Tag: second puc

  • ಕಲಾ ವಿಭಾಗದಲ್ಲಿ ಲಾರಿ ಡ್ರೈವರ್ ಮಗಳು ರಾಜ್ಯಕ್ಕೆ ಪ್ರಥಮ – 597 ಅಂಕ ಪಡೆದ ಸಂಜನಾಬಾಯಿ

    ಕಲಾ ವಿಭಾಗದಲ್ಲಿ ಲಾರಿ ಡ್ರೈವರ್ ಮಗಳು ರಾಜ್ಯಕ್ಕೆ ಪ್ರಥಮ – 597 ಅಂಕ ಪಡೆದ ಸಂಜನಾಬಾಯಿ

    – ಕೆ.ನಿರ್ಮಲಾ ದ್ವಿತೀಯ ಸ್ಥಾನ

    ವಿಜಯನಗರ: ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ ದ್ವಿತೀಯ ಪಿಯುಸಿ ಫಲಿತಾಂಶ (Second PUC Result) ಪ್ರಕಟವಾಗಿದ್ದು, ಕಲಾ ವಿಭಾಗದಲ್ಲಿ ವಿಜಯನಗರ (Vijayanagara) ಜಿಲ್ಲೆಯ ಸಂಜನಾಬಾಯಿ ಪ್ರಥಮ ಸ್ಥಾನಗಳಿಸಿದ್ದಾರೆ.

    600ಕ್ಕೆ 597 ಅಂಕ ಪಡೆಯುವ ಮೂಲಕ ಸಂಜನಾಬಾಯಿ ಕಲಾ ವಿಭಾಗದದಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ಸಂಜನಾ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಇಂದು ಪಿಯು ಕಾಲೇಜ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಸಂಜನಾ ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿಯ ಗುಂಡಾ ಸ್ಟೇಷನ್ ಗ್ರಾಮದವರಾಗಿದ್ದು, ತಂದೆ ಲಾರಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದಾರೆ. ಇದನ್ನೂ ಓದಿ: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – ಉಡುಪಿ ಫಸ್ಟ್‌, ದಕ್ಷಿಣ ಕನ್ನಡ ಸೆಕೆಂಡ್‌

    ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಕೆ.ನಿರ್ಮಲಾ ದ್ವಿತೀಯ ಸ್ಥಾನ ಪಡೆದಿದ್ದಾರೆ. ನಿರ್ಮಲಾ ವಿಜಯನಗರ ಜಿಲ್ಲೆಯ ಇಟಗಿಯ ಪಂಚಮಸಾಲಿ ಪಿಯು ಕಾಲೇಜಿನ ವಿದ್ಯಾರ್ಥಿನಿ. ನಿರ್ಮಲಾ 600ಕ್ಕೆ 596 ಅಂಕ ಪಡೆದಿದ್ದಾರೆ.‌ ಇದನ್ನೂ ಓದಿ: ಸಿಂಗಾಪುರ ಶಾಲೆಯಲ್ಲಿ ಬೆಂಕಿ ಅವಘಡ – ಪವನ್ ಕಲ್ಯಾಣ್ ಕಿರಿಯ ಪುತ್ರನಿಗೆ ಗಂಭೀರ ಗಾಯ

  • ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ದಕ್ಷಿಣ ಕನ್ನಡ ನಂ.1 – ಬಾಲಕಿಯರೇ ಮೇಲುಗೈ

    ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ದಕ್ಷಿಣ ಕನ್ನಡ ನಂ.1 – ಬಾಲಕಿಯರೇ ಮೇಲುಗೈ

    – ಶೇ. 81.15 ಫಲಿತಾಂಶ; ಗದಗ ಜಿಲ್ಲೆಗೆ ಕೊನೆ ಸ್ಥಾನ

    ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ.81.15 ಫಲಿತಾಂಶ ಬಂದಿದೆ. ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

    ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ 5,52,690 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅವರ ಪೈಕಿ ಬಾಲಕಿಯರು 3,05,212 (84.87%) ಹಾಗೂ ಬಾಲಕರು 2,47,478 (76.98%) ಮಂದಿ ಪಾಸ್‌ ಆಗಿದ್ದಾರೆ. ಕಳೆದ ವರ್ಷಕ್ಕಿಂತ 6.48% ಹೆಚ್ಚಿನ ಫಲಿತಾಂಶ ಬಂದಿದೆ. ಇದನ್ನೂ ಓದಿ: ಲೋಕ ಸಮರ ಗೆಲ್ಲೋಕೆ ರಣತಂತ್ರ- ಹೊಸತೊಡಕು ನೆಪದಲ್ಲಿ ಹೆಚ್‍ಡಿಕೆ ತೋಟದ ಮನೆಯಲ್ಲಿ ಸಭೆ

    ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 97.37% ನೊಂದಿಗೆ ರಾಜ್ಯಕ್ಕೇ ಪ್ರಥಮ ಸ್ಥಾನದಲ್ಲಿದೆ. ಉಡುಪಿ – 96.80% ನೊಂದಿಗೆ ದ್ವಿತೀಯ, ವಿಜಯಪುರ – 94.89% ನೊಂದಿಗೆ ತೃತೀಯ ಸ್ಥಾನ ಪಡೆದಿದೆ. ಗದಗ ಜಿಲ್ಲೆ 72.86% ನೊಂದಿಗೆ ಕೊನೆ ಸ್ಥಾನದಲ್ಲಿದೆ.

    ವಿದ್ಯಾರ್ಥಿಗಳು ಮತ್ತು ಪೋಷಕರು ‌ ಶಿಕ್ಷಣ ಇಲಾಖೆಯ ವೆಬ್‌ಸೈಟ್‌ www.karresultsnic.in ಭೇಟಿ ನೀಡಿ ಫಲಿತಾಂಶವನ್ನು ವೀಕ್ಷಿಸಬಹುದು.

  • ಬುಧವಾರ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ

    ಬುಧವಾರ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ

    ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ (Second PUC Exam Result) ಬುಧವಾರ ಪ್ರಕಟವಾಗಲಿದೆ. ನಾಳೆ ಬೆಳಗ್ಗೆ 10 ಗಂಟೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳಿಂದ ಸುದ್ದಿಗೋಷ್ಠಿ ನಡೆಸಿದ ಬಳಿಕ ವೆಬ್‌ಸೈಟ್‌ನಲ್ಲಿ ಫಲಿತಾಂಶ  ಪ್ರಕಟವಾಗಲಿದೆ.

    ರಾಜ್ಯಾದ್ಯಂತ ಈ ಬಾರಿ 1,124 ಕೇಂದ್ರಗಳಲ್ಲಿ 6.98 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.  2023-24 ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿಯಲ್ಲಿ ಇರುತ್ತದೆ. ವಿದ್ಯಾರ್ಥಿಗಳು ಲಿಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆಯುತ್ತಾರೆ. ಇನ್ನು ಉಳಿದ 20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತದೆ.

    ವಿದ್ಯಾರ್ಥಿಗಳು ಮತ್ತು ಪೋಷಕರು ‌ ಶಿಕ್ಷಣ ಇಲಾಖೆಯ ವೆಬ್‌ಸೈಟ್‌ www.karresultsnic.in ಭೇಟಿ ನೀಡಿ ಫಲಿತಾಂಶವನ್ನು ವೀಕ್ಷಿಸಬಹುದು.

  • ದ್ವಿತೀಯ ಪಿಯುಸಿ ಪೂರಕ‌ ಪರೀಕ್ಷೆ ಫಲಿತಾಂಶ ಪ್ರಕಟ – ಬಾಲಕಿಯರೇ ಮೇಲುಗೈ

    ದ್ವಿತೀಯ ಪಿಯುಸಿ ಪೂರಕ‌ ಪರೀಕ್ಷೆ ಫಲಿತಾಂಶ ಪ್ರಕಟ – ಬಾಲಕಿಯರೇ ಮೇಲುಗೈ

    ಬೆಂಗಳೂರು : ಮೇ- ಜೂನ್ ನಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ (2nd PUC Supplementary Result) ಪ್ರಕಟಗೊಂಡಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಫಲಿತಾಂಶ ಪ್ರಕಟಗೊಂಡಿದೆ. ಮುಖ್ಯ ಪರೀಕ್ಷೆಯಂತೆ ಪೂರಕ ಪರೀಕ್ಷೆಯಲ್ಲೂ ಬಾಲಕಿಯರೇ‌ ಮೇಲುಗೈ ಸಾಧಿಸಿದ್ದಾರೆ‌

    ಇಲಾಖೆ ವೆಬ್ ಸೈಟ್‌ನಲ್ಲಿ ‌ಫಲಿತಾಂಶ ಲಭ್ಯವಿದೆ. ಪೂರಕ ಪರೀಕ್ಷೆಯಲ್ಲಿ 1,57,756 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇದರಲ್ಲಿ 50,478 ವಿದ್ಯಾರ್ಥಿಗಳು ಪಾಸ್ ಆಗಿದ್ದು, ರಾಜ್ಯದಲ್ಲಿ 32% ಫಲಿತಾಂಶ ದಾಖಲಾಗಿದೆ. ಪರೀಕ್ಷೆ ಬರೆದವರ ಪೈಕಿ 28,901 ಬಾಲಕರು (30.22%) ಹಾಗೂ 21,577 ಬಾಲಕಿಯರು (34.75%) ತೇರ್ಗಡೆಯಾಗಿದ್ದಾರೆ. ಇದನ್ನೂ ಓದಿ: ಛತ್ತೀಸ್‌ಗಢದ ಮಾವಿನ ಮೇಳದಲ್ಲಿ ವಿಶ್ವದ ದುಬಾರಿ ಮಾವಿನ ಪ್ರದರ್ಶನ- ಕೆ.ಜಿಗೆ 2.70 ಲಕ್ಷ ರೂ.

    ಉತ್ತರ ಪತ್ರಿಕೆ ಸ್ಕ್ಯಾನಿಂಗ್ ಪಡೆಯಲು ಜೂನ್ 26 ಕೊನೆ ದಿನವಾಗಿದೆ. ಮರು ಮೌಲ್ಯಮಾಪನ, ಮರು ಎಣಿಕೆಗೆ ಅರ್ಜಿ ಸಲ್ಲಿಕೆಗೆ ಜೂನ್ 30 ಕೊನೆಯ ದಿನವಾಗಿದೆ.

    ಪರೀಕ್ಷೆಯ ಫಲಿತಾಂಶದ ವೆಬ್‌ಸೈಟ್‌ ವೀಕ್ಷಿಸಲು ಕ್ಲಿಕ್‌ ಮಾಡಿ: Karnataka 2nd PUC supplementary result

  • 2nd PUC Result: ವಾಣಿಜ್ಯ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ಅನನ್ಯಾ ರಾಜ್ಯಕ್ಕೆ ಪ್ರಥಮ ಸ್ಥಾನ

    2nd PUC Result: ವಾಣಿಜ್ಯ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ಅನನ್ಯಾ ರಾಜ್ಯಕ್ಕೆ ಪ್ರಥಮ ಸ್ಥಾನ

    ಬೆಂಗಳೂರು: ದ್ವಿತೀಯ ಪಿಯುಸಿ (2nd PUC) ಪರೀಕ್ಷೆಯ ಫಲಿತಾಂಶ (Result) ಪ್ರಕಟವಾಗಿದ್ದು, ವಾಣಿಜ್ಯ (Commerce) ವಿಭಾಗದಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ಅನನ್ಯಾ ಕೆ. ಎ 600 ಅಂಕಗಳನ್ನು ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.

    ಕಳೆದ ಮಾರ್ಚ್ 9 ರಿಂದ 29ರವರೆಗೆ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಶುಕ್ರವಾರ ಪ್ರಕಟವಾಗಿದೆ. ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೀಶ್ ಸಿಂಗ್ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು. ದಕ್ಷಿಣ ಕನ್ನಡ ಮೊದಲ ಸ್ಥಾನ (95.33%) ಉಡುಪಿಗೆ ಎರಡನೇ ಸ್ಥಾನ( 95.24%) ಕೊಡಗಿಗೆ 3ನೇ ಸ್ಥಾನ (90.55%) ಸಿಕ್ಕಿದರೆ ಯಾದಗಿರಿಗೆ (78.97%) ಕೊನೆಯ ಸ್ಥಾನ ಸಿಕ್ಕಿದೆ. ಇನ್ನುಳಿದಂತೆ ವಾಣಿಜ್ಯ ವಿಭಾಗದಲ್ಲಿ ಮೊದಲ 10 ಸ್ಥಾನ ಪಡೆದ ವಿದ್ಯಾರ್ಥಿಗಳ ವಿವರ ಈ ರೀತಿ ಇದೆ. ಇದನ್ನೂ ಓದಿ: ಪಿಯು ಪರೀಕ್ಷಾ ಫಲಿತಾಂಶ – ದಕ್ಷಿಣ ಕನ್ನಡ ಫಸ್ಟ್‌, ಉಡುಪಿ ಸೆಕೆಂಡ್‌

    600 ಅಂಕ ಪಡೆದ ವಿದ್ಯಾರ್ಥಿ:

    ಅನನ್ಯಾ ಕೆ.ಎ 600 ಅಂಕ, ಆಳ್ವಾಸ್ ಕಾಲೇಜು ಮೂಡುಬಿದಿರೆ, ದಕ್ಷಿಣ ಕನ್ನಡ

    596 ಅಂಕ ಪಡೆದ ವಿದ್ಯಾರ್ಥಿಗಳು:

    ಅನ್ವಿತಾ ಡಿ.ಎನ್‌, 596 ಅಂಕ, ವಿಕಾಸ್ ಕಂಪ್ ಪಿಯು ಕಾಲೇಜು ಶಿವಮೊಗ್ಗ

    ಛಾಯಾ ರವಿ ಕುಮಾರ್‌, 596 ಅಂಕ, ಟ್ರಾನ್ಸೆಂಡ್ ಪಿಯು ಕಾಲೇಜು, ಜಯನಗರ ಬೆಂಗಳೂರು

    ಖುಷಿ ಬಾಗಲಕೋಟ್‌, 596 ಅಂಕ, ಎಕ್ಸ್‌ಲೆಂಟ್‌ ಪಿಯು ಕಾಲೇಜು ಮೂಡುಬಿದಿರೆ

    ಸ್ವಾತಿ ಪೈ 596 ಅಂಕ, ವಿಕಾಸ್‌ ಪಿಯು ಕಾಲೇಜು ಮಂಗಳೂರು

    ಧನ್ಯಶ್ರೀ ರಾವ್‌, 596 ಅಂಕ, ಕ್ರೈಸ್ಟ್ ಪಿಯು ಕಾಲೇಜು, ಬೆಂಗಳೂರು

    ವರ್ಷಾ ಸತ್ಯನಾರಾಯಣ್‌, 596 ಅಂಕ, ಟ್ರಾನ್ಸೆಂಡ್ ಪಿಯು ಕಾಲೇಜು ಜಯನಗರ, ಬೆಂಗಳೂರು

    ಕೆ. ದಿಶಾ ರಾವ್‌, 596 ಅಂಕ, ಆಳ್ವಾಸ್ ಕಾಲೇಜ್‌ ಮೂಡುಬಿದಿರೆ

    ಇಂಚರಾ ಎನ್‌, 596 ಅಂಕ, ಎಎಸ್‌ಸಿ ಪಿಯು ಕಾಲೇಜ್‌, ಬೆಂಗಳೂರು

    ಗಾನ ಐ 596 ಅಂಕ ಕ್ರೈಸ್ಟ್ ಪಿಯು ಕಾಲೇಜ್‌, ಬೆಂಗಳೂರು.

  • ಪಿಯು ಪರೀಕ್ಷಾ ಫಲಿತಾಂಶ – ದಕ್ಷಿಣ ಕನ್ನಡ ಫಸ್ಟ್‌, ಉಡುಪಿ ಸೆಕೆಂಡ್‌

    ಪಿಯು ಪರೀಕ್ಷಾ ಫಲಿತಾಂಶ – ದಕ್ಷಿಣ ಕನ್ನಡ ಫಸ್ಟ್‌, ಉಡುಪಿ ಸೆಕೆಂಡ್‌

    ಬೆಂಗಳೂರು: ಕಳೆದ ಮಾರ್ಚ್ 9 ರಿಂದ 29ರ ವರೆಗೆ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಶುಕ್ರವಾರ ಪ್ರಕಟವಾಗಿದೆ.

    ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೀಶ್ ಸಿಂಗ್ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು. 7,02,067 ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದು 5,24,209 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಈ ಬಾರಿ 74.67% ಫಲಿತಾಂಶ ದಾಖಲಾಗಿದೆ.

    ದಕ್ಷಿಣ ಕನ್ನಡ ಮೊದಲ ಸ್ಥಾನ (95.33%) ಉಡುಪಿಗೆ ಎರಡನೇ ಸ್ಥಾನ( 95.24%) ಕೊಡಗಿಗೆ 3ನೇ ಸ್ಥಾನ (90.55%) ಸಿಕ್ಕಿದರೆ ಯಾದಗಿರಿಗೆ (78.97%) ಕೊನೆಯ ಸ್ಥಾನ ಸಿಕ್ಕಿದೆ.

    ಎಂದಿನಂತೆ ಬಾಲಕೀಯರೇ ಮೇಲುಗೈ ಸಾಧಿಸಿದ್ದು 80.25% ಪಾಸ್ ಆಗಿದ್ದರೆ ಬಾಲಕರು 69.05% ಪಾಸ್‌ ಆಗಿದ್ದಾರೆ. ಗ್ರಾಮೀಣ ಭಾಗದ 74.79% ಮಕ್ಕಳು ತೇರ್ಗಡೆಯಾಗಿದ್ದರೆ 74.63% ನಗರ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

    ಯಾವ ದರ್ಜೆಯಲ್ಲಿ ಎಷ್ಟು ವಿದ್ಯಾರ್ಥಿಗಳು ಪಾಸ್‌?
    ಡಿಸ್ಟಿಂಕ್ಷನ್‌ – 1,09,509
    ಪ್ರಥಮ ದರ್ಜೆ – 2,47,315
    ದ್ವಿತೀಯ ದರ್ಜೆ – 90,014
    ತೃತೀಯ ದರ್ಜೆ – 77,371

    ಕಲಾ ವಿಭಾಗದಲ್ಲಿ 2,20,305 ವಿದ್ಯಾರ್ಥಿಗಳ ಪೈಕಿ 1,34,876 ವಿದ್ಯಾರ್ಥಿಗಳು ತೇರ್ಗಡೆಯಾಗಿ 61.22% ಫಲಿತಾಂಶ ದಾಖಲಾಗಿದೆ. ವಾಣಿಜ್ಯ ವಿಭಾಗದಲ್ಲಿ 2,40,146 ವಿದ್ಯಾರ್ಥಿಗಳ ಪೈಕಿ 1,82,246 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು 75.89% ಫಲಿತಾಂಶ ದಾಖಲಾಗಿದೆ. ವಿಜ್ಞಾನ ವಿಭಾಗದಲ್ಲಿ 2,41,616 ವಿದ್ಯಾರ್ಥಿಗಳ ಪೈಕಿ 2,07,087 ವಿದ್ಯಾರ್ಥಿಗಳು ಪಾಸ್‌ ಆಗಿ 85.71% ಫಲಿತಾಂಶ ದಾಖಲಾಗಿದೆ.

    ಉತ್ತರ ಪತ್ರಿಕೆ ಸ್ಕ್ಯಾನಿಂಗ್ ಪಡೆಯಲು ಏಪ್ರಿಲ್ 27 ಕೊನೆ ದಿನವಾಗಿದ್ದು ಮರು ಮೌಲ್ಯ ಮಾಪನ, ಮರು‌ ಎಣಿಕೆಗೆ ಅರ್ಜಿ ಸಲ್ಲಿಕೆಗೆ ಮೇ 8 ಕೊನೆ ದಿನವಾಗಿದೆ.

  • ಪಿಯು ಮರು ಮೌಲ್ಯಮಾಪನದಲ್ಲಿ ಒಂದು ಅಂಕ ಹೆಚ್ಚು ಬಂದರೂ ಪರಿಗಣನೆ

    ಪಿಯು ಮರು ಮೌಲ್ಯಮಾಪನದಲ್ಲಿ ಒಂದು ಅಂಕ ಹೆಚ್ಚು ಬಂದರೂ ಪರಿಗಣನೆ

    ಬೆಂಗಳೂರು: ದ್ವಿತೀಯ ಪಿಯುಸಿ (Second PUC) ಮರು ಮೌಲ್ಯಮಾಪನ (Revaluation) ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಯನ್ನು ರಾಜ್ಯ ಸರ್ಕಾರ (Karnataka Government) ಮತ್ತು ಶಿಕ್ಷಣ ಇಲಾಖೆ ಮಾಡಿದೆ.

    ಇನ್ನು ಮುಂದೆ ಮರು ಮೌಲ್ಯಮಾಪನದಲ್ಲಿ ಒಂದು ಅಂಕ ಹೆಚ್ಚು ಬಂದರೂ ಅದನ್ನು ವಿದ್ಯಾರ್ಥಿಗಳ ಅಂಕಕ್ಕೆ ಪರಿಗಣನೆ ಮಾಡಲು ಸರ್ಕಾರ ನಿರ್ಧಾರ ಮಾಡಿದೆ. 2023ರ ಪರೀಕ್ಷೆಯಿಂದಲೇ ಈ ನಿಯಮ ಜಾರಿ ಬರಲಿದೆ. ಇದನ್ನೂ ಓದಿ: ಕ್ರಶ್ ಮದುವೆ ಆಗಿದ್ದಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಬೇಸರ ಹೊರಹಾಕಿದ ಸುದೀಪ್ ಪುತ್ರಿ

     

    ಇಲ್ಲಿಯವರೆಗೆ ಮರು ಮೌಲ್ಯಮಾಪನದಲ್ಲಿ ಕನಿಷ್ಠ 6 ಅಂಕ ಬಂದರೆ ಮಾತ್ರ ವಿದ್ಯಾರ್ಥಿಗಳ ಅಂಕಕ್ಕೆ ಪರಿಗಣನೆ ಮಾಡಲಾಗುತ್ತಿತ್ತು. ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಇನ್ನು ಮುಂದೆ ಒಂದು ಅಂಕ ಬಂದರೂ ಅದನ್ನು ಸೇರ್ಪಡೆ ಮಾಡಲು ಸರ್ಕಾರ ನಿರ್ಧಾರ ಮಾಡಿದೆ.

    ಈ ಸಂಬಂಧ ಕರ್ನಾಟಕ ಪದವಿಪೂರ್ವ ಶಿಕ್ಷಣ ರಾಜ್ಯ ಮಟ್ಟದ ಪಬ್ಲಿಕ್ ಪರೀಕ್ಷೆ ನಿಯಮ 1997 ನಿಯಮಕ್ಕೆ ತಿದ್ದುಪಡಿ ತರಲು ಶಿಕ್ಷಣ ಇಲಾಖೆ ಮುಂದಾಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ದ್ವಿತೀಯ PUC ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

    ದ್ವಿತೀಯ PUC ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

    ಬೆಂಗಳೂರು: 2021-22ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದೆ.

    ಆಗಸ್ಟ್‌ 12ರಿಂದ 25ರ ವರೆಗೆ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ವೇಳಾಪಟ್ಟಿಯನ್ನು https://pue.karnataka.gov.in ಅಂತರ್ಜಾಲದಲ್ಲಿ ವೀಕ್ಷಿಸಬಹುದು. ಇದನ್ನೂ ಓದಿ: ಬಡವರ ಉದ್ಧಾರಕ್ಕಾಗಿ ಅಲ್ಲ, ರಾಜಕೀಯ ಲಾಭಕ್ಕಾಗಿ ಸಿದ್ದರಾಮಯ್ಯೋತ್ಸವ: ಹಾಲಪ್ಪ ಕಿಡಿ

    ಪರೀಕ್ಷಾ ವೇಳಾಪಟ್ಟಿ ಹೀಗಿದೆ..
    ಕನ್ನಡ, ಅರೇಬಿಕ್ – ಆ.12
    ಭೂಗೋಳಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ – ಆ.13
    ಹಿಂದಿ – ಆ.16
    ಐಚ್ಛಿಕ ಕನ್ನಡ, ರಸಾಯನಶಾಸ್ತ್ರ, ಮೂಲ ಗಣಿತ – ಆ.17
    ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ – ಆ.18
    ರಾಜ್ಯಶಾಸ್ತ್ರ, ಗಣಿತ ಶಾಸ್ತ್ರ – ಆ.19
    ತರ್ಕಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ – ಆ.20
    ಇಂಗ್ಲಿಷ್‌ – ಆ.22
    ಅರ್ಥಶಾಸ್ತ್ರ, ಜೀವಶಾಸ್ತ್ರ – ಆ.23
    ಇತಿಹಾಸ, ಸಂಖ್ಯಾಶಾಸ್ತ್ರ – ಆ.24
    ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ – ಆ.25

    Live Tv
    [brid partner=56869869 player=32851 video=960834 autoplay=true]

  • ಹುಬ್ಬಳ್ಳಿ ಗಲಭೆ ಪ್ರಮುಖ ಆರೋಪಿ ಪೊಲೀಸ್ ಭದ್ರತೆಯಲ್ಲಿ ಪರೀಕ್ಷೆಗೆ ಹಾಜರ್

    ಹುಬ್ಬಳ್ಳಿ ಗಲಭೆ ಪ್ರಮುಖ ಆರೋಪಿ ಪೊಲೀಸ್ ಭದ್ರತೆಯಲ್ಲಿ ಪರೀಕ್ಷೆಗೆ ಹಾಜರ್

    ಹುಬ್ಬಳ್ಳಿ: ಹುಬ್ಬಳ್ಳಿ ಗಲಭೆಯ ಪ್ರಮುಖ ಆರೋಪಿಯಾಗಿರುವ ಅಭಿಷೇಕ್ ಹಿರೇಮಠ್ ಶುಕ್ರವಾರ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿದ್ದಾರೆ.

    ಶುಕ್ರವಾರ ಬೆಳಗ್ಗೆ 10:15ಕ್ಕೆ ದ್ವಿತೀಯ ಪಿಯುಸಿಯ ಮೊದಲ ಪರೀಕ್ಷೆ ಎದುರಿಸಲಿರುವ ಅಭಿಷೇಕ್ ಪೊಲೀಸ್ ಭದ್ರತೆಯಲ್ಲಿ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ್ದಾನೆ. ಕಾಮರ್ಸ್ ವಿದ್ಯಾರ್ಥಿಯಾಗಿರುವ ಅಭಿಷೇಕ್ ಮಹೇಶ್ ಪಿಯು ಕಾಲೇಜಿನಲ್ಲಿ ಬಿಸಿನೆಸ್ ಸ್ಟಡೀಸ್ ಪರೀಕ್ಷೆ ಬರೆಯಲಿದ್ದಾನೆ. ಇದನ್ನೂ ಓದಿ: ಕೊನೆ ಕ್ಷಣದಲ್ಲಿ ಹಾಲ್ ಟಿಕೆಟ್ ಪಡೆದು ಪರೀಕ್ಷಾ ಕೇಂದ್ರಕ್ಕೆ ಹಾಜರಾದ ಹಿಜಬ್‌ ಹೋರಾಟಗಾರ್ತಿಯರು

    ಹುಬ್ಬಳ್ಳಿಯಲ್ಲಿ ನಡೆದ ಗಲಭೆಯ ಪ್ರಮುಖ ಆರೋಪಿಯಾಗಿರುವ ಅಭಿಷೇಕ್ ಅಶೋಕನಗರದ ಉಪ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ. ಪರೀಕ್ಷೆ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದ ಮೇರೆಗೆ ಪೊಲೀಸ್ ಭದ್ರತೆಯಲ್ಲಿ ಪರೀಕ್ಷೆ ಬರೆಯಲಿದ್ದಾನೆ. ಅಭಿಷೇಕ್‌ಗೆ ಪರೀಕ್ಷೆ ಬರೆಯಲು ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ಸುಪ್ರಭಾತ ಸೇವೆಗೆ ಅನುಮತಿ ನೀಡಿ- ಹಿಂದೂ ಮುಖಂಡರಿಂದ ಮತ್ತೊಂದು ಬೇಡಿಕೆ

     

  • ಪಿಯು ಬೋರ್ಡ್ ಎಡವಟ್ಟು- ವಿದ್ಯಾರ್ಥಿನಿ ಪಾಸ್ ಆದ್ರೂ ಫೇಲ್

    ಪಿಯು ಬೋರ್ಡ್ ಎಡವಟ್ಟು- ವಿದ್ಯಾರ್ಥಿನಿ ಪಾಸ್ ಆದ್ರೂ ಫೇಲ್

    ಕೊಪ್ಪಳ: ಪರೀಕ್ಷೆ ಬರೆಯದೇ ಪಾಸ್ ಆಗುವ ಸರ್ಕಾರದ ಆಫರ್ ತಿರಸ್ಕರಿಸಿದ್ದ ವಿದ್ಯಾರ್ಥಿನಿಯ ಭವಿಷ್ಯವೇ ಈಗ ಅತಂತ್ರವಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದ ಭೂಮಿಕಾ ಪಿಯು ಬೋರ್ಡ್ ಎಡವಟ್ಟಿನಿಂದ ಫೇಲ್ ಆಗಿದ್ದಾಳೆ.

    ವಿದ್ಯಾರ್ಥಿನಿ ಭೂಮಿಕಾ 40 ಅಂಕ ಪಡೆದಿದ್ದರೂ 4 ಅಂಕ ಕೊಟ್ಟು ಅನುತ್ತೀರ್ಣ ಮಾಡಿದ್ದಾರೆ. ಕೊರೊನಾ ವೈರಸ್ ಹಾಗೂ ಲಾಕ್‍ಡೌನ್ ಹಿನ್ನೆಲೆ ಈ ವರ್ಷ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ನಡೆಸದೇ ಎಲ್ಲ ವಿದ್ಯಾರ್ಥಿಗಳನ್ನು ಪಾಸ್ ಮಾಡಲು ಪಿಯು ಬೋರ್ಡ್ ತೀರ್ಮಾನಿಸಿತ್ತು. ಆದರೆ ಸರ್ಕಾರದ ಆಫರ್ ತಿರಸ್ಕರಿಸಿದ್ದ ಗಂಗಾವತಿಯ ವೆಂಕಟೇಶ್ವರ ಪಿಯು ಕಾಲೇಜಿನ ಭೂಮಿಕಾ ಪರೀಕ್ಷೆ ಬರೆದಿದ್ದಳು. ಇದನ್ನೂ ಓದಿ: ಸರ್ಕಾರದ ಜಸ್ಟ್ ಪಾಸ್ ಆಫರ್ ತಿರಸ್ಕರಿಸಿದ ವಿದ್ಯಾರ್ಥಿನಿ

    ರಾಸಾಯನ ಶಾಸ್ತ್ರದಲ್ಲಿ ಭೂಮಿಕಾ ಪಡೆದದ್ದು 40 ಅಂಕ ಪಿಯು ಬೋರ್ಡ್ ನ ಎಡವಟ್ಟಿನಿಂದ ವಿದ್ಯಾರ್ಥಿನಿಗೆ 4 ಅಂಕ ನೀಡಿ, ಅನುತ್ತೀರ್ಣ ಮಾಡಿದ್ದಾರೆ. ಹೀಗಾಗಿ ವಿದ್ಯಾರ್ಥಿನಿ ಮನನೊಂದು ಕೆಲ ದಿನ ಊಟ ನಿದ್ದೆ ಸಹ ಮಾಡದೆ ಹತಾಶೆಗೊಂಡಿದ್ದಳು. ಬಳಿಕ ಪಾಲಕರು ಪರೀಕ್ಷೆ ಬರೆದ ಉತ್ತರ ಪತ್ರಿಕೆ ಜೆರಾಕ್ಸ್ ಕಾಪಿ ತರಿಸಿ ನೋಡಿದಾಗ ಆಕೆ 40 ಅಂಕ ಪಡೆದಿರೋದು ಗೊತ್ತಾಗಿದೆ. ಇದನ್ನೂ ಓದಿ: ನಾವು ಸತ್ತ ಮೇಲೂ ನೀನು ನೆಮ್ಮದಿಯಾಗಿರಬಾರದು – ಶಂಕರ್‌ಗೆ ಮಗನದ್ದೇ ಖೆಡ್ಡಾ

    ಪಿಯು ಬೋರ್ಡ್ ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಭೂಮಿಕಾ ತಂದೆ ಚಂದ್ರಶೇಖರಗೌಡ ತಾವರಗೇರಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿನಿಯ ಶಿಕ್ಷಣದ ಭವಿಷ್ಯದ ದೃಷ್ಟಿಯಿಂದ ಕೂಡಲೇ ಪಿಯು ಬೋರ್ಡ್ ಮಾಡಿರುವ ತಪ್ಪನ್ನು ತಿದ್ದುಪಡಿ ಮಾಡಿ, ವಿದ್ಯಾರ್ಥಿನಿಗೆ ಮುಂದಿನ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡಬೇಕಾಗಿದೆ.