Tag: Secunderabad

  • ಮೂರು ಪೂರಿ ಒಟ್ಟಿಗೆ ತಿನ್ನಲು ಹೋಗಿ ಗಂಟಲಿಗೆ ಸಿಕ್ಕಿಕೊಂಡು 11ರ ಬಾಲಕ ಸಾವು

    ಮೂರು ಪೂರಿ ಒಟ್ಟಿಗೆ ತಿನ್ನಲು ಹೋಗಿ ಗಂಟಲಿಗೆ ಸಿಕ್ಕಿಕೊಂಡು 11ರ ಬಾಲಕ ಸಾವು

    ಹೈದರಾಬಾದ್: 11 ವರ್ಷದ ಬಾಲಕ ಪೂರಿ ತಿಂದು ಸಾವನ್ನಪ್ಪಿರುವ ಘಟನೆ ತೆಲಂಗಾಣದ (Telangana) ಸಿಕಂದರಾಬಾದ್‌ನ (Secunderabad) ಶಾಲೆಯೊಂದರಲ್ಲಿ ನಡೆದಿದೆ.

    ಮೃತ ಬಾಲಕನನ್ನು 6ನೇ ತರಗತಿಯ ವಿಕಾಸ್ ಜೈನ್ ಎಂದು ಗುರುತಿಸಲಾಗಿದೆ.

    ಸಿಕಂದರಾಬಾದ್‌ನ ತಿವೋಲಿ ಥಿಯೇಟರ್ ಬಳಿ ಇರುವ ಶಾಲೆಯಲ್ಲಿ ವಿಕಾಸ್ ಜೈನ್ 6ನೇ ತರಗತಿಯಲ್ಲಿ ಓದುತ್ತಿದ್ದ. ಮನೆಯಿಂದ ತಂದ ಪೂರಿಯನ್ನು ಮಧ್ಯಾಹ್ನ ಊಟದ ಸಮಯದಲ್ಲಿ ತಿನ್ನುವಾಗ ಈ ಘಟನೆ ಸಂಭವಿಸಿದೆ.ಇದನ್ನೂ ಓದಿ: ಡಾ ಹಗರಣದ ಲೋಕಾಯುಕ್ತ ವರದಿ ಇಂದು ಹೈಕೋರ್ಟ್‌ಗೆ ಸಲ್ಲಿಕೆ – ಸಿಬಿಐ ಅಂಗಳಕ್ಕೆ ತನಿಖೆ ಶಿಫ್ಟ್?

    ಸೋಮವಾರ (ನ.25) ಶಾಲೆಯಲ್ಲಿ ಮಧ್ಯಾಹ್ನ ಊಟದ ವೇಳೆ ಮೂರು ಪೂರಿ ಒಟ್ಟಿಗೆ ತಿಂದ ಪರಿಣಾಮ ಬಾಲಕನಿಗೆ ಉಸಿರುಗಟ್ಟಿ ನೆಲಕ್ಕೆ ಕುಸಿದಿದ್ದಾನೆ. ಎಷ್ಟೇ ಎಚ್ಚರಗೊಳಿಸಿದರೂ ಪ್ರಜ್ಞೆ ಬರದ ಕಾರಣ ಆತನನ್ನು ಕೂಡಲೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ವೈದ್ಯರು ತಪಾಸಣೆ ಮಾಡಿ ಸಾವನ್ನಪ್ಪಿರುವುದಾಗಿ ಧೃಡಪಡಿಸಿದ್ದಾರೆ.

    ಶಾಲಾ ಆಡಳಿತ ಮಂಡಳಿ ಬಾಲಕನ ಪೋಷಕರಿಗೆ ಕರೆ ಮಾಡಿ ನಿಮ್ಮ ಮಗ ಊಟದ ಸಮಯದಲ್ಲಿ ಒಟ್ಟಿಗೆ ಮೂರು ಪೂರಿ ತಿಂದ ಪರಿಣಾಮ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ ಎಂದು ತಿಳಿಸಿದ್ದಾರೆ. ಸದ್ಯ ಪೊಲೀಸರು ಮೃತ ಬಾಲಕನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

    ಇಲ್ಲಿಯವರೆಗೂ ಆಂಧ್ರಪ್ರದೇಶದಲ್ಲಿ (Andhrapradesh) ಈ ರೀತಿಯ ಮೂರು ಘಟನೆಗಳು ವರದಿಯಾಗಿವೆ. ಕಳೆದ ತಿಂಗಳು ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ದೋಸೆ ತಿಂದು ಉಸಿರುಗಟ್ಟಿಸಿ ಸಾವನ್ನಪ್ಪಿದ್ದ. ವೆಂಕಟಯ್ಯ (43) ಅವರು ಸ್ಥಳೀಯ ಉಪಾಹಾರ ಗೃಹದಲ್ಲಿ ದೋಸೆ ತಿನ್ನುತ್ತಿದ್ದಾಗ ಅವರ ಗಂಟಲಿಗೆ ಆಹಾರ ಸಿಕ್ಕಿಹಾಕಿಕೊಂಡ ಪರಿಣಾಮ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.

    ಜೂನ್‌ನಲ್ಲಿ ಹೈದರಾಬಾದ್‌ನಲ್ಲಿ (Hyderabad) 37 ವರ್ಷದ ವ್ಯಕ್ತಿಯೊಬ್ಬರು ಕೋಳಿಯ ಮೂಳೆಯ ತುಂಡು ಗಂಟಲಿಗೆ ಸಿಲುಕಿ ಉಸಿರುಗಟ್ಟಿ ಸಾವನ್ನಪ್ಪಿದ್ದರು. ಜನವರಿಯಲ್ಲಿ ಮಹಬೂಬ್‌ನಗರ ಜಿಲ್ಲೆಯಲ್ಲಿ ನಡೆದ ಇದೇ ರೀತಿಯ ಘಟನೆಯಲ್ಲಿ, ಊಟ ಮಾಡುವಾಗ ಕೋಳಿಯ ಮೂಳೆಯ ತುಂಡು ಗಂಟಲಿಗೆ ಸಿಲುಕಿ ಯುವಕನೊಬ್ಬ ಪ್ರಾಣ ಕಳೆದುಕೊಂಡಿದ್ದ.ಇದನ್ನೂ ಓದಿ: ಜೋಡಿ ಕೊಲೆ ಕೇಸ್‌ಗೆ ಟ್ವಿಸ್ಟ್‌ – ಕಾಯಿಲೆ ಹುಷಾರಾಗ್ಲಿ ಅಂತ ಅಜ್ಜಿ ಮೇಲೆ ಮೊಮ್ಮಗನಿಂದಲೇ ಅತ್ಯಾಚಾರಕ್ಕೆ ಯತ್ನಿಸಿ ಹತ್ಯೆ!

  • Secunderabad| ಮುತ್ಯಾಲಮ್ಮ ದೇವಸ್ಥಾನದ ವಿಗ್ರಹ ಧ್ವಂಸ – ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ

    Secunderabad| ಮುತ್ಯಾಲಮ್ಮ ದೇವಸ್ಥಾನದ ವಿಗ್ರಹ ಧ್ವಂಸ – ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ

    ಹೈದರಾಬಾದ್: ಸಿಕಂದರಾಬಾದ್‌ನ (Secunderabad) ಮುತ್ಯಾಲಮ್ಮ ದೇವಸ್ಥಾನದಲ್ಲಿನ (Muthyalamma Temple) ವಿಗ್ರಹವನ್ನು ಅಪವಿತ್ರಗೊಳಿಸಲಾಗಿದೆ ಎಂದು ಆರೋಪಿಸಲಾಗಿದ್ದು, ಸ್ಥಳೀಯರು ಒಬ್ಬ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆಯ ನಂತರ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಪರಿಸ್ಥಿತಿ ಶಾಂತಗೊಳಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಘಟನೆ ಬೆನ್ನಲ್ಲೇ ಇದಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳೀಯರು ದೇವಸ್ಥಾನದ ಬಳಿ ಪ್ರತಿಭಟನೆ ನಡೆಸಿದರು. ಇದಕ್ಕೆ ಬಿಜೆಪಿ (BJP) ಮುಖಂಡರೂ ಕೈಜೋಡಿಸಿದರು. ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಮಾಧವಿ ಲತಾ (Madhavi Latha) ಸೇರಿದಂತೆ ಹಲವು ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ದುರ್ಗಾದೇವಿ ಮೂರ್ತಿ ವಿರ್ಸಜನೆ| ಮಸೀದಿ ಎದುರು ಹಾಡು ಹಾಕಿದ್ದಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ

    ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರೊಂದಿಗೆ ಸಂವಾದ ನಡೆಸಿದರು. ಇದೊಂದು ನಾಚಿಕೆಗೇಡಿನ ಘಟನೆ ಎಂದಿರುವ ಅವರು, ಕೆಲವರು ಉದ್ದೇಶಪೂರ್ವಕವಾಗಿ ಕೋಮುಗಲಭೆ ಸೃಷ್ಟಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು. ಬಂಧಿತ ಆರೋಪಿ ಕಳ್ಳತನಕ್ಕಾಗಿ ಇಲ್ಲಿಗೆ ಬಂದಿಲ್ಲ. ಹಿಂದೂ ಸಮಾಜವನ್ನು ಅವಮಾನಿಸಲು ಬಂದಿದ್ದಾರೆ. ಹೈದರಾಬಾದ್‌ನ ವಿವಿಧೆಡೆ ಇಂತಹ ಘಟನೆಗಳು ನಿರಂತರವಾಗಿ ನಡೆಯುತ್ತಿವೆ. ಕೆಲವರು ಹೈದರಾಬಾದ್‌ನಲ್ಲಿ ಉದ್ವಿಗ್ನತೆಯನ್ನು ಸೃಷ್ಟಿಸಲು ಮತ್ತು ಹೈದರಾಬಾದ್‌ನಲ್ಲಿ ಕೋಮು ಗಲಭೆಗಳನ್ನು ಹೆಚ್ಚಿಸಲು ಉದ್ದೇಶಪೂರ್ವಕವಾಗಿ ಇದನ್ನು ಮಾಡುತ್ತಿದ್ದಾರೆ ಎಂದು ಕಿಶನ್ ರೆಡ್ಡಿ ಹೇಳಿದರು. ಇದನ್ನೂ ಓದಿ: Uttar Pradesh | ದುರ್ಗಾದೇವಿ ಮೂರ್ತಿ ವಿರ್ಸಜನೆ ವೇಳೆ ಕೋಮು ಸಂಘರ್ಷ – ಲಾಠಿ ಚಾರ್ಜ್, 30 ಮಂದಿ ಬಂಧನ

    ಕಾಂಗ್ರೆಸ್ ಆಡಳಿತದಲ್ಲಿ ಹಿಂದೂಗಳು ಮತ್ತು ಅವರ ದೇವಾಲಯಗಳು ಸುರಕ್ಷಿತವಾಗಿಲ್ಲ. ಇಂತಹ ಘಟನೆ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದೆ. ತೆಲಂಗಾಣದಲ್ಲಿ ಹಿಂದೂ ದೇವಾಲಯಗಳ ಮೇಲಿನ ಮತ್ತೊಂದು ದಾಳಿಯಾಗಿದೆ. ರೇವಂತ್ ರೆಡ್ಡಿ ಸರ್ಕಾರವು ಶೀಘ್ರವಾಗಿ ಕ್ರಮವಹಿಸಿ ಅಪರಾಧಿಗಳನ್ನು ಬಂಧಿಸಬೇಕು ಎಂದು ತೆಲಂಗಾಣ ಬಿಜೆಪಿ ವಕ್ತಾರ ತುಳ್ಳ ವೀರೇಂದ್ರ ಗೌಡ್ ಹೇಳಿದರು. ಮಾಜಿ ಸಚಿವ ಹಾಗೂ ಬಿಆರ್‌ಎಸ್ ಶಾಸಕ ತಲಸಾನಿ ಶ್ರೀನಿವಾಸ್ ಯಾದವ್ ಕೂಡ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಇದನ್ನೂ ಓದಿ: ಸ್ನೇಹಮಯಿ ಕೃಷ್ಣಗೆ ರಕ್ಷಣೆ ಕೊಡಲು ನಾವು ಬದ್ಧ – ಎಂ.ಬಿ ಪಾಟೀಲ

    ಅಕ್ಟೋಬರ್ 12 ರಂದು ಹೈದರಾಬಾದ್‌ನಲ್ಲಿ ಇದೇ ರೀತಿಯ ಘಟನೆ ವರದಿಯಾಗಿತ್ತು. ಹೈದರಾಬಾದ್‌ನ ಬೇಗಂ ಬಜಾರ್‌ನ ನಾಂಪಲ್ಲಿ ವಸ್ತು ಪ್ರದರ್ಶನ ಮೈದಾನದಲ್ಲಿ ಪೂಜಾ ಮಂಟಪದಲ್ಲಿ ದುರ್ಗಾ ಮಾತೆಯ ವಿಗ್ರಹಕ್ಕೆ ಹಾನಿ ಮಾಡಿದ ಆರೋಪದ ಮೇಲೆ ಒಬ್ಬನನ್ನು ಬಂಧಿಸಲಾಗಿದೆ. ಪೊಲೀಸರ ಪ್ರಕಾರ, ವ್ಯಕ್ತಿಯು ಹಸಿವಿನಿಂದ ಬಳಲುತ್ತಿದ್ದ ನಿರಾಶ್ರಿತ ವ್ಯಕ್ತಿಯಾಗಿದ್ದು, ಆಹಾರಕ್ಕಾಗಿ ಹುಡುಕುತ್ತಿರುವಾಗ ವಿಗ್ರಹಕ್ಕೆ ಹಾನಿ ಮಾಡಿದ್ದಾನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ ಸರ್ಕಾರಕ್ಕೆ ಭಯೋತ್ಪಾದಕರೇ ಬಿಗ್ ಬಾಸ್, ಸಿದ್ದರಾಮಯ್ಯ ಮುಸಲ್ಮಾನರ ಬಿಗ್‌ ಬಾಸ್: ಅಶೋಕ್‌ ಲೇವಡಿ

  • ಸಿಕಂದರಾಬಾದ್ ಕಂಟೋನ್ಮೆಂಟ್ ಮನೆಗಳಿಗೆ ಶೀಘ್ರದಲ್ಲೇ ಉಚಿತ ಕುಡಿಯುವ ನೀರು

    ಸಿಕಂದರಾಬಾದ್ ಕಂಟೋನ್ಮೆಂಟ್ ಮನೆಗಳಿಗೆ ಶೀಘ್ರದಲ್ಲೇ ಉಚಿತ ಕುಡಿಯುವ ನೀರು

    ಹೈದರಾಬಾದ್: ಸಿಕಂದರಾಬಾದ್ ಕಂಟೋನ್ಮೆಂಟ್ ಪ್ರದೇಶದ ಪ್ರತಿ ಮನೆಗೆ ತಿಂಗಳಿಗೆ 20 ಕಿಲೋ ಲೀಟರ್‌ಗಳವರೆಗೆ ಉಚಿತ ಕುಡಿಯುವ ನೀರನ್ನು ಪೂರೈಸಲು ಹೈದರಾಬಾದ್ ಮೆಟ್ರೋಪಾಲಿಟನ್ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ಧರಿಸಿದೆ.

    ಕೊಳೆಗೇರಿಗಳು, ದೇಶೀಯ ಸಂಸ್ಥೆಗಳು ಮತ್ತು ದೇಶೀಯ ಸಂಪರ್ಕಗಳನ್ನು ಹೊಂದಿರುವ ಬಹುಮಹಡಿ ಕಟ್ಟಡಗಳಿಗೆ ಫೆಬ್ರವರಿ 1 ರಿಂದ ಪೂರ್ವಾನ್ವಯ ಪರಿಣಾಮದೊಂದಿಗೆ ಯೋಜನೆಯು ಅನ್ವಯಿಸುತ್ತದೆ. ಇದನ್ನೂ ಓದಿ: ನನ್ನ ಮುಗಿಸ್ಬಿಡ್ತೀನಿ ಅಂತಾನೆ: ಗಂಭೀರ ಆರೋಪ ಮಾಡಿದ ನಟಿ ಸಂಜನಾ

    ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ತೆಲಂಗಾಣ ಸಚಿವ ಟಿ. ಶ್ರೀನಿವಾಸ್ ಯಾದವ್ ಅವರು, ರಾಜ್ಯ ಸರ್ಕಾರವು ಸುಮಾರು 16.8 ಕೋಟಿ ರೂಪಾಯಿ ವೆಚ್ಚವನ್ನು ಮಾಡಿ ಬಡ ಕುಟುಂಬಗಳಿಗೆ ಅನುಕೂಲವಾಗುವಂತೆ ಎಸ್‍ಸಿಬಿ ಮಿತಿಯಲ್ಲಿ ಉಚಿತ ಕುಡಿಯುವ ನೀರಿನ ಯೋಜನೆಯನ್ನು ಜಾರಿಗೆ ತರಲು ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ನಿರ್ಧರಿಸಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ : ನಟ ಚೇತನ್‌ಗೆ ನೀಡಿದ್ದ ಗನ್ ಮ್ಯಾನ್ ಹಿಂಪಡೆದ ಸರ್ಕಾರ

  • ಗರ್ಲ್ ಫ್ರೆಂಡ್ಸ್ ಜೊತೆ ಲಾಂಗ್ ರೈಡಿಗೆ 28 ಬೈಕ್ ಕದ್ದ!

    ಗರ್ಲ್ ಫ್ರೆಂಡ್ಸ್ ಜೊತೆ ಲಾಂಗ್ ರೈಡಿಗೆ 28 ಬೈಕ್ ಕದ್ದ!

    – ಬೈಕ್ ಇಲ್ಲಾಂದ್ರೆ ಬರಲ್ಲ ಅಂತಾರಂತೆ ಗರ್ಲ್ ಫ್ರೆಂಡ್
    – ಬೈಕ್ ಕದ್ದಿದ್ದಕ್ಕೆ 5ನೇ ಬಾರಿ ಜೈಲು ಸೇರಿದ ಅಜರ್

    ಹೈದರಾಬಾದ್: ಪ್ರೇಮಿಗಳು ಬೈಕ್ ನಲ್ಲಿ ಸುತ್ತಾಡೋದನ್ನು ನೀವು ಕೇಳಿದ್ದೀರಿ. ಆದರೆ ಇಲ್ಲೊಬ್ಬ ಮಹಾಶಯ ತನ್ನ ಗರ್ಲ್ ಫ್ರೆಂಡ್ಸ್ ಗಾಗಿ 28 ಬೈಕ್ ಗಳನ್ನೇ ಕದ್ದಿರೋ ಘಟನೆ ನಡೆದಿದೆ.

    ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಈತ 4 ಬಾರಿ ಜೈಲಿಗೆ ಹೋಗಿದ್ದರೂ ಈತನಿಗೆ ಬುದ್ಧಿ ಬಂದಿಲ್ಲ. ಮತ್ತೆ ಮತ್ತೆ ಬೈಕ್ ಕಳ್ಳತನವನ್ನೇ ಮಾಡುತ್ತಿರುವ ಈತ ಈಗ ಹೈದರಾಬಾದ್ ಪೊಲೀಸರಿಗೆ ತಲೆ ನೋವಾಗಿ ಪರಿಣಮಿಸಿದ್ದಾನೆ.

    ಸಾಮಾನ್ಯವಾಗಿ ಬೈಕ್ ಕಳ್ಳತನ ಮಾಡಿದವರು ಅದನ್ನು ಹಣಕ್ಕಾಗಿ ಮಾರಾಟ ಮಾಡುತ್ತಾರೆ. ಆದರೆ ಬೇಗಂಪೇಡೆಯ ಪಾತಿಗಡ್ಡದ ಅಜರ್ ಹುಸೇನ್ ಬೈಕ್ ಗಳನ್ನು ಕದ್ದು ಯಾವತ್ತೂ ಮಾರಾಟ ಮಾಡಿಲ್ಲ. ಬದಲಾಗಿ ಕದ್ದಾಗ ಬೈಕ್ ನಲ್ಲಿದ್ದ ಪೆಟ್ರೋಲ್ ನಲ್ಲಿ ಎಷ್ಟು ದೂರಕ್ಕೆ ಹೋಗುತ್ತೋ ಅಲ್ಲಿಯವರೆಗೆ ಹೋಗಿ ಪೆಟ್ರೋಲ್ ಖಾಲಿಯಾಗುತ್ತಿದ್ದಂತೆಯೇ ಬೈಕ್ ಅಲ್ಲೇ ಬಿಟ್ಟು ಜಾಗ ಖಾಲಿ ಮಾಡುತ್ತಾನೆ.

    ಅಷ್ಟಕ್ಕೂ ಈತ ಬೈಕ್ ಕಳ್ಳತನ ಮಾಡೋದು ಯಾಕೆ ಅಂತಾ ಕೇಳಿದ್ರೆ ವಿಚಿತ್ರವಾದ ವಿಷಯ ಬಿಚ್ಚಿಡ್ತಾನೆ ಅಜರ್. ಈತನಿಗೆ ಈಗಾಗಲೇ ಮದುವೆ ಆಗಿದೆ. ಆದರೆ ಹೆಂಡ್ತಿಗೆ ಡೈವೋರ್ಸ್ ಕೊಟ್ಟಿದ್ದಾನೆ. ಬಳಿಕ ನಗರದ ಕೆಲವು ಮಹಿಳೆಯರ ಜೊತೆ ಗೆಳೆತನ ಬೆಳೆಸಿದ್ದಾನೆ. ನಂತರ ಇವರನ್ನು ಲಾಂಗ್ ರೈಡ್ ಗೆ ಕರೆದುಕೊಂಡು ಹೋಗುತ್ತಾನೆ. ತನ್ನ ಈ ಗರ್ಲ್ ಫ್ರೆಂಡ್ ಗಳನ್ನು ಸುತ್ತಾಡಿಸಲೆಂದೇ ಬೈಕ್ ಕಳ್ಳತನಕ್ಕೆ ಇಳಿದಿದ್ದಾನೆ. ಇದುವರೆಗೆ ಪೊಲೀಸರು 4 ಬಾರಿ ಅಜರ್ ನನ್ನು ಬಂಧಿಸಿದ್ದಾರೆ. ಗರ್ಲ್ ಫ್ರೆಂಡ್ ಗಳು ಇದ್ದಾಗ ಮಾತ್ರ ಪೆಟ್ರೋಲ್ ಹಾಕಿಸ್ತಾನೆ ಅನ್ನೋದು ಬಿಟ್ಟರೆ ಉಳಿದ ಟೈಮ್ ಬೈಕ್ ಎಲ್ಲಿ ನಿಲ್ಲುತ್ತೋ ಅಲ್ಲೇ ಪಾರ್ಕ್ ಮಾಡಿ ಪರಾರಿಯಾಗ್ತಾನೆ ಅಜರ್.

    ಪ್ರತಿ ಬಾರಿ ಪೊಲೀಸ್ ತನಿಖೆ ಮಾಡಿದಾಗಲೂ, ಬೈಕ್ ಇಲ್ಲ ಎಂದರೆ ಗರ್ಲ್ ಫ್ರೆಂಡ್ ನನ್ನ ಜೊತೆ ಬರಲ್ಲ ಅಂತಾರೆ. ಹೀಗಾಗಿ ನಾನು ಬೈಕ್ ಕದ್ದಿದ್ದೇನೆ ಎನ್ನುತ್ತಾನೆ. ಬಳಿಕ ಜಾಮೀನು ಪಡೆದು ಜೈಲಿನಿಂದ ಹೊರಗೆ ಬರುತ್ತಾನೆ. ಇದೇ ಮಂಗಳವಾರ ಅಜರ್ 5ನೇ ಬಾರಿಗೆ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದು, ಸದ್ಯ ಪೊಲೀಸರ ವಶದಲ್ಲಿದ್ದಾನೆ.