Tag: SDPI

  • ದ್ವೇಷ ಭಾಷಣ; ಎಸ್‌ಡಿಪಿಐ ಮುಖಂಡ ರಿಯಾಜ್ ಕಡಂಬು ಜೈಲಿಗೆ

    ದ್ವೇಷ ಭಾಷಣ; ಎಸ್‌ಡಿಪಿಐ ಮುಖಂಡ ರಿಯಾಜ್ ಕಡಂಬು ಜೈಲಿಗೆ

    ಉಡುಪಿ: ಎಸ್‌ಡಿಪಿಐ (SDPI) ಮುಖಂಡ ರಿಯಾಜ್ ಕಡಂಬುಗೆ (Riyaz Kadambu) 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹಿರಿಯಡ್ಕ ಸಬ್ ಜೈಲ್‌ಗೆ ರವಾನಿಸಲಾಗಿದ್ದು, ಸಂಘಪರಿವಾರದ ವಿರುದ್ಧ ದ್ವೇಷ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಈ ಶಿಕ್ಷೆ ವಿಧಿಸಲಾಗಿದೆ.

    ಜುಲೈನಲ್ಲಿ ಬ್ರಹ್ಮಾವರ ತಾಲೂಕಿನ ಕುಂಜಾಲು ಬಳಿ ದನದ ತಲೆ ಪತ್ತೆಯಾಗಿತ್ತು. ಇದು ವ್ಯವಸ್ಥಿತ ಷಡ್ಯಂತ್ರ ಎಂದು ರಿಯಾಜ್ ಕಡಂಬು ಹೇಳಿಕೆ ನೀಡಿದ್ದರು. ಜುಲೈ 15 ರಂದು ಉಡುಪಿ ನಗರ ಠಾಣೆಯಲ್ಲಿ ಈ ಬಗ್ಗೆ ಕೇಸ್ ದಾಖಲಾಗಿತ್ತು. ಜಾಮೀನು ನಿಯಮಗಳಿಗೆ ವಿರುದ್ಧವಾಗಿ ನಡೆದುಕೊಂಡ ಹಿನ್ನೆಲೆಯಲ್ಲಿ, ಕೋರ್ಟ್ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಉಡುಪಿ ಎಸ್‌ಪಿ ಹರಿರಾಮ್ ಶಂಕರ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ನಾವು ಮಾಡಿರೋದು ಪೊಲಿಟಿಕಲ್ ಮೀಟಿಂಗ್ ಅಲ್ಲ: ಪರಮೇಶ್ವರ್

    ಏನಿದು ಪ್ರಕರಣ?
    ಬೆಂಗಳೂರಿಗೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕುಂಜಲು ರಾಜ್ಯ ಹೆದ್ದಾರಿಯಲ್ಲಿ ಹಸುವಿನ ತಲೆ ಮತ್ತು ದೇಹದ ಭಾಗಗಳು ಪತ್ತೆಯಾಗಿತ್ತು. ಹಿಂದೂಗಳ ಭಾವನೆಗೆ ಧಕ್ಕೆ ಎಂದು ಬಿಜೆಪಿ, ಹಿಂದೂಪರ ಸಂಘಟನೆಗಳು ಈ ಬಗ್ಗೆ ಪ್ರತಿಭಟನೆ ಮಾಡಿತ್ತು. ಬ್ರಹ್ಮಾವರದಲ್ಲಿ ಹಸುವಿನ ದೇಹದ ಭಾಗಗಳನ್ನು ವಿಲೇವಾರಿ ಮಾಡಿರುವ ಬಗ್ಗೆ ಸುಳ್ಳು ಸುದ್ದಿ ಹರಡಿದ ಆರೋಪದ ಮೇಲೆ ಉಡುಪಿ ಪಟ್ಟಣ ಪೊಲೀಸರು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಉಪಾಧ್ಯಕ್ಷ ರಿಯಾಜ್ ಕಡಂಬು ವಿರುದ್ಧ ಪ್ರಕರಣ ದಾಖಲಿಸಿದ್ದರು.

    ಪತ್ರಿಕಾಗೋಷ್ಠಿಯಲ್ಲಿ, ಬ್ರಹ್ಮಾವರದ ಕುಂಜಾಲು ಎಂಬಲ್ಲಿ ಹಸುವಿನ ತಲೆ ಮತ್ತು ಇತರ ದೇಹದ ಭಾಗಗಳನ್ನು ರಸ್ತೆಗೆ ಎಸೆದ ಘಟನೆಯು ಅಭಿವೃದ್ಧಿ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಸಂಘ ಪರಿವಾರದ ಕಾರ್ಯಕರ್ತರು ನಡೆಸಿದ ಸಂಘಟಿತ ಕೃತ್ಯವಾಗಿದೆ ಎಂದು ರಿಯಾಜ್ ಕಡಂಬು ಹೇಳಿದ್ದರು. ಈ ಘಟನೆಯಲ್ಲಿ ಸಂಘ ಪರಿವಾರ ಮತ್ತು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದಾರೆ ಎಂದು ಅವರು ಆರೋಪಿಸಿದ್ದರು. ಘಟನೆಯ ಹಿಂದಿನ ವ್ಯಕ್ತಿಗಳನ್ನು ಪತ್ತೆಹಚ್ಚುವಂತೆ ಪೊಲೀಸರನ್ನು ಕೇಳಿಕೊಂಡಿದ್ದರು. ಇದನ್ನೂ ಓದಿ: ವಿಮೆ ಹಣದ ಮೇಲೆ ಕಣ್ಣು – ಅಳಿಯನನ್ನೇ ಕೊಲೆ ಮಾಡಿದ ಮಾವ & ಗ್ಯಾಂಗ್

  • Hubballi | ರಂಜಾನ್ ಆಚರಣೆ ವೇಳೆ ಎಸ್‌ಡಿಪಿಐನಿಂದ ವಿವಾದಿತ ಪೋಸ್ಟರ್‌ಗಳ ಪ್ರದರ್ಶನ

    Hubballi | ರಂಜಾನ್ ಆಚರಣೆ ವೇಳೆ ಎಸ್‌ಡಿಪಿಐನಿಂದ ವಿವಾದಿತ ಪೋಸ್ಟರ್‌ಗಳ ಪ್ರದರ್ಶನ

    -ಹಿಂದೂ ಸಂಘಟನೆಗಳಿಂದ ಆಕ್ರೋಶ

    ಹುಬ್ಬಳ್ಳಿ: ರಂಜಾನ್ (Ramzan) ಆಚರಣೆ ಸಮಯದಲ್ಲಿ ಒಂದು ಕಡೆ ಶಾಂತಿಯುತ ರಂಜಾನ್ ಪ್ರಾರ್ಥನೆ ನಡೆಯುತ್ತಿದ್ದರೆ, ಮತ್ತೊಂದೆಡೆ ವಿವಿಧ ವಿಷಯಗಳ ಪ್ಲೇ ಕಾರ್ಡ್ ಹಿಡಿದು, ಕೈಗೆ ಕಪ್ಪು ಪಟ್ಟಿ ಧರಿಸಿ ಎಸ್‌ಡಿಪಿಐ (SDPI) ಕಾರ್ಯಕರ್ತರು ಅಸಮಾಧಾನ ಹೊರಹಾಕಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

    ಹುಬ್ಬಳ್ಳಿಯ ಚೆನ್ನಮ್ಮ ವೃತ್ತದ ಬಳಿ ಪ್ಯಾಲೆಸ್ಟಿನ್‌ನಲ್ಲಿ ಯುದ್ಧ ನಿಲ್ಲಬೇಕು, ಎಸ್‌ಡಿಪಿಐ ಅಧ್ಯಕ್ಷ ಎಂಕೆ ಫೈಜಿ ಬಿಡುಗಡೆಯಾಗಬೇಕು, ವಕ್ಫ್ ಆಸ್ತಿ ಎಂದಿಗೂ ಮುಸ್ಲಿಮರದ್ದೇ, ದೇಶ, ಮನಸ್ಸು ಒಡೆದವರು ಮುಸ್ಲಿಂ ಆಸ್ತಿ ಮೇಲೆ ಕಣ್ಣು ಹಾಕಿದ್ದಾರೆ ಎಂದು ಕೇಂದ್ರ ಸರ್ಕಾರ, ಸಂಘಪರಿವಾರ ಗುರಿಯಾಗಿಟ್ಟುಕೊಂಡು ವಿವಿಧ ಪೋಸ್ಟರ್‌ಗಳ (Poster) ಪ್ರದರ್ಶನ ಮಾಡಲಾಗಿದೆ. ಇದನ್ನೂ ಓದಿ: ಚಿತ್ರದುರ್ಗ| ಜೂಜು ಅಡ್ಡೆಗಳ ಮೇಲೆ ಪೊಲೀಸರ ದಾಳಿ – 108 ಪ್ರಕರಣ ದಾಖಲು, 575 ಜೂಜುಕೋರರು ವಶಕ್ಕೆ

    ಕೂಡಲೇ ಎಚ್ಚೆತ್ತ ಪೊಲೀಸರು, ಪ್ರತಿಭಟನೆಗೆ ಕಡಿವಾಣಹಾಕಿದರು. ಈ ಬಗ್ಗೆ ಮಾತನಾಡಿದ ಎಸ್‌ಡಿಪಿಐ ಮುಖಂಡರು, ದೇಶದಲ್ಲಿ ಮುಸ್ಲಿಂ ಪರಿಸ್ಥಿತಿ ಸರಿಯಲ್ಲ. ಮುಸ್ಲಿಮರ ಪರವಾಗಿ ಎಸ್‌ಡಿಪಿಐ ಧ್ವನಿಯಾಗಿದೆ. ಎಸ್‌ಡಿಪಿಐ ಬ್ಯಾನ್ ಮಾಡಲು ಆಗಲ್ಲ. ಬರೀ ಜಿಲ್ಲಾ ಪಂಚಾಯತಿ, ಪಾಲಿಕೆ ಅಷ್ಟೇ ಅಲ್ಲಾ ಮುಂದಿನ ಬಾರಿ ಎಂಎಲ್‌ಎ, ಎಂಪಿ ಸ್ಥಾನ ಸಹ ಗೆಲ್ಲುತ್ತೆವೆ. ಪ್ಯಾಲೆಸ್ತೀನ್‌ನಲ್ಲಿ ಶಾಂತಿ ನೆಲಸಬೇಕು. ನಿಜವಾದ ಉಗ್ರರು ಇಸ್ರೇಲ್‌ನವರು ಎಂದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: Explained: ಮುಂಬೈ ಪ್ಲೇಯಿಂಗ್‌ ಇಲೆವೆನ್‌ನಲ್ಲಿ ರೋಹಿತ್‌ಗೆ ಇಲ್ಲ ಸ್ಥಾನ

    ಸಂಘಪರಿವಾರ ಅವಹೇಳನ ಮಾಡಿ ಪ್ಲೇ ಕಾರ್ಡ್ ಪ್ರದರ್ಶನ ಹಿನ್ನೆಲೆ ಹಿಂದೂಪರ ಸಂಘಟನೆಗಳು ಎಸ್‌ಡಿಪಿಐ ಕಾರ್ಯಕರ್ತರ ಮೇಲೆ ದೂರು ದಾಖಲಿಸಿದೆ. ಹಿಂದೂಗಳ ಭಾವನೆಗೆ ದಕ್ಕೆ ತಂದಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ. ವಿಶ್ವಹಿಂದೂ ಪರಿಷತ್, ಭಜರಂಗದಳ, ಹಿಂದೂ ವಕೀಲರ ಸಂಘದಿಂದ ದೂರು ಕೊಡಲಾಗಿದೆ. ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿ ಎಫ್‌ಐಆರ್ ದಾಖಲು ಮಾಡುವಂತೆ ಆಗ್ರಹಿಸಿದ್ದಾರೆ. ಠಾಣೆಯ ಮುಂದೆ ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು, ಎಸ್‌ಡಿಪಿಐ ಬ್ಯಾನ್ ಮಾಡುವಂತೆ ಆಗ್ರಹಿಸಿದೆ. ಇದನ್ನೂ ಓದಿ: ಎಂಎಲ್‌ಸಿ ರಾಜೇಂದ್ರ ಹತ್ಯೆಗೆ ಸುಪಾರಿ – ಆಡಿಯೋದಲ್ಲಿ ಮಾತನಾಡಿರುವ ಪುಷ್ಪಾ ಯಾರು? ಹಿನ್ನೆಲೆ ಏನು?

  • ಬಜೆಟ್‌ನಲ್ಲಿ ಕರಾವಳಿ ಜಿಲ್ಲೆಯ ಸಮಗ್ರ ಅಭಿವೃದ್ಧಿ ಕಡೆಗಣನೆ: ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅನ್ವರ್ ಸಾದತ್

    ಬಜೆಟ್‌ನಲ್ಲಿ ಕರಾವಳಿ ಜಿಲ್ಲೆಯ ಸಮಗ್ರ ಅಭಿವೃದ್ಧಿ ಕಡೆಗಣನೆ: ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅನ್ವರ್ ಸಾದತ್

    – ರಾಜ್ಯ ಬಜೆಟ್‌ನಲ್ಲಿ ಪುತ್ತೂರು ಮೆಡಿಕಲ್ ಕಾಲೇಜು ಘೋಷಣೆ ಸ್ವಾಗತಾರ್ಹ

    ಮಂಗಳೂರು: ರಾಜ್ಯ ಬಜೆಟ್‌ನಲ್ಲಿ ಪುತ್ತೂರು ಮೆಡಿಕಲ್‌ ಕಾಲೇಜು ಘೋಷಣೆ ಮಾಡಿರುವುದು ಸ್ವಾಗತಾರ್ಹ. ಆದರೆ, ಕರಾವಳಿ ಜಿಲ್ಲೆಯ ಸಮಗ್ರ ಅಭಿವೃದ್ಧಿಯನ್ನು ಬಜೆಟ್‌ನಲ್ಲಿ ಕಡೆಗಣಿಸಲಾಗಿದೆ ಎಂದು ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್‌ ಸಾದತ್‌ ಬೇಸರ ವ್ಯಕ್ತಪಡಿಸಿದ್ದಾರೆ.

    ಬಜೆಟ್‌ ಕುರಿತು ಪ್ರತಿಕ್ರಿಯಿಸಿರುವ ಅವರು, ಜಿಲ್ಲೆಯ ಜನತೆಯ ಬಹುಕಾಲದ ಬೇಡಿಕೆ ಈಡೇರಿದಂತಾಗಿದೆ. ಖಾಸಗಿ ಕಾಲೇಜುಗಳ ಲಾಬಿ ಜೋರಾಗಿರುವ ದಕ್ಷಿಣ ಕನ್ನಡ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಸ್ವಾಗತಾರ್ಹ. ಈ ಮೂಲಕ ಜಿಲ್ಲೆಯ ಜನತೆಯ ಹಕ್ಕೊತ್ತಾಯಕ್ಕೆ ಸರ್ಕಾರ ಮನ್ನಣೆ ನೀಡಿದೆ. ಆದರೆ ಜಿಲ್ಲೆಯ ಇತರ ಕ್ಷೇತ್ರಗಳನ್ನು ರಾಜ್ಯ ಬಜೆಟ್‌ನಲ್ಲಿ ಎಂದಿನಂತೆ ಕಡೆಗಣಿಸಲಾಗಿದೆ. ಎಲ್ಲಾ ಬಜೆಟ್‌ನಲ್ಲೂ ದಕ್ಷಿಣ ಕನ್ನಡ ಜಿಲ್ಲೆಗೆ ಸರ್ಕಾರ ಅನುಸರಿಸುತ್ತಿರುವ ಮಲತಾಯಿ ಧೋರಣೆ ಈ ಬಜೆಟ್‌ನಲ್ಲೂ ಮುಂದುವರಿದಿದೆ ಎಂದು ತಿಳಿಸಿದ್ದಾರೆ.

    ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು ಸೇರಿದಂತೆ ಕರಾವಳಿಯನ್ನು ಪ್ರವಾಸೋದ್ಯಮವಾಗಿ ಅಭಿವೃದ್ಧಿ ಪಡಿಸುವಂತೆ, ಅಡಿಕೆ ಬೆಲೆ, ಕಾನೂನು ಕಾಲೇಜು, ಪ್ರಮುಖವಾಗಿ ಪುತ್ತೂರು ಜಿಲ್ಲೆ ಘೋಷಣೆಯ ಬಗ್ಗೆಯೂ ಎಸ್‌ಡಿಪಿಐ ಹಕ್ಕೊತ್ತಾಯ ಹಾಗೂ ಮನವಿಗಳನ್ನು ಸಲ್ಲಿಸಿತ್ತು. ಇದು ದಕ್ಷಿಣ ಕನ್ನಡ ಜಿಲ್ಲೆಯ ಜನತೆಯ ಬೇಡಿಕೆಯೂ ಆಗಿತ್ತು. ಆದರೆ ಅವುಗಳನ್ನು ನಿರಾಕರಿಸುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ನಿರಾಸೆ ಹುಟ್ಟಿಸಿದೆ ಎಂದಿದ್ದಾರೆ.

    ಇತ್ತೀಚಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಕಾರ್ಕಳದಲ್ಲಿ ನಡೆದ ಒಂದು ಕಾರ್ಯಕ್ರಮದಲ್ಲಿ ಹಾಗೂ ಎರಡು ದಿನಗಳ ಹಿಂದೆ ಅಧಿವೇಶನದ ಚರ್ಚೆಯಲ್ಲೂ ಪ್ರವಾಸೋದ್ಯಮ ಕುರಿತು ಚರ್ಚೆ ಮಾಡಿದ್ದರು. ಹಾಗಾಗಿ ಕರಾವಳಿಯ ಜನತೆ ಈ ಬಾರಿಯ ಬಜೆಟ್‌ನಲ್ಲಿ ಪ್ರವಾಸೋದ್ಯಮಕ್ಕೆ ಸರ್ಕಾರ ಹಣ ಮೀಸಲಿಡಲಿದೆ ಎಂದೇ ಭಾವಿಸಿದ್ದರು. ಆದರೆ ಇದು ಸುಳ್ಳಾಗಿದೆ. ಭೌಗೋಳಿಕ ದೃಷ್ಟಿಯಿಂದ ಪುತ್ತೂರನ್ನು ಜಿಲ್ಲೆಯನ್ನಾಗಿ ಘೋಷಣೆ ಮಾಡಬೇಕೆಂಬ ಪ್ರಮುಖ ಬೇಡಿಕೆಯನ್ನು ಕೂಡ ಈ ಬಜೆಟ್‌ನಲ್ಲಿ ಕಡೆಗಣಿಸಲಾಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

    ಕರಾವಳಿ ಜನತೆಯ ಜೀವನಾಡಿಯಾದ ಅಡಿಕೆಗೆ ಎಲೆಚುಕ್ಕಿ, ಹಳದಿ ರೋಗ ಹಾಗೂ ಹವಾಮಾನದ ವೈಪರೀತ್ಯದಿಂದ ವರ್ಷ ಹೋದಂತೆ ಫಸಲು ಕಡಿಮೆಯಾಗುತ್ತಿದೆ. ಖರ್ಚು ವೆಚ್ಚಗಳು ಅಧಿಕ ವಾಗುತ್ತಿದೆ. ಹಾಗಾಗಿ ಅಡಿಕೆಗೆ ಬೆಂಬಲ ನೀಡಬೇಕೆಂಬ ಬೇಡಿಕೆಯನ್ನು ಬಜೆಟ್‌ನಲ್ಲಿ ಕಡೆಗಣಿಸಲಾಗಿದೆ. ಈಗಾಗಲೇ ಪುತ್ತೂರಿಗೆ ಘೋಷಣೆಯಾದ ಮೆಡಿಕಲ್ ಕಾಲೇಜಿನ ಪ್ರಕ್ರಿಯೆಯನ್ನು ವಿಳಂಬ ಮಾಡದೆ ಕೂಡಲೇ ಕಾರ್ಯರೂಪಕ್ಕೆ ತರಬೇಕು ಎಂದು ಅವರು ಒತ್ತಾಯಿಸಿದ್ದಾರೆ.

  • SDPI ಪ್ರಧಾನ ಕಚೇರಿ ಸೇರಿ 12 ಸ್ಥಳಗಳ ಮೇಲೆ ಇಡಿ ದಾಳಿ

    SDPI ಪ್ರಧಾನ ಕಚೇರಿ ಸೇರಿ 12 ಸ್ಥಳಗಳ ಮೇಲೆ ಇಡಿ ದಾಳಿ

    ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ)ಗೆ ಸಂಬಂಧಿಸಿದ ಪ್ರಧಾನ ಕಚೇರಿ ಸೇರಿ ಹಲವು ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ.

    ಎಸ್‌ಡಿಪಿಐ (SDPI) ರಾಷ್ಟ್ರೀಯ ಅಧ್ಯಕ್ಷ ಎಂ.ಕೆ.ಫೈಜಿ ಬಂಧನದ ಬೆನ್ನಲ್ಲೇ ಇಡಿ ದಾಳಿ ನಡೆಸಿದೆ. ನವದೆಹಲಿಯಲ್ಲಿರುವ ಎಸ್‌ಡಿಪಿಐ ಪ್ರಧಾನ ಕಚೇರಿ, ಕೇರಳದ ತಿರುವನಂತಪುರಂ ಮತ್ತು ಮಲಪ್ಪುರಂ, ಬೆಂಗಳೂರು, ಆಂಧ್ರಪ್ರದೇಶದ ನಂದ್ಯಾಲ್, ಥಾಣೆ, ಚೆನ್ನೈ, ಜಾರ್ಖಂಡ್‌ನ ಪಾಕೂರ್, ಕೋಲ್ಕತ್ತಾ, ಲಕ್ನೋ ಮತ್ತು ಜೈಪುರ ಸೇರಿದಂತೆ 12 ಸ್ಥಳಗಳಲ್ಲಿ ಇಡಿ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಕ್ಕೆ ತೆಗೆದುಕೊಂಡಿದೆ. ಇದನ್ನೂ ಓದಿ: ಹಾಸನ| ರಸ್ತೆ ವಿಚಾರಕ್ಕೆ ಸೈನಿಕ, ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ

    ಎಸ್‌ಡಿಪಿಐಯು ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜಕೀಯ ಅಂಗವಾಗಿದೆ. ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದನ್ನು ಉಲ್ಲೇಖಿಸಿ, 2022ರ ಸೆಪ್ಟೆಂಬರ್‌ನಲ್ಲಿ ಕೇಂದ್ರ ಸರ್ಕಾರವು ಪಿಎಫ್‌ಐ ಅನ್ನು ಕಾನೂನುಬಾಹಿರ ಸಂಘವೆಂದು ಘೋಷಿಸಿತ್ತು. ಎಸ್‌ಡಿಪಿಐಯು ಭಾರತದ ಚುನಾವಣಾ ಆಯೋಗದಲ್ಲಿ ರಾಜಕೀಯ ಪಕ್ಷವಾಗಿ ನೋಂದಾಯಿಸಲ್ಪಟ್ಟ ಹಿನ್ನೆಲೆ ನಿಷೇಧ ಸಾಧ್ಯವಾಗಿರಲಿಲ್ಲ. ಇದನ್ನೂ ಓದಿ: ಒಂದೂವರೆ ತಿಂಗಳ ಮಗುವಿಗೆ 2 ವರ್ಷ ಅವಧಿ ಮುಗಿದ ಲಸಿಕೆ ಹಾಕಿದ ವೈದ್ಯ

    ಪಿಎಫ್‌ಐ ನಿಷೇಧದ ಬಳಿಕ 2009ರಲ್ಲಿ ಸ್ಥಾಪನೆಯಾದ ಮತ್ತು ದೆಹಲಿಯಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಎಸ್‌ಡಿಪಿಐ ಮೂಲಕ ಪಿಎಫ್‌ಐ ತನ್ನ ಕ್ರಿಮಿನಲ್ ಚಟುವಟಿಕೆಗಳನ್ನು ನಡೆಸುತ್ತಿದೆ ಎಂದು ಇಡಿ ಆರೋಪಿಸಿದೆ. ಇದಕ್ಕೆ ಪೂರಕ ಎನ್ನುವಂತೆ ಪಿಎಫ್‌ಐ ಬ್ಯಾಂಕ್ ಖಾತೆಗಳಿಂದ ಎಸ್‌ಡಿಪಿಐಗೆ ಭಾರೀ ಪ್ರಮಾಣದ ಹಣ ವರ್ಗಾವಣೆಯಾಗಿರುವುದು ಕಂಡುಬಂದಿದೆ. ಇದನ್ನೂ ಓದಿ: ಕಮ್ಯೂನಲ್ ಕ್ರಿಮಿನಲ್‌ಗಳಿಗೆ ಸಪೋರ್ಟ್ ಮಾಡುವ ರಾಜನೀತಿ ದೇಶಕ್ಕೆ ಅಪಾಯಕಾರಿ: ಸಿ.ಟಿ.ರವಿ

    ಈ ವಿಚಾರಕ್ಕೆ ಸಂಬಂಧಿಸಿದಂತೆ ತನಿಖೆ ಮಾಡಲು ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ.ಫೈಜಿ ಅವರನ್ನು ಮಾ. 3ರಂದು ಬಂಧಿಸಿರುವ ಇಡಿ ಅಧಿಕಾರಿಗಳು ಎಸ್‌ಡಿಪಿಐ ಮತ್ತು ನಿಷೇಧಿತ ಪಿಎಫ್‌ಐ ನಡುವಿನ ಆರ್ಥಿಕ ವ್ಯವಹಾರಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ದಾಳಿಯ ಮೂಲಕ ಎಸ್‌ಡಿಪಿಐ ಆರ್ಥಿಕ ವ್ಯವಹಾರಗಳನ್ನು ಇಡಿ ಪರಿಶೀಲಿಸುತ್ತಿದೆ.

  • ಉತ್ತಮ ಶಿಕ್ಷಕ ಪ್ರಶಸ್ತಿಗೆ ತಡೆ ಪ್ರಕರಣ; ಎಸ್‌ಡಿಪಿಐ ಕೇಳಿ ಈ ಸರ್ಕಾರ ನಡೀತಿದ್ಯಾ? – ಛಲವಾದಿ ಕಿಡಿ

    ಉತ್ತಮ ಶಿಕ್ಷಕ ಪ್ರಶಸ್ತಿಗೆ ತಡೆ ಪ್ರಕರಣ; ಎಸ್‌ಡಿಪಿಐ ಕೇಳಿ ಈ ಸರ್ಕಾರ ನಡೀತಿದ್ಯಾ? – ಛಲವಾದಿ ಕಿಡಿ

    ಬೆಂಗಳೂರು: ಉತ್ತಮ ಶಿಕ್ಷಕರ (Best Teacher) ಆಯ್ಕೆ ವಿಚಾರದಲ್ಲಿ ಸರ್ಕಾರಕ್ಕೆ ದೂರು ಕೊಟ್ಟಿದ್ದು ಯಾರು? ಎಸ್‌ಡಿಪಿಐನವರು (SDPI) ದೂರು ಕೊಟ್ಟಿದ್ದಾರೆ. ಎಸ್‌ಡಿಪಿಐ ಕೇಳಿ ಈ ಸರ್ಕಾರ ನಡೆಯುತ್ತಿದೆಯಾ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಪ್ರಶ್ನಿಸಿದ್ದಾರೆ.

    ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಯಾರನ್ನೋ ಓಲೈಕೆ ಮಾಡುವ ಕಾರಣಕ್ಕೆ ಇವತ್ತು ಕುಂದಾಪುರ ಸರ್ಕಾರಿ ಕಾಲೇಜು ಪ್ರಾಂಶುಪಾಲ ರಾಮಕೃಷ್ಣರಿಗೆ ನೀಡಿದ್ದ ಉತ್ತಮ ಪ್ರಶಸ್ತಿ ತಡೆಹಿಡಿಯುವ ಕ್ರಮ ಕೈಗೊಂಡಿದ್ದು ಸರಿಯಲ್ಲ. ಶಾಲೆಗಳು ಪವಿತ್ರ ಸ್ಥಳಗಳು. ಮಕ್ಕಳ ಮನಸ್ಸಿನಲ್ಲಿ ಇಂಥ ಕುಚೋದ್ಯತನ ಹುಟ್ಟುಹಾಕುವ ಕೆಲಸ ಮಾಡಬಾರದು ಎಂದು ತಿಳಿಸಿದರು. ಇದನ್ನೂ ಓದಿ: ಎತ್ತಿನಹೊಳೆ ಯೋಜನೆಯಲ್ಲಿ ಭ್ರಷ್ಟಾಚಾರ- ಸಮಗ್ರ ಅಧ್ಯಯನ ವರದಿ ಪಡೆದು ಮುಂದುವರೆಯಿರಿ: ಸಿಎಂಗೆ ಸಿ.ಟಿ.ರವಿ ಆಗ್ರಹ

    ಹನುಮಾನ್ ವಿಚಾರದಲ್ಲೂ ಎಸ್‌ಡಿಪಿಐ ದೂರು ನೀಡಿತ್ತು. ನೀವು ಆದೇಶ ಮಾಡಿಬಿಟ್ಟಿರಿ. ಆದೇಶ ಮಾಡಲು ನಿಮಗೆ ಅಧಿಕಾರ ಕೊಟ್ಟಿದ್ದು ಯಾರು? ಒಬ್ಬ ತಹಶೀಲ್ದಾರರಿಗೆ ಅದನ್ನು ಮಾಡಲು ಅಧಿಕಾರ ಇದೆಯೇ? ಮತ್ತೆ ಆದೇಶ ವಾಪಸ್ ಪಡೆದಿರಿ. ಅಲ್ಲಿ ಶಾಂತಿ ಕದಡುವ ವಾತಾವರಣ ಸೃಷ್ಟಿ ಆಗುತ್ತಿತ್ತು. ಜನ ನಿಮಗೆ ಛೀಮಾರಿ ಹಾಕಲು ಪ್ರಾರಂಭಿಸಿದ್ದರು. ಅದಕ್ಕೆ ವಾಪಸ್ ಪಡೆದಿರಿ ಅಲ್ಲವೇ ಎಂದು ತಹಶೀಲ್ದಾರರನ್ನು ಸಸ್ಪೆಂಡ್ ಮಾಡಲು ಒತ್ತಾಯಿಸಿದರು. ಇದನ್ನೂ ಓದಿ: ಶಿಕ್ಷಕರ ಸಮಸ್ಯೆಗೆ ಶೀಘ್ರವೇ ಪರಿಹಾರ: ಸಿದ್ದರಾಮಯ್ಯ

    ಇಂಥವೆಲ್ಲ ಮಾಡುತ್ತಿದ್ದರೆ ಈ ರಾಜ್ಯವನ್ನು ಕಾಪಾಡುವವರು ಯಾರು? ನಾವು ಇರಬಹುದು, ನೀವು ಇರಬಹುದು, ಯಾರೇ ಇರಬಹುದು, ಸ್ವಲ್ಪ ದಿನಕ್ಕೆ ಅಧಿಕಾರದಲ್ಲಿ ಇರುತ್ತೇವೆ. ಆದರೆ ಸಾಂವಿಧಾನಿಕ ವ್ಯವಸ್ಥೆ ಬಿಟ್ಟು ನೀವೇನೇ ಮಾಡಿದರೂ ಕೂಡ ಶಾಂತಿ ಕದಡುವ ವಾತಾವರಣ ಸೃಷ್ಟಿ ಆಗುತ್ತದೆ. ಅಂಥ ಕೆಲಸ ಮಾಡದಿರಿ ಎಂದು ಸಲಹೆ ನೀಡಿದರು. ಇದನ್ನೂ ಓದಿ: Canada | ಅಲ್ಪ ಮತಕ್ಕೆ ಕುಸಿದ ಜಸ್ಟಿನ್‌ ಟ್ರುಡೊ ಸರ್ಕಾರ

  • ಪಬ್ಲಿಕ್‌ ಟಿವಿ ಇಂಪ್ಯಾಕ್ಟ್ | ಗಂಗಾವತಿಯಲ್ಲಿ ಬಿಲ್ಲು, ಬಾಣಗಳಿರುವ ವಿದ್ಯುತ್‌ ಕಂಬ ತೆರವು – ಆದೇಶ ಹಿಂಪಡೆದ ತಹಶೀಲ್ದಾರ್‌

    ಪಬ್ಲಿಕ್‌ ಟಿವಿ ಇಂಪ್ಯಾಕ್ಟ್ | ಗಂಗಾವತಿಯಲ್ಲಿ ಬಿಲ್ಲು, ಬಾಣಗಳಿರುವ ವಿದ್ಯುತ್‌ ಕಂಬ ತೆರವು – ಆದೇಶ ಹಿಂಪಡೆದ ತಹಶೀಲ್ದಾರ್‌

    – KRIDL ವಿರುದ್ಧ ಕೇಸ್‌ ದಾಖಲಿಸದಂತೆ ಸೂಚನೆ
    – ಸಾಮಾಜಿಕ ಜಾಲತಾಣದಲ್ಲಿ ಸರ್ಕಾರದ ವಿರುದ್ಧ ಕಿಡಿಕಾರಿದ್ದ ನೆಟ್ಟಿಗರು

    ಕೊಪ್ಪಳ: ಪಬ್ಲಿಕ್‌ ಟಿವಿ ವರದಿ ಬೆನ್ನಲ್ಲೇ ಗಂಗಾವತಿ (Gangavathi) ನಗರದ ಜುಲೈನಗರದಿಂದ ರಾಣಾ ಪ್ರತಾಪ್ ವೃತ್ತದವರೆಗೆ ಅಭಿವೃದ್ಧಿಪಡಿಸಿದ ರಸ್ತೆ ಮಧ್ಯೆ ಹಾಕಿರುವ ವಿದ್ಯುತ್ ಕಂಬಗಳ (Electric Pole) ತೆರವುಗೊಳಿಸಲು ಹೊರಡಿಸಿದ್ದ ಆದೇಶವನ್ನು ಗಂಗಾವತಿ ತಹಶೀಲ್ದಾರ್‌ ಹಿಂದಕ್ಕೆ ಪಡೆದಿದ್ದಾರೆ. ಇದರ ಜೊತೆ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ಸಂಸ್ಥೆ (KRIDL) ವಿರುದ್ಧವೇ ಪ್ರಕರಣ ದಾಖಲಿಸದಂತೆ ಸೂಚಿಸಿದ್ದಾರೆ.

    ಅಗಸ್ಟ್ 28ರ ಸಂಜೆ ಹೊರಡಿಸಿದ್ದ ಆದೇಶವನ್ನು ಹಿಂಪಡೆದಿರುವ ತಹಸೀಲ್ದಾರ್ ನಾಗರಾಜ್‌ ಅವರು ಈ ಬಗ್ಗೆ ಸಂಬಂಧಿತ ಸಂಕ್ಷಮ ಪ್ರಾಧಿಕಾರದಲ್ಲಿ ಜನಾಭಿಪ್ರಾಯ ಪಡೆದು ಮುಂದುವರೆಯಲಾಗುವುದು. ಧಾರ್ಮಿಕ, ಮತೀಯ ಭಾವನೆಯಂತ ಸೂಕ್ಷ್ಮ ವಿಚಾರ ಉಂಟಾದಲ್ಲಿ ಕಾನೂನನಾತ್ಮಕ ಕ್ರಮ ಕೈಗೊಳ್ಳಲಾಗುವುದು  ಎಂದು ತಮ್ಮ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಾಗರಾಜ್, ಈ ವಿಷಯ ನಗರಸಭೆಯ ವ್ಯಾಪ್ತಿಗೆ ಬರುವ ಕಾರಣ ಸಾಮಾನ್ಯಸಭೆಯಲ್ಲಿ ಇದೇ ವಿಚಾರದ ಅಂಗವಾಗಿ ಪ್ರಸ್ತಾಪ ಮಾಡಿ ವಿಷಯ ಮಂಡನೆ ಮಾಡಿ ಅನುಮೋದನೆ ಪಡೆದುಕೊಂಡಿರುವುದು ನನ್ನ ಗಮನಕ್ಕೆ ಬಾರದ ಹಿನ್ನೆಲೆ ಆದೇಶ ಮಾಡಲಾಗಿತ್ತು ಎಂದು ತಿಳಿಸಿದ್ದಾರೆ.

    ಪಬ್ಲಿಕ್‌ ಟಿವಿ ಡಿಜಿಟಲ್‌ ಇಂದು ಬೆಳಗ್ಗೆ ವರದಿ ಪ್ರಕಟಿಸುತ್ತಿದ್ದಂತೆ ಸರ್ಕಾರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಭಾರೀ ಟೀಕೆ ವ್ಯಕ್ತಪಡಿಸಿ ಅಭಿಪ್ರಾಯ ವ್ಯಕ್ತಪಡಿಸಿದ್ದರು.

    ಏನಿದು ವಿವಾದ?
    ಅಯೋಧ್ಯೆ, ತಿರುಪತಿಯ ಮಾದರಿಯಲ್ಲಿ ಗಂಗಾವತಿ ಅಂಜನಾದ್ರಿ (Anjanadri Betta) ಅಭಿವೃದ್ಧಿಯಾಗಬೇಕೆಂಬ ನಿಟ್ಟಿನಲ್ಲಿ ಮಹಾರಾಣಾ ಪ್ರತಾಪ್ ಸರ್ಕಲ್‌ನಿಂದ ಜುಲೈ ನಗರದವರೆಗೂ ತಿರುಪತಿ, ಅಯೋಧ್ಯೆಯಲ್ಲಿರುವಂತೆ (Ayodhya) ವಿದ್ಯುತ್ ಕಂಬಗಳನ್ನು ಹಾಕಿದ್ದಕ್ಕೆ ಎಸ್‌ಡಿಪಿಐ (SDPI) ಆಕ್ಷೇಪ ವ್ಯಕ್ತಪಡಿಸಿತ್ತು.

    ಇದು ಕೇವಲ ಒಂದು ಧರ್ಮದ (Religion) ಸಂಕೇತವಾಗಿದೆ. ಇದರಿಂದ ಗಂಗಾವತಿ ನಗರದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ಆಗುತ್ತದೆ ಎಂದು ಆರೋಪಿಸಿ ಇದನ್ನು ತೆರವುಗೊಳಿಸುವಂತೆ ಗಂಗಾವತಿ ನಗರಸಭೆ ಕಮಿಷನರ್‌ಗೆ SDPI ಮನವಿ ಮಾಡಿತ್ತು.  ಇದನ್ನೂ ಓದಿ: ಮೈಕ್ ಹಾಕಿ ಊರಿಗೆಲ್ಲ ಕೇಳುವ ಹಾಗೆ ಕೂಗಿದ್ರೆ ಧಾರ್ಮಿಕ ಭಾವನೆಗೆ ಧಕ್ಕೆಯಾಗಲ್ವಾ? – ತ್ರಿಶೂಲ, ತಿಲಕದ ವಿದ್ಯುತ್ ಕಂಬ ತೆರವು ಆದೇಶಕ್ಕೆ ಸಿ.ಟಿ ರವಿ ಕೆಂಡ

    ಎಸ್‌ಡಿಪಿಐ ನೀಡಿದ ಮನವಿ ಪತ್ರ
    ಎಸ್‌ಡಿಪಿಐ ನೀಡಿದ್ದ ಮನವಿ ಪತ್ರ

    ಈ ಮನವಿಯ ಬೆನ್ನಲ್ಲೇ ಗಂಗಾವತಿ ನಗರದ ಜುಲೈನಗರದಿಂದ ರಾಣಾ ಪ್ರತಾಪ್ ವೃತ್ತದವರೆಗೆ ಅಭಿವೃದ್ಧಿಪಡಿಸಿದ ರಸ್ತೆ ಮಧ್ಯೆ ಹಾಕಿರುವ ವಿದ್ಯುತ್ ಕಂಬಗಳ ತೆರವಿಗೆ ತಹಶೀಲ್ದಾರ್‌ ಆದೇಶಿಸಿದ್ದರು. ಅಷ್ಟೇ ಅಲ್ಲದೇ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ಸಂಸ್ಥೆ (KRIDL) ವಿರುದ್ಧವೇ ಪ್ರಕರಣ ದಾಖಲಿಸಲು ಸೂಚಿಸಿದ್ದರು.  ಇದನ್ನೂ ಓದಿ: ಐಪಿಎಲ್‌ ಅಖಾಡದಲ್ಲಿ ʻಇಂಪ್ಯಾಕ್ಟ್‌ʼ ವಾರ್‌, ಪರ-ವಿರೋಧ ಚರ್ಚೆ; ಏನಿದು ನಿಯಮ? 

    ಆಗಸ್ಟ್‌ 28 ರಂದು ಜಿಲ್ಲಾಧಿಕಾರಿಗಳ ಮೌಖಿಕ ಆದೇಶದಂತೆ ತಹಶೀಲ್ದಾರ್‌ ಅವರು ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷರಿಗೆ ನೀಡಿರುವ ಆದೇಶದ ಪ್ರತಿ ಪಬ್ಲಿಕ್‌ ಟಿವಿಗೆ ಲಭ್ಯವಾಗಿತ್ತು.

    ತಹಶೀಲ್ದಾರ್‌ ಹೊರಡಿಸಿದ್ದ ಆದೇಶ ಪ್ರತಿ

    ಹನುಮನ ಜನ್ಮಸ್ಥಳವಾಗಿರುವ ಅಂಜನಾದ್ರಿ ಭಾಗವನ್ನು ಅಯೋಧ್ಯೆ, ತಿರುಪತಿ ಮಾದರಿಯಲ್ಲಿ ಅಭಿವೃದ್ಧಿ ಮಾಡಬೇಕು ಎಂಬ ಒತ್ತಾಯ ಹಲವು ಬಾರಿ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಶಾಸಕ ಜನಾರ್ದನ ರೆಡ್ಡಿ ಚುನಾವಣಾ ಪ್ರಚಾರದಲ್ಲೂ ಭರವಸೆ ನೀಡಿದ್ದರು. ಅದರಂತೆ ಈಗ ವಿದ್ಯುತ್ ಕಂಬಗಳಲ್ಲಿ ಬಿಲ್ಲು, ಬಾಣಗಳು ಇರುವ ಚಿತ್ರಗಳನ್ನು ಅಳವಡಿಸಲಾಗಿತ್ತು.

    ವಿದ್ಯುತ್ ಕಂಬಗಳಲ್ಲಿ ಅಳವಡಿಸಿರುವ ಚಿತ್ರಗಳು ಐತಿಹಾಸಿಕ ಅಂಜನಾದ್ರಿ ಪರ್ವತದ ಮಾರ್ಗಸೂಚಿಗೆ ಅನುಕೂಲವಾಗಿವೆ. ಅಂಜನಾದ್ರಿಗೆ ಬರುವ ಭಕ್ತರಲ್ಲಿ ಧಾರ್ಮಿಕ ಭಕ್ತಿ ಉಂಟಾಗುವುದರಿಂದ ಇವುಗಳನ್ನು ಅಳವಡಿಸಲಾಗಿದೆ. ಇದರಿಂದ ಯಾರ ಭಾವನೆಗೂ ಧಕ್ಕೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಅಷ್ಟೇ ಅಲ್ಲದೇ ನಗರಸಭೆಯಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲೂ ಜನಾರ್ದನ ರೆಡ್ಡಿ ಅವರು ವಿಷಯ ಪ್ರಸ್ತಾಪಿಸಿ ಈ ವಿಷಯದಲ್ಲಿ ಅನಾವಶ್ಯಕ ಗೊಂದಲ ಸೃಷ್ಟಿಸದೇ ಎಲ್ಲರೂ ಸಹಕಾರ ನೀಡುವಂತೆ ಸದಸ್ಯರಲ್ಲಿ ಮನವಿ ಮಾಡಿದ್ದರು.

     

  • Anjanadri Betta | ಧಾರ್ಮಿಕ ಭಾವನೆಗಳಿಗೆ ಧಕ್ಕೆ – SDPI ದೂರಿನ ಬೆನ್ನಲ್ಲೇ ಗಂಗಾವತಿಯಲ್ಲಿ ಬಿಲ್ಲು, ಬಾಣಗಳಿರುವ ವಿದ್ಯುತ್ ಕಂಬ ತೆರವಿಗೆ ಆದೇಶ

    Anjanadri Betta | ಧಾರ್ಮಿಕ ಭಾವನೆಗಳಿಗೆ ಧಕ್ಕೆ – SDPI ದೂರಿನ ಬೆನ್ನಲ್ಲೇ ಗಂಗಾವತಿಯಲ್ಲಿ ಬಿಲ್ಲು, ಬಾಣಗಳಿರುವ ವಿದ್ಯುತ್ ಕಂಬ ತೆರವಿಗೆ ಆದೇಶ

    – ಅಂಜನಾದ್ರಿ ಭಾಗದ ಅಭಿವೃದ್ಧಿಗೆ ಹಾಕಲಾಗಿದ್ದ ವಿದ್ಯುತ್‌ ಕಂಬಗಳು
    – KRIDL ಎಂಜಿನಿಯರ್‌ ವಿರುದ್ಧ ಕೇಸ್ ದಾಖಲಿಸಲು ತಹಶೀಲ್ದಾರ್‌ ಸೂಚನೆ
    – ಗಂಗಾವತಿ ನಗರಸಭೆಗೆ ದೂರು ನೀಡಿದ್ದ ಎಸ್‌ಡಿಪಿಐ

    ಕೊಪ್ಪಳ: ಗಂಗಾವತಿ ನಗರದ ಜುಲೈನಗರದಿಂದ ರಾಣಾ ಪ್ರತಾಪ್ ವೃತ್ತದವರೆಗೆ ಅಭಿವೃದ್ಧಿಪಡಿಸಿದ ರಸ್ತೆ ಮಧ್ಯೆ ಹಾಕಿರುವ ವಿದ್ಯುತ್ ಕಂಬಗಳ ತೆರವಿಗೆ ತಹಶೀಲ್ದಾರ್‌ ಆದೇಶಿಸಿದ್ದಾರೆ. ಅಷ್ಟೇ ಅಲ್ಲದೇ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ಸಂಸ್ಥೆ (KRIDL) ವಿರುದ್ಧವೇ ಪ್ರಕರಣ ದಾಖಲಿಸಲು ಸೂಚಿಸಿದ್ದಾರೆ.

    ಆಗಸ್ಟ್‌ 28 ರಂದು ಜಿಲ್ಲಾಧಿಕಾರಿಗಳ ಮೌಖಿಕ ಆದೇಶದಂತೆ ತಹಶೀಲ್ದಾರ್‌ ಅವರು ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷರಿಗೆ ನೀಡಿರುವ ಆದೇಶದ ಪ್ರತಿ ಪಬ್ಲಿಕ್‌ ಟಿವಿಗೆ ಲಭ್ಯವಾಗಿದೆ. ಇದನ್ನೂ ಓದಿ: ಗುಜರಾತ್‌ನ ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ – ಮಳೆಗೆ 15 ಸಾವು, 23 ಸಾವಿರ ಮಂದಿ ಸ್ಥಳಾಂತರ

    ಜುಲೈನಗರದಿಂದ ರಾಣಾ ಪ್ರತಾಪ್ ವೃತ್ತದವರೆಗಿನ ರಸ್ತೆ ನಗರ ಸಭೆ ವ್ಯಾಪ್ತಿಗೆ ಬರುತ್ತಿದೆ. ಇಲ್ಲಿ ಕೆಐಆರ್‌ಡಿಎಲ್‌ ಸಂಸ್ಥೆ ಸ್ಥಾಪಿಸಿದ ವಿದ್ಯುತ್‌ ಕಂಬಗಳು (Electric Pole) ಧಾರ್ಮಿಕ ಸೌಹಾರ್ದತೆ ಹಾಗೂ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ರೀತಿಯಲ್ಲಿ ನಿರ್ಮಾಣವಾಗಿದೆ. ಇದು ನಗರದಲ್ಲಿ ಸಾರ್ವಜನಿಕರ ಶಾಂತಿಗೆ ಭಂಗ ಉಂಟುಮಾಡುವ ಸಾಧ್ಯತೆಗಳು ಇರುವುದರಿಂದ ಅವುಗಳನ್ನು ಕೂಡಲೇ ತೆರವುಗೊಳಿಸಬೇಕು. ಈ ಕಾಮಗಾರಿ ಕೈಗೊಂಡಿರುವ ಕೆಆರ್‌ಐಡಿಎಲ್‌ ಎಂಜಿನಿಯರ್‌ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಂಡು ವರದಿ ನೀಡುವಂತೆ ತಹಶೀಲ್ದಾರ್‌ ನಾಗರಾಜ್‌ ಅವರು ಸೂಚಿಸಿದ್ದಾರೆ.

    ಹನುಮನ ಜನ್ಮಸ್ಥಳವಾಗಿರುವ ಅಂಜನಾದ್ರಿ ಭಾಗವನ್ನು ಅಯೋಧ್ಯೆ, ತಿರುಪತಿ ಮಾದರಿಯಲ್ಲಿ ಅಭಿವೃದ್ಧಿ ಮಾಡಬೇಕು ಎಂಬ ಒತ್ತಾಯ ಹಲವು ಬಾರಿ ಕೇಳಿ ಬಂದಿತ್ತು. ಜನಾರ್ದನ ರೆಡ್ಡಿ ಅವರು ಚುನಾವಣಾ ಪ್ರಚಾರದಲ್ಲೂ ಭರವಸೆ ನೀಡಿದ್ದರು. ಅದರಂತೆ ಈಗ ವಿದ್ಯುತ್ ಕಂಬಗಳಲ್ಲಿ ಬಿಲ್ಲು, ಬಾಣಗಳು ಇರುವ ಚಿತ್ರಗಳನ್ನು ಅಳವಡಿಸಲಾಗಿತ್ತು.

    ವಿದ್ಯುತ್ ಕಂಬಗಳಲ್ಲಿ ಅಳವಡಿಸಿರುವ ಚಿತ್ರಗಳು ಐತಿಹಾಸಿಕ ಅಂಜನಾದ್ರಿ ಪರ್ವತದ ಮಾರ್ಗಸೂಚಿಗೆ ಅನುಕೂಲವಾಗಿವೆ. ಅಂಜನಾದ್ರಿಗೆ ಬರುವ ಭಕ್ತರಲ್ಲಿ ಧಾರ್ಮಿಕ ಭಕ್ತಿ ಉಂಟಾಗುವುದರಿಂದ ಇವುಗಳನ್ನು ಅಳವಡಿಸಲಾಗಿದೆ. ಇದರಿಂದ ಯಾರ ಭಾವನೆಗೂ ಧಕ್ಕೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಅಷ್ಟೇ ಅಲ್ಲದೇ ನಗರಸಭೆಯಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲೂ ಶಾಸಕ ಜನಾರ್ದನ ರೆಡ್ಡಿ ಅವರು ವಿಷಯ ಪ್ರಸ್ತಾಪಿಸಿ ಈ ವಿಷಯದಲ್ಲಿ ಅನಾವಶ್ಯಕ ಗೊಂದಲ ಸೃಷ್ಟಿಸದೇ ಎಲ್ಲರೂ ಸಹಕಾರ ನೀಡುವಂತೆ ಸದಸ್ಯರಲ್ಲಿ ಮನವಿ ಮಾಡಿದ್ದರು. ಇದನ್ನೂ ಓದಿ: ಬಳ್ಳಾರಿ ಜೈಲಿಗೆ ದರ್ಶನ್‌ ಶಿಫ್ಟ್‌ – ದಾಸನಿಗಾಗಿ ರೂಟ್‌ ಮ್ಯಾಪ್‌ ಚೇಂಜ್‌?

    ಏನಿದು ವಿವಾದ?
    ಅಯೋಧ್ಯೆ, ತಿರುಪತಿಯ ಮಾದರಿಯಲ್ಲಿ ಗಂಗಾವತಿ ಅಂಜನಾದ್ರಿ (Anjanadri Betta) ಅಭಿವೃದ್ಧಿಯಾಗಬೇಕೆಂಬ ನಿಟ್ಟಿನಲ್ಲಿ ಮಹಾರಾಣಾ ಪ್ರತಾಪ್ ಸರ್ಕಲ್‌ನಿಂದ ಜುಲೈ ನಗರದವರೆಗೂ ತಿರುಪತಿ, ಅಯೋಧ್ಯೆಯಲ್ಲಿರುವಂತೆ (Ayodhya) ವಿದ್ಯುತ್ ಕಂಬಗಳನ್ನು ಹಾಕಿದ್ದಕ್ಕೆ ಎಸ್‌ಡಿಪಿಐ (SDPI) ಆಕ್ಷೇಪ ವ್ಯಕ್ತಪಡಿಸಿತ್ತು.

    ಇದು ಕೇವಲ ಒಂದು ಧರ್ಮದ (Religion) ಸಂಕೇತವಾಗಿದೆ. ಇದರಿಂದ ಗಂಗಾವತಿ ನಗರದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ಆಗುತ್ತದೆ ಎಂದು ಆರೋಪಿಸಿ ಇದನ್ನು ತೆರವುಗೊಳಿಸುವಂತೆ ಗಂಗಾವತಿ ನಗರಸಭೆ ಕಮಿಷನರ್‌ಗೆ SDPI ಮನವಿ ಮಾಡಿತ್ತು.

    ಗಂಗಾವತಿಯಿಂದ 12 ಕಿಲೋ ಮೀಟರ್ ದೂರದಲ್ಲಿ ಹನುಮ ಜನ್ಮ ಸ್ಥಳ ಅಂಜನಾದ್ರಿ ಬೆಟ್ಟದವರೆಗೂ ಇದೆ ಮಾದರಿಯಲ್ಲಿ ಬೀದಿ ದೀಪಗಳು ಅಳವಡಿಕೆ ಮಾಡಲಾಗುತ್ತಿತ್ತು. ಇಲ್ಲಿಗೆ ಲಕ್ಷಾಂತರ ಹನುಮ ಭಕ್ತರು ಹಾಗೂ ಪ್ರವಾಸಿಗರು ಬರುತ್ತಾರೆ. ಇಂತಹ ಪ್ರವಾಸಿ ಸ್ಥಳದಲ್ಲಿ, ಬೀದಿ ದೀಪಗಳು ಸುಂದರವಾಗಿ ಕಾಣಲಿ ಎಂಬ ಉದ್ದೇಶಕ್ಕೆ ಹಾಕಲಾಗಿದೆ. ಇದರಲ್ಲಿ ಕೋಮು ಸೌಹಾರ್ದತೆ ಕದಡುವ ಅಂಶ ಏನಿದೆ ಎಂದು ಹಿಂದೂ ಮುಖಂಡರು ಪ್ರಶ್ನಿಸಿದ್ದರು.

     

  • ಅಂಜನಾದ್ರಿ ಭಾಗದಲ್ಲಿ ಕೋಮು ಸೌಹಾರ್ದತೆ ಕದಡುತ್ತೆ –  ಬಿಲ್ಲು, ಬಾಣ ಗುರುತಿರುವ ವಿದ್ಯುತ್ ಕಂಬಗಳಿಗೆ SDPI ವಿರೋಧ

    ಅಂಜನಾದ್ರಿ ಭಾಗದಲ್ಲಿ ಕೋಮು ಸೌಹಾರ್ದತೆ ಕದಡುತ್ತೆ – ಬಿಲ್ಲು, ಬಾಣ ಗುರುತಿರುವ ವಿದ್ಯುತ್ ಕಂಬಗಳಿಗೆ SDPI ವಿರೋಧ

    ಕೊಪ್ಪಳ: ಗಂಗಾವತಿ (Gangavathi) ನಗರದ ಮಹಾರಾಣಾ ಪ್ರತಾಪ್ ಸರ್ಕಲ್‌ನಿಂದ ಜುಲೈ ನಗರದವರೆಗೂ ತಿರುಪತಿ, ಅಯೋಧ್ಯೆಯಲ್ಲಿರುವಂತೆ (Ayodhya) ವಿದ್ಯುತ್ ಕಂಬಗಳನ್ನು ಹಾಕಿದ್ದಕ್ಕೆ ಎಸ್‌ಡಿಪಿಐ (SDPI) ಆಕ್ಷೇಪ ವ್ಯಕ್ತಪಡಿಸಿದೆ.

    ಅಯೋಧ್ಯೆ, ತಿರುಪತಿಯ ಮಾದರಿಯಲ್ಲಿ ಗಂಗಾವತಿ ಅಂಜನಾದ್ರಿ (Anjanadri Betta) ಅಭಿವೃದ್ಧಿ ಆಗಬೇಕೆಂಬ ಆಗ್ರಹ ವ್ಯಕ್ತವಾಗುತ್ತಿದೆ. ಆದರೆ ಅದೇ ಮಾದರಿಯಲ್ಲಿ ನಗರದ ಬೀದಿ ದೀಪದ ಕಂಬ ಅಳವಡಿಕೆಗೆ ಎಸ್‌ಡಿಪಿಐ ವಿರೋಧ ವ್ಯಕ್ತಪಡಿಸಿದೆ. ಇದು ಕೇವಲ ಒಂದು ಧರ್ಮದ (Religion) ಸಂಕೇತವಾಗಿದೆ. ಇದರಿಂದ ಗಂಗಾವತಿ ನಗರದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ಆಗುತ್ತದೆ ಎಂದು ಆರೋಪಿಸಿದೆ. ಇದನ್ನೂ ಓದಿ: MUDA Scam | ಪ್ರಾಸಿಕ್ಯೂಷನ್ ಸಮರದಲ್ಲಿ ಸೈಲೆಂಟ್ ಅಸ್ತ್ರ ಪ್ರಯೋಗಿಸಿದ ರಾಹುಲ್‌ ಗಾಂಧಿ!

    ಹನುಮನ ಜನ್ಮಸ್ಥಳವಾಗಿರುವ ಅಂಜನಾದ್ರಿ ಭಾಗವನ್ನು ಅಯೋಧ್ಯೆ, ತಿರುಪತಿ ಮಾದರಿಯಲ್ಲಿ ಅಭಿವೃದ್ಧಿ ಮಾಡಬೇಕು ಎಂಬ ಒತ್ತಾಯ ಹಲವು ಬಾರಿ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಶಾಸಕ ಜನಾರ್ದನ ರೆಡ್ಡಿ ಚುನಾವಣಾ ಪ್ರಚಾರದಲ್ಲೂ ಭರವಸೆ ನೀಡಿದ್ದರು. ಅದರಂತೆ ಈಗ ವಿದ್ಯುತ್ ಕಂಬಗಳನ್ನು ಈಗ ಅಳವಡಿಸಲಾಗುತ್ತಿದೆ. ನಗರದ ಸೌಂದರ್ಯ ಹೆಚ್ಚಿಸಲು ಹಾಕಿರುವ ಈ ದೀಪದ ಕಂಬಗಳ ವಿಚಾರದಲ್ಲಿ ಸದ್ಯ ಎಸ್‌ಡಿಪಿಐ ಖ್ಯಾತೆ ತೆಗೆದಿದ್ದು, ಜನಾರ್ದನ ರೆಡ್ಡಿ ತೀರ್ಮಾನದ ವಿರುದ್ಧ ಗಂಗಾವತಿ ನಗರಸಭೆ ಕಮಿಷನರ್‌ಗೆ ಮನವಿ ಮಾಡಿದೆ. ಇದನ್ನೂ ಓದಿ : Karkala | ಮದ್ಯದಲ್ಲಿ ಮಾದಕ ವಸ್ತು ನೀಡಿ ಅತ್ಯಾಚಾರ – ಗ್ಯಾಂಗ್‌ರೇಪ್‌ ಶಂಕೆ?

     

    ಗಂಗಾವತಿಯಿಂದ 12 ಕಿಲೋ ಮೀಟರ್ ದೂರದಲ್ಲಿ ಹನುಮ ಜನ್ಮ ಸ್ಥಳ ಅಂಜನಾದ್ರಿ ಬೆಟ್ಟದವರೆಗೂ ಇದೆ ಮಾದರಿಯಲ್ಲಿ ಬೀದಿ ದೀಪಗಳು ಅಳವಡಿಕೆ ಮಾಡಲಾಗುತ್ತಿದೆ. ಇಲ್ಲಿಗೆ ಲಕ್ಷಾಂತರ ಹನುಮ ಭಕ್ತರು ಹಾಗೂ ಪ್ರವಾಸಿಗರು ಬರುತ್ತಾರೆ. ಇಂತಹ ಪ್ರವಾಸಿ ಸ್ಥಳದಲ್ಲಿ, ಬೀದಿ ದೀಪಗಳು ಸುಂದರವಾಗಿ ಕಾಣಲಿ ಎಂಬ ಉದ್ದೇಶಕ್ಕೆ ಹಾಕಲಾಗಿದೆ. ಇದರಲ್ಲಿ  ಕೋಮು ಸೌಹಾರ್ದತೆ ಕದಡುವ ಅಂಶ ಏನಿದೆ ಎಂದು ಹಿಂದೂ ಮುಖಂಡರು ಪ್ರಶ್ನಿಸಿದ್ದಾರೆ.

     

  • ನಮ್ಮ ಪೊಲೀಸರು ಯಾವತ್ತೂ ಕೇಸರೀಕರಣ ಮಾಡಿಲ್ಲ – ಸಿಎಂ, ಡಿಸಿಎಂ ವಿರುದ್ಧ ಬೊಮ್ಮಾಯಿ ಕಿಡಿ

    ನಮ್ಮ ಪೊಲೀಸರು ಯಾವತ್ತೂ ಕೇಸರೀಕರಣ ಮಾಡಿಲ್ಲ – ಸಿಎಂ, ಡಿಸಿಎಂ ವಿರುದ್ಧ ಬೊಮ್ಮಾಯಿ ಕಿಡಿ

    ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ (Police Department) ಕೇಸರಿಕರಣಕ್ಕೆ ಅವಕಾಶ ನೀಡಲ್ಲ ಎಂಬ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಮಾತು ಬಿಜೆಪಿಗರನ್ನು ಕೆರಳಿಸಿದೆ. ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಕಮಲ ಪಡೆ ವಾಗ್ದಾಳಿ ನಡೆಸಿದೆ.

    ಕಾಮಾಲೆ ಕಣ್ಣಿಗೆ ಕಾಣೋದೆಲ್ಲಾ ಹಳದಿ.. ಚುನಾವಣೆ ವೇಳೆ ಕೇಸರಿ ವಸ್ತ್ರ ಧರಿಸಿ, ಹಣೆ ಮೇಲೆ ಊರಗಲದ ತಿಲಕ ಇಟ್ಟು ಎಲೆಕ್ಷನ್ ಹಿಂದೂಗಳಾಗಿದ್ದ ಕಾಂಗ್ರೆಸ್ ನಾಯಕರು ಊಸರವಳ್ಳಿ ಬಣ್ಣ ಬದಲಿಸುವಂತೆ ಈಗ ತಮ್ಮ ಮೂಲರೂಪಕ್ಕೆ ಹಿಂತಿರುಗಿದ್ದಾರೆ ಎಂದು ಬಿಜೆಪಿ ಟ್ವೀಟ್ ಮೂಲಕ ಕಿಡಿ ಕಾರಿದೆ. ಇದನ್ನೂ ಓದಿ: ಪೊಲೀಸ್ ಇಲಾಖೆಯನ್ನು ಕೇಸರೀಕರಣಗೊಳ್ಳಲು ಬಿಡುವುದಿಲ್ಲ: ಡಿಕೆಶಿ

    ಈನಡುವೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಸಹ ವಾಗ್ದಾಳಿ ನಡೆಸಿದ್ದಾರೆ. ನಮ್ಮ ಪೊಲೀಸರು ಯಾವತ್ತೂ ಕೇಸರೀಕರಣ ಮಾಡಿಲ್ಲ. ಇಡೀ ದೇಶದಲ್ಲೇ ಕರ್ನಾಟಕ ಪೊಲೀಸ್ ಉತ್ತಮ ಹೆಸರು ಮಾಡಿದೆ. ಪೊಲೀಸ್ ಇಲಾಖೆಗೆ ನೈತಿಕ ಸ್ಥೈರ್ಯ ಕುಗ್ಗಿಸುವ ಕೆಲಸ ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: 6 ತಿಂಗಳಲ್ಲಿ ಏನು ಮಾಡಿದ್ದೀರಿ- ಅಧಿಕಾರಿಗಳಿಗೆ ಸಿದ್ದರಾಮಯ್ಯ ಪ್ರಶ್ನೆ

    ಒಟ್ಟಿನಲ್ಲಿ ಕಾಂಗ್ರೆಸ್‌ನವರು ತಮ್ಮ ಅಜೆಂಡಾ ಜಾರಿ ಮಾಡಲು ಈ ರೀತಿ ತೀರ್ಮಾನ ಮಾಡಿದ್ದಾರೆ. ತುಷ್ಟೀಕರಣ ರಾಜಕಾರಣ ಮಾಡಲು ಮೊದಲ ದಿನದಿಂದ ಕಾಂಗ್ರೆಸ್ ಮುಂದಾಗಿದೆ. ಅವರು ಎಸ್‌ಡಿಪಿಐ (SDPI), ಪಿಎಫ್‌ಐ (PFI) ನಂತಹ ಸಮಾಜ ಘಾತುಕ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೇಳಬೇಕಿತ್ತು ಎಂದು ಸಿಎಂ, ಡಿಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಪೊಲೀಸರು ನಿಷ್ಪಕ್ಷಪಾತವಾಗಿ ಕೆಲಸ ಮಾಡಿ, ಸಮಾಜ ಘಾತಕ ಶಕ್ತಿಗಳ ವಿರುದ್ಧಹೋರಾಟ ಮಾಡಿ, ರಾಜಕೀಯ ಒತ್ತಡಕ್ಕೆ ಮಣಿಯಬೇಡಿ. ನಮ್ಮ ಪಕ್ಷದಲ್ಲಿ ಯಾರಾದರೂ ಅಪರಾಧ ಮಾಡಿದ್ರೆ, ನಾವು ರಕ್ಷಣೆ ಮಾಡಲ್ಲ. ಎಲ್ಲಿಯೂ ನೈತಿಕ ಪೋಲೀಸ್ ಗಿರಿ ನಡೆದಿಲ್ಲ, ಈ ರೀತಿ ಹೇಳಿ, ಪೋಲೀಸರ ನೈತಿಕ ಸ್ಥೈರ್ಯ ಕುಗ್ಗಿಸುವ ಕೆಲಸ ಆಗುತ್ತಿದೆ ಎಂದು ಟೀಕಿಸಿದ್ದಾರೆ.

  • ಎಸ್‌ಡಿಪಿಐ ಜೊತೆ ಮೈತ್ರಿ ಮಾಡಿಕೊಂಡ ಕಾಂಗ್ರೆಸ್‌ಗೆ ಹೋಗಲು ನಾಚಿಕೆ ಆಗಲ್ವಾ? – ಶೆಟ್ಟರ್, ಸವದಿ ವಿರುದ್ಧ ಯತ್ನಾಳ್ ಕಿಡಿ

    ಎಸ್‌ಡಿಪಿಐ ಜೊತೆ ಮೈತ್ರಿ ಮಾಡಿಕೊಂಡ ಕಾಂಗ್ರೆಸ್‌ಗೆ ಹೋಗಲು ನಾಚಿಕೆ ಆಗಲ್ವಾ? – ಶೆಟ್ಟರ್, ಸವದಿ ವಿರುದ್ಧ ಯತ್ನಾಳ್ ಕಿಡಿ

    ವಿಜಯಪುರ: ಬಿಜೆಪಿ (BJP) ನಿಮ್ಮನ್ನು ಸಚಿವರು, ಉಪಮುಖ್ಯಮಂತ್ರಿ, ಮುಖ್ಯಮಂತ್ರಿಯನ್ನಾಗಿ ಮಾಡಿದೆ. ಇಷ್ಟೆಲ್ಲಾ ಅನುಭವಿಸಿ ಈಗ ಕಾಂಗ್ರೆಸ್‌ಗೆ (Congress) ಹೋಗುತ್ತೀರಲ್ಲ ನಿಮಗೆ ಮಾನ, ಮರ್ಯಾದೆ, ಸ್ವಾಭಿಮಾನ ಇದೆಯಾ? ಎಸ್‌ಡಿಪಿಐ (SDPI) ಸಂಘಟನೆ ಜೊತೆ ಮೈತ್ರಿ ಮಾಡಿಕೊಂಡ ಕಾಂಗ್ರೆಸ್ ಪಕ್ಷಕ್ಕೆ ಹೋಗಲು ನಿಮಗೆ ನಾಚಿಕೆ ಆಗುತ್ತೋ ಇಲ್ವೋ ಎಂದು ಜಗದೀಶ್ ಶೆಟ್ಟರ್ (Jagadish Shettar) ಹಾಗೂ ಲಕ್ಷ್ಮಣ ಸವದಿ (Laxman Savadi) ವಿರುದ್ಧ ಶಾಸಕ ಬಸನಗೌಡ ಪಾಟೀಲ ಯತ್ನಾಳ್ (Basanagouda Patil Yatnal) ಕಿಡಿಕಾರಿದರು.

    ವಿಜಯಪುರದಲ್ಲಿ (Vijayapura) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ದಲಿತರು, ಮುಸ್ಲಿಮರು, ಮರಾಠರು, ಬ್ರಾಹ್ಮಣರಿಗೆ ಸೇರಿದಂತೆ ಎಲ್ಲಾ ಸಮುದಾಯಗಳಿಗೂ ಅನುಕೂಲ ಮಾಡಿದೆ. ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ (Guarantee Card) ಮೋಸ ಮಾಡುವ ಯೋಜನೆಯಾಗಿದ್ದು, ಪಿಎಫ್‌ಐನ (PFI) ಸ್ವರೂಪವಾದ ಎಸ್‌ಡಿಪಿಐ ಜೊತೆಗೆ ಕಾಂಗ್ರೆಸ್ ಒಪ್ಪಂದ ಮಾಡಿಕೊಂಡಿದೆ. 2047ಕ್ಕೆ ಭಾರತವನ್ನು ಮುಸ್ಲಿಂ ರಾಷ್ಟ್ರ ಮಾಡಲು ಹುನ್ನಾರ ನಡೆದಿದೆ. 2047ಕ್ಕೆ ಭಾರತದ ಹಿಂದೂಗಳನ್ನು ಮತಾಂತರ ಮಾಡುವುದು, ನಿರ್ನಾಮ ಮಾಡುವುದು ಎಸ್‌ಡಿಪಿಐ ಕೆಲಸವಾಗಿದೆ. ಪಿಎಫ್‌ಐ ಸಂಘಟನೆಯು ಕರ್ನಾಟಕವನ್ನು ಇಸ್ಲಾಂ (Islam) ರಾಜ್ಯವನ್ನಾಗಿಸುವ ಪ್ಲಾನ್ ಹಾಕಿಕೊಂಡಿದೆ ಎಂದು ಕಿಡಿ ಕಾರಿದರು. ಇದನ್ನೂ ಓದಿ: ಸಕ್ಕರೆ ನಾಡು ಮೀಸಲು ಕ್ಷೇತ್ರದಲ್ಲಿ ಕೈ, ಕಮಲ, ತೆನೆ ಪೈಪೋಟಿ 

    ಪಿಎಫ್‌ಐ ಹಾಗೂ ಎಸ್‌ಡಿಪಿಐ ಭಯೋತ್ಪಾದಕರ ಮೇಲಿದ್ದ 1700ಕ್ಕೂ ಹೆಚ್ಚು ಕೇಸ್‌ಗಳನ್ನು ಸಿದ್ದರಾಮಯ್ಯ (Siddaramaiah) ಸರ್ಕಾರ ಹಿಂಪಡೆದಿದೆ. ಆದರೆ ಹಿಂದೂಪರ ಸಂಘಟನೆಗಳ ಮೇಲಿನ ಕೇಸ್ ವಾಪಸ್ ತೆಗೆದುಕೊಳ್ಳಲಿಲ್ಲ. ಗೋಹತ್ಯೆ ಮಾಡಿದವರನ್ನು ರಕ್ಷಣೆ ಮಾಡಿದ್ದಾರೆ, ಗೋರಕ್ಷಣೆ ಮಾಡಿದವರನ್ನು ಮಾಡಲಿಲ್ಲ. ಗೋಹತ್ಯೆಗೆ ಬೆಂಬಲ ಕೊಟ್ಟವರಿಗೆ 5 ಲಕ್ಷ, 10 ಲಕ್ಷ ಪರಿಹಾರವನ್ನು ಕೊಟ್ಟಂತಹ ದುರ್ದೈವ ಸಂಗತಿ ನಮ್ಮ ರಾಜ್ಯದಲ್ಲಿ ನಡೆದಿದೆ. ರಾಜ್ಯದಲ್ಲಿ ಕೋಮು ಗಲಭೆ ಹಾಗೂ ಅಶಾಂತಿ ಉಂಟುಮಾಡುವ ಸಲುವಾಗಿ ಕಾಂಗ್ರೆಸ್ ಎಸ್‌ಡಿಪಿಐ ಜೊತೆ ಮೈತ್ರಿ ಮಾಡಿಕೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಶೆಟ್ಟರ್ ರಾಜೀನಾಮೆಯಿಂದ ಬಿಜೆಪಿಗೆ ಯಾವುದೇ ಡ್ಯಾಮೇಜ್ ಆಗಲ್ಲ: ಅರವಿಂದ ಬೆಲ್ಲದ್ 

    ಬಿಜೆಪಿ ಲಿಂಗಾಯತರನ್ನು ಮುಗಿಸುವ ಯತ್ನ ಮಾಡ್ತಿದೆ ಎಂದು ಆರೋಪಿಸುತ್ತಿದ್ದೀರಿ. ನೀವೆಲ್ಲಾ ಹುದ್ದೆಗಳನ್ನು ಅನುಭವಿಸಿದ್ದು ಇದೇ ಲಿಂಗಾಯತ ಆಧಾರದ ಮೇಲೆ ಎಂಬುದು ನೆನಪಿರಲಿ. ಲಿಂಗಾಯತರನ್ನು ಕಡೆಗಣಿಸಿದ್ದಾರೆ ಎಂದು ಮಾತನಾಡುತ್ತಿದ್ದೀರಲ್ಲ. ಕಾಂಗ್ರೆಸ್ ಅಧ್ಯಕ್ಷ ಡಿಕೆಶಿ (D.K.Shivakumar) ಏನು ಹೇಳಿದ್ದಾರೆ? ಕಾಂಗ್ರೆಸ್ ಬಂದ ಕೂಡಲೇ ಮೀಸಲಾತಿ (Reservation) ತೆಗೆದು ಹಾಕುತ್ತೇವೆ ಎಂದಿದ್ದಾರೆ. ಹಾಗಾದರೆ ಲಿಂಗಾಯತರಿಗೆ, ಪರಿಶಿಷ್ಟ ಜಾತಿ, ಪಂಗಡಗಳಿಗೆ ಮೀಸಲಾತಿ ಸಿಕ್ಕಿದ್ದು ಸಮಾಧಾನ ಇಲ್ಲವೇ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಈ ದೇಶದಲ್ಲಿ ಧೈರ್ಯವಾಗಿ ಮಾತನಾಡುವ ಮನುಷ್ಯ ರಾಹುಲ್ ಗಾಂಧಿ ಮಾತ್ರ – ಮಲ್ಲಿಕಾರ್ಜುನ ಖರ್ಗೆ 

    ನೀವು ದುಡುಕಿನ ನಿರ್ಧಾರ ತೆಗೆದುಕೊಂಡಿದ್ದೀರಿ. ಇನ್ನೂ ಕಾಲ ಮಿಂಚಿಲ್ಲ. ಈಗಲೂ ವಾಪಸ್ ಬಂದು ಬಿಜೆಪಿಗೆ ಶರಣಾಗತಿಯಾಗಿ. ನಿಮಗೆಲ್ಲಾ ಅನ್ಯಾಯ ಆಗಿದೆ ಎಂದು ನನಗೆ ಕೆಲವೊಮ್ಮೆ ಅನಿಸುತ್ತದೆ. ನನ್ನನ್ನೂ ಸಚಿವನನ್ನಾಗಿ ಮಾಡಲಿಲ್ಲ. ನನಗೂ ಅನ್ಯಾಯ ಆಗಿದೆ ಎಂದು ಅನಿಸುತ್ತದೆ ಎಂದರು. ಇದನ್ನೂ ಓದಿ: ಶಾಸಕ ಸ್ಥಾನಕ್ಕೆ ಅಖಂಡ ಶ್ರೀನಿವಾಸಮೂರ್ತಿ ರಾಜೀನಾಮೆ