Tag: scouts and guides

  • ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಕಾರ್ಯಕ್ರಮಕ್ಕೆ ರಾಜ್ಯಪಾಲರಿಂದ ಚಾಲನೆ

    ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಕಾರ್ಯಕ್ರಮಕ್ಕೆ ರಾಜ್ಯಪಾಲರಿಂದ ಚಾಲನೆ

    ಮಂಗಳೂರು: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರಿಯಲ್ಲಿ ಆಯೋಜಿಸಲಾಗಿರುವ ಸ್ಕೌಟ್ಸ್ ಮತ್ತು ಗೈಡ್ಸ್ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಕಾರ್ಯಕ್ರಮಕ್ಕೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಚಾಲನೆ ನೀಡಿದರು.

    ನಂತರ ಮಾತನಾಡಿದ ಅವರು, ಯುವಕರಲ್ಲಿ ದೈಹಿಕ, ಮಾನಸಿಕ, ಬೌದ್ಧಿಕ, ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ, ಆಧ್ಯಾತ್ಮಿಕ, ಜ್ಞಾನ ಮತ್ತು ಕೌಶಲ್ಯ ಸಾಮರ್ಥ್ಯಗಳನ್ನು ಅಭಿವೃದ್ಧಿಪಡಿಸುವುದು ಸ್ಕೌಟ್ಸ್ ಮತ್ತು ಗೈಡ್ಸ್‌ನ ಉದ್ದೇಶವಾಗಿದೆ. ಈ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ದೇಶದ ಸಾವಿರಾರು ಸ್ಕೌಟ್ಸ್ ಮತ್ತು ಗೈಡ್ಸ್, ರೋವರ್ಸ್, ರೇಂಜರ್‌ಗಳು, ವಿದ್ಯಾರ್ಥಿಗಳು ಮತ್ತು ಘಟಕದ ನಾಯಕರು ಮತ್ತು ಇತರ ದೇಶಗಳ ಪ್ರಜೆಗೆಳು ಭಾಗವಹಿಸುತ್ತಿದ್ದಾರೆ. ಡಿಸೆಂಬರ್ 21 ರಿಂದ 7 ದಿನಗಳವರೆಗೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ದೇಶ ಮತ್ತು ರಾಜ್ಯದ ಶ್ರೀಮಂತ ಐತಿಹಾಸಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಅನೇಕ ಕಲಾವಿದರು ಪ್ರದರ್ಶಿಸುತ್ತಿರುವುದು ಶ್ಲಾಘನೀಯ ಎಂದರು. ಇದನ್ನೂ ಓದಿ: ವಂದೇ ಭಾರತ್, ಶತಾಬ್ದಿ ಸೂಪರ್‌ಫಾಸ್ಟ್ ರೈಲುಗಳ ವೇಳಾಪಟ್ಟಿ ಬದಲಾವಣೆಗೆ ಪರಿಶೀಲಿಸಿ ಕ್ರಮ- ಸೋಮಣ್ಣ

    ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ, ಕೊರೊನಾ ವಾರಿಯರ್ ಆಗಿ ನಿಮ್ಮ ಕೆಲಸವು ಶ್ಲಾಘನೀಯವಾಗಿದೆ. ಪ್ರಧಾನ ಮಂತ್ರಿಯವರ ನೇತೃತ್ವದಲ್ಲಿ, ಭಾರತ ಸರ್ಕಾರವು “ಸಬ್ಕಾ ಸಾಥ್, ಸಬ್ಕಾ ವಿಕಾಸ್ ಔರ್ ಸಬ್ಕಾ ವಿಶ್ವಾಸ್” ಎಂಬ ಮಂತ್ರದ ಜೊತೆಗೆ “ಏಕ್ ಭಾರತ್, ಶ್ರೇಷ್ಠ ಭಾರತ್, ಆತ್ಮನಿರ್ಭರ್ ಭಾರತ್” ಮಿಷನ್‌ನಲ್ಲಿ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.

    ಭಾರತವನ್ನು ಜಾಗತಿಕ ಉತ್ಪಾದನಾ ಕೇಂದ್ರವಾಗಿ ಅಭಿವೃದ್ಧಿಪಡಿಸಲು ‘ಮೇಕ್ ಇನ್ ಇಂಡಿಯಾ, ಮೇಡ್ ಇನ್ ಇಂಡಿಯಾ’ ಅಭಿಯಾನವನ್ನು ಪ್ರಾರಂಭಿಸಲಾಗಿದೆ. ಸ್ವಚ್ಛ ಮತ್ತು ಹಸಿರು ಭಾರತವನ್ನು ನಿರ್ಮಿಸಲು, ‘ಸ್ವಚ್ಛ ಭಾರತ್ ಮಿಷನ್’ ಅನ್ನು ಪ್ರಾರಂಭಿಸಲಾಗಿದೆ. ಮುಂದಿನ 25 ವರ್ಷಗಳ ಪ್ರಯಾಣವು ನವ ಭಾರತ ನಿರ್ಮಾಣಕ್ಕೆ ಸುವರ್ಣಯುಗವಾಗಿದೆ. ಈ ಅಮೃತಕಲ್‌ನಲ್ಲಿ ನಮ್ಮ ಸಂಕಲ್ಪಗಳ ಸಾಧನೆಯು ನಮ್ಮನ್ನು ಸ್ವಾತಂತ್ರ್ಯದ 100 ವರ್ಷಗಳವರೆಗೆ ಕೊಂಡೊಯ್ಯುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಮಗಳ ಬರ್ತ್‌ಡೇ ಆಚರಿಸಲು ಸುವರ್ಣ ಸೌಧ ಬಾಡಿಗೆಗೆ ಕೊಡಿ – ಸಭಾಪತಿಗೆ ವಕೀಲ ಮನವಿ ಪತ್ರ

    ಭಾರತವು “ವಸುದೈವ ಕುಟುಂಬಕಂ” ಚಿಂತನೆ ಮತ್ತು “ಸರ್ವೇ ಭವಂತು ಸುಖಿನಃ, ಸರ್ವೇ ಸಂತು ನಿರಾಮಯಾಃ” ಎಂಬ ಮನೋಭಾವದಿಂದ ವಿಶ್ವದಲ್ಲಿ ಏಕತೆಯ ಸಾರ್ವತ್ರಿಕ ಭಾವನೆಯನ್ನು ಉತ್ತೇಜಿಸಲು ಮತ್ತು “ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ” ಮಂತ್ರದೊಂದಿಗೆ ಮುನ್ನಡೆಯುತ್ತಿದೆ ಎಂದು ತಿಳಿಸಿದರು.

    ಧರ್ಮಸ್ಥಳದ ಪೀಠಾಧಿಪತಿ ಹಾಗೂ ರಾಜ್ಯಸಭಾ ಸಂಸದ ಡಾ. ಡಿ.ವೀರೇಂದ್ರ ಹೆಗ್ಗಡೆ, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಉಮಾನಾಥ್ ಕೋಟ್ಯಾನ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂದ್ಯಾ, ವಿಶ್ವ ಸಂಸ್ಥೆಯ ಸ್ಕೌಟ್ ಆಂದೋಲನದ ಪ್ರಧಾನ ಕಾರ್ಯದರ್ಶಿ ಅಹ್ಮದ್ ಅಲ್ಹೆಂದವಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

    Live Tv
    [brid partner=56869869 player=32851 video=960834 autoplay=true]

  • ಮೂಡಬಿದರೆಯಲ್ಲಿ ಸ್ಕೌಟ್ಸ್ & ಗೈಡ್ಸ್ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ – ಖಡಕ್ ರೊಟ್ಟಿ, ಚಟ್ನಿ ಗಿಫ್ಟ್

    ಮೂಡಬಿದರೆಯಲ್ಲಿ ಸ್ಕೌಟ್ಸ್ & ಗೈಡ್ಸ್ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ – ಖಡಕ್ ರೊಟ್ಟಿ, ಚಟ್ನಿ ಗಿಫ್ಟ್

    ಗದಗ: ಇದೇ ಮೊದಲ ಬಾರಿಗೆ ಸ್ಕೌಟ್ಸ್ ಆಂಡ್ ಗೈಡ್ಸ್ (Scouts and Guides) ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಕರುನಾಡಲ್ಲಿ (Karnataka) ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಪ್ರಪಂಚದ 77 ದೇಶಗಳಿಂದ 50 ರಿಂದ 60 ಸಾವಿರ ಜನರು ಬರುವ ನಿರೀಕ್ಷೆಯಿದೆ. ಆ ವಿದೇಶಿಗಳಿಗೆ ಉತ್ತರ ಕರ್ನಾಟಕದ ಪ್ರಸಿದ್ಧ ಖಡಕ್ ರೊಟ್ಟಿ (Khadak Roti) ಹಾಗೂ ವಿವಿಧ ಬಗೆಯ ಚಟ್ನಿ ಕೈರುಚಿ ತೋರಿಸಲು ಮುದ್ರಣ ಕಾಶಿ ಮುಂದಾಗಿದೆ.

    ದಕ್ಷಿಣ ಕನ್ನಡ (ಜಿಲ್ಲೆ ಮೂಡಬಿದರೆಯಲ್ಲಿ (Moodubidire) ಮೊದಲ ಬಾರಿಗೆ ಸ್ಕೌಟ್ಸ್ ಆಂಡ್ ಗೈಡ್ಸ್‌ನ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಮೇಳ ನಡೆಯಲಿದೆ. ಇದೇ ದಿನಾಂಕ 21 ರಿಂದ 27 ರ ವರೆಗೆ ಅದ್ದೂರಿಯಾಗಿ ಕಾರ್ಯಕ್ರಮ ಜರುಗಲಿದೆ. ಆಳ್ವಾಸ್ ಕಾಲೇಜಿನಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಬರುವ ಜನರಿಗೆ ಗದಗ (Gadag) ಜಿಲ್ಲೆಯಿಂದ ಸುಮಾರು ಮೂರೂವರೆ ಲಕ್ಷ ಜೋಳದ ಖಡಕ್ ರೊಟ್ಟಿ, ಸುಮಾರು ಎರಡೂವರೆ ಕ್ವಿಂಟಲ್‌ನಷ್ಟು, ಶೇಂಗಾ, ಕುಸುಬೆ, ಎಳ್ಳು, ಅಗಸಿ ಚಟ್ನಿ ಊಟಕ್ಕೆ ಕಳುಹಿಸಲಾಗುತ್ತಿದೆ. ಗದಗದಿಂದ ಎಲ್ಲವನ್ನೂ ಪ್ಯಾಕ್ ಮಾಡಿ ಸುಮಾರು 4 ಲಾರಿಗಳಲ್ಲಿ ಮೂಡಬಿದರೆಗೆ ಕಳುಹಿಸಲಾಗುತ್ತಿದೆ. ವಿದೇಶಿಗರಿಗೆ ನಮ್ಮ ಆಹಾರ ಪದ್ಧತಿಯ ರೊಟ್ಟಿ, ಚಟ್ನಿ ಉಣಬಡಿಸುವುದು ನಮಗೆ ಸಿಕ್ಕ ಸೌಭಾಗ್ಯ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಹೇಳಿದ್ದಾರೆ.

    ಜಿಲ್ಲೆಯ ಎಲ್ಲಾ ತಾಲೂಕಿನ ಶಾಲೆಗಳಿಂದ ಮಕ್ಕಳು, ಶಿಕ್ಷಕರು, ಸಿಬ್ಬಂದಿ ಒಟ್ಟಾಗಿ ರೊಟ್ಟಿ, ವಿವಿಧ ತರಹದ ಚಟ್ನಿ ಸಂಗ್ರಹಿಸಿದ್ದಾರೆ. ಜಿಲ್ಲೆಯ ಎಲ್ಲಾ ಭಾಗಗಳಿಂದ ಬಂದ ಲಕ್ಷಾಂತರ ರೊಟ್ಟಿ ಚಟ್ನಿಯನ್ನು ಗದಗ ಎಪಿಎಂಸಿ ದಾಸ್ತಾನು ಕೊಠಡಿಯಲ್ಲಿ ಸಂಗ್ರಹಿಸಲಾಗಿದೆ. ಇದನ್ನು ನೋಡಲು ಜಿಲ್ಲಾಧಿಕಾರಿ ವೈಶಾಲಿ ಎಮ್.ಎಲ್, ಡಿಡಿಪಿಐ ಬಸವಲಿಂಗಪ್ಪ, ಡಯಟ್ ಶಿಕ್ಷಣ ಸಂಸ್ಥೆ ಪ್ರಾಂಶುಪಾಲ ಶಂಕ್ರಪ್ಪ ಗಾಂಜಿ, ಗದಗ ಹಾಗೂ ಗ್ರಾಮೀಣ ಭಾಗದ ಬಿಇಒಗಳು, ಸಿಬ್ಬಂದಿ ಹಾಗೂ ಸ್ಕೌಟ್ಸ್, ಗೈಡ್ಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಸುಮಾರು 15 ಲಕ್ಷಕ್ಕೂ ಅಧಿಕ ಮೊತ್ತದ ಆಹಾರ ಖಾದ್ಯ ಇದಾಗಿದೆ. ಸುಮಾರು 3 ತಿಂಗಳು ಇಟ್ಟರೂ ಕೆಡದಂತೆ ಆಹಾರ ಖಾದ್ಯ ಗದಗ ಜಿಲ್ಲೆಯಿಂದ ಕಳುಹಿಸಲಾಗುತ್ತಿದೆ. ಸ್ಕೌಟ್ಸ್ ಆಂಡ್ ಗೈಡ್ಸ್ ಹೊಂದಿರುವ 77 ದೇಶಗಳಿಂದ 50 ರಿಂದ 60 ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದೆ. ಅವರಿಗೆಲ್ಲಾ ನಮ್ಮ ಕಲೆ, ಸಂಗೀತ, ಸಾಹಿತ್ಯ, ನಾಟಕ, ಸಂಸ್ಕೃತದ ಜೊತೆಗೆ ಆಹಾರ ಪದ್ಧತಿ ಬಗ್ಗೆ ತಿಳಿಸಲು ಮುಂದಾಗುತ್ತಿರುವುದು ಹೆಮ್ಮೆಯ ವಿಷಯ. ಹಣದ ಬದಲಾಗಿ ಆಹಾರ ರೂಪದಲ್ಲಿ ಸಹಾಯ ಮಾಡುತ್ತಿರುವುದು ಖುಷಿಯ ವಿಚಾರ ಎಂದು ಅಧಿಕಾರಿಗಳು ಹೇಳಿದ್ದಾರೆ. ಇದನ್ನೂ ಓದಿ: ಶಿಕ್ಷಕರ ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟ- ಚೆಕ್‌ ಮಾಡೋದು ಹೇಗೆ?

    ಪ್ರತಿ 4 ವರ್ಷಗಳಿಗೊಮ್ಮೆ ಅಂತಾರಾಷ್ಟ್ರೀಯ ಸ್ಕೌಟ್ಸ್ ಆಂಡ್ ಗೈಡ್ಸ್ ಜಾಂಬೂರಿ ಮೇಳ ನಡೆಯುತ್ತದೆ. 2019 ರಲ್ಲಿ 24ನೇ ಅಂತಾರಾಷ್ಟ್ರೀಯ ಸ್ಕೌಟ್ಸ್ ಆಂಡ್ ಗೈಡ್ಸ್ ಜಾಂಬೂರಿ ಮೇಳ ಉತ್ತರ ಅಮೆರಿಕದ ಪಶ್ಚಿಮ ವರ್ಜಿನಿಯಾದಲ್ಲಿ ನಡೆದಿತ್ತು. ಈಗ 2022 ರಲ್ಲಿ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಮೇಳ ಕರ್ನಾಟಕದಲ್ಲಿ ನಡೆಯುತ್ತಿರುವುದು ಹೆಮ್ಮೆಯ ವಿಷಯ. ಗದಗ ಜಿಲ್ಲೆಯಿಂದಲೂ ಸುಮಾರು 500 ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಒಟ್ಟಿನಲ್ಲಿ ಕಾರ್ಯಕ್ರಮಕ್ಕೆ 77 ದೇಶಗಳಿಂದ ಬರುವ ವಿದೇಶಿಗರಿಗೆ ಉತ್ತರ ಕರ್ನಾಟಕದ ಖಡಕ್ ರೊಟ್ಟಿ, ಚಟ್ನಿ ಕೈರುಚಿ ತೋರಿಸಲು ಜಿಲ್ಲೆಯ ಶಿಕ್ಷಣ ಇಲಾಖೆ ಮುಂದಾಗಿದೆ. ಇದನ್ನೂ ಓದಿ: ಚುನಾವಣೆ ಹೊತ್ತಲ್ಲಿ ವಾಸ್ತು ಮೊರೆ ಹೋದ ದಕ್ಷಿಣ ಕನ್ನಡ ಕಾಂಗ್ರೆಸ್

    Live Tv
    [brid partner=56869869 player=32851 video=960834 autoplay=true]

  • ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ ರಾಜ್ಯಮಟ್ಟದ ಪ್ರಕೃತಿ ಅಧ್ಯಯನ

    ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ ರಾಜ್ಯಮಟ್ಟದ ಪ್ರಕೃತಿ ಅಧ್ಯಯನ

    ಬೆಂಗಳೂರು: ಅರಣ್ಯ ಸಂರಕ್ಷಣೆ ಹಾಗೂ ಪ್ರಾಣಿ ಪಕ್ಷಿಗಳ ಸಂರಕ್ಷಣೆ, ಪ್ರಕೃತಿ ಅಧ್ಯಯನ ಸೇರಿದಂತೆ ಹಲವು ವಿಚಾರಗಳನ್ನು ವಿದ್ಯಾರ್ಥಿಗಳ ಜೊತೆ ಸಮಾಲೋಚಿಸಿ, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಹೇಗೆ ಅಳವಡಿಸಿಕೊಳ್ಳಬೇಕು ಎಂಬುದನ್ನು ಸ್ಕೌಟ್ಸ್ ಅಂಡ್ ಗೈಡ್ಸ್‍ನ ಬೆಂಗಳೂರು ಪೂರ್ವ ಜಿಲ್ಲಾ ಕಾರ್ಯದರ್ಶಿ ನರೇಂದ್ರ ಕುಮಾರ್ ತಿಳಿಸಿದರು.

    ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದ ಅಕ್ಷರ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದರು. ಇದನ್ನೂ ಓದಿ: ಎಸ್‍ಪಿ ಆಡಳಿತದಲ್ಲಿ ಉತ್ತರ ಪ್ರದೇಶ ಅಪರಾಧ ಪ್ರಕರಣಗಳಲ್ಲಿ ನಂಬರ್ 1 ಆಗಿತ್ತು : ಅಮಿತ್ ಶಾ

    ಆನೇಕಲ್‍ನಲ್ಲಿ ಕಳೆದ 4 ದಿನಗಳಿಂದ ರಾಜ್ಯಮಟ್ಟದ ರೋವರ್ ರೇಂಜ್ ಪ್ರಕೃತಿ ಅಧ್ಯಯನ ಶಿಬಿರವನ್ನು ಹಮ್ಮಿಕೊಂಡಿದ್ದರು (ರೋವರ್ ರೇಂಜ್ ಅಂದರೆ ಕಾಲೇಜು ಮಟ್ಟದ ಸ್ಕೌಟ್ಸ್ ಅಂಡ್ ಗೈಡ್ಸ್) ಇನ್ನು ರಾಜ್ಯಮಟ್ಟದ ಶಿಬಿರದಲ್ಲಿ ಕರ್ನಾಟಕದಿಂದ 25 ಜಿಲ್ಲೆಗಳಿಂದ 120 ರೋವರ್ ರೇಂಜ್ ವಿದ್ಯಾರ್ಥಿಗಳು ಆಗಮಿಸಿದ್ದರು.

    ಈ ನಾಲ್ಕು ದಿನಗಳಲ್ಲಿ ಪ್ರವಾಸಿ ತಾಣಗಳ ಬಗ್ಗೆ ಪರಿಸರ ಸಂರಕ್ಷಣೆಯ ಬಗ್ಗೆ ಅರಣ್ಯ ಇಲಾಖೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು. ಬನ್ನೇರುಘಟ್ಟ ಸಮೀಪದ ಸುವರ್ಣಮುಖಿ ಜಾಗದಲ್ಲಿ ಪ್ಲಾಸ್ಟಿಕ್ ಸಂಗ್ರಹಮಾಡಿ ಹೊರಗಡೆ ತಂದು ಪಂಚಾಯಿತಿಗೆ ನೀಡಲಾಯಿತು ಈ ಕಾರ್ಯಕ್ರಮದ ಉದ್ದಕ್ಕೂ ಪರಿಸರ ರಕ್ಷಣೆಯ ಬಗ್ಗೆ ವಿದ್ಯಾರ್ಥಿಗಳ ಜವಾಬ್ದಾರಿ ಮತ್ತು ಕರ್ತವ್ಯಗಳ ಬಗ್ಗೆ ಮಾಹಿತಿ ನೀಡಲಾಯಿತು.

  • 17 ವರ್ಷಗಳಿಂದ 1 ಲಕ್ಷಕ್ಕೂ ಅಧಿಕ ಗಿಡಗಳನ್ನು ನೆಟ್ಟ ಪರಿಸರ ಪ್ರೇಮಿ ಹಾಸನದ ಗಿರೀಶ್

    17 ವರ್ಷಗಳಿಂದ 1 ಲಕ್ಷಕ್ಕೂ ಅಧಿಕ ಗಿಡಗಳನ್ನು ನೆಟ್ಟ ಪರಿಸರ ಪ್ರೇಮಿ ಹಾಸನದ ಗಿರೀಶ್

    ಹಾಸನ: ಈಗಿನ ಕಾಲದಲ್ಲಿ ನಾನಾಯ್ತು ನನ್ನ ಮನೆ, ಕುಟುಂಬವಾಯ್ತು ಎನ್ನುವವರೆ ಜಾಸ್ತಿ. ಲೋಕದ ಕುರಿತು ಅಲೋಚಿಸುವವರು ಕಡಿಮೆ. ಆದರೆ ಹಾಸನದ ಆರ್.ಜಿ ಗಿರೀಶ್ ಅವರು ಕಳೆದ 17 ವರ್ಷಗಳಿಂದ ಪರಿಸರ ಸಂರಕ್ಷಣೆ, ಸಮಾಜ ಸೇವೆಗೆ ಶ್ರಮಿಸುವ ಮೂಲಕ ಪಬ್ಲಿಕ್ ಹೀರೋ ಆಗಿದ್ದಾರೆ.

    ಹಾಸನ ತಾಲೂಕಿನ ರಾಮದೇವರಪುರದ ಆರ್.ಜಿ ಗಿರೀಶ್(33) ಅವರು ಪರಿಸರ ಪ್ರೇಮಿ. ಕಳೆದ 17 ವರ್ಷಗಳಿಂದ ಜಿಲ್ಲೆಯಾದ್ಯಂತ ಸಂಚರಿಸಿ ಇದುವರೆಗೂ ಒಂದು ಲಕ್ಷಕ್ಕೂ ಹೆಚ್ಚು ಗಿಡಗಳನ್ನು ನೆಟ್ಟಿದ್ದಾರೆ. ಜೈವಿಕ ಇಂಧನ ಉತ್ಪಾದಿಸುವ ಸಸ್ಯಗಳ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ.

    ಅಷ್ಟೇ ಅಲ್ಲದೆ ಕಳೆದ 7-8 ವರ್ಷಗಳಿಂದ 70ಕ್ಕೂ ಹೆಚ್ಚು ಪುರಾತನ ಕಲ್ಯಾಣಿಗಳ ಹೂಳು ತೆಗೆದು ಅವುಗಳಿಗೆ ಮರುಜೀವ ನೀಡಿದ್ದಾರೆ. ಆ ಕಲ್ಯಾಣಿಗಳೀಗ ಜನ, ಜಾನುವಾರುಗಳಿಗೆ ನೀರಿನ ಮೂಲವಾಗಿವೆ. ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ಹೋಯ್ಸಳ, ಚಾಲುಕ್ಯರ ಕಾಲದ ಐತಿಹಾಸಿಕ ಸ್ಥಳಗಳಿಗೆ ಹೊಸ ರೂಪ ಕೊಟ್ಟಿದ್ದಾರೆ. ಮಹಾ ಮಸ್ತಕಾಭಿಷೇಕ, ಹಾಸನಾಂಬೆ ಉತ್ಸವ ಸೇರಿ ಯಾವುದೇ ಸರ್ಕಾರಿ ಕಾರ್ಯಕ್ರಮ ನಡೆದರೂ ಗಿರೀಶ್ ಸ್ವಯಂ ಸೇವಕರಾಗಿ ಕೆಲಸ ಮಾಡುತ್ತಾರೆ.

    ಕಾಲೇಜು ದಿನಗಳಿಂದಲೇ ಪರಿಸರ ಕಾಳಜಿ ಬೆಳಸಿಕೊಂಡ ಗಿರೀಶ್ ಒಬ್ಬರಿಂದಲೇ ಈ ಕಾರ್ಯ ಆಗುವುದಿಲ್ಲ ಎನ್ನುವುದು ಗೊತ್ತಾಗಿ ನಾಲ್ಕು ವರ್ಷಗಳಿಂದ ಸ್ಕೌಟ್ಸ್ ಅಂಡ್ ಗೈಡ್ಸ್ ನಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳನ್ನು ಸೇರಿಸಿಕೊಂಡು ತಮ್ಮ ಪರಿಸರ ಪ್ರೇಮ, ಸಮಾಜಮುಖಿ ಕೆಲಸಗಳನ್ನು ಮುಂದುವರಿಸಿದ್ದಾರೆ.

  • ಕಾರ್ಮಿಕರ ದಿನಾಚರಣೆಯಂದು ಚಿಕ್ಕಬಳ್ಳಾಪುರ ಡಿಸಿಯಿಂದ ಕಲ್ಯಾಣಿ ಸ್ವಚ್ಛತೆ

    ಕಾರ್ಮಿಕರ ದಿನಾಚರಣೆಯಂದು ಚಿಕ್ಕಬಳ್ಳಾಪುರ ಡಿಸಿಯಿಂದ ಕಲ್ಯಾಣಿ ಸ್ವಚ್ಛತೆ

    ಚಿಕ್ಕಬಳ್ಳಾಪುರ: ಕಾರ್ಮಿಕರ ದಿನಾಚರಣೆಯಂದು ಪಾಳುಬಿದ್ದು ಕಸದ ತೊಟ್ಟಿಯಾಗಿದ್ದ ಪುರಾತನ ಕಲ್ಯಾಣಿಯನ್ನು ಸಿಬ್ಬಂದಿ ಮತ್ತು ವಿದ್ಯಾರ್ಥಿಗಳ ಜೊತೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಸ್ವಚ್ಛತೆ ಮಾಡಿದ್ದಾರೆ.

    ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ನೇತೃತ್ವದಲ್ಲಿ ನಗರಸಭೆ ಸಿಬ್ಬಂದಿ ಹಾಗೂ ಸ್ಕೌಟ್ಸ್ ಅಂಡ್ ಗೈಡ್ಸ್ ವಿದ್ಯಾರ್ಥಿಗಳು ನಗರದ ಬಸಪ್ಪ ಛತ್ರದಲ್ಲಿ ಡಂಪಿಂಗ್ ಯಾರ್ಡ್‍ಗೆ ಮೂಲೆಗುಂಪಾಗಿದ್ದ ಕಲ್ಯಾಣಿಯ ಸ್ವಚ್ಛತಾ ಕಾರ್ಯ ಮಾಡಿದರು.

    ನಗರದ ಬಿಬಿ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ನೂತನ ರಂಗಮಂದಿರದ ಬಳಿಯೇ ಇರುವ ಈ ಪುರಾತನ ಕಲ್ಯಾಣಿ ಕಸದಿಂದ ತುಂಬಿ ತುಳುಕಿ, ಮುಳ್ಳಿನ ಗಿಡಗಂಟೆಗಳಿಂದ ಮುಚ್ಚಿ ಹೋಗಿತ್ತು. ಈ ಹಿಂದೆ ರಂಗಮಂದಿರ ಕಾಮಗಾರಿ ಪರಿಶೀಲನೆ ವೇಳೆ ಪಾಳುಬಿದ್ದಿದ್ದ ಕಲ್ಯಾಣಿ ಕಂಡಿದ್ದ ಜಿಲ್ಲಾಧಿಕಾರಿ ಕಲ್ಯಾಣಿಗೆ ಮರುಜೀವ ಕೊಡುವ ಸಂಕಲ್ಪ ಮಾಡಿದ್ದರು. ಹೀಗಾಗಿ ಕಾರ್ಮಿಕ ದಿನಾಚರಣೆಯ ದಿನವೇ ವಿದ್ಯಾರ್ಥಿಗಳು, ನಗರಸಭೆ ಸಿಬ್ಬಂದಿ, ಹಾಗೂ ಪತ್ರಕರ್ತರ ಜೊತೆಗೂಡಿ ಜಿಲ್ಲಾಧಿಕಾರಿ ಕಲ್ಯಾಣಿ ಸ್ವಚ್ಛತಾ ಕಾರ್ಯ ನಡೆಸಿದರು. ಸತತ 3 ಗಂಟೆಗೂ ಹೆಚ್ಚು ಕಲ್ಯಾಣಿಯಲ್ಲಿನ ಗಿಡಗಂಟೆಗಳು, ಕಲ್ಲು-ಮಣ್ಣು ಎತ್ತಿ ಹಾಕಿ ಸ್ವಚ್ಛತಾ ಕಾರ್ಯ ನಡೆಯಿತು.

    ಜಿಲ್ಲೆಯ ಎಲ್ಲಾ ಕಲ್ಯಾಣಿ-ಪುಷ್ಕರಣಿಗಳನ್ನ ಪತ್ತೆ ಹಚ್ಚುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಹಂತ ಹಂತವಾಗಿ ಎಲ್ಲಾ ಕಲ್ಯಾಣಿಗಳ ಸ್ವಚ್ಛತಾ ಕಾರ್ಯ ಮಾಡುವುದಾಗಿ ಈ ವೇಳೆ ಅನಿರುದ್ಧ್ ಶ್ರವಣ್ ತಿಳಿಸಿದರು.