Tag: security breach

  • ಸಂಸತ್‌ ಭವನದಲ್ಲಿ ಮತ್ತೆ ಭದ್ರತಾ ವೈಫಲ್ಯ – ಗೋಡೆ ಹಾರಿ ಆವರಣಕ್ಕೆ ಎಂಟ್ರಿ

    ಸಂಸತ್‌ ಭವನದಲ್ಲಿ ಮತ್ತೆ ಭದ್ರತಾ ವೈಫಲ್ಯ – ಗೋಡೆ ಹಾರಿ ಆವರಣಕ್ಕೆ ಎಂಟ್ರಿ

    ನವದೆಹಲಿ: ದೆಹಲಿಯಲ್ಲಿರುವ ಸಂಸತ್‌ ಭವನದಲ್ಲಿ (Parliament) ಮತ್ತೊಮ್ಮೆ ಭದ್ರತಾ ಉಲ್ಲಂಘನೆಯಾಗಿದೆ. ಶುಕ್ರವಾರ ಬೆಳಗ್ಗೆ ವ್ಯಕ್ತಿಯೊಬ್ಬ ಮರವನ್ನು ಹತ್ತಿ ಗೋಡೆ ಏರುವ ಮೂಲಕ ಸಂಸತ್ತಿನ ಭವನದ ಆವರಣವನ್ನು (Security Breach) ಪ್ರವೇಶಿಸಿದ್ದಾನೆ.

    ಈ ಘಟನೆ ಬೆಳಿಗ್ಗೆ 6:30 ರ ಸುಮಾರಿಗೆ ನಡೆದಿದೆ. ರೈಲ್ ಭವನದ ಕಡೆಯಿಂದ ಗೋಡೆ ಮೇಲೆ ಹಾರಿದ್ದ ವ್ಯಕ್ತಿ ಹೊಸ ಸಂಸತ್ತಿನ ಕಟ್ಟಡದ ಗರುಡ ಗೇಟ್ ಅನ್ನು ತಲುಪಿದ್ದ.

    ಒಳನುಗ್ಗಿದ ವ್ಯಕ್ತಿಯನ್ನು ಭದ್ರತಾ ಸಿಬ್ಬಂದಿ ಬಂಧಿಸಿದ್ದಾರೆ. ಆತನನ್ನು ಈಗ ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಇದೇ 28 ರಂದು ಬೆಂಗಳೂರಿನಲ್ಲಿ ಮದುವೆಯಾಗಲಿದ್ದಾರೆ ಅನುಶ್ರೀ

     

    ಸಂಸತ್ತಿನ ಮಳೆಗಾಲದ ಅಧಿವೇಶನ ಗುರುವಾರ ಮುಕ್ತಾಯವಾಗಿತ್ತು. ಅಧಿವೇಶನ ಮುಕ್ತಾಯವಾದ ಒಂದು ದಿನದ ನಂತರ ಭದ್ರತಾ ಉಲ್ಲಂಘನೆಯಾಗಿದೆ. ಆಗಾಗ್ಗೆ ಅಡ್ಡಿಪಡಿಸುವಿಕೆಗಳೊಂದಿಗೆ ಮುಕ್ತಾಯಗೊಂಡ ಒಂದು ದಿನದ ನಂತರ ಈ ಘಟನೆ ನಡೆದಿದೆ. ಇದನ್ನೂ ಓದಿ: ನನ್ನ ಬಾಹ್ಯಾಕಾಶ ಯಾತ್ರೆಯೂ ಇಡೀ ದೇಶದ ಧ್ಯೇಯವಾಗಿತ್ತು ಧನ್ಯವಾದ ತಿಳಿಸಿದ ಶುಭಾಂಶು ಶುಕ್ಲಾ

    ಕಳೆದ ವರ್ಷ 20 ರ ಹರೆಯದ ವ್ಯಕ್ತಿಯೊಬ್ಬ ಸಂಸತ್ತಿನ ಗೋಡೆಯನ್ನು ಹತ್ತಿ ಅನೆಕ್ಸ್ ಕಟ್ಟಡದ ಆವರಣದೊಳಗೆ ಹಾರಿದಾಗ ಇದೇ ರೀತಿಯ ಭದ್ರತಾ ಉಲ್ಲಂಘನೆಯ ಘಟನೆ ಸಂಭವಿಸಿತ್ತು.

    2023 ರಲ್ಲಿ ಲೋಕಸಭೆಯಲ್ಲಿ ಕಲಾಪ ನಡೆಯುತ್ತಿದ್ದಾಗಲೇ ಸಾಗರ್ ಶರ್ಮಾ ಮತ್ತು ಮನೋರಂಜನ್ ಡಿ ಸಾರ್ವಜನಿಕ ಗ್ಯಾಲರಿಯಿಂದ ಕೆಳಗೆ ಧುಮುಕಿದ್ದರು. ಇನ್ನಿಬ್ಬರು ಸಂಸತಿನ ಹೊರಗಿನ ಆವರಣದಲ್ಲಿ ಸ್ಮೋಕ್‌ ಬಾಂಬ್‌ ಸಿಡಿಸಿದ್ದರು. ಈ ನಾಲ್ವರನ್ನೂ ನಂತರ ಭದ್ರತಾ ಸಿಬ್ಬಂದಿ ಬಂಧಿಸಿದ್ದರು.

  • ಕೆಆರ್‌ಎಸ್ ಅಣೆಕಟ್ಟೆಯಲ್ಲಿ ಭದ್ರತಾ ವೈಫಲ್ಯ?- ಡ್ಯಾಂನ ಕ್ರಸ್ಟ್ ಗೇಟ್ ಬಳಿ ಓಡಾಡುತ್ತ ಸೆಲ್ಫಿ ವೀಡಿಯೋ

    ಕೆಆರ್‌ಎಸ್ ಅಣೆಕಟ್ಟೆಯಲ್ಲಿ ಭದ್ರತಾ ವೈಫಲ್ಯ?- ಡ್ಯಾಂನ ಕ್ರಸ್ಟ್ ಗೇಟ್ ಬಳಿ ಓಡಾಡುತ್ತ ಸೆಲ್ಫಿ ವೀಡಿಯೋ

    ಮಂಡ್ಯ: ಕೆಆರ್‌ಎಸ್ ಡ್ಯಾಂನ (KRS Dam) ಕ್ರಸ್ಟ್ ಗೇಟ್ ಬಳಿ ಯುವಕರು ಓಡಾಡುತ್ತ ಸೆಲ್ಫಿ ವೀಡಿಯೋ ಮಾಡಿ ಹುಚ್ಚಾಟ ಮೆರೆದಿದ್ದಾರೆ. ಈ ಘಟನೆ ವಿಶ್ವಪ್ರಸಿದ್ಧ ಕೆಆರ್‌ಎಸ್ ಜಲಾಶಯದಲ್ಲಿ ಭದ್ರತಾ ವೈಫಲ್ಯ ಆಗಿದೆಯೇ ಎಂಬ ಪ್ರಶ್ನೆ ಮೂಡಿಸಿದೆ.

    ಡ್ಯಾಂ ಸೆಕ್ಯುರಿಟಿಗೆ ಸರ್ಕಾರ ಕೋಟಿ ಕೋಟಿ ಖರ್ಚು ಮಾಡಿದರೂ ಅಭದ್ರತೆಯ ಮಾತು ಕೇಳಿಬರುತ್ತಿದೆ. ಜಲಾಶಯದ ಸೂಕ್ಷ್ಮ ಪ್ರದೇಶದಲ್ಲಿ ಅಪರಿಚಿತ ಯುವಕರ ಹುಚ್ಚಾಟ ಮೆರೆದಿದ್ದಾರೆ. ಇದನ್ನೂ ಓದಿ: ನಾರಾಯಣಪುರ ಜಲಾಶಯಕ್ಕೆ ಒಳಹರಿವು ಹೆಚ್ಚಳ – ಕೃಷ್ಣಾ ನದಿಗೆ 29,226 ಕ್ಯೂಸೆಕ್ ನೀರು ಬಿಡುಗಡೆ

    ಬಿಗಿ ಬಂದೋಬಸ್ತ್ ಇದ್ದರೂ ಇಲ್ಲಿಗೆ ಬಂದಿದ್ದೇವೆ ಎಂದು ಯುವಕರ ಹುಚ್ಚಾಟ ಆಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇದರ ವೀಡಿಯೋ ವೈರಲ್ ಆಗಿದೆ. ಕೆಆರ್‌ಎಸ್ ಡ್ಯಾಂ ಭದ್ರತಾ ವೈಫಲ್ಯದ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.

    ಕೈಗಾರಿಕಾ ಭದ್ರತಾ ಪಡೆಯ ಕಾರ್ಯವೈಖರಿ ಬಗ್ಗೆ ಅನುಮಾನ ಮೂಡಿದೆ. ದೇಶದಲ್ಲಿ ಅನಾಹುತಗಳು ಸಂಭವಿಸಿದಾಗ ಮಾತ್ರ ಭದ್ರತೆ ಪೋಸ್ ಕೊಡ್ತಾರೆ. ಘಟನೆಗಳು ಮಾಸಿದ ಬಳಿಕ ಭದ್ರತೆ ಅನ್ನೋದು ಮರೀಚಿಕೆ ಎಂದು ಸಾರ್ವಜನಿಕರು ಕಿಡಿಕಾರಿದ್ದಾರೆ.

  • Video | ಕೇಸರಿ ಶಾಲು ಹಿಡಿದು ವೇದಿಕೆಗೆ ನುಗ್ಗಿದ ಯುವಕ – ಸಿಎಂ ಕಾರ್ಯಕ್ರಮದಲ್ಲಿ ಭದ್ರತಾ ಲೋಪ?

    Video | ಕೇಸರಿ ಶಾಲು ಹಿಡಿದು ವೇದಿಕೆಗೆ ನುಗ್ಗಿದ ಯುವಕ – ಸಿಎಂ ಕಾರ್ಯಕ್ರಮದಲ್ಲಿ ಭದ್ರತಾ ಲೋಪ?

    ಬೆಂಗಳೂರು: ವಿಧಾನಸೌಧದಲ್ಲಿಂದು ನಡೆದ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ (Democracy Day karnataka 2024) ಸಿಎಂ ಸಮ್ಮುಖದಲ್ಲೇ ಅಪರಿಚಿತ ವ್ಯಕ್ತಿಯೊಬ್ಬ ಇದ್ದಕಿದ್ದಂತೆ ಎಡವಟ್ಟಿನ ಕೆಲಸ ಮಾಡಿ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಒಂದು ಕ್ಷಣ ಏನೋ ಆಯ್ತು ಅಂತ ಅನ್ಕೊಂಡು ಅಲ್ಲಿದ್ದವರು ಗಾಬರಿಯಾಗಿದ್ರು. ಆದ್ರೆ ಅಸಲಿ ವಿಷ್ಯ ಗೊತ್ತಾದ ಮೇಲೆ ಸಿಎಂ, ಸಚಿವರಾದಿಯಾಗಿ ಎಲ್ರೂ ನಿಟ್ಟುಸಿರು ಬಿಟ್ರು.

    ಅಷ್ಟಕ್ಕೂ ವಿಧಾನಸೌಧಲ್ಲಿ (Vidhana Soudha) ಇಂದು (ಭಾನುವಾರ) ನಡೆದಿದ್ದಿಷ್ಟು. ಕಡು ಬಿಸಿಲಿನ ನಡುವೆ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್‌ ಬಳಿ ಸರ್ಕಾರದಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಯೋಜಿಸಲಾಗಿತ್ತು. ಸಿಎಂ, ಸಚಿವರು, ಶಾಸಕರು ವಿವಿಧ ಇಲಾಖೆಗಳ ಅಧಿಕಾರಿಗಳು, ನೂರಾರು ಜನ ಜಮಾಯಿಸಿದ್ರು. ಆದರೆ ಇದ್ದಕಿದ್ದಂತೆ ಅನಾಮಿಕ ವ್ಯಕ್ತಿಯೊಬ್ಬನಿಂದ ಕಾರ್ಯಕ್ರಮದಲ್ಲಿ ಗೊಂದಲ, ಆತಂಕ ಸೃಷ್ಟಿಯಾದ ಪ್ರಸಂಗ ನಡೆದುಹೋಯ್ತು.

    ಕಾರ್ಯಕ್ರಮದಲ್ಲಿ ದಿಢೀರನೇ ಸಿಎಂ ಕೂತಿದ್ದ ವೇದಿಕೆಯತ್ತ ಆ ಅಪರಿಚಿತ ವ್ಯಕ್ತಿ‌ ನುಗ್ಗಿದ್ದ. ಕೈಯಲ್ಲಿ ರೇಷ್ಮೆ ಶಾಲು ಹಿಡಿದು ಜನರ ಗುಂಪಿಂದ ವೇದಿಕೆ ಜಿಗಿದು ಸಿಎಂ ಕಡೆ ಧಾವಿಸಿದ್ದ. ಈ ಅನಿರೀಕ್ಷಿತ ಘಟನೆಯಿಂದ ವೆರದಿಕೆಯಲ್ಲಿದ್ದ ಸಿಎಂ (Chief Minister), ಸಚಿವರು ಒಂದು ಕ್ಷಣ ಗಾಬರಿಯಿಂದ ಆತಂಕಗೊಂಡರು. ಸ್ಥಳದಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಯಿತು. ಏನಾಗ್ತಿದೆ ಅಂತ ತಿಳಿಯುವಷ್ಟರಲ್ಲಿ ತಕ್ಷಣ ಭದ್ರತಾ ಸಿಬ್ಬಂದಿ, ವೇದಿಕೆಗೆ ಹಾರಿದ್ದ ಆ ವ್ಯಕ್ತಿಯನ್ನು ತಡೆದು ಕೆಳಗೆ ಉರುಳಿಸಿ ದರದರನೆ ಎಳೆದೋಯ್ದ ಪೊಲೀಸರ ವಶಕ್ಕೆ ಕೊಟ್ರು. ಇದೇ ವೇಳೆ ಆ ವ್ಯಕ್ತಿ ತಾನು ಹಿಡಿದಿದ್ದ ಶಾಲನ್ನು ಸಿಎಂ ಅವರತ್ತ ಎಸೆದ, ಆದರೆ ಅದು ಸಚಿವ ಕೆ.ಜೆ ಜಾರ್ಜ್ ಬಳಿ ಹೋಗಿ ಬಿತ್ತು. ಕೊನೆಗೆ ಆತ ಬಂದಿದ್ದು ಸಿಎಂಗೆ ಶಾಲು ಹಾಕಲು ಅಂತ ಗೊತ್ತಾಗಿ ಸಿಎಂ, ಸಚಿವರು ನಿಟ್ಟುಸಿರು ಬಿಟ್ರು…

    ಈ ಘಟನೆ ಪೊಲೀಸರ ಭದ್ರತಾ ವೈಫಲ್ಯದಿಂದ ನಡೆದಿದೆ ಎಂದು ಬಿಜೆಪಿ ಆರೋಪಿಸಿದೆ. ಸಿಎಂ ಕಾರ್ಯಕ್ರಮದಲ್ಲಿ ಯುವಕ ವಿವಿಐಪಿ ಭದ್ರತೆ ಭೇದಿಸಿ ನುಗ್ಗಿ ಬಂದಿದ್ದು, ಭದ್ರತಾ ವೈಫಲ್ಯ (Security Breach) ಆಗಿದೆ. ಗುಪ್ತಚರ ಇಲಾಖೆ ಏನ್ ಮಾಡ್ತಿದೆ ಎಂದು ಪರಿಷತದ ಸದಸ್ಯ ರವಿಕುಮಾರ್ ಟೀಕಿಸಿದ್ದಾರೆ.

    ಪೊಲೀಸರು ಆತನನ್ನ ವಶಕ್ಕೆ ಪಡೆದು ವಿಧಾನಸೌಧ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ. ಶಾಲು ಹಾಕಲು ಬಂದ ವ್ಯಕ್ತಿ ಬನಶಂಕರಿ ಮೂಲದ ಮಹಾದೇವ ನಾಯಕ್ ಎಂದು ಗುರುತಿಸಲಾಗಿದ್ದು, ಕಳೆದ ಒಂದು ವಾರದ ಹಿಂದೆ ಸಿಎಂಗೆ ಶಾಲು ಹಾಕಲು ಮುಂದಾಗಿದ್ದ ಆದರೆ ಆಗಿರಲಿಲ್ಲ ಎನ್ನಲಾಗಿದೆ. ಹೀಗಾಗಿ ಇಂದು ಕೂಡ ಶಾಲು ಹಾಕಲು ಯತ್ನಿಸಿದ್ದಾನೆ. ಉತ್ತರ ಕರ್ನಾಟಕ ಮೂಲಕ ಮಹದೇವ ನಾಯಕ್ ಸಿದ್ದರಾಮಯ್ಯ ಅಭಿಮಾನಿ ಎಂದು ಪ್ರಾಥಮಿಕ ವಿಚಾರಣೆಯಿಂದ ತಿಳಿದು ಬಂದಿದೆ. ಇನ್ನು ಸಿಎಂ ಕಾರ್ಯಕ್ರಮದಲ್ಲಿ ಭದ್ರತಾ ವೈಫಲ್ಯ ಆಗಿರುವ ಬಗ್ಗೆಯೂ ತನಿಖೆ ನಡೆಯಲಿದೆ ಎನ್ನಲಾಗಿದೆ.

  • ಮೈದಾನಕ್ಕೆ ನುಗ್ಗಿ ವಿರಾಟ್‌ ಪಾದ ಮುಟ್ಟಿ‌, ಅಪ್ಪಿಕೊಂಡ – ಭದ್ರತೆ ಉಲ್ಲಂಘಿಸಿದ ಕೊಹ್ಲಿ ಅಪ್ಪಟ ಅಭಿಮಾನಿಗೆ ಸಂಕಷ್ಟ

    ಮೈದಾನಕ್ಕೆ ನುಗ್ಗಿ ವಿರಾಟ್‌ ಪಾದ ಮುಟ್ಟಿ‌, ಅಪ್ಪಿಕೊಂಡ – ಭದ್ರತೆ ಉಲ್ಲಂಘಿಸಿದ ಕೊಹ್ಲಿ ಅಪ್ಪಟ ಅಭಿಮಾನಿಗೆ ಸಂಕಷ್ಟ

    ಇಂದೋರ್‌: ಟೀಂ ಇಂಡಿಯಾ ಮತ್ತು ಅಫ್ಘಾನಿಸ್ತಾನ (Ind vs Afg) ನಡುವಿನ 2ನೇ ಟಿ20 ಪಂದ್ಯದ ವೇಳೆ ಇಂದೋರ್‌ನ ಹೋಳ್ಕರ್‌ ಮೈದಾನದಲ್ಲಿ ಭದ್ರತೆ ಉಲ್ಲಂಘಿಸಿದ ಕ್ರಿಕೆಟಿಗ ವಿರಾಟ್‌ ಕೊಹ್ಲಿ (Virat Kohli) ಅವರ ಅಪ್ಪಟ ಅಭಿಮಾನಿಗೆ ಸಂಕಷ್ಟ ಎದುರಾಗಿದೆ.

    ಪಂದ್ಯದಲ್ಲಿ ಅಫ್ಘಾನಿಸ್ತಾನದ ಇನ್ನಿಂಗ್ಸ್‌ ವೇಳೆ ಕೊಹ್ಲಿಯ ಅಪ್ಪಟ ಅಭಿಮಾನಿಯೊಬ್ಬ (Virat Kohli Fan) ಭದ್ರತೆ ಉಲ್ಲಂಘಿಸಿ ಮೈದಾನಕ್ಕೆ ಹಾರಿಬಂದು ಕೊಹ್ಲಿಯನ್ನು ಭೇಟಿಯಾಗಿದ್ದಾನೆ.‌ ಓಡಿಬಂದು ಬೌಂಡರಿ ಲೈನ್‌ ಬಳಿ ನಿಂತಿದ್ದ ಕೊಹ್ಲಿಯ ಪಾದಮುಟ್ಟಿದ್ದಾನೆ, ಬಳಿಕ ಅಪ್ಪಿಗೊಂಡು ಭಾವುಕನಾಗಿದ್ದಾನೆ. ಮೈದಾನಕ್ಕೆ ನುಗ್ಗಿದ ಅಭಿಮಾನಿಯನ್ನು ಮಧ್ಯಪ್ರದೇಶ ಪೊಲೀಸರು (MadhyaPradesh Police) ವಶಕ್ಕೆ ಪಡೆದಿದ್ದಾರೆ. ಯುವಕನನ್ನು ತುಕೋಗಂಜ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ. ಇದನ್ನೂ ಓದಿ: ಆಫ್ಘನ್ ತಂಡದ ವಿರುದ್ಧ ಭಾರತ ಗೆಲುವು – ಜೈಸ್ವಾಲ್, ದುಬೆ ಅರ್ಧ ಶತಕ

    ಟಿಕೆಟ್‌ ಖರೀದಿಸಿ ಪಂದ್ಯ ವೀಕ್ಷಿಸಲು ಬಂದಿದ್ದ ಯುವಕ ನರೇಂದ್ರ ಹಿರ್ವಾನಿ ಗೇಟ್‌ ಮೂಲಕ ಮೈದಾನಕ್ಕೆ ನುಗ್ಗಿದ್ದಾನೆ. ಯುವಕನು ಕೊಹ್ಲಿಯ ಅಪ್ಪಟ ಅಭಿಮಾನಿಯಾಗಿದ್ದು, ಹಿರಿಯ ಆಟಗಾರನನ್ನು ಭೇಟಿಯಾಗಬೇಕೆಂಬ ಆಸೆಯಿಂದ ಪ್ರೇಕ್ಷಕರ ಗ್ಯಾಲರಿಯಿಂದ ಜಿಗಿದು ಮೈದಾನ ಪ್ರವೇಶಿಸಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸದ್ಯ ಯುವಕನ ವಿಚಾರಣೆ ನಡೆಸಲಾಗುತ್ತಿದ್ದು, ವಿಚಾರಣೆ ಮುಗಿದ ಬಳಿಕ ಬಳಿಕ ಮುಂದಿನ ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ – ಯುಪಿ ಮೂಲದ ಹೊಸ ಆಟಗಾರನಿಗೆ ಚಾನ್ಸ್

    ಭಾರತಕ್ಕೆ ಸರಣಿ ಜಯ: ಅಫ್ಘಾನಿಸ್ತಾನ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಟಿ20 ಸರಣಿಯನ್ನು ಭಾರತ ಗೆದ್ದುಕೊಂಡಿದೆ. ಆರಂಭಿಕ ಎರಡು ಪಂದ್ಯಗಳನ್ನು ಗೆದ್ದು ಸರಣಿ ತನ್ನದಾಗಿಸಿಕೊಂಡಿರುವ ಭಾರತ, ತವರಿನಲ್ಲೇ ವೈಟ್‌ವಾಶ್‌ ಮಾಡುವ ಗುರಿ ಹೊಂದಿದೆ. ಭಾನುವಾರ ಇಂದೋರ್‌ನ ಹೋಳ್ಕರ್‌ ಮೈದಾನದಲ್ಲಿ ನಡೆದ 2ನೇ ಟಿ20 ಪಂದ್ಯದಲ್ಲಿ ಟಾಸ್‌ ಗೆದ್ದ ಭಾರತ ಮೊದಲು ಫೀಲ್ಡಿಂಗ್‌ ಆಯ್ದುಕೊಂಡಿತು.

    ಮೊದಲು ಬ್ಯಾಟಿಂಗ್‌ ಮಾಡಿದ ಅಫ್ಘಾನಿಸ್ತಾನ ತಂಡವು ಗುಲ್ಬದೀನ್ ನಯೀಬ್ ಅವರ ಅರ್ಧಶತಕದ ನೆರವಿನಿಂದ 20 ಓವರ್​​​ಗಳಲ್ಲಿ 172 ರನ್‌ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನತ್ತಿದ್ದ ಭಾರತ ಯಶಸ್ವಿ ಜೈಸ್ವಾಲ್‌, ಶಿವಂ ದುಬೆ ಸ್ಫೋಟಕ ಅರ್ಧಶತಕಗಳ ನೆರವಿನಿಂದ 15.4 ಓವರ್‌ಗಳಲ್ಲೇ 173 ರನ್‌ ಗಳಿಸಿ ಗೆಲುವು ಸಾಧಿಸಿತು. ಇದನ್ನೂ ಓದಿ: ಆಫ್ಘನ್ ತಂಡದ ವಿರುದ್ಧ ಭಾರತ ಗೆಲುವು – ಜೈಸ್ವಾಲ್, ದುಬೆ ಅರ್ಧ ಶತಕ

  • ಮೋದಿ ಸರ್ಕಾರ ಪ್ರಜಾಪ್ರಭುತ್ವದ ಕತ್ತು ಹಿಸುಕಿದೆ: 141 ಸಂಸದರ ಅಮಾನತಿಗೆ ಸೋನಿಯಾ ಗಾಂಧಿ ಕಿಡಿ

    ಮೋದಿ ಸರ್ಕಾರ ಪ್ರಜಾಪ್ರಭುತ್ವದ ಕತ್ತು ಹಿಸುಕಿದೆ: 141 ಸಂಸದರ ಅಮಾನತಿಗೆ ಸೋನಿಯಾ ಗಾಂಧಿ ಕಿಡಿ

    ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ (Winter Parliament Session) ಅಶಿಸ್ತಿನ ನಡವಳಿಕೆ ಹಿನ್ನೆಲೆ 141 ಸಂಸದರನ್ನು (MP) ಅಮಾನತುಗೊಳಿಸಿದ ಕುರಿತು ಕಾಂಗ್ರೆಸ್ ಸಂಸದೀಯ ಪಕ್ಷದ (CPP) ಮುಖ್ಯಸ್ಥೆ ಸೋನಿಯಾ ಗಾಂಧಿ (Sonia Gandhi) ಪ್ರತಿಕ್ರಿಯಿಸಿದ್ದು, ನರೇಂದ್ರ ಮೋದಿ (Narendra Modi) ಸರ್ಕಾರ ಪ್ರಜಾಪ್ರಭುತ್ವದ ಕತ್ತು ಹಿಸುಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ವಿರೋಧ ಪಕ್ಷದ 141 ಸಂಸದರನ್ನು ಸರ್ಕಾರ ಅಮಾನತುಗೊಳಿಸಿರುವುದನ್ನು ಖಂಡಿಸಿದ ಅವರು, ಸಂಪೂರ್ಣವಾಗಿ ಸಮಂಜಸವಾದ ಮತ್ತು ನ್ಯಾಯಸಮ್ಮತವಾದ ಬೇಡಿಕೆಗೆ ಒತ್ತಾಯಿಸಿದ್ದಕ್ಕಾಗಿ ಹಿಂದೆಂದೂ ಇಷ್ಟು ವಿರೋಧ ಪಕ್ಷದ ಸಂಸದರನ್ನು ಸದನದಿಂದ ಅಮಾನತುಗೊಳಿಸಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ:ಉಪರಾಷ್ಟ್ರಪತಿಗೆ ಅವಮಾನಿಸಿದ್ದನ್ನು ನೋಡಿ ದಿಗ್ಭ್ರಮೆಗೊಂಡಿದ್ದೇನೆ: ಮುರ್ಮು ಬೇಸರ

    ಡಿಸೆಂಬರ್ 13ರಂದು ಸಂಸತ್ ಭವನದಲ್ಲಿ ನಡೆದ ಭದ್ರತಾ ಉಲ್ಲಂಘನೆ (Security Breach) ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah)ಅವರಿಂದ ಹೇಳಿಕೆ ನೀಡುವಂತೆ ವಿಪಕ್ಷ ನಾಯಕರು ಒತ್ತಾಯಿಸಿದ್ದಾರೆ. ಭದ್ರತಾ ಲೋಪದ ಕುರಿತು ಅಮಿತ್ ಶಾ ಹೇಳಿಕೆ ಕೊಡಬೇಕಾಗಿತ್ತು ಎಂದು ಸಂಸದರನ್ನು ಬೆಂಬಲಿಸಿದರು. ಇದನ್ನೂ ಓದಿ: ಇವಿಎಂ ಬಗ್ಗೆ ಮತ್ತೆ ವಿಪಕ್ಷಗಳಿಗೆ ಅನುಮಾನ – ವಿವಿಪ್ಯಾಟ್‌ ಸ್ಲಿಪ್‌ ಮತದಾರರ ಕೈಗೆ ನೀಡಬೇಕು

  • ಸಂಸತ್‌ನಲ್ಲಿನ ಭದ್ರತಾ ಲೋಪಕ್ಕೂ, ಸಂಸದರ ಅಮಾನತಿಗೂ ಸಂಬಂಧವಿಲ್ಲ: ಲೋಕಸಭಾ ಸ್ಫೀಕರ್‌ ಸ್ಪಷ್ಟನೆ

    ಸಂಸತ್‌ನಲ್ಲಿನ ಭದ್ರತಾ ಲೋಪಕ್ಕೂ, ಸಂಸದರ ಅಮಾನತಿಗೂ ಸಂಬಂಧವಿಲ್ಲ: ಲೋಕಸಭಾ ಸ್ಫೀಕರ್‌ ಸ್ಪಷ್ಟನೆ

    – ದೇಶದ ಎಲ್ಲಾ ಸಂಸದರಿಗೆ ಸ್ಪೀಕರ್‌ ಓಂ ಬಿರ್ಲಾ ಪತ್ರ

    ನವದೆಹಲಿ: ಲೋಕಸಭಾ ಸಂಸದರ ಅಮಾನತಿಗೂ, ಸಂಸತ್‌ ಭದ್ರತಾ ಲೋಪ (Lok Sabha Security Breach) ಘಟನೆಗೂ ಯಾವುದೇ ಸಂಬಂಧವಿಲ್ಲ ಎಂದು ಲೋಕಸಭೆಯ ಸ್ಫೀಕರ್‌ ಓಂ ಬಿರ್ಲಾ (Om Birla) ಸ್ಪಷ್ಟನೆ ನೀಡಿದ್ದಾರೆ.

    ಬುಧವಾರ ಸಂಸತ್‌ನಲ್ಲಿ ಸಂಭವಿಸಿದ ಭದ್ರತಾ ಲೋಪ ಘಟನೆ ಕುರಿತು ಲೋಕಸಭೆಯ ಸ್ಪೀಕರ್‌ (Lok Sabha Speaker) ಓಂ ಬಿರ್ಲಾ ಅವರು ಎಲ್ಲಾ ಸಂಸದರಿಗೆ ಶನಿವಾರ (ಇಂದು) ಪತ್ರ ಬರೆದಿದ್ದಾರೆ.‌ ಕೆಲವು ಸದಸ್ಯರನ್ನು ಅಮಾನುತುಗೊಳಿಸಿರುವ ಸದನದ ನಿರ್ಧಾರವನ್ನು ಸಂಸತ್ತಿನ ಭದ್ರತಾ ಲೋಪಕ್ಕೆ ಲಿಂಕ್‌ ಮಾಡುತ್ತಿರುವುದು ದುರದೃಷ್ಟಕರ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ. ಸದಸ್ಯರನ್ನು ಅಮಾನತು ಮಾಡಿದ್ದು, ಸದನದ ಪಾವಿತ್ರ್ಯತೆ ಎತ್ತಿಹಿಡಿಯುವುದಕ್ಕಾಗಿ ಮಾತ್ರ ಎಂದು ಸ್ಪಷ್ಟನೆ ನೀಡಿದ್ದಾರೆ.

    ಡಿಸೆಂಬರ್‌ 13ರ ಬುಧವಾರ ನಡೆದ ಸಂಸತ್‌ನಲ್ಲಿ ನಡೆದ ಘಟನೆಯು ಭದ್ರತಾ ಲೋಪಕ್ಕೆ ಕಾರಣವಾಯಿತು. ಮರುದಿನ ಭದ್ರತಾ ಲೋಪ ಖಂಡಿಸಿ ಸಂಸದರು ಸದನದಲ್ಲಿ ಗದ್ದಲ ಎಬ್ಬಿಸಿದ್ದರಿಂದ ಓರ್ವ ರಾಜ್ಯಸಭಾ ಸದಸ್ಯರು ಸೇರಿದಂತೆ ಪ್ರತಿಪಕ್ಷಗಳ 14 ಮಂದಿ ಲೋಕಸಭಾ ಸದಸ್ಯರನ್ನು ಅಧಿವೇಶನದ ಉಳಿದ ಭಾಗದಿಂದ ಅಮಾನತುಗೊಳಿಸಲಾಯಿತು (MPs Suspend). ಇದನ್ನೂ ಓದಿ: ಸಂಸತ್ತಿನಲ್ಲಿ ಭದ್ರತಾ ಲೋಪ ಕೇಸ್‌ – ಭಾರತಕ್ಕೆ ಬೇಕಾಗಿರುವುದು ಬಾಂಬ್ ಎಂದು ಫೇಸ್ಬುಕ್‌ನಲ್ಲಿ ಬರೆದುಕೊಂಡಿದ್ದ ಮಾಸ್ಟರ್‌ಮೈಂಡ್‌

    ಈ ಘಟನೆಗೆ ಸಂಬಂಧಿಸಿದಂತೆ ಸ್ಪೀಕರ್‌ ಸ್ಪಷ್ಟನೆ ನೀಡಿದ್ದಾರೆ. ಸಂಸತ್ತಿನ ಹೊಸ ಕಟ್ಟಡದ ಉದ್ಘಾಟನಾ ಸಮಯದಲ್ಲೇ ನಾವು ಸದನದೊಳಗೆ ಫಲಕ ಹಿಡಿದು ಬರುವುದನ್ನು ನಿಷೇಧಿಸಿದ್ದೇವೆ. ಅಲ್ಲದೇ ಸದನದ ಬಾವಿಗೆ ಇಳಿದು ಗದ್ದಲ ಸೃಷ್ಟಿಸುವುದುದಿಲ್ಲ ಎಂದು ಸಹ ನಿರ್ಧರಿಸಿದ್ದೇವೆ. ಸದನದ ಕಲಾಪಗಳ ಸಮಯದಲ್ಲಿ ಅನುಚಿತ ನಡವಳಿಕೆಗಳು ಹಾಗೂ ಕಲಾಪಕ್ಕೆ ಅಡ್ಡಿಯುಂಟುಮಾಡುವುದನ್ನು ಸಹಿಸುವುದಿಲ್ಲ. ಸಂಸತ್ತಿನ ಸಭ್ಯತೆ ಮತ್ತು ಘನತೆ ಕಾಪಾಡುವುದು ನಮ್ಮ ಆದ್ಯತೆ. ಆದ್ದರಿಂದ ಸರ್ವಾನುಮತದೊಂದಿಗೆ ಸದಸ್ಯರನ್ನು ಅಮಾನತುಗೊಳಿಸುವ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಯಿತು ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಸಂಸತ್‌ನಲ್ಲಿ ಭದ್ರತಾ ಲೋಪ- 6ನೇ ಆರೋಪಿ ಅರೆಸ್ಟ್

    ಇನ್ನೂ ಡಿಸೆಂಬರ್ 13ರ ಭದ್ರತಾ ಲೋಪ ಘಟನೆಗೆ ಸಂಬಂಧಿಸಿದಂತೆ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ. ಆ ಸಮಿತಿ ಈಗಾಗಲೇ ಕಾರ್ಯನಿರ್ವಹಿಸಲು ಪ್ರಾರಂಭಿಸಿದೆ. ಸಮಿತಿಯ ವರದಿಯನ್ನು ಶೀಘ್ರದಲ್ಲೇ ಸದನದೊಂದಿಗೆ ಹಂಚಿಕೊಳ್ಳಲಾಗುವುದು. ಜೊತೆಗೆ, ಸಂಸತ್ತಿನ ಸಂಕೀರ್ಣದಲ್ಲಿ ಭದ್ರತೆಯ ವಿವಿಧ ಅಂಶಗಳನ್ನು ಪರಿಶೀಲಿಸಲು ಮತ್ತು ಸಮರ್ಪಕ ಯೋಜನೆ ರೂಪಿಸಲು ನಾನು ಉನ್ನತ ಅಧಿಕಾರದ ಸಮಿತಿಯನ್ನೂ ಸಹ ರಚಿಸಿದ್ದೇನೆ. ಇಂತಹ ಘಟನೆಗಳು ಮರುಕಳಿಸುವುದಿಲ್ಲ ಎಂದು ಓಂ ಬಿರ್ಲಾ ಭರವಸೆ ನೀಡಿದ್ದಾರೆ.

    ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಸೇರಿದಂತೆ ಅನೇಕರು ತಮ್ಮ ಎಕ್ಸ್‌ ಖಾತೆಯಲ್ಲಿ ಈ ಪತ್ರವನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಸಂಸತ್‌ ದಾಳಿಗೆ ಪ್ರಧಾನಿ ಮೋದಿ ನೀತಿಗಳೇ ಕಾರಣ: ರಾಹುಲ್‌ ಗಾಂಧಿ ಆರೋಪ

  • ಸಂಸತ್‌ನಲ್ಲಿ ಭದ್ರತಾ ಲೋಪ- 6ನೇ ಆರೋಪಿ ಅರೆಸ್ಟ್

    ಸಂಸತ್‌ನಲ್ಲಿ ಭದ್ರತಾ ಲೋಪ- 6ನೇ ಆರೋಪಿ ಅರೆಸ್ಟ್

    ನವದೆಹಲಿ: ಸಂಸತ್ (Parliament) ಭವನದಲ್ಲಿ ವೀಕ್ಷಕರ ಗ್ಯಾಲರಿಯಿಂದ ಹಾರಿಬಂದು ಸ್ಮೋಕ್ ಬಾಂಬ್ (Smoke Bomb) ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪೈಕಿ 6ನೇ ಆರೋಪಿ ಮಹೇಶ್ ಕುಮಾವತ್ (Mahesh Kumawat) ಅನ್ನು ದೆಹಲಿ ಪೊಲೀಸರು ಶನಿವಾರ ಬಂಧಿಸಿದ್ದಾರೆ.

    ಪ್ರಕರಣದಲ್ಲಿ ಮಾಸ್ಟರ್‌ಮೈಂಡ್ ಆಗಿರುವ ಲಲಿತ್ ಝಾ ದೆಹಲಿಯಿಂದ ತಪ್ಪಿಸಿಕೊಳ್ಳವಲ್ಲಿ ಮಹೇಶ್ ಕುಮಾವತ್ ಸಹಾಯ ಮಾಡಿದ ಆರೋಪದ ಮೇರೆಗೆ ಆತನನ್ನು ಇಂದು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಡಿಸೆಂಬರ್ 13ರಂದು ದೆಹಲಿಯ ಸಂಸತ್ ಭವನದಲ್ಲಿ ನಡೆದ ಘಟನೆಯನ್ನು ಮರುಸೃಷ್ಟಿಸಲು ಪೊಲೀಸರು ಸಂಸತ್ತಿನ ಅನುಮತಿಯನ್ನು ಪಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಗೆಳತಿ ಕಾಲಿನ ಮೇಲೆ ಕಾರು ಹರಿಸಿದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ!

    ಪ್ರಕರಣದ ಪ್ರಮುಖ ಪಾತ್ರಧಾರಿ ಪಶ್ಚಿಮ ಬಂಗಾಳ ಮೂಲದ ಲಲಿತ್ ಝಾನನ್ನು ಪೊಲೀಸರು ಶುಕ್ರವಾರ ರಾತ್ರಿ ಬಂಧಿಸಿದ್ದು, ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ. ಸಂಸತ್ತಿನ ಭದ್ರತೆಯನ್ನು ಉಲ್ಲಂಘಿಸುವ ಸಂಚು ರೂಪಿಸಲು ಎಲ್ಲಾ ಆರೋಪಿಗಳು ಹಲವು ಬಾರಿ ಭೇಟಿಯಾಗಿದ್ದರು ಎಂದು ಸ್ವತಃ ಆರೋಪಿಗಳೇ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ಪಟಿಯಾಲ ಹೌಸ್ ನ್ಯಾಯಾಲಯದಲ್ಲಿ ಹೇಳಿದ್ದಾರೆ. ಇದನ್ನೂ ಓದಿ: ಕ್ರೀಡಾ ವಿದ್ಯಾರ್ಥಿಯೊಂದಿಗೆ ಕಾರಿನಲ್ಲಿ ಸೆಕ್ಸ್‌ – ಶಿಕ್ಷಕಿಯನ್ನ ರೆಡ್‌ಹ್ಯಾಂಡಾಗಿ ಹಿಡಿದು ಪೊಲೀಸರಿಗೊಪ್ಪಿಸಿದ ತಾಯಿ

    ಅಲ್ಲದೇ ಆರೋಪಿಯು ಯಾವುದೇ ಶತ್ರು ದೇಶ ಅಥವಾ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದಾನೆಯೇ ಎಂದು ಖಚಿತಪಡಿಸಿಕೊಳ್ಳಲು ಆರೋಪಿಯನ್ನು ವಿಚಾರಣೆಗೆ ಒಳಪಡಿಸಬೇಕಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಗಂಡ-ಹೆಂಡತಿ ಹನಿಟ್ರ್ಯಾಪ್; ಕೋಟ್ಯಧಿಪತಿ ಉದ್ಯಮಿಗೆ ವಂಚನೆ – 6 ಮಂದಿ ಬಂಧನ

    ಪ್ರಕರಣದಲ್ಲಿ ವಿವಿಧ ರಾಜ್ಯಗಳ 6 ಮಂದಿ ಆರೋಪಿಗಳು ಭಾಗಿಯಾಗಿದ್ದು, ಇಬ್ಬರು ಸಂಸತ್‌ನ ಒಳಗಡೆ ಸ್ಮೋಕ್ ಬಾಂಬ್ ಸಿಡಿಸಿದರೆ ಇನ್ನಿಬ್ಬರು ಸಂಸತ್ ಭವನದ ಹೊರಗಡೆ ಸ್ಮೋಕ್ ಬಾಂಬ್ ಸಿಡಿಸಿ ಘೋಷಣೆ ಕೂಗಿದ್ದರು. ಇನ್ನೋರ್ವ ಆರೋಪಿ ಸ್ಮೋಕ್ ಬಾಂಬ್ ದಾಳಿಯ ದೃಶ್ಯವನ್ನು ತನ್ನ ಮೊಬೈಲ್‌ನಲ್ಲಿ ಸೆರೆಹಿಡಿದು ಪರಾರಿಯಾಗಿದ್ದ. ಇದೀಗ ಆರೋಪಿಗಳ ಪೈಕಿ ಎಲ್ಲರನ್ನೂ ಬಂಧಿಸಿದ್ದು, ಘಟನೆಯ ಹಿಂದಿನ ಉದ್ದೇಶವನ್ನು ಅರಿಯುವ ಸಲುವಾಗಿ ತೀವ್ರ ತನಿಖೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಚಲಿಸುತ್ತಿದ್ದ ಬಸ್ಸಿನಲ್ಲೇ ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ

  • ಸಂಸತ್‌ಗೆ ನುಗ್ಗಿದ ದುಷ್ಕರ್ಮಿಗಳು: ಇದು ಕಾಂಗ್ರೆಸ್ ಕುತಂತ್ರ ಇರಬಹುದು ಎಂದ ಮುತಾಲಿಕ್

    ಸಂಸತ್‌ಗೆ ನುಗ್ಗಿದ ದುಷ್ಕರ್ಮಿಗಳು: ಇದು ಕಾಂಗ್ರೆಸ್ ಕುತಂತ್ರ ಇರಬಹುದು ಎಂದ ಮುತಾಲಿಕ್

    ಧಾರವಾಡ: ನೂತನ ಸಂಸತ್ ಭವನಕ್ಕೆ ದುಷ್ಕರ್ಮಿಗಳು ನುಗ್ಗಿ ಗಲಾಟೆ (Security Breach in LokSabha) ಮಾಡಿರುವ ಪ್ರಕರಣದ ಹಿಂದೆ ಕಾಂಗ್ರೆಸ್ ಕುತಂತ್ರ ಇರಬಹುದು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Muthalik) ಕಳವಳ ವ್ಯಕ್ತಪಡಿಸಿದ್ದಾರೆ.

    ಧಾರವಾಡದಲ್ಲಿ ಮಾತನಾಡಿದ ಅವರು, ಈ ಘಟನೆ ಆಘಾತಕಾರಿ ಆಗಿದೆ, ಪ್ರತಿಭಟನೆಗೆ ಪ್ರಜಾಪ್ರಭುತ್ವದಲ್ಲಿ ಹಕ್ಕಿದೆ. ಆದ್ರೆ, ಇದು ಕಾನೂನು ಬಾಹಿರ ಚಟುವಟಿಕೆ. ಭಯೋತ್ಪಾದಕ ಕೃತ್ಯದ ರೀತಿಯಲ್ಲಿ ನಡೆದಿದೆ, ಇದರ ಹಿಂದೆ ಕಾಂಗ್ರೆಸ್ (Congress) ಕುತಂತ್ರ ಇರಬಹುದು ಎಂದು ಅನುಮಾನ ವ್ಯಕ್ತಪಡಿದ್ದಾರೆ.

    ಬುದ್ಧಿಜೀವಿಗಳ ಮೂಲಕ ಕಾಂಗ್ರೆಸ್ ಹೀಗೆ ಮಾಡಿಸಿರಬಹುದು ಎಂದ ಅವರು, ಸಂಸದ ಪ್ರತಾಪ್ ಸಿಂಹ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಪ್ರತಾಪ್ ಸಿಂಹ ಅವರು ದೇಶಭಕ್ತ ಅವರ ಮೇಲೆ ಆಪಾದನೆ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರಕ್ಕೆ ಮುಸ್ಲಿಂ ಶಿಲ್ಪಿಗಳಿಂದ ರೂಪುಗೊಳ್ಳುತ್ತಿದೆ ರಾಮನ ವಿಗ್ರಹ

    ಖಲಿಸ್ತಾನಿ ನಾಯಕ ಪನ್ನು ಈ ಹಿಂದೆಯೇ 22 ವರ್ಷಗಳ ಹಿಂದಿನ ದಾಳಿಯಂತೆ ದಾಳಿ ಮಾಡುತ್ತೇವೆ ಎಂದು ಹೇಳಿದ್ದ. ಆತನ ಹೇಳಿಕೆಯಂತೆ ಸಂಸತ್‌ನಲ್ಲಿ ನಡೆದ ಘಟನೆ ನೋಡಿದ್ರೆ ಲಿಂಕ್ ಆಗುತ್ತಿದೆ. ಇದು ದೇಶಕ್ಕೆ ಅಪಾಯಕಾರಿಯಾಗಿದ್ದು, ಪ್ರತ್ಯೇಕತಾವಾದಿಗಳ ಹಿನ್ನೆಲೆ ಬಗ್ಗೆಯೂ ಪರಿಶೀಲನೆ ಮಾಡಬೇಕು‌ ಎಂದು ಆಗ್ರಹಿಸಿದ್ದಾರೆ.

    6 ಜನ ಆರೋಪಿಗಳನ್ನು ಎನ್‌ಕೌಂಟರ್‌ ಮಾಡಬೇಕು, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ರೀತಿ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪ ಮಾಡುತ್ತಿದೆ. ಇದು ಸರಿಯಲ್ಲ, ಇದೊಂದು ಹಸಿ ಸುಳ್ಳು. ಹಾಗಾದ್ರೆ ಜನ ಮೋದಿಗೆ ಯಾಕೆ ಮತ ಹಾಕುತ್ತಾರೆ? ಆರೂ ಜನ ಆರೋಪಿಗಳು ಬೇರೆ ಬೇರೆ ರಾಜ್ಯದವರು, ಇವರೆಲ್ಲ ಹೇಗೆ ಸೇರಿದ್ರು ಎಂಬುದೇ ಆಘಾತಕಾರಿ. ಜೆಎನ್‌ಯು ನಲ್ಲಿ ದೇಶದ್ರೋಹಿ ಘೋಷಣೆ ಹಾಕಿದ್ದರು, ಅದೇ ಮಾದರಿಯೊಲ್ಲಿ ಇಲ್ಲಿಯೂ ಆಗಿದೆ. ಕೇಂದ್ರ ಸರ್ಕಾರದ ಬಗ್ಗೆ ಅಪಪ್ರಚಾರ ಮಾಡುವ ಪ್ರವೃತ್ತಿ ಇದರಲ್ಲಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಪ್ರತಾಪ್‌ ಸಿಂಹ ಅವ್ರು ಯಾವ ಹಿನ್ನೆಲೆಯಲ್ಲಿ ಪಾಸ್‌ ಕೊಟ್ಟರು ಎಲ್ಲವೂ ತನಿಖೆ ಆಗುತ್ತೆ: ಪ್ರಹ್ಲಾದ್‌ ಜೋಶಿ

  • ನನ್ನ ಮಗ ಕ್ರಾಂತಿಕಾರಿ ಪುಸ್ತಕಗಳಿಂದ ಪ್ರಭಾವಿತನಾಗಿದ್ದ, ಸಮಾಜ ಸೇವೆ ಮಾಡುವ ಹಂಬಲವಿತ್ತು – ಮನೋರಂಜನ್‌ ತಂದೆ ಬೇಸರ

    ನನ್ನ ಮಗ ಕ್ರಾಂತಿಕಾರಿ ಪುಸ್ತಕಗಳಿಂದ ಪ್ರಭಾವಿತನಾಗಿದ್ದ, ಸಮಾಜ ಸೇವೆ ಮಾಡುವ ಹಂಬಲವಿತ್ತು – ಮನೋರಂಜನ್‌ ತಂದೆ ಬೇಸರ

    – ಮನೋರಂಜನ್‌ ಮನೆಯಲ್ಲಿ ಕ್ರಾಂತಿಕಾರಿಗಳ ಸಾವಿರಾರು ಪುಸ್ತಕಗಳು ಪತ್ತೆ
    – ಬಿಡುವಿನ ವೇಳೆ ಮಕ್ಕಳಿಗೆ ಕರಾಟೆ ಹೇಳಿಕೊಡ್ತಿದ್ದ ಆರೋಪಿ

    ನವದೆಹಲಿ/ಮೈಸೂರು: ಸಂಸತ್ತಿಗೆ (Lok Sabha) ನುಗ್ಗಿದ ಆರೋಪಿ ಮನೋರಂಜನ್‌ ವಾಸವಿದ್ದ ಮೈಸೂರಿನ ವಿಜಯನಗರ (Mysuru Vijayanagara) ನಿವಾಸಕ್ಕೆ ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳೊಂದಿಗೆ ನಗರದ ಹಿರಿಯ ಪೊಲೀಸ್‌ (Mysuru Police) ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಪೋಷಕರೊಂದಿಗೂ ಮಾತನಾಡಿ ಕೆಲ ಮಾಹಿತಿ ಕಲೆಹಾಕಿದ್ದಾರೆ.

    ಆರೋಪಿ ಮನೋರಂಜನ್‌ (Manoranjan) ಕ್ರಾಂತಿಕಾರಿ ನಾಯಕರ ಜೀವನ ಚರಿತ್ರೆಗಳಿಂದ ಪ್ರಭಾವಿತನಾಗಿದ್ದ, ಪ್ರಾಥಮಿಕ, ಪ್ರೌಢ ಹಾಗೂ ಕಾಲೇಜು ಶಿಕ್ಷಣವನ್ನು ಮೈಸೂರಿನಲ್ಲಿ ಪೂರ್ಣಗೊಳಿಸಿ, ಬಳಿಕ ಬೆಂಗಳೂರಿನ ಕಾಲೇಜೊಂದರಲ್ಲಿ BA ಪದವಿ ಪಡೆದಿದ್ದ.

    ಎಂಜಿನಿಯರಿಂಗ್‌ ಮುಗಿಸಿ 9 ವರ್ಷ ಕಳೆದರೂ ಯಾವುದೇ ಉದ್ಯೋಗಕ್ಕೆ ಪ್ರಯತ್ನಿಸದೇ ದೇಶದ ವಿವಿಧೆಡೆಗಳಲ್ಲಿ ಸುತ್ತಾಡುತ್ತಿದ್ದ ಮನೋರಂಜನ್‌ ಕರಾಟೆಪಟುವಾಗಿದ್ದು, ಬಿಡುವಿನ ವೇಳೆಯಲ್ಲಿ ಮಕ್ಕಳಿಗೆ ಕರಾಟೆ ಹೇಳಿಕೊಡುತ್ತಿದ್ದ. ಪೋಷಕರಿಗೂ ಮಗ ಏನು ಮಾಡುತ್ತಿದ್ದಾನೆ ಅನ್ನುವ ಮಾಹಿತಿ ಇರಲಿಲ್ಲ. ಪೋಷಕರು ಉದ್ಯೋಗ ಮಾಡುವಂತೆ ಒತ್ತಾಯಿಸುತ್ತಿದ್ದರು. ಕೊನೇ ಪಕ್ಷ ಊರಿನಲ್ಲಿರುವ ಜಮೀನು ನೋಡಿಕೊಳ್ಳುವಂತೆ ಹೇಳಿದ್ದರು. ಅದ್ಯಾವುದು ಪ್ರಯೋಜನವಾಗದಿದ್ದಾಗ ಮಗನ ಬಗ್ಗೆ ತಲೆ ಕೆಡಿಸಿಕೊಳ್ಳುವುದನ್ನೇ ಬಿಟ್ಟಿದ್ದರು. ಈಗ ಮಗನ ಕೃತ್ಯದಿಂದ ಆಘಾತಕ್ಕೆ ಒಳಗಾಗಿದ್ದು, ತಪ್ಪು ಮಾಡಿದ್ದಲ್ಲಿ ತಕ್ಕ ಶಿಕ್ಷೆಯಾಗಲಿ ಎಂದು ಮನೋರಂಜನ್‌ ತಂದೆ ದೇವರಾಜೇಗೌಡ ಹೇಳಿದ್ದಾರೆ. ಇದನ್ನೂ ಓದಿ: ಒಂದಲ್ಲ ಮೂರು ಬಾರಿ ಮನೋರಂಜನ್‌ಗೆ ಪ್ರತಾಪ್‌ ಸಿಂಹ ಕಚೇರಿಯಿಂದ ಸಿಕ್ಕಿತ್ತು ಪಾಸ್‌!

    ಮನೋರಂಜನ್‌ ಸ್ವಾಮಿ ವಿವೇಕಾನಂದ ಅವರ ಪುಸ್ತಕ ಸೇರಿದಂತೆ ಮಹಾನ್‌ ಕ್ರಾಂತಿಕಾರಿ ನಾಯಕರ (Revolutionary Leaders) ವಿಚಾರಧಾರೆಗಳಿಂದ ಪ್ರಭಾವಿತನಾಗಿದ್ದಾನೆ. ಪುಸ್ತಕಗಳಿಗೆ ಸಾವಿರಾರು ರೂ. ಖರ್ಚು ಮಾಡುತ್ತಿದ್ದ. 40 ಸಾವಿರಕ್ಕೂ ಹೆಚ್ಚು ಪುಸ್ತಕಗಳು ಮನೆಯಲ್ಲಿವೆ. ನನ್ನ ಮಗನಿಗೆ ಸಮಾಜ ಸೇವೆ ಮಾಡಬೇಕೆಂಬ ಹಂಬಲವಿತ್ತು. ಒಂದು ವೇಳೆ ಅವನು ತಪ್ಪು ಮಾಡಿದ್ದರೆ ಗಲ್ಲಿಗೆ ಹಾಕಿ ಎಂದಿದ್ದಾರೆ ದೇವರಾಜೇಗೌಡ. ಇದನ್ನೂ ಓದಿ: ನಿರುದ್ಯೋಗದಿಂದ ಬೇಸತ್ತು ಸಾಯೋದೇ ಲೇಸು ಅನ್ನುತ್ತಿದ್ದಳು- ಸಂಸತ್ತಿನ ಹೊರಗಡೆ ಬಂಧಿಸಲ್ಪಟ್ಟವಳ ತಾಯಿ ಮಾತು

    ಮನೋರಂಜನ್‌, ಮೂಲತಃ ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ ಮಲ್ಲಾಪುರ ಗ್ರಾಮದ ದೇವರಾಜೇಗೌಡ ಮತ್ತು ಶೈಲಜಾ ದಂಪತಿಯ ಪುತ್ರ. ಈತನಿಗೆ ಸಹೋದರಿಯೂ ಇದ್ದಾರೆ. ದೇವರಾಜೇಗೌಡ ಕೃಷಿಕರಾಗಿದ್ದು, ಮಲ್ಲಾಪುರದಲ್ಲಿ 20 ಎಕರೆ ಜಮೀನಿನಲ್ಲಿ ಬೇಸಾಯ ಮಾಡುತ್ತಿದ್ದಾರೆ. ಮಕ್ಕಳ ಶಿಕ್ಷಣಕ್ಕಾಗಿ ಮೈಸೂರು ನಗರಕ್ಕೆ ಬಂದು ನೆಲೆಸಿದ್ದರು. ವಿಜಯನಗರದ 2ನೇ ಹಂತದಲ್ಲಿ ಸ್ವಂತ ಮನೆ ಕಟ್ಟಿಕೊಂಡು ವಾಸಿಸುತ್ತಿದ್ದಾರೆ. ಆಗಾಗ್ಗೆ ಊರಿಗೆ ಹೋಗಿ ವ್ಯವಸಾಯ ನೋಡಿಕೊಳ್ಳುತ್ತಿದ್ದಾರೆ ಎಂದು ವಿಚಾರಣೆ ಬಳಿಕ ಅಧಿಕಾರಿಗಳಿಂದ ತಿಳಿದುಬಂದಿದೆ.

    ಕ್ರಾಂತಿಕಾರಿ ನಾಯಕರ ಪುಸ್ತಕಗಳು ಪತ್ತೆ: ಮನೋರಂಜನ್‌ ಕೊಠಡಿಯನ್ನು ಪರಿಶೀಲಿಸಿದಾಗ ಕ್ರಾಂತಿಕಾರಿ ನಾಯಕರ ಜೀವನ ಚರಿತ್ರೆ, ಹೋರಾಟಗಳ ಪುಸ್ತಕಗಳು ಪತ್ತೆಯಾಗಿವೆ. ಈ ಬಗ್ಗೆ ನೆರೆಯ ನಿವಾಸಿಗಳು ಮತ್ತು ಮನೋರಂಜನ್‌ ಸ್ನೇಹಿತರನ್ನೂ ಅಧಿಕಾರಿಗಳು ಮಾತನಾಡಿಸಿ ಅಗತ್ಯ ಮಾಹಿತಿ ಪಡೆದುಕೊಂಡಿದ್ದಾರೆ.

    ಇಲ್ಲಿನ ಉಪಪೊಲೀಸ್‌ ಆಯುಕ್ತ ಗಜೇಂದ್ರ ಪ್ರಸಾದ್‌ ಅವರೂ ಸಹ ಮನೋರಂಜನ್‌ ತಂದೆ ದೇವರಾಜೇಗೌಡ ಅವರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ವಿಜಯನಗರ ಠಾಣೆ ಪೊಲೀಸರೊಂದಿಗೆ ಭಯೋತ್ಪಾದಕ ನಿಗ್ರಹ ದಳದ ಅಧಿಕಾರಿ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಇದನ್ನೂ ಓದಿ: ಶ್ರೀಕೃಷ್ಣ ಜನ್ಮಭೂಮಿ ವಿವಾದ – ಶಾಹಿ ಈದ್ಗಾ ಮಸೀದಿ ಸಮೀಕ್ಷೆಗೆ ಹೈಕೋರ್ಟ್‌ ಅನುಮತಿ

  • ವಿಶ್ವಗುರು ಆಡಳಿತ ವೈಫಲ್ಯವನ್ನು ಇಡೀ ವಿಶ್ವವೇ ನೋಡಿದೆ: ಬಿಕೆ ಹರಿಪ್ರಸಾದ್

    ವಿಶ್ವಗುರು ಆಡಳಿತ ವೈಫಲ್ಯವನ್ನು ಇಡೀ ವಿಶ್ವವೇ ನೋಡಿದೆ: ಬಿಕೆ ಹರಿಪ್ರಸಾದ್

    ಬೆಳಗಾವಿ: ಸಂಸತ್ (Parliament) ಭವನದಲ್ಲಿ ನಡೆದ ಭದ್ರತಾ ವೈಫಲ್ಯದ (Security Breach) ಹೊಣೆಯನ್ನು ವಿಶ್ವಗುರು ಪ್ರಧಾನಿ ಮೋದಿ (Narendra Modi) ಹೊರಬೇಕಾಗುತ್ತದೆ ಎಂದು ಕಾಂಗ್ರೆಸ್ (Congress) ನಾಯಕ ಬಿ.ಕೆ ಹರಿಪ್ರಸಾದ್ (BK Hariprasad) ಹೇಳಿದ್ದಾರೆ.

    ಸುವರ್ಣ ಸೌಧದಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಅವರು, ನಿನ್ನೆ ಮನೋರಂಜನ್ ದೇಶಕ್ಕೆ ಮನರಂಜನೆ ಕೊಟ್ಟಿದ್ದಾನೆ. ವಿಶ್ವಗುರು ನರೇಂದ್ರ ಮೋದಿಯವರನ್ನು ದೇವರು ಎಂದು ಮನೋರಂಜನ್ ಪರಿಗಣಿಸುತ್ತಿದ್ದರು ಎಂದು ಅವರ ತಂದೆ ಹೇಳಿದ್ದಾರೆ. ಫೇಕ್ ಅಂಧಭಕ್ತರು ಯಾವ ರೀತಿ ಇರುತ್ತಾರೆ ಎಂದು ನಿನ್ನೆ ಸಾಬೀತು ಮಾಡಿದ್ದಾರೆ. ರಾಷ್ಟ್ರದ ಪ್ರಖ್ಯಾತಿಗೆ ಕಪ್ಪು ಬಣ್ಣ ಬಳಿದಿದ್ದಾರೆ. ವಿಶ್ವಗುರು ಆಡಳಿತ ವೈಫಲ್ಯವನ್ನು ಇಡೀ ವಿಶ್ವವೇ ನೋಡಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಅಶಿಸ್ತಿನ ವರ್ತನೆ – ಲೋಕಸಭೆಯ 14 ಸಂಸದರು ಸಸ್ಪೆಂಡ್‌

    ಡಿಸೆಂಬರ್ 13ರಂದು ಯೋಧರು, ಪೊಲೀಸರು ಪಾರ್ಲಿಮೆಂಟ್ ರಕ್ಷಣೆ ಮಾಡಿದ ದಿನ. ಇವರೆಲ್ಲ ಅಂತಹ ದಿನವನ್ನು ಹುಡುಕುತ್ತಾರೆ. ಡಿಸೆಂಬರ್ 6, ಬುದ್ದ ಹುಟ್ಟಿದ ದಿನವನ್ನೇ ಇವರು ಹುಡುಕುತ್ತಾರೆ. ಮನೋರಂಜನ್ ಹಿನ್ನೆಲೆಯನ್ನು ಕರ್ನಾಟಕ ರಾಜ್ಯದ ಪೊಲೀಸರು ಸಂಪೂರ್ಣ ತನಿಖೆ ಮಾಡಬೇಕು. ಕೆಲವರು ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಲೋಕಸಭೆಯಲ್ಲಿ ಎರಡನೇ ಬಾರಿ ಈ ರೀತಿಯ ಘಟನೆ ನಡೆಯುತ್ತಿದೆ. 75 ವರ್ಷಗಳಲ್ಲಿ ನಾವು ಪಾಸ್ ಕೊಟ್ಟಿದ್ದೇವೆ. ಅವರೆಲ್ಲರೂ ಹೀಗೆ ಮಾಡಿದ್ದಾರಾ? ಯಾಕೆಂದರೆ ವಿಶ್ವಗುರು ಆಗಾಗ ಸಂಶೋಧನೆ ಮಾಡಿ ಅಂಧಭಕ್ತರಿಗೆ ಪಾಠ ಮಾಡುತ್ತಾ ಇರುತ್ತಾರೆ. ಮೋರಿಯಲ್ಲಿ ಪೈಪ್ ಹಾಕಿ ಗ್ಯಾಸ್ ಕಂಡುಹಿಡಿದಿದ್ದು ಇದೇ ವಿಶ್ವಗುರು. ಅದರ ಮೂಲಕ ಗ್ಯಾಸ್ ಪ್ರಯೋಗ ಮಾಡಲು ಬಂದಿದ್ದರಾ ಎಂದು ನೋಡಬೇಕು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಟಿಎಂಸಿ ಸಂಸದ ಡೆರೆಕ್ ಒಬ್ರಿಯಾನ್ ರಾಜ್ಯಸಭೆಯಿಂದ ಅಮಾನತು