Tag: second puc

  • ಕೇಂದ್ರದಿಂದ ರಾಜ್ಯಗಳಿಗೆ 2 ಆಯ್ಕೆ – ಜುಲೈನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ?

    ಕೇಂದ್ರದಿಂದ ರಾಜ್ಯಗಳಿಗೆ 2 ಆಯ್ಕೆ – ಜುಲೈನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ?

    ಬೆಂಗಳೂರು: ಕೋವಿಡ್ 19ನಿಂದಾಗಿ ವಿದ್ಯಾರ್ಥಿ ಜೀವನದ ಟರ್ನಿಂಗ್ ಪಾಯಿಂಟ್ ಎನಿಸಿರುವ ದ್ವಿತೀಯ ಪಿಯುಸಿ ಪರೀಕ್ಷೆ ಈಗಾಗಲೇ ಮುಂದೂಡಲ್ಪಟ್ಟಿದೆ. ಅದು ಯಾವಾಗ ನಡೆಯಲಿದೆ ಎಂಬುದಕ್ಕೆ ಇನ್ನೂ ಉತ್ತರ ಸಿಕ್ಕಿಲ್ಲ. ಆದರೆ ಕರ್ನಾಟಕ ಸರ್ಕಾರ ಜುಲೈನಲ್ಲಿ ಪರೀಕ್ಷೆ ನಡೆಸಲು ಒಲವು ವ್ಯಕ್ತಪಡಿಸಿದೆ.

    ಭಾನುವಾರ ಕೇಂದ್ರ ಸರ್ಕಾರ ನಡೆಸಿದ ಸಿಬಿಎಸ್‍ಸಿ 12ನೇ ತರಗತಿಗಳ ಪರೀಕ್ಷೆ ನಿಗದಿ ಕುರಿತ ಸಭೆಯಲ್ಲಿ, ಸೋಂಕು ಇಳಿಕೆಯಾದ ಕೂಡಲೇ ಎಕ್ಸಾಂ ನಡೆಸಲು ಅವಕಾಶ ನೀಡಿ. ಒಂದ್ವೇಳೆ ಜುಲೈನಲ್ಲಿ ಪರೀಕ್ಷೆಗಳನ್ನು ಆಯೋಜಿಸಿದ್ರೆ ಆಗಸ್ಟ್ ನಲ್ಲಿ ಫಲಿತಾಂಶ ನೀಡಬಹುದು ಎಂದು ಸಚಿವ ಸುರೇಶ್ ಕುಮಾರ್ ತಮ್ಮ ಅಭಿಪ್ರಾಯ ಮಂಡಿಸಿದ್ದಾರೆ.

    ಸಭೆಯಲ್ಲಿ ಹಲವು ರಾಜ್ಯಗಳು ಕೊರೊನಾ ನಡುವೆ  ಎಕ್ಸಾಂ ನಡೆಸೋದು ಸರಿಯಲ್ಲ ಎಂದು ಆಕ್ಷೇಪ ಎತ್ತಿವೆ. ಆದರೂ, ಕೇಂದ್ರ ಕೂಡ ರಾಜ್ಯ ಸರ್ಕಾರಗಳಿಗೆ ಎರಡು ಆಯ್ಕೆ ನೀಡಿದೆ. ನಾಳೆಯೊಳಗೆ ನಿಮ್ಮ ಅಭಿಪ್ರಾಯ ತಿಳಿಸಿ. ಜೂನ್ ಒಂದಕ್ಕೆ ನಮ್ಮ ನಿರ್ಧಾರ ತಿಳಿಸುತ್ತೇವೆ ಎಂದಿದೆ.

    ಆಯ್ಕೆ 1
    ಮುಂದಿನ 3 ತಿಂಗಳಲ್ಲಿ ಪರೀಕ್ಷೆ ಪ್ರಕ್ರಿಯೆ ಪೂರ್ಣಗೊಳಿಸಿ, ಆಗಸ್ಟ್‍ನಲ್ಲಿ ಮುಖ್ಯ ವಿಷಯಗಳ ಪರೀಕ್ಷೆಯನ್ನಷ್ಟೇ ನಡೆಸುವುದು. ಸೆಪ್ಟೆಂಬರ್ ವೇಳೆಗೆ ಫಲಿತಾಂಶ ನೀಡುವುದು. ಪರೀಕ್ಷೆ ದಿನಾಂಕ ನಿಗದಿಯನ್ನು ರಾಜ್ಯಗಳಿಗೆ ಬಿಡುವುದು.

    ಆಯ್ಕೆ 2
    ಪರೀಕ್ಷೆ ಅವಧಿಯನ್ನು 3 ಗಂಟೆ ಬದಲು 90 ನಿಮಿಷಕ್ಕೆ ಇಳಿಸುವುದು. 2 ಹಂತಗಳಲ್ಲಿ ಪರೀಕ್ಷೆಗೆ ಅವಕಾಶ (ಜುಲೈ 15, ಆಗಸ್ಟ್ ಮೊದಲ ವಾರ). ಮುಖ್ಯ ವಿಷಯಗಳ ಜೊತೆ ಒಂದು ಭಾಷಾ ವಿಷಯದ ಪರೀಕ್ಷೆ. ಆಯಾ ಶಾಲೆಗಳಲ್ಲೇ ಪರೀಕ್ಷೆ ನಡೆಸಲು ಅವಕಾಶ ನೀಡುವುದು

    ರಾಜ್ಯ ಸರ್ಕಾರದ ನಿಲುವು ಏನು?
    ಜುಲೈನಲ್ಲಿ ದ್ವಿತೀಯ ಪಿಯು ಪರೀಕ್ಷೆಗೆ ಸರ್ಕಾರ ಒಲವು ವ್ಯಕ್ತಪಡಿಸಿದ್ದು,  ಜುಲೈನಲ್ಲಿ ಪರೀಕ್ಷೆ ನಡೆದರೇ ಆಗಸ್ಟ್ ನಲ್ಲಿ ಫಲಿತಾಂಶ ಪ್ರಕಟಿಸಬಹುದು.  ಇದರಿಂದ ನೀಟ್/ಜೆಇಇ/ಸಿಇಟಿ/ಐಸಿಎಆರ್ ಪರೀಕ್ಷೆಗೆ ಅನುಕೂಲವಾಗಲಿದೆ.  ಪರೀಕ್ಷಾ ಪ್ರಕ್ರಿಯೆ ಪೂರ್ಣಗೊಳಿಸಲು 45 ದಿನ ಅಗತ್ಯ. ನಾವು ಪರೀಕ್ಷೆ ನಡೆಸಲು ರೆಡಿ ಇದ್ದೇವೆ.

  • ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆ ಮುಂದೂಡಿಕೆ: ಸುರೇಶ್ ಕುಮಾರ್

    ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆ ಮುಂದೂಡಿಕೆ: ಸುರೇಶ್ ಕುಮಾರ್

    ಬೆಂಗಳೂರು: ಏಪ್ರಿಲ್ 28ರಿಂದ ಪ್ರಾರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

    ಹೆಚ್ಚುತ್ತಿರುವ ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ವಾರ್ಷಿಕ ಪರೀಕ್ಷೆಗಳು ಮುಗಿದ ಕೂಡಲೇ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಜನಪ್ರತಿನಿಧಿಗಳು, ಪೋಷಕರೊಂದಿಗೆ ಅಧಿಕಾರಿ ಹಂತದ ಸುಧೀರ್ಘ ಚರ್ಚೆ ನಡೆಸಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ವಿದ್ಯಾರ್ಥಿಗಳ ಹಿತ ಕಾಯಲು ಸರ್ಕಾರ ಬದ್ಧವಾಗಿದೆ. ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿರುವ ಕಾರಣ ವಿಚಲಿತರಾಗದೇ ಏಕಾಗ್ರತೆಯಿಂದ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆ ಮುಂದುವರಿಸಬೇಕೆಂದು ಕಿವಿಮಾತು ಹೇಳಿದ್ದಾರೆ.

  • ಕಲಾ ವಿಭಾಗದಲ್ಲಿ ಬಳ್ಳಾರಿಯ ಕುಸುಮ ಫಸ್ಟ್ – ಇಂದೂ ಕಾಲೇಜಿನ 9 ಮಂದಿ ಟಾಪರ್

    ಕಲಾ ವಿಭಾಗದಲ್ಲಿ ಬಳ್ಳಾರಿಯ ಕುಸುಮ ಫಸ್ಟ್ – ಇಂದೂ ಕಾಲೇಜಿನ 9 ಮಂದಿ ಟಾಪರ್

    ಬೆಂಗಳೂರು/ಬಳ್ಳಾರಿ: ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ವಿದ್ಯಾರ್ಥಿನಿಯರು ಮೇಲುಗೈ ಸಾಧಿಸಿದ್ದಾರೆ. ಪಿಯು ಬೋರ್ಡ್ ನಲ್ಲಿ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಮತ್ತು ಪಿಯುಸಿ ಬೋರ್ಡ್ ನಿರ್ದೇಶಕಿ ಶಿಖಾ ಅವರು ಫಲಿತಾಂಶವನ್ನು ಪ್ರಕಟಿಸಿದ್ದಾರೆ.

    ಈ ವರ್ಷ ಒಟ್ಟು ಶೇ.61.73 ಫಲಿತಾಂಶ ದಾಖಲಾಗಿದ್ದು, ಒಟ್ಟು 4,14,587 ಮಂದಿ ಪಾಸ್ ಆಗಿದ್ದಾರೆ. 1,86,690 ಬಾಲಕರು, 2,27,897 ಬಾಲಕಿಯರು ತೇರ್ಗಡೆಯಾಗಿದ್ದಾರೆ. 54,823 ಮಂದಿ ಉನ್ನತ ಶ್ರೇಣಿ, 2,27,301 ಮಂದಿ ಪ್ರಥಮ ದರ್ಜೆಯಲ್ಲಿ ಪಾಸ್ ಆಗಿದ್ದಾರೆ.

    ಕಲಾ ವಿಭಾಗದಲ್ಲಿ 2,00,022 ಮಂದಿ ಹಾಜರಾಗಿದ್ದರೆ, 1,01,073 ಮಂದಿ ಪಾಸ್ ಆಗಿದ್ದು, ಶೇ.50.53 ಫಲಿತಾಂಶ ದಾಖಲಾಗಿದೆ. ಕಲಾ ವಿಭಾಗದಲ್ಲಿ ಬಳ್ಳಾರಿ ಜಿಲ್ಲೆಯ ವಿದ್ಯಾರ್ಥಿಗಳು ಅತಿ ಹೆಚ್ಚು ಅಂಕ ಪಡೆದುಕೊಂಡಿದ್ದಾರೆ. ಅದರಲ್ಲೂ ಎಂದಿನಂತೆ ಇಂದು ಕಾಲೇಜಿನ ವಿದ್ಯಾರ್ಥಿಗಳು ಟಾಪರ್ ಆಗಿದ್ದು, ಮೊದಲ 10 ಸ್ಥಾನಗಳ ಪೈಕಿ 9 ಸ್ಥಾನಗಳನ್ನು ಈ ಕಾಲೇಜಿನ ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ.

    ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳು
    1. ಕುಸುಮ ಉಜ್ಜಿನಿ: ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕೊಟ್ಟೂರಿನ ಇಂದು ಪಿಯು ಕಾಲೇಜಿನ ವಿದ್ಯಾರ್ಥಿನಿ ಕುಸುಮ ಉಜ್ಜಿನಿ ಕಲಾ ವಿಭಾಗದಲ್ಲಿ 594 ಅಂಕ ಪಡೆಯುವ ಮೂಲಕ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ಕುಸುಮ ಕನ್ನಡ ಮತ್ತು ಸಂಸ್ಕೃತದಲ್ಲಿ 96 ಅಂಕ ಪಡೆದುಕೊಂಡಿದ್ದಾರೆ. ಇನ್ನೂ ಐಚ್ಛಿಕ ಕನ್ನಡ, ಇತಿಹಾಸ ಮತ್ತು ರಾಜಕೀಯ ವಿಜ್ಞಾನ ಮೂರು ವಿಷಯದಲ್ಲೂ 100ಕ್ಕೆ 100 ಅಂಕಗಳನ್ನು ಪಡೆದುಕೊಂಡಿದ್ದಾರೆ. ಕೊನೆಯದಾಗಿ ಶಿಕ್ಷಣದಲ್ಲಿ 99 ಅಂಕವನ್ನು ಪಡೆದುಕೊಂಡಿದ್ದಾರೆ.

    2. ಹೊಸಮನಿ ಚಂದ್ರಪ್ಪ
    * ಕಾಲೇಜು – ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕೊಟ್ಟೂರು ಇಂದು ಪಿಯು ಕಾಲೇಜು
    * ಪಡೆದ ಅಂಕ – 591

    3. ನಾಗರಾಜ್
    * ಕಾಲೇಜು – ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕೊಟ್ಟೂರು ಇಂದು ಪಿಯು ಕಾಲೇಜು
    * ಪಡೆದ ಅಂಕ – 591

    4. ಓಮೇಶ ಎಸ್
    * ಕಾಲೇಜು – ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕೊಟ್ಟೂರು ಇಂದು ಪಿಯು ಕಾಲೇಜು
    * ಪಡೆದ ಅಂಕ – 591

    5. ಸಚಿನ್ ಕೆ.ಜೆ.
    * ಕಾಲೇಜು – ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕೊಟ್ಟೂರು ಇಂದು ಪಿಯು ಕಾಲೇಜು
    * ಪಡೆದ ಅಂಕ – 589

    6. ಸುರೇಶ್ ಎಚ್
    * ಕಾಲೇಜು – ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕೊಟ್ಟೂರು ಇಂದು ಪಿಯು ಕಾಲೇಜು
    * ಪಡೆದ ಅಂಕ – 589

    7. ಬರಿಕರ ಶಿವಕುಮಾರ್
    * ಕಾಲೇಜು – ದಾವಣಗೆರೆ ಜಿಲ್ಲೆಯ ಹರಪನಹಳ್ಳಿಯ ಎಸ್‍ಯುಜೆಎಂ ಪಿಯು ಕಾಲೇಜು
    * ಪಡೆದ ಅಂಕ – 589

    8. ಹರಿಜನಸೊಪ್ಪಿನ ಹುಚ್ಚಂಗೆಮ್ಮ
    * ಕಾಲೇಜು – ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕೊಟ್ಟೂರು ಇಂದು ಪಿಯು ಕಾಲೇಜು
    * ಪಡೆದ ಅಂಕ – 588

    9. ಕೋನಪುರ ಮಥಾಡ ನಂದೀಶ
    * ಕಾಲೇಜು – ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕೊಟ್ಟೂರು ಇಂದು ಪಿಯು ಕಾಲೇಜು
    * ಪಡೆದ ಅಂಕ – 588

    10. ಅಂಗಡಿ ಸರಸ್ವತಿ
    * ಕಾಲೇಜು – ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕೊಟ್ಟೂರು ಇಂದು ಪಿಯು ಕಾಲೇಜು
    * ಪಡೆದ ಅಂಕ – 587

  • ಏ.15ಕ್ಕೆ ದ್ವಿತೀಯ ಪಿಯು ಫಲಿತಾಂಶ

    ಏ.15ಕ್ಕೆ ದ್ವಿತೀಯ ಪಿಯು ಫಲಿತಾಂಶ

    ಬೆಂಗಳೂರು: ಏಪ್ರಿಲ್ 15 ಸೋಮವಾರ ಬೆಳಗ್ಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ. ಪಿಯು ಬೋರ್ಡ್ ಸುದ್ದಿಗೋಷ್ಠಿ ಕರೆದಿದ್ದು, ಬೆಳಗ್ಗೆ 11 ಪರೀಕ್ಷಾ ಫಲಿತಾಂಶ ಪ್ರಕಟ ಆಗಲಿದೆ.

    ಇಲಾಖೆ ಅಧಿಕೃತ ವೆಬ್‍ಸೈಟ್‍ಗಳಲ್ಲಿ ಸೋಮವಾರವೇ ಪರೀಕ್ಷಾ ಫಲಿತಾಂಶ ಲಭ್ಯವಾಗಲಿದ್ದು, ಮಂಗಳವಾರ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಏ.17 ಮತ್ತು ಏ.19 ಸರ್ಕಾರಿ ರಜೆ ಇದ್ದು, ಏ.18 ರಂದು ರಾಜ್ಯ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಏ.15 ರಂದು ಫಲಿತಾಂಶ ಪ್ರಕಟಿಸಲು ಇಲಾಖೆ ನಿರ್ಧರಿಸಿದೆ.

    2019ನೇ ಸಾಲಿನಲ್ಲಿ 6.73 ಲಕ್ಷ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆ ಬರೆದಿದ್ದರು. ಇದರಲ್ಲಿ 1.94 ಲಕ್ಷ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ಹಾಜರಾಗಲು ನೋಂದಾಯಿಸಿಕೊಂಡಿದ್ದಾರೆ. ಏ.29 ರಿಂದ ಮೇ 1 ವರೆಗೆ ಸಿಇಟಿ ಪರೀಕ್ಷೆ ನಡೆಯಲಿದೆ.

    ಸೋಮವಾರ ಬೆಳಗ್ಗೆ 11 ಗಂಟೆಗೆ ಫಲಿತಾಂಶ http://pue.kar.nic.in/ ಮತ್ತು http://karresults.nic.in/  ವೆಬ್‍ಸೈಟ್‍ಗಳಲ್ಲಿ ಲಭ್ಯವಾಗಲಿದೆ.

  • ದ್ವಿತೀಯ ಪಿಯುಸಿ ಪರೀಕ್ಷೆಗೆ ಕ್ಷಣಗಣನೆ ಆರಂಭ – ಭಾರೀ ಭದ್ರತೆಯಲ್ಲಿ ಎಕ್ಸಾಂ

    ದ್ವಿತೀಯ ಪಿಯುಸಿ ಪರೀಕ್ಷೆಗೆ ಕ್ಷಣಗಣನೆ ಆರಂಭ – ಭಾರೀ ಭದ್ರತೆಯಲ್ಲಿ ಎಕ್ಸಾಂ

    ಬೆಂಗಳೂರು: ಶಿಕ್ಷಣ ಇಲಾಖೆ ಹಾಗೂ ವಿದ್ಯಾರ್ಥಿಗಳಿಗೆ ಅಗ್ನಿ ಪರೀಕ್ಷೆಯಾಗಿರೋ ದ್ವೀತಿಯ ಪಿಯುಸಿ ಪರೀಕ್ಷೆ ಇಂದಿನಿಂದ ಪ್ರಾರಂಭವಾಗ್ತಿದೆ. ಮೊದಲ ದಿನವಾದ ಇಂದು ಜೀವಶಾಸ್ತ್ರ ಹಾಗೂ ಇತಿಹಾಸ ವಿಷಯದ ಪರೀಕ್ಷೆಗಳು ನಡೆಯಲಿವೆ.

    ಈ ವರ್ಷ 6 ಲಕ್ಷದ 84 ಸಾವಿರದ 490 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಇದ್ರಲ್ಲಿ 3 ಲಕ್ಷದ 48 ಸಾವಿರದ 562 ವಿದ್ಯಾರ್ಥಿಗಳು ಹಾಗೂ 3 ಲಕ್ಷದ 35 ಸಾವಿರದ 909 ವಿದ್ಯಾರ್ಥಿನಿಯರು ಪರೀಕ್ಷೆ ಬರೆಯುತ್ತಿದ್ದಾರೆ. 19 ಜನ ತೃತೀಯ ಲಿಂಗಿಗಳು ಪರೀಕ್ಷೆ ಬರೆಯುತ್ತಿರೋದು ವಿಶೇಷ. ರಾಜ್ಯಾದ್ಯಂತ 998 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ವರೆಗೆ ಪರೀಕ್ಷೆಗಳು ನಡೆಯಲಿವೆ.

    ಕಳೆದ ವರ್ಷ ಪೇಪರ್ ಲೀಕ್‍ನಿಂದಾದ ಸಮಸ್ಯೆಯಿಂದ ಎಚ್ಚೆತ್ತಿರುವ ಪಿಯುಸಿ ಬೋರ್ಡ್ ಈ ವರ್ಷ ಭಾರೀ ಭದ್ರತೆ ಮಾಡಿಕೊಂಡಿದೆ. ಕರ್ನಾಟಕ ಸೆಕ್ಯೂರ್ ಎಕ್ಸಾಂಮೀನೇಷನ್ ಸಿಸ್ಟಮ್ ಪ್ರೋಗ್ರಾಂ ಅಳವಡಿಸಿಕೊಂಡಿದ್ದು, ಜಿಲ್ಲಾ ಖಜಾನೆಗಳಿಗೆ ಸಿಸಿಟಿವಿ, ಮ್ಯಾಗ್ನೆಟಿಕ್ ಡೋರ್‍ಗಳು, ಬಯೋ ಮೆಟ್ರಿಕ್ ಪದ್ಧತಿ ಸೇರಿದಂತೆ ಇನ್ನಿತರ ಹೈ ಸೆಕ್ಯುರಿಟಿ ಸಿಸ್ಟಮ್ ಅಳವಡಿಕೆ ಮಾಡಲಾಗಿದೆ.