Tag: security guards

  • ಇಬ್ಬರು ಭದ್ರತಾ ಸಿಬ್ಬಂದಿಗೆ ಗುಂಡಿಕ್ಕಿ ಬ್ಯಾಂಕ್‍ನಲ್ಲಿ 13.28 ಲಕ್ಷ ಲೂಟಿ

    ಇಬ್ಬರು ಭದ್ರತಾ ಸಿಬ್ಬಂದಿಗೆ ಗುಂಡಿಕ್ಕಿ ಬ್ಯಾಂಕ್‍ನಲ್ಲಿ 13.28 ಲಕ್ಷ ಲೂಟಿ

    ಪಾಟ್ನಾ: ಸರ್ಕಾರಿ ಸ್ವಾಮ್ಯದ ಬ್ಯಾಂಕ್ (Bank) ಒಂದರ ಇಬ್ಬರು ಭದ್ರತಾ ಸಿಬ್ಬಂದಿಯನ್ನು (Security guards) ದುಷ್ಕರ್ಮಿಗಳು ಗುಂಡಿಕ್ಕಿ ಕೊಂದು 13.28 ಲಕ್ಷ ರೂ. ದೋಚಿರುವ ಘಟನೆ ಬಿಹಾರದ (Bihar) ಸರನ್‍ನಲ್ಲಿ (Saran) ಗುರುವಾರ ನಡೆದಿದೆ.

    ಮಧ್ಯಾಹ್ನ 12.30 ರ ಸುಮಾರಿಗೆ ಐವರು ಶಸ್ತ್ರಸಜ್ಜಿತ ಅಪರಿಚಿತ ವ್ಯಕ್ತಿಗಳು (Armed assailants) ಬ್ಯಾಂಕ್‍ಗೆ ನುಗ್ಗಿದ್ದಾರೆ. ಭದ್ರತಾ ಸಿಬ್ಬಂದಿ ವಿರೋಧಿಸಿದಾಗ ಅವರ ಮೇಲೆ ಗುಂಡು ಹಾರಿಸಿದ್ದಾರೆ. ಚಿಕಿತ್ಸೆ ವೇಳೆ ಇಬ್ಬರೂ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಸಮನ್ಸ್ ಹಿಡಿದು ಠಾಣೆಯ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

    ಗಣೇಶ್ ಶಾ ಮತ್ತು ರಾಮ್ ನರೇಶ್ ರೈ ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ಸಿಬ್ಬಂದಿ. ಆರೋಪಿಗಳ ಪತ್ತೆಗೆ ಪೊಲೀಸರು ಸಿಸಿಟಿವಿ (CCTV) ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ತಪ್ಪಿತಸ್ಥರನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ. ಇದನ್ನೂ ಓದಿ: ಭೀಕರ ಸ್ಫೋಟ – ಡೈರಿ ಫಾರ್ಮ್‌ನಲ್ಲಿದ್ದ 18,000 ಹಸುಗಳು ಸಾವು

  • ಜೈಲಿನ ಮೇಲೆ ಗುಂಡಿನ ದಾಳಿ – 10 ಭದ್ರತಾ ಸಿಬ್ಬಂದಿ ಸೇರಿ 14 ಮಂದಿ ಸಾವು, 24 ಕೈದಿಗಳು ಎಸ್ಕೇಪ್‌

    ಜೈಲಿನ ಮೇಲೆ ಗುಂಡಿನ ದಾಳಿ – 10 ಭದ್ರತಾ ಸಿಬ್ಬಂದಿ ಸೇರಿ 14 ಮಂದಿ ಸಾವು, 24 ಕೈದಿಗಳು ಎಸ್ಕೇಪ್‌

    ಮೆಕ್ಸಿಕೊ: ಇಲ್ಲಿನ ಸಿಯುಡಾಡ್ ಜುವಾರೆಜ್‌ನಲ್ಲಿ ಬಂದೂಕುಧಾರಿಗಳು ಜೈಲಿನ ಮೇಲೆ (Mexican Border Prison) ಗುಂಡಿನ ದಾಳಿ ನಡೆಸಿದ್ದು, 10 ಭದ್ರತಾ ಸಿಬ್ಬಂದಿ ಮತ್ತು 4 ಮಂದಿ ಕೈದಿಗಳು ಮೃತಪಟ್ಟಿದ್ದಾರೆ.

    ಕೈದಿಗಳ ಕುಟುಂಬದವರು ತಮ್ಮ ಸದಸ್ಯರನ್ನು ಭೇಟಿ ಮಾಡಲು ಜೈಲಿಗೆ ತೆರಳಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಬಂದೂಕುಧಾರಿಗಳು ಪೆನಿಟೆನ್ಷಿಯರಿ ಸೆಂಟರ್‌ಗೆ ವಾಹನಗಳಲ್ಲಿ ಬಂದಿದ್ದಾರೆ. ನಂತರ ಭದ್ರತಾ ಅಧಿಕಾರಿಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಪರಿಸ್ಥಿತಿ ಉದ್ವಿಗ್ನಗೊಂಡ ಸನ್ನಿವೇಶದಲ್ಲಿ 24 ಕೈದಿಗಳು ಜೈಲಿನಿಂದ ಪರಾರಿಯಾಗಿದ್ದಾರೆ. ಇದನ್ನೂ ಓದಿ: ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆಗೆ ಹಾಜರಾದ 32 ಸಾವಿರ ಜನ – ಪೆನ್ನು, ಪೇಪರ್ ಹಿಡಿದು ಸ್ಟೇಡಿಯಂನಲ್ಲೆ ಕುಳಿತ್ರು

    ಮೆಕ್ಸಿಕನ್ ಸೈನಿಕರು ಮತ್ತು ರಾಜ್ಯ ಪೊಲೀಸರು ತಕ್ಷಣ ಜೈಲಿನ ನಿಯಂತ್ರಣ ಪಡೆದಿದ್ದಾರೆ. ದಾಳಿ ನಡೆಸಿದವರು ಯಾರು ಎಂಬುದು ಇನ್ನೂ ತಿಳಿದುಬಂದಿಲ್ಲ. ಮೆಕ್ಸಿಕನ್ ಜೈಲುಗಳಲ್ಲಿ ಈ ಹಿಂದೆಯೂ ಹಲವಾರು ಹಿಂಸಾಚಾರದ ದಾಳಿಗಳಾಗಿವೆ.

    ಜೈಲಿನ ಮೇಲೆ ದಾಳಿ ಮಾಡುವುದಕ್ಕೂ ಮೊದಲು, ಮುನ್ಸಿಪಲ್ ಪೊಲೀಸರನ್ನು ಗುರಿಯಾಗಿಸಿ ದಾಳಿ ನಡೆದಿತ್ತು. ದಾಳಿಕೋರರನ್ನು ಹಿಂಬಾಲಿಸಿ ನಾಲ್ವರನ್ನು ಪೊಲೀಸರು ಬಂಧಿಸಿದ್ದರು. ಅಲ್ಲದೇ ಎಸ್‌ಯುವಿಯಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಬಂದೂಕುಧಾರಿಗಳನ್ನು ಹತ್ಯೆಗೈದಿದ್ದರು. ಇದನ್ನೂ ಓದಿ: ಕಾಬೂಲ್‌ ಮಿಲಿಟರಿ ವಿಮಾನ ನಿಲ್ದಾಣದಲ್ಲಿ ಸ್ಫೋಟ – 10 ಮಂದಿ ಸಾವು

    Live Tv
    [brid partner=56869869 player=32851 video=960834 autoplay=true]

  • ಸತತ ಎರಡೂವರೆ ಗಂಟೆಗಳ ಕಾಲ ಲಿಫ್ಟ್‌ನಲ್ಲಿ ಸಿಕ್ಕಿಬಿದ್ದ 6ರ ಬಾಲಕ

    ಸತತ ಎರಡೂವರೆ ಗಂಟೆಗಳ ಕಾಲ ಲಿಫ್ಟ್‌ನಲ್ಲಿ ಸಿಕ್ಕಿಬಿದ್ದ 6ರ ಬಾಲಕ

    ಲಕ್ನೋ: ಬಾಲಕನೋರ್ವ ಲಿಫ್ಟ್‌ನೊಳಗೆ ಎರಡೂವರೆ ಗಂಟೆಗಳ ಕಾಲ ಸಿಕ್ಕಿಬಿದ್ದ ಘಟನೆ ಗುರುಗ್ರಾಮದ(Gurugram) ಪಿರಮಿಡ್ ಅರ್ಬನ್ ಹೋಮ್ಸ್‌ನಲ್ಲಿ ನಡೆದಿದೆ.

    ಆರವ್(6) ಎಂಬಾತ ರಾತ್ರಿ 8 ಗಂಟೆ ಸುಮಾರಿಗೆ ಪಾರ್ಕ್‍ಗೆ ಆಟವಾಡಲು ಹೋಗಿದ್ದ. ಆದರೆ ತುಂಬಾ ಸಮಯವಾದರೂ ಪಾರ್ಕ್‍ನಿಂದ ಮನೆಗೆ ಬರದದ್ದನ್ನು ಗಮನಿಸಿದ ಆರವ್ ಪೋಷಕರು(Parents) ಅವನನ್ನು ಹುಡುಕಲು ಪ್ರಾರಂಭಿಸಿದ್ದಾರೆ. ಆ ಸಂದರ್ಭದಲ್ಲಿ ಆರವ್ ಮೂರನೇ ಮಹಡಿಯಲ್ಲಿ ಲಿಫ್ಟ್‌ನಲ್ಲಿ(Lift) ಸಿಕ್ಕಿಬಿದ್ದಿರುವುದು ತಿಳಿದಿದೆ.

    ಇದಾದ ಬಳಿಕ ಸೊಸೈಟಿಯ ತಾಂತ್ರಿಕ ಸಿಬ್ಬಂದಿ ಎರಡೂವರೆ ಗಂಟೆಗಳ ಕಾಲ ಸಿಕ್ಕಿಬಿದ್ದಿದ್ದ ಆರವ್‍ನನ್ನು ರಕ್ಷಿಸಿದ್ದಾರೆ. ಸುಮಾರು ಮೂರು ಗಂಟೆಗಳ ಕಾಲ ಸಿಕ್ಕಿಬಿದ್ದಿದ್ದ ಆರವ್ ಭಯಗೊಂಡು ಜೋರಾಗಿ ಅಳುತ್ತಿದ್ದನು. ಆತನನ್ನು ಸಮಾಧಾನಗೊಳಿಸಿದ್ದಾರೆ. ಘಟನೆಗೆ ಭದ್ರತಾ ಸಿಬ್ಬಂದಿಯ(Security Guards) ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ವಿಮ್ಸ್ ಸರಣಿ ಸಾವು ಪ್ರಕರಣ – ಸತ್ತವರು ನಾಲ್ವರಲ್ಲ, ಇಬ್ಬರು ಮಾತ್ರ: ಸುಧಾಕರ್

    POLICE JEEP

    ಘಟನೆಗೆ ಸಂಬಂಧಿಸಿ ಆರವ್ ತಂದೆ ರಾಹುಲ್ ಯಾದವ್ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆದರೆ ಇದುವರೆಗೆ ಬಿಲ್ಡರ್, ಸೊಸೈಟಿಯಲ್ಲಿ ನಿಯೋಜಿಸಲಾದ ಭದ್ರತಾ ಸಿಬ್ಬಂದಿ ಅಥವಾ ನಿರ್ಲಕ್ಷ್ಯಕ್ಕೆ ಕಾರಣವಾದವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ನನಗೆ ಪಕ್ಷ ಮುಖ್ಯ, ಸಣ್ಣ ವಿಚಾರ ದೊಡ್ಡದು ಮಾಡೋದು ಬೇಡ: ಆರ್.ವಿ.ದೇಶಪಾಂಡೆ

    Live Tv 
    [brid partner=56869869 player=32851 video=960834 autoplay=true]

  • ಸೆಕ್ಯೂರಿಟಿ ಕಾಲರ್ ಹಿಡಿದು ಎಳೆದಾಡಿದ ಮಹಿಳೆ – ರಂಪಾಟದ ವೀಡಿಯೋ ವೈರಲ್

    ಸೆಕ್ಯೂರಿಟಿ ಕಾಲರ್ ಹಿಡಿದು ಎಳೆದಾಡಿದ ಮಹಿಳೆ – ರಂಪಾಟದ ವೀಡಿಯೋ ವೈರಲ್

    ಲಕ್ನೋ: ಸೆಕ್ಯೂರಿಟಿ ಒಬ್ಬರು ಗೇಟ್ ಬಾಗಿಲು ತೆಗೆಯೋದು ತಡವಾಗಿದ್ದಕ್ಕೇ ಕುಡಿದ ಮತ್ತಿನಲ್ಲಿದ್ದ ಮಹಿಳೆ ಸಿಬ್ಬಂದಿಯ ಕಾಲರ್‌ಪಟ್ಟಿ ಹಿಡಿದು ಎಳೆದಾಡಿದ್ದಾಳೆ. ಬಾಯಿಗೆ ಬಂದಂತೆ ಬೈದಿದ್ದು, ಸಮುದಾಯವನ್ನೂ ನಿಂದಿಸಿದ್ದಾಳೆ.

    ಸೆಕ್ಯೂರಿಟಿ ಕಾಲರ್ ಹಿಡಿದು ಎಳೆದಾಡಿ ತನ್ನ ದರ್ಪ ತೋರಿಸಿದ್ದು, ಹಲ್ಲೆಗೂ ಮುಂದಾಗಿರುವ ಘಟನೆ ನೋಯ್ಡಾದ ಜೇಪೆ ಗ್ರೂಪ್ ಸೊಸೈಟಿ ಠಾಣಾ ವ್ತಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಸಿನಿಮಾ ನೋಡಿಕೊಂಡು ಬರುತ್ತಿದ್ದಾಗ ಭೀಕರ ಅಪಘಾತ – ನವ ವಿವಾಹಿತೆ ಸ್ಥಳದಲ್ಲೇ ಸಾವು, ಪತಿ ಗಂಭೀರ

    ಗೇಟ್ ಬಾಗಿಲು ತೆಗೆಯಲು ವಿಳಂಬ ಮಾಡಿದ ಕಾರಣಕ್ಕೆ ಮಹಿಳೆ ಸೆಕ್ಯೂರಿಟಿ ಗಾರ್ಡ್‌ಗೆ ಬಾಯಿಗೆ ಬಂದಂತೆ ನಿಂಧಿಸಿದ್ದಾಳೆ. ಅಲ್ಲದೇ ಕೊರಳ ಪಟ್ಟಿ ಹಿಡಿದು ಎಳೆದಾಡಿದ್ದಾಳೆ. ಇದೇ ವೇಳೆ ಮಹಿಳೆಯರಿಗೆ ಗೌರವಿಸುವುದನ್ನು ಕಲಿಯಿರಿ ಎಂದು ಉಪದೇಶ ಮಾಡಿದ್ದಾಳೆ. ಜೊತೆಗೆ ಬಿಹಾರದ ಸಮುದಾಯವನ್ನೂ ನಿಂದಿಸಿದ್ದಾಳೆ. ಇದನ್ನೂ ಓದಿ: ಯೋಗಿ ಆದಿತ್ಯನಾಥ್‌ಗೆ ಜೀವ ಬೆದರಿಕೆ- ಶಿರಚ್ಛೇದನ ಮಾಡುವುದಾಗಿ ಫೇಸ್‍ಬುಕ್‍ನಲ್ಲಿ ಪೋಸ್ಟ್

    ವೀಡಿಯೋ ಗಮನಿಸಿದ ದೆಹಲಿ ಮಹಿಳಾ ಆಯೋಗದ ಆಯುಕ್ತರಾದ ಸ್ವಾತಿ ಮಾಲಿವಾಲ್ ಅವರು ನೋಯ್ಡಾದ ಪೊಲೀಸರಿಗೆ ಮಹಿಳೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಮಹಿಳೆ ರಂಪಾಟ ಮಾಡಿರುವ ವೀಡಿಯೋ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬ್ಯಾಂಕ್ ಕಚೇರಿಯಲ್ಲಿ ಮಲಗಿದ್ದಲ್ಲೇ ಹೆಣವಾದ ಮೂವರು ಸೆಕ್ಯೂರಿಟಿ ಗಾರ್ಡ್

    ಬ್ಯಾಂಕ್ ಕಚೇರಿಯಲ್ಲಿ ಮಲಗಿದ್ದಲ್ಲೇ ಹೆಣವಾದ ಮೂವರು ಸೆಕ್ಯೂರಿಟಿ ಗಾರ್ಡ್

    ಮಂಗಳೂರು: ಬ್ಯಾಂಕ್ ಕಚೇರಿ ಒಳಗೆ ಮಲಗಿದ್ದಲ್ಲೇ ಮೂವರು ಕಾವಲು ಸಿಬ್ಬಂದಿ ಹೆಣವಾದ ಘಟನೆ ಮಂಗಳೂರಿನ ಕೋಟೆಕಾರು ವ್ಯವಸಾಯ ಸಹಕಾರಿ ಸಂಘದ ಶಾಖಾ ಕಚೇರಿಯಲ್ಲಿ ನಡೆದಿದೆ.

    ತಲಪಾಡಿ ಬಳಿಯ ಕೆ.ಸಿ ರೋಡಿನಲ್ಲಿರುವ ಕಚೇರಿ ಕಟ್ಟಡದಲ್ಲಿ ಮೂವರು ಸಿಬ್ಬಂದಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಉಮೇಶ್(60), ಸಂತೋಷ್(37) ಹಾಗೂ ಸೋಮನಾಥ್(55) ಮಲಗಿದ್ದಲ್ಲೇ ಹೆಣವಾದ ದುರ್ದೈವಿಗಳು.

     

    ಜನರೇಟರ್ ರಾಸಾಯನಿಕ ಸೋರಿಕೆಯಿಂದ ಸಿಬ್ಬಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಕಿಟಕಿ ಬಾಗಿಲು ಮುಚ್ಚಿ ಮಲಗಿದ್ದ ಮೂವರು ಸೆಕ್ಯೂರಿಟಿ ಗಾರ್ಡ್‍ಗಳು ಮಳೆಗೆ ಕರೆಂಟ್ ಇಲ್ಲದ್ದರಿಂದ ಜನರೇಟರ್ ಸ್ಟಾರ್ಟ್ ಮಾಡಿ ಮಲಗಿದ್ದರು. ಇಂದು ಬೆಳಗ್ಗೆ ಹತ್ತು ಗಂಟೆಗೆ ಬ್ಯಾಂಕ್ ಸಿಬ್ಬಂದಿ ಆಗಮಿಸಿದಾಗ ಸೆಕ್ಯೂರಿಟಿ ಗಾರ್ಡ್‍ಗಳು ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಮೃತ ಉಮೇಶ್ ಅಯ್ಯಪ್ಪ ಮಾಲಾಧಾರಿಯಾಗಿದ್ದರು.

    ಘಟನೆಗೆ ಸಂಬಂಧಿಸಿದಂತೆ ಕೋಟೆಕಾರು ಸೊಸೈಟಿಗೆ ಉಳ್ಳಾಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ. ಜೂನ್ 23ರಂದು ಶಾಖೆಯಲ್ಲಿ ಚಿನ್ನಾಭರಣ ದರೋಡೆಯ ವಿಫಲ ಯತ್ನ ನಡೆದಿತ್ತು ಎಂದು ತಿಳಿದುಬಂದಿದೆ.