಸುದ್ದಿ ಹರಡಿದವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಉನ್ನತ ಶಿಕ್ಷಣ ಸಚಿವ ಮತ್ತು ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವತ್ಥನಾರಾಯಣ ಅವರು ತಮ್ಮ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    ಹುಬ್ಬಳ್ಳಿಯಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಸರ್ಕಾರ ಯಾವುದೇ ಕಾರಣಕ್ಕೂ ಕಾಲೇಜುಗಳಿಗೆ ರಜೆ ನೀಡುವ ನಿರ್ಧಾರ ಕೈಗೊಂಡಿಲ್ಲ. ಯಾರೋ ಕಿಡಿಗೇಡಿಗಳು ನಕಲಿ ಸುತ್ತೋಲೆಯನ್ನು ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ. ಅದು ವೈರಲ್ ಆಗಿದೆ. ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ತೀವ್ರ ಗೊಂದಲವಾಗಿದೆ. ಅದು ಸರ್ಕಾರದ ಹೆಸರಿನಲ್ಲಿ ನಕಲಿ ಸುತ್ತೋಲೆ ಸೃಷ್ಟಿಸುವುದು ದೊಡ್ಡ ಅಪರಾಧ. ಹೀಗಾಗಿ ಸೈಬರ್ ಪೋಲೀಸರಿಗೆ ತಕ್ಷಣ ಕಿಡಿಗೇಡಿಗಳನ್ನು ಪತ್ತೆ ಹಚ್ಚುವಂತೆ ಸೂಚಿಲಾಗಿದೆ ಎಂದು ಡಿಸಿಎಂ ತಿಳಿಸಿದ್ದಾರೆ.

    ಮಕ್ಕಳ ಭವಿಷ್ಯದ ಜೊತೆ ಯಾರೂ ಚೆಲ್ಲಾಟ ಆಡಬಾರದು. ಮೊದಲೇ ಕೋವಿಡ್ ಕಾರಣಕ್ಕೆ ಎಲ್ಲರಿಗೂ ಆತಂಕ ಇದೆ. ಶೈಕ್ಷಣಿಕ ವ್ಯವಸ್ಥೆ ಹಳಿ ತಪ್ಪದಂತೆ ಸರ್ಕಾರ ಎಲ್ಲ ಕ್ರಮಗಳನ್ನೂ ಕೈಗೊಳ್ಳುತ್ತಿದ್ದರೂ ಕೆಲವರು ಇಂಥ ಕೃತ್ಯ ಎಸಗಿದ್ದಾರೆ. ಅಂಥವರಿಗೆ ತಕ್ಕ ಶಾಸ್ತಿ ಕಾದಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

  • ಇಂದು ಕೆಆರ್‌ಪೇಟೆ ಬಂದ್ – ಶಾಲಾ ಕಾಲೇಜುಗಳಿಗೆ ರಜೆ

    ಇಂದು ಕೆಆರ್‌ಪೇಟೆ ಬಂದ್ – ಶಾಲಾ ಕಾಲೇಜುಗಳಿಗೆ ರಜೆ

    ಮಂಡ್ಯ: ಮುಸ್ಲಿಂ ಯುವಕರನ್ನು ಬಂಧನ ಮಾಡಿ ಜಾಮೀನಿನ ಮೇಲೆ ಬಿಡುಗಡೆಗೊಳಿಸಿರುವುದನ್ನು ಖಂಡಿಸಿ ಇಂದು ಹಿಂದೂ ಪರ ಮತ್ತು ಕನ್ನಡ ಪರ ಸಂಘಟನೆಗಳು ಕೆಆರ್‌ಪೇಟೆ ಬಂದ್‍ಗೆ ಕರೆ ನೀಡಿದ್ದು, ಇತ್ತ ಶಾಲಾ-ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ.

    ಅಕ್ಟೋಬರ್ 27 ರಂದು ಮಂಡ್ಯ ಜಿಲ್ಲೆಯ ಕೆಆರ್‌ಪೇಟೆ ತಾಲೂಕಿನ ಆಲಂಬಾಡಿಕಾವಲು ಬಳಿ ಮುಸ್ಲಿಂ ಯುವಕರು ಅನುಮಾನಾಸ್ಪದವಾಗಿ ಪರೇಡ್ ನಡೆಸಿದರು. ಈ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿ 16 ಮಂದಿ ಮುಸ್ಲಿಂ ಯುವಕರನ್ನು ಬಂಧಿಸಿದ್ದರು. ನಂತರ ಅವರು ಪಾಪ್ಯುಲ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‍ಐ) ಸಂಘಟನೆಯ ಕಾರ್ಯಕರ್ತರು ಎಂದು ತಿಳಿದು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು.

    ಇದನ್ನು ಖಂಡಿಸಿ ಇಂದು ಕೆಆರ್‌ಪೇಟೆ ಬಂದ್‍ಗೆ ಸಂಘಟನೆಗಳು ಕರೆ ನೀಡಿವೆ. ಮೂರು ದಿನಗಳ ಹಿಂದೆ ಬಂಧನ ಮಾಡಿ ಬಿಡುಗಡೆ ಮಾಡಿರುವ ಯುವಕರು ದೇಶ ವಿರೋಧಿ ಚಟುವಟಿಕೆಗಳನ್ನು ನಡೆಸಿದ್ದರು. ಆದರೂ ಪೊಲೀಸರು ಯಾರೋದ್ದೋ ಒತ್ತಡಕ್ಕೆ ಮಣಿದು ಯುವಕರನ್ನು ಬಿಡುಗಡೆಗೊಳಿಸಿದ್ದಾರೆ. ಹೀಗಾಗಿ ಬಿಡುಗಡೆ ಮಾಡಿರುವ ಯುವಕರನ್ನು ಬಂಧಿಸಿ, ಕೆಆರ್‌ಪೇಟೆ ಭಾಗದಲ್ಲಿ ನಡೆಯುತ್ತಿರುವ ದೇಶ ವಿರೋಧಿ ಚಟುವಟಿಕೆಗಳಿಗೆ ಬ್ರೇಕ್ ಹಾಕಬೇಕೆಂದು ಸಂಘಟನೆಗಳು ಆಗ್ರಹಿಸಿವೆ.

    ಈ ಪ್ರತಿಭಟನೆ ಹಲವು ಮಠಗಳ ಮಠಾಧೀಶರುಗಳು ಪಾಲ್ಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ಜರುಗದಂತೆ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ಅಲ್ಲದೆ ಮುನ್ನಚ್ಚೆರಿಕಾ ಕ್ರಮವಾಗಿ ಕೆಆರ್‌ಪೇಟೆ ತಹಶೀಲ್ದಾರ್ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಅದೇಶ ಹೊರಡಿಸಿದ್ದಾರೆ.

  • ಇನ್ನೂ 5 ದಿನ ಮಳೆ- ಕೊಡಗು, ಚಿಕ್ಕಮಗಳೂರು ಶಾಲೆಗೆ ರಜೆ

    ಇನ್ನೂ 5 ದಿನ ಮಳೆ- ಕೊಡಗು, ಚಿಕ್ಕಮಗಳೂರು ಶಾಲೆಗೆ ರಜೆ

    ಮಡಿಕೇರಿ/ಚಿಕ್ಕಮಗಳೂರು: ಕೊಡಗಿನಲ್ಲಿ ಮುಂದಿನ ಐದು ದಿನ ಕೂಡ ಮಳೆಯಾಗುವ ಸಾಧ್ಯತೆಗಳಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

    ಭಾರೀ ಮಳೆಯ ಹಿನ್ನೆಲೆಯಲ್ಲಿ ಇಂದು, ನಾಳೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಹೀಗಾಗಿ ಮಡಿಕೇರಿಯ ಜನ ಮತ್ತೆ ಮಳೆ ಹಾಗೂ ಭೂಕುಸಿತದ ಆತಂಕದಲ್ಲಿದ್ದಾರೆ.

    ಇತ್ತ ಚಿಕ್ಕಮಗಳೂರಿನ 5 ತಾಲೂಕಿನ ಶಾಲಾ-ಕಾಲೇಜಿಗೂ ರಜೆ ನೀಡಲಾಗಿದೆ. ಚಿಕ್ಕಮಗಳೂರು, ಕೊಪ್ಪ, ಎನ್.ಆರ್.ಪುರ, ಶೃಂಗೇರಿ, ಮೂಡಿಗೆರೆಯಲ್ಲಿ ರಜೆ ಘೋಷಿಸಲಾಗಿದೆ. ಚಾಮರಾಜನಗರ ನೆರೆಪೀಡಿತ ಪ್ರದೇಶಗಳ ಶಾಲಾ ಮಕ್ಕಳಿಗೂ ರಜೆ ನೀಡಲಾಗಿದೆ.

    ಕೊಡಗು ಜಿಲ್ಲೆಯಲ್ಲಿ ಸ್ವಲ್ಪ ಪ್ರಮಾಣದಲ್ಲಿ ಮಳೆ ಅಬ್ಬರ ತಗ್ಗಿದೆ. ಇದರಿಂದಾಗಿ ಪ್ರವಾಹ ಪರಿಸ್ಥಿತಿ ಕಡಿಮೆಯಾಗುತ್ತಾ ಬರುತ್ತಿದೆ. ಸದ್ಯ ಲಭ್ಯವಿರುವ ಮಾಹಿತಿ ಪ್ರಕಾರ ಜಿಲ್ಲೆಯಲ್ಲಿ 79 ಪ್ರವಾಹ ಪೀಡಿತ ಪ್ರದೇಶಗಳೆಂದು ಗುರುತಿಸಲಾಗಿದೆ. ಮಡಿಕೇರಿ ತಾಲೂಕಿನ 30, ವಿರಾಜಪೇಟೆ ತಾಲೂಕಿನಲ್ಲಿ 32, ಸೋಮವಾರಪೇಟೆ ತಾಲೂಕಿನಲ್ಲಿ 4, ಕುಶಾಲನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 5, ವಿರಾಜಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 8 ಒಟ್ಟು 79 ಪ್ರವಾಹ ಪೀಡಿತ ಪ್ರದೇಶಗಳೆಂದು ಗರುತಿಸಲಾಗಿದೆ.