Tag: sedition

  • ಮೋದಿ ವಿರುದ್ಧ ಆಕ್ಷೇಪಾರ್ಹ ಲೇಖನ – ಸಂಜಯ್‌ ರಾವತ್‌ ವಿರುದ್ಧ ದೇಶದ್ರೋಹದ ಕೇಸ್‌

    ಮೋದಿ ವಿರುದ್ಧ ಆಕ್ಷೇಪಾರ್ಹ ಲೇಖನ – ಸಂಜಯ್‌ ರಾವತ್‌ ವಿರುದ್ಧ ದೇಶದ್ರೋಹದ ಕೇಸ್‌

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ವಿರುದ್ಧ ಆಕ್ಷೇಪಾರ್ಹ ಲೇಖನ ಪ್ರಕಟಿಸಿದ್ದಕ್ಕೆ ಶಿವಸೇನೆ (Shiv Sena) ಉದ್ದವ್‌ ಠಾಕ್ರೆ (Uddhav Thackeray) ಬಣದ ನಾಯಕ ಸಂಜಯ್‌ ರಾವತ್‌ (Sanjay Raut) ವಿರುದ್ಧ ದೇಶದ್ರೋಹದ (Sedition) ಪ್ರಕರಣ ದಾಖಲಾಗಿದೆ.

    ಪಕ್ಷದ ಮುಖವಾಣಿ ಸಾಮ್ನಾದಲ್ಲಿ (Saamana) ಡಿ.11 ರಂದು ಪ್ರಕಟವಾದ ಲೇಖನ ದೂರುದ್ದೇಶದಿಂದ ಕೂಡಿದೆ ಎಂದು ಆರೋಪಿಸಿ ಬಿಜೆಪಿ ಯವತ್ಮಾಲ್ ಸಂಚಾಲಕ ನಿತಿನ್ ಭೂತಾಡ್ ದೂರು ನೀಡಿದ್ದರು.

     

    ಉಮರಖೇಡ್ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದ್ದು, ದೂರಿನ ಪ್ರಕಾರ ನಾವು ಪ್ರಕರಣವನ್ನು ದಾಖಲಿಸಿಕೊಂಡಿದ್ದೇವೆ ಮತ್ತು ಅದರ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.   ಇದನ್ನೂ ಓದಿ: ಹೊಸ ಟ್ರಕ್‌ಗಳಲ್ಲಿ ಚಾಲಕರಿಗೆ ಎಸಿ ಕ್ಯಾಬಿನ್‌ ಕಡ್ಡಾಯ – ಅಧಿಸೂಚನೆ ಪ್ರಕಟ

    ರಾವತ್‌ ಅವರು ಮೋದಿ ಮತ್ತು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಆಗಾಗ ಸಾಮ್ನಾದಲ್ಲಿ ಟೀಕೆ ಮಾಡುತ್ತಲೇ ಇರುತ್ತಾರೆ. ಆದರೆ ಡಿ.11 ರಂದು ಮಧ್ಯಪ್ರದೇಶ ಫಲಿತಾಂಶಕ್ಕೆ ಸಂಬಂಧಿಸಿದಂತೆ ಲೇಖನ ಪ್ರಕಟವಾಗಿತ್ತು.

    ತಮ್ಮ ‘ರೋಖ್‌ಥೋಕ್’ ಅಂಕಣದಲ್ಲಿ ತವರು ರಾಜ್ಯವಾದ ಮಧ್ಯಪ್ರದೇಶದಲ್ಲಿ ಶಿವರಾಜ್‌ ಸಿಂಗ್‌ ಅವರನ್ನು ಬಿಜೆಪಿ ಹೈಕಮಾಂಡ್‌ ಅವಮಾನಿಸಿದೆ. ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಗುರಿ ಕಾಂಗ್ರೆಸ್ ಅನ್ನು ಸೋಲಿಸುವುದು ಅಲ್ಲ ಬದಲಾಗಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರನ್ನು ಸಂಪೂರ್ಣವಾಗಿ ತೊಡೆದು ಹಾಕುವುದು ಎಂದು ಬರೆದಿದ್ದರು.

     

  • ದೇಶದ್ರೋಹ ಕಾನೂನು ರದ್ದು: ಅಮಿತ್ ಶಾ ಮಸೂದೆ ಮಂಡನೆ

    ದೇಶದ್ರೋಹ ಕಾನೂನು ರದ್ದು: ಅಮಿತ್ ಶಾ ಮಸೂದೆ ಮಂಡನೆ

    ನವದೆಹಲಿ: ದೇಶದ್ರೋಹ ಕಾನೂನನ್ನು (Sedition Law) ಸಂಪೂರ್ಣವಾಗಿ ರದ್ದುಗೊಳಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಸಂಸತ್ತಿನಲ್ಲಿ ತಿಳಿಸಿದ್ದಾರೆ. ಶುಕ್ರವಾರ ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳನ್ನು ಅಮಿತ್ ಶಾ ಮಂಡಿಸಿದ್ದಾರೆ.

    ನೂತನ ಮಸೂದೆಯಲ್ಲಿ ದೇಶದ್ರೋಹ (Sedition) ಎಂಬ ಪದವಿಲ್ಲ. ಭಾರತದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟು ಮಾಡುವ ಕೃತ್ಯಗಳಿಗಾಗಿ ಇರುವ ಕಾನೂನನ್ನು ಐಪಿಸಿ ಸೆಕ್ಷನ್ 150ರ ಅಡಿ ಸೇರಿಸಲಾಗಿದೆ. ದೇಶದ್ರೋಹಕ್ಕೆ ಜೀವಾವಧಿ ಶಿಕ್ಷೆ ಅಥವಾ ಮೂರು ವರ್ಷಗಳವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆಯನ್ನು ನೀಡಲಾಗುತ್ತದೆ. ಹೊಸ ನಿಬಂಧನೆಯಲ್ಲಿ ಮೂರು ವರ್ಷಗಳ ಜೈಲು ಶಿಕ್ಷೆಯನ್ನು 7 ವರ್ಷಕ್ಕೆ ಹೆಚ್ಚಿಸಲಾದ ಉಲ್ಲೇಖವಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಅಪ್ರಾಪ್ತೆಯರ ಅತ್ಯಾಚಾರಕ್ಕೆ ಗಲ್ಲುಶಿಕ್ಷೆ, ಗ್ಯಾಂಗ್‌ ರೇಪ್‌ಗೆ 20 ವರ್ಷ ಜೈಲು – ಲೋಕಸಭೆಯಲ್ಲಿ 3 ಮಸೂದೆ ಮಂಡಿಸಿದ ಅಮಿತ್‌ ಶಾ

    ಕಾನೂನಿನ ಉದ್ದೇಶ ಶಿಕ್ಷಿಸುವುದೇ ಅಲ್ಲ, ನ್ಯಾಯವನ್ನು ಒದಗಿಸುವುದು. ಅಪರಾಧವನ್ನು ನಿಲ್ಲಿಸಲು ಕೈಗೊಳ್ಳುವ ಕ್ರಮವಾಗಿದೆ ಎಂದು ಅವರು ಹೇಳಿದ್ದಾರೆ.

    The Indian Penal Code (IPC) ಭಾರತೀಯ ನ್ಯಾಯ ಸಂಹಿತಾವಾಗಿ ಬದಲಾದರೆ Code of Criminal Procedure ಭಾರತೀಯ ನಾಗರೀಕ ಸುರಕ್ಷಾವಾಗಿ ಬದಲಾಗಲಿದೆ. Indian Evidence Act 1860 ಇನ್ನು ಮುಂದೆ ಭಾರತೀಯ ನ್ಯಾಯವಾಗಿ ಬದಲಾಯಿಸುವ ಅಂಶ ಮಸೂದೆಯಲ್ಲಿದೆ.

    ಉದ್ದೇಶಪೂರ್ವಕವಾಗಿ ಮಾತನಾಡುವ ಅಥವಾ ಬರೆಯುವ ಮೂಲಕ, ಚಿಹ್ನೆಗಳ ಮೂಲಕ, ಎಲೆಕ್ಟ್ರಾನಿಕ್ ಸಂವಹನದಿಂದ, ಹಣಕಾಸಿನ ನೆರವಿನ ವಿಧಾನಗಳ ಮೂಲಕ, ಯಾವುದೇ ರೀತಿಯಲ್ಲಿ ಪ್ರಚೋದಿಸುವ, ಪ್ರತ್ಯೇಕತೆ, ಸಶಸ್ತ್ರ ದಂಗೆ, ವಿಧ್ವಂಸಕ ಚಟುವಟಿಕೆಗಳು ಅಥವಾ ಪ್ರತ್ಯೇಕತಾವಾದಿ ಚಟುವಟಿಕೆಗಳ ಭಾವನೆಗಳನ್ನು ಉತ್ತೇಜಿಸುವುದು, ಭಾರತದ ಸಾರ್ವಭೌಮತೆ ಅಥವಾ ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟು ಮಾಡಿದರೆ, ಅಂತಹ ಯಾವುದೇ ಕೃತ್ಯದಲ್ಲಿ ತೊಡಗಿದರೆ ಅವರಿಗೆ ಜೀವಾವಧಿ ಶಿಕ್ಷೆ ಅಥವಾ ಏಳು ವರ್ಷಗಳವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆ ಮತ್ತು ದಂಡಕ್ಕೆ ಗುರಿಯಾಗಬಹುದು ಎಂದು ಈ ಮಸೂದೆ ಹೇಳುತ್ತದೆ. ಇದನ್ನೂ ಓದಿ: ವಿಪಕ್ಷಗಳ ಮೈತ್ರಿಯಲ್ಲಿರುವ INDIA ಹೆಸರನ್ನು ನಿರ್ಬಂಧಿಸಿ – ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೇಂದ್ರದ ಮರು ಪರಿಶೀಲನೆ ಪೂರ್ಣಗೊಳ್ಳುವವರೆಗೂ ದೇಶದ್ರೋಹ ಕೇಸ್‌ ದಾಖಲಿಸುವಂತಿಲ್ಲ: ಸುಪ್ರೀಂ

    ಕೇಂದ್ರದ ಮರು ಪರಿಶೀಲನೆ ಪೂರ್ಣಗೊಳ್ಳುವವರೆಗೂ ದೇಶದ್ರೋಹ ಕೇಸ್‌ ದಾಖಲಿಸುವಂತಿಲ್ಲ: ಸುಪ್ರೀಂ

    ನವದೆಹಲಿ: ಕೇಂದ್ರ ಸರ್ಕಾರದ ಮರುಪರಿಶೀಲನೆ ಪೂರ್ಣಗೊಳ್ಳುವವರೆಗೆ ದೇಶದ್ರೋಹದ ಅಡಿ ಪ್ರಕರಣ ದಾಖಲಿಸುವಂತಿಲ್ಲ ಎಂದು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ ನೀಡಿದೆ.

    ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ, ನ್ಯಾ. ಸೂರ್ಯಕಾಂತ್ ಹಾಗೂ ನ್ಯಾ. ಹಿಮಾ ಕೊಹ್ಲಿ ಅವರಿದ್ದ ನ್ಯಾಯಪೀಠ ಈ ಮಧ್ಯಂತರ ಆದೇಶ ನೀಡಿದೆ.

    ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್‌ 124ಎ (ದೇಶದ್ರೋಹ) ಅಡಿಯಲ್ಲಿ ಪ್ರಕರಣ ದಾಖಲಾಗಿ ಜೈಲಿನಲ್ಲಿರುವವರು ಜಾಮೀನು ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರವು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸುವ ವರೆಗೆ ಸರ್ಕಾರಗಳು ದೇಶದ್ರೋಹ ಪ್ರಕರಣವನ್ನು ಬಳಸಿಕೊಳ್ಳುವಂತಿಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ದೇವಸ್ಥಾನದ ಮೇಲೆ ನಿರ್ಮಾಣವಾದ ಯಾವುದೇ ಮಸೀದಿಯನ್ನೂ ಬಿಡುವುದಿಲ್ಲ, ಎಲ್ಲವನ್ನೂ ಕೆಡವುತ್ತೇವೆ: ಬಿಜೆಪಿ ನಾಯಕ

    ದೇಶದ್ರೋಹ ಕಾನೂನಿನ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಪೀಠ ಜುಲೈಗೆ ಮುಂದೂಡಿಕೆ ಮಾಡಿದೆ.

    ಕೇಂದ್ರ ಹೇಳಿದ್ದೇನು?
    ಸೋಮವಾರ ದೇಶದ್ರೋಹದ ಕಾನೂನನ್ನು ಪುನರ್ ಪರಿಶೀಲಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‍ಗೆ ಕೇಂದ್ರ ಸರ್ಕಾರ ತಿಳಿಸಿತ್ತು ದೇಶದ ಸಾರ್ವಭೌಮತ್ವದ ರಕ್ಷಣೆಗೆ ನಾವು ಬದ್ಧರಾಗಿದ್ದೇವೆ. ಕಾಯ್ದೆಯ ಪುನರ್ ಪರಿಶೀಲನೆ ಪೂರ್ಣಗೊಳ್ಳುವವರೆಗೂ ದೇಶದ್ರೋಹದ ಕಾಯ್ದೆಯ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಬಾರದು ಎಂದು ಕೇಂದ್ರ ಅಫಿಡವಿಟ್‌ ಸಲ್ಲಿಸಿತ್ತು.

    court order law

    ಬ್ರಿಟೀಷರ ಕಾಲದ ಕಾಯ್ದೆಗಳನ್ನು ಬದಿಗೆ ಸರಿಸಲು ಸರ್ಕಾರ ತೀರ್ಮಾನಿಸಲಾಗಿದೆ. ಇದರ ಭಾಗವಾಗಿ ದೇಶದ್ರೋಹ ಕಾನೂನು ಪರಿಶೀಲನೆ ಮಾಡುತ್ತಿದ್ದೇವೆ. ದೇಶದ್ರೋಹ ಕಾಯ್ದೆಗೆ ಸಂಬಂಧಿಸಿ ಹಲವು ವರ್ಗಗಳಿಂದ ವ್ಯಕ್ತವಾಗುತ್ತಿರುವ ಅಭಿಪ್ರಾಯಗಳನ್ನು ಪ್ರಧಾನಿ ಮೋದಿ ಪರಿಗಣಿಸಿದ್ದಾರೆ. ಈ ಕಾಯ್ದೆಯ ದುರ್ಬಳಕೆ ಆಗುತ್ತಿರುವ ಬಗ್ಗೆಯೂ ಗಮನ ಹರಿಸಿದ್ದಾರೆ ಎಂದು ಕೇಂದ್ರ ಅಫಿಡವಿಟ್‌ನಲ್ಲಿ ಉಲ್ಲೇಖಿಸಿತ್ತು.

    ಸ್ವಾತಂತ್ರ್ಯ ಸಿಕ್ಕಿದ ಬಳಿಕವೂ 75 ವರ್ಷದ ಹಿಂದಿನ ಕಾನೂನು ಅಗತ್ಯವಿದೆಯೇ ಎಂದು 2021ರ ಜುಲೈನಲ್ಲಿ ಸುಪ್ರೀಂ ಕೋರ್ಟ್‌ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿತ್ತು.

  • ದೇಶದ್ರೋಹ ಕಾಯ್ದೆಯನ್ನು ಪುನರ್ ಪರಿಶೀಲಿಸಲಾಗುತ್ತಿದೆ: ಸುಪ್ರೀಂಗೆ ಕೇಂದ್ರ

    ದೇಶದ್ರೋಹ ಕಾಯ್ದೆಯನ್ನು ಪುನರ್ ಪರಿಶೀಲಿಸಲಾಗುತ್ತಿದೆ: ಸುಪ್ರೀಂಗೆ ಕೇಂದ್ರ

    ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್‌ 124ಎ (ದೇಶದ್ರೋಹ)  ಪುನರ್ ಪರಿಶೀಲಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‍ಗೆ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

    ದೇಶದ ಸಾರ್ವಭೌಮತ್ವದ ರಕ್ಷಣೆಗೆ ನಾವು ಬದ್ಧರಾಗಿದ್ದೇವೆ. ಕಾಯ್ದೆಯ ಪುನರ್ ಪರಿಶೀಲನೆ ಪೂರ್ಣಗೊಳ್ಳುವವರೆಗೂ ದೇಶದ್ರೋಹದ ಕಾಯ್ದೆಯ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಬಾರದು ಎಂದು ಕೇಂದ್ರ ಅಫಿಡವಿಟ್‌ ಸಲ್ಲಿಸಿದೆ. ಇದನ್ನೂ ಓದಿ: ಶಾಹೀನ್‌ ಬಾಗ್‌ ತೆರವು ಕಾರ್ಯಾಚರಣೆ – ರಾಜಕೀಯ ಪಕ್ಷದ ಯಾವ ಮೂಲಭೂತ ಹಕ್ಕು ಉಲ್ಲಂಘನೆಯಾಗಿದೆ: ಸಿಪಿಐ(ಎಂ)ಗೆ ಸುಪ್ರೀಂ ಪ್ರಶ್ನೆ

    ಬ್ರಿಟೀಷರ ಕಾಲದ ಕಾಯ್ದೆಗಳನ್ನು ಬದಿಗೆ ಸರಿಸಲು ಸರ್ಕಾರ ತೀರ್ಮಾನಿಸಲಾಗಿದೆ. ಇದರ ಭಾಗವಾಗಿ ದೇಶದ್ರೋಹ ಪರಿಶೀಲನೆ ಮಾಡುತ್ತಿದ್ದೇವೆ. ದೇಶದ್ರೋಹ ಕಾನೂನಿಗೆ ಸಂಬಂಧಿಸಿ ಹಲವು ವರ್ಗಗಳಿಂದ ವ್ಯಕ್ತವಾಗುತ್ತಿರುವ ಅಭಿಪ್ರಾಯಗಳನ್ನು ಪ್ರಧಾನಿ ಮೋದಿ ಪರಿಗಣಿಸಿದ್ದಾರೆ. ಈ ಕಾಯ್ದೆಯ ದುರ್ಬಳಕೆ ಆಗುತ್ತಿರುವ ಬಗ್ಗೆಯೂ ಗಮನ ಹರಿಸಿದ್ದಾರೆ ಎಂದು ಕೇಂದ್ರ ಅಫಿಡವಿಟ್‌ನಲ್ಲಿ ಉಲ್ಲೇಖಿಸಿದೆ.

    ಸ್ವಾತಂತ್ರ್ಯ ಸಿಕ್ಕಿದ ಬಳಿಕವೂ 75 ವರ್ಷದ ಹಿಂದಿನ ಕಾನೂನು ಅಗತ್ಯವಿದೆಯೇ ಎಂದು 2021ರ ಜುಲೈನಲ್ಲಿ ಸುಪ್ರೀಂ ಕೋರ್ಟ್‌ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿತ್ತು. ಇದನ್ನೂ ಓದಿ: ಭಾಷಣದ ವೇಳೆ ನೀರು ಕೇಳಿದ್ದ ಅಧಿಕಾರಿಯ ನೆರವಿಗೆ ಬಂದ ನಿರ್ಮಲಾ ಸೀತಾರಾಮನ್

    ಸದ್ಯ ಈಗ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸಂವಿಧಾನ ಪೀಠದಲ್ಲಿ ನಡೆಸಬೇಕೇ ಅಥವಾ ಐದಕ್ಕಿಂತ ಹೆಚ್ಚಿನ ನ್ಯಾಯಾಧೀಶರ ಪೀಠದಲ್ಲಿ ನಡೆಸಬೇಕೇ ಎಂಬುದರ ಬಗ್ಗೆ ಕೋರ್ಟ್‌ ಪರಿಶೀಲಿಸುತ್ತಿದೆ.

  • ಎಂಇಎಸ್‌ ಪುಂಡರ ವಿರುದ್ಧ ದೇಶದ್ರೋಹ ಕೇಸ್‌ ಇಲ್ಲ

    ಎಂಇಎಸ್‌ ಪುಂಡರ ವಿರುದ್ಧ ದೇಶದ್ರೋಹ ಕೇಸ್‌ ಇಲ್ಲ

    ಬೆಂಗಳೂರು: ಡಿಸೆಂಬರ್ 17ರ ಎಂಇಎಸ್ ಪುಂಡಾಟಿಕೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಎಂಇಎಸ್‌ ಪುಂಡರ ವಿರುದ್ಧ ದೇಶದ್ರೋಹದ ಪ್ರಕರಣಗಳನ್ನು ಕೈಬಿಡಲು ಸರ್ಕಾರ ಮುಂದಾಗಿದೆ.

    ಎಂಇಎಸ್‍ನ 38 ಪುಂಡರ ವಿರುದ್ಧ ಪೊಲೀಸರು ದೇಶದ್ರೋಹದ ಪ್ರಕರಣಗಳನ್ನು ಕೈಬಿಟ್ಟು ಕೋರ್ಟ್‍ಗೆ ಚಾರ್ಜ್‍ಶೀಟ್ ಸಲ್ಲಿಸಲು ತಯಾರಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.  ಇದನ್ನೂ ಓದಿ: ಗುರುವಾರ ಕರ್ನಾಟಕ ಬಂದ್‌ಗೆ ಕರೆ ಕೊಟ್ಟ ಮುಸ್ಲಿಂ ಮುಖಂಡರು

    ಎಂಇಎಸ್ ಪುಂಡರ ವಿರುದ್ಧ ದೇಶದ್ರೋಹದ ಕೇಸ್ ದಾಖಲಿಸುವುದಾಗಿ ಬೆಳಗಾವಿ ಅಧಿವೇಶನ ಸಾಕ್ಷಿಯಾಗಿ ಸಿಎಂ ಬೊಮ್ಮಾಯಿ ಗುಡುಗಿದ್ದರು. ಬೆಳಗಾವಿ ರಾಜಕಾರಣಿಗಳ ಒತ್ತಡಕ್ಕೆ ತಲೆಬಾಗಿ ಪೊಲೀಸ್ ಇಲಾಖೆ ಈ ರೀತಿ ಮಾಡಿದ್ಯಾ ಎಂಬ ಪ್ರಶ್ನೆಗಳು ಕೇಳಿಬರುತ್ತಿವೆ.

    ಸಿಎಂ ಬೊಮ್ಮಾಯಿ ಹೇಳಿಕೆ ಹೊರತಾಗಿಯೂ ಚಾರ್ಜ್‍ಶೀಟ್‍ನಲ್ಲಿ 124(ಎ) ಸೆಕ್ಷನ್ ಕೈಬಿಟ್ಟಿದ್ದೇಕೆ ಎಂದು ಕನ್ನಡ ಪರ ಸಂಘಟನೆಗಳು ಆಕ್ರೋಶ ಹೊರಹಾಕಿವೆ. ಇದೇ ರೀತಿ ಮಾಡಿದರೆ ಸರ್ಕಾರದ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ ಎಂದು ಕರವೇ ನಾರಾಯಣಗೌಡ ಎಚ್ಚರಿಸಿದ್ದಾರೆ. ಇದನ್ನೂ ಓದಿ: ಬುರ್ಕಾ ಹಾಕಬೇಕು, ನಮಾಜ್ ಮಾಡಬೇಕು, ಮುಸ್ಲಿಂ ಸಂಸ್ಕೃತಿ ಪಾಲಿಸಬೇಕೆಂದು ಒತ್ತಾಯಿಸುತ್ತಿದ್ದ: ಪತ್ನಿ ನೇರ ಆರೋಪ

    ಡಿ.17ರಂದು ರಾತ್ರಿ ಆನಗೋಳದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ಮಾಡಿದ್ದ ಕಿಡಿಗೇಡಿಗಳು, ಸರ್ಕಾರಿ ವಾಹನಗಳ ಮೇಲೆ ಕಲ್ಲು ತೂರಿ ಬೆಂಕಿ ಹಚ್ಚಿ ಪುಂಡಾಟ ಪ್ರದರ್ಶಿಸಿದರು.

  • ಪಾಕ್ ಗೆಲುವು ಸಂಭ್ರಮಿಸಿದ್ದಕ್ಕೆ ದೇಶದ್ರೋಹ ಪ್ರಕರಣ- ಮೂವರು ವಿದ್ಯಾರ್ಥಿಗಳ ಬಂಧನ

    ಪಾಕ್ ಗೆಲುವು ಸಂಭ್ರಮಿಸಿದ್ದಕ್ಕೆ ದೇಶದ್ರೋಹ ಪ್ರಕರಣ- ಮೂವರು ವಿದ್ಯಾರ್ಥಿಗಳ ಬಂಧನ

    ಲಕ್ನೋ: ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತದ ವಿರುದ್ಧ ಪಾಕಿಸ್ತಾನದ ಗೆಲುವನ್ನು ಸಂಭ್ರಮಿಸಿದ ಆರೋಪದಡಿ ಕಾಶ್ಮೀರದ ಮೂವರು ವಿದ್ಯಾರ್ಥಿಗಳನ್ನು ಉತ್ತರ ಪ್ರದೇಶ ಆಗ್ರಾದಲ್ಲಿ ಬುಧವಾರ ಪೊಲೀಸರು ಬಂಧಿಸಿದ್ದಾರೆ.

    ಕ್ರಿಕೆಟ್‍ನಲ್ಲಿ ಪಾಕಿಸ್ತಾನ ಗೆಲುವನ್ನು ಸಂಭ್ರಮಿಸಿದ್ದ ವಿದ್ಯಾರ್ಥಿಗಳನ್ನು ಬಂಧಿಸಲಾಗಿದ್ದು, ದೇಶದ್ರೋಹ ಪ್ರಕರಣ ದಾಖಲಾಗಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಟ್ವೀಟ್ ಮಾಡಿದ್ದಾರೆ.

    YOGI TWEET

    ಅರ್ಷದ್ ಯೂಸಫ್, ಇನಾಯತ್ ಅಲ್ತಾಫ್ ಶೇಖ್, ಶೌಕತ್ ಅಹ್ಮದ್ ಗನಾಯ್ ಬಂಧಿತರು. ಮೂವರು ಸಹ ರಾಜ ಬಲವಂತ್ ಸಿಂಗ್ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಎನ್ನಲಾಗಿದೆ. ಇದನ್ನೂ ಓದಿ: ಟಿ-20 ವಿಶ್ವಕಪ್‍ನಲ್ಲಿ ಪಾಕ್ ಗೆಲುವು ಆಚರಿಸೋರು ದೇಶದ್ರೋಹ ಆರೋಪ ಎದುರಿಸ್ಬೇಕಾಗಿರುತ್ತೆ: ಯೋಗಿ ಆದಿತ್ಯನಾಥ್

    ಧರ್ಮದ ಹೆಸರಿನಲ್ಲಿ ಗುಂಪುಗಳ ನಡುವೆ ವೈರತ್ವ ಪ್ರಚೋದಿಸಿದ ಆರೋಪದ ಮೇಲೆ ಮೂವರ ವಿರುದ್ಧ ಕ್ರಮಕೈಗೊಳ್ಳಲಾಗಿದೆ. ಅಲ್ಲದೇ ದೇಶದ್ರೋಹ ಪ್ರಕರಣವನ್ನೂ ದಾಖಲಿಸಲಾಗಿದೆ ಎಂದು ಮುಖ್ಯಮಂತ್ರಿಗಳ ಕಚೇರಿಯ ಅಧಿಕೃತ ಖಾತೆ ಟ್ವೀಟ್ ಮಾಡಿದೆ.

    POLICE

    ಭಾರತ-ಪಾಕಿಸ್ತಾನ ಪಂದ್ಯದ ಸಂದರ್ಭದಲ್ಲಿ ಪಾಕಿಸ್ತಾನ ಪರವಾಗಿ ಪೋಸ್ಟ್‍ಗಳನ್ನು ಹಾಕಿ ಅಶಿಸ್ತು ಪ್ರದರ್ಶಿಸಿದ್ದಾರೆಂದು ಆರೋಪಿಸಿ ಮೂವರನ್ನು ಸೋಮವಾರವೇ ಕಾಲೇಜು ಆಡಳಿತ ಮಂಡಳಿ ಅಮಾನತು ಮಾಡಿತ್ತು. ಇದನ್ನೂ ಓದಿ: ದೆಹಲಿ ವಿವಿಯ ನಿವೃತ್ತ ಪ್ರಾಧ್ಯಾಪಕ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ!

    ಪಂದ್ಯದ ನಂತರ ಇವರ ವಿರುದ್ಧ ದೇಶದ್ರೋಹ ಆರೋಪ ಕೇಳಿಬಂದಿತ್ತು. ದೂರು ಆಧರಿಸಿ ಎಫ್‍ಐಆರ್ ದಾಖಲಿಸಿದ್ದೇವೆ. ತನಿಖೆ ನಂತರ ಅವರನ್ನು ಬಂಧಿಸಲಾಗಿದೆ ಎಂದು ಆಗ್ರಾ ನಗರದ ಎಸ್‍ಪಿ ವಿಕಾಸ್ ಕುಮಾರ್ ತಿಳಿಸಿದ್ದಾರೆ.

    ಬಂಧಿತ ವಿದ್ಯಾರ್ಥಿಗಳನ್ನು ಜಗದೀಶಪುರ ಪೊಲೀಸ್ ಠಾಣೆಯಲ್ಲಿ ಇರಿಸಲಾಗಿದೆ. ನಂತರ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

  • ಟಿ-20 ವಿಶ್ವಕಪ್‍ನಲ್ಲಿ ಪಾಕ್ ಗೆಲುವು ಆಚರಿಸೋರು ದೇಶದ್ರೋಹ ಆರೋಪ ಎದುರಿಸ್ಬೇಕಾಗಿರುತ್ತೆ: ಯೋಗಿ ಆದಿತ್ಯನಾಥ್

    ಟಿ-20 ವಿಶ್ವಕಪ್‍ನಲ್ಲಿ ಪಾಕ್ ಗೆಲುವು ಆಚರಿಸೋರು ದೇಶದ್ರೋಹ ಆರೋಪ ಎದುರಿಸ್ಬೇಕಾಗಿರುತ್ತೆ: ಯೋಗಿ ಆದಿತ್ಯನಾಥ್

    ಲಕ್ನೋ: ಅಕ್ಟೋಬರ್ 24ರಂದು ನಡೆದ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತದ ವಿರುದ್ಧ ಗೆದ್ದ ಪಾಕಿಸ್ತಾನದ ಗೆಲುವನ್ನು ಆಚರಿಸುವವರ ವಿರುದ್ಧ ದೇಶದ್ರೋಹದ ಆರೋಪವನ್ನು ಎದುರಿಸಬೇಕಾಗುತ್ತದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

    ಸುದ್ದಿ ಪ್ರಕಟಣ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಯೋಗಿ ಆದಿತ್ಯನಾಥ್ ಈ ಹೇಳಿಕೆಯನ್ನು ನೀಡಿದ್ದು, ಆ ಸಂದರ್ಶನದ ಲಿಂಕ್ ಅನ್ನು ಯೋಗಿ ಆದಿತ್ಯನಾಥ್ ಅವರ ಕಚೇರಿಯ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ. ಇದನ್ನೂ ಓದಿ: ದೆಹಲಿ ವಿವಿಯ ನಿವೃತ್ತ ಪ್ರಾಧ್ಯಾಪಕ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ!

    ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಗೆದ್ದ ಬಳಿಕ ದೇಶ ವಿರೋಧಿ ಘೋಷಣೆ ಕೂಗಿದ್ದಕ್ಕಾಗಿ ಆಗ್ರಾದಲ್ಲಿ ಕಾಶ್ಮೀರಿ ಮೂಲದ ಮೂವರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಬಂಧಿಸಿದ ನಂತರ ಯೋಗಿ ಆದಿತ್ಯನಾಥ್ ಅವರು ಈ ಹೇಳಿಕೆ ನೀಡಿದ್ದಾರೆ.

    ಸ್ಥಳೀಯ ಬಿಜೆಪಿ ಮುಖಂಡರು ವಿದ್ಯಾರ್ಥಿಗಳ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ನಂತರ ಕಾಲೇಜಿನ ಆಡಳಿತ ಮಂಡಳಿಯು ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದೆ ಮತ್ತು ವಿದ್ಯಾರ್ಥಿಗಳ ವಿರುದ್ಧ ಐಪಿಸಿ ಸೆಕ್ಷನ್ 505(1)ಬಿ, 153ಎ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನೂ ಹಿಂದೂ ಸಂಘನೆಗಳ ಹಲವಾರು ಕಾರ್ಯಕರ್ತರು ಕಾಲೇಜ್ ಕ್ಯಾಂಪಸ್‍ಗೆ ನುಗ್ಗಿ ವಿದ್ಯಾರ್ಥಿಗಳ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ ಎಂದು ಕಾಲೇಜಿನ ಅಧ್ಯಾಪಕರು ಆರೋಪಿಸಿದ್ದಾರೆ. ಇದನ್ನೂ ಓದಿ: ಕೆಲಸ ಕೊಡಿಸುತ್ತೇವೆಂದು 400 ಮಂದಿಗೆ ಕೋಟಿ ಕೋಟಿ ವಂಚನೆ: ಇಬ್ಬರು ಅರೆಸ್ಟ್

    ವಿದ್ಯಾರ್ಥಿಗಳು ದೇಶ ವಿರೋಧಿ ಘೋಷಣೆಯನ್ನು ಕೂಗುತ್ತಿರುವುದು ಮತ್ತು ಪಾಕಿಸ್ತಾನದ ಗೆಲುವನ್ನು ಆಚರಿಸುತ್ತಿರುವ ಹಲವಾರು ವೀಡಿಯೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಭಾನುವಾರ ನಡೆದ ಪಂದ್ಯದ ನಂತರ ಇಲ್ಲಿಯವರೆಗೂ ಆಗ್ರಾ, ಬರೇಲಿ, ಬದೌನ್ ಮತ್ತು ಸೀತಾಪುರ ಜಿಲ್ಲೆಯ ಏಳು ಮಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಲಾಸಿದ್ದಾರೆ.

    ಇದೇ ರೀತಿ ರಾಜಸ್ಥಾನ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲೂ ಪ್ರಕರಣಗಳು ದಾಖಲಾಗಿವೆ. ಪಾಕಿಸ್ತಾನದ ವಿಜಯವನ್ನು ಆಚರಿಸಿ ವಾಟ್ಸಾಪ್‍ನಲ್ಲಿ ಸ್ಟೇಟಸ್ ಹಾಕಿದ್ದಕ್ಕಾಗಿ ರಾಜಸ್ಥಾನದ ಶಾಲಾ ಶಿಕ್ಷಕಿಯನ್ನು ಬಂಧಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶ್ರೀನಗರದ ಕರಣ್ ನಗರದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು SKIMS ಸೌರಾದಲ್ಲಿ ಹಾಸ್ಟೆಲ್‍ಗಳಲ್ಲಿ ವಾಸಿಸುವ ಕೆಲವು ವೈದ್ಯಕೀಯ ವಿದ್ಯಾರ್ಥಿಗಳ ವಿರುದ್ಧ ಕಠಿಣ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ಎರಡು ಪ್ರಕರಣಗಳನ್ನು ದಾಖಲಿಸಿದ್ದಾರೆ. ಇದನ್ನೂ ಓದಿ: ಮದ್ಯಕ್ಕೆ ಹತ್ತು ರೂ. ನೀಡದ್ದಕ್ಕೆ ಸ್ನೇಹಿತನನ್ನೇ ಕೊಂದ್ರು

    ಮತ್ತೊಂದೆಡೆ ಪಂದ್ಯದ ನಂತರ ಪಂಜಾಬ್‍ನ ಸಂಗ್ರೂರ್ ಜಿಲ್ಲೆಯ ಎಂಜಿನಿಯರಿಂಗ್ ಇನ್‍ಸ್ಟಿಟ್ಯೂಟ್‍ನಲ್ಲಿ ಕಾಶ್ಮೀರಿ ವಿದ್ಯಾರ್ಥಿಗಳ ಗುಂಪು ಮತ್ತು ಉತ್ತರ ಪ್ರದೇಶ, ಬಿಹಾರದವರ ನಡುವೆ ಮಾರಾಮಾರಿ ನಡೆದಿದೆ.

  • ದೇಶದ್ರೋಹ ಕಾನೂನು ಈಗಲೂ ಅಸ್ತಿತ್ವದಲ್ಲಿರಬೇಕೆ? – ಕೇಂದ್ರಕ್ಕೆ ಸುಪ್ರೀಂ ಪ್ರಶ್ನೆ

    ದೇಶದ್ರೋಹ ಕಾನೂನು ಈಗಲೂ ಅಸ್ತಿತ್ವದಲ್ಲಿರಬೇಕೆ? – ಕೇಂದ್ರಕ್ಕೆ ಸುಪ್ರೀಂ ಪ್ರಶ್ನೆ

    ನವದೆಹಲಿ: ಮಹಾತ್ಮ ಗಾಂಧೀಜಿ, ಬಾಲ ಗಂಗಾಧರ್ ತಿಲಕ್‍ರಂತಹ ಸ್ವಾತಂತ್ರ್ಯ ಹೋರಾಟಗಾರರ ವಿರುದ್ಧ ಬಳಸಲ್ಪಟ್ಟಿರುವ ದೇಶದ್ರೋಹ ಕಾನೂನು (ಐಪಿಸಿಯ ಸೆಕ್ಷನ್ 124 ಎ ) ಈಗಲೂ ಅಸ್ತಿತ್ವದಲ್ಲಿರಬೇಕೆ?, ಅದರ ಅವಶ್ಯಕತೆ ಈಗಲೂ ಇದೆಯೇ ಎಂದು ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರವನ್ನು  ಖಾರವಾಗಿ ಪ್ರಶ್ನಿಸಿದೆ.

    ಐಪಿಸಿಯ ಸೆಕ್ಷನ್ 124 ಎ ದೇಶದ್ರೋಹ ಕಾನೂನಿನ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ನೇತೃತ್ವದ ತ್ರಿಸದಸ್ಯ ಇಂತಹ ಹಲವು ಪ್ರಶ್ನೆಗಳೊಂದಿಗೆ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

    ವಿಚಾರಣೆ ವೇಳೆ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಪೀಠ, ಇದೊಂದು ವಸಾಹತುಶಾಹಿ ಕಾನೂನು. ಇದನ್ನು 1870 ರಲ್ಲಿ ಸೇರಿಸಲಾಯಿತು. ಸ್ವಾತಂತ್ರ್ಯ ಹೋರಾಟಗಾರರನ್ನು ಹತ್ತಿಕ್ಕಲು ಬ್ರಿಟಿಷರು ಈ ಕಾನೂನು ಸೇರ್ಪಡೆ ಮಾಡಿದ್ದರು. ಸ್ವಾತಂತ್ರ್ಯ ಸಿಕ್ಕಿದ 73 ವರ್ಷದ ಬಳಿಕವೂ ಈ ಕಾನೂನಿನ ಅವಶ್ಯಕತೆ ಇದೆಯೇ ಎಂದು ಅದು ಪ್ರಶ್ನಿಸಿತು.  ಇದನ್ನೂ ಓದಿ : ಐಟಿ ಕಾಯ್ದೆಯ ಸೆಕ್ಷನ್ 66ಎ ಅಡಿಯಲ್ಲಿ ಇನ್ನೂ ಕೇಸ್ ದಾಖಲಿಸುತ್ತಿರುವುದು ಆಘಾತಕಾರಿ – ಸುಪ್ರೀಂಕೋರ್ಟ್

    ಈ ನಡುವೆ ದೇಶ ದ್ರೋಹದ ಪ್ರಕರಣಗಳು ಹೆಚ್ಚುತ್ತಿದೆ ಎಂದು ಪರೋಕ್ಷವಾಗಿ ಕಾನೂನು ದುರ್ಬಳಕೆ ಬಗ್ಗೆ ಕಳವಳ ವ್ಯಕ್ತಪಡಿಸಿದ ಪೀಠ, ಸ್ವಾತಂತ್ರ್ಯದ 73 ವರ್ಷದ ಬಳಿಕ ಇಂತಹ ಕಾನೂನು ಮುಂದುವರಿಸುತ್ತಿರುವುದು ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿತು.

    ಈ ಕಾನೂನು ಕಾರ್ಪೆಂಟರ್ ಬಳಿ ಇರುವ ಗರಗಸದಂತೆ ಮರ ಕತ್ತರಿಸುವ ಬದಲು ಇಡೀ ಅರಣ್ಯವನ್ನೇ ಕತ್ತರಿಸಲು ಬಳಕೆ ಮಾಡಲಾಗುತ್ತಿದೆ. ಪರಿಸ್ಥಿತಿ ಎಷ್ಟು ಕಠೋರವಾಗಿದೆ ಎಂದರೆ ನಿರ್ದಿಷ್ಟ ಧ್ವನಿಗಳನ್ನು ಕೇಳಲು ಸರ್ಕಾರಕ್ಕೆ ಇಷ್ಟವಿಲ್ಲದಿದ್ದರೆ ಅಂತಹ ಧ್ವನಿಗಳ ವಿರುದ್ಧ ಈ ಕಾನೂನು ಬಳಕೆಗೆ ಸರ್ಕಾರ ಸೂಚಿಸುತ್ತಿದೆ ಎಂದು ಆಘಾತ ವ್ಯಕ್ತಪಡಿಸಿತು. ಇದೇ ವೇಳೆ ಅವರು ಯಾವುದೇ ರಾಜ್ಯ ಅಥವಾ ಸರ್ಕಾರವನ್ನು ಉದ್ದೇಶಿಸಿ ಈ ಮಾತು ಹೇಳಿಲ್ಲ ಎಂದಿತು.

    ಐಪಿಸಿಯ ಸೆಕ್ಷನ್ 124 ಎ ಅಡಿಯಲ್ಲಿ ದೇಶದ್ರೋಹದ ಅಪರಾಧದ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಸೇನೆಯ ನಿವೃತ್ತ ಮೇಜರ್-ಜನರಲ್ ಎಸ್.ಜಿ. ವೊಂಬಟ್ಕೆರ ಅರ್ಜಿ ಸಲ್ಲಿಸಿದ್ದರು. ತಮ್ಮ ವಿರುದ್ಧ ದಾಖಲಿಸಿದ್ದ ದೇಶ ದ್ರೋಹದ ಕಾನೂನನ್ನು ಅವರು ಪ್ರಶ್ನೆ ಮಾಡಿದ್ದರು. ದೇಶಕ್ಕಾಗಿ ಸೇವೆ ಮಾಡಿದ ಯೋಧನ ಮೇಲೆ ಈ ರೀತಿಯ ಕೇಸು ದಾಖಲಿಸಿರುವುದನ್ನು ಅವರು ಪ್ರಶ್ನಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದು ಕಾನೂನು ಪುನರ್ ಪರಿಶೀಲಿಸುವ ಭರವಸೆ ನೀಡಿದೆ. ಜುಲೈ 27 ರಂದು ಮುಂದಿನ ವಿಚಾರಣೆ ನಡೆಯಲಿದೆ.