Tag: SDM

  • ಸೌಜನ್ಯ ರೇಪ್‌, ಮರ್ಡರ್‌ ಕೇಸ್‌- ಆರೋಪಿ ಸಂತೋಷ್‌ ರಾವ್‌ ಖುಲಾಸೆ

    ಬೆಂಗಳೂರು: ಸೌಜನ್ಯ ಅತ್ಯಾಚಾರ ಮತ್ತು ಕೊಲೆ (Sowjanya Rape and Murder) ಪ್ರಕರಣದಲ್ಲಿ ಆರೋಪಿಯಾಗಿದ್ದ ಸಂತೋಷ್‌ ರಾವ್‌ನನ್ನು (Santosh Rao) ಕೋರ್ಟ್‌ ದೋಷಮುಕ್ತಗೊಳಿಸಿದೆ.

    ಸಿಬಿಐ ವಿಶೇಷ ನ್ಯಾಯಾಲಯದ (CBI Special Court) ನ್ಯಾಯಾಧೀಶ ಸಂತೋಷ್.ಸಿ.ಬಿ. ಇಂದು ತೀರ್ಪು ಪ್ರಕಟಿಸಿ, ಸಾಕ್ಷ್ಯಾಧಾರ ಕೊರತೆಯಿಂದ ಆರೋಪಿಯನ್ನು ಬಿಡುಗಡೆ ಮಾಡುವಂತೆ ಆದೇಶಿಸಿದ್ದಾರೆ. ಆರೋಪಿ ಪರ ವಕೀಲ ಮೋಹಿತ್ ಕುಮಾರ್ ವಾದ ಮಂಡಿಸಿದ್ದರು.

    ಆರೋಪಿ ಪರ ವಾದ ಏನಿತ್ತು?
    ಆತ್ಯಾಚಾರ ಹಾಗೂ ಕೊಲೆಯಾದ ವೇಳೆ ಆರೋಪಿ ಸ್ಥಳದಲ್ಲಿ ಇರಲಿಲ್ಲ. ರೇಪ್ ಮಾಡಿರುವ ಬಗ್ಗೆ ವೈದ್ಯಕೀಯ ವರದಿ ಇರಲಿಲ್ಲ. ಎರಡು ದಿನ ಬಳಿಕ ಆರೋಪಿಯನ್ನು ಬಂಧಿಸಲಾಗಿತ್ತು. ಸೌಜನ್ಯ ಮೃತಪಟ್ಟ ದಿನ ಭಾರೀ ಮಳೆ ಇತ್ತು. ಅಂದು 500 ಜನ ಹುಡುಕಾಟ ನಡೆಸಿದ್ದರು. ಆದರೆ ಅಂದು ಶವ ಪತ್ತೆಯಾಗಿರಲಿಲ್ಲ. ಇದನ್ನೂ ಓದಿ: ರಾಜ್ಯದಲ್ಲಿ ಫ್ರೀ ಬಸ್ ಸೇವೆ, ನಮ್ಮ ಸಂಸ್ಥೆಗಳ ಮೇಲೆ ಯಾವುದೇ ಹೊರೆಯಾಗಲ್ಲ: ರಾಮಲಿಂಗಾ ರೆಡ್ಡಿ

    ನದಿ ದಾಟಿ ಹೋಗಿದ್ದಾನೆ ಎಂದು ಅನುಮಾನ ವ್ಯಕ್ತಪಡಿಸಿದ ಪೊಲೀಸರು ಎರಡು ದಿನದ ಬಳಿಕ ಸಂತೋಷ್‌ ರಾವ್‌ನನ್ನು ಬಂಧಿಸಿದ್ದರು. ಅಲ್ಲಿದ್ದ ಪ್ರಕೃತಿ ಚಿಕಿತ್ಸಾಲಯದ ಸಿಸಿಟಿವಿ ಸಂಗ್ರಹಿಸಿಲ್ಲ. ಮರಣೋತ್ತರ ಪರೀಕ್ಷೆಯಲ್ಲಿ ರಾತ್ರೋರಾತ್ರಿ ಕೆಟ್ಟ ಬೆಳಕಿನಲ್ಲಿ ಮಾಡಲಾಗಿದೆ. ಸಂತೋಷ್‌ ರಾವ್‌ ಕೊಲೆ ಮಾಡಿದ್ದಾನೆ ಎಂಬುದಕ್ಕೆ ಯಾವುದೇ ಸಾಕ್ಷ್ಯಗಳು ಇಲ್ಲ ಎಂದು ಹೇಮಂತ್‌ ವಾದಿಸಿದ್ದರು.

     

    ಏನಿದು ಪ್ರಕರಣ?
    ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸೌಜನ್ಯ 2012ರ ಅಕ್ಟೋಬರ್ 9ರಂದು ಕಾಣೆಯಾಗಿದ್ದಳು ಎಂದು ತಂದೆ ಚಂದ್ರಪ್ಪ ಅವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದರು. ಅಕ್ಟೋಬರ್ 10ರಂದು ಅರೆನಗ್ನ ಸ್ಥಿತಿಯಲ್ಲಿ ಸೌಜನ್ಯ ಶವ ಪತ್ತೆಯಾಗಿತ್ತು. ಬಳಿಕ ಆಕೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ದೂರು ನೀಡಿದ್ದರು. ಈ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಪ್ರತಿಭಟನೆ, ಆಕ್ರೋಶಕ್ಕೆ ಕಾರಣವಾಗಿತ್ತು.

    ಮೊದಲು ಬೆಳ್ತಂಗಡಿ ಪೊಲೀಸರು ತನಿಖೆ ನಡೆಸಿದ್ದರು. ನಂತರ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗಿತ್ತು. ಆ ಬಳಿಕ ಸರ್ಕಾರ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿತ್ತು. 2016ರಲ್ಲಿ ತನಿಖೆ ಪೂರ್ಣಗೊಳಿಸಿದ ಸಿಬಿಐ ಆರೋಪ ಪಟ್ಟಿ ಸಲ್ಲಿಸಿತ್ತು.

  • ಬೆಂಗಳೂರಿನಲ್ಲಿ SDM ಕ್ಷೇಮವನ ಉದ್ಘಾಟನೆ – ವಿಶೇಷತೆಗಳೇನು ಗೊತ್ತಾ?

    ಬೆಂಗಳೂರಿನಲ್ಲಿ SDM ಕ್ಷೇಮವನ ಉದ್ಘಾಟನೆ – ವಿಶೇಷತೆಗಳೇನು ಗೊತ್ತಾ?

    ಬೆಂಗಳೂರು : ನೆಲಮಂಗಲದಲ್ಲಿ ನಿರ್ಮಾಣ ಆಗಿರುವ   ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಕೇಂದ್ರ ಕ್ಷೇಮವನವನ್ನ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಉದ್ಘಾಟನೆ ಮಾಡಿದ್ದಾರೆ. 20 ಎಕರೆ ವಿಶಾಲವಾದ ಜಾಗದಲ್ಲಿ ಕ್ಷೇಮವನ ನಿರ್ಮಾಣವಾಗಿದ್ದು, ಸಂಪೂರ್ಣ ಪ್ರಕೃತಿ ಚಿಕಿತ್ಸೆ ಇಲ್ಲಿ ಸಿಗಲಿದೆ.

    ಕ್ಷೇಮವನದ ವಿಶೇಷತೆ ಏನು?
    20 ಎಕರೆ ಜಾಗದಲ್ಲಿ ನಿರ್ಮಾಣಗೊಂಡಿದೆ ಕ್ಷೇಮವನ. ನಿಸರ್ಗದತ್ತ ಪುನರುಜ್ಜೀವನ ಸೌಲಭ್ಯಗಳು ಇಲ್ಲಿ ಇವೆ. ಈ ಕೇಂದ್ರದ ವಿನ್ಯಾಸವನ್ನ ತಜ್ಞ ಮಹೇಶ್ ಡಿಯೋಫೋಡೆ ಮಾಡಿದ್ದಾರೆ. ಪರಿಕಲ್ಪನೆ ವಿನ್ಯಾಸವನ್ನ ಆಯುಷ್ ಕಾಸ್ಲಿವಾಲ್ ಅವರು ಮಾಡಿದ್ದಾರೆ.

    ಪ್ರಾಚೀನ ವಾಸ್ತು ವಿನ್ಯಾಸಗಳಿಗೆ ಅನುಗುಣವಾದ ಬಣ್ಣ, ವಿನ್ಯಾಸ ಮತ್ತು ಸಂರಚನೆಗಳು ರೂಪುಗೊಂಡಿದೆ. ಆಮೆ, ನಂದಿ, ಗರುಡ ಸಂಕೇತಿಸುವ ವಿನ್ಯಾಸದ ಕಟ್ಟಡಗಳು ನಿರ್ಮಾಣ ಮಾಡಲಾಗಿದೆ. ಸಮುದ್ರ, ಭೂಮಿ, ಮತ್ತು ಆಕಾಶ ತತ್ವದ ನೆಲೆಯಲ್ಲಿ ಸಂರಚಿತವಾಗಿದೆ. ಇದನ್ನೂ ಓದಿ: ಬೆಂಗಳೂರಿಗೆ ಇನ್ಮುಂದೆ ಸಾಂಪ್ರದಾಯಿಕ ವೈದ್ಯ ಪದ್ಧತಿ ಹಬ್ ಆಗೋ ಅವಕಾಶ- ಯೋಗಿ ಆದಿತ್ಯನಾಥ್

    ಯೋಗ, ಧ್ಯಾನಕ್ಕೆ ವಿನೂತನ ಕಟ್ಟಡ ʼಕೂರ್ಮಾʼ ನಿರ್ಮಾಣ ಮಾಡಲಾಗಿದೆ. ಕೇಂದ್ರವು ಎಸಿ ಈಜುಕೊಳದ ಸೌಲಭ್ಯ ಒಳಗೊಂಡಿದೆ. ಕೂರ್ಮಾವತಾರದ ಪೌರಾಣಿಕ ಪರಿಕಲ್ಪನೆಯಲ್ಲಿ ಈ ಕಟ್ಟಡ ಅರಳಿದೆ. ನಂದಿ ಹೆಸರಿನ ಕಟ್ಟಡ ಶಾಖೆ ಊಟದ ವಿಭಾಗವಾಗಿದೆ. ಡಯಟ್ ಮಾದರಿಗಳು 25 ಬಗೆಯ ಥೆರಪಿ ಶುಶ್ರೂಷಾ ಕ್ರಮಗಳನ್ನು ಒಳಗೊಂಡಿದೆ.

    ಕ್ಷೇಮವನ 400 ಜನರಿಗೆ ಶುಶ್ರೂಷೆ ನೀಡಬಲ್ಲದು. 86 ವಿಶೇಷ ಕೊಠಡಿಗಳು, 30 ಡಿಲಕ್ಸ್ ವಿಂಗ್ ಗಳು ಇವೆ.16 ಕಾಟೇಜ್ ಗಳು ಇವೆ. ನಿಸರ್ಗ, ಮೌನ ಮತ್ತು ಸರಳತೆ ಕೇಂದ್ರೀಕರಿಸಿಕೊಂಡ ಜೈವಿಕ ಮೌಲಿಕತೆಯನ್ನ ಈ ಕೇಂದ್ರ ಬಿಂಬಿಸುತ್ತದೆ. ಇದನ್ನೂ ಓದಿ: ಕ್ಷೇಮವನ ಜೀವನದ ಸೂತ್ರವಾಗಲಿ: ಬೊಮ್ಮಾಯಿ

    5 ಬಗೆಯ ಶುಶ್ರೂಷಾ ವಿಧಾನ ಇಲ್ಲಿ ಲಭ್ಯವಿದೆ.
    1.ಮನಸ್ಸು ಮತ್ತು ದೈಹಿಕ ಆರೋಗ್ಯ
    2.ಶಯನಾರೋಗ್ಯ
    3.ಪೌಷ್ಟಿಕ ಆಹಾರ
    4.ಗಟ್ ಆರೋಗ್ಯ
    5.ಶಕ್ತಿ ಔಷಧಿ

    Live Tv
    [brid partner=56869869 player=32851 video=960834 autoplay=true]

  • ವಲಸೆ ಕಾರ್ಮಿಕರು ಬಿಟ್ಟು ಹೋದ ಸೈಕಲ್‌ಗಳಿಂದ ಬಂತು ಲಕ್ಷ – ಲಕ್ಷ ಆದಾಯ

    ವಲಸೆ ಕಾರ್ಮಿಕರು ಬಿಟ್ಟು ಹೋದ ಸೈಕಲ್‌ಗಳಿಂದ ಬಂತು ಲಕ್ಷ – ಲಕ್ಷ ಆದಾಯ

    ಲಕ್ನೋ: ಕೊರೊನಾ ತೀವ್ರವಾಗಿ ವ್ಯಾಪಿಸಿದ್ದ 2020ರ ವೇಳೆ ದೇಶಾದ್ಯಂತ ಲಾಕ್‌ಡೌನ್‌ ಘೋಷಿಸಲಾಗಿ, ಬಹುತೇಕ ವಲಸೆ ಕಾರ್ಮಿಕರು ಅನಿವಾರ್ಯವಾಗಿ ತಮ್ಮ ರಾಜ್ಯಗಳಿಗೆ ಹೋಗಲೇಬೇಕಿತ್ತು.

    ಬಹುತೇಕರು ತಾವು ತಲುಪುವುದೇ ಕಷ್ಟವಾಗಿದ್ದರಿಂದ ತಮ್ಮ ವಸ್ತುಗಳನ್ನು ತಾವಿದ್ದ ಸ್ಥಳಗಳಲ್ಲೇ ಬಿಟ್ಟು ಹೋಗಿದ್ದರು. ಇನ್ನೂ ದಿನಗೂಲಿ ಕಾರ್ಮಿಕರು ಹೆಚ್ಚಾಗಿ ಬಳಸುತ್ತಿದ್ದ ಸೈಕಲ್ ಪಾಡಂತೂ ಕೇಳೋರೇ ಇಲ್ಲದಂತಾಗಿತ್ತು. ಇದರಿಂದ ಸಾವಿರಾರು ಮಂದಿ ತಮ್ಮ ಬೈಸಿಕಲ್‌ಗಳನ್ನು ಇಲ್ಲಿಯೇ ಬಿಟ್ಟುಹೋದರು. ಇಂತಹ ಬಿಟ್ಟು ಹೋಗಿದ್ದ ಸೈಕಲ್‌ಗಳು ಇದೀಗ ಲಕ್ಷಾಂತರ ರೂಪಾಯಿ ಆದಾಯ ತಂದುಕೊಟ್ಟಿವೆ. ಇದನ್ನೂ ಓದಿ: ಬಿಜೆಪಿ ಎಚ್ಚೆತ್ತುಕೊಂಡಿರುವುದು ಮುಸ್ಲಿಮರ ಭಾವನೆಗೆ ಧಕ್ಕೆಯುಂಟಾಗಿದೆ ಎಂದಲ್ಲ: ಒಮರ್ ಅಬ್ದುಲ್ಲಾ

    UP

    ರಾಶಿ-ರಾಶಿ ಸೈಕಲ್‌ಗಳು: ಕೋವಿಡ್ ಮೊದಲ ಅಲೆಯಲ್ಲಿ ಉಂಟಾದ ಲಾಕ್‌ಡೌನ್ ವೇಳೆ ಉತ್ತರ ಪ್ರದೇಶ ಮತ್ತು ಬಿಹಾರದ ವಲಸೆ ಕಾರ್ಮಿಕರು ಬಿಟ್ಟು ಹೋಗಿದ್ದ 5,400 ಬೈಸಿಕಲ್‌ಗಳನ್ನು ಸಹರಾನ್‌ಪುರ ಜಿಲ್ಲಾಡಳಿತವು 2 ವರ್ಷಗಳ ನಂತರ ಹರಾಜು ಮಾಡಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಎಚ್ಚೆತ್ತುಕೊಂಡಿರುವುದು ಮುಸ್ಲಿಮರ ಭಾವನೆಗೆ ಧಕ್ಕೆಯುಂಟಾಗಿದೆ ಎಂದಲ್ಲ: ಒಮರ್ ಅಬ್ದುಲ್ಲಾ

    21.2 ಲಕ್ಷ ಸಂಗ್ರಹ: 5,400 ಬೈಸಿಕಲ್‌ಗಳನ್ನು ಹರಾಜು ಮಾಡಲಾಗಿದ್ದು ಇದರಿಂದ 21.2 ಲಕ್ಷ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ಹರಿದು ಬಂದಿದೆ ಎಂದು ಸದರ್‌ನ ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌ (SDM) ಕಿನ್‌ಶುಕ್ ಶ್ರೀವಾಸ್ತವ ತಿಳಿಸಿದ್ದಾರೆ.

  • ಪೋಷಕರಿಗೆ ಕಿರುಕುಳ ನೀಡುವ ಮಕ್ಕಳನ್ನು ಮನೆಯಿಂದ ಹೊರಹಾಕಿ ಎಂದ ಕೋರ್ಟ್

    ಪೋಷಕರಿಗೆ ಕಿರುಕುಳ ನೀಡುವ ಮಕ್ಕಳನ್ನು ಮನೆಯಿಂದ ಹೊರಹಾಕಿ ಎಂದ ಕೋರ್ಟ್

    ಡೆಹ್ರಾಡೂನ್: ಪೋಷಕರಿಗೆ ಕಿರುಕುಳ ನೀಡುವ ಮತ್ತು ನಿಂದಿಸುವ ಮಕ್ಕಳನ್ನು ಮನೆಯಿಂದ ಹೊರಹಾಕಬೇಕು ಎಂದು ಹರಿದ್ವಾರದ ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌ (SDM) ನ್ಯಾಯಾಲಯ ಹೇಳಿದೆ.

    ಪೋಷಕರಿಗೆ ಕಿರುಕುಳ ನೀಡುವ ಮಕ್ಕಳು ಒಂದೇ ತಿಂಗಳಲ್ಲಿ ಮನೆ ಖಾಲಿ ಮಾಡಬೇಕು. ಒಂದು ವೇಳೆ ಆದೇಶ ಪಾಲಿಸದಿದ್ದರೆ ಪೊಲೀಸರು ಕ್ರಮ ಕೈಗೊಳ್ಳುವಂತೆ ಹರಿದ್ವಾರ ಎಸ್‌ಡಿಎಂ ನ್ಯಾಯಾಲಯ ಸೂಚಿಸಿದೆ. ಇದನ್ನೂ ಓದಿ: ಮೋದಿ ಪ್ರಧಾನಿಯಾಗಿ 8 ವರ್ಷ – ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ವೇಗೆ ಚಾಲನೆ

    Law

    ಉತ್ತರಾಖಂಡ ಹರಿದ್ವಾರದ ಜ್ವಾಲಾಪುರ, ಕಂಖಾಲ್ ಮತ್ತು ರಾವ್ಲಿ ಮೆಹದುದ್ ಸೇರಿ 6 ವೃದ್ಧ ದಂಪತಿ ತಮ್ಮ ಮಕ್ಕಳೇ ತಮ್ಮ ಮೇಲೆ ದೌರ್ಜನ್ಯ ಎಸಗಿದ್ದಾರೆ ಮತ್ತು ಹಲ್ಲೆ ನಡೆಸಿದ್ದಾರೆ ಎಂದು ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ವಿವಾದ – ಇಂದು ಮುಸ್ಲಿಂ ಮಂಡಳಿ ಅರ್ಜಿ ವಿಚಾರಣೆ

    ಮಕ್ಕಳು ತಮ್ಮೊಂದಿಗೆ ವಾಸಿಸುತ್ತಿದ್ದರೂ ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ನಮ್ಮ ಆರೋಗ್ಯ ಮತ್ತು ಆಹಾರದ ಬಗ್ಗೆ ಗಮನ ಹರಿಸುವುದಿಲ್ಲ. ಆಗಾಗ್ಗೆ ನಮ್ಮ ಮೇಲೆ ಹಲ್ಲೆ ಮಾಡುತ್ತಾರೆ. ಇದರಿಂದ ನಮ್ಮ ಜೀವನ ನರಕವಾಗಿದೆ. ಆದ್ದರಿಂದ ಪೋಷಕರ ಸ್ಥಿರ ಮತ್ತು ಚರಾಸ್ತಿಗಳಿಂದ ಮಕ್ಕಳನ್ನು ಹೊರ ಹಾಕಬೇಕೆಂದು ಮನವಿಯಲ್ಲಿ ಕೋರಿದ್ದರು.

    LAW

    ಈ ಕುರಿತು ವಿಚಾರಣೆ ನಡೆಸಿ, ಎಸ್‌ಡಿಎಂ ನ್ಯಾಯಾಲಯದ ನ್ಯಾಯಾಧೀಶ ಪುರಾನ್ ಸಿಂಗ್ ರಾಣಾ ಅವರು, ತಮ್ಮ ಪೋಷಕರ ಸ್ಥಿರ ಮತ್ತು ಚರಾಸ್ತಿಯಿಂದ ಮಕ್ಕಳನ್ನು ಹೊರಹಾಕುವಂತೆ ಆದೇಶಿದಿಸಿದ್ದಾರೆ.

    ಮಕ್ಕಳು ಪೋಷಕರಿಗೆ ವಂಚನೆ ಮಾಡುವ ಹಾಗೂ ಅವರ ಆಸ್ತಿಯನ್ನು ವರ್ಗಾವಣೆ ಮಾಡಿಕೊಳ್ಳುವ ಹಲವಾರು ಪ್ರಕರಣಗಳಿವೆ. ಈ ವಿಚಾರದಲ್ಲಿ ಪೋಷಕರು ನಿರ್ಲಕ್ಷ್ಯ ವಹಿಸುತ್ತಿರುವುದರಿಂದಲೇ ಕಿರುಕುಳ ಎದುರಿಸಬೇಕಾಗುತ್ತಿದೆ ಎಂದು ಹೇಳಿದ್ದಾರೆ.

    ಕಾನೂನಿನ ಪ್ರಕಾರ, ಇಂತಹ ಪರಿಸ್ಥಿತಿಯಲ್ಲಿ ವಾಸಿಸುವ ಹಿರಿಯ ನಾಗರಿಕರು ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡುವ ಮೂಲಕ ನ್ಯಾಯ ಪಡೆಯಬಹುದು. 2018 ರಲ್ಲಿ ದೆಹಲಿ ನ್ಯಾಯಾಲಯವು, ಹಿರಿಯ ನಾಗರಿಕರನ್ನು ರಕ್ಷಿಸುವ ಕಾನೂನಿನ ಅಡಿಯಲ್ಲಿ ಪೋಷಕರು ತಮ್ಮ ಮಕ್ಕಳನ್ನು ಆಸ್ತಿಯಿಂದ ಹೊರಹಾಕಬಹುದು ಅಥವಾ ಕಾನೂನು ಬದ್ಧವಾಗಿ ಉತ್ತರಾಧಿಕಾರಿಗಳನ್ನಾಗಿ ಮಾಡಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

  • ಎಸ್‍ಡಿಎಂ ಕಾಲೇಜಿನ ಮಾಜಿ ಪ್ರಾಂಶುಪಾಲ ಡಾ. ಬಿ. ಯಶೋವರ್ಮ ನಿಧನ

    ಎಸ್‍ಡಿಎಂ ಕಾಲೇಜಿನ ಮಾಜಿ ಪ್ರಾಂಶುಪಾಲ ಡಾ. ಬಿ. ಯಶೋವರ್ಮ ನಿಧನ

    ಮಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆಯ ಮಾಜಿ ಪ್ರಾಂಶುಪಾಲ ಡಾ. ಬಿ ಯಶೋವರ್ಮ ಅವರು ವಿಧಿವಶರಾಗಿದ್ದಾರೆ.

    66 ವರ್ಷದ ಯಶೋವರ್ಮ ಅವರು ಕಳೆದ ಕೆಲವು ತಿಂಗಳಿನಿಂದ ಅನಾರೋಗ್ಯದ ಹಿನ್ನೆಲೆಯಲ್ಲಿ ಸಿಂಗಾಪುರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಭಾನುವಾರ ಮಧ್ಯರಾತ್ರಿ ಚಿಕಿತ್ಸೆ ಫಲಿಸದೆ ನಿಧರಾಗಿದ್ದಾರೆ. ಇದನ್ನೂ ಓದಿ: ಶಾಲಾ ಪಠ್ಯದಲ್ಲಿ ಕೆಂಪೇಗೌಡ, ಸಿದ್ದರೂಢ ಜಾತ್ರೆ – ಮೋದಿ `ವೋಕಲ್ ಫಾರ್ ಲೋಕಲ್’ ಮಂತ್ರವೂ ಸೇರ್ಪಡೆ

    ಯಶೋವರ್ಮ ಅವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಎಸ್‍ಡಿಎಂ ಎಜುಕೇಶನ್ ಸೊಸೈಟಿ ಕಾರ್ಯದರ್ಶಿಯಾಗಿದ್ದರು. ಡಾ. ಬಿ.ಯಶೋವರ್ಮ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಪತ್ನಿ ಡಾ. ಹೇಮಾವತಿ ಹೆಗ್ಗಡೆಯವರ ಸಹೋದರರಾಗಿದ್ದಾರೆ.

  • ಉಡುಪಿಯಲ್ಲಿ ಧರ್ಮಸ್ಥಳದ ಆಯುರ್ವೇದ ಆಸ್ಪತ್ರೆ ಉದ್ಘಾಟನೆ

    ಉಡುಪಿಯಲ್ಲಿ ಧರ್ಮಸ್ಥಳದ ಆಯುರ್ವೇದ ಆಸ್ಪತ್ರೆ ಉದ್ಘಾಟನೆ

    ಉಡುಪಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ರತ್ನಶ್ರೀ ಆರೋಗ್ಯಧಾಮ ಉಡುಪಿಯ ಆಯುರ್ವೇದ ಆಸ್ಪತ್ರೆಯನ್ನು ಕೇಂದ್ರ ಆಯುಷ್, ಬಂದರು ಮತ್ತು ಜಲಸಾರಿಗೆ ಸಚಿವ ಸರ್ಬಾನಂದ ಸೋನೋವಾಲ ಉದ್ಘಾಟಿಸಿದರು.

    ಉಡುಪಿಯ ಕುತ್ಪಾಡಿ ಯಲ್ಲಿರುವ ಎಸ್‍ಡಿಎಂ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ವಠಾರದಲ್ಲಿ ನೂತನ ಸುಸಜ್ಜಿತ ಆಯುರ್ವೇದ ಆಸ್ಪತ್ರೆ ಸೇವಾರಂಭ ಆಗಿದೆ. ಆಸ್ಪತ್ರೆ ಉದ್ಘಾಟನೆ ನಂತರ ಸಭಾಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಆಯುಷ್ ಇಲಾಖೆ ಸಚಿವರು, ಪ್ರಧಾನಿ ಮೋದಿ ಆಯುಷ್ ಇಲಾಖೆಗೆ ಶಕ್ತಿಕೊಟ್ಟಿದ್ದಾರೆ. 2014ರ ನಂತರ ದೇಶಾದ್ಯಂತ ಆಯುಷ್ ಇಲಾಖೆ ವಿಸ್ತಾರಗೊಂಡಿದೆ. ಎಸ್‍ಡಿಎಂ ಸಂಸ್ಥೆ ಆಯುರ್ವೇದ ವಿಚಾರದಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ. ಶ್ರಮದ ಫಲದಿಂದ ಧರ್ಮಸ್ಥಳ ಸಂಸ್ಥೆ ಸಾಧನೆ ಮಾಡುತ್ತಿದೆ ಸೇವಾ ಸಮರ್ಪಣೆ ಮತ್ತು ವೀರೇಂದ್ರ ಹೆಗ್ಗಡೆಯವರ ಮನೋಭಾವದಿಂದ ಇಷ್ಟೆಲ್ಲಾ ಸಾಧನೆ ಸಾಧ್ಯ ಆಗಿದೆ ಎಂದು ಶ್ಲಾಘಿಸಿದರು.

    ಆಯುರ್ವೇದ ವೈದ್ಯ ಪದ್ಧತಿಯಿಂದ ಸ್ವಸ್ಥ ಸಮಾಜ ನಿರ್ಮಾಣ ಆಗಲಿದೆ. ಎಲ್ಲಾ ಚಿಕಿತ್ಸಾ ಪದ್ಧತಿಗಳ ದೇಹ ಒಂದೇ ಆಗಿರುತ್ತದೆ ಆದರೆ ಆಯುರ್ವೇದ ಚಿಕಿತ್ಸೆಯಲ್ಲಿ ಯಾವುದೇ ಅಡ್ಡಪರಿಣಾಮಗಳು ಇರುವುದಿಲ್ಲ. ಕಳೆದ ಏಳು ವರ್ಷದಲ್ಲಿ ಆಯುಷ್ ಇಲಾಖೆ ದೇಶಾದ್ಯಂತ ಬಹಳ ವಿಸ್ತಾರವಾಗಿ ಬೆಳೆದಿದೆ. ಎಲ್ಲಾ ರೋಗಗಳಿಗೂ ಆಯುರ್ವೇದ ಚಿಕಿತ್ಸೆ ಫಲಕಾರಿ. ದೇಶಾದ್ಯಂತ ಸಂಶೋಧನೆಗಳು, ಪ್ರಯೋಗಗಳು ಈ ನಿಟ್ಟಿನಲ್ಲಿ ನಡೆಯುತ್ತಿದೆ ಎಂದರು. ಇದನ್ನೂ ಓದಿ: ನೆಟ್ಟಿಗರ ಮನಗೆದ್ದ ನ್ಯೂಸ್‍ಪೇಪರ್ ಬಾಯ್

    ಆಯುರ್ವೇದದ ವಿಶ್ವಾಸಾರ್ಹತೆ ಇತ್ತೀಚೆಗೆ ಹೆಚ್ಚಾಗುತ್ತಿದೆ. ಜನರಿಗೆ ಆಯುರ್ವೇದದ ಮೇಲೆ ನಂಬಿಕೆ ಬರುತ್ತಿದೆ. ಆಯುರ್ವೇದ ಚಿಕಿತ್ಸೆಯನ್ನು ಮೈಗೂಡಿಸಿಕೊಳ್ಳುವ ಮೂಲಕ ನವಭಾರತ ನಿರ್ಮಾಣಕ್ಕೆ ಕೈ ಜೋಡಿಸೋಣ. ನರೇಂದ್ರ ಮೋದಿ ಈ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ದೇಶದ ಯೋಗ, ಆಯುರ್ವೇದ, ನ್ಯಾಚುರೋಪತಿ ವಿಶ್ವಕ್ಕೆ ಮಾದರಿಯಾಗುತ್ತಿದೆ. ಪ್ರಕೃತಿ ವಿರುದ್ಧವಾದ ಯಾವುದೇ ವೈದ್ಯಕೀಯ ಚಿಕಿತ್ಸೆಗಳಿಗೆ ಜನ ಒಳಗಾಗಬಾರದು. ಪ್ರಕೃತಿಗೆ ಪೂರಕವಾದ ಚಿಕಿತ್ಸೆಯ ಪಡೆಯೋಣ ಎಂದು ನುಡಿದರು.

    ಕಾರ್ಯಕ್ರಮದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ, ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ, ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಉಡುಪಿ ಶಾಸಕ ರಘುಪತಿ ಭಟ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಹರ್ಷೇಂದ್ರ ಕುಮಾರ್, ಡಾ. ಸುರೇಂದ್ರ ಕುಮಾರ್, ಡಾ. ಮಮತಾ ಮತ್ತು ಎಸ್‍ಡಿಎಂ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಸಿಬ್ಬಂದಿ ಉಪಸ್ಥಿತರಿದ್ದರು. ಇದನ್ನೂ ಓದಿ: ಹುಟ್ಟುಹಬ್ಬದ ಪಾರ್ಟಿಗೆ ಆಗಮಿಸಿದ ಟೆಕ್ಕಿ ಸಾವು