Tag: SDPI

  • ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ದೊರೆತಿರುವುದು ಶಿವಲಿಂಗವಲ್ಲ, ಕಾರಂಜಿ: ಎಸ್‍ಡಿಪಿಐ ಆರೋಪ

    ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ದೊರೆತಿರುವುದು ಶಿವಲಿಂಗವಲ್ಲ, ಕಾರಂಜಿ: ಎಸ್‍ಡಿಪಿಐ ಆರೋಪ

    ಬೆಳಗಾವಿ: ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ದೊರೆತಿರುವುದು ಶಿವಲಿಂಗವಲ್ಲ, ಕಾರಂಜಿ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿರುದ್ಧ ಷಡ್ಯಂತ್ರ ಮಾಡಲಾಗುತ್ತಿದೆ ಎಂದು ಆರೋಪಿಸಿ ನಗರದ ಡಿಸಿ ಕಚೇರಿಯಲ್ಲಿ ಎಸ್‍ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಬೆಳಗಾವಿ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಎಸ್‍ಡಿಪಿಐ ಕಾರ್ಯಕರ್ತರು, ವಾರಾಣಸಿಯ ಜ್ಞಾನವಾಪಿ ಮಸೀದಿ ಐತಿಹಾಸಿಕ ಮಸೀದಿಗಳಲ್ಲಿ ಒಂದಾಗಿದೆ. ಜ್ಞಾನವಾಪಿ ಮಸೀದಿ ವಿರುದ್ಧ ಷಡ್ಯಂತ್ರ ಮಾಡಲಾಗುತ್ತಿದ್ದು ಮಸೀದಿಯಲ್ಲಿ ದೊರೆತಿರುವುದು ಶಿವಲಿಂಗವಲ್ಲ. ಅದೊಂದು ಕಾರಂಜಿ. ಅದೇ ಕಾರಂಜಿಯನ್ನೇ ಶಿವಲಿಂಗ ಎಂದು ಬಿಂಬಿಸುವ ಹುನ್ನಾರವನ್ನು ಬಿಜೆಪಿ ಮತ್ತು ಸಂಘ ಪರಿವಾರದವರು ಮಾಡುತ್ತಿದ್ದಾರೆ ಎಂದು ಎಸ್‍ಡಿಪಿಐ ಜಿಲ್ಲಾಧ್ಯಕ್ಷ ಅಬೀದ್ ಖಾನ್ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿ ಮಾಹಿತಿ ಲೀಕ್ – ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ಅಧಿಕಾರಿ ವಜಾ

    ಇದಲ್ಲದೇ ಸರ್ಕಾರಿ ಅಧಿಕಾರಿಗಳಿಂದ ನ್ಯಾಯಾಲಯಕ್ಕೆ ತಪ್ಪು ಮಾಹಿತಿ ರವಾನೆ ಮಾಡಲಾಗುತ್ತಿದೆ. 1991ರ ಆರಾಧನಾ ಕಾಯ್ದೆ ಪ್ರಕಾರ ಧಾರ್ಮಿಕ ಸ್ಥಳಗಳನ್ನು ಯಥಾಸ್ಥಿತಿಗೆ ಬಿಡಬೇಕು. ದೇಗುಲ, ಮಸೀದಿ, ಚರ್ಚ್‍ಗಳ ರಕ್ಷಣೆಗೆ ಆದ್ಯತೆ ನೀಡಬೇಕು. ಆದ್ರೆ, ಕೋಮುವಾದಿ ಸಂಘಟನೆಗಳಿಂದ ದೇಶದಲ್ಲಿ ಸಾಮರಸ್ಯ ಕದಡುವ ಕೃತ್ಯ ನಡೆದಿದೆ. ಮುಸ್ಲಿಂ ಸಮುದಾಯದ ಪವಿತ್ರ ಸ್ಥಳಗಳನ್ನು ಧ್ವಂಸಗೊಳಿಸುವ ಹುನ್ನಾರ ನಡೆದಿದ್ದು ನಮಗೆ ನ್ಯಾಯ ಸಿಗುವವರೆಗೆ ಹೋರಾಟ ನಡೆಸುವುದಾಗಿ ಎಸ್‍ಡಿಪಿಐ ಪಕ್ಷದ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಗಮನಿಸಿ, ಮುಂದಿನ 5 ದಿನಗಳ ಕಾಲ ಬೆಂಗ್ಳೂರಲ್ಲಿ ಭಾರೀ ಮಳೆ

  • ಗನ್ ಹಿಡಿಯೋದು ನಮ್ಮ ಜನ್ಮಸಿದ್ಧ ಹಕ್ಕು, ಅದನ್ನ ಕೇಳೋಕೆ ಇವನ್ಯಾರು: ಸಿದ್ದು ವಿರುದ್ಧ ಬೋಪಯ್ಯ ಕಿಡಿ

    ಗನ್ ಹಿಡಿಯೋದು ನಮ್ಮ ಜನ್ಮಸಿದ್ಧ ಹಕ್ಕು, ಅದನ್ನ ಕೇಳೋಕೆ ಇವನ್ಯಾರು: ಸಿದ್ದು ವಿರುದ್ಧ ಬೋಪಯ್ಯ ಕಿಡಿ

    ಮಡಿಕೇರಿ: ಗನ್ ಹಿಡಿಯೋದು ನಮ್ಮ ಜನ್ಮಸಿದ್ಧ ಹಕ್ಕು, ಅದನ್ನ ಕೇಳೋಕೆ ಇವನ್ಯಾರು ಎಂದು ಏಕವಚನದಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ತಿರುಗೇಟು ಕೊಟ್ಟರು.

    ಕೊಡಗಿನ ಪೊನ್ನಂಪೇಟೆಯ ಸಾಯಿ ಶಂಕರ ಶಾಲೆಯಲ್ಲಿ ಸಂಘ ಪರಿವಾರದ ತ್ರಿಶೂಲ ದೀಕ್ಷೆ, ಶಸ್ತ್ರಾಸ್ತ್ರ ತರಬೇತಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಈಗಾಗಲೇ ಕೊಡಗಿನ ಶಾಸಕರು ಸಂಘ ಪರಿವಾರದವರ ಮೇಲೆ ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಆಗಿದೆ. ಈ ನಿಟ್ಟಿನಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಶಾಸಕರು, ಶಿಬಿರದಲ್ಲಿ ಭಾಗವಹಿಸುವವರನ್ನು ಬಂಧಿಸಿ ವಿಚಾರಣೆ ನಡೆಸಬೇಕು ಎಂಬ ಹೇಳಿಕೆ ನೀಡಿದ್ದರು. ಈ ಕುರಿತು ಕೆ.ಜಿ.ಬೋಪಯ್ಯ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಭಜರಂಗದಳ ಶಿಬಿರದಲ್ಲಿ ಶಾಸಕರು ಭಾಗವಹಿಸಬಾರದು ಅಂತ ಕಾನೂನಿದ್ಯಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಭೂ ವಿವಾದದ ತೀರ್ಪು 108 ವರ್ಷದ ಬಳಿಕ ಪ್ರಕಟ

    ನಮ್ಮ ಪರಿವಾರದ ಕಾರ್ಯಕ್ರಮ ನಡೆಯುವಾಗ ಭೇಟಿ ಕೊಡೋದು ನನ್ನ ಕರ್ತವ್ಯ. ಗನ್ ಹಿಡಿಯೋದು ನಮ್ಮ ಜನ್ಮಸಿದ್ಧ ಹಕ್ಕು, ಅದನ್ನ ಕೇಳೋಕೆ ಇವನ್ಯಾರು ಸಿದ್ದರಾಮಯ್ಯ? ಎಂದು ಏಕವಚನದಲ್ಲೇ ಮಾತನಾಡಿದರು. ವಿಶ್ವ ಹಿಂದೂ ಪರಿಷತ್, ಭಜರಂಗದಳ ಪ್ರತೀ ವರ್ಷ ಅಭ್ಯಾಸ ವರ್ಗ ರಾಜ್ಯದ ವಿವಿಧೆಡೆಗಳಲ್ಲಿ ಮಾಡ್ತಾರೆ. ಈ ವರ್ಷ ಕೊಡಗಿನಲ್ಲಿ ಕಾರ್ಯಕ್ರಮ ಮಾಡಿದ್ದಾರೆ ಅಷ್ಟೇ ಎಂದರು.

    ಏನಾದ್ರೂ ತ್ರಿಶೂಲ ಬ್ಯಾನ್ ಆಗಿದೆಯಾ? ಸಿದ್ದರಾಮಯ್ಯರ ಚರಿತ್ರೆ ಎಲ್ಲರಿಗೂ ಗೊತ್ತಿದೆ. ಅಲ್ಪಸಂಖ್ಯಾತರನ್ನು ಹೇಗೆ ಓಲೈಸಲಿ ಎನ್ನುವ ಮೂಲಕವೇ ಸಿದ್ದರಾಮಯ್ಯ ದಿನಚರಿ ಶುರುವಾಗುತ್ತೆ. ಸಿದ್ದರಾಮಯ್ಯ ನಮಗೆ ಸಂವಿಧಾನದ ಬದ್ಧತೆ ಬಗ್ಗೆ ಹೇಳಿ ಕೊಡುವ ಅಗತ್ಯವಿಲ್ಲ. ಈ ಹಿಂದೆ ಇವರದೇ ಶಾಸಕ ಓರ್ವ ದಲಿತನ ಮನೆಗೆ ಡಿಜೆ ಹಳ್ಳಿ-ಕೆಜೆ ಹಳ್ಳಿಯಲ್ಲಿ ಬೆಂಕಿ ಹಾಕಿದಾಗ ಸಂವಿಧಾನ ಎಲ್ಲೋಗಿತ್ತು? ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿದಾಗ ಸಂವಿಧಾನ ಇರಲಿಲ್ವಾ? ಎಂದು ಆಕ್ರೋಶಗೊಂಡರು.

    ಸಿದ್ದರಾಮಯ್ಯ ಸಂವಿಧಾನವನ್ನ ಮೊದಲು ಸರಿಯಾಗಿ ಓದಬೇಕು. ಶಿಬಿರದಲ್ಲಿ ಏರ್ ಗನ್ ಬಳಸಲು ಲೈಸನ್ಸ್ ಬೇಕಿಲ್ಲ. ಸೆಲ್ಫ್ ಡಿಫೆನ್ಸ್ ಬೇಕಲ್ವಾ? ಶಾಲೆಯಲ್ಲಿ ಅಭ್ಯಾಸ ಮಾಡಿದ್ದಾರೆ ಎಂಬುದು ಹೌದು. ಆದರೆ ಅದು ಖಾಸಗಿ ಶಾಲೆ. ಸುಮ್ಮನೆ ಸಿದ್ದರಾಮಯ್ಯ ಬಾಯಿಗೆ ಬಂದಂಗೆ ಮಾತಾಡಿದ್ರೆ ಚೆನ್ನಾಗಿರಲ್ಲ. ನಮಗೂ ಮಾತಾಡೋಕೆ ಬರುತ್ತೆ. ಹಿಂದೂ ಸಮಾಜದ ರಕ್ಷಣೆಗೆ ಅಭ್ಯಾಸ ಮಾಡಿದ್ರೆ ಅದರಲ್ಲಿ ತಪ್ಪೇನಿದೆ? ಎಲ್ಲೂ ಕಾನೂನು ಉಲ್ಲಂಘನೆ ಮಾಡಿಲ್ಲ. ಈ ಅಭ್ಯಾಸ ಮಾಡಿರುವುದು ಯುವಕರು ಸ್ವಯಂ ರಕ್ಷಣೆ ಪಡೆಯುವುದಕ್ಕೆ. ಮುಂದಿನ ದಿನಗಳಲ್ಲಿ ರಕ್ಷಣೆ ಅವಶ್ಯಕತೆ ಇದೆ ಎಂದು ತಿಳಿಸಿದರು.

    ಎಸ್‍ಡಿಪಿಐ ಅವರು ರಾಜ್ಯಪಾಲರಿಗೆ ದೂರು ನೀಡಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಎಸ್‍ಡಿಪಿಐ ಅವರು ಹಾದಿ-ಬೀದಿಯಲ್ಲಿ ಹೋಗೋರಿಗೆಲ್ಲ ಕೌಂಟರ್ ಕೊಡಲ್ಲ. ಎಸ್‍ಡಿಪಿಐ, ಪಿಎಫ್‍ಐ ಈ ದೇಶಕ್ಕೆ ಮಾರಕ. ಅವುಗಳನ್ನ ಬ್ಯಾನ್ ಮಾಡಬೇಕು. ಎಸ್‍ಡಿಪಿಐ ಪ್ರಕರಣ ದಾಖಲು ಮಾಡಿದ್ರೆ, ಮಾಡಲಿ. ಎದುರಿಸುವ ಶಕ್ತಿ ನನಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ:  ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂಗೆ ಬೆಳ್ಳಂಬೆಳಗ್ಗೆ ಶಾಕ್ – ಮನೆ ಸೇರಿ 7 ಕಡೆ ಸಿಬಿಐ ದಾಳಿ

  • ಶಾಲೆ ಆವರಣದಲ್ಲೇ ಭಜರಂಗದಳ ಕಾರ್ಯಕರ್ತರಿಗೆ ತ್ರಿಶೂಲ ದೀಕ್ಷೆ, ಶಸ್ತ್ರಾಸ್ತ್ರ ತರಬೇತಿ

    ಶಾಲೆ ಆವರಣದಲ್ಲೇ ಭಜರಂಗದಳ ಕಾರ್ಯಕರ್ತರಿಗೆ ತ್ರಿಶೂಲ ದೀಕ್ಷೆ, ಶಸ್ತ್ರಾಸ್ತ್ರ ತರಬೇತಿ

    ಮಡಿಕೇರಿ: ರಾಜ್ಯದಲ್ಲಿ ಹಿಜಬ್, ಆಜಾನ್ ಹಾಗೂ ದೇವಸ್ಥಾನ ವಿಚಾರಕ್ಕೆ ಸಂಬಂಧಿಸಿದಂತೆ ದಿನವೂ ಹಿಂದೂ ಮುಸ್ಲಿಮರ ನಡುವೆ ಧರ್ಮಯುದ್ಧ ನಡೆಯುತ್ತಿದೆ. ಆದರೂ ಯಾವುದೇ ಕೋಮುಗಲಭೆಗೆ ಅವಕಾಶ ನೀಡುವುದಿಲ್ಲ ಎಂದು ಸಬೂಬು ಹೇಳುತ್ತಿರುವ ಸರ್ಕಾರ ಇದೀಗ ಮತ್ತೊಂದು ವಿವಾದಕ್ಕೆ ದಾರಿಮಾಡಿಕೊಟ್ಟಂತಿದೆ.

    ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಸಾಯಿ ಶಂಕರ ಶಾಲೆಯಲ್ಲಿ ಬಜರಂಗದಳ ದಳದಿಂದ ನೂರಾರು ಯುವಕರಿಗೆ ಶಸ್ತ್ರಾಸ್ತ್ರ ತರಬೇತಿ ನೀಡಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಇಂದಿನಿಂದ ಶಾಲೆ ಆರಂಭ – ಈ ವರ್ಷವೂ ಮಕ್ಕಳಿಗಿಲ್ಲ ಸೈಕಲ್ ಭಾಗ್ಯ

    MDK

    ಇದರಿಂದ ಶಾಲೆಯ ಆವರಣದಲ್ಲಿ ಹಿಜಬ್‌ಗೆ ಅವಕಾಶ ಇಲ್ಲವೆಂದಿದ್ದ ಸರ್ಕಾರ ಇದೀಗ ಸಂಘ ಪರಿವಾರದಿಂದ ಶಸ್ತ್ರಾಸ್ತ್ರ ತರಬೇತಿಗೆ ಅವಕಾಶ ನೀಡಿದ್ದು ಹೇಗೆ? ಎಂಬ ಅನುಮಾನ ಶುರುವಾಗಿದೆ. ಈ ಕುರಿತ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕ ವಲಯದಲ್ಲಿ ಆಕ್ಷೇಪ ವ್ಯಕ್ತವಾಗುತ್ತಿದೆ. 

    ಕೊಡಗಿನ ಪೊನ್ನಂಪೇಟೆ ಸಾಯಿ ಶಂಕರ ಶಾಲೆಯಲ್ಲಿ ಕಳೆದ ವಾರ ಮುಕ್ತಾಯವಾದ ಶೌರ್ಯ ಪ್ರಶಿಕ್ಷಣ ವರ್ಗದಲ್ಲಿ ಬಜರಂಗದಳದ ಕಾರ್ಯಕರ್ತರಿಗೆ ಶಸ್ತ್ರಾಸ್ತ್ರ ತರಬೇತಿ ನೀಡಲಾಗಿದೆ. ಶಾಲಾ ಆವರಣದಲ್ಲೇ ಸುಮಾರು 8 ದಿನಗಳ ಕಾಲ ಶೌರ್ಯ ಪ್ರಶಿಕ್ಷಣ ವರ್ಗದ ತರಬೇತಿ ನಡೆದಿದೆ. ಈ ತರಬೇತಿ ಶಿಬಿರ ನಡೆದ 8 ದಿನಗಳ ಅವಧಿಯಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಹಾಗೂ ಜಿಲ್ಲೆಯ ಕೆಲ ಮುಖಂಡರೂ ಪಾಲ್ಗೊಂಡಿದ್ದರು ಎಂದು ಮೂಲಗಳು ಖಚಿತ ಪಡಿಸಿವೆ. ಇದನ್ನೂ ಓದಿ: ಮೇನಲ್ಲೂ ಕೆಆರ್‌ಎಸ್‍ನಲ್ಲಿದೆ 100 ಅಡಿ ನೀರು – ಕೇರಳದಲ್ಲಿ ಭಾರೀ ಮಳೆ

    ರಾಜ್ಯದ ವಿವಿಧೆಡೆಯಿಂದ ಬಂದಿದ್ದ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಕಾರ್ಯಕರ್ತರು ತರಬೇತಿ ಪಡೆದುಕೊಂಡಿದ್ದಾರೆ. ಶಾಲಾ ಆವರಣದಲ್ಲಿ ಬಂದೂಕು ಹಿಡಿದು ತರಬೇತಿ ಪಡೆಯುತ್ತಿರುವುದು ಹಾಗೂ ಸಂಸ್ಥೆಯ ಸಭಾಂಗಣದಲ್ಲಿ ತ್ರಿಶೂಲ ಹಿಡಿದು ದೀಕ್ಷೆ ಪಡೆಯುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

    ಈ ಕುರಿತು ಟ್ವೀಟ್ ಮೂಲಕ ಆಕ್ಷೇಪ ವ್ಯಕ್ತಪಡಿಸಿರುವ ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಅವರು, ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಕೊಡಗು ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಪ್ರಮುಖರಿಗೆ ಟ್ಯಾಗ್ ಮಾಡಿ, ತನಿಖೆ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

  • ಆರ್‌ಎಸ್‌ಎಸ್‌ ಮುಖಂಡನ ಹತ್ಯೆ ಪ್ರಕರಣ – 9 ಮಂದಿ SDPI, PFI ಕಾರ್ಯಕರ್ತರ ಬಂಧನ

    ಆರ್‌ಎಸ್‌ಎಸ್‌ ಮುಖಂಡನ ಹತ್ಯೆ ಪ್ರಕರಣ – 9 ಮಂದಿ SDPI, PFI ಕಾರ್ಯಕರ್ತರ ಬಂಧನ

    ತಿರುವನಂತಪುರಂ: ಆರ್‌ಎಸ್‌ಎಸ್‌ ಕಾರ್ಯಕರ್ತ ಶ್ರೀನಿವಾಸನ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಮಂದಿ ಎಸ್‌ಡಿಪಿಐ ಹಾಗೂ ಪಿಎಫ್‌ಐ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

    ಕೇರಳದ ಪಾಲಕ್ಕಾಡ್‌ ಜಿಲ್ಲೆಯಲ್ಲಿ ಏ.16 ರಂದು ಆರ್‌ಎಸ್‌ಎಸ್‌ ಕಾರ್ಯಕರ್ತ ಎಸ್.ಕೆ.ಶ್ರೀನಿವಾಸನ್‌ ಎಂಬಾತನ ಹತ್ಯೆಯಾಗಿತ್ತು. ಶ್ರೀನಿವಾಸನ್‌ ಹತ್ಯೆಗೆ ಎಸ್‌ಡಿಪಿಐ, ಪಿಎಫ್‌ಐನವರೇ ಕಾರಣ. ಈತನನ್ನು ಕೊಲ್ಲುವುದಾಗಿ ಹಿಂದೆ ಬೆದರಿಕೆ ಹಾಕಿದ್ದರು ಎಂದು ಶ್ರೀನಿವಾಸನ್‌ ಸ್ನೇಹಿತರು ಗಂಭೀರ ಆರೋಪ ಮಾಡಿದ್ದರು. ಇದನ್ನೂ ಓದಿ: ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಹದಗೆಟ್ಟಿದೆ: ಅಮೆರಿಕ

    ಪ್ರಕರಣದ ತನಿಖೆ ಕೈಗೊಂಡ ಪೊಲೀಸರು 9 ಮಂದಿ ಎಸ್‌ಡಿಪಿಐ ಹಾಗೂ ಪಿಎಫ್‌ಐ ಕಾರ್ಯಕರ್ತರನ್ನು ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ.

    POLICE JEEP

    ಅಲಪ್ಪುಳದಲ್ಲಿ ಕಳೆದ ವರ್ಷ ಡಿಸೆಂಬರ್‌ನಲ್ಲಿ 24 ಗಂಟೆಗಳ ಅವಧಿಯಲ್ಲಿ ಎಸ್‌ಡಿಪಿಐ ಹಾಗೂ ಬಿಜೆಪಿ ನಾಯಕರ ಹತ್ಯೆ ನಡೆದಿತ್ತು. ಇದಕ್ಕೆ ಪ್ರತೀಕಾರವಾಗಿ ಆರ್‌ಎಸ್‌ಎಸ್‌ ಮುಖಂಡನ ಹತ್ಯೆ ನಡೆದಿದೆ ಎಂದು ಆರೋಪಿಸಲಾಗಿತ್ತು. ಇದನ್ನೂ ಓದಿ: ಬಾಬರಿ ಮಸೀದಿ ಕೆಡವಿದಾಗ ನೀವು ಓಡಿಹೋಗಿದ್ದಿರಿ: ಬಿಜೆಪಿಗೆ ಉದ್ಧವ್‌ ಠಾಕ್ರೆ ತರಾಟೆ

  • ಹುಬ್ಬಳ್ಳಿಯಲ್ಲಿ ಕೋಮುಗಲಭೆ ಸೃಷ್ಟಿಸಲು ಪೂರ್ವ ನಿಯೋಜಿತ ಸಂಚು, ನ್ಯಾಯಾಂಗ ತನಿಖೆ ನಡೆಯಲಿ: ಎಸ್‍ಡಿಪಿಐ

    ಹುಬ್ಬಳ್ಳಿಯಲ್ಲಿ ಕೋಮುಗಲಭೆ ಸೃಷ್ಟಿಸಲು ಪೂರ್ವ ನಿಯೋಜಿತ ಸಂಚು, ನ್ಯಾಯಾಂಗ ತನಿಖೆ ನಡೆಯಲಿ: ಎಸ್‍ಡಿಪಿಐ

    ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅಶಾಂತಿ ಸೃಷ್ಟಿಸುವ ಮತ್ತು ಕೋಮು ಗಲಭೆ ನಡೆಸುವ ಏಕೈಕ ಉದ್ದೇಶದೊಂದಿಗೆ ಸಂಘ ಪರಿವಾರದ ಕಿಡಿಗೇಡಿಯೊಬ್ಬ ಕೋಮುಪ್ರಚೋದನಕಾರಿ ಪೋಸ್ಟನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಟ್ಟು, ಇನ್ನೊಂದು ಸಮುದಾಯ ಕೆರಳುವಂತೆ ಮಾಡಿದ ಪೈಶಾಚಿಕ ಕೃತ್ಯವನ್ನು ಖಂಡಿಸುತ್ತೇವೆ ಎಂದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಹೇಳಿದೆ.

    ಬಿಜೆಪಿ ಸರ್ಕಾರದ ಸಾಲು ಸಾಲು ಭ್ರಷ್ಟಾಚಾರದ ವಿಚಾರವನ್ನು ಮತ್ತು 40% ಲಂಚಕ್ಕೆ ಸಂತೋಷ್ ಪಾಟೀಲ್ ಬಲಿ ಪಡೆದು ರಾಜೀನಾಮೆ ನೀಡಿರುವ ಈಶ್ವರಪ್ಪನವರ ಬಂಧನದ ಬೇಡಿಕೆ ವಿಚಾರವನ್ನು ವಿಷಯಾಂತರ ಮಾಡಲು ಈ ಗಲಭೆ ಸೃಷ್ಟಿಸಿರುವ ಸಾಧ್ಯತೆ ಇದೆ. ಹಾಗಾಗಿ ಈ ಇಡೀ ಘಟನೆಯನ್ನು ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದ ನ್ಯಾಯಾಂಗ ತನಿಖೆಗೆ ಎಸ್‍ಡಿಪಿಐ ಒತ್ತಾಯಿಸುತ್ತಿದೆ. ಈ ಕುರಿತು ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಪತ್ರಿಕಾ ಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ. ಇದನ್ನೂ ಓದಿ: ನನ್ನ ಕೈಯಲ್ಲಿ ಭಾರತದ ಲಸಿಕೆಯಿದೆ: ಬ್ರಿಟನ್ ಪ್ರಧಾನಿ ಬೋರಿಸ್

    ಪ್ರಚೋದನಾಕಾರಿ ಪೋಸ್ಟನ್ನು ಹರಿಬಿಟ್ಟ ಕಿಡಿಗೇಡಿಯನ್ನು ಮತ್ತು ಆ ಕೃತ್ಯವನ್ನು ಮಾಡಲು ಪ್ರಚೋದಿಸಿದ ಕಾಣದ ಕೈಗಳಿಗೆ ಕಾನೂನಿನ ಬೇಡಿಯನ್ನು ಹಾಕುವಂತೆ ಒತ್ತಾಯಿಸಿ ಅಲ್ಲಿನ ಸ್ಥಳೀಯರು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಎದುರು ನಡೆಸಿದ ಶಾಂತಿಯುತ ಪ್ರತಿಭಟನೆಯ ಸಂದರ್ಭದಲ್ಲಿ ಯಾರೋ ದುಷ್ಕರ್ಮಿಗಳು ಕಲ್ಲುಗಳನ್ನು ಎಸೆದಿದ್ದು ಪ್ರತಿಭಟನೆಯ ದಿಕ್ಕು ತಪ್ಪಿಸಲಾಗಿದೆ ಎಂದರು. ಇದನ್ನೂ ಓದಿ: ಹೊಸ ಆತಂಕ ಹುಟ್ಟಿಸಿದ ಓಮಿಕ್ರಾನ್ BA.2.12 ತಳಿ

    ಶಾಂತ ರೀತಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಯ ಮದ್ಯದಲ್ಲಿ ಕೆಲವು ಅಪರಿಚಿತರು ನುಸುಳಿ ಕಲ್ಲು ತೂರಾಟ ನಡೆಸಿ ಈ ಘಟನೆಯನ್ನು ನೆಪವಾಗಿಟ್ಟುಕೊಂಡು ಕೆಲ ಮಾಧ್ಯಮಗಳಲ್ಲಿ ಪ್ರತಿಭಟನಕಾರರನ್ನು ವಿಲನ್‍ಗಳಾಗಿ ಬಿಂಬಿಸುತ್ತಿರುವುದು ಅತ್ಯಂತ ಖೇದಕರ ಎಂದು ಅವರು ಅಭಿಪ್ರಾಯಪಟ್ಟರು.

    ಪೊಲೀಸ್ ಇಲಾಖೆ ಘಟನೆಗೆ ಕಾರಣಕರ್ತರಾದ ನೈಜ ಕಿಡಿಗೇಡಿಗಳನ್ನು ಬಂಧಿಸದೆ ಮುಸ್ಲಿಂ ಸಮುದಾಯದ ಅಮಾಯಕ ಯುವಕರನ್ನು ಬಂಧಿಸುತ್ತಿರುವುದು ಗಮನಿಸಿದರೆ, ಇದು ಎಂದಿನಂತೆ ಪೊಲೀಸ್ ಇಲಾಖೆಯ ಪೂರ್ವಗ್ರಹ ಪೀಡಿತ ಕ್ರಮದ ಮುಂದುವರಿದ ಭಾಗವಾಗಿದೆ. ಘಟನೆಯ ನೆಪವೊಡ್ಡಿಕೊಂಡು ರಾತ್ರಿ ಹೊತ್ತು ಅಮಾಯಕರ ಮನೆಗಳಿಗೆ ಪೊಲೀಸರು ನುಗ್ಗಿ ವೃದ್ಧರು, ಮಹಿಳೆಯರು, ಮಕ್ಕಳಿಗೆ ಅನಗತ್ಯ ತೊಂದರೆ ನೀಡುತ್ತಿರುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

    Hubballi Riot

    ಸಮಾಜದಲ್ಲಿ ಸ್ವಾಸ್ಥ್ಯ ಕದಡುತ್ತಿರುವ ಮತ್ತು ಅದಕ್ಕೆ ಪ್ರೇರಣೆ ನೀಡುತ್ತಿರುವ ನೈಜ ಕಿಡಿಗೇಡಿಗಳನ್ನು ಹುಡುಕಿ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಿದರೆ ಮಾತ್ರ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ. ಆದ್ದರಿಂದ ಈ ನಿಟ್ಟಿನಲ್ಲಿ ಹುಬ್ಬಳ್ಳಿ ಜನತೆ ಶಾಂತಿ ಸೌಹಾರ್ದತೆ ಕಾಪಾಡಲು ಯಾವುದೇ ಸುಳ್ಳು ವದಂತಿಗಳಿಗೆ ಕಿವಿಗೊಡದೆ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕಾಗಿ ಎಂದು ಎಸ್‍ಡಿಪಿಐ ವಿನಂತಿಸುತ್ತದೆ. ಅದೇ ರೀತಿ ಪೊಲೀಸ್ ಅಧಿಕಾರಿಗಳು ಯಾವುದೇ ಬಾಹ್ಯ ಒತ್ತಡಗಳಿಗೆ ಒಳಗಾಗದೆ ನಿಸ್ಪಕ್ಷವಾಗಿ ಕಾರ್ಯ ನಿರ್ವಹಿಸಬೇಕು ಎಂದು ಅಬ್ದುಲ್ ಹನ್ನಾನ್ ವಿನಂತಿಸಿದ್ದಾರೆ.

  • ಪಾಲಕ್ಕಾಡ್‍ನಲ್ಲಿ RSS ಮುಖಂಡನ ಹತ್ಯೆ

    ಪಾಲಕ್ಕಾಡ್‍ನಲ್ಲಿ RSS ಮುಖಂಡನ ಹತ್ಯೆ

    ತಿರುವನಂತಪುರಂ: ರಾಷ್ಟ್ರೀಯ ಸ್ವಯಂಸೇವಕ ಸಂಘದ(RSS) ಮುಖಂಡ ಶ್ರೀನಿವಾಸನ್ ಅವರನ್ನು ಶನಿವಾರ ಪಾಲಕ್ಕಾಡ್ ಪಟ್ಟಣದ ಮೇಲಮುರಿಯಲ್ಲಿ ಹತ್ಯೆ ಮಾಡಲಾಗಿದೆ.

    ಪಾಲಕ್ಕಾಡ್ ಸಮೀಪದ ಎಲಪ್ಪುಲ್ಲಿಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‍ಡಿಪಿಐ) ಕಾರ್ಯಕರ್ತನನ್ನು ಹತ್ಯೆ ಮಾಡಿದ 24 ಗಂಟೆಗಳ ನಂತರ, ಶನಿವಾರ ಪಾಲಕ್ಕಾಡ್ ಪಟ್ಟಣದ ಮೇಲಮುರಿಯಲ್ಲಿ RSS ಮುಖಂಡನನ್ನು ಹತ್ಯೆ ಮಾಡಲಾಗಿದೆ. ಇದನ್ನೂ ಓದಿ:  ಭಾರತೀಯತೆಗೆ ಯಾರೆಲ್ಲಾ ವಿರೋಧ ಮಾಡುತ್ತಾರೋ ಇಲ್ಲಿ ಇರಬಾರದು: ಅದಮಾರು ಶ್ರೀ

    ನಡೆಸಿದ್ದೇನು?
    ಮೇಲಮುರಿಯಲ್ಲಿ ಶ್ರೀನಿವಾಸ್ ಅವರು ತಮ್ಮ ಅಂಗಡಿಯಲ್ಲಿದ್ದಾಗ ಐದು ಜನರ ಗುಂಪೊಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ದಾಳಿ ನಡೆಸಿದೆ. ಆರೋಪಿಗಳು ಮೂರು ಬೈಕ್‍ಗಳಲ್ಲಿ ಬಂದು ಶ್ರೀನಿವಾಸನ್‍ಗೆ ಮಾರಣಾಂತಿಕವಾಗಿ ಹಲ್ಲೆ ಮಾಡಿ ಅಲ್ಲಿಂದ ಪರಾರಿಯಾಗಿದ್ದಾರೆ. ಈ ವೇಳೆ ಶ್ರೀನಿವಾಸನ್ ಅವರ ಅಂಗಡಿ, ಆಟೋಗಳ ಮೇಲೆ ದಾಳಿ ನಡೆದಿದೆ.

    ಕೂಡಲೇ ಅವರನ್ನು ಪಾಲಕ್ಕಾಡ್‍ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ದಾಳಿಯಲ್ಲಿ ಶ್ರೀನಿವಾಸನ್ ತಲೆ ಮತ್ತು ಕೈಕಾಲುಗಳಿಗೆ ಭೀಕರವಾಗಿ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿದ ಒಂದೇ ಗಂಟೆಯಲ್ಲಿ ಮೃತಪಟ್ಟಿದ್ದಾರೆ.

    CRIME 2

    ಎಸ್‍ಡಿಪಿಐ ಕಾರ್ಯಕರ್ತ ಎ.ಸುಬೈರ್ ಅಂತ್ಯಕ್ರಿಯೆಗೂ ಮುನ್ನವೇ RSS ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಅಧಿಕಾರಿಗಳು ಹಾಗೂ ಜನತೆ ಬೆಚ್ಚಿಬಿದ್ದಿದ್ದಾರೆ. ಸುಬೈರ್ ಹತ್ಯೆಗೆ ಪ್ರತೀಕಾರವಾಗಿ ಶ್ರೀನಿವಾಸನ್ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಶಂಕಿಸಲಾಗಿದೆ.

    ಸುಬೈರ್ ಹತ್ಯೆಯಾಗಿದ್ದು ಹೇಗೆ?
    ಮಧ್ಯಾಹ್ನ 1:30ಕ್ಕೆ ಎಲಪ್ಪುಲ್ಲಿ ಎಂಬಲ್ಲಿ ಸುಬೈರ್ ತನ್ನ ತಂದೆಯೊಂದಿಗೆ ಶುಕ್ರವಾರ ಜುಮಾ ಪ್ರಾರ್ಥನೆ ಮುಗಿಸಿ ಬೈಕ್‍ನಲ್ಲಿ ಮನೆಗೆ ಮರಳುತ್ತಿದ್ದರು. ಈ ವೇಳೆ ಎರಡು ಕಾರುಗಳಿಂದ ಬಂದ ದುಷ್ಕರ್ಮಿಗಳು ಸುಬೈರ್ ಅವರ ಬೈಕ್‍ಗೆ ಡಿಕ್ಕಿ ಹೊಡೆದು ಕೊಂದಿದ್ದಾರೆ. ಬೈಕ್‍ನಿಂದ ಕೆಳಗೆ ಬಿದ್ದ ತಂದೆ ಅಬೂಬಕರ್ ಗಾಯಗೊಂಡಿದ್ದಾರೆ. ಆದರೆ ಈ ಹತ್ಯೆಯ ಹಿಂದೆ ಆರ್‍ಎಸ್‍ಎಸ್ ಕೈವಾಡವಿದೆ ಎಂದು ಎಸ್‍ಡಿಪಿಐ ಆರೋಪಿಸಿದೆ. ಇದನ್ನೂ ಓದಿ: ಹರ್ಷ ಕೊಲೆಯ ಪ್ರತೀಕಾರಕ್ಕೆ ನಡೆಯಿತಾ ಸಂಚು – ಪೊಲೀಸ್ ಕಾರ್ಯಾಚರಣೆಯಿಂದ ಸಂಚು ವಿಫಲ

    They looked at me while hacking him, I was unable to move: Subair's father, palakkad subair murder, palakkad sdpi leader murder, kerala latest news, rss vs sdpi kerala

    ಶ್ರೀನಿವಾಸನ್ ಹತ್ಯೆಯ ಹಿಂದೆ ಎಸ್‍ಡಿಪಿಐ ಕೈವಾಡವಿದೆ ಎಂದು ಬಿಜೆಪಿ ನಾಯಕರು ಶನಿವಾರ ಹೇಳಿದ್ದಾರೆ. ಪಾಲಕ್ಕಾಡ್‍ನಾದ್ಯಂತ ಬಿಗಿ ಬಂದೋಬಸ್ತ್ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

  • ಹೇಳಿಕೆ ಖಂಡಿಸದಿದ್ದರೆ ವಿದ್ಯಾರ್ಥಿಗಳೂ ಆಲ್‌ಖೈದಾ ಪಟ್ಟಿಗೆ: ರಘುಪತಿ ಭಟ್

    ಹೇಳಿಕೆ ಖಂಡಿಸದಿದ್ದರೆ ವಿದ್ಯಾರ್ಥಿಗಳೂ ಆಲ್‌ಖೈದಾ ಪಟ್ಟಿಗೆ: ರಘುಪತಿ ಭಟ್

    ಉಡುಪಿ: ನೈಜ ಭಾರತೀಯರಾದರೆ ಹಿಜಬ್ ಹೋರಾಟದಲ್ಲಿ ತೊಡಗಿರುವ ಮುಸ್ಲಿಂ ವಿದ್ಯಾರ್ಥಿಗಳು ಆಲ್‌ಖೈದಾ, ತಾಲಿಬಾನ್ ಬೆಂಬಲವನ್ನು ಖಂಡಿಸಬೇಕು. ಇಲ್ಲದಿದ್ದರೆ ಅವರೂ ಆಲ್‌ಖೈದಾ ಅಥವಾ ದೇಶದ್ರೋಹ ಸಂಪರ್ಕಿತರ ಪಟ್ಟಿಯಲ್ಲಿ ಸೇರುತ್ತಾರೆ. ತಮ್ಮ ಮೇಲಿನ ವಿಶ್ವಾಸವನ್ನೂ ಕಳೆದುಕೊಳ್ಳುತ್ತಾರೆ ಎಂದು ಉಡುಪಿ ಶಾಸಕ ರಘುಪತಿ ಭಟ್ ಎಚ್ಚರಿಸಿದ್ದಾರೆ.

    Raghupati Bhat

    ಉಡುಪಿಯಲ್ಲಿ ಇಂದು ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿರುವ ಅವರು, ಹಿಜಬ್‌ಗೆ ಸಂಬಂಧಿಸಿದ ಘಟನೆ ಮೊದಲು ಪಾಕಿಸ್ತಾನದ ವಾಹಿನಿಯೊಂದರಲ್ಲಿ ಪ್ರಸಾರವಾಯಿತು. ಘಟನೆ ನಡೆದಾಗ ಮುಸ್ಕಾನ್ ವಿದ್ಯಾರ್ಥಿನಿ ಘೋಷಣೆಗೆ ತಾಲಿಬಾನ್ ಮೊದಲು ಬೆಂಬಲ ಸೂಚಿಸಿತ್ತು. ಇದೀಗ ಆಲ್‌ಖೈದಾ ಬೆಂಬಲ ಸೂಚಿಸಿರುವುದು ಸಿಎಫ್‌ಐ, ಪಿಎಫ್‌ಐ, ಎಸ್‌ಡಿಪಿಐ ಸಂಘಟನೆಗಳೂ ಆಲ್‌ಖೈದಾ ಭಯೋತ್ಪಾದಕ ಸಂಘಟನೆಯೊಂದಿಗೆ ನೇರವಾಗಿ ಸಂಪರ್ಕದಲ್ಲಿದೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಚಂದ್ರು ಕೊಲೆಗಾರರಿಗೆ ಶರಿಯತ್ ಕಾನೂನು ಜಾರಿಯಾಗಬೇಕಾ: ರಘುಪತಿ ಭಟ್ ಪ್ರಶ್ನೆ

    ಹಿಜಬ್ ಹೋರಾಟದಲ್ಲಿ 6 ಹೆಣ್ಣುಮಕ್ಕಳು ಗಟ್ಟಿಯಾಗಿ ನಿಂತದ್ದರಿಂದಲೇ ಇಂದು ವಿವಾದ ದೊಡ್ಡದಾಗಿದೆ. ಇವರಿಗೆ ದೊಡ್ಡಮಟ್ಟದಲ್ಲಿ ಹಣಕಾಸು ಹರಿದು ಬಂದಿದೆ. ಹಾಗಾಗಿ ಸಿಎಫ್‌ಐ(CFI), ಪಿಎಫ್‌ಐ (PFI), ಎಸ್‌ಡಿಪಿಐ(SDPI) ಸಂಘಟನೆಗಳಲ್ಲಿ ದೇಶದ್ರೋಹ ಮಾತನಾಡುವವರನ್ನು ಎನ್‌ಐಎ (NIA) ತನಿಖೆಗೆ ಒಳಪಡಿಸಿದರೆ ವಿದೇಶಿ ಸಂಘನೆಗಳ ಕೈವಾಡ ಏನಿದೆ ಎಂಬುದು ತಿಳಿಯುತ್ತದೆ ಎಂದು ಹೇಳಿದರು.

    muskhan

    ಮುಸ್ಲಿಂ ವಿದ್ಯಾರ್ಥಿನಿಯರಿಗೆ ಆಲ್‌ಖೈದಾ ಜೊತೆಗೆ ಸಂಪರ್ಕವಿದೆ ಎಂದು ಹೇಳುತ್ತಿಲ್ಲ. ಆದರೆ, ಮಕ್ಕಳನ್ನು ಕಂಟ್ರೋಲ್ ಮಾಡುತ್ತಿರುವ ಸಿಎಫ್‌ಐ ಭಯೋತ್ಪಾದಕ ಸಂಘಟನೆಗಳಿಗೆ ಬೆಂಬಲ ನೀಡುತ್ತಿದೆ. ವಿದ್ಯಾರ್ಥಿಗಳು ಭಾರತದ ಪ್ರಜೆಗಳು ಇಲ್ಲಿನ ಎಲ್ಲ ಸವಲತ್ತು ಪಡೆಯುತ್ತಿದ್ದಾರೆ. ಅವರು ನಿಜವಾದ ದೇಶಭಕ್ತರಾದರೆ, ಆಲ್‌ಖೈದಾ, ತಾಲಿಬಾನಿಗಳ ಹೇಳಿಕೆ ಖಂಡಿಸಬೇಕು. ನಿಮ್ಮ ಸಹಕಾರ ನಮಗೆ ಬೇಡ. ನಮಗೆ ಸಂವಿಧಾನ ನ್ಯಾಯಾಲಯದ ಮೇಲೆ ವಿಶ್ವಾಸವಿದೆ ಎನ್ನುವಂತಹ ಹೇಳಿಕೆ ಕೊಡಬೇಕು. ಇಲ್ಲದಿದ್ದರೆ ಅವರನ್ನೂ ದೇಶಹದ್ರೋಹ ಸಂಪರ್ಕಿರತರ ಪಟ್ಟಿಗೆ ಸೇರಿಸಬೇಕಾಗುತ್ತದೆ, ಮಕ್ಕಳ ಮೇಲೂ ವಿಶ್ವಾಸ ಹೋಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಚಂದ್ರು ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಕೊಟ್ಟ ಜಮೀರ್‌

    ಒಂದು ಸಂಘಟನೆಯನ್ನು ಬ್ಯಾನ್ ಮಾಡಿದರೆ, ಮತ್ತೊಂದು ಹೆಸರಿನಲ್ಲಿ ಸಂಘಟನೆ ಹುಟ್ಟಿಕೊಳ್ಳುತ್ತದೆ. ಆದ್ದರಿಂದ ದೇಶದ್ರೋಹಿಗಳಿಗಾಗಿ ಸಂಘಟನೆ ಮಾಡುವವರನ್ನೇ ಬಹಿಷ್ಕರಿಸಬೇಕು. ಮುಖ್ಯವಾಗಿ ಮುಸ್ಲಿಂ ಸಮುದಾಯದಲ್ಲಿ ಇದು ಆಗಬೇಕು. ಬೆರಳೆಣಿಕೆ ಮಂದಿ ಮಾಡುವ ಇಂತಹ ಕೆಲಸಗಳಿಂದ ಬಹುಪಾಲು ಸಂಖ್ಯೆ ಮುಸ್ಲಿಮರಿಗೂ ಕೆಟ್ಟ ಹೆಸರು ಬರುತ್ತದೆ. ಆದ್ದರಿಂದ ಪ್ರಜ್ಞಾವಂತ ಮುಸ್ಲಿಮರು ಜಾಗೃತರಾಗಬೇಕು. ದೇಶದ್ರೋಹಿಗಳನ್ನು ಸಾಮೂಹಿಕವಾಗಿ ಬಹಿಷ್ಕರಿಸಬೇಕು ಎಂದು ಕೆರೆ ನೀಡಿದ್ದಾರೆ.

  • ಹಿಂದೂ ಸಮಾಧಿಗಳ ಮೇಲೆ ಎಸ್‌ಡಿಪಿಐ ಎಂದು ಬರೆದು ವಿಕೃತಿ

    ಹಿಂದೂ ಸಮಾಧಿಗಳ ಮೇಲೆ ಎಸ್‌ಡಿಪಿಐ ಎಂದು ಬರೆದು ವಿಕೃತಿ

    ಕೋಲಾರ: ಹಿಂದೂ ರುದ್ರ ಭೂಮಿಯಲ್ಲಿ ಕಿಡಿಗೇಡಿಗಳು ವಿಕೃತಿ ಮೆರೆದಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆ ಮುಳಬಾಗಿಲು ನಗರದ ಗಣಿಗುಂಟೆ ಪಾಳ್ಯದಲ್ಲಿರುವ ಬಲಿಜ ಸ್ಮಶಾನದಲ್ಲಿ ಕೆಲ ಕಿಡಿಗೇಡಿಗಳು ಸಮಾಧಿಗಳ ಮೇಲೆ ಬಣ್ಣ ಬಳಿದು ಕೃತ್ಯವೆಸಗಿದ್ದಾರೆ.

    ಸ್ಮಶಾನದಲ್ಲಿ 200 ಕ್ಕೂ ಹೆಚ್ಚು ಸಮಾಧಿಗಳಿದ್ದು, ಈ ಪೈಕಿ 30 ಕ್ಕೂ ಹೆಚ್ಚು ಸಮಾಧಿಗಳ ನಾಮಫಲಕ ಹಾಗೂ ಭಾವಚಿತ್ರಗಳ ಮೇಲೆ ಕಿಡಿಗೇಡಿಗಳು ಎಸ್‌ಡಿಪಿಐ ಎಂದು ಬರೆದು ವಿಕೃತಿ ಮೆರೆದಿದ್ದಾರೆ. ಸಮಾಧಿಗಳನ್ನು ವಿರೂಪಗೊಳಿಸಿ, ಪೂರ್ವಜರಿಗೆ ಅಗೌರವ ತೋರಿ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ. ಇದನ್ನೂ ಓದಿ: ನೇಗಿಲಿಗೆ ಕುದುರೆ ಕಟ್ಟಿ ಉಳುಮೆ ಮಾಡಿದ ರೈತ

    ಘಟನೆ ಬಗ್ಗೆ ಶ್ರೀ ರಾಮ ಯುವಕ ರೈತ ಸಂಘ ಪೊಲೀಸ್ ಠಾಣೆಗೆ ದೂರು ನೀಡಿದ್ದು ಕೂಡಲೇ ಕಿಡಿಗೇಡಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ. ಮುಳಬಾಗಿಲು ನಗರ ಪೊಲೀಸ್ ಠಾಣೆಯ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ಕಲ್ಲಡ್ಕ ಪ್ರಭಾಕರ್ ಭಟ್ ಆಸ್ಪತ್ರೆಗೆ ದಾಖಲು

  • ಹಿಜಬ್ ವಿಚಾರದಲ್ಲಿ ಆರ್‌ಎಸ್‌ಎಸ್‌, ಭಜರಂಗದಳ, ಎಸ್‍ಡಿಪಿಐ ಕುಮ್ಮಕ್ಕು ಇದೆ ಈ ಎಲ್ಲಾ ಸಂಘಟನೆಗಳನ್ನು ನಿಷೇಧಿಸಿ: ಸಿದ್ದರಾಮಯ್ಯ

    ಹಿಜಬ್ ವಿಚಾರದಲ್ಲಿ ಆರ್‌ಎಸ್‌ಎಸ್‌, ಭಜರಂಗದಳ, ಎಸ್‍ಡಿಪಿಐ ಕುಮ್ಮಕ್ಕು ಇದೆ ಈ ಎಲ್ಲಾ ಸಂಘಟನೆಗಳನ್ನು ನಿಷೇಧಿಸಿ: ಸಿದ್ದರಾಮಯ್ಯ

    -ದೇಶದ ಉಳಿವಿಗಾಗಿ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರೋಣ

    ಬೆಂಗಳೂರು: ಹಿಜಬ್ ವಿಚಾರದಲ್ಲಿ ಆರ್‌ಎಸ್‌ಎಸ್‌, ಭಜರಂಗದಳ, ಎಸ್‍ಡಿಪಿಐ ಕುಮ್ಮಕ್ಕು ಇದೆ. ಈ ಕಾರಣಕ್ಕಾಗಿ ಕೋಮು ಸೌಹಾರ್ದತೆ ಹಾಳು ಮಾಡುತ್ತಿರುವ ಈ ಎಲ್ಲಾ ಸಂಘಟನೆಗಳನ್ನು ನಿಷೇಧಿಸಿ ಎಂದು ಸದನದಲ್ಲಿ ಹೇಳಿದ್ದೆ ಎಂದು ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ತಿಳಿಸಿದರು.

    ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಆಡಿಟೋರಿಯಂನ ರಾಜೀವ್ ಭವನದಲ್ಲಿ ಎಐಸಿಸಿಯ ನಿಕಟಪೂರ್ವ ಅಧ್ಯಕ್ಷರಾದ ರಾಹುಲ್ ಗಾಂಧಿಯವರ ಉಪಸ್ಥಿತಿಯಲ್ಲಿ ನಡೆದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಸರ್ಕಾರ ಮನಸ್ಸು ಮಾಡಿದ್ದರೆ ಆರಂಭದಲ್ಲೇ ಹಿಜಬ್ ವಿವಾದವನ್ನು ಬಗೆಹರಿಸಿ, ದೇಶಾದ್ಯಂತ ವ್ಯಾಪಿಸದಂತೆ ತಡೆಯಬಹುದಿತ್ತು.  ಆರ್‌ಎಸ್‌ಎಸ್‌, ಭಜರಂಗದಳ, ಹಿಂದೂ ಮಹಾಸಭಾದವರು ಸರ್ಕಾರದ ಕುಮ್ಮಕ್ಕಿನಿಂದ ದೊಡ್ಡ ವಿಷಯವನ್ನಾಗಿ ವಿದ್ಯಾರ್ಥಿಗಳ ಮುಂದಿಟ್ಟು, ಮುಸ್ಲಿಮರನ್ನು ಖಳನಾಯಕರನ್ನಾಗಿ ಬಿಂಬಿಸಿದ್ದಾರೆ. ಇದರಲ್ಲಿ ಎಸ್‍ಡಿಪಿಐ ಕುಮ್ಮಕ್ಕು ಕೂಡ ಇದೆ. ರಾಜ್ಯದಲ್ಲಿ ಬಿಜೆಪಿಯ ಅನೈತಿಕ ಸರ್ಕಾರವಿದೆ. ಬಿಜೆಪಿ ಪಕ್ಷ 2008, 2018 ಈ ಎರಡೂ ಬಾರಿ ಪೂರ್ಣ ಬಹುಮತ ಪಡೆದು ಅಧಿಕಾರಕ್ಕೆ ಬಂದಿಲ್ಲ. 2008 ರಲ್ಲಿ ಆಪರೇಷನ್ ಕಮಲದ ಮೂಲಕ ಯಡಿಯೂರಪ್ಪ ಅವರು ಅಧಿಕಾರ ಹಿಡಿದರು, ಮತ್ತೆ 2018 ರಲ್ಲಿ ಬಹುಮತ ಸಾಬೀತು ಮಾಡಲಾಗದೆ ಒಂದೇ ವಾರಕ್ಕೆ ರಾಜೀನಾಮೆ ನೀಡಿ, ಆ ನಂತರ ಆಪರೇಷನ್ ಕಮಲದ ಮೂಲಕ ಸಮ್ಮಿಶ್ರ ಸರ್ಕಾರವನ್ನು ಬೀಳಿಸಿ ಮುಖ್ಯಮಂತ್ರಿ ಸ್ಥಾನಕ್ಕೇರಿದರು. ಈ ಸರ್ಕಾರದ ಅವಧಿಯಲ್ಲಿ ಎರಡು ವರ್ಷ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದರು, ಈಗ ಬಸವರಾಜ ಬೊಮ್ಮಾಯಿ ಆ ಸ್ಥಾನದಲ್ಲಿ ಇದ್ದಾರೆ. ಇದೊಂದು ಜನವಿರೋಧಿ, ಭ್ರಷ್ಟ ಸರ್ಕಾರ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ದೇಶದಲ್ಲೇ ಅತಿದೊಡ್ಡ ಭ್ರಷ್ಟ ಸರ್ಕಾರ ಕರ್ನಾಟಕದಲ್ಲಿದೆ: ರಾಹುಲ್ ಕಿಡಿ

    MODI 2

    ದೇಶದ ಯುವಕರು, ಮಹಿಳೆಯರು, ಮಕ್ಕಳು, ಬಡವರು, ದಲಿತರು, ಹಿಂದುಳಿದ ಸಮುದಾಯಗಳ ಜನರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಾಗಲೀ, ರಾಜ್ಯದ ಮುಖ್ಯಮಂತ್ರಿಯಾಗಲೀ ಜನರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲ್ಲ. ಜನರ ಸಮಸ್ಯೆಗಳ ಬದಲಾಗಿ ಸಮಾಜವನ್ನು ವಿಭಜನೆ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಚುನಾವಣೆ ಹತ್ತಿರ ಬಂದಿರುವುದರಿಂದ ಹೆಚ್ಚು ಹೆಚ್ಚು ಕೋಮು ವೈಷಮ್ಯದ ವಿಚಾರಗಳನ್ನು ಮುನ್ನೆಲೆಗೆ ತರುತ್ತಿದ್ದಾರೆ. ನಾವು ಸಂವಿಧಾನವನ್ನು ಧರ್ಮವಾಗಿ ನಂಬಿರುವವರು, ನಮಗೆ ಸಂವಿಧಾನವೇ ಸಂಜೀವಿನಿ. ಈ ದೇಶದ ಪ್ರತಿಯೊಬ್ಬ ವ್ಯಕ್ತಿಯೂ ಸಂವಿಧಾನದ ಆಶಯಗಳಂತೆ ಜೀವನ ಮಾಡಬೇಕು ಎಂದರು. ಇದನ್ನೂ ಓದಿ: ಯುಗಾದಿ ಹಬ್ಬಕ್ಕೆ ಗ್ರಾಹಕರಿಗೆ ಎಲ್‌ಪಿಜಿ ಶಾಕ್- ಬರೋಬ್ಬರಿ 250 ರೂ. ಏರಿಕೆ

    ರಾಜ್ಯ ಬಿಜೆಪಿ ಸರ್ಕಾರ ಕೋಮು ಸಂಘರ್ಷಕ್ಕೆ ದಾರಿ ಮಾಡಿಕೊಡುವಂತಾ ವಿಚಾರಗಳನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದೆ. ಮೊದಲಿಗೆ ಗೋಹತ್ಯೆ ನಿಷೇಧ ಕಾನೂನು ಜಾರಿ ಮಾಡಿದರು, ಆ ನಂತರ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡಿದರು, ಈಗ ಹಿಜಬ್, ಭಗವದ್ಗೀತೆ, ಹಲಾಲ್ ವಿಚಾರಗಳನ್ನು ಪ್ರಸ್ತಾಪ ಮಾಡಿದ್ದಾರೆ. ಸಂವಿಧಾನ, ಪ್ರಜಾಪ್ರಭುತ್ವ, ಬಹುತ್ವದ ಬಗ್ಗೆ ಗೌರವ ಇಲ್ಲದ ಕಾರಣಕ್ಕೆ ಬಿಜೆಪಿಯವರು ಇಂತಹಾ ವಿಚಾರಗಳನ್ನು ಮುನ್ನೆಲೆಗೆ ತರುತ್ತಿದ್ದಾರೆ. ಆ ಮೂಲಕ ಯುವಕರ ಮನಸ್ಸಲ್ಲಿ ದ್ವೇಷದ ವಿಷಬೀಜ ಬಿತ್ತುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

    ಕಾಂಗ್ರೆಸ್ ಪಕ್ಷ ಸಂವಿಧಾನದಲ್ಲಿ ನಂಬಿಕೆ ಮತ್ತು ಬದ್ಧತೆಯನ್ನು ಹೊಂದಿರುವ ಪಕ್ಷ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಹಿಷ್ಣುತೆ, ಸಹಬಾಳ್ವೆ, ಸರ್ವಧರ್ಮ ಸಮನ್ವಯತೆಯ ತತ್ವಗಳಲ್ಲಿ ನಂಬಿಕೆ ಇಟ್ಟುಕೊಂಡಿದ್ದೇವೆ. ಹಿಜಬ್ ಒಂದು ವಿವಾದವಾಗುವಂತಾ ವಿಷಯವೇ ಆಗಿರಲಿಲ್ಲ. ನೂರಾರು ವರ್ಷಗಳಿಂದ ಮುಸ್ಲಿಂ ಸಮುದಾಯದವರು ಆಚರಿಸಿಕೊಂಡು ಬಂದ ಪದ್ಧತಿ ಆಗಿತ್ತು. ಈ ಕೆಲಸವನ್ನು ಸರ್ಕಾರ ಮಾಡಲ್ಲ, ಕಾರಣ ಈ ಎಲ್ಲಾ ಸಂಘಟನೆಗಳು ಇದ್ದಾಗ ಮಾತ್ರ ಸಮಾಜದಲ್ಲಿ ಬಾಂಧವ್ಯವನ್ನು ಹಾಳು ಮಾಡಲು ಸಾಧ್ಯವಾಗುತ್ತೆ. ಮತ ಧ್ರುವೀಕರಣಕ್ಕಾಗಿ ಈ ಎಲ್ಲಾ ವಿಚಾರಗಳನ್ನು ಮುಂದಿನ ಒಂದು ವರ್ಷಗಳ ವರೆಗೆ ಜನರ ಮುಂದಿಡುವ ಕೆಲಸ ಬಿಜೆಪಿಯವರು ಮಾಡುತ್ತಾರೆ. ಕಾಂಗ್ರೆಸಿಗರಾದ ನಾವು ಸಮಾಜದ ಹಿಂದುಳಿದ, ದಲಿತ, ಅಲ್ಪಸಂಖ್ಯಾತ, ಶೋಷಿತ ಜನರಿಗೆ ರಕ್ಷಣೆ ಕೊಡಬೇಕು. ಈ ವಿಚಾರ ಮಾತಾಡಿದ್ರೆ ಯಾರೇನು ತಪ್ಪು ತಿಳಿಯುತ್ತಾರೋ ಎಂಬ ಆಲೋಚನೆಗಳಿದ್ದರೆ ಅದನ್ನು ನಾವೆಲ್ಲ ಮೊದಲು ಬಿಡಬೇಕು. ನಮಗೆ ಜಾತ್ಯಾತೀತತೆಯಲ್ಲಿ ಸ್ಪಷ್ಟತೆ ಇರಬೇಕು ಎಂದರು.

    ಈ ದೇಶ ಯಾವುದೋ ಒಂದು ಜಾತಿ ಧರ್ಮದ ಜನರ ದೇಶವಲ್ಲ. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್, ಬೌದ್ಧರು, ಸಿಖ್ಖರು ಹೀಗೆ ಎಲ್ಲ ಧರ್ಮಗಳ ಜನರ ತ್ಯಾಗ ಬಲಿದಾನದಿಂದ ನಮಗೆ ಸ್ವಾತಂತ್ರ್ಯ ದಕ್ಕಿದೆ. ಈ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳಬೇಕಾದರೆ ಎಲ್ಲ ವರ್ಗದ ಜನರಿಗೆ ನ್ಯಾಯ ಕೊಡಬೇಕು. ನಾವು ಸಂವಿಧಾನದ ಜಾತ್ಯಾತೀತ ಸಿದ್ದಾಂತದ ರಕ್ಷಣೆಗೆ ಇನ್ನಷ್ಟು ಆಕ್ರಮಣಶೀಲತೆಯಿಂದ ಕೆಲಸ ಮಾಡಬೇಕು. ಈ ವಿಚಾರದಲ್ಲಿ ಸೋನಿಯಾ ಗಾಂಧಿ ಅವರಾಗಲೀ, ರಾಹುಲ್ ಗಾಂಧಿಯವರಾಗಲೀ ಯಾವುದೇ ರೀತಿಯ ರಾಜಿಗೆ ಸಿದ್ಧರಿಲ್ಲ. ಯುವಕರನ್ನು ಪಕ್ಷಕ್ಕೆ ಕರೆತಂದು ಅವರಿಗೆ ಹೆಚ್ಚಿನ ಜವಬ್ದಾರಿ ನೀಡುವ ಕೆಲಸ ಮಾಡಬೇಕು ಎಂದು ರಾಹುಲ್ ಗಾಂಧಿಯವರು ಸದಾ ಹೇಳುತ್ತಿರುತ್ತಾರೆ. ಇದನ್ನೂ ಓದಿ: ಪುನೀತ್ ನಿವಾಸಕ್ಕೆ ರಾಹುಲ್ ಗಾಂಧಿ ಭೇಟಿ – ಕನ್ನಡದಲ್ಲಿ ಅಪ್ಪುಗೆ ನಮನ ಸಲ್ಲಿಸಿದ ಕಾಂಗ್ರೆಸ್ ನಾಯಕ

    ಶಾಂತಿ, ಕಾನೂನು ಸುವ್ಯವಸ್ಥೆ ಇಲ್ಲದ ದೇಶ, ರಾಜ್ಯ ಎಂದಿಗೂ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ. ದೇಶ ಅಭಿವೃದ್ಧಿ ಆಗಬೇಕಾದರೆ ಸಮಾಜದಲ್ಲಿ ಸಾಮರಸ್ಯ ಇರಬೇಕು. ಈ ಸಾಮರಸ್ಯ ಮೂಡಿಸುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡಬೇಕು. ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕನಿಷ್ಠ 135-140 ಸ್ಥಾನಗಳನ್ನು ಗೆಲ್ಲಲೇಬೇಕು, ಆ ಮೂಲಕ ಕೋಮುವಾದಿಗಳನ್ನು ಅಧಿಕಾರದಿಂದ ಕಿತ್ತು ಬಿಸಾಕಬೇಕು. ಹೀಗಾಗಿ ಆ ವ್ಯಕ್ತಿ, ಈ ವ್ಯಕ್ತಿ ಎಂದು ವೈಯಕ್ತಿಕ ಚಿಂತನೆ ಮಾಡದೆ ಎಲ್ಲರೂ ಒಟ್ಟಾಗಿ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಹೋರಾಟ ಮಾಡಬೇಕು. ಪ್ರತಿ ಜಿಲ್ಲೆಯಲ್ಲಿ ಎಲ್ಲರೂ ತಮ್ಮ ಸಲಹೆ ಸೂಚನೆಗಳನ್ನು ಪಕ್ಷಕ್ಕೆ ನೀಡಿ, ನಿಮ್ಮ ಅಭಿಪ್ರಾಯವನ್ನು ನಾವು ಗಂಭೀರವಾಗಿ ಪರಿಗಣಿಸುತ್ತೇವೆ. ಚುನಾವಣೆಗೆ ಆರು ತಿಂಗಳು ಮೊದಲೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ, ಆಗ ಅವರು ತಮ್ಮೆಲ್ಲ ಸಂಪನ್ಮೂಲಗಳನ್ನು ಕ್ರೋಢೀಕರಿಸಿಕೊಂಡು ಪರಿಣಾಮಕಾರಿಯಾಗಿ ಚುನಾವಣೆ ಎದುರಿಸಲು ಸಾಧ್ಯವಾಗುತ್ತೆ ಎಂದು ರಾಹುಲ್ ಗಾಂಧಿ ಅವರ ಬಳಿ ಮನವಿ ಮಾಡಿದ್ದೇವೆ. ಅದಕ್ಕವರು ಒಪ್ಪಿದ್ದಾರೆ ಎಂದು ಮಾಹಿತಿ ಹಂಚಿಕೊಂಡರು.

    ರಾಷ್ಟ್ರೀಯ ನಾಯಕರ ಮಾರ್ಗದರ್ಶನದಲ್ಲಿ ರಾಜ್ಯದಲ್ಲಿ ಸದಸ್ಯತ್ವ ನೋಂದಣಿ ಅಭಿಯಾನ ಯಶಸ್ವಿಯಾಗಿದೆ. ಈ ಅಭಿಯಾನದ ಯಶಸ್ಸಿಗೆ ಕಾರಣೀಕರ್ತರಾದ ಪಕ್ಷದ ಎಲ್ಲಾ ಶಾಸಕರು, ಮುಖಂಡರು, ಕಾರ್ಯಕರ್ತರಿಗೆ ನನ್ನ ಧನ್ಯವಾದಗಳು. ನಮ್ಮ ಪಕ್ಷದ ಗೆಲುವಿಗೆ ಇದಷ್ಟೇ ಸಾಲದು, ಇದರ ಜೊತೆಗೆ ನಾವೆಲ್ಲ ಮನೆ ಮನೆಗೆ ತೆರಳಿ ಬಿಜೆಪಿಯ ಕೋಮುವಾದದ ನಾಟಕವನ್ನು ಜನರಿಗೆ ಅರ್ಥಮಾಡಿಸುವ ಕೆಲಸ ಮಾಡಬೇಕು. ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರು ರಾಜ್ಯ ಸರ್ಕಾರದ 40% ಕಮಿಷನ್ ದಂಧೆಯ ಬಗ್ಗೆ ಪ್ರಧಾನಿಗಳಿಗೆ ಪತ್ರ ಬರೆದು ಆರು ತಿಂಗಳಾಯ್ತು, ಚೌಕಿದಾರ್ ಮೋದಿ ಅವರು ಈ ವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ರಾಜ್ಯ ಸರ್ಕಾರದ 40% ಕಮಿಷನ್ ಹಗರಣವನ್ನು ಸದನದಲ್ಲಿ ಪ್ರಸ್ತಾಪ ಮಾಡಲು ಅವಕಾಶ ನೀಡಿಲ್ಲ. ಬಿಜೆಪಿ ಶಾಸಕರೇ ತಮ್ಮ ಪಕ್ಷದ ಸಚಿವರ ಭ್ರಷ್ಟಾಚಾರದ ಬಗ್ಗೆ ಬಹಿರಂಗವಾಗಿ ಮಾತನಾಡುತ್ತಿದ್ದಾರೆ. ಆದರೆ ಸರ್ಕಾರ ಭಂಡತನದಿಂದ ವರ್ತಿಸುತ್ತಿದೆ.

    ಇಂತಹ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಲು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕು. ಈ ನಿಟ್ಟಿನಲ್ಲಿ ನಾವೆಲ್ಲರೂ 24/7 ಹೋರಾಟವನ್ನು ಇಂದಿನಿಂದಲೇ ಆರಂಭಿಸೋಣ. ಸಮಾಜ, ದೇಶದ ಉಳಿವಿಗಾಗಿ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರೋಣ ಎಂದು ಕರೆ ನೀಡಿದರು.

  • ಯಾರೋ ಮಾಡುವ ತಪ್ಪಿಗೆ ಇಡೀ ಸಮಾಜವನ್ನು ದ್ವೇಷಿಸುವಂತಾಗಿದೆ: ಅಬೂಬಕರ್

    ಯಾರೋ ಮಾಡುವ ತಪ್ಪಿಗೆ ಇಡೀ ಸಮಾಜವನ್ನು ದ್ವೇಷಿಸುವಂತಾಗಿದೆ: ಅಬೂಬಕರ್

    ಉಡುಪಿ: ಉಡುಪಿಯಲ್ಲಿ ಮುಸ್ಲಿಂ ಸಮುದಾಯದ ವರ್ತಕರಿಗೆ ದೇವಸ್ಥಾನ ಜಾತ್ರಾ ಉತ್ಸವಗಳಲ್ಲಿ ವ್ಯಾಪಾರಕ್ಕೆ ಅವಕಾಶ ಮಾಡಿಕೊಡುವಂತೆ ಉಡುಪಿ ಬಳಕೆದಾರರ ವೇದಿಕೆಯ ಗೌರವಾಧ್ಯಕ್ಷ ಅಬೂಬಕರ್ ಆತ್ರಾಡಿ, ಪೇಜಾವರ  ಸ್ವಾಮೀಜಿಗಳಿಗೆ ಮನವಿ ಮಾಡಿದ್ದಾರೆ. ಅಲ್ಲದೇ, ಧಾರ್ಮಿಕ ಕೇಂದ್ರಗಳಲ್ಲಿ ವ್ಯಾಪಾರಕ್ಕೆ ಅವಕಾಶ ಕಲ್ಪಿಸಿಕೊಡುವ ಸಂಬಂಧ ಮಾತುಕತೆಯನ್ನೂ ನಡೆಸಿದ್ದಾರೆ.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಮಾಜದಲ್ಲಿ ಶಾಂತಿ ಸಹಬಾಳ್ವೆ ನೆಲೆಸಬೇಕೆಂಬ ಉದ್ದೇಶದಿಂದ ಸ್ವಾಮೀಜಿಯೊಂದಿಗೆ ಮಾತುಕತೆ ನಡೆಸಿದ್ದೇವೆ. ಮುಸ್ಲಿಂ ಸಮುದಾಯ ಸಹ ಶಾಂತಿಯನ್ನೇ ಬಯಸುತ್ತದೆ. ಆದರೆ, ಯಾರೋ ಒಬ್ಬರು-ಇಬ್ಬರು ಮಾಡುವ ತಪ್ಪಿಗೆ ಇಡೀ ಸಮಾಜವನ್ನು ದ್ವೇಷಿಸುವಂತಾಗಿದೆ ಎಂದು ವಿಷಾದಿಸಿದ್ದಾರೆ. ಇದನ್ನೂ ಓದಿ: ಬಪ್ಪನಾಡಿನಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ – ಸಾಮರಸ್ಯ ಎತ್ತಿಹಿಡಿದ ಕ್ಷೇತ್ರದ ಆಡಳಿತ ಮಂಡಳಿ 

    ABUBKER

    ನಾವೆಲ್ಲರೂ ಒಂದೇ ತಾಯಿಯ ಮಕ್ಕಳ ಹಾಗೇ ಸಹಬಾಳ್ವೆಯಿಂದ ಬಾಳಬೇಕು. ಹಿಂದೆ ಆದ ಘಟನೆಗಳನ್ನು ಮರೆತು ಸಹಬಾಳ್ವೆಯಿಂದ ಬಾಳೋಣ. ಈಗಾಗಲೇ ಒಂದು ಸಮಿತಿ ರಚನೆ ಮಾಡುವಂತೆ ಸ್ವಾಮೀಜಿ ಅವರು ಸೂಚನೆ ಕೊಟ್ಟಿದ್ದಾರೆ. ಜೊತೆಗೆ ವ್ಯಾಪಾರ ನಿರ್ಬಂಧಕ್ಕೆ ಪರಿಹಾರ ಸೂಚಿಸುವ ಭರವಸೆಯನ್ನೂ ನೀಡಿದ್ದಾರೆ ಎಂದರು. ಇದನ್ನೂ ಓದಿ: ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಎನ್ನುವ ಕಿಡಿಗೇಡಿಗಳನ್ನು ಮಟ್ಟ ಹಾಕಿ: ಹೆಚ್‌ಡಿಕೆ ಆಗ್ರಹ

    ಇದೇ ವೇಳೆ `ಮುಸ್ಲಿಂ ವ್ಯಾಪಾರಿಗಳ ವ್ಯಾಪಾರಕ್ಕೆ ನಿಷೇಧ ಹೇರಿದರೆ ನಮ್ಮ ವ್ಯಾಪಾರ ನಮಗೆ ಇದೆ. ಹುಟ್ಟಿಸಿದವ ಹುಲ್ಲು ಮೇಯಿಸದೆ ಇರುವುದಿಲ್ಲ’ ಎಂಬ ಎಸ್‌ಡಿಪಿಐ ರಾಜ್ಯಾಧ್ಯಕ್ಷ ಮಜೀರ್ ಅವರ ಹೇಳಿಗೆ ಪ್ರತಿಕ್ರಿಯಿಸಿದ ಅಬೂಬಕರ್, ಮುಸ್ಲಿಂ ಸಮುದಾಯದ ಜನರೊಂದಿಗೆ ನಾವು ಯಾವುದೇ ಸಭೆ ನಡೆಸಿಲ್ಲ. ಚರ್ಚೆ ಹಲವು ದಾರಿಗಳಲ್ಲಿ ಸಾಗಿ ಇಂದು ಈ ಪರಿಸ್ಥಿತಿ ನಿರ್ಮಾಣವಾಗಿದೆ. ಮನಸ್ಸಿಗೆ ಬಂದ ಹಾಗೆ ಹೇಳಿಕೆಗಳನ್ನು ನೀಡುವುದರಿಂದ ಸಮಾಜದಲ್ಲಿ ಶಾಂತಿ ಕದಡುತ್ತದೆ. ಮಾತಿನಲ್ಲಿ ಪ್ರೀತಿ ತೋರಿದರೆ ಸಮಾಜದ ಶಾಂತಿ ಕದಡುವುದಿಲ್ಲ ಎಂದು ಸಲಹೆ ನೀಡಿದ್ದಾರೆ.