ಧಾರವಾಡ: ದೇಶದಲ್ಲಿ ಕರ್ನಾಟಕವೂ ಸೇರಿ ಹಲವು ರಾಜ್ಯಗಳಲ್ಲಿ ನಡೆದ ಹಿಂದೂ ಕಾರ್ಯಕರ್ತರ ಕೊಲೆಯಲ್ಲಿ ಬಹುತೇಕ ಪಿಎಫ್‍ಐ ಹಾಗೂ ಎಸ್‍ಡಿಪಿಐ ಸಂಘಟನೆಗಳ ಕೈವಾಡವೇ ಇದೆ. ಆದ್ದರಿಂದ ಈ ಸಂಘಟನೆಗಳನ್ನು ಬ್ಯಾನ್ ಮಾಡದೇ ಹೋದಲ್ಲಿ ಆ ಸಂಘಟನೆಗಳ ಕಾರ್ಯಕರ್ತರನ್ನು ನಾವೇ ನುಗ್ಗಿ ಹೊಡೆಯಬೇಕಾಗುತ್ತದೆ ಎಂದು ಶ್ರೀರಾಮ ಸೇನೆ ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಎಸ್‍ಡಿಪಿಐ ಹಾಗೂ ಪಿಎಫ್‍ಐ ಸಂಘಟನೆಗಳು ಅಶಾಂತಿ ಸೃಷ್ಟಿಸುವುದರ ಜೊತೆಗೆ ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡುತ್ತಿವೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಮೋದಿ ಮುಂದೆ ರಾಹುಲ್ ಗಾಂಧಿ ಜೀರೋ: ರೇಣುಕಾಚಾರ್ಯ
ಈ ಎರಡೂ ಸಂಘಟನೆಯವರು ಭಾರತವನ್ನು 2047ಕ್ಕೆ ಇಸ್ಲಾಮೀಕರಣಗೊಳಿಸುವ ಉದ್ದೇಶ ಹೊಂದಿದ್ದಾರೆ. ಕೇರಳ ರಾಜ್ಯದ ಮುಖ್ಯಮಂತ್ರಿ ಪೀಣರಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಅಚ್ಯುತನ್ ಇಬ್ಬರೂ ಪಿಎಫ್‍ಐ ಹಾಗೂ ಎಸ್‍ಡಿಪಿಐ ಸಂಘಟನೆಗಳನ್ನು ಬ್ಯಾನ್ ಮಾಡುವಂತೆ ಕೇಂದ್ರಕ್ಕೆ ಒತ್ತಾಯ ಮಾಡಿದ್ದಾರೆ. ಬಿಜೆಪಿ ವಿರೋಧ ಪಕ್ಷದಲ್ಲಿದ್ದಾಗ ಈ ಸಂಘಟನೆಗಳನ್ನು ಬ್ಯಾನ್ ಮಾಡುವಂತೆ ಒತ್ತಾಯ ಮಾಡಿತ್ತು. ಈಗ ಇದೇ ಪಕ್ಷ ಅಧಿಕಾರದಲ್ಲಿದ್ದು, ಈ ಸಂಘಟನೆಗಳನ್ನು ಬ್ಯಾನ್ ಮಾಡಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಚಾಮರಾಜನಗರ: ಮಲೆಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶವನ್ನು ಹುಲಿ ಸಂರಕ್ಷಿತ ಪ್ರದೇಶವಾಗಿ ಘೋಷಣೆ ಮಾಡಲ್ಲ. ಇಲ್ಲಿ ಹುಲಿ ಯೋಜನೆಗೆ ಯಾವುದೇ ಕಾರಣಕ್ಕೂ ಅನುಮತಿ ನೀಡುವುದಿಲ್ಲ ಎಂದು ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ಇಲ್ಲಿ ಹುಲಿ ಯೋಜನೆಗೆ ಯಾವುದೇ ಕಾರಣಕ್ಕೂ ಅನುಮತಿ ನೀಡುವುದಿಲ್ಲ. ಮಲೆಮಹದೇಶ್ವರ ಬೆಟ್ಟ ಇತಿಹಾಸ ಪ್ರಸಿದ್ಧ ಕ್ಷೇತ್ರ. ಈ ಭಾಗದಲ್ಲಿ ಕಾಡಂಚಿನ ಗ್ರಾಮಗಳು ಹೆಚ್ಚಾಗಿವೆ. ಕಾಡಿನೊಳಗೂ ಗ್ರಾಮಗಳಿವೆ. ಈ ಭಾಗದ ಜನರಿಗೆ, ಬೆಟ್ಟಕ್ಕೆ ಬರುವ ಭಕ್ತರಿಗೆ ತೊಂದರೆಯಾಗಬಾರದು. ಮಲೆಮಹದೇಶ್ವರ ಬೆಟ್ಟಕ್ಕೆ ಈ ಭಾಗದ ರೈತರೇ ವಾರಸುದಾರರು. ಸರ್ಕಾರ ಅನುಷ್ಠಾನಗೊಳಿಸುವ ಯಾವುದೇ ಯೋಜನೆಗಳು ಜನರಿಗೆ ಅನುಕೂಲವೇಗಬೇಕೇ ಹೊರತು ಅನಾನುಕೂಲವಾಗಬಾರದು ಎಂದರು. ಇದನ್ನೂ ಓದಿ: ಮಾಜಿ ಸಚಿವ ಪಾರ್ಥ ಚಟರ್ಜಿ ಮೇಲೆ ಚಪ್ಪಲಿ ಎಸೆದ ಮಹಿಳೆ
ಎಸ್‌ಡಿಪಿಐ, ಪಿಎಫ್‌ಐ ಬ್ಯಾನ್ ಆಗ್ಬೇಕು: ಇದೇ ವೇಳೆ ಎಸ್‌ಡಿಪಿಐ ಸಂಘಟನೆ ವಿಚಾರವಾಗಿ ಮಾತನಾಡಿದ ಸಚಿವ ವಿ.ಸೋಮಣ್ಣ, ಎಸ್‌ಡಿಪಿಐ, ಪಿಎಫ್‌ಐ ಸಂಘಟನೆಗಳು ಬ್ಯಾನ್ ಆಗ್ಬೇಕು. ಈ ಸಂಘಟನೆಗಳನ್ನು ನಿಷೇಧಿಸಲು ಸರ್ಕಾರ ಹಂತ-ಹಂತವಾಗಿ ಕ್ರಮ ಕೈಗೊಳ್ಳುತ್ತಿದೆ. ಇದು ಯಾರ ಪಾಪದ ಕೂಸು ಎಂಬುದು ಎಲ್ಲರಿಗೂ ಗೊತ್ತಿದೆ. ಈ ಸಂಘಟನೆಗಳು ಎಲ್ಲರಿಗೂ ತಲೆನೋವಾಗಿದ್ದು, ಇವುಗಳನ್ನು ನಿಷೇಧಿಸಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ತಿಳಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಮಂಗಳೂರು: ಕರಾವಳಿಯನ್ನೇ ಬೆಚ್ಚಿಬೀಳಿಸಿದ್ದ ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಬಂಧಿತ ಆರೋಪಿಗಳು ಹತ್ಯೆಗೆ ನಡೆದಿದ್ದ ಪ್ಲಾನ್ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.
ಶಫೀಕ್ ಮತ್ತು ಝಾಕೀರ್ ಇಬ್ಬರು ಬಂಧಿತರು. ಹತ್ಯೆಗೆ ನಿಜವಾದ ಕಾರಣರಾದ ಹಂತಕರ ಬಂಧನವಾಗಿಲ್ಲ. ಹಂತಕರಿಗಾಗಿ ಪೊಲೀಸರ ತಂಡ ರಚಿಸಿದ್ದು. ಐಪಿಎಸ್ ಅಧಿಕಾರಿ ನೇತೃತ್ವದ ತಂಡ ಕೇರಳದಲ್ಲಿ ಬೀಡುಬಿಟ್ಟಿದೆ. ಮಾಹಿತಿಯ ಪ್ರಕಾರ ಇಬ್ಬರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎನ್ನಲಾಗಿದೆ. ಶಫೀಕ್ ಮಾಹಿತಿ ಆಧರಿಸಿ ಕೇರಳದ ಗ್ರಾಮವೊಂದರಲ್ಲಿ ಇಬ್ಬರು ಶಂಕಿತರ ವಶಕ್ಕೆ ಪಡೆಯಲಾಗಿದೆ. ಇವರೇ ಆ ಹಂತಕರು ಎನ್ನುವುದು ಸ್ಪಷ್ಟವಾಗಬೇಕಿದೆ. ಸದ್ಯ ಬಂಧಿತ ಶಫೀಕ್ ಮತ್ತು ಝಾಕೀರ್ ಹತ್ಯೆಗೆ ಸಹಾಯ ಮಾಡಿದವರಾಗಿದ್ದು, ಹಂತಕರು ತಪ್ಪಿಸಿಕೊಳ್ಳಲು ದಾರಿ ತೋರಿಸಿದವರಾಗಿದ್ದಾರೆ. ವಿಚಾರಣೆ ವೇಳೆ ಇದನ್ನು ಒಪ್ಪಿಕೊಂಡಿದ್ದಾರೆ. ಇದನ್ನೂ ಓದಿ: ಪ್ರವೀಣ್ ಹತ್ಯೆಗೆ ರಾಜಸ್ಥಾನ ಸಿಎಂ ಖಂಡನೆ
ಇಬ್ಬರಿಗೂ ಆಗಸ್ಟ್ 11ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅಗತ್ಯವಿದ್ದರೆ ಅವರನ್ನು ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸುವುದಾಗಿ ಪೊಲೀಸರು ಹೇಳಿದ್ದಾರೆ. ಈ ನಡುವೆ ಸಿಸಿಟಿವಿ ದೃಶ್ಯವೊಂದು ಸಿಕ್ಕಿದ್ದು ಅದರಿಂದ ಭಯಾನಕ ಸತ್ಯ ಹೊರಬಿದ್ದಿದೆ. ಆರೋಪಿಗಳಲ್ಲಿ ಒಬ್ಬನಾದ ಶಫೀಕ್ ವ್ಯಕ್ತಿಯೊಬ್ಬನನ್ನು ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಬಂದು ಬೆಳ್ಳಾರೆಯ ಕೋಳಿ ವ್ಯಾಪಾರಿ ಪೃಥ್ವಿರಾಜ್‍ನನ್ನು ದೂರದಿಂದಲೇ ತೋರಿಸಿ ಹೋಗಿದ್ದಾನೆ. ಆದರೆ, ಪೃಥ್ವಿರಾಜ್ ಬದಲಿಗೆ ಪ್ರವೀಣ್ ಹತ್ಯೆ ಆಗಿದ್ದು, ಪ್ರವೀಣ್ ಹತ್ಯೆ ಹಿಂದೆ ಯಾರ ಕೈವಾಡವಿದೆ? ಪೃಥ್ವಿರಾಜ್‍ನನ್ನು ಕೊಲೆ ಮಾಡಲು ಬಂದು ಪ್ರವೀಣ್‍ನ ಕಥೆ ಮುಗಿಸಿದ್ರಾ? ತಪ್ಪು ಮಾಹಿತಿಯಿಂದ ಈ ಕೊಲೆ ನಡೀತಾ? ಹೀಗೆ ಸಾಲು, ಸಾಲು ಪ್ರಶ್ನೆಗಳು ಎದುರಾಗಿದೆ. ಈ ಎಲ್ಲ ಆಯಾಮಗಳಲ್ಲೂ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ಪ್ರವೀಣ್ ಕುಟುಂಬಕ್ಕೆ 50 ಲಕ್ಷ ಪರಿಹಾರ ವಿತರಣೆ
Live Tv
[brid partner=56869869 player=32851 video=960834 autoplay=true]
ಮಂಗಳೂರು: ಹತ್ಯೆಯಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 25 ಲಕ್ಷ ಹಾಗೂ ಬಿಜೆಪಿ ಪಕ್ಷದಿಂದ 25 ಲಕ್ಷ ಸೇರಿ ಒಟ್ಟು 50 ಲಕ್ಷ ರೂ. ಪರಿಹಾರ ಘೋಷಿಸಿದಂತೆ, ಕುಟುಂಬಸ್ಥರಿಗೆ ಪರಿಹಾರ ಚೆಕ್ ವಿತರಣೆ ಮಾಡಲಾಗಿದೆ.
ಸರ್ಕಾರದ ವತಿಯಿಂದ 25 ಲಕ್ಷ, ಬಿಜೆಪಿ ವತಿಯಿಂದ 25 ಲಕ್ಷ ರೂ.ಗಳ ಚೆಕ್ ಅನ್ನು ಪ್ರವೀಣ್ ಪತ್ನಿಗೆ ನೀಡಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಲಾ 25 ಲಕ್ಷ ರೂ.ಗಳ ಪರಿಹಾರ ಚೆಕ್ ವಿತರಣೆ ಮಾಡಿದ್ದಾರೆ. ಇದನ್ನೂ ಓದಿ: ಪ್ರವೀಣ್ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಬೊಮ್ಮಾಯಿ
ಬೆಳ್ಳಾರೆಯ ಮೃತ ಪ್ರವೀಣ್ ಮನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿದ್ದು, ಪ್ರವೀಣ್ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ. ಬಳಿಕ ಮಾತನಾಡಿದ ಸಿಎಂ, ಪ್ರವೀಣ್ ತಮ್ಮ ಕುಟುಂಬಕ್ಕೆ ಆಧಾರವಾಗಿದ್ದು, ಚಿಕ್ಕ ಅಂಗಡಿಯೇ ಆದಾಯದ ಮೂಲವಾಗಿತ್ತು. ಸರ್ಕಾರದ ವತಿಯಿಂದ ಪರಿಹಾರ ನಿಧಿಯಿಂದ 25 ಲಕ್ಷ ಪರಿಹಾರ ಹಾಗೂ ಬಿಜೆಪಿ ವತಿಯಿಂದ 25 ಲಕ್ಷ ರೂ.ಗಳನ್ನ ಪರಿಹಾರವಾಗಿ ನೀಡಲಾಗಿದೆ. ಪ್ರವೀಣ್ ಕುಟುಂಬದವರಿಗೆ ಪಕ್ಷ ಮತ್ತು ಸರ್ಕಾರದ ವತಿಯಿಂದ ಎಲ್ಲ ರೀತಿಯ ಸಹಕಾರ ನೀಡಲಾಗುತ್ತದೆ. ಕೊಲೆಪ್ರಕರಣ ಬೇಧಿಸುವವರೆಗೆ ಅಕ್ಷರಶಃ ದಣಿವಿಲ್ಲದೇ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಪ್ರವೀಣ್ ಕೊಲೆಗೈದವರಿಗೆ ಶಿಕ್ಷೆಯಾದಾಗ ಮಾತ್ರ ಆತ್ಮಕ್ಕೆ ಶಾಂತಿ ದೊರಕಲಿದೆ. ಪ್ರವೀಣ್ ಕುಟುಂಬದವರೂ ಇದೇ ಮಾತು ಹೇಳಿದ್ದಾರೆ. ಇನ್ನೆಂದೂ ಈ ರೀತಿ ಯಾರಿಗೂ ಆಗಬಾರದು. ಇದರ ಹಿಂದಿರುವ ಸಂಘಟನೆಗಳ ವಿರುದ್ಧವೂ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ. ಕಟುಕರಿಗೆ ಶಿಕ್ಷೆ ಆಗುವ ಕೆಲಸವನ್ನು ಕಟ್ಟುನಿಟ್ಟಾಗಿ ಮಾಡುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ತಮಿಳಿನ ನಟ ಜಿ.ಎಂ ಕುಮಾರ್ ಆಸ್ಪತ್ರೆಗೆ ದಾಖಲು
ಇದು ಯೋಜನಾಬದ್ಧವಾದ ಭಯೋತ್ಪಾದಕ ಕೃತ್ಯ: ಇದೊಂದು ಪೂರ್ವಯೋಜಿತ ಕೃತ್ಯ ಎಂದು ಮೇಲ್ನೋಟಕ್ಕೆ ತಿಳಿಯುತ್ತದೆ. ಮೊನ್ನೆ ನಡೆದ ಪ್ರವೀಣ್ ಹತ್ಯೆ ಪ್ರಕರಣ ಖಂಡನೀಯ. ಕಳೆದ 10 ವರ್ಷಗಳಲ್ಲಿ ಈ ಭಾಗದಲ್ಲಿ ಇಂತಹ ಚಟುವಟಿಕೆಗಳು ನಡೆಯುತ್ತಿವೆ. ಸಮಾಜಘಾತುಕ ಶಕ್ತಿಗಳು ಬೆಂಬಲ ನೀಡಿರುವುದರಿಂದ ನಿರ್ಭೀತಿಯಿಂದ ಈ ಘಟನೆ ನಡೆಸಲಾಗಿದೆ. ಇದನ್ನು ನಾವು ಕೊಲೆ ಪ್ರಕರಣವಾಗಿ ನೋಡುತ್ತಿಲ್ಲ. ದೇಶವನ್ನು ಛಿದ್ರ ಮಾಡುವ ಯೋಜನಾಬದ್ಧವಾದ ಭಯೋತ್ಪಾದಕ ಕೃತ್ಯ ಎಂದು ಪರಿಗಣಿಸಲಾಗಿದೆ. ತನಿಖೆ ಪ್ರಾರಂಭವಾಗಿದೆ. ಆರೋಪಿಗಳು ರಾಜ್ಯದ ಗಡಿ ದಾಟಿರಬಹುದು. ಈ ಎಲ್ಲ ಆಯಾಮದಲ್ಲಿ ತನಿಖೆ ಮಾಡಲಾಗುತ್ತಿದೆ. ಕೆಲವರನ್ನು ವಶಕ್ಕೆ ತೆಗೆದುಕೊಂಡು, ಅವರಿಂದ ಪಡೆದ ಮಾಹಿತಿಯಿಂದ ತನಿಖೆ ಮುಂದುವರಿಯಲಿದೆ. ಅತಿ ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸಲಾಗುವುದು ಎಂಬ ವಿಶ್ವಾಸವಿದೆ. ಎಡಿಜಿಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಕಳೆದ ಹಲವಾರು ವರ್ಷಗಳಿಂದ ದುಷ್ಕೃತ್ಯಗಳಲ್ಲಿ ತೊಡಗಿಕೊಂಡಿರುವ ಸಮಾಜಘಾತುಕ ಶಕ್ತಿಗಳ ಜಾಡು ಹಿಡಿದು, ಈ ದಿಸೆಯಲ್ಲಿಯೂ ತನಿಖೆ ಕೈಗೊಂಡು ಹಿಂದಿರುವ ಸಂಘಟನೆಗಳನ್ನು ಗಮನಿಸುತ್ತಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪ್ರವೀಣ್ ಹತ್ಯೆ ಬಳಿಕ ನಮ್ಮ ನಾಯಕರು ತಲೆಯೆತ್ತಿ ಓಡಾಡೋಕೆ ಆಗ್ತಿಲ್ಲ – ವಿಜಯೇಂದ್ರ
ಕರ್ನಾಟಕಕ್ಕೆ ಎನ್‌ಐಎ ಅಗತ್ಯವಿದೆ: ಕರ್ನಾಟಕ ರಾಜ್ಯಕ್ಕೆ ರಾಷ್ಟ್ರೀಯ ತನಿಖಾ ದಳವನ್ನು ಕಳುಹಿಸಲು ಕೋರಲಾಗಿದೆ. ವಿಶೇಷವಾಗಿ ಮಂಗಳೂರು ಭಾಗಕ್ಕೆ ಎನ್‌ಐಎ ಅವಶ್ಯಕತೆಯಿದೆ ಎಂದು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಲಾಗಿದೆ. ಪ್ರಾಥಮಿಕ ತನಿಖಾ ವರದಿಯ ಆಧಾರವಾಗಿ ಹೆಚ್ಚುವರಿ ತನಿಖೆಯ ಅವಶ್ಯಕತೆ ಇದ್ದಲ್ಲಿ ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಲಾಗುವುದು. ಈ ಘಟನೆಗೆ ಬೆಂಬಲ ನೀಡಿರುವ ಬಗ್ಗೆಯೂ ತನಿಖೆ ನಡೆಸಿ, ಈ ಕುಕೃತ್ಯದಲ್ಲಿ ಭಾಗಿಯಾಗಿರುವ ಎಲ್ಲ ಜಾಲವನ್ನು ಭೇದಿಸಲಾಗುವುದು. ಪಿಎಫ್‌ಐ ಬ್ಯಾನ್ ಮಾಡಲು ಕ್ರಮಗಳು ಪ್ರಾರಂಭವಾಗಿದೆ. ಈ ರೀತಿಯ ದುಷ್ಕೃತ್ಯಗಳು ಭಾರತದ ವಿವಿಧ ರಾಜ್ಯಗಳಲ್ಲಿ ನಡೆದಿದ್ದು, ದೇಶದ ಮಟ್ಟದಲ್ಲಿ ಸರಿಯಾದ ಕ್ರಮವನ್ನು ಕೇಂದ್ರ ಸರ್ಕಾರ ತೆಗೆದುಕೊಳ್ಳಲಿದೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.
ಮಸೂದ್ ಹತ್ಯೆ ಹಾಗೂ ಪ್ರವೀಣ್ ಹತ್ಯೆಗೂ ಸಂಬಂಧವಿದೆಯೇ ಅನ್ನೋ ಬಗ್ಗೆ ತನಿಖೆಯಿಂದ ತಿಳಿಯಲಿದೆ. ಪೊಲೀಸ್ ಅಧಿಕಾರಿಗಳ ಕರ್ತವ್ಯ ವೈಫಲ್ಯವಾಗಿದ್ದರೆ ಅದನ್ನೂ ತನಿಖೆಗೆ ಒಳಪಡಿಸಲಾಗುವುದು ಎಂದು ಎಚ್ಚರಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಯುವಮುಖಂಡ ಪ್ರವೀಣ್ ಕುಮಾರ್ ನೆಟ್ಟಾರ್ ಹತ್ಯೆ ಬಳಿಕ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಈ ಘಟನೆಯಿಂದ ನಮ್ಮ ನಾಯಕರು ತಲೆ ಎತ್ತಿಕೊಂಡು ಓಡಾಡೋಕೆ ಆಗ್ತಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೇಸರ ವ್ಯಕ್ತಪಡಿಸಿದ್ದಾರೆ.
ಹತ್ಯೆಗೊಳಗಾದ ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರ್ ಮನೆಗೆ ವಿಜಯೇಂದ್ರ ಭೇಟಿ ನೀಡಿ, ಕುಟುಂಬಸ್ಥರ ನೋವನ್ನು ಆಲಿಸಿದರು. ಈ ವೇಳೆ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕು, ಅವರಿಗೆ ಜಾಮೀನು ಸಿಗಬಾರದು ಎಂದು ಪ್ರವೀಣ್ ಪತ್ನಿ ನೂತನಾ ಒತ್ತಾಯಿಸಿದರು. ಇದನ್ನೂ ಓದಿ: ಪ್ರವೀಣ್ ಪತ್ನಿಗೆ ಟಿಕೆಟ್ ಕೊಡಿ – ಬಿಜೆಪಿ ಕಾರ್ಯಕರ್ತರ ಹೊಸ ಬೇಡಿಕೆ
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯೇಂದ್ರ, ಪ್ರವೀಣ್ ಹತ್ಯೆಗೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಇದು ರಾಜಾಸ್ಥಾನದಲ್ಲಿ ನಡೆದ ಟೈಲರ್ ಹತ್ಯೆಯ ಚೈನ್‌ಲಿಂಕ್ ರೀತಿ ಕಾಣುತ್ತದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪ್ರವೀಣ್ ಹತ್ಯೆ ಖಂಡಿಸಿ 19 ಮಂದಿ ಬಿಜೆಪಿ ಕಾರ್ಯಕರ್ತರು ರಾಜೀನಾಮೆ
ಸದ್ಯ ರಾಜ್ಯಾದ್ಯಂತ ಕಾರ್ಯಕರ್ತರ ಆಕ್ರೋಶದ ಬಗ್ಗೆ ಅರ್ಥ ಆಗಿದೆ. ಗೃಹಸಚಿವರೂ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಇದರಿಂದ ನಾಯಕರು ತಲೆ ಎತ್ತಿ ಓಡಾಡಲು ಸಾಧ್ಯ ಆಗ್ತಿಲ್ಲ. ಇಂತಹ ಘಟನೆ ಪುನರಾವರ್ತನೆ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಪ್ರವೀಣ್ ಪತ್ನಿ ನೂತನಾ ಅವರಿಗೆ ಸರ್ಕಾರಿ ಉದ್ಯೋಗ ಕೊಡಲೇಬೇಕು. ಆಕೆ ಇನ್ನೂ ನಿಗದಿತ ವಯೋಮಿತಿಯ ಒಳಗಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳ ಮನವೊಲಿಸುತ್ತೇವೆ. ಇವರದ್ದು ಬಡ ಕುಟುಂಬವಾದ್ದರಿಂದ ಮನೆಯ ಆರ್ಥಿಕ ಸ್ಥಿತಿಯೂ ಉತ್ತಮವಾಗಿಲ್ಲ. ನಾವೆಲ್ಲರೂ ಕುಟುಂಬದ ಜವಾಬ್ದಾರಿ ಹೊರುತ್ತೇವೆ ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಪ್ರವೀಣ್ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಬೊಮ್ಮಾಯಿ
ಪ್ರವೀಣ್ ಹತ್ಯೆ ಹಿನ್ನೆಲೆಯಲ್ಲಿ ಬಂಧಿಸಲಾದ ವ್ಯಕ್ತಿಗಳಿಗೆ ಜಾಮೀನು ನೀಡಬಾರದು ಎಂದು ಕುಟುಂಬಸ್ಥರು ಹೇಳುತ್ತಿದ್ದಾರೆ. ಇಂತಹ ಘಟನೆ ಪುನರಾವರ್ತನೆ ಆಗದಂತೆ ಸರ್ಕಾರವನ್ನು ಒತ್ತಾಯಿಸುತ್ತೇನೆ. ಸಚಿವ ಅಂಗಾರ ಅವರು, ಸಿಎಂ ಜೊತೆ ಚರ್ಚಿಸಿ ಪರಿಹಾರ ಘೋಷಿಸುತ್ತಾರೆ. ಅಲ್ಲದೇ ಎಸ್‌ಡಿಪಿಐ, ಪಿಎಫ್‌ಐ ಸಂಘಟನೆ ವಿರುದ್ಧ ಕ್ರಮ ಕೈಗೊಳ್ಳಲು ಇದು ರೈಟ್ ಟೈಂ, ಅಲ್ಲಿವರೆಗೂ ಕಾರ್ಯಕರ್ತರು ಸಂಯಮದಿಂದಿರಬೇಕು ಎಂದು ಮನವಿ ಮಾಡಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ನಡೆಸಿರುವ ಕ್ರಮ ಸರಿಯಲ್ಲ ಎಂದೂ ಅವರು ಬೇಸರ ವ್ಯಕ್ತಪಡಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 18 ಮಂದಿ, ಕಲಬುರಗಿಯಲ್ಲಿ ಓರ್ವ ಸೇರಿ 19 ಬಿಜೆಪಿ ಕಾರ್ಯಕರ್ತರು ರಾಜೀನಾಮೆ ನೀಡಿದ್ದಾರೆ.
ಪ್ರವೀಣ್ ಹತ್ಯೆ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯ ಕುರುಬರಹಳ್ಳಿಯ ರಾಜರಥದ ಮುಂಭಾಗ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಹತ್ಯೆ ಮಾಡಿದ ದೇಶದ್ರೋಹಿಗಳನ್ನು ಬಂಧಿಸಿ, ಹಿಂದೂಗಳನ್ನು ರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಬಳಿಕ ರಾಜಕುಮಾರ್ ವೃತ್ತದಲ್ಲಿ ಶ್ರದ್ಧಾಂಜಲಿ ಸಲ್ಲಿಸಿ, 18 ಮಂದಿ ಕಾರ್ಯಕರ್ತರು ರಾಜೀನಾಮೆ ಸಲ್ಲಿಸಿದ್ದಾರೆ.
ಏನಿದು ಘಟನೆ?
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಮಳಿಗೆ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು (31), ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ವ್ಯವಹಾರ ಮುಗಿಸಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಪೆಟ್ಟು ಬಿದ್ದಿದ್ದರಿಂದ ಪ್ರವೀಣ್ ಮೃತಪಟ್ಟಿದ್ದರು.
Live Tv
[brid partner=56869869 player=32851 video=960834 autoplay=true]
ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಬಂಧನವಾಗಿದೆ.
ಮಂಗಳವಾರ ರಾತ್ರಿ ಪ್ರವೀಣ್ ಕುಮಾರ್ ನೆಟ್ಟಾರು ದುಷ್ಕರ್ಮಿಗಳ ಕೈಯಲ್ಲಿ ಭೀಕರವಾಗಿ ಹತ್ಯೆಯಾಗಿದ್ದರು. ಬಳಿಕ ಕರಾವಳಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಈ ಹಿನ್ನೆಲೆ ಪೊಲೀಸರು ಎಲ್ಲಾ ಆಯಾಮಗಳಿಂದ ತನಿಖೆ ನಡೆಸಿ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಸವಣೂರು ಮೂಲದ ಝಕೀರ್ (29) ಮತ್ತು ಶಫೀಕ್ (27) ಬೆಳ್ಳಾರೆ ಬಂಧಿತ ಆರೋಪಿಗಳು. ಝಾಕೀರ್ ಸವಣೂರು ಎಸ್‌ಡಿಪಿಐ ಗ್ರಾಮ ಸಮಿತಿ ಮುಖಂಡನಾಗಿದ್ದು, ಶಫೀಕ್ ಎಸ್‌ಡಿಪಿಐ ಪಕ್ಷದ ಸಕ್ರೀಯ ಕಾರ್ಯಕರ್ತ. ಬೆಳ್ಳಾರೆ, ಸುಳ್ಯದಲ್ಲಿ ಪಕ್ಷ ಸಂಘಟನೆ ಮಾಡುತ್ತಿದ್ದ. ಇದನ್ನೂ ಓದಿ: ಸರ್ಕಾರಕ್ಕೆ ಜನೋತ್ಸವದ ಬದಲು ಜನಾಕ್ರೋಶದ ದರ್ಶನವಾಗಿದೆ – ಕಾರ್ಯಕ್ರಮ ರದ್ದುಗೊಳಿಸಿದ್ದು ಮೃತನ ಮೇಲಿನ ಗೌರವದಿಂದಲ್ಲ: ಕಾಂಗ್ರೆಸ್
ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಸವಣೂರು ಮೂಲದ ಝಕೀರ್ ಮತ್ತು ಶಫೀಕ್ ಬೆಳ್ಳಾರೆಯನ್ನು ಬಂಧಿಸಲಾಗಿದೆ. ಪ್ರಕರಣದ ಬಗ್ಗೆ ಇನ್ನಷ್ಟು ತನಿಖೆ ನಡೆಸಬೇಕಾಗಿದೆ. ಆರೋಪಿಗಳನ್ನು ಇಂದೇ ನ್ಯಾಯಾಲಯಕ್ಕೆ ಹಾಜರು ಮಾಡುತ್ತೇವೆ ಎಂದು ದಕ್ಷಿಣಕನ್ನಡ ಎಸ್‍ಪಿ ಹೃಷಿಕೇಶ್ ಸೋನಾವಣೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಪ್ರವೀಣ್ ನೆಟ್ಟಾರು ತಂದೆ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು
ಏನಿದು ಘಟನೆ:
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು (31), ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದರು.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಸರ್ಕಾರಕ್ಕೆ ಜನೋತ್ಸವದ ಬದಲಾಗಿ ಜನಾಕ್ರೋಶದ ದರ್ಶನವಾಗಿದೆ ಜನೋತ್ಸವವನ್ನು ರದ್ದುಗೊಳಿಸಿದ್ದು ಜನರ ಆಕ್ರೋಶದ ಕಾರಣಕ್ಕೆ ಹೊರತು ಮೃತನ ಮೇಲಿನ ಗೌರವದಿಂದಲ್ಲ ಎಂದು ಬಿಜೆಪಿ ಸರ್ಕಾರದ ವಿರುದ್ಧ ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ಹರಿಹಾಯ್ದಿದೆ.
ಟ್ವೀಟ್‍ನಲ್ಲಿ ಏನಿದೆ?:
ತಮ್ಮ ಸರ್ಕಾರದ ವೈಫಲ್ಯಗಳೇ ಮುಖ್ಯಮಂತ್ರಿಗಳ ನಿದ್ದೆಗೆಡುವಂತೆ ಮಾಡಿದೆ. ಜನರಿಗೆ ನಿದ್ದೆಗೆಡುವಂತ ಆಡಳಿತ ನೀಡಿದಾಗ ಜನರೂ ಸರ್ಕಾರದ ನಿದ್ದೆಗೆಡಿಸುತ್ತಾರೆ ಎನ್ನಲು ಮಧ್ಯರಾತ್ರಿಯ ಪತ್ರಿಕಾಗೋಷ್ಠಿಯೇ ಸಾಕ್ಷಿ. ಜನೋತ್ಸವವನ್ನು ರದ್ದುಗೊಳಿಸಿದ್ದು ಜನರ ಆಕ್ರೋಶದ ಕಾರಣಕ್ಕೆ ಹೊರತು ಮೃತನ ಮೇಲಿನ ಗೌರವದಿಂದಲ್ಲ. ಮಧ್ಯರಾತ್ರಿಯ ಯೂಟರ್ನ್‍ಗಳ ವೃತ್ತಾಂತಗಳು ಬಿಜೆಪಿ ಸರ್ಕಾರಕ್ಕೆ ಹೊಸದೇನೂ ಅಲ್ಲ. ಸರ್ಕಾರಿ ಕಚೇರಿಗಳಲ್ಲಿನ ಚಿತ್ರೀಕರಣ ವಿಷಯದಲ್ಲೂ ಸರ್ಕಾರ ಹೀಗೆಯೇ ಯೂಟರ್ನ್‍ನಾಗಿ ರಾತ್ರಿಯವರೆಗೂ ಕಾದಿತ್ತು. ಬಹುಶಃ ಈ ಸರ್ಕಾರಕ್ಕೆ ಜ್ಞಾನೋದಯವಾಗಲು ರಾತ್ರಿಯೇ ಆಗಬೇಕೇನೋ! ಜನೋತ್ಸವದ ಬದಲಾಗಿ ಜನಾಕ್ರೋಶದ ದರ್ಶನವಾಗಿದೆ ಈ ಸರ್ಕಾರಕ್ಕೆ. ಇದನ್ನೂ ಓದಿ: ಪ್ರವೀಣ್ ನೆಟ್ಟಾರ್ ತಂದೆ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು
ಸರ್ಕಾರದ ‘ಕಠಿಣ ಕ್ರಮ ಕೈಗೊಳ್ಳುತ್ತೇವೆ’ ಎಂಬ ಮಾತಿನ ಅಸಲಿ ಅರ್ಥ? ಜೈಲಿನಲ್ಲಿ ಗಾಂಜಾ ವ್ಯವಸ್ಥೆ ಮಾಡುತ್ತೇವೆ. ಮೊಬೈಲ್ ನೀಡುತ್ತೇವೆ. ಬಿರಿಯಾನಿ ನೀಡುತ್ತೇವೆ. ಮೋಜು ಮಸ್ತಿಗೆ ಸುವ್ಯವಸ್ಥೆ ಮಾಡಿಕೊಡುತ್ತೇವೆ! ಸರ್ಕಾರದ ಅಸಾಮರ್ಥ್ಯವನ್ನು ಸ್ವತಃ ಅವರ ಕಾರ್ಯಕರ್ತರೇ ಅರ್ಥ ಮಾಡಿಕೊಂಡಿದ್ದಾರೆ ಎಂದು ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ಕಾಲೆಳೆದಿದೆ. ಇದನ್ನೂ ಓದಿ: ನಮ್ಮ ಕಾರ್ಯಕರ್ತರನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ನಳಿನ್ ಕುಮಾರ್ ಕಟೀಲ್
'@BJP4Karnataka ಸರ್ಕಾರದ 'ಕಠಿಣ ಕ್ರಮ ಕೈಗೊಳ್ಳುತ್ತೇವೆ' ಎಂಬ ಮಾತಿನ ಅಸಲಿ ಅರ್ಥ👇 ◆ಜೈಲಿನಲ್ಲಿ ಗಾಂಜಾ ವ್ಯವಸ್ಥೆ ಮಾಡುತ್ತೇವೆ ◆ಮೊಬೈಲ್ ನೀಡುತ್ತೇವೆ ◆ಬಿರಿಯಾನಿ ನೀಡುತ್ತೇವೆ ◆ಮೋಜು ಮಸ್ತಿಗೆ ಸುವ್ಯವಸ್ಥೆ ಮಾಡಿಕೊಡುತ್ತೇವೆ!
ಸರ್ಕಾರದ ಅಸಾಮರ್ಥ್ಯವನ್ನು ಸ್ವತಃ ಅವರ ಕಾರ್ಯಕರ್ತರೇ ಅರ್ಥ ಮಾಡಿಕೊಂಡಿದ್ದಾರೆ.#JanaAkrosha
ಇತ್ತ ಈವರೆಗೆ ಶಾಂತವಾಗಿದ್ದ ಕರಾವಳಿ ಪ್ರವೀಣ್ ಹತ್ಯೆಯ ಬಳಿಕ ಆಕ್ರೋಶ ಭುಗಿಲೆದ್ದಿದೆ. ಹಿಂದೂ ಕಾರ್ಯಕರ್ತರು ಜಿಲ್ಲೆಯ ಜನಪ್ರತಿನಿಧಿಗಳ ವಿರುದ್ಧ ಸಿಡಿದೆದ್ದಿದ್ದಾರೆ. ರಾಜ್ಯಾದ್ಯಂತ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಕೇಳಿಬರುತ್ತಿದೆ. ಪರಿಸ್ಥಿತಿ ತಿಳಿಗೊಳಿಸಲು ಸರ್ಕಾರ ಪ್ರಯತ್ನಿಸುತ್ತಿದೆ.
Live Tv
[brid partner=56869869 player=32851 video=960834 autoplay=true]
ನವದೆಹಲಿ: ಗೃಹ ಸಚಿವ ಆರಗ ಜ್ಞಾನೇಂದ್ರ ಜನರ ಕಣ್ಣೀರು ಒರೆಸುವ ಕೆಲಸ ಮಾಡಬೇಕಿತ್ತು ಆದರೆ ಅವರೇ ಮಾಧ್ಯಮಗಳ ಮುಂದೆ ಕಣ್ಣೀರು ಹಾಕುತ್ತಿದ್ದಾರೆ. ರಾಜ್ಯದ ಗೃಹ ಮಂತ್ರಿ ಕಣ್ಣೀರು ಹಾಕುತ್ತಿರುವುದು ಇದೇ ಮೊದಲು, ಇವರಿಗೆ ಕಾನೂನು ವ್ಯವಸ್ಥೆ ಕಾಪಾಡಲು ಸಾಧ್ಯವಾಗುತ್ತಿಲ್ಲ ಹೀಗಾಗಿ ಆರಗ ಜ್ಞಾನೇಂದ್ರ ಅವರು ರಾಜೀನಾಮೆ ನೀಡಿ ಹೊರಡಲಿ ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನವದೆಹಲಿಯಲ್ಲಿ ಮಾತನಾಡಿದ ಅವರು, ಗೃಹ ಸಚಿವರು ಬರಿ ಬಾಯಿ ಮಾತಿಗೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎನ್ನುತ್ತಾರೆ. ಆದರೆ ಈವರೆಗೂ ಯಾವುದೇ ಕ್ರಮಗಳು ಆಗಿಲ್ಲ. ಹತ್ಯೆ ಮಾಡಿದರವರು ಯಾರೇ ಆಗಿದ್ದರು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಮನೆಯ ಸದಸ್ಯನನ್ನ ಕಳೆದುಕೊಂಡಿದ್ದೇವೆ- ಪ್ರವೀಣ್ ಬಗ್ಗೆ ಮಾತನಾಡುತ್ತಾ ಗದ್ಗದಿತರಾದ ಆರಗ
ಸಂಸದ ತೇಜಸ್ವಿ ಸೂರ್ಯ ಪ್ರತಿಯೊಬ್ಬರಿಗೆ ಭದ್ರತೆ ನೀಡಲು ಸಾಧ್ಯವಿಲ್ಲ ಎಂದು ಬೇಜವ್ದಾರಿ ಹೇಳಿಕೆ ನೀಡಿದ್ದಾರೆ. ಅವರಿಗೆ ಗೊತ್ತಿಲ್ಲ ಜನರ ತಲೆ ಕಾಯುವ ಕೆಲಸ ಸರ್ಕಾರದ್ದು ಅಂತಾ. ಜನರ ಕಾಯದ ಈ ಸರ್ಕಾರದ ಸಾಧನೆ ಏನು? ಇಡೀ ರಾಜ್ಯದಲ್ಲಿ ಗಲಾಟೆ ಎಬ್ಬಿಸಿ, ಶಾಂತಿ ಕದಡಿದ್ರಿ, ವಿದ್ಯಾರ್ಥಿಗಳ ಮನಸ್ಸು ಕೆಡಿಸಿದ್ರಿ, ನಿಮ್ಮ ಪಕ್ಷದ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡ, ಇದೇ ನಿಮ್ಮ ಸರ್ಕಾರದ ಸಾಧನೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ನೀವು ಊರಿಗೆ ಹಿರಿಯರು, ಕೋಳಿ ಅಂಗಡಿ ಉದ್ಘಾಟನೆಗೆ ತಂದೆಯನ್ನು ಆಹ್ವಾನಿಸಿದ್ದರು: ಪ್ರವೀಣ್ ಬಗ್ಗೆ ಆರೀಫ್ ಮಾತು
ಬಿಜೆಪಿ ಹಿಂದುಗಳು, ಹಿಂದುತ್ವ ಬಳಸಿಕೊಳ್ಳುತ್ತದೆ. ನಾವು ಅಧಿಕಾರಕ್ಕೆ ಬಂದರೆ ಕಾನೂನು ಸುವ್ಯವಸ್ಥೆ ಕಾಪಾಡುತ್ತೇವೆ ಎಂದಿದ್ದರು. ಆದರೆ ಸರ್ಕಾರ ಏನು ಮಾಡುತ್ತಿದೆ, ಈಗ ನೋಡಿದರೆ ಗೃಹ ಸಚಿವರು ಕ್ಯಾಮೆರಾ ಮುಂದೆ ಕಣ್ಣೀರಿಡುತ್ತಿದ್ದಾರೆ. ಇದನ್ನೆಲ್ಲ ಬಿಟ್ಟು ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ಇಲ್ಲ ರಾಜೀನಾಮೆ ನೀಡಿ ಹೋಗಬೇಕು ಎಂದು ಸ್ಪಷ್ಟಪಡಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಮಂಗಳೂರು: ಬಿಜೆಪಿ ಯುವಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಏಳು ಮಂದಿ ಎಸ್‍ಡಿಪಿಐ ಕಾರ್ಯಕರ್ತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಮಂಗಳವಾರ ರಾತ್ರಿ ಪ್ರವೀಣ್ ಕುಮಾರ್ ನೆಟ್ಟಾರು ದುಷ್ಕರ್ಮಿಗಳ ಕೈಯಲ್ಲಿ ಭೀಕರವಾಗಿ ಹತ್ಯೆಯಾಗಿದ್ದರು. ಬಳಿಕ ಕರಾವಳಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಪೊಲೀಸರು ಎಲ್ಲಾ ಆಯಾಮಗಳಿಂದ ತನಿಖೆ ಆರಂಭಿಸಿದ್ದು, ನಿನ್ನೆ ತಡರಾತ್ರಿ ಶಂಕಿತ ಆರೋಪದ ಹಿನ್ನೆಲೆ ಬೆಳ್ಳಾರೆ ಎಸ್‍ಡಿಪಿಐ ಕಾರ್ಯಕರ್ತರ ಮನೆಗೆ ನುಗ್ಗಿ ಏಳು ಮಂದಿ ಕಾರ್ಯಕರ್ತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ರಕ್ತದೋಕುಳಿಯ ಸ್ವಾಗತ ನಮಗೆ ಬೇಡ – ಜನೋತ್ಸವ ಕಾರ್ಯಕ್ರಮಕ್ಕೆ ಬರಲ್ಲ
ಇತ್ತ ಪೊಲೀಸರು ಏಳು ಮಂದಿಯನ್ನು ವಶಕ್ಕೆ ಪಡೆದ ಬೆನ್ನಲ್ಲೇ ಪೊಲೀಸರು ಅಮಾಯಕರನ್ನು ವಶಪಡಿಸಿಕೊಳ್ಳುತ್ತಿದ್ದಾರೆ ಎಂದು ಎಸ್‍ಡಿಪಿಐ ಆರೋಪಿಸಿದೆ. ಈವರೆಗೆ ಶಾಂತವಾಗಿದ್ದ ಕರಾವಳಿ ಪ್ರವೀಣ್ ಹತ್ಯೆಯ ಬಳಿಕ ಆಕ್ರೋಶ ಭುಗಿಲೆದ್ದಿದೆ. ಹಿಂದೂ ಕಾರ್ಯಕರ್ತರು ಜಿಲ್ಲೆಯ ಜನಪ್ರತಿನಿಧಿಗಳ ವಿರುದ್ಧ ಸಿಡಿದೆದ್ದಿದ್ದಾರೆ. ಪರಿಸ್ಥಿತಿ ತಿಳಿಗೊಳಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ಇದನ್ನೂ ಓದಿ: ಪ್ರವೀಣ್ ಹತ್ಯೆಗೆ ಭುಗಿಲೆದ್ದ ಆಕ್ರೋಶ – ರಾಜ್ಯಾದ್ಯಂತ ಬಿಜೆಪಿ ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ
ಏನಿದು ಘಟನೆ:
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು (31), ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದರು.
Live Tv
[brid partner=56869869 player=32851 video=960834 autoplay=true]