Tag: Seat Belts

  • 9,125 ಕಾರುಗಳನ್ನು ಹಿಂದಕ್ಕೆ ಪಡೆದ ಮಾರುತಿ

    9,125 ಕಾರುಗಳನ್ನು ಹಿಂದಕ್ಕೆ ಪಡೆದ ಮಾರುತಿ

    ನವದೆಹಲಿ: ಮಾರುತಿ ಸುಜುಕಿ ಇಂಡಿಯಾ(Maruti Suzuki India) ಸಿಯಾಜ್, ಬ್ರೆಝಾ, ಎರ್ಟಿಗಾ, ಎಕ್ಸ್‌ಎಲ್ 6 ಮತ್ತು ಗ್ರ್ಯಾಂಡ್ ವಿಟಾರಾ ಸೇರಿ ಒಟ್ಟು 9,125 ಕಾರುಗಳನ್ನು ಹಿಂದಕ್ಕೆ ಪಡೆಯಲಾಗುವುದು ಎಂದು ತಿಳಿಸಿದೆ.

    ನವೆಂಬರ್ 2 ರಿಂದ 28ರವರೆಗಿನ ಅವಧಿಯಲ್ಲಿ ಉತ್ಪಾದನೆಯಾದ ಕಾರುಗಳಲ್ಲಿ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಈ ಕಾರುಗಳನ್ನು ಹಿಂದಕ್ಕೆ ಪಡೆಯಲಾಗುತ್ತಿದೆ ಎಂದು ಕಂಪನಿ ತಿಳಿಸಿದೆ.

    ಮುಂಭಾಗದ ಸಾಲಿನ ಸೀಟ್ ಬೆಲ್ಟ್‌ಗಳ(Seat Belt) ಭುಜದ ಎತ್ತರ ಹೊಂದಾಣಿಕೆಯ ಜೋಡಣೆಯ ಸಣ್ಣ ಭಾಗದಲ್ಲಿ ಒಂದು ಸಂಭವನೀಯ ದೋಷವಿದೆ ಎಂದು ಶಂಕಿಸಲಾಗಿದೆ. ಇದು ಅಪರೂಪದ ಸಂದರ್ಭದಲ್ಲಿ ಸೀಟ್ ಬೆಲ್ಟ್ ಬೇರ್ಪಡಿಸಬಹುದು ಎಂದು ಹೇಳಿದೆ. ಇದನ್ನೂ ಓದಿ: ಟ್ವಿಟ್ಟರ್ ಉದ್ಯೋಗಿಗಳಿಗೆ ಬಿಡುವಿಲ್ಲದ ಕೆಲಸ – ಕಚೇರಿಯಲ್ಲೇ ಮಲಗಲು ಬೆಡ್‌ರೂಂಗಳನ್ನೂ ಸಿದ್ಧಪಡಿಸಿದ ಮಸ್ಕ್

    ದೋಷಪೂರಿತ ವಾಹನಗಳನ್ನು ತಪಾಸಣೆ ಮತ್ತು ದೋಷಪೂರಿತ ಭಾಗವನ್ನು ಉಚಿತವಾಗಿ ಹಿಂಪಡೆಯಬಹುದು. ವಾಹನದ ಮಾಲೀಕರ ಜೊತೆ ಕಂಪನಿ ಸಂವಹನ ನಡೆಸಲಿದೆ ಎಂದು ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಟ್ರಾಫಿಕ್ ರೂಲ್ಸ್ ಫಾಲೋ ಮಾಡೋದ್ರಲ್ಲಿ ಮೋದಿಯೇ ಬೆಸ್ಟ್

    ಟ್ರಾಫಿಕ್ ರೂಲ್ಸ್ ಫಾಲೋ ಮಾಡೋದ್ರಲ್ಲಿ ಮೋದಿಯೇ ಬೆಸ್ಟ್

    ಬೆಂಗಳೂರು: ರಾಜ್ಯದ ನಾಯಕರು ಪಾಲಿಸದೇ ಇದ್ದರೆ ಪ್ರಧಾನಿ ಮೋದಿ ಸಂಚಾರಿ ನಿಯಮವನ್ನು ಚಾಚೂ ತಪ್ಪದೇ ಪಾಲಿಸುತ್ತಾರೆ. ಅಪ್ಪಿತಪ್ಪಿಯೂ ಸಹ ಸೀಟ್ ಬೆಲ್ಟ್ ಧರಿಸುವುದನ್ನು ಮರೆಯುವುದಿಲ್ಲ. ಆದರೆ, ರಾಜ್ಯದಲ್ಲಿ ಮುಖ್ಯಮಂತ್ರಿ, ಗೃಹ ಸಚಿವರು ಸೇರಿ ಬಹುತೇಕರು ಸೀಟ್ ಬೆಲ್ಟ್ ಧರಿಸುವುದೇ ಇಲ್ಲ.

    ಜನಸಾಮಾನ್ಯರು ಸಂಚಾರಿ ನಿಯಮ ಪಾಲಿಸುತ್ತಿಲ್ಲ ಎಂದು ಸಾವಿರಾರು ರೂ.ಗೆ ಕೇಂದ್ರ ಸರ್ಕಾರ ದಂಡ ಹೆಚ್ಚಿಸಿದೆ. ಆದರೆ, ಸಂಚಾರಿ ನಿಯಮ ಪಾಲಿಸಿ ಇತರರಿಗೆ ಮಾದರಿಯಾಗಬೇಕಿದ್ದ ಜನಪ್ರತಿನಿಧಿಗಳೇ ನಿರ್ಲಕ್ಷ್ಯ ವಹಿಸಿದ್ದು, ಕನಿಷ್ಟ ಸೀಟ್ ಬೆಲ್ಟ್ ಸಹ ಹಾಕದೆ ವಾಹನದಲ್ಲಿ ಪ್ರಯಾಣಿಸುತ್ತಿದ್ದಾರೆ ಎಂಬುದು ಪಬ್ಲಿಕ್ ಟಿವಿ ರಿಯಾಲಿಟಿ ಚೆಕ್ ವೇಳೆ ಬಹಿರಂಗವಾಗಿದೆ.

    ಮುಖ್ಯಮಂತ್ರಿ ಯಡಿಯೂರಪ್ಪನವರು ಪ್ರತಿ ದಿನ ಇದೇ ರೀತಿ ರೂಲ್ಸ್ ಬ್ರೇಕ್ ಮಾಡುತ್ತಾರೆ. ಪಬ್ಲಿಕ್ ಟಿವಿ ನಡೆಸಿದ ರಿಯಾಲಿಟಿ ಚೆಕ್ ವೇಳೆ ಇದು ಬಹಿರಂಗವಾಗಿದ್ದು, ಸೆಪ್ಟೆಂಬರ್ 4ರಂದು ಸೆರೆ ಹಿಡಿದಿದ್ದ ದೃಶ್ಯದಲ್ಲಿಯೂ ಸಹ ಬಿಎಸ್‍ವೈ ಸೀಟ್ ಬೆಲ್ಟ್ ಧರಿಸಿರಲಿಲ್ಲ. ನಿನ್ನೆಯ ದೃಶ್ಯದಲ್ಲಿಯೂ ಸಹ ಯಡಿಯೂರಪ್ಪ ಸೀಟ್ ಬೆಲ್ಟ್ ಧರಿಸಿರಲಿಲ್ಲ. ಕಾರ್ಯನಿಮಿತ್ತ ತಮ್ಮ ನಿವಾಸ ಧವಳಗಿರಿಯಿಂದ ಕಾರಲ್ಲಿ ಹೊರಟಾಗ ಯಥಾ ಪ್ರಕಾರ ಸೀಟ್ ಬೆಲ್ಟ್ ಹಾಕಿಕೊಳ್ಳದೇ ಪ್ರಯಾಣಿಸಿದರೂ ಪೊಲೀಸರು ಈ ಬಗ್ಗೆ ಗಮನವೇ ಹರಿಸಲಿಲ್ಲ.

    ದೇಶದ ಪ್ರಧಾನಿ ನರೇಂದ್ರ ಮೋದಿ ಅಚ್ಚುಕಟ್ಟಾಗಿ ಸಂಚಾರಿ ನಿಯಮ ಪಾಲಿಸುತ್ತಾರೆ. ಕಾರಿನಲ್ಲಿ ಕುಳಿತ ತಕ್ಷಣ ಮೋದಿ ಸೀಟ್ ಬೆಲ್ಟ್ ಹಾಕಿಕೊಳ್ತಾರೆ. ತಾನು ಪ್ರಧಾನಿ, ದೇಶವನ್ನು ಆಳುವವನು ಅಂತಾ ಮೋದಿ ಎಲ್ಲೂ ರೂಲ್ಸ್ ಬ್ರೇಕ್ ಮಾಡುವುದಿಲ್ಲ. ಆದರೆ, ಮುಖ್ಯಮಂತ್ರಿ ಯಡಿಯೂರಪ್ಪನವರು ಮಾತ್ರ ನಾನು ರಾಜ್ಯದ ಸಿಎಂ ನಾನೇಕೆ ಸಂಚಾರಿ ನಿಯಮ ಪಾಲಿಸಬೇಕು ಎಂಬ ಧೋರಣೆಯನ್ನು ಅನುಸರಿಸುತ್ತಿದ್ದಾರೆ.

  • ನಾಯಕರ ‘ದಂಡ’ಯಾತ್ರೆ – ಟ್ರಾಫಿಕ್ ನಿಯಮಕ್ಕೆ ಸಿಎಂ ಡೋಂಟ್‍ಕೇರ್

    ನಾಯಕರ ‘ದಂಡ’ಯಾತ್ರೆ – ಟ್ರಾಫಿಕ್ ನಿಯಮಕ್ಕೆ ಸಿಎಂ ಡೋಂಟ್‍ಕೇರ್

    ಬೆಂಗಳೂರು: ಟ್ರಾಫಿಕ್ ನಿಯಮ ಸೆ.1 ರಿಂದ ಜಾರಿಯಾಗಿದ್ದರೂ ರಾಜ್ಯದಲ್ಲಿ ಜನರಿಗೆ ಮಾದರಿಯಾಗಬೇಕಾದ ವ್ಯಕ್ತಿಗಳೇ ಪಾಲನೆ ಮಾಡುವಲ್ಲಿ ವಿಫಲರಾಗಿದ್ದಾರೆ.

    ಹೌದು. ಜನಸಾಮಾನ್ಯರು ಸಂಚಾರಿ ನಿಯಮ ಪಾಲಿಸುತ್ತಿಲ್ಲ ಎಂದು ಸಾವಿರಾರು ರೂ.ಗೆ ಕೇಂದ್ರ ಸರ್ಕಾರ ದಂಡ ಹೆಚ್ಚಿಸಿದೆ. ಆದರೆ, ಸಂಚಾರಿ ನಿಯಮ ಪಾಲಿಸಿ ಇತರರಿಗೆ ಮಾದರಿಯಾಗಬೇಕಿದ್ದ ಜನಪ್ರತಿನಿಧಿಗಳೇ ನಿರ್ಲಕ್ಷ್ಯ ವಹಿಸಿದ್ದು, ಕನಿಷ್ಟ ಸೀಟ್ ಬೆಲ್ಟ್ ಸಹ ಹಾಕದೇ ವಾಹನದಲ್ಲಿ ಪ್ರಯಾಣಿಸುತ್ತಿರುವ ವಿಚಾರ ಪಬ್ಲಿಕ್ ಟಿವಿ ರಿಯಾಲಿಟಿ ಚೆಕ್ ವೇಳೆ ಬಹಿರಂಗವಾಗಿದೆ.

    ಸಂಚಾರಿ ನಿಯಮದ ಪ್ರಕಾರ ಕಾರಲ್ಲಿ ಪ್ರಯಾಣಿಸುವಾಗ ಡ್ರೈವರ್ ಜೊತೆ ಸಹ ಪ್ರಯಾಣಿಕರೂ ಸೀಟ್ ಬೆಲ್ಟ್ ಧರಿಸುವುದು ಕಡ್ಡಾಯವಾಗಿದೆ. ಇಲ್ಲವಾದಲ್ಲಿ ಒಂದು ಸಾವಿರ ರೂಪಾಯಿ ದಂಡ ವಿಧಿಸಬೇಕು. ಆದರೆ, ಕಾರಿನ ಮುಂದಿನ ಸೀಟ್‍ನಲ್ಲಿ ಕೂರುವ ಸಿಎಂ ಯಡಿಯೂರಪ್ಪನವರು ಸೀಟ್ ಬೆಲ್ಟ್ ಧರಿಸುವುದೇ ಇಲ್ಲ. ಇದನ್ನು ನೋಡಿಯೂ ಸಹ ಪೊಲೀಸರು ಸಿಎಂಗೆ ಸೆಲ್ಯೂಟ್ ಮಾಡಿ ಹಾಗೇ ಕಳಿಸಿಕೊಡುತ್ತಾರೆ. ಇದು ಒಂದು ದಿನದ ಕಥೆಯಲ್ಲ ಪ್ರತಿನಿತ್ಯವೂ ಸಿಎಂ ಬಿ.ಎಸ್.ಯಡಿಯೂರಪ್ಪನವರು ಸೀಟ್ ಬೆಲ್ಟ್ ಧರಿಸದೇ ಪ್ರಯಾಣಿಸುತ್ತಾರೆ.

    ಮುಖ್ಯಮಂತ್ರಿ ಯಡಿಯೂರಪ್ಪನವರು ಪ್ರತಿ ದಿನ ಇದೇ ರೀತಿ ರೂಲ್ಸ್ ಬ್ರೇಕ್ ಮಾಡುತ್ತಾರೆ. ಪಬ್ಲಿಕ್ ಟಿವಿ ನಡೆಸಿದ ರಿಯಾಲಿಟಿ ಚೆಕ್ ವೇಳೆ ಇದು ಬಹಿರಂಗವಾಗಿದ್ದು, ಸೆಪ್ಟೆಂಬರ್ 4ರಂದು ಸೆರೆ ಹಿಡಿದಿದ್ದ ದೃಶ್ಯದಲ್ಲಿಯೂ ಸಹ ಬಿಎಸ್‍ವೈ ಸೀಟ್ ಬೆಲ್ಟ್ ಧರಿಸಿರಲಿಲ್ಲ. ನಿನ್ನೆಯ ದೃಶ್ಯದಲ್ಲಿಯೂ ಸಹ ಯಡಿಯೂರಪ್ಪ ಸೀಟ್ ಬೆಲ್ಟ್ ಧರಿಸಿರಲಿಲ್ಲ. ಕಾರ್ಯನಿಮಿತ್ತ ತಮ್ಮ ನಿವಾಸ ಧವಳಗಿರಿಯಿಂದ ಕಾರಲ್ಲಿ ಹೊರಟಾಗ ಯಥಾ ಪ್ರಕಾರ ಸೀಟ್ ಬೆಲ್ಟ್ ಹಾಕಿಕೊಳ್ಳದೇ ಪ್ರಯಾಣಿಸಿದ್ದರೂ ಪೊಲೀಸರೂ ಸಹ ಈ ಕುರಿತು ಗಮನ ಸೆಳೆಯಲಿಲ್ಲ.

    ರಾಜ್ಯದ ಕಾನೂನು ತಮ್ಮ ಕೈಯಲ್ಲಿ ಹೊಂದಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಸೀಟ್ ಬೆಲ್ಟ್ ಹಾಕಿಕೊಳ್ಳುವುದಿರಲಿ, ಅವರ ಡ್ರೈವರ್ ಸಹ ಸೀಟ್ ಬೆಲ್ಟ್ ಧರಿಸುವುದಿಲ್ಲ ಎಂಬುದು ಪಬ್ಲಿಕ್ ಟಿವಿ ರಿಯಾಲಿಟಿ ಚೆಕ್ ವೇಳೆ ಬಹಿರಂಗವಾಗಿದೆ.

    ಟ್ರಾಫಿಕ್ ರೂಲ್ಸ್ ಫಾಲೋ ಮಾಡುವ ವಿಚಾರದಲ್ಲಿ ಕೇವಲ ಇವರಿಗಷ್ಟೇ ಉದಾಸೀನ ಇಲ್ಲ. ಉಳಿದ ರಾಜಕಾರಣಿಗಳು ಸಹ ರೂಲ್ಸ್ ಬ್ರೇಕ್ ಮಾಡುವುದರಲ್ಲಿ ಮುಂದಿದ್ದಾರೆ. ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಸೇರಿದಂತೆ ಬಿಜೆಪಿ ಮುಖಂಡರು ಸೀಟ್ ಬೆಲ್ಟ್ ಧರಿಸುವುದಿಲ್ಲ. ಕ್ಯಾಮರಾ ಕಣ್ಣಿಗೆ ಕಂಡಿದ್ದು ಈ ನಾಯಕರು ಮಾತ್ರ ಆದರೆ, ಪ್ರತಿ ನಿತ್ಯ ಬಹುತೇಕ ರಾಜಕಾರಣಿಗಳು ಸೀಟ್ ಬೆಲ್ಟ್ ಧರಿಸದೆ, ಕಾರಿನಲ್ಲಿ ಪ್ರಯಾಣಿಸುತ್ತಾರೆ.