Tag: SDPI

  • ಕೇರಳದಲ್ಲಿ RSS ಕಾರ್ಯಕರ್ತನ ಹತ್ಯೆ – ಪಿಎಫ್‌ಐ ಪದಾಧಿಕಾರಿ ಸೇರಿ ಮೂವರು ಅರೆಸ್ಟ್‌

    ಕೇರಳದಲ್ಲಿ RSS ಕಾರ್ಯಕರ್ತನ ಹತ್ಯೆ – ಪಿಎಫ್‌ಐ ಪದಾಧಿಕಾರಿ ಸೇರಿ ಮೂವರು ಅರೆಸ್ಟ್‌

    ತಿರುವನಂತಪುರಂ: ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತನ ಹತ್ಯೆಗೆ ಸಂಬಂಧಿಸಿದಂತೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಪದಾಧಿಕಾರಿ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

    ಆರೋಪಿಗಳನ್ನು ಸುಬೈರ್, ಸಲಾಂ ಮತ್ತು ಇಸಾಹಕ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಕೇರಳದ ಪಾಲಕ್ಕಾಡ್ ಜಿಲ್ಲೆಯವರು. ಮಂಬರಂನಲ್ಲಿ ನಡೆದ ಸಂಜಿತ್ ಹತ್ಯೆಯಲ್ಲಿ ಬಂಧಿತ ಪದಾಧಿಕಾರಿ ನೇರವಾಗಿ ಭಾಗಿಯಾಗಿದ್ದ ಎಂದು ಪಾಲಕ್ಕಾಡ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್ ವಿಶ್ವನಾಥ್ ತಿಳಿಸಿದ್ದಾರೆ.

    ನವೆಂಬರ್ 15 ಬೆಳಗ್ಗೆ 9 ಗಂಟೆಗೆ ಆರ್‌ಎಸ್‌ಎಸ್‌ ಪ್ರಮುಖ್‌  ಸಂಜಿತ್ (27) ತನ್ನ ಪತ್ನಿಯನ್ನು ಕೆಲಸದ ಸ್ಥಳಕ್ಕೆ ಕರೆದುಕೊಂಡು ಹೋಗುತ್ತಿದ್ದಾಗ ಕೊಚ್ಚಿ ಕೊಲೆ ಮಾಡಲಾಗಿತ್ತು. ಪತ್ನಿಯನ್ನು ಕರೆದುಕೊಂಡು ಹೋಗುತ್ತಿದ್ದಾಗ ದುಷ್ಕರ್ಮಿಗಳು ಅವರನ್ನು ಕಾರಿನಲ್ಲಿ ಹಿಂಬಾಲಿಸಿ ಸಂಜಿತ್‌ ಬೈಕಿಗೆ ಡಿಕ್ಕಿ ಹೊಡೆದಿದ್ದರು. ಬೈಕ್‌ನಿಂದ ಕೆಳಗೆ ಬಿದ್ದಾಗ ಪತ್ನಿಯ ಎದುರೇ ಸಂಜಿತ್‌ ಅವರನ್ನು ಕೊಚ್ಚಿ ಕೊಲೆ ಮಾಡಿದ್ದರು.

    ಪಾಲಕ್ಕಾಡ್-ತ್ರಿಶ್ಯೂರ್ ರಾಷ್ಟ್ರೀಯ ಹೆದ್ದಾರಿ ಬಳಿಯ ಕಿನಾಸ್ಸೆರಿಯಲ್ಲಿ ಈ ಘಟನೆ ನಡೆದಿತ್ತು. ಸಂಜಿತ್ ದೇಹದ ಮೇಲೆ ಒಟ್ಟು 15 ಗಾಯಗಳಿದ್ದವು. ಕಾರಿನಲ್ಲಿ ಬಂದು ತನ್ನ ಪತಿಯನ್ನು ಹತ್ಯೆಗೈದವರನ್ನು ಗುರುತಿಸಬಹುದು ಎಂದು ಸಂಜಿತ್‌ ಪತ್ನಿ ಹೇಳಿದ್ದರು.

    ಇಸ್ಲಾಮಿಕ್‌ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್‌ಐ) ರಾಜಕೀಯ ಶಾಖೆಯಾದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಕಾರ್ಯಕರ್ತರು ಕೊಲೆಯ ಹಿಂದೆ ಇದ್ದಾರೆ ಎಂದು ಬಿಜೆಪಿ ಮತ್ತು ಸಂಘ ಪರಿವಾರದ ಸಂಘಟನೆಗಳು ಆರೋಪಿಸಿದ್ದವು. ಇದನ್ನೂ ಓದಿ: ನಟಿಯರು, ಮಹಿಳಾ ಜರ್ನಲಿಸ್ಟ್‌ಗಳಿಗೆ ಹೊಸ ಧಾರ್ಮಿಕ ಮಾರ್ಗಸೂಚಿ ಹೊರಡಿಸಿದ ತಾಲಿಬಾನ್‌

    ಬಿಜೆಪಿ ರಾಜ್ಯಾಧ್ಯಕ್ಷ ಕೆ ಸುರೇಂದ್ರನ್ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ, ಹತ್ಯೆಯ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ (ಎನ್‌ಐಎ) ತನಿಖೆ ನಡೆಸುವಂತೆ ಮನವಿ ಮಾಡಿದ್ದರು. ಇದನ್ನೂ ಓದಿ: ಕೋವ್ಯಾಕ್ಸಿನ್‌ ಲಸಿಕೆಗೆ ಯುಕೆ ಅನುಮೋದನೆ- ಭಾರತದ ವಿದ್ಯಾರ್ಥಿಗಳು, ಪ್ರಯಾಣಿಕರು ನಿರಾಳ

    ಕಳೆದ ಐದು ವರ್ಷಗಳಲ್ಲಿ ಕೇರಳದಲ್ಲಿ ಜಿಹಾದಿ ಗುಂಪುಗಳು 10 ಆರ್‌ಎಸ್‌ಎಸ್, ಬಿಜೆಪಿ ಕಾರ್ಯಕರ್ತರನ್ನು ಹತ್ಯೆ ಮಾಡಿದೆ. ರಾಜ್ಯದಲ್ಲಿ ಇದುವರೆಗೆ ಸುಮಾರು 50 ಸಂಘಪರಿವಾರದ ಕಾರ್ಯಕರ್ತರು ಹತ್ಯೆಯಾಗಿದ್ದಾರೆ ಎಂದು ಎಂದು ಬಿಜೆಪಿ ಆರೋಪಿಸಿದೆ.

  • ಯು.ಟಿ ಖಾದರ್ ಕ್ಷೇತ್ರದಲ್ಲಿ ಕಾಂಗ್ರೆಸ್ಸಿಗರಿಗೆ ಕೊಲೆ ಬೆದರಿಕೆ ಹಾಕಿದ ಅಬೂಬಕ್ಕರ್ ಕುಳಾಯಿ

    ಯು.ಟಿ ಖಾದರ್ ಕ್ಷೇತ್ರದಲ್ಲಿ ಕಾಂಗ್ರೆಸ್ಸಿಗರಿಗೆ ಕೊಲೆ ಬೆದರಿಕೆ ಹಾಕಿದ ಅಬೂಬಕ್ಕರ್ ಕುಳಾಯಿ

    ಮಂಗಳೂರು: ಕಾಂಗ್ರೆಸ್‍ನ ಮಾಜಿ ಸಚಿವ ಯು.ಟಿ ಖಾದರ್ ಕ್ಷೇತ್ರ ಉಳ್ಳಾಲದಲ್ಲಿ ದಕ್ಷಿಣ ಕನ್ನಡದ ಎಸ್‍ಡಿಪಿಐ ಜಿಲ್ಲಾಧ್ಯಕ್ಷ ಅಬೂಬಕ್ಕರ್ ಕುಳಾಯಿ, ಕಾಂಗ್ರೆಸ್ಸಿಗರಿಗೆ ಬಹಿರಂಗವಾಗಿ ಕೊಲೆ ಬೆದರಿಕೆ ಹಾಕಿದ್ದಾರೆ.

    ಈ ಬಗ್ಗೆ ಹೇಳಿಕೆ ನೀಡಿರುವ ಜಿಲ್ಲಾಧ್ಯಕ್ಷ ಅಬೂಬಕ್ಕರ್ ಕುಳಾಯಿ, ನಮ್ಮವರ ಮೇಲೆ ಹಲ್ಲೆ ಮಾಡಿಸಲು ನೋಡಿದ್ರೆ ಕಾಂಗ್ರೆಸ್ಸಿಗರನ್ನು ಆಸ್ಪತ್ರೆಗೆ ಕಳುಹಿಸಲೂ ಗೊತ್ತಿದೆ, ಖಬರಿಸ್ತಾನಕ್ಕೆ ಕಳುಹಿಸಲೂ ಗೊತ್ತಿದೆ. ನಾವು ಈವರೆಗೂ ತಲೆ ಬಗ್ಗಿಸಿದ್ದೇವೆ. ಆದರೆ ನಮ್ಮ ಎಸ್‍ಡಿಪಿಐ ಬೆಳೆಯುತ್ತಿದೆ. ಇನ್ಮುಂದೆ ನಾವು ಸುಮ್ಮನಿರಲ್ಲ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಭಾರತದ ಸೇನೆ ಸೇರಿದ ಐಎನ್‍ಎಸ್ ವಿಶಾಖಪಟ್ಟಣ ನೌಕೆ – ಚೀನಾ, ಪಾಕಿಸ್ತಾನಕ್ಕೆ ನಡುಕ

    ಎಸ್‍ಡಿಪಿಐ ಬೆಳೆಯುತ್ತಾ ಇರುವುದನ್ನು ಕಂಡು ಕಾಂಗ್ರೆಸ್ಸಿಗರಿಗೆ ಸಹಿಸಲಿಕ್ಕೆ ಸಾಧ್ಯವಾಗುತ್ತಿಲ್ಲ. ಯಾರೋ ಕಾಂಜಿ ಪೀಂಜಿ ಗಾಂಜಾದವರನ್ನು ಇಟ್ಟುಕೊಂಡು ಅವರಿಗೆ ದುಡ್ಡು ಕೊಟ್ಟು ನಮ್ಮ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸುತ್ತಿದ್ದಾರೆ. ಇನ್ಮುಂದೆ ಅದು ನಡಿಯುವುದಿಲ್ಲ. ಎಸ್‍ಡಿಪಿಐ ಸೇರೋದಾದ್ರೆ ಆಸ್ಪತ್ರೆಯಲ್ಲಿ ಮಲಗೋಕೆ, ಜೈಲಿಗೆ ಹೋಗೋಕೆ, ಖಬರಿಸ್ತಾನ ಸೇರೋಕೂ ಸಿದ್ದರಿರಬೇಕು ಎಂದು ಕರೆ ನೀಡಿರುವ ವೀಡಿಯೋ ವೈರಲ್‌ ಆಗುತ್ತಿದೆ. ಇದನ್ನೂ ಓದಿ: ಭಾರತೀಯ ಸೇನೆಯ ಹುತಾತ್ಮ ಯೋಧನ ಪತ್ನಿ ಈಗ ಸೇನಾಧಿಕಾರಿ

  • ಮುನ್ಸೂಚನೆ ನೀಡದೆ ದೇವಸ್ಥಾನಗಳನ್ನು ಏಕಾಏಕಿ ತೆರವುಗೊಳಿಸುತ್ತಿರುವುದು ಖಂಡನೀಯ: ಎಸ್‍ಡಿಪಿಐ

    ಮುನ್ಸೂಚನೆ ನೀಡದೆ ದೇವಸ್ಥಾನಗಳನ್ನು ಏಕಾಏಕಿ ತೆರವುಗೊಳಿಸುತ್ತಿರುವುದು ಖಂಡನೀಯ: ಎಸ್‍ಡಿಪಿಐ

    ಬೆಂಗಳೂರು: ಮುನ್ಸೂಚನೆ ನೀಡದೆ ದೇವಸ್ಥಾನಗಳನ್ನು ಏಕಾಏಕಿ ತೆರವುಗೊಳಿಸುತ್ತಿರುವುದು ಖಂಡನೀಯ. ಸುಪ್ರೀಂ ಕೋರ್ಟ್ ಆದೇಶಕ್ಕೆ ಬೆಲೆ ಕೊಡುವುದರ ಜೊತೆಗೆ ಧಾರ್ಮಿಕ ಕ್ಷೇತ್ರಗಳಿಗೆ ಬೆಲೆ ಕೊಡಬೇಕಿದೆ ಎಂದು ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಹೇಳಿದ್ದಾರೆ.

    ಆರಾಧನಾಲಯಗಳ ಧ್ವಂಸ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈಸೂರು ಜಿಲ್ಲೆಯಲ್ಲಿ ನಡೆಯುತ್ತಿರುವ ಆರಾಧನಾಲಯಗಳ ಧ್ವಂಸ ಕಾರ್ಯಕ್ಕೆ ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತ ನೇರಹೊಣೆ. ಯಾವುದೇ ಧರ್ಮದ ಆರಾಧನಾ ಕೇಂದ್ರಗಳನ್ನು ಧ್ವಂಸ ಮಾಡುವ ಸಂಸ್ಕøತಿ ನಮ್ಮ ದೇಶದ್ದಲ್ಲ. ಬದಲಾಗಿ ಮಂದಿರ, ಮಸೀದಿ, ಚರ್ಚ್‍ಗಳನ್ನು ಕೆಡುವುದರ ಮೊದಲು ಅಕ್ರಮವಾಗಿ ಕಟ್ಟಿದ ಕಟ್ಟಡಗಳ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.  ಇದನ್ನೂ ಓದಿ: ಚಿತ್ರದುರ್ಗದ ಮಕ್ಕಳಲ್ಲಿ ವಿಚಿತ್ರ ರೋಗ – ಸರ್ಕಾರಿ ಜಿಲ್ಲಾಸ್ಪತ್ರೆ ಹೌಸ್ ಫುಲ್

    ಧಾರ್ಮಿಕ ದತ್ತಿ ಇಲಾಖೆ ಮತ್ತು ವಕ್ಫ್ ಇಲಾಖೆಯಿಂದ ಕಬಳಿಕೆ ಮಾಡಿರುವ ಆಸ್ತಿಗಳ ಬಗ್ಗೆ ಕ್ರಮ ಕೈಗೊಳ್ಳದ ಬಿಜೆಪಿ ಸರ್ಕಾರ ಜನರ ಭಾವನೆಗಳನ್ನು ಧ್ವಂಸ ಮಾಡುತ್ತಿದೆ. ಈ ದೇಶದ ಸಂಸ್ಕøತಿ ಶಾಂತಿ, ಸೌಹರ್ದತೆಯಿಂದ ಕೂಡಿದೆ. ಮುಂದೆ ಯಾವುದೇ ಕಾರಣಕ್ಕೂ ದೇವಸ್ಥಾನಗಳು, ಮಸೀದಿ, ಚರ್ಚ್‍ಗಳನ್ನು ತೆರವುಗೊಳಿಸಬಾರದು. ಇದನ್ನು ಮುಂದುವರಿಸಿದರೆ ಸರ್ಕಾರದ ವಿರುದ್ಧ ಜನಾಂದೋಲನ ಮಾಡಬೇಕಾಗುತ್ತೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ:ಹುಟ್ಟುಹಬ್ಬದ ದಿನವೇ ಪ್ರಾಣ ಬಿಟ್ಟ ಪುಟ್ಟ ಬಾಲಕಿ

    ರಾಜ್ಯ ಸರ್ಕಾರ ಮತ್ತು ಮೈಸೂರು ಜಿಲ್ಲಾಡಳಿತ ಯಾವುದೇ ಮುನ್ಸೂಚನೆ ನೀಡದೇ ದೇವಸ್ಥಾನಗಳನ್ನು ಏಕಾಏಕಿತೆರವುಗೊಳಿಸುತ್ತಿರುವುದು ಖಂಡನೀಯ. ಸುಪ್ರೀಂ ಕೋರ್ಟ್ ತೀರ್ಪಿನ ಕಾರಣದಿಂದ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬ ನೆಪವೊಡ್ಡಿ ದೇವಸ್ಥಾನಗಳನ್ನು ತೆರವು ಗೊಳಿಸುತ್ತಿರುವುದು ಸರಿಯಲ್ಲ. ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿ ಆರಾಧನಾ ಕೇಂದ್ರಗಳನ್ನು ಸಂರಕ್ಷಣೆ ಮಾಡುವುದು ಸರ್ಕಾರದ ಕರ್ತವ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

  • ದಕ್ಷಿಣ ಕನ್ನಡದ ಕಬಕದಲ್ಲಿ ಸ್ವಾತಂತ್ರ್ಯ ರಥಕ್ಕೆ ಎಸ್‍ಡಿಪಿಐ ಕಾರ್ಯಕರ್ತರಿಂದ ತಡೆ: ಪ್ರಕರಣ ದಾಖಲು

    ದಕ್ಷಿಣ ಕನ್ನಡದ ಕಬಕದಲ್ಲಿ ಸ್ವಾತಂತ್ರ್ಯ ರಥಕ್ಕೆ ಎಸ್‍ಡಿಪಿಐ ಕಾರ್ಯಕರ್ತರಿಂದ ತಡೆ: ಪ್ರಕರಣ ದಾಖಲು

    ಮಂಗಳೂರು: ಇಂದು ಪ್ರತಿ ಗ್ರಾಮ ಪಂಚಾಯತ್ ಸೇರಿದಂತೆ ದೇಶದೆಲ್ಲೆಡೆ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಬಕ ಗ್ರಾಮ ಪಂಚಾಯತ್ ನಲ್ಲಿಯೂ ಸ್ವಾತಂತ್ರ್ಯ ದಿನಾಚರಣೆ ನಡೆಸಲಾಗುತಿತ್ತು. ಆದರೆ ಈ ಸಂದರ್ಭ ಎಸ್‍ಡಿಪಿಐ ಕಾರ್ಯಕರ್ತರು ಸ್ವಾತಂತ್ರ್ಯ ರಥಕ್ಕೆ ತಡೆಯೊಡ್ಡಿ ಕಿರಿಕ್ ಮಾಡಿದ್ದಾರೆ.

    ಪಂಚಾಯತ್ ವ್ಯಾಪ್ತಿಯಲ್ಲಿ ಸಂಚರಿಸಲು ರೆಡಿಯಾಗಿದ್ದ ಸ್ವಾತಂತ್ರ್ಯ ರಥದಲ್ಲಿ ವೀರ ಸಾವರ್ಕರ್ ಫೋಟೋ ಅಳವಡಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿ ತಡೆಯೊಡ್ಡಿದ್ದಾರೆ. ಸಾವರ್ಕರ್ ಫೋಟೋ ತೆಗೆದು ಟಿಪ್ಪು ಸುಲ್ತಾನ್ ಫೋಟೋ ಹಾಕುವಂತೆ ಒತ್ತಡ ಹಾಕಿ ಪಂಚಾಯತ್ ವಿರುದ್ಧ ದಿಕ್ಕಾರ ಕೂಗಿದ್ದಾರೆ. ಸ್ಥಳದಲ್ಲಿ ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿ ಪರಸ್ಪರ ಕೈ, ಕೈ ಮಿಲಾಯಿಸುವ ಹಂತಕ್ಕೆ ತಲುಪಿದಾಗ ಪುತ್ತೂರು ಪೊಲೀಸರು ಬಂದು ಎಸ್‍ಡಿಪಿಐ ಕಾರ್ಯಕರ್ತರನ್ನು ಚದುರಿಸಿದ್ದಾರೆ.

    ಪ್ರಾರಂಭದಲ್ಲಿ ಪ್ರತಿಭಟನಕಾರರಿಗೆ ಪಂಚಾಯತ್ ಅಧ್ಯಕ್ಷರು, ಪಿಡಿಓ ತಿಳಿ ಹೇಳುವ ಪ್ರಯತ್ನ ನಡೆಸಿದ್ದಾರೆ. ಆದರೆ ಇವರ ಮಾತನ್ನು ಕೇಳದೆ ಎಸ್‍ಡಿಪಿಐ ಕಾರ್ಯಕರ್ತರು ವಾಗ್ವಾದ ಮುಂದುವರಿಸಿದ್ದಾರೆ. ಘಟನಾ ಸ್ಥಳಕ್ಕೆ ಪುತ್ತೂರು ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ ಘಟನೆಯ ಬಗ್ಗೆ ತಿಳಿದುಕೊಂಡಿದ್ದಾರೆ. ತಕ್ಷಣ ಕೇಸು ದಾಖಲಿಸಿ ಆರೋಪಿಗಳ ಬಂಧಿಸುವಂತೆ ಪೋಲೀಸರಲ್ಲಿ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಸಮಾಜಘಾತುಕ ಕೃತ್ಯದ ಹಿಂದೆ ಯಾರೇ ಇದ್ರು ಅವರನ್ನು ಬಿಡುವ ಪ್ರಶ್ನೆಯೇ ಇಲ್ಲ: ಕಟೀಲ್

    ಈ ಮತೀಯವಾದಿ ದೇಶದ್ರೋಹಿಗಳನ್ನು ಬಂಧಿಸಿ ಗಡಿಪಾರು ಮಾಡಬೇಕು. ಈ ಮತೀಯವಾದಿಗಳ ಹಿಂದೆ ಭಟ್ಕಳ, ಕಾಸರಗೋಡಿನ ಮತೀಯ ಸಂಘಟನೆಗಳ ಪಿತೂರಿ ಇದೆ. ಕಬಕ ಕಾಶ್ಮೀರ ಆಗೋದನ್ನು ಸಹಿಸಲ್ಲ, ಮಟ್ಟ ಹಾಕುವ ಕೆಲಸ ಆಗಬೇಕು. ಯಾವುದೇ ಸಂಘಟನೆ ಆಗಿದ್ದರೂ ಅವರನ್ನು ಬಂಧಿಸಿ ಸಂಘಟನೆ ನಿಷೇಧಿಸಬೇಕೆಂದು ಸಂಜೀವ ಮಠಂದೂರು ಒತ್ತಾಯಿಸಿದ್ದಾರೆ. ಸರ್ಕಾರದ ಸೂಚನೆ ಮೇರೆಗೆ ದೇಶಭಕ್ತರ ಫೋಟೋಗಳನ್ನು ಪಂಚಾಯತ್ ಅಳವಡಿಸಿತ್ತು.

  • ಡಿ.ಜೆ ಹಳ್ಳಿ ಪ್ರಕರಣದ ಎನ್ಐಎ ಆರೋಪಪಟ್ಟಿ ಪೂರ್ವ ನಿರ್ದೇಶಿತ: ಎಸ್​​ಡಿಪಿಐ

    ಡಿ.ಜೆ ಹಳ್ಳಿ ಪ್ರಕರಣದ ಎನ್ಐಎ ಆರೋಪಪಟ್ಟಿ ಪೂರ್ವ ನಿರ್ದೇಶಿತ: ಎಸ್​​ಡಿಪಿಐ

    ಬೆಂಗಳೂರು: ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ನಡೆದ ಹಿಂಸಾಚಾರದ ಬಗ್ಗೆ ಕೇಂದ್ರದ ಬಿಜೆಪಿ ಸರಕಾರದ ಒತ್ತಡಕ್ಕೆ ಮಣಿದು ರಾಷ್ಟ್ರೀಯ ತನಿಖಾ ದಳ(ಎನ್‍ಐಎ) ಸಲ್ಲಿಸಿರುವ ಚಾರ್ಜ್‍ಶೀಟ್ ಪೂರ್ವ ನಿರ್ದೇಶಿತ ಮತ್ತು ಎಸ್​​ಡಿಪಿಐ ಪಕ್ಷವನ್ನು ಗುರಿಯಾಗಿಸಿ ರಚಿಸಿರುವುದು ಎಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಉಪಾಧ್ಯಕ್ಷ ಅಡ್ವಕೇಟ್ ಮಜೀದ್ ಖಾನ್ ಆರೋಪಿಸಿದ್ದಾರೆ.

    ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಮಜೀದ್ ಖಾನ್, ಈ ಪ್ರಕರಣದಲ್ಲಿ ಬೆಂಗಳೂರು ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿರುವಾಗಲೇ ಸಂಘಪರಿವಾರದ ಒತ್ತಡದಿಂದ ಕೇಂದ್ರ ಬಿಜೆಪಿ ಸರ್ಕಾರವು ರಾಷ್ಟ್ರೀಯ ತನಿಖಾ ಸಂಸ್ಥೆ-ಎನ್ ಐ ಎ ಯನ್ನು ಕಳುಹಿಸಿತ್ತು. ಬಿಜೆಪಿ ಸರಕಾರದ ನಿರ್ದೇಶನದಂತೆ ಎನ್‍ಐಎ ದೆಹಲಿಯಿಂದಲೇ ಎಸ್ ಡಿಪಿಐ ವಿರುದ್ಧ ಎಫ್ ಐಆರ್ ದಾಖಲಿಸಿ ಬಂದಿತ್ತು. ಈ ಬಗ್ಗೆ ಕಳೆದ ಆರು ತಿಂಗಳಿನಲ್ಲಿ 2000ಕ್ಕೂ ಹೆಚ್ಚು ವ್ಯಕ್ತಿಗಳನ್ನು ತನಿಖೆಗೆ ಒಳಪಡಿಸಲಾಗಿತ್ತು. ಈ ಪೈಕಿ ಕಾಂಗ್ರೆಸ್ ಮುಖಂಡ ಸಂಪತ್ ರಾಜ್, ಜೆಡಿಎಸ್ ಮತ್ತಿತರ ಪಕ್ಷಗಳ ಮುಖಂಡರುಗಳು ನೇರ ಹೊಣೆಗಾರರು ಹಾಗೂ ಇದರಲ್ಲಿ ರಾಜಕೀಯ ಷಡ್ಯಂತ್ರ ಇದೆ ಎಂದು ಸ್ವತಃ ಅಲ್ಲಿಯ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಹಾಗೂ ತನಿಖೆ ನಡೆಸಿದ ಸಿಸಿಬಿ ಹೇಳಿಕೆ ನೀಡಿರುವುದು ವರದಿಯಾಗಿದ್ದರೂ ತಪ್ಪಿತಸ್ಥರು ಸುಲಭವಾಗಿ ಜಾಮೀನಿನಲ್ಲಿ ಬಿಡುಗಡೆ ಹೊಂದಿರುವುದನ್ನು ಗಮನಿಸಿದರೆ ಅಮಾಯಕರನ್ನು ಸಿಲುಕಿಸಿ ತಪ್ಪಿತಸ್ಥರನ್ನು ರಕ್ಷಿಸುವ ಹುನ್ನಾರ ಸ್ಪಷ್ಟವಾಗುತ್ತದೆ ಎಂದಿದ್ದಾರೆ.

    ಜಾಗತಿಕವಾಗಿ ತುಂಬಾ ಗೌರವಿಸಲ್ಪಡುವ ಪ್ರವಾದಿ ಮೊಹಮ್ಮದ್(ಸ.ಅ)ರವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ ಸಂಘಪರಿವಾರದ ಕಾರ್ಯಕರ್ತ ನವೀನ್ ಎಂಬಾತನ ಕೃತ್ಯದಿಂದ ಈ ಹಿಂಸಾಚಾರ ನಡೆದಿತ್ತು ಎಂಬುದು ವಾಸ್ತವ. ಆದರೂ ನವೀನ್ ನ ಮೇಲೆ ದುರ್ಬಲ ಕೇಸು ಹಾಕುವ ಮೂಲಕ ಜಾಮೀನಿನಲ್ಲಿ ಬಿಡುಗಡೆ ಮಾಡಲಾಗಿದೆ. ಅದೇ ರೀತಿ ಮಾಜಿ ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷದ ಫೈರೋಜ್ ಎಂಬಾತನನ್ನು ಯುಎಪಿಎ ಕೇಸಿನಲ್ಲಿ ಮುಖ್ಯ ಆರೋಪಿ ಮಾಡಲಾಗಿದೆ. ಇಬ್ಬರೂ ಸಾಮಾಜಿಕ ಜಾಲತಾಣಗಳಲ್ಲಿ ಪರಸ್ಪರ ಧಾರ್ಮಿಕ ಭಾವನೆಗಳ ಬಗ್ಗೆ ಆರೋಪ-ಪ್ರತ್ಯಾರೋಪ ಹಾಕಿ ಕೊಂಡವರಾಗಿದ್ದಾರೆ. ಒಟ್ಟು ಹಿಂಸಾಚಾರದ ಮುಖ್ಯ ಕಾರಣ ಈ ಫೇಸ್ಬುಕ್ ಪೋಸ್ಟ್ ಗಳು ಎಂದು ತನಿಖಾಧಿಕಾರಿಗಳು ವರದಿ ಮಾಡಿದ್ದಾರೆ. ಆದರೆ ಇಲ್ಲಿ ಧರ್ಮಧಾರಿತ ತಾರತಮ್ಯ ನಡೆದಿರುವುದು ಕಾನೂನು ಬಾಹಿರವಾಗಿದೆ ಎಂದು ವಾಗ್ದಾಲಿ ನಡೆಸಿದ್ದಾರೆ.

    ಎನ್ ಐಎ ತನಿಖಾಧಿಕಾರಿಗಳು ಈ ಪ್ರಕರಣದಲ್ಲಿ ಆರಂಭದಿಂದಲೂ ನೇರವಾಗಿ ಎಸ್ ಡಿಪಿಐ ಯನ್ನು ಸಿಲುಕಿಸಲು ಪ್ರಯತ್ನಪಟ್ಟಿದ್ದಾರೆ. ಇದೇ ರೀತಿ ಭೀಮಾಕೋರೆಗಾವ್ ಹೋರಾಟ ಮಾಡಿದ ದಲಿತ ಹಾಗೂ ಪ್ರಗತಿಪರರ ಮೇಲೆ ಕೇಸು ಜಡಿಯಲಾಗಿತ್ತು. ದೆಹಲಿಯಲ್ಲಿ ಸಿಎಎ ಹಾಗೂ ಎನ್ ಆರ್ ಸಿ ಪ್ರತಿಭಟನೆ ಮಾಡಿದ ನೂರಾರು ವಿದ್ಯಾರ್ಥಿಗಳನ್ನು ದೇಶದ್ರೋಹ ಕಾನೂನಿನಡಿ ಬಂಧಿಸಲಾಗುತ್ತಿದೆ. ಕೇಂದ್ರದ ಬಿಜೆಪಿ ಸರಕಾರದ ಜನವಿರೋಧಿ ನೀತಿಗಳು ಮತ್ತು ಆರ್ ಎಸ್ ಎಸ್ ನ ಫ್ಯಾಸಿಸ್ಟ್ ಸಿದ್ಧಾಂತದ ವಿರುದ್ಧ ಧ್ವನಿ ಎತ್ತುತ್ತಿರುವ ಪ್ರಗತಿಪರರನ್ನು, ರೈತರನ್ನು, ವಿದ್ಯಾರ್ಥಿಗಳನ್ನು, ದಲಿತರು ಮತ್ತು ಅಲ್ಪಸಂಖ್ಯಾತರನ್ನು ಕಳೆದ ಆರು ವರ್ಷಗಳಿಂದ ಮೋದಿ ಸರಕಾರ ಯುಎಪಿಎ, ಎನ್ ಎಸ್ ಎ ಹಾಗೂ ದೇಶದ್ರೋಹದಂತಹ ಕರಾಳ ಕೇಸುಗಳನ್ನು ಹಾಕಿ ಹಿಂಸಿಸುತ್ತಿರುವುದು ಖಂಡನೀಯ. ಇದರ ಬಗ್ಗೆ ಜನರು ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ನುಡಿದರು.

    ಬೆಂಗಳೂರು ಹಿಂಸಾಚಾರದ ಬಗ್ಗೆ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್‍ರವರು ಬಿಡುಗಡೆಗೊಳಿಸಿದ ಸ್ವತಂತ್ರ ಬುದ್ಧಿಜೀವಿಗಳ ಸತ್ಯಶೋಧನಾ ವರದಿಯಲ್ಲಿ ರಾಜ್ಯ ಸರಕಾರದ ಮತ್ತು ಗುಪ್ತಚರ ಇಲಾಖೆಯ ವೈಫಲ್ಯದಿಂದ ಈ ಹಿಂಸಾಚಾರ ನಡೆದಿದೆ ಹಾಗೂ ತನಿಖಾ ಸಂಸ್ಥೆಗಳು ಎಸ್ ಡಿಪಿಐ ಪಕ್ಷವನ್ನು ಮತ್ತು ನಿರ್ದಿಷ್ಟ ಸಮುದಾಯವನ್ನು ಗುರಿ ಪಡಿಸುತ್ತಿರುವುದು ಸರಿಯಲ್ಲ ಎಂದು ಉಲ್ಲೇಖಿಸಲಾಗಿದೆ. ಆದರೆ ಸಂಘಪರಿವಾರ ಪ್ರಾಯೋಜಿತ ಸತ್ಯಶೋಧನಾ ವರದಿಯನ್ನೇ ಎನ್ ಐಎ ಆರೋಪಪಟ್ಟಿಯಲ್ಲಿ ನಕಲಿಸಲಾಗಿದೆ. ಈ ಬಗ್ಗೆ ಹಿಂಸಾಚಾರ ನಡೆದ ಮರುದಿನವೇ ಎಸ್ ಡಿಪಿಐ ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆಗೆ ಆದೇಶಿಸಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿತ್ತು. ಎನ್ ಐಎ ತನಿಖೆಯನ್ನು ಗಮನಿಸಿದರೆ ಕೆಲವು ನಿಷ್ಪಕ್ಷ ತನಿಖಾಧಿಕಾರಿಗಳ ಮೇಲೆ ನಿರ್ದಿಷ್ಟ ಪಕ್ಷ ಮತ್ತು ಸಮುದಾಯವನ್ನು ತೇಜೋವಧೆ ಮಾಡುವ ರೀತಿಯಲ್ಲಿ ವರದಿ ಮಾಡುವಂತೆ ಒತ್ತಡ ಹೇರಿರುವುದು ಸ್ಪಷ್ಟವಾಗುತ್ತದೆ. ಆದ್ದರಿಂದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ನಿರಪರಾಧಿಗಳ ಪರ ಕಾನೂನಾತ್ಮಕ ಹೋರಾಟದಲ್ಲಿ ಮುಂಚೂಣಿಯಲ್ಲಿ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದರು.

  • ಕೇರಳದ SDPI ಸಂಘರ್ಷಕ್ಕೆ RSS ಕಾರ್ಯಕರ್ತ ಬಲಿ – 6 ಮಂದಿ ಬಂಧನ

    ಕೇರಳದ SDPI ಸಂಘರ್ಷಕ್ಕೆ RSS ಕಾರ್ಯಕರ್ತ ಬಲಿ – 6 ಮಂದಿ ಬಂಧನ

    ತಿರುವನಂತಪುರ: ಕೇರಳದ ಆಲಪ್ಪುಳ ಜಿಲ್ಲೆಯಲ್ಲಿ ಬುಧವಾರ ಎರಡು ಗುಂಪುಗಳ ನಡುವೆ ಸಂಭವಿಸದ ಸಂಘರ್ಷದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ(ಆರ್‍ಎಸ್‍ಎಸ್) ಕಾರ್ಯಕರ್ತ ಮೃತಪಟ್ಟಿರುವುದಾಗಿ ಪೊಲೀಸರು ಗುರುವಾರ ತಿಳಿಸಿದ್ದಾರೆ. ಸದ್ಯ ಘಟನೆ ಸಂಬಂಧಿಸಿದಂತೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‍ಡಿಪಿಐನ) 6 ಮಂದಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಮೃತಪಟ್ಟ ಯುವಕ ನಂದು(23) ಎಂದು ಗುರುತಿಸಲಾಗಿದ್ದು, ಆಲಪ್ಪುಳದಲ್ಲಿರುವ ವಯಾಲಾರ್ ಪಟ್ಟಣದ ಸಮೀಪ ಎಸ್‍ಡಿಪಿಐ ಕಾರ್ಯಕರ್ತರು ಆರ್‍ಎಸ್‍ಎಸ್ ವ್ಯಕ್ತಿಯೊಂದಿಗೆ ಜಗಳ ಮಾಡಿದ್ದಾರೆ. ಈ ವೇಳೆ ಮಾರಕಾಸ್ತ್ರಗಳಿಂದ ನಂದು ಮೇಲೆ ಹಲ್ಲೆ ನಡೆಸಲಾಗಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ನಂದುವನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಾಕಾರಿಯಾಗದೇ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

    ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಸುಮಾರು ಆರು ಮಂದಿಎಸ್‍ಡಿಪಿ ಮತ್ತು ಆರ್‍ಎಸ್‍ಎಸ್ ಕಾರ್ಯಕರ್ತರನ್ನು ಕೂಡ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

    ಈ ಘಟನೆಯನ್ನು ಖಂಡಿಸಿ ಗುರುವಾರ ಆಲಪ್ಪುಳ ಜಿಲ್ಲೆಯನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುವುದಾಗಿ ಬಿಜೆಪಿ ಘೋಷಿಸಿತ್ತು. ಇದೀಗ ಇಂದು ಮುಂಜಾನೆಯಿಂದ ಸಂಜೆಯವರೆಗೂ ಪ್ರತಿಭಟನೆ ನಡೆಸಲಾಗುತ್ತಿದೆ.

    ಬಿಜೆಪಿಯ ವಿಜಯ್ ಯಾತ್ರೆಯನ್ನು ಕಾಸರಗೂಡಿನಿಂದ ತಿರುವನಂತಪುರಂವರೆಗೂ ಉದ್ಘಾಟಿಸಲು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ ವಿರೋಧಿಸಿ ಎಸ್‍ಡಿಪಿಐ ಇತ್ತೀಚೆಗೆ ರ್ಯಾಲಿ ನಡೆಸಿತ್ತು. ಬಳಿಕ ಈ ಘಟನೆ ಸಂಭವಿಸಿದೆ.

  • ಎಸ್‍ಡಿಪಿಐ ಮುಖಂಡನ ಮೇಲೆ ಅತ್ಯಾಚಾರ ಪ್ರಕರಣ ದಾಖಲು

    ಎಸ್‍ಡಿಪಿಐ ಮುಖಂಡನ ಮೇಲೆ ಅತ್ಯಾಚಾರ ಪ್ರಕರಣ ದಾಖಲು

    ಮಂಗಳೂರು: ಎಸ್‍ಡಿಪಿಐ ಮುಖಂಡನ ಮೇಲೆ ಅತ್ಯಾಚಾರ ಮತ್ತು ಪೋಕ್ಸೊ ಪ್ರಕರಣ ದಾಖಲಾಗಿದೆ.

    ಉಳ್ಳಾಲ ಕ್ಷೇತ್ರ ಸಮಿತಿ ಅಧ್ಯಕ್ಷ ಸಿದ್ದೀಕ್ ವಿರುದ್ಧ ಅತ್ಯಚಾರ ಮತ್ತು ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಮಂಗಳೂರಿನ ಹೊರವಲಯದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಮಹಿಳೆ ಮೇಲೆ ನಿರಂತರ ಅತ್ಯಾಚಾರ ಮತ್ತು ಆಕೆಯ ಇಬ್ಬರು 9 ಮತ್ತು 6 ವರ್ಷದ ಬಾಲಕಿಯರಿಗೆ ಲೈಂಗಿಕ ಕಿರುಕುಳ ಆರೋಪವನ್ನು ಸಿದ್ದೀಕ್ ಎದುರಿಸುತ್ತಿದ್ದಾನೆ.

    ಬ್ರಾಹ್ಮಣ ಸಮುದಾಯದಿಂದ ಮತಾಂತರಗೊಂಡ ಮಹಿಳೆ ಕೇರಳದ ಮೂಲದ ವ್ಯಕ್ತಿಯನ್ನು ಮದುವೆಯಾಗಿದ್ದಳು. ಬಳಿಕ ಗಂಡನ ಮನೆಯಿಂದ ಹೊರ ಉಳಿದಿದ್ದಳು. ಹೀಗಾಗಿ ಮಹಿಳೆಗೆ ಸಹಾಯ ಮಾಡುವ ನೆಪದಲ್ಲಿ ಸಿದ್ದಿಕ್ ಉಳ್ಳಾಲ್ ಪರಿಚಯ ಮಾಡಿಕೊಂಡಿದ್ದ. ನಂತರ ಆಕೆ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ಹಾಗೂ ಇಬ್ಬರು ಅಪ್ರಾಪ್ತ ಮಕ್ಕಳ ಮೇಲೂ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

    ಈ ಸಂಬಂಧ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.

  • ಜ.22 ರಂದು ಮುಸ್ಲಿಂ ಸಂಘಟನೆಗಳಿಂದ ಬೆಂಗಳೂರು ಬಂದ್‌ – ಬೇಡಿಕೆಗಳು ಏನು?

    ಜ.22 ರಂದು ಮುಸ್ಲಿಂ ಸಂಘಟನೆಗಳಿಂದ ಬೆಂಗಳೂರು ಬಂದ್‌ – ಬೇಡಿಕೆಗಳು ಏನು?

    ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಮುಸ್ಲಿಂ ಸಂಘಟನೆಗಳ ಒಕ್ಕೂಟ ಜ.22 ರಂದು ಶಾಂತಿಯುತ ಬೆಂಗಳೂರು ಬಂದ್‌ಗೆ ಕರೆ ನೀಡಿವೆ.

    ಈ ಬಂದ್‌ಗೆ 22 ಕ್ಕೂ ಹೆಚ್ಚು ಮುಸ್ಲಿಂ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಬಂದ್ ಬಗ್ಗೆ ಕರ್ನಾಟಕ ಮುಸ್ಲಿಂ ಸಂಘಟನೆಗಳ ಒಕ್ಕೂಟಗಳ ಸಮನ್ವಯಕಾರ ಮಸೂದ್ ಅಬ್ದುಲ್ ಖಾದರ್ ಪ್ರತಿಕ್ರಿಯಿಸಿ, ಈ ಬಂದ್ ಶಾಂತಿಯುತವಾಗಿ ಇರಲಿದೆ. ಯಾವುದೇ ರೀತಿ ಗುಂಪು ಮಾಡಿ ಪ್ರತಿಭಟನೆ ಇರುವುದಿಲ್ಲ. ‌ ಸ್ವಯಂಪ್ರೇರಿತವಾಗಿ ಬೆಂಗಳೂರಿನಲ್ಲಿ ಇರುವ ಮುಸ್ಲಿಮರು ಶುಕ್ರವಾರ ಉದ್ಯಮಗಳನ್ನು ಬಂದ್‌ ಮಾಡಿ ಮನೆಯಲ್ಲಿರಬೇಕು. ಬೆಳಗ್ಗೆಯಿಂದ ಸಂಜೆ 5 ಗಂಟೆಯವರೆಗೂ ಮುಸ್ಲಿಮರ ಎಲ್ಲಾ ಅಂಗಡಿಗಳು ಬಂದ್‌ ಆಗಲಿದೆ ಎಂದು ತಿಳಿಸಿದರು.

    ಬೇಡಿಕೆಗಳು ಏನು?
    – ದೇವರಜೀವನಹಳ್ಳಿ(ಡಿಜೆಹಳ್ಳಿ) ಮತ್ತು ಕಾಡುಗೊಂಡನ ಹಳ್ಳಿ(ಕೆಜಿ ಹಳ್ಳಿ) ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಸಂಬಂಧ ಬಂಧನಕ್ಕೆ ಒಳಗಾಗಿರುವ ಅಮಾಯಕರನ್ನು ಕೂಡಲೇ ಬಿಡುಗಡೆ ಮಾಡಬೇಕು.

    – ಲವ್ ಜಿಹಾದ್ ವಿರುದ್ಧ ಮತ್ತು ಕೃಷಿ ವಿರೋಧಿ‌ ಕಾಯ್ದೆಗಳನ್ನು ರದ್ದುಗೊಳಿಸಬೇಕು.

    – ಈಗಾಗಲೇ ಕೆಜೆಹಳ್ಳಿ ಮತ್ತು ಡಿಜೆಹಳ್ಳಿ ಕೇಸ್ ಸಂಬಂಧ ಎಸ್‌ಡಿಪಿಐ ಮುಖಂಡ ಮುಜಾಮ್ಮಿಲ್ ಪಾಷಾ ಸೇರಿದಂತೆ 421 ಜನರನ್ನ ಬಂಧಿಸಲಾಗಿದ್ದು ಬಿಡುಗಡೆ ಮಾಡುವಂತೆ ಒತ್ತಾಯ.

    – ಗೋ ಹತ್ಯೆ ಕಾಯ್ದೆಯನ್ನು ವಾಪಸ್‌ ಪಡೆಯಬೇಕು.

  • ಪಾಕ್ ಪರ ಘೋಷಣೆ ಕೂಗಿದ 6 ಮಂದಿ ಎಸ್‍ಡಿಪಿಐ ಕಾರ್ಯಕರ್ತರು ಪೊಲೀಸರ ವಶಕ್ಕೆ

    ಪಾಕ್ ಪರ ಘೋಷಣೆ ಕೂಗಿದ 6 ಮಂದಿ ಎಸ್‍ಡಿಪಿಐ ಕಾರ್ಯಕರ್ತರು ಪೊಲೀಸರ ವಶಕ್ಕೆ

    ಮಂಗಳೂರು: ಪಾಕ್ ಪರ ಘೋಷಣೆ ಕೂಗಿರುವ ಆರೋಪದ ಮೇಲೆ ಆರು ಮಂದಿ ಎಸ್‍ಡಿಪಿಐ ಕಾರ್ಯಕರ್ತರನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಮತ ಎಣಿಕೆ ಕೇಂದ್ರದ ಬಳಿ ಸೇರಿದ್ದ ರಾಜಕೀಯ ಪಕ್ಷಗಳ ಕಾರ್ಯಕರ್ತರು ಫಲಿತಾಂಶ ಹೊರಬರುತ್ತಿದ್ದಂತೆ ಘೋಷಣೆಗಳನ್ನು ಕೂಗುತ್ತಿದ್ದರು. ಈ ಸಂದರ್ಭ ಸ್ಥಳದಲ್ಲಿದ್ದ ಇಬ್ಬರು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿರುವುದು ಕೇಳಿಬಂದಿದೆ. ಇದರಿಂದ ಕೆಳ ಹೊತ್ತು ಆತಂಕದ ಸನ್ನಿವೇಶ ಸೃಷ್ಟಿಯಾಗಿತ್ತು.

    ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿರುವ ದೃಶ್ಯಾವಳಿಗಳನ್ನು ಫಾರೆನ್ಸಿಕ್ ಲ್ಯಾಬ್‍ಗೆ ರವಾನಿಸಿರುವ ಪೊಲೀಸರು, ಈಗಾಗಲೇ ಆರು ಮಂದಿ ಎಸ್‍ಡಿಪಿಐ ಕಾರ್ಯಕರ್ತರನ್ನು ವಶಪಡಿಸಿಕೊಂಡು ತ್ರೀವ ವಿಚಾರಣೆ ನಡೆಸುತ್ತಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಹಳ್ಳಿ ಪಾಲಿಟಿಕ್ಸ್‍ನಲ್ಲಿ ಗೆದ್ದ ಖುಷಿಯಲ್ಲಿ ಕೆಲ ಕಿಡಿಗೇಡಿಗಳು ಪಾಕ್ ಪರ ಘೋಷಣೆ ಕೂಗಿದ್ದರು. ಮತ ಎಣಿಕಾ ಕೇಂದ್ರದ ಮುಂದೆ ಎಸ್‍ಡಿಪಿಐ ಕಾರ್ಯಕರ್ತರು ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿರುವ ವಿಡಿಯೋ ವೈರಲ್ ಆಗಿತ್ತು. ಇದರಿಂದ ಎಚ್ಚೆತ್ತ ಬೆಳ್ತಂಗಡಿ ಪೊಲೀಸರು ದೇಶದ್ರೋಹದ ಪ್ರಕರಣ ದಾಖಲಿಸಿಕೊಂಡು, ಪಾಕ್ ಪರ ಘೋಷಣೆ ಕೂಗಿದವರ ಪತ್ತೆಗೆ ಕ್ರಮ ತೆಗೆದುಕೊಂಡಿದ್ದರು.

  • ಬೆಂಗಳೂರು ಗಲಭೆ – ಎನ್‌ಐಎಯಿಂದ ಎಸ್‌ಡಿಪಿಐ, ಪಿಎಫ್‌ಐಯ 17 ಮಂದಿ  ಅರೆಸ್ಟ್‌

    ಬೆಂಗಳೂರು ಗಲಭೆ – ಎನ್‌ಐಎಯಿಂದ ಎಸ್‌ಡಿಪಿಐ, ಪಿಎಫ್‌ಐಯ 17 ಮಂದಿ ಅರೆಸ್ಟ್‌

    ಬೆಂಗಳೂರು: ದೇವರಜೀವನಹಳ್ಳಿ(ಡಿಜೆಹಳ್ಳಿ) ಮತ್ತು ಕಾಡುಗೊಂಡನ ಹಳ್ಳಿ(ಕೆಜೆಹಳ್ಳಿ) ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಬಂಧಿಸಿದೆ.

    ಎಸ್‌ಡಿಪಿಐ ನಾಯಕರಾದ ಕೆಜೆ ಹಳ್ಳಿ ವಾರ್ಡ್‌ನ ಅಧ್ಯಕ್ಷ ಇಮ್ರಾನ್ ಅಹ್ಮದ್, ಇತರ ಹಿರಿಯ ನಾಯಕ ರುಬಾ ವಕಾಸ್, ನಾಗವಾರ ವಾರ್ಡ್‌ನ ಎಸ್‌ಡಿಪಿಐ ಅಧ್ಯಕ್ಷ ಅಬ್ಬಾಸ್ ಆತನ ಸಹಚರರಾದ ಅಜಿಲ್ ಪಾಷಾ, ಇರ್ಫಾನ್ ಖಾನ್ ಮತ್ತು ಅಕ್ಬರ್ ಖಾನ್ ಸೇರಿದಂತೆ 17 ಮಂದಿಯನ್ನು ಬಂಧಿಸಲಾಗಿದೆ.

    ಕೃತ್ಯಕ್ಕೂ ಮುನ್ನ ಆಗಸ್ಟ್‌ 11ರ ಸಂಜೆ ಸಭೆ ನಡೆಸಿದ್ದಾರೆ. ಬೆಂಗಳೂರಿನ ಥಣಿಸಂದ್ರದ ಮತ್ತು ಕೆ.ಜಿ ಹಳ್ಳಿ ವಾರ್ಡ್‌ಗಳಲ್ಲಿ ನಡೆದ ಸಭೆಗಳಲ್ಲಿ ಪಿತೂರಿ ನಡೆಸಿ, ಗಲಭೆಗೆ ಜನರನ್ನು ಸಜ್ಜುಗೊಳಿಸಿದ್ದಾರೆ. ಪೊಲೀಸ್ ಠಾಣೆಯಲ್ಲಿ ಹೆಚ್ಚಿನ ಜನಸಮೂಹ ಜಮಾವಣೆಗೆ ಕುಮ್ಮಕ್ಕು ನೀಡಿದ ಆರೋಪ ಇವರ ಮೇಲಿದೆ.

    ಆರೋಪಿಗಳಾದ ಸದ್ದಾಂ, ಸಯೀದ್ ಸೊಹೆಲ್, ಕಲೀಮುಲ್ಲಾ ಅಲಿಯಾಸ್‌ ಶಾರುಖ್ ಖಾನ್ ಫೇಸ್‌ಬುಕ್‌, ಇನ್‌ಸ್ಟಾಗ್ರಾಮ್‌ ಮತ್ತು ವಾಟ್ಸಪ್‌ ಮೂಲಕ ಕೃತ್ಯಕ್ಕೆ ಪ್ರಚೋದನೆ ನೀಡಿ ಜನರು ಸೇರುವಂತೆ ಮಾಡಿದ್ದರು ಎಂದು ಎನ್‌ಐಎ ಹೇಳಿದೆ.

    17 ಮಂದಿ ಸೇರಿದಂತೆ ಒಟ್ಟು ಈ ಪ್ರಕರಣಕ್ಕೆ ಸಂಬಂಧಿಸಿಂತೆ 187 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎನ್‌ಐಎ ತನ್ನ ಹೇಳಿಕೆಯಲ್ಲಿ ತಿಳಿಸಿದೆ.