ಕಲಬುರಗಿ: ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಇಲ್ಲಿನ ಶಾಲೆಗಳಿಗೆ 2 ದಿನಗಳ ಕಾಲ ರಜೆ (Schools Holiday) ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಹವಾಮಾನ ಇಲಾಖೆಯು ಮುಂದಿನ 48 ಗಂಟೆಗಳ ಕಾಲ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಹಾಗಾಗಿ ಮಕ್ಕಳ ಹಿತದೃಷ್ಟಿಯಿಂದ ಮುಂಜಾಗ್ರತ ಕ್ರಮವಾಗಿ ಎರಡು ದಿನಗಳ ಕಾಲ (ಸೆ.27,28) ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು (Kalaburagi DC) ಆದೇಶಿಸಿದ್ದಾರೆ. ಅದರಂತೆ ಡಿಡಿಪಿಐ (DDPI) ಸೂರ್ಯಕಾಂತ ಮದಾನೆ ಸುತ್ತೋಲೆ ಹೊರಡಿಸಿದ್ದಾರೆ. ಇದನ್ನೂ ಓದಿ: ಹೊಸಪೇಟೆ | ಅಡುಗೆ ಸಿಲಿಂಡರ್ ಸ್ಫೋಟ, ಒಂದೇ ಕುಟುಂಬದ 8 ಮಂದಿಗೆ ಗಾಯ

ಕಲಬುರಗಿ ಜಿಲ್ಲೆಯಾದ್ಯಂತ ಈಗಾಗಲೇ ಭಾರಿ ಮಳೆಯಾಗುತ್ತಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಶಾಲೆಗಳಿಗೆ ಈಗಾಗಲೇ ದಸರಾ ರಜೆಯಿದ್ದು, ಜಿಲ್ಲೆಯ ಕೆಲವು ಶಾಲೆಗಳ ಆಡಳಿತ ಮಂಡಳಿ ದಸರಾ ರಜೆಯಿಂದ ವಿನಾಯಿತಿ ಪಡೆದುಕೊಂಡು ಶಾಲೆಗಳನ್ನು ನಡೆಸುತ್ತಿವೆ. ಅಂತಹ ಶಾಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ಸೆ.27 ಹಾಗೂ 28ರಂದು ಎರಡು ದಿನ ಕಾಲ ರಜೆ ಘೋಷಿಸಿ ಆದೇಶ ಹೊರಡಿಸಿದ್ದು, ಈ ರಜಾ ಅವಧಿಯ ಪಾಠ ಬೋಧನೆಯನ್ನು ಮುಂದಿನ ರಜಾ ದಿನಗಳಲ್ಲಿ ಸರಿದೂಗಿಸಲು ಸೂಚಿಸಲಾಗಿದೆ. ಇದನ್ನೂ ಓದಿ: ದಾವಣಗೆರೆ | `ಐ ಲವ್ ಮಹಮ್ಮದ್’ ಬ್ಯಾನರ್ ಗಲಾಟೆ – 8 ಮಂದಿ ಅರೆಸ್ಟ್








