Tag: Second PU Result

  • ದ್ವಿತೀಯ ಪಿಯುಸಿ ಪರೀಕ್ಷೆ ರಿಸಲ್ಟ್: ಪಾಸಾದವರಿಗೆ ವಿಶ್ ಮಾಡಿ, ಫೇಲ್ ಆದವರಿಗೆ ಧೈರ್ಯ ತುಂಬಿದ ಸಿಎಂ

    ದ್ವಿತೀಯ ಪಿಯುಸಿ ಪರೀಕ್ಷೆ ರಿಸಲ್ಟ್: ಪಾಸಾದವರಿಗೆ ವಿಶ್ ಮಾಡಿ, ಫೇಲ್ ಆದವರಿಗೆ ಧೈರ್ಯ ತುಂಬಿದ ಸಿಎಂ

    ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆಗಳು. ಪರಿಶ್ರಮ ಮತ್ತು ನಿರಂತರ ಅಭ್ಯಾಸ ನಿಮ್ಮನ್ನು ಯಶಸ್ಸಿನ ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿ‌ ಎಂದು ಹಾರೈಸುತ್ತೇನೆ ಅಂತಾ ಸಿಎಂ ಸಿದ್ದರಾಮಯ್ಯ ವಿಶ್ ಮಾಡಿದ್ದಾರೆ.

    ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಮಕ್ಕಳು ನಿರಾಶೆ, ಆತಂಕಕ್ಕೆ ಒಳಗಾಗಿ ದುಡುಕಿನ ನಿರ್ಧಾರ ತೆಗೆದುಕೊಳ್ಳುವುದು ಬೇಡ. ಬದುಕು ದೊಡ್ಡದು, ಮತ್ತೆ ಪರೀಕ್ಷೆ ಎದುರಿಸಿ ಹೆಚ್ಚಿನ ಅಂಕದ ಜೊತೆಗೆ ಪಾಸಾಗುವ ಅವಕಾಶ ಖಂಡಿತಾ ಸಿಗಲಿದೆ. ಹತಾಶೆಯ ಕೈಗೆ ಬುದ್ದಿ ಕೊಡದೆ ಸಂಯಮದಿಂದ ವರ್ತಿಸಿ ಎಂದು ಟ್ವೀಟ್ ಮೂಲಕ ಸ್ಥೈರ್ಯ ತುಂಬಿದ್ದಾರೆ.

    ವಿವಿಧ ವಿಭಾಗಗಳಲ್ಲಿ ರ‍್ಯಾಂಕ್ ಪಡೆದಿರುವ ಎಲ್.ಆರ್.ಸಂಜನಾ ಬಾಯಿ, ಅಮೂಲ್ಯ ಕಾಮತ್, ದೀಕ್ಷಾ.ಆರ್ ಹಾಗೂ ದೀಪಶ್ರೀ ಈ ನಾಲ್ವರು ಹೆಣ್ಣುಮಕ್ಕಳಿಗೆ ಹೃದಯಪೂರ್ವಕ ಅಭಿನಂದನೆಗಳು. ನಿಮ್ಮ ಸಾಧನೆ ಇತರರಿಗೆ ಸ್ಫೂರ್ತಿಯಾಗಲಿ ಎಂದಿದ್ದಾರೆ ಸಿಎಂ.

  • ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ದಕ್ಷಿಣ ಕನ್ನಡ ನಂ.1 – ಬಾಲಕಿಯರೇ ಮೇಲುಗೈ

    ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ದಕ್ಷಿಣ ಕನ್ನಡ ನಂ.1 – ಬಾಲಕಿಯರೇ ಮೇಲುಗೈ

    – ಶೇ. 81.15 ಫಲಿತಾಂಶ; ಗದಗ ಜಿಲ್ಲೆಗೆ ಕೊನೆ ಸ್ಥಾನ

    ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ.81.15 ಫಲಿತಾಂಶ ಬಂದಿದೆ. ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

    ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ 5,52,690 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅವರ ಪೈಕಿ ಬಾಲಕಿಯರು 3,05,212 (84.87%) ಹಾಗೂ ಬಾಲಕರು 2,47,478 (76.98%) ಮಂದಿ ಪಾಸ್‌ ಆಗಿದ್ದಾರೆ. ಕಳೆದ ವರ್ಷಕ್ಕಿಂತ 6.48% ಹೆಚ್ಚಿನ ಫಲಿತಾಂಶ ಬಂದಿದೆ. ಇದನ್ನೂ ಓದಿ: ಲೋಕ ಸಮರ ಗೆಲ್ಲೋಕೆ ರಣತಂತ್ರ- ಹೊಸತೊಡಕು ನೆಪದಲ್ಲಿ ಹೆಚ್‍ಡಿಕೆ ತೋಟದ ಮನೆಯಲ್ಲಿ ಸಭೆ

    ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 97.37% ನೊಂದಿಗೆ ರಾಜ್ಯಕ್ಕೇ ಪ್ರಥಮ ಸ್ಥಾನದಲ್ಲಿದೆ. ಉಡುಪಿ – 96.80% ನೊಂದಿಗೆ ದ್ವಿತೀಯ, ವಿಜಯಪುರ – 94.89% ನೊಂದಿಗೆ ತೃತೀಯ ಸ್ಥಾನ ಪಡೆದಿದೆ. ಗದಗ ಜಿಲ್ಲೆ 72.86% ನೊಂದಿಗೆ ಕೊನೆ ಸ್ಥಾನದಲ್ಲಿದೆ.

    ವಿದ್ಯಾರ್ಥಿಗಳು ಮತ್ತು ಪೋಷಕರು ‌ ಶಿಕ್ಷಣ ಇಲಾಖೆಯ ವೆಬ್‌ಸೈಟ್‌ www.karresultsnic.in ಭೇಟಿ ನೀಡಿ ಫಲಿತಾಂಶವನ್ನು ವೀಕ್ಷಿಸಬಹುದು.

  • ದ್ವಿತೀಯ ಪಿಯು ಫಲಿತಾಂಶಕ್ಕೆ ಹೈಕೋರ್ಟ್ ತಡೆ

    ದ್ವಿತೀಯ ಪಿಯು ಫಲಿತಾಂಶಕ್ಕೆ ಹೈಕೋರ್ಟ್ ತಡೆ

    ಬೆಂಗಳೂರು: ರಾಜ್ಯ ಹೈಕೋರ್ಟ್ ದ್ವಿತೀಯ ಪಿಯುಸಿ ಫಲಿತಾಂಶಕ್ಕೆ ತಾತ್ಕಾಲಿಕವಾಗಿ ತಡೆ ನೀಡಿದೆ

    ಕೊರೊನಾ ರಣಾರ್ಭಟ ಹಿನ್ನೆಲೆಯಲ್ಲಿ ಪರೀಕ್ಷೆ ಇಲ್ಲದೆ ದ್ವಿತೀಯ ಪಿಯು ವಿದ್ಯಾರ್ಥಿಗಳು ಪಾಸ್ ಅಂತ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಆದರೆ ರಿಪೀಟರ್ಸ್ ಅಂದ್ರೆ ಈಗಾಗಲೇ ಫೇಲ್ ಆಗಿರೋ ವಿದ್ಯಾರ್ಥಿಗಳನ್ನು ಪರೀಕ್ಷೆ ಮಾಡಿಯೇ ಪಾಸ್ ಮಾಡಲು ನಿರ್ಧರಿಸಿದೆ. ಸರ್ಕಾರದ ಈ ದ್ವಂದ್ವ ನಿರ್ಧಾರಕ್ಕೆ ರಾಜ್ಯ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ.

    ರಿಪೀಟರ್ಸ್ ಪರವಾಗಿ ದಾಖಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಪರೀಕ್ಷೆ ಇಲ್ಲದೇ ಪಾಸ್ ಮಾಡೋದಾದರೆ ಎಲ್ಲರನ್ನು ಪಾಸ್ ಮಾಡಿ. ಕೇವಲ ರೆಗ್ಯೂಲರ್ ವಿದ್ಯಾರ್ಥಿಗಳನ್ನು ಪಾಸ್ ಮಾಡಿ, ರಿಪೀಟರ್ಸ್ ಗೆ ಪರೀಕ್ಷೆ ಮಾಡುವ ನಿರ್ಧಾರ ಸರಿಯಲ್ಲ. ಗುರುವಾರದವರೆಗೆ ಪಿಯು ಫಲಿತಾಂಶ ಪ್ರಕಟಿಸುವಂತಿಲ್ಲ. ಈ ಬಗ್ಗೆ ಗುರುವಾರದೊಳಗೆ ಸ್ಪಷ್ಟನೆ ನೀಡಿ ಎಂದು ಅಡ್ವೋಕೇಟ್ ಜನೆರಲ್‍ಗೆ ಹೈಕೋರ್ಟ್ ಸೂಚನೆ ನೀಡಿದೆ. ಅಲ್ಲಿಯವರೆಗೂ ಫಲಿತಾಂಶ ಪ್ರಕಟಿಸಬಾರದು ಎಂದು ಕೋರ್ಟ್ ಸ್ಪಷ್ಟವಾಗಿ ತಿಳಿಸಿದೆ.

    ಇದೇ ಗುರುವಾರ ಮತ್ತೆ ಅರ್ಜಿ ವಿಚಾರಣೆ ನಡೆಯಲಿದೆ. ಸರ್ಕಾರ ಎಲ್ಲರನ್ನೂ ಒಂದೇ ತಕ್ಕಡಿಗೆ ಹಾಕಿ ಪಾಸ್ ಮಾಡುವ ನಿರ್ಧಾರ ಕೈಗೊಳ್ಳುತ್ತಾ..? ಇಲ್ಲ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಳ್ಳುತ್ತಾ ಎಂಬ ಕುತೂಹಲ ಮನೆ ಮಾಡಿದೆ.