Tag: security area

  • ಕೋಳಿಯನ್ನು ವಶಕ್ಕೆ ಪಡೆದ ಅಮೆರಿಕ ರಕ್ಷಣಾ ಇಲಾಖೆ

    ಕೋಳಿಯನ್ನು ವಶಕ್ಕೆ ಪಡೆದ ಅಮೆರಿಕ ರಕ್ಷಣಾ ಇಲಾಖೆ

    ವಾಷಿಂಗ್ಟನ್: ಅನುಮಾನಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಗಳನ್ನು ಬಂಧಿಸುವ ಸುದ್ದಿಗಳನ್ನು ಕೇಳಿದ್ದೇವೆ. ಅನುಮಾನಸ್ಪದವಾಗಿ ಓಡಾಡುತ್ತಿದ್ದ ಕೋಳಿಯನ್ನು ಅಮೆರಿಕ ರಕ್ಷಣಾ ಇಲಾಖೆವಶಕ್ಕೆ ಪಡೆದಿರುವ ವಿಚಿತ್ರ ಘಟನೆ ನಡೆದಿದೆ.

    ಅಮೆರಿಕದ ಸೇನಾ ಕಚೇರಿ ಇರುವ ಪೆಂಟಗ್‍ನ ಭದ್ರತಾ ಏರಿಯಾ ಸುತ್ತ ಕೋಳಿ ಅನುಮಾನಸ್ಪದವಾಗಿ ಓಡಾಡುತ್ತಿದ್ದರಿಂದ, ಕೋಳಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ಅಮೆರಿಕ ಪ್ರಾಣಿ ದಯಾ ಸಂಘವೊಂದು ಹೇಳಿದೆ. ಇದನ್ನೂ ಓದಿ: ಲತಾ ಮಂಗೇಶ್ಕರ್‌ ಹಾಡು ಕೇಳಿ ವೇದಿಕೆಯಲ್ಲಿ ಕಣ್ಣೀರು ಹಾಕಿದ್ರು ಜವಾಹರ್‌ಲಾಲ್‌ ನೆಹರೂ

    ಕೋಳಿಗೆ ಹೆನ್ನಿ-ಪೆನ್ನಿ ಎಂದು ಹೆಸರಿಡಲಾಗಿದೆ. ಸದ್ಯ ಕೋಳಿಯನ್ನು ವರ್ಜೀನಿಯಾದಲ್ಲಿ ಕೋಳಿ ಫಾರ್ಮ್ ಹೊಂದಿರುವ ವ್ಯಕ್ತಿಯೊಬ್ಬರು ತೆಗೆದುಕೊಂಡು ಹೋಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.