Tag: SDPI

  • SDPI ಕಚೇರಿಯ ಬಾಗಿಲು ಧ್ವಂಸ ಮಾಡಿ ನುಗ್ಗಿದ NIA ಅಧಿಕಾರಿಗಳು

    SDPI ಕಚೇರಿಯ ಬಾಗಿಲು ಧ್ವಂಸ ಮಾಡಿ ನುಗ್ಗಿದ NIA ಅಧಿಕಾರಿಗಳು

    ಮಂಗಳೂರು: ಎನ್‍ಐಎ ಅಧಿಕಾರಿಗಳು ಇಂದು ಎಸ್‍ಡಿಪಿಐ ಕಚೇರಿಯ ಬಾಗಿಲು ಧ್ವಂಸ ಮಾಡಿ ಕಚೇರಿಯ ಒಳಗೆ ನುಗ್ಗಿದ ಘಟನೆ ಮಂಗಳೂರಿನಲ್ಲಿ (Mangaluru) ನಡೆದಿದೆ.

    ಎನ್‍ಐಎ (NIA) ಅಧಿಕಾರಿಗಳು ಎಸ್‍ಡಿಪಿಐ (SDPI) ಕಚೇರಿಯ ಬೀಗವನ್ನು ಬ್ಲೇಡ್‍ನಿಂದ ಕಟ್ ಮಾಡಿ ಕಚೇರಿಯ ಶಟರ್ ಒಪನ್ ಮಾಡಿದ್ದಾರೆ. ಅಷ್ಟೇ ಅಲ್ಲದೇ ಅಧಿಕಾರಿಗಳು ಒಳಭಾಗದ ಡೋರ್‌ನ ಗಾಜನ್ನು ಪುಡಿ ಮಾಡಿದ್ದಾರೆ. ಮಂಗಳೂರಿನ ಕಚೇರಿಯೊಳಗೆ ನುಗ್ಗಿದ ಎನ್‍ಐಎ ಅಧಿಕಾರಿಗಳು ಅಲ್ಲಿ ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ಕಂಪ್ಯೂಟರ್ ಸಿಪಿಯುನ ಹಾರ್ಡ್‍ಡಿಸ್ಕ್‌ನ್ನು ವಶಕ್ಕೆ ಪಡೆದಿದ್ದಾರೆ.

    ಈ ಬಗ್ಗೆ ಎಸ್‍ಡಿಪಿಐ ರಾಜ್ಯ ಮುಖಂಡ ಮಾತನಾಡಿ, ದಾಳಿ ಮಾಡುವ ಸಂದರ್ಭದಲ್ಲಿ ಕಚೇರಿಯಲ್ಲಿ ಸಿಬ್ಬಂದಿಯಿದ್ದ. ಆತ ಎನ್‍ಐಎ ಅಧಿಕಾರಿಗಳ ಬಳಿ ಪ್ರಶ್ನಿಸುವ ಮೊದಲೇ ಕಚೇರಿಯ ಬೀಗವನ್ನು ಒಡೆದು ನುಗ್ಗಿದ್ದಾರೆ. ಒಂದು ರೀತಿಯ ಅಕ್ರಮವಾಗಿ ಪ್ರವೇಶ ಮಾಡಿದ್ದಾರೆ. ಈ ರೀತಿಯ ಘಟನೆಯನ್ನು ಎಸ್‍ಡಿಪಿಐ ಖಂಡಿಸುತ್ತೇವೆ ಎಂದರು. ಇದನ್ನೂ ಓದಿ: ಕೊಪ್ಪಳದಲ್ಲಿ ಪಿಎಫ್‍ಐ ಸಂಘಟನೆಯ ಜಿಲ್ಲಾಧ್ಯಕ್ಷ ಬಂಧನ

    ದೇಶಾದ್ಯಂತ ರಾಷ್ಟ್ರೀಯ ತನಿಖಾ ದಳ ಸೋಷಿಯಲ್ ಡೆಮಾಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಚೇರಿ ಮತ್ತು ನಾಯಕರ ನಿವಾಸದ ಮೇಲೆ ದಾಳಿ ನಡೆಸಿದೆ. ಕರ್ನಾಟಕ, ಉತ್ತರ ಪ್ರದೇಶ, ತೆಲಂಗಾಣ, ಉತ್ತರ ಪ್ರದೇಶ, ಕೇರಳ, ತಮಿಳುನಾಡು ಸೇರಿದಂತೆ 10 ರಾಜ್ಯಗಳಲ್ಲಿ ದಾಳಿ ನಡೆಸಲಾಗಿದೆ. ಎನ್‍ಐಐ ಇತಿಹಾಸದಲ್ಲಿ ಅತಿ ದೊಡ್ಡ ದಾಳಿ ಇದಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: NIA ದಾಳಿ: ದೇಶದಲ್ಲಿ ಟೆರರಿಸ್ಟ್‌ಗಳನ್ನ ಹುಟ್ಟುಹಾಕಿದ್ದೇ ಕಾಂಗ್ರೆಸ್ – ಆರಗ ಜ್ಞಾನೇಂದ್ರ

    Live Tv
    [brid partner=56869869 player=32851 video=960834 autoplay=true]

  • NIA ದಾಳಿ: ದೇಶದಲ್ಲಿ ಟೆರರಿಸ್ಟ್‌ಗಳನ್ನ ಹುಟ್ಟುಹಾಕಿದ್ದೇ ಕಾಂಗ್ರೆಸ್ – ಆರಗ ಜ್ಞಾನೇಂದ್ರ

    NIA ದಾಳಿ: ದೇಶದಲ್ಲಿ ಟೆರರಿಸ್ಟ್‌ಗಳನ್ನ ಹುಟ್ಟುಹಾಕಿದ್ದೇ ಕಾಂಗ್ರೆಸ್ – ಆರಗ ಜ್ಞಾನೇಂದ್ರ

    ಬೆಂಗಳೂರು: ದೇಶದಲ್ಲಿ ಟೆರರಿಸ್ಟ್‌ಗಳನ್ನ (Terrorist) ಹುಟ್ಟುಹಾಕಿದ್ದೇ ಕಾಂಗ್ರೆಸ್ (Congress), ಟೆರಸ್ಸ್‌ಗಳು ತಪ್ಪಿಸಿಕೊಳ್ಳಲು ಅವಕಾಶ ಕೊಟ್ಟಿದ್ದೇ ಕಾಂಗ್ರೆಸ್ ಅವರು ದೇಶದ ದೃಷ್ಟಿಯಿಂದ ಯೋಚನೆ ಮಾಡಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra)  ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದಾರೆ.

    ಕರ್ನಾಟಕದ (Karnataka) ವಿವಿಧ ಜಿಲ್ಲೆಗಳು ಸೇರಿದಂತೆ ದೇಶಾದ್ಯಂತ ರಾಷ್ಟ್ರೀಯ ತನಿಖಾ ದಳ (NIA) ತನ್ನ ದಾಳಿ ಮುಂದುವರಿಸಿವೆ. ದೇಶಾದ್ಯಂತ ಇಂದು ಬೆಳ್ಳಂಬೆಳಿಗ್ಗೆಯಿಂದಲೇ 10ಕ್ಕೂ ಹೆಚ್ಚು ರಾಜ್ಯಗಳಲ್ಲಿ ಎನ್‌ಐಎ, ಇಡಿ (ED) ದಾಳಿ ಮುಂದುವರಿಸಿದ್ದು ರಾಜ್ಯದ ಪೊಲೀಸರ (Police) ನೆರವಿನೊಂದಿಗೆ ಪಿಎಫ್‌ಐ (PFI) ಹಾಗೂ ಎಸ್‌ಡಿಪಿಐ (SDPI) ಸಂಘಟನೆಯ 100ಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ಪಡೆದಿದೆ. ಇದನ್ನೂ ಓದಿ: 50 ಪಿಯುಸಿ ಕಾಲೇಜುಗಳಿಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್- ಸಿಎಂ ತವರು ಕ್ಷೇತ್ರಕ್ಕೆ ಬಂಪರ್ ಕೊಡುಗೆ

    ಈ ಕುರಿತು ಮಾತನಾಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ(Araga Jnanendra), ಖಚಿತ ಮಾಹಿತಿ ಮೇರೆಗೆ ಎಸ್‌ಡಿಪಿಐ, ಪಿಎಫ್‌ಐ ಸಂಘಟನೆಗಳ ಮೇಲೆ ಎನ್‌ಐಎ ಹಾಗೂ ಪೊಲೀಸರು ದಾಳಿ ನಡೆಸಿದ್ದಾರೆ. ಏಕತೆ, ಸಮಗ್ರತೆ ಹಾಳು ಮಾಡೋ, ಜೀವಹಾನಿ ಮಾಡುವ ಸಂಘಟನೆಗಳು ಹಲವು ಕೃತ್ಯಗಳ ಹಿಂದೆ ಇವೆ. ಆದ್ದರಿಂದ ಮಾಹಿತಿಯ ಮೇರೆಗೆ ರೇಡ್ ಆಗಿದೆ. ಸಂಘಟನೆಯ ಕೆಲ ಮುಖಂಡರನ್ನು ಈಗ ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದ್ದಾರೆ.

    ನಾನು ಶಿವಮೊಗ್ಗ ಪೊಲೀಸರಿಗೆ ಅಭಿನಂದನೆ ಸಲ್ಲಿಸ್ತೇನೆ. ಶಿವಮೊಗ್ಗ ಪ್ರಕರಣದಲ್ಲಿ ಬಾಂಬ್ (Bomb) ತಯಾರು ಮಾಡಲಾಗಿತ್ತು. ಅದನ್ನು ಟ್ರಯಲ್ ಕೂಡ ಮಾಡಿದ್ದಾರೆ. ಅವರ ಬಂಧನದಿಂದ ರಕ್ತಹಾನಿ ಜೀವಹಾನಿ ತಡೆಗಟ್ಟಲಾಗಿದೆ. ಇದನ್ನೂ ಓದಿ: ಮೊಸಳೆಯನ್ನು ಹಿಡಿದು ಕ್ಲಾಸ್‌ ರೂಮಿನಲ್ಲಿ ಕೂಡಿ ಹಾಕಿದ ಗ್ರಾಮಸ್ಥರು

    ಪಿಎಫ್‌ಐ ಕಾರ್ಯಕರ್ತರ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸಿ, ಇಂತಹ ಸಂದರ್ಭದಲ್ಲಿ ಪ್ರತಿಭಟನೆ ಮಾಡೋದು ಸರಿಯಲ್ಲ. ದೇಶದಲ್ಲಿ ಎಲ್ಲರೂ ಕಾನೂನು ಪಾಲಿಸಬೇಕು. ತಪ್ಪಿತಸ್ಥರು ಅಲ್ಪಸಂಖ್ಯಾತರೋ ಇಲ್ವೋ ಅಂತ ಪೊಲೀಸರು ಕೆಲಸ ಮಾಡೋಕೆ ಆಗಲ್ಲ. ಟೆರರಿಸ್ಟ್ಗಳನ್ನು ಹುಟ್ಟು ಹಾಕಿದ್ದೇ ಕಾಂಗ್ರೆಸ್, ಟೆರರಿಸ್ಟ್ಗಳನ್ನು ತಪ್ಪಿಸಿಕೊಳ್ಳಲು ಅವಕಾಶ ಕೊಟ್ಟಿದ್ದೇ ಕಾಂಗ್ರೆಸ್ ಅವರು ದೇಶದ ದೃಷ್ಟಿಯಿಂದ ಯೋಚನೆ ಮಾಡಬೇಕು ಎಂದು ಕಿಡಿ ಕಾರಿದ್ದಾರೆ.

    ಸಂಘಟನೆ ಬ್ಯಾನ್ ಆದ್ರೆ ವ್ಯಕ್ತಿಗಳ ರಾಕ್ಷಸ ಮನೋಭಾವ ಬದಲಾಗೋದಿಲ್ಲ. ಶಿವಮೊಗ್ಗದ ಶಾರಿಕ್ ಸ್ಯಾಟಲೈಟ್ ಫೋನ್‌ (Satellite Phone) ನಲ್ಲಿ ಮಾತನಾಡಿದ್ದಾನೆ. ತಲೆಮರೆಸಿಕೊಂಡಿರೋ ಆತನನ್ನು ಪತ್ತೆಮಾಡಲಾಗುತ್ತಿದೆ. ಶಿವಮೊಗ್ಗ ಪೊಲೀಸರಿಗೆ ಹೇಗೆ ಹ್ಯಾಟ್ಸ್ ಆಫ್ ಸಲ್ಲಿಸಬೇಕೋ ಗೊತ್ತಾಗ್ತಿಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕೊಪ್ಪಳದಲ್ಲಿ ಪಿಎಫ್‍ಐ ಸಂಘಟನೆಯ ಜಿಲ್ಲಾಧ್ಯಕ್ಷ ಬಂಧನ

    ಕೊಪ್ಪಳದಲ್ಲಿ ಪಿಎಫ್‍ಐ ಸಂಘಟನೆಯ ಜಿಲ್ಲಾಧ್ಯಕ್ಷ ಬಂಧನ

    ಕೊಪ್ಪಳ: ದೇಶಾದ್ಯಂತ ರಾಷ್ಟ್ರೀಯ ತನಿಖಾ ದಳ (NIA) ಮತ್ತು ಜಾರಿ ನಿರ್ದೇಶನಾಲಯ 10ಕ್ಕೂ ಹೆಚ್ಚು ರಾಜ್ಯಗಳಲ್ಲಿ ಸೋಷಿಯಲ್ ಡೆಮಾಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI) ಕಚೇರಿ ಮತ್ತು ನಾಯಕರ ನಿವಾಸದ ಮೇಲೆ ದಾಳಿ ನಡೆಸಿದೆ. ಈ ನಡುವೆ ಕರ್ನಾಟಕದ ಕೊಪ್ಪಳ (Koppala) ಜಿಲ್ಲೆಯ ಪಿಎಫ್‍ಐ ಸಂಘಟನೆಯ ಜಿಲ್ಲಾಧ್ಯಕ್ಷನನ್ನು ಅಧಿಕಾರಿಗಳು ಬಂಧಿಸಿದ್ದಾರೆ.

    ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಪೊಲೀಸರು ಗಂಗಾವತಿ ನಗರದಲ್ಲಿರುವ ಪಿಎಫ್‍ಐ ಸಂಘಟನೆಯ ಜಿಲ್ಲಾಧ್ಯಕ್ಷ ಅಬ್ದುಲ್ ಫೈಯಾಜ್‍ನನ್ನು ಬಂಧಿಸಿದ್ದಾರೆ. ಎಸ್‍ಪಿ ನೇತೃತ್ವದಲ್ಲಿ ಪೊಲೀಸ್ ಇಲಾಖೆ ಸಿಬ್ಬಂದಿ ಅಬ್ದುಲ್ ಫೈಯಾಜ್‍ನನ್ನು (Abdul Fayyaz) ಬಂಧಿಸಿ ನಂತರ ಗಂಗಾವತಿಯಿಂದ ಬೆಂಗಳೂರಿನ ಕೆ.ಜಿ.ಹಳ್ಳಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗುತ್ತಿದ್ದಾರೆ. ಇದನ್ನೂ ಓದಿ: ಮಂಗಳೂರಿನ PFI, SDPI ಕಚೇರಿ ಮೇಲೆ NIA ದಾಳಿ

    ಗುರುವಾರ ಬೆಳ್ಳಂಬೆಳಗ್ಗೆ 10ಕ್ಕೂ ಹೆಚ್ಚು ರಾಜ್ಯಗಳಲ್ಲಿ ಎನ್‍ಐಎ, ಇಡಿ ದಾಳಿ ಮುಂದುವರಿಸಿದ್ದು ರಾಜ್ಯದ ಪೊಲೀಸರ ನೆರವಿನೊಂದಿಗೆ ಪಿಎಫ್‍ಐ ಸಂಘಟನೆಯ 100ಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಉಗ್ರ ಸಂಘಟನೆ ಜೊತೆ ಸಂಪರ್ಕ-10 ರಾಜ್ಯಗಳ SDPI, PFI ಕಚೇರಿ, ನಾಯಕರ ಮನೆ ಮೇಲೆ NIA ದಾಳಿ

    ಭಯೋತ್ಪಾದನೆಗೆ ಧನಸಹಾಯ, ತರಬೇತಿ ಶಿಬಿರಗಳನ್ನು ಆಯೋಜಿಸುವುದು ಮತ್ತು ನಿಷೇಧಿತ ಸಂಸ್ಥೆಗಳಿಗೆ ಸೇರಲು ಜನರನ್ನು ಮೂಲಭೂತವಾಗಿ ರೂಪಿಸುವ ವ್ಯಕ್ತಿಗಳ ವಸತಿ ಮತ್ತು ಅಧಿಕೃತ ಆವರಣದಲ್ಲಿ ಈ ಹುಡುಕಾಟಗಳನ್ನು ನಡೆಸಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಉಗ್ರ ಸಂಘಟನೆ ಜೊತೆ ಸಂಪರ್ಕ-10 ರಾಜ್ಯಗಳ SDPI, PFI ಕಚೇರಿ, ನಾಯಕರ ಮನೆ ಮೇಲೆ NIA ದಾಳಿ

    ಉಗ್ರ ಸಂಘಟನೆ ಜೊತೆ ಸಂಪರ್ಕ-10 ರಾಜ್ಯಗಳ SDPI, PFI ಕಚೇರಿ, ನಾಯಕರ ಮನೆ ಮೇಲೆ NIA ದಾಳಿ

    ನವದೆಹಲಿ: ದೇಶಾದ್ಯಂತ ರಾಷ್ಟ್ರೀಯ ತನಿಖಾ ದಳ(NIA) ಸೋಷಿಯಲ್‌ ಡೆಮಾಕ್ರಾಟಿಕ್‌ ಪಾರ್ಟಿ ಆಫ್‌ ಇಂಡಿಯಾ(SDPI) ಮತ್ತು ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ(PFI) ಕಚೇರಿ ಮತ್ತು ನಾಯಕರ ನಿವಾಸದ ಮೇಲೆ ದಾಳಿ ನಡೆಸಿದೆ.

    ಕರ್ನಾಟಕ, ಉತ್ತರ ಪ್ರದೇಶ, ತೆಲಂಗಾಣ, ಉತ್ತರ ಪ್ರದೇಶ, ಕೇರಳ, ತಮಿಳುನಾಡು ಸೇರಿದಂತೆ 10 ರಾಜ್ಯಗಳಲ್ಲಿ ದಾಳಿ ನಡೆಸಲಾಗಿದೆ. ಎನ್‌ಐಐ ಇತಿಹಾಸದಲ್ಲಿ ಅತಿ ದೊಡ್ಡ ದಾಳಿ ಇದಾಗಿದೆ. ಎಂದು ವರದಿಯಾಗಿದೆ.

    ದೇಶದ ಹಲವು ಭಾಗಗಗಳಲ್ಲಿ ಎಸ್‌ಡಿಪಿಐ, ಪಿಎಫ್‌ಐ ರಾಜ್ಯ ಮತ್ತು ಜಿಲ್ಲಾ ಮಟ್ಟದ ನಾಯಕರ ಮನೆ ಮೇಲೆ ದಾಳಿ ನಡೆದಿದೆ. ಇದನ್ನೂ ಓದಿ: ಮಂಗಳೂರಿನ PFI, SDPI ಕಚೇರಿ ಮೇಲೆ NIA ದಾಳಿ

    ದಾಳಿ ಯಾಕೆ?
    ಭಯೋತ್ಪಾದನೆಗೆ ಧನಸಹಾಯ, ನಿಷೇಧಿತ ಸಂಸ್ಥೆಗಳ ಜೊತೆ ಸಂಪರ್ಕ, ದೇಶದಲ್ಲಿ ಗಲಭೆ ನಡೆಸಲು ಪ್ರಚೋದನೆ, ಮೂಲಭೂತವಾದಿ ವ್ಯಕ್ತಿಗಳಿಗೆ ತಮ್ಮ ಸಂಸ್ಥೆಯಲ್ಲಿ ಆಶ್ರಯ ಇತ್ಯಾದಿ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಎನ್‌ಐಎ ದೇಶಾದ್ಯಂತ ದಾಳಿ ನಡೆಸಿದೆ.

    ಎಲ್ಲೆಲ್ಲಿ ದಾಳಿ?
    ಕೇರಳದ ಮಲಪ್ಪುರಂ ಜಿಲ್ಲೆಯ ಮಂಜೇರಿಯಲ್ಲಿರುವ ಪಿಎಫ್‌ಐ ಅಧ್ಯಕ್ಷ ಒಎಂಎ ಸಲಾಂ ಮನೆ ಸೇರಿದಂತೆ ಪಿಎಫ್‌ಐ ರಾಜ್ಯ, ಜಿಲ್ಲಾ ಮಟ್ಟದ ನಾಯಕರ ಮನೆ ಮತ್ತು ಪಿಎಫ್‌ಐ ಕಚೇರಿ ಮೇಲೆ ದಾಳಿ ನಡೆದಿದೆ.

    ತಮಿಳುನಾಡಿನ ಕೊಯಮತ್ತೂರು, ಕಡಲೂರು, ರಾಮನಾಡ್, ದಿಂಡುಗಲ್, ತೇಣಿ ಮತ್ತು ತೆಂಕಾಸಿ ಸೇರಿದಂತೆ ಹಲವು ಸ್ಥಳಗಳಲ್ಲಿ ಪಿಎಫ್‌ಐ ಪದಾಧಿಕಾರಿಗಳ ಮನೆಗಳನ್ನು ಎನ್‌ಐಎ ಶೋಧಿಸುತ್ತದೆ.

    Live Tv
    [brid partner=56869869 player=32851 video=960834 autoplay=true]

  • ಮಂಗಳೂರಿನ PFI, SDPI ಕಚೇರಿ ಮೇಲೆ NIA ದಾಳಿ

    ಮಂಗಳೂರಿನ PFI, SDPI ಕಚೇರಿ ಮೇಲೆ NIA ದಾಳಿ

    ಮಂಗಳೂರು: ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ(PFI) ಮತ್ತು ಸೋಷಿಯಲ್‌ ಡೆಮಾಕ್ರೆಟಿಕ್‌ ಪಾರ್ಟಿ ಆಫ್‌ ಇಂಡಿಯಾ(SDPI) ಕಚೇರಿ ಮತ್ತು ನಾಯಕರ ಮನೆ ಮೇಲೆ ರಾಷ್ಟ್ರೀಯ ತನಿಖಾ ದಳ(NIA) ದಾಳಿ ನಡೆಸಿದೆ.

    ಎಂಟು ಕಡೆಗಳಲ್ಲಿ ಬೆಳಗ್ಗಿನ‌ ಜಾವ ಸುಮಾರು 3:30ರ ವೇಳೆಗೆ ದಾಳಿ ನಡೆದಿದೆ. ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿ ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿ ಇರುವ ಕಚೇರಿ ಮೇಲೆ ದಾಳಿ ಮಾಡಲಾಗಿದೆ. ಇದನ್ನೂ ಓದಿ: ಇರಾನ್‍ ಹಿಜಬ್ ಹೋರಾಟ – ಪೊಲೀಸರ ಗುಂಡಿಗೆ 8 ಮಂದಿ ಬಲಿ

    ಎನ್‌ಐಎ ದಾಳಿ ಖಂಡಿಸಿ ಪಿಎಫ್‌ಐ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ನೆಲ್ಲಿಕಾಯಿ ರಸ್ತೆಯನ್ನು ಪೊಲೀಸರು ಬಂದ್‌ ಮಾಡಿದ್ದಾರೆ. ಅರೆಮೀಸಲು ಪಡೆಯಿಂದ ಭಾರೀ ಕಟ್ಟೆಚ್ಚರ ವಹಿಸಲಾಗಿದೆ.

    ಸೆ.8 ರಂದು ಎನ್‌ಐಎ ಬಿಹಾರದ ಪ್ರಕರಣವೊಂದರ ಸಲುವಾಗಿ ಎಸ್‌ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್‌ ಪರಂಗಿಪೇಟೆ ಅವರ ಬಿ.ಸಿ.ರೋಡ್‌ ಬಳಿ ಇರುವ ಮನೆ ಮೇಲೆ ದಾಳಿ ನಡೆಸಿ ತಪಾಸಣೆ ನಡೆಸಿತ್ತು.

    Live Tv
    [brid partner=56869869 player=32851 video=960834 autoplay=true]

  • ಮೋದಿ ಹತ್ಯೆ ಸಂಚು ಪ್ರಕರಣದ ಬೆನ್ನತ್ತಿದ NIA

    ಮೋದಿ ಹತ್ಯೆ ಸಂಚು ಪ್ರಕರಣದ ಬೆನ್ನತ್ತಿದ NIA

    ನವದೆಹಲಿ: ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಹತ್ಯೆಗೆ ಸಂಚು ರೂಪಿಸಿದ್ದ ಪ್ರಕರಣದ ತನಿಖೆ ಮಂಗಳೂರಿಗೂ ವಿಸ್ತರಿಸಿದೆ. ಎಸ್‌ಡಿಪಿಐ (SDPI) ಪಕ್ಷದ ರಾಷ್ಟ್ರೀಯ ನಾಯಕ ರಿಯಾಜ್ ಫರಂಗಿಪೇಟೆಗೆ ಸೇರಿದ ಪರ್ಲಿಯಾ ನಿವಾಸದ ಮೇಲೆ ಎನ್‌ಐಎ (NIA) ಅಧಿಕಾರಿಗಳು ದಾಳಿ ಮಾಡಿದ್ದಾರೆ.

    ರಿಯಾಜ್ ಮತ್ತು ಅವರ ಕುಟುಂಬಸ್ಥರನ್ನು 8 ಗಂಟೆ ವಿಚಾರಣೆಗೆ ಒಳಪಡಿಸಿದ್ದಾರೆ. ಬಂಧಿತರ ಜೊತೆ ರಿಯಾಜ್ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಸಮಗ್ರ ವಿಚಾರಣೆ ನಡೆಸಿದ್ದಾರೆ. ರಿಯಾಜ್ ಮತ್ತು ಅವರ ಪತ್ನಿಯ ಮೊಬೈಲ್ ಸೇರಿ ಹಲವು ದಾಖಲೆ ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಇಂಡಿಯಾ ಗೇಟ್‌ನಲ್ಲಿ ಸುಭಾಷ್‌ ಚಂದ್ರ ಬೋಸ್ ಪ್ರತಿಮೆ ಅನಾವರಣ; ಕರ್ತವ್ಯ ಪಥ ಉದ್ಘಾಟಿಸಿದ ಪ್ರಧಾನಿ ಮೋದಿ

    ಎನ್‌ಐಎ ರೇಡ್ ಸುದ್ದಿ ತಿಳಿಯುತ್ತಲೇ ರಿಯಾಜ್ ಮನೆ ಮುಂದೆ ಜಮಾಯಿಸಿದ ಎಸ್‌ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಎನ್‌ಐಎ ಅಧಿಕಾರಿಗಳು ನಿರ್ಗಮಿಸಿದ ಬಳಿಕ ಮಾತನಾಡಿದ ರಿಯಾಜ್ ಫರಂಗಿಪೇಟೆ, ಇದು ರಾಜಕೀಯ ಪ್ರೇರಿತ ದಾಳಿ ಎಂದು ಆರೋಪಿಸಿದ್ದಾರೆ.

    ಅತ್ತ ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಅವರು ಮುಂಬೈ ಭೇಟಿ ವೇಳೆ ಭದ್ರತಾ ಲೋಪವಾಗಿದೆ. ಗೃಹ ಸಚಿವಾಲಯದ ಅಧಿಕಾರಿ ಸೋಗಿನಲ್ಲಿದ್ದ ಹೇಮಂತ್ ಎಂಬಾತನನ್ನು ಅರೆಸ್ಟ್ ಮಾಡಿ, 5 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಬಂಧಿತ ಆಂಧ್ರಪ್ರದೇಶದ ಸಂಸದರೊಬ್ಬರ ಖಾಸಗಿ ಭದ್ರತಾ ಸಿಬ್ಬಂದಿ ಅಂತಲೂ ಹೇಳಿಕೊಂಡಿದ್ದ. ಇದನ್ನೂ ಓದಿ: ಮೋದಿ ಉತ್ತಮ ವ್ಯಕ್ತಿ; ಅದ್ಭುತ ಕೆಲಸಗಳನ್ನು ಮಾಡುತ್ತಿದ್ದಾರೆ – ಟ್ರಂಪ್‌ ಬಣ್ಣನೆ

    Live Tv
    [brid partner=56869869 player=32851 video=960834 autoplay=true]

  • ಶಿವಮೊಗ್ಗ SDPI ಕಚೇರಿ ಮೇಲೆ ಪೊಲೀಸರ ದಾಳಿ – ಮಹತ್ವದ ದಾಖಲೆ ವಶಕ್ಕೆ

    ಶಿವಮೊಗ್ಗ SDPI ಕಚೇರಿ ಮೇಲೆ ಪೊಲೀಸರ ದಾಳಿ – ಮಹತ್ವದ ದಾಖಲೆ ವಶಕ್ಕೆ

    ಶಿವಮೊಗ್ಗ: ಕೆಲ ದಿನಗಳ ಹಿಂದೆ ನಗರದಲ್ಲಿ ಸಾವರ್ಕರ್ ಫ್ಲೆಕ್ಸ್‌‌ ವಿಚಾರವಾಗಿ ನಡೆದ ಗಲಭೆ ಹಿನ್ನೆಲೆ ನಗರದ ಎಸ್‍ಡಿಪಿಐ ಕಚೇರಿಯ ಮೇಲೆ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

    ಶಿವಮೊಗ್ಗದ ಅಮೀರ್ ಅಹಮ್ಮದ್ ವೃತ್ತದಲ್ಲಿ ಸಾವರ್ಕರ್ ಫ್ಲೆಕ್ಸ್ ಹಾಕುವ ವಿಚಾರ ಸಂಬಂಧ ನಡೆದ ಗಲಾಟೆ ವೇಳೆ ಪ್ರೇಮ್ ಸಿಂಗ್‍ಗೆ ದುಷ್ಕರ್ಮಿಗಳು ಚಾಕು ಇರಿದಿದ್ದರು. ಈ ಪ್ರಕರಣ ಸಂಬಂಧ ಆರೋಪಿಗಳಾದ ತನ್ವೀರ್, ನದೀಮ್, ರೆಹಮಾನ್ ಹಾಗೂ ಜಬೀವುಲ್ಲಾ ಮನೆ ಮೇಲೆ ಸರ್ಚ್ ವಾರೆಂಟ್ ಪಡೆದು ಪೊಲೀಸರು ದಾಳಿ ನಡೆಸಿದ್ದಾರೆ. ಅಲ್ಲದೇ ಎಸ್‍ಡಿಪಿಐ ಸಂಘಟನೆ ಜೊತೆ ಸಂಪರ್ಕ ಶಂಕೆ ಹಿನ್ನೆಲೆ ಶಿವಮೊಗ್ಗದ ಬೈಪಾಸ್ ರಸ್ತೆಯಲ್ಲಿರುವ ಎಸ್‍ಡಿಪಿಐ ಕಚೇರಿ ಮೇಲೂ ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಶಿವಮೊಗ್ಗದ ಇಬ್ಬರು ರೌಡಿಶೀಟರ್‌ಗಳು ಗಡೀಪಾರು

    ದಾಳಿಯಲ್ಲಿ ಮಹತ್ವದ ದಾಖಲೆ ಸಂಗ್ರಹಿಸಲಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯ ಪಿಐ ಅಂಜನ್ ಕುಮಾರ್, ಕುಂಸಿ ಪಿಐ ಹರೀಶ್ ಪಟೇಲ್, ವಿ ನೋಬ ನಗರ ಪೊಲೀಸ್ ಠಾಣೆ ಪಿಐ ರವಿಕುಮಾರ್, ಸಂಚಾರಿ ಪೊಲೀಸ್ ಠಾಣೆಯ ಪಿಐ ಸಂತೋಷ್, ತುಂಗಾನಗರ ಪೊಲೀಸ್ ಠಾಣೆಯ ಮಂಜುನಾಥ್ ನೇತೃತ್ವದಲ್ಲಿ ದಾಳಿ ನಡೆದಿದೆ. ಇದನ್ನೂ ಓದಿ: ಹಾಡಹಗಲೇ ಬಾಲಕಿ ಕಿಡ್ನ್ಯಾಪ್‍ಗೆ ಯತ್ನ

    ಘಟನೆ ಹಿನ್ನೆಲೆ:
    ಆಗಸ್ಟ್‌ 15 ರಂದು ಶಿವಮೊಗ್ಗದ ಅಮೀರ್ ಅಹಮ್ಮದ್ ವೃತ್ತದಲ್ಲಿ ಎರಡು ಕೋಮಿನ ನಡುವೆ ಜಟಾಪಟಿ ನಡೆದಿತ್ತು. ಒಂದು ಗುಂಪು ಸಾವರ್ಕರ್ ಫೋಟೋ ತೆಗೆದು ಟಿಪ್ಪು ಫೋಟೋ ಇಡಲು ಹೊರಟಿತ್ತು. ಈ ವೇಳೆ ಎರಡು ಕೋಮಿನ ನಡುವೆ ಜಟಾಪಟಿ ನಡೆದಿದೆ. ಈ ವೇಳೆ ಸಾವರ್ಕರ್ ಫೋಟೊವನ್ನು ಬೀಳಿಸುವುದರ ಜೊತೆಗೆ ಅಲ್ಲೇ ಪಕ್ಕದಲ್ಲಿದ್ದ ರಾಷ್ಟ್ರಧ್ವಜವನ್ನು ನೆಲಕ್ಕೆ ಬೀಳಿಸುವುದರ ಮೂಲಕ ರಾಷ್ಟ್ರಧ್ವಜಕ್ಕೂ ಅವಮಾನವನ್ನು ಮಾಡಿದ್ದರು. ಆದಾದ ಬಳಿಕ ಪ್ರೇಮ್ ಸಿಂಗ್‍ ಎಂಬಾತನಿಗೆ ದುಷ್ಕರ್ಮಿಗಳು ಚಾಕು ಇರಿದಿದ್ದರು.

    Live Tv
    [brid partner=56869869 player=32851 video=960834 autoplay=true]

  • ಕೊಡಗಿನಲ್ಲಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ

    ಕೊಡಗಿನಲ್ಲಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ

    ಮಡಿಕೇರಿ: ಕೊಡಗು ಜಿಲ್ಲೆಯ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. `ಕೊಡಗಿನ ವಿರೋಧಿ, ಕೊಡವರ ವಿರೋಧಿ ಸಿದ್ದರಾಮಯ್ಯ’ ಎಂಬಿತ್ಯಾದಿ ಘೋಷಣೆಗಳ ಮೂಲಕ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ಇಲ್ಲಿನ ತಿಮ್ಮಯ್ಯ ವೃತ್ತದಲ್ಲಿ ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರು ಮುಖಾಮುಖಿಯಾಗಿದ್ದು ವಾತಾವರಣ ಉದ್ವಿಗ್ನಗೊಂಡಿದೆ. ಇದೇ ವೇಳೇ ಹಿಂದೂಪರ ಸಂಘಟನೆ ಕಾರ್ಯಕರ್ತರು ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದಾರೆ. ಇದನ್ನೂ ಓದಿ: ಕೊಡಗಿನಲ್ಲಿ ಸಿದ್ದರಾಮಯ್ಯಗೆ ಘೇರಾವ್ – `ಗೋ ಬ್ಯಾಕ್ ಸಿದ್ದುಖಾನ್’ ಎಂದು ಆಕ್ರೋಶ

    ಸಿದ್ದರಾಮಯ್ಯ ಶಾಂತಿ ಪ್ರಿಯ ಕೊಡಗಿಗೆ ಬರೋದು ಬೇಡ, ಶಾಂತಿಪ್ರಿಯ ನಾಡಿನಲ್ಲಿ ಕೋಮುಗಲಭೆ ಬೆಳೆಸಿದ್ದಾರೆ. ಕೊಡವರು ದನದ ಮಾಂಸ ತಿನ್ನುತ್ತಾರೆ ಎಂದು ಹೇಳಿದ್ದಾರೆ. 7 ವರ್ಷಗಳ ಹಿಂದೆ ಟಿಪ್ಪು ಜಯಂತಿಯನ್ನು ಬಲವಂತವಾಗಿ ಆಚರಿಸಿದ್ದರು. ಇದರಿಂದ ಜಿಲ್ಲೆಯಲ್ಲಿ ಎರಡು ಜನರ ಪ್ರಾಣ ಹೋದವು. ಅಂತಹವರು ಕೊಡಗಿಗೆ ಬರೋದು ಬೇಡ ಎಂದು ಬಿಜೆಪಿ ನಗರ ಘಟಕದ ಉಪಾಧ್ಯಕ್ಷ ಜಗದೀಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಬೆಳಿಗ್ಗೆ ಕೊಡಗು ಜಿಲ್ಲೆಯ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದ ವೇಳೆ ಇಲ್ಲಿನ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಘೇರಾವ್ ಮಾಡಿಕೊಂಡಿದ್ದಾರೆ.

    ಕೊಡಗಿನ ಗಡಿ ಭಾಗದ ಪೋನ್ನಂಪೇಟೆ ತಾಲೂಕಿನ ತಿತಿಮತಿಯಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ದರ್ಶನ್ ಜೋಯಪ್ಪ ನೇತೃತ್ವದಲ್ಲಿ ನೂರಾರು ಸಂಖ್ಯೆಯ ಕಾರ್ಯಕರ್ತರು ಪ್ರತಿಭಟಿಸಿದ್ದರು. ಇದನ್ನೂ ಓದಿ: ಸುಳ್ಳು ಮತ್ತು ದೇಶದ್ರೋಹ ಸುದ್ದಿಗಳ ಪ್ರಕಟ – 8 ಯೂಟ್ಯೂಬ್ ಚಾನಲ್‍ಗಳು ನಿಷೇಧ

    ಸಿದ್ದರಾಮಯ್ಯ ಅವರಿದ್ದ ಕಾರನ್ನು ಅಡ್ಡಗಟ್ಟಿ ಸಾವರ್ಕರ್ ಭಾವಚಿತ್ರವನ್ನು ಕಾರಿನೊಳಕ್ಕೆ ಹಾಕಿದಲ್ಲದೇ ಕಪ್ಪು ಬಾವುಟ ಪ್ರದರ್ಶಿಸಿ `ಗೋ ಬ್ಯಾಕ್ ಸಿದ್ದುಖಾನ್, ಗೋ ಬ್ಯಾಕ್ ಸಿದ್ದರಾಮಯ್ಯ’ ಘೋಷಣೆ ಕೂಗಿದ್ದರು.

    ರಾಜ್ಯದಲ್ಲಿ ಮತಾಂಧ ಟಿಪ್ಪುವಿನ ಜಯಂತಿ ಆಚರಣೆ ಜಾರಿಗೆ ತಂದು ಅಮಾಯಕರ ಕೊಲೆಗೆ ಕಾರಣರಾದ ಟಿಪ್ಪು ಭಕ್ತ ಸಿದ್ದರಾಮಯ್ಯ ಕೊಡಗಿಗೆ ಕಾಲಿಡುವುದರಿಂದ ಮತ್ತೆ ಕೊಡಗಿನ ಶಾಂತಿ ಭಂಗವಾಗಲಿದೆ. ಅಷ್ಟೇ ಅಲ್ಲದೇ ಕೊಡವರನ್ನು ಗೋಮಾಂಸ ಭಕ್ಷಕರೆಂದು ಬಿಂಬಿಸಿದ್ದಾರೆ. ಹಿಂದೂ ವಿರೋಧಿ ಸಿದ್ದರಾಮಯ್ಯ ಕೊಡಗಿಗೆ ಕಾಲಿಡಲು ಅಯೋಗ್ಯರಾಗಿದ್ದಾರೆ ಎಂದು ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ದರ್ಶನ್ ಜೋಯಪ್ಪ ಆಕ್ರೋಶ ವ್ಯಕ್ತಪಡಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ನೃತ್ಯದಲ್ಲಿ ಸಾವರ್ಕರ್‌ ಫೋಟೋ – ಮುಖ್ಯೋಪಾಧ್ಯಾಯರನ್ನು ಕರೆಸಿ ಕ್ಷಮೆ ಹೇಳಿಸಿದ ಪಂಚಾಯತ್‌

    ನೃತ್ಯದಲ್ಲಿ ಸಾವರ್ಕರ್‌ ಫೋಟೋ – ಮುಖ್ಯೋಪಾಧ್ಯಾಯರನ್ನು ಕರೆಸಿ ಕ್ಷಮೆ ಹೇಳಿಸಿದ ಪಂಚಾಯತ್‌

    ಮಂಗಳೂರು: ದೇಶ ಭಕ್ತಿಗೀತೆಯ ನೃತ್ಯ ಪ್ರದರ್ಶನದ ವೇಳೆ ವೀರ ಸಾವರ್ಕರ್ ಫೋಟೋ ಪ್ರದರ್ಶಿಸಿದ್ದಕ್ಕೆ ಶಾಲಾ ಮುಖ್ಯೋಪಾಧ್ಯಾಯರನ್ನು ಕರೆಸಿ ಬಹಿರಂಗ ಕ್ಷಮಾಪಣೆ ಹೇಳಿಸಿದ ಘಟನೆ  ಮಂಗಳೂರು ಹೊರವಲಯದ ಗುರುಪುರದಲ್ಲಿ ನಡೆದಿದೆ.

    ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಗುರುಪುರ ಬೆಥನಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ಸಾವರ್ಕರ್ ಫೋಟೋ ಹಿಡಿದು ನೃತ್ಯ ಮಾಡಿದ್ದಾರೆ. ಇದನ್ನೂ ಓದಿ: ಸಾವರ್ಕರ್ ಫೋಟೋ ವಿವಾದ – ಎರಡು ಗುಂಪುಗಳ ಮಧ್ಯೆ ಘರ್ಷಣೆ, ಶಿವಮೊಗ್ಗದಲ್ಲಿ ನಿಷೇಧಾಜ್ಞೆ

    ಸಾವರ್ಕರ್‌ ಫೋಟೋ ಹಿಡಿದು ನೃತ್ಯ ಮಾಡಿದ್ದಕ್ಕೆ ಆಡಳಿತರೂಢ ಎಸ್‌ಡಿಪಿಐ ಮತ್ತು ಕಾಂಗ್ರೆಸ್‌ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೇ ಶಾಲಾ ಮುಖ್ಯೋಪಾಧ್ಯಾಯರನ್ನು ಪಂಚಾಯತ್ ಸದಸ್ಯರು ಕರೆಸಿ ಬಹಿರಂಗ ಕ್ಷಮಾಪಣೆ ಹೇಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕಾಸರಗೋಡು ಮಸೀದಿಗೆ ಹೋಗಿದ್ದ ಹಂತಕರು – SDPI, PFI ಲಿಂಕ್‌, ವಾರಂಟ್ ಜಾರಿ ಮಾಡಿ ಆಸ್ತಿ ಸೀಜ್‌

    ಕಾಸರಗೋಡು ಮಸೀದಿಗೆ ಹೋಗಿದ್ದ ಹಂತಕರು – SDPI, PFI ಲಿಂಕ್‌, ವಾರಂಟ್ ಜಾರಿ ಮಾಡಿ ಆಸ್ತಿ ಸೀಜ್‌

    – ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅಲೋಕ್‌ಕುಮಾರ್‌

    ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಯ ಆರೋಪಿಗಳಿಗೆ ಪಿಎಫ್‍ಐ ಮತ್ತು ಎಸ್‍ಡಿಪಿಐ ಜೊತೆ ಸಂಬಂಧ ಇರುವುದು ಗೊತ್ತಾಗಿದೆ. ಹತ್ಯೆಯ ಬಳಿಕ ಆರೋಪಿಗಳು ಕಾಸರಗೋಡು ಮಸೀದಿಗೆ ಹೋಗಿದ್ದರು ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.

    ಪ್ರಕರಣದ ಕುರಿತಾಗಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಡಿಜಿಪಿ ಅಲೋಕ್ ಕುಮಾರ್, ಹತ್ಯೆಯಲ್ಲಿ ನೇರವಾಗಿ ಭಾಗಿಯಾಗಿ ಹಲ್ಲೆ ನಡೆಸಿದ ಮೂವರು ಆರೋಪಿಗಳನ್ನು ಇಂದು ಬೆಳಗ್ಗೆ ಮಂಗಳೂರಿನ ತಲಪಾಡಿ ಚೆಕ್ ಪೋಸ್ಟ್ ಬಳಿ ಬಂಧಿಸಲಾಗಿದೆ. ಸುಳ್ಯದ ಶಿಯಾಬ್ (33), ಅಂಕತಡ್ಕದ ರಿಯಾಝ್ (27) ಸುಳ್ಯದ ಎಲಿಮಲೆ ನಿವಾಸಿ ಬಶೀರ್‌ನನ್ನು ಬಂಧಿಸಿದ್ದೇವೆ. ಶಿಯಾಬ್‌ ಕ್ಯಾಂಪ್ಕೋ ಕಂಪನಿಗೆ ಕೊಕ್ಕೊ ವಿತರಣೆ ಮಾಡುತ್ತಿದ್ದರೆ ರಿಯಾಝ್ ಕೋಳಿ ವ್ಯಾಪಾರ ಮಾಡುತ್ತಿದ್ದ. ಬಶೀರ್ ಹೋಟೆಲ್‍ನಲ್ಲಿ ಕೆಲಸ ಮಾಡುತ್ತಿದ್ದ. ಕೃತ್ಯಕ್ಕೆ ಬ್ಲ್ಯಾಕ್ ಸ್ಪ್ಲೆಂಡರ್ ಬೈಕನ್ನು ಬಳಕೆ ಮಾಡಲಾಗಿದೆ. ಕಾರೊಂದನ್ನು ಸಹ ಬಳಕೆ ಮಾಡಿದ್ದಾರೆ. ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ಸಹ ವಶಪಡಿಸಿಕೊಳ್ಳುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ವಾರದ ಹಿಂದೆಯೇ ಪ್ರವೀಣ್‌ ಹತ್ಯೆಗೆ ಸ್ಕೆಚ್‌ – ಕೇರಳದ 7 ಕಡೆ ಆಶ್ರಯ, ಹಂತಕರು ಕೊನೆಗೂ ಅಂದರ್‌

    ಆರೋಪಿಗಳ ಬಗ್ಗೆ ಮೊದಲೇ ನಮಗೆ ಸುಳಿವು ಸಿಕ್ಕಿತ್ತು. ಆದರೆ ನಾವು ಬಹಿರಂಗ ಮಾಡಿರಲಿಲ್ಲ. ಮುಂದೆ ಈ ರೀತಿಯ ಯಾವುದೇ ಕೃತ್ಯ ನಡೆಯದೇ ಕಠಿಣ ಕ್ರಮ ಕೈಗೊಳ್ಳುತ್ತೇವೆ. ವಾರೆಂಟ್ ಇಶ್ಯೂ ಮಾಡಿ ಹಂತಕರು ಮತ್ತು ಹಂತಕರಿಗೆ ಸಹಕಾರ ನೀಡಿದವರ ಆಸ್ತಿಗಳನ್ನು ಮುಟ್ಟುಗೋಲು ಹಾಕುತ್ತೇವೆ. ಯಾವುದೇ ಅಮಾಯಕರನ್ನು ಬಂಧನ ಮಾಡುವುದಿಲ್ಲ. ಆದರೆ ಕೃತ್ಯದಲ್ಲಿ ಭಾಗಿಯಾದವರೆಲ್ಲರನ್ನು ಬಂಧಿಸುತ್ತೇವೆ. ಯಾರನ್ನು ಫಿಕ್ಸ್ ಮಾಡುವುದಕ್ಕೆ ಹೋಗುವುದಿಲ್ಲ. ಯಾರನ್ನೋ ಬಂಧಿಸುವುದಕ್ಕೆ ಇದು ಹುಡುಗಾಟವಲ್ಲ. ನಮಗೆ ಜಾತಿ, ಧರ್ಮ, ಬಣ್ಣ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಈದ್ಗಾ ಮೈದಾನದ ವಿವಾದ- ಸರ್ಕಾರದ ನಿರ್ಧಾರವೇ ಅಂತಿಮ: ಬೊಮ್ಮಾಯಿ

    ಎಲ್ಲ ಮಾಹಿತಿಯನ್ನು ನಾವು ಎನ್‍ಐಎಗೆ ನೀಡುತ್ತೇವೆ. ಎನ್‍ಐಎ ಕೂಡಾ ತನಿಖೆ ಮುಂದುವರಿಸುತ್ತಿದೆ. ನಮ್ಮ ಅಧಿಕಾರಿಗಳು ಒಳ್ಳೆಯ ಕೆಲಸ ಮಾಡಿದ್ದಾರೆ. ಪೊಲೀಸ್ ತಂಡಕ್ಕೆ ಸೂಕ್ತ ಬಹುಮಾನ ನೀಡಲಾಗುತ್ತದೆ. ಶತಾಯಗತಾಯವಾಗಿ ಈ ಪ್ರಕರಣ ಭೇದಿಸಬೇಕಾಗಿತ್ತು. ಜನರಲ್ಲಿಯೂ ಸಾಕಷ್ಟು ಆತಂಕವಿತ್ತು. ಪ್ರಕರಣ ಭೇದಿಸಲು ಸಾಕಷ್ಟು ಒತ್ತಡಗಳಿತ್ತು. ಅಧಿಕಾರಿಗಳು ಉತ್ತಮ ಕೆಲಸ ಮಾಡಿದ್ದಾರೆ. ಅಧಿಕಾರಿ ತಂಡಕ್ಕೆ ಬಹುಮಾನವೂ ಘೋಷಿಸಲಾಗುತ್ತದೆ ಎಂದು ತಿಳಿಸಿದರು.

    Live Tv
    [brid partner=56869869 player=32851 video=960834 autoplay=true]