Tag: seed

  • ಮಾವಿನ ಗೊರಟೆ ಗಂಟಲಿಗೆ ಚುಚ್ಚಿ ಮಹಿಳೆ ಆಸ್ಪತ್ರೆಗೆ ದಾಖಲು

    ಮಾವಿನ ಗೊರಟೆ ಗಂಟಲಿಗೆ ಚುಚ್ಚಿ ಮಹಿಳೆ ಆಸ್ಪತ್ರೆಗೆ ದಾಖಲು

    ಲಂಡನ್: ಮಾವಿನ ಉಪ್ಪಿನಕಾಯಿಯನ್ನು (Mango Pickle) ಸೇವಿಸಿದ ನಂತರ ಗೊರಟೆ ಗಂಟಲಿಗೆ ಸಿಕ್ಕಿಕೊಂಡು 57 ವರ್ಷದ ಮಹಿಳೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಹಣ್ಣು ತಿಂದ ಬಳಿಕ ನುಂಗಲು ತೊಂದರೆಯಾಗುತ್ತಿದೆ ಎಂದ ಮಹಿಳೆಯನ್ನು ಸ್ಥಳೀಯ ಎಪ್ಸಮ್ ಆಸ್ಪತ್ರೆಯ (Epsom Hospital) ತುರ್ತು ವಿಭಾಗಕ್ಕೆ ದಾಖಲಿಸಲಾಗಿದೆ. ಮಾವಿನಹಣ್ಣಿನಂತಹ ಮೃದುವಾದ ಹಣ್ಣು ಇಂತಹ ಹಾನಿಯನ್ನುಂಟುಮಾಡುತ್ತದೆ ಅಂತ ನಂಬಲು ಸಾಧ್ಯವಾಗುತ್ತಿಲ್ಲ ಎಂದು ವೈದ್ಯರು ಬೆರಗಾಗಿದ್ದಾರೆ. ಇದನ್ನೂ ಓದಿ: ರಾಜ್ಯಪಾಲರನ್ನು ಕೂಡಲೇ ವಜಾಗೊಳಿಸಿ – ರಾಷ್ಟ್ರಪತಿಗಳಿಗೆ ಡಿಎಂಕೆ ಪತ್ರ

    ವೈದ್ಯಕೀಯ ಪರೀಕ್ಷೆ ವೇಳೆ ಮಹಿಳೆ ಜೊಲ್ಲು ಸುರಿಸುತ್ತಿದ್ದಳು ಮತ್ತು ನುಂಗಲು ಸಮರ್ಥಳಾಗಿದ್ದಳು. ವೈದ್ಯರು ಕೂಡ ಪರೀಕ್ಷೆಯಲ್ಲಿ ದೇಹದ ಒಳಗಡೆ ಯಾವುದೇ ಪದಾರ್ಥ ಕಂಡು ಬಂದಿಲ್ಲ. ಜಠರದ ಉರಿತದಿಂದ ಸಮಸ್ಯೆ ಉಂಟಾಗಿರಬಹುದು ಎಂದು ಮಹಿಳೆಗೆ ತಿಳಿಸಲಾಗಿದೆ. ಒಂದು ವೇಳೆ ಆರೋಗ್ಯ ಹೆಚ್ಚು ಹದಗೆಟ್ಟರೆ ಮತ್ತೆ ಹಿಂತಿರುಗುವಂತೆ ತಿಳಿಸಲಾಯಿತು ಎಂದು ವೈದ್ಯರು ಹೇಳಿದ್ದಾರೆ. ಇದನ್ನೂ ಓದಿ: ಬಳ್ಳಾರಿಯಲ್ಲಿ ಮರ್ಯಾದಾ ಹತ್ಯೆ- ಅನ್ಯ ಕೋಮಿನ ಯುವಕನ ಪ್ರೀತಿ ಮಾಡಿದ್ದಕ್ಕೆ ತಂದೆಯಿಂದ್ಲೇ ಮಗಳ ಕೊಲೆ

    ನಾಲ್ಕು ದಿನಗಳ ನಂತರ ಸೆಪ್ಸಿಸ್‍ನ ಲಕ್ಷಣಗಳಿದ್ದರಿಂದ ಮತ್ತೆ ಆಸ್ಪತ್ರೆಗೆ ಮಹಿಳೆ ಹಿಂದಿರುಗಿ, ನುಂಗಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು. ಸಿಟಿ ಸ್ಕ್ಯಾನ್ ನಡೆಸಿದಾಗ ಅನ್ನನಾಳದಲ್ಲಿ ಹುಣ್ಣಾಗಿ ಎದೆ ಉರಿ ಉಂಟಾಗಿರುವುದು ತಿಳಿದುಬಂದಿದೆ. ಗಂಟಲಿನಲ್ಲಿ ಸಿಕ್ಕಿಹಾಕಿಕೊಂಡಿದ್ದ ಗೊರಟೆಯನ್ನು ತೆಗೆಸಿಕೊಳ್ಳಲು ಮಹಿಳೆ ನಂತರ ತುರ್ತು ಶಸ್ತ್ರಚಿಕಿತ್ಸೆಗೆ ಒಳಗಾದರು ಮತ್ತು ಒಂದು ವಾರ ಆಸ್ಪತ್ರೆಯಲ್ಲಿದ್ದರು ಎಂದು ವರದಿಯಾಗಿದೆ.

    Live Tv
    [brid partner=56869869 player=32851 video=960834 autoplay=true]

  • ರಸಗೊಬ್ಬರ, ಬಿತ್ತನೆ ಬೀಜದ ಕೊರತೆ ಇಲ್ಲ: ಸಚಿವ ಬಿ.ಸಿ. ಪಾಟೀಲ್

    ರಸಗೊಬ್ಬರ, ಬಿತ್ತನೆ ಬೀಜದ ಕೊರತೆ ಇಲ್ಲ: ಸಚಿವ ಬಿ.ಸಿ. ಪಾಟೀಲ್

    ಮೈಸೂರು: ರಾಜ್ಯದಲ್ಲಿ ಯಾವುದೇ ರಸಗೊಬ್ಬರ, ಬಿತ್ತನೆ ಬೀಜ ಕೊರತೆ ಇಲ್ಲ. ಕೃತಕವಾಗಿ ಅಭಾವ ಸೃಷ್ಟಿ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಮೈಸೂರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೃತಕ ರಸಗೊಬ್ಬರ ಅಭಾವ ಸೃಷ್ಟಿಸಿದವರ ಮೇಲೆ ಮೈಸೂರಿನಲ್ಲಿ ಈಗಾಗಲೇ ನಾಲ್ಕು ಕೇಸ್ ದಾಖಲಾಗಿದೆ. ಹಲವರು ಅಕ್ರಮವಾಗಿ ಗೋದಾಮಿನಲ್ಲಿ ಇಟ್ಟು ಅಭಾವ ಸೃಷ್ಟಿಸಿದ್ದಾರೆ. ಇದರಿಂದ ರೈತರು ಕ್ಯೂನಲ್ಲಿ ನಿಲ್ಲುವ ಸಮಸ್ಯೆ ಉಂಟಾಗುತ್ತಿದೆ ಎಂದರು. ಇದನ್ನೂ ಓದಿ:  ಕಾನೂನು ರಕ್ಷಣೆ ರದ್ದು – ಟ್ವಿಟ್ಟರ್ ವಿರುದ್ಧ ಬಿತ್ತು ಮೊದಲ ಕೇಸ್

    ರೈತರಿಗೆ ಬಿತ್ತನೆ ಬೀಜಗಳು ಸೂಕ್ತ ಬೆಲೆಯಲ್ಲಿ ನಿಗದಿತ ಸಮಯಕ್ಕೆ ಸಿಗಬೇಕು. ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರೆ ಅಂತಹವರ ವಿರುದ್ದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ. ಕೃತಕವಾಗಿ ಅಭಾವ ಸೃಷ್ಟಿಸುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಿ ಹಾಗೂ ಸಾಧ್ಯವಾದರೆ ಅಂತಹ ಅಂಗಡಿಗಳನ್ನು ಜಪ್ತಿ ಮಾಡಿ ಎಂದರು.

    ಮೈಸೂರು ಜಿಲ್ಲೆಯಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಕೊರತೆ ಇಲ್ಲ. ಬಿತ್ತನೆ ಬೀಜಕ್ಕೆ 39798 ಕ್ವಿಂಟಾಲ್ ಬೇಡಿಕೆ ಇದ್ದು, 45275 ಕ್ವಿಂಟಾಲ್ ಲಭ್ಯತೆ ಇದೆ‌. ರಸಗೊಬ್ಬರ 44,209 ಮೆಟ್ರಿಕ್ ಟನ್ ದಾಸ್ತಾನು ಇತ್ತು. ಈಗಾಗಲೇ 26,459 ಮೆಟ್ರಿಕ್ ಟನ್ ಮಾರಾಟ ಮಾಡಲಾಗಿದೆ. ಇನ್ನೂ 17,749 ಮೆಟ್ರಿಕ್ ಟನ್ ದಾಸ್ತಾನು ಉಳಿದಿದೆ ಎಂದು ಸಚಿವರಿಗೆ ಅಧಿಕಾರಿಗಳು ಮಾಹಿತಿ ನೀಡಿದರು.

    ಶಾಸಕರಾದ ಕೆ.ಮಹದೇವ್, ಹರ್ಷವರ್ಧನ್, ಅನೀಲ್ ಚಿಕ್ಕಮಾದು, ವಿಧಾನಪರಿಷತ್ ಸದಸ್ಯರಾದ ಧರ್ಮಸೇನ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ವಿ.ರಾಜೀವ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಜಿಲ್ಲಾ ಪಂಚಾಯಿತಿಯ ಸಿಇಒ ಎ.ಎಂ.ಯೋಗೀಶ್, ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ ಸೇರಿದಂತೆ ಇತರರು ಹಾಜರಿದ್ದರು.

  • ಹಾವೇರಿಯಲ್ಲಿ ಬೀಜ, ಗೊಬ್ಬರ ಕೊರತೆಯಾಗದಂತೆ ಕ್ರಮ, ವಾರಕ್ಕೊಮ್ಮೆ ಮಾನಿಟರ್: ಬೊಮ್ಮಾಯಿ

    ಹಾವೇರಿಯಲ್ಲಿ ಬೀಜ, ಗೊಬ್ಬರ ಕೊರತೆಯಾಗದಂತೆ ಕ್ರಮ, ವಾರಕ್ಕೊಮ್ಮೆ ಮಾನಿಟರ್: ಬೊಮ್ಮಾಯಿ

    ಹಾವೇರಿ: ಹವಾಮಾನ ಇಲಾಖೆಯ ವರದಿಯಂತೆ ಇನ್ನೆರಡು ದಿನದಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಲಿದೆ. ಈಗಾಗಲೇ ಭಾರೀ ಮಳೆಯಾಗುತ್ತಿದ್ದು, ರೈತರು ಬಿತ್ತನೆಗೆ ಸಂಪೂರ್ಣ ತಯಾರಿ ಮಾಡಿಕೊಂಡಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಬೀಜ ಮತ್ತು ಗೊಬ್ಬರದ ಕೊರತೆಯಾಗದಂತೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಗೃಹ ಸಚಿವ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿ ತಿಳಿಸಿದರು.

    ಮುಂಗಾರು ಬಿತ್ತನೆ ಕೃಷಿ ಯೋಜನೆ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಹವಾಮಾನ ಇಲಾಖೆಯ ಮಾಹಿತಿಯಂತೆ ಈ ವರ್ಷ ಮುಂಗಾರು ಮಳೆ ಶೇ.4ರಷ್ಟು ಕಡಿಮೆಯಾಗಲಿದೆ ಎಂದು ಮುನ್ಸೂಚನೆ ದೊರೆತಿದೆ. ಆದಾಗ್ಯೂ ವಾಡಿಕೆ ಮಳೆಯಂತೆ ಜಿಲ್ಲೆಯಲ್ಲಿ ಮುಂಗಾರಿಗೆ ಅಗತ್ಯವಾದ ಡಿಎಪಿ, ಕಾಂಪ್ಲೆಕ್ಸ್ ಗೊಬ್ಬರಗಳು ಹಾಗೂ ಬಿತ್ತನೆ ಬೀಜಗಳ ದಾಸ್ತಾನು ಕುರಿತಂತೆ ಪರಿಶೀಲನೆ ನಡೆಸಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

    ಜೂನ್ ಮತ್ತು ಜುಲೈ ತಿಂಗಳಲ್ಲಿ ಮುಂಗಾರು ಬಿತ್ತನೆ ಆರಂಭಗೊಳ್ಳಲಿದೆ. ಜಿಲ್ಲೆಯಲ್ಲಿ 15 ರಿಂದ 18 ಸಾವಿರ ಮೆಟ್ರಿಕ್ ಡಿಎಪಿ ಗೊಬ್ಬರ ಬೇಡಿಕೆ ಇದೆ. ಈಗಾಗಲೇ ಅಂದಾಜು 15 ಸಾವಿರ ಮೆಟ್ರಿಕ್ ಟನ್‍ನಷ್ಟು ಗೊಬ್ಬರ ದಾಸ್ತಾನು ಇದೆ. ಜೂನ್ ಹಾಗೂ ಜುಲೈ ತಿಂಗಳಲ್ಲಿ ನಿಗದಿಯಾದ ಗೊಬ್ಬರ ಹಂಚಿಕೆಯನ್ನು ತಿಂಗಳ ಮೊದಲವಾರದಲ್ಲಿ ಪೂರೈಕೆ ಮಾಡಲು ಈಗಾಗಲೇ ಕೃಷಿ ಸಚಿವರಿಗೆ ಮನವಿ ಮಾಡಿಕೊಳ್ಳಲಾಗಿದೆ. ಇದರಿಂದ ಈ ವರ್ಷ ಡಿಎಪಿ ಗೊಬ್ಬರದ ಯಾವುದೇ ಕೊರತೆ ಇರುವುದಿಲ್ಲ. ಮುಂಗಾರು ಬಿತ್ತನೆ ಬೀಜ ಹಾಗೂ ರಸಗೊಬ್ಬರ ನಿರ್ವಹಣೆ ಕುರಿತು ಪ್ರತಿ ವಾರ ಮಾನಿಟರ್ ಮಾಡಲಾಗುವುದು ಎಂದು ತಿಳಿಸಿದರು.

    ವರ್ಷದಿಂದ ವರ್ಷಕ್ಕೆ ಜಿಲ್ಲೆಯಲ್ಲಿ ಡಿಎಪಿ ಗೊಬ್ಬರ ಬೇಡಿಕೆ ಹೆಚ್ಚಾಗುತ್ತಿದೆ. ಕಳೆದ ಮೂರು ವರ್ಷದ ಅಂಕಿ ಅಂಶಗಳನ್ನು ಪರಿಶೀಲಿಸಿದಾಗ 2018ರಲ್ಲಿ 14,653, 2019ರಲ್ಲಿ 16,291, 2020ರಲ್ಲಿ 20,312 ಮೆಟ್ರಿಕ್ ಟನ್ ಡಿಎಪಿ ಗೊಬ್ಬರ ಜಿಲ್ಲೆಗೆ ಪೂರೈಕೆಯಾಗಿದೆ. ಪ್ರಸಕ್ತ ಮುಂಗಾರು ಸಾಲಿನಲ್ಲಿ 26,635 ಮೆಟ್ರಿಕ್ ಟನ್ ಹಂಚಿಕೆಯಾಗಿದೆ. ಈ ವರ್ಷ 6,323 ಮೆಟ್ರಿಕ್ ಟನ್ ಡಿಎಪಿ ಗೊಬ್ಬರ ಜಿಲ್ಲೆಗೆ ಹೆಚ್ಚುವರಿಯಾಗಿ ಹಂಚಿಕೆಯಾಗಿದೆ. ಮೇ ಕೊನೆಯವರೆಗೆ 10,450 ಮೆಟ್ರಿಕ್ ಟನ್ ಡಿಎಪಿ ಜಿಲ್ಲೆಗೆ ಪೂರೈಕೆಯಾಗಿದ್ದು, 5,960 ಮೆಟ್ರಿಕ್ ಟನ್ ಹಳೆಯ ದಾಸ್ತಾನು ಸೇರಿದಂತೆ ಮೇ ತಿಂಗಳಲ್ಲಿ 9,200 ಮೆಟ್ರಿಕ್ ಟನ್ ಸೇರಿದಂತೆ 15,161 ಮೆಟ್ರಿಕ್ ಡಿಎಪಿ ಗೊಬ್ಬರ ಬಳಕೆಗೆ ಲಭ್ಯವಿದೆ ಎಂದು ವಿವರಿಸಿದರು.

    ಈಗಾಗಲೇ 5,745 ಮೆಟ್ರಿಕ್ ಟನ್ ಗೊಬ್ಬರ ವಿತರಣೆಗೆ ಕ್ರಮ ವಹಿಸಲಾಗಿದೆ. ಪ್ರಸ್ತುತ 9,416 ಮೆಟ್ರಿಕ್ ಟನ್ ಗೊಬ್ಬರ ದಾಸ್ತಾನು ಇದೆ. ಕರ್ನಾಟಕ ರಾಜ್ಯ ಸಹಕಾರಿ ಮಾರುಕಟ್ಟೆ ಮಹಾ ಮಂಡಳ ನಿಯಮಿತ(ಕೆಎಸ್‍ಸಿಎಂಎಫ್)ನಲ್ಲಿ 2,626 ಮೆಟ್ರಿಕ್ ಟನ್ ಗೊಬ್ಬರ ದಾಸ್ತಾನಿದೆ. ಅಂದಾಜು 14,657 ಮೆಟ್ರಿಕ್ ಟನ್ ಡಿಎಪಿ ಗೊಬ್ಬರ ಲಭ್ಯವಿದೆ. ಜೂನ್ ತಿಂಗಳಲ್ಲಿ ಜಿಲ್ಲೆಗೆ ನಿಗದಿಯಾದ 5,242 ಮೆಟ್ರಿಕ್ ಟನ್ ಹಾಗೂ ಜುಲೈ ತಿಂಗಳಿಗೆ ನಿಗದಿಯಾದ ಕೋಟವನ್ನು ತಿಂಗಳ ಆರಂಭದಲ್ಲಿ ನೀಡಿದರೆ ನಮಗೆ ಜುಲೈವರೆಗೆ 18 ಸಾವಿರ ಮೆಟ್ರಿಕ್ ಟನ್ ಗೊಬ್ಬರ ಲಭ್ಯವಾಗಲಿದೆ ಎಂದು ಹೇಳಿದರು.

    ಜಿಲ್ಲೆಯಲ್ಲಿ ಈ ವರ್ಷ ಡಿಎಪಿ ಹೊರತು ಕಾಂಪ್ಲೆಕ್ಸ್, ಎಂಒಪಿ ಹಾಗೂ ಯೂರಿಯಾ ಸೇರಿದಂತೆ 98,425 ಮೆಟ್ರಿಕ್ ಟನ್ ಗೊಬ್ಬರ ಹಂಚಿಕೆಯಾಗಿದೆ. 33,635 ಕ್ವಿಂಟಲ್ ಬಿತ್ತನೆ ಬೀಜ ಹಂಚಿಕೆಯಾಗಿದೆ ಎಂದು ತಿಳಿಸಿದರು.

  • ಬೆಳಗ್ಗೆ 6ರಿಂದ ಸಂಜೆ 6ರ ವರೆಗೆ ರಸಗೊಬ್ಬರ ಸಾಗಾಟ, ಮಾರಾಟಕ್ಕೆ ಅನುಮತಿ- ಸರ್ಕಾರದಿಂದ ಘೋಷಣೆ

    ಬೆಳಗ್ಗೆ 6ರಿಂದ ಸಂಜೆ 6ರ ವರೆಗೆ ರಸಗೊಬ್ಬರ ಸಾಗಾಟ, ಮಾರಾಟಕ್ಕೆ ಅನುಮತಿ- ಸರ್ಕಾರದಿಂದ ಘೋಷಣೆ

    – ಮುಂಗಾರು ಚುರುಕು ಹಿನ್ನೆಲೆ ಕ್ರಮ

    ಬೆಂಗಳೂರು: ಕೇರಳಕ್ಕೆ ನಾಳೆ ಮಾನ್ಸೂನ್ ಮಾರುತಗಳು ಪ್ರವೇಶಿಸಲಿದ್ದು, ಈ ಹಿನ್ನೆಲೆ ಭಾರೀ ಮಳೆಯಾಗುತ್ತಿದೆ. ರಾಜ್ಯದಲ್ಲಿ ಸಹ ಹಲವು ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದೆ. ಹೀಗಾಗಿ ಮುಂಗಾರು ಹಂಗಾಮಿಗೆ ರೈತರು ಭರ್ಜರಿ ಸಿದ್ಧತೆ ನಡೆಸಿದ್ದು, ಬೀಜ, ಗೊಬ್ಬರ ಖರೀದಿಯಲ್ಲಿ ತೊಡಗಿದ್ದಾರೆ. ಹೀಗಾಗಿ ಅಂಗಡಿಗಳ ಮುಂದೆರ ಸಾಲು ಹೆಚ್ಚುತ್ತಿದೆ. ಉದನ್ನು ಮನಗಂಡ ಸರ್ಕಾರ ರಸಗೊಬ್ಬರ ಸಾಗಣೆ ಹಾಗೂ ಮಾರಾಟಕ್ಕೆ ಅನುಮತಿ ನೀಡಿದೆ.

    ಈ ಕುರಿತು ಸರ್ಕಾರ ಆದೇಶ ಹೊರಡಿಸಿದ್ದು, ಬೆ. 6 ರಿಂದ ಸಂಜೆ 6 ಗಂಟೆಯವರೆಗೆ ರಸಗೊಬ್ಬರ ಸಾಗಾಟ, ಮಾರಾಟಕ್ಕೆ ಅನುಮತಿ ನೀಡಿದೆ. ಇದರಿಂದಾಗಿ ರೈತರು ಬೆಳಗ್ಗೆ ಬೇಗ ತೆರಳಿ ಅಂಗಡಿಗಳ ಮುಂದೆ ಸಾಲುಗಟ್ಟಿ ನಿಲ್ಲುವುದು ತಪ್ಪಿದಂತಾಗುತ್ತದೆ. ಇದನ್ನೂ ಓದಿ: ಮುಂಗಾರು ಆರಂಭ- ಬೀಜ, ಗೊಬ್ಬರ ಖರೀದಿಗೆ ಮುಗಿಬಿದ್ದ ರೈತರು

    ಮತ್ತೊಂದು ಮಹತ್ವದ ಘೋಷಣೆ ಮಾಡಿರುವ ಸರ್ಕಾರ, ರಫ್ತು ವಲಯದ ಕೈಗಾರಿಕೆಗಳು ಹಾಗೂ ಗಾರ್ಮೆಂಟ್ಸ್ ಗಳ ಕಾರ್ಯಾಚರಣೆಗೆ ಷರತ್ತುಬದ್ಧ ಅನುಮತಿ ನೀಡಿದೆ. ಶೇ.50 ರಷ್ಟು ಕಾರ್ಮಿಕರನ್ನು ಬಳಸಿಕೊಂಡು ಕಾರ್ಯಾಚರಣೆ ನಡೆಸಲು ಸಮ್ಮತಿಸಿದೆ. 1,000 ಕಾರ್ಮಿಕರ ಮೇಲಿರುವ ಕೈಗಾರಿಕೆಗಳಲ್ಲಿ ಶೇ.10ರಷ್ಟು ಕಾರ್ಮಿಕರಿಗೆ ಕೊರೊನಾ ಟೆಸ್ಟ್ ಕಡ್ಡಾಯವಾಗಿದ್ದು, ವಾರಕ್ಕೆ ಎರಡು ಬಾರಿ ಟೆಸ್ಟ್ ಮಾಡಬೇಕು ಎಂದು ಷರತ್ತುಬದ್ಧ ಅನುಮತಿ ನೀಡಿದೆ.

  • ಮುಂಗಾರು ಆರಂಭ- ಬೀಜ, ಗೊಬ್ಬರ ಖರೀದಿಗೆ ಮುಗಿಬಿದ್ದ ರೈತರು

    ಮುಂಗಾರು ಆರಂಭ- ಬೀಜ, ಗೊಬ್ಬರ ಖರೀದಿಗೆ ಮುಗಿಬಿದ್ದ ರೈತರು

    ಗದಗ: ಜಿಲ್ಲೆಯಲ್ಲಿ 2 ದಿನ ಲಾಕ್‍ಡೌನ್ ಸಡಿಲಿಕೆ ಇರುವುದರಿಂದ ಅನೇಕ ಕಡೆಗಳಲ್ಲಿ ಬೀಜ, ಗೊಬ್ಬರ ಖರೀದಿಗಾಗಿ ರೈತರು ಮುಗಿಬಿದ್ದಿದ್ದಾರೆ.

    ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳು ಚುರುಕುಗೊಂಡಿವೆ. ಇದರಿಂದ ಗದಗ, ಲಕ್ಷ್ಮೇಶ್ವರ, ಗಜೇಂದ್ರಗಡ ಪಟ್ಟಣಗಳಲ್ಲಿ ಬೀಜ, ಗೊಬ್ಬರ ಖರೀದಿ ವೇಳೆ ಮಾಸ್ಕ್, ಸಾಮಾಜಿಕ ಅಂತರ ಮರೆತು ಒಬ್ಬರ ಮೇಲೊಬ್ಬರು ಬಿದ್ದಿದ್ದಾರೆ. ರೈತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ನಂತರ ರೈತರು ಸರದಿ ಸಾಲಿನಲ್ಲಿ ನಿಂತು ರಸಗೊಬ್ಬರ ಪಡೆದರು. ಇದನ್ನೂ ಓದಿ: ಅನಾಥ ವೃದ್ಧೆಗೆ ತುತ್ತು ತಿನ್ನಿಸಿದ ಪೊಲೀಸ್ ಕಾರ್ಯಕ್ಕೆ ಭಾರೀ ಮೆಚ್ಚುಗೆ

    ರಾಜ್ಯಕ್ಕೆ ಜೂನ್ 2ನೇ ವಾರದಲ್ಲಿ ಮುಂಗಾರು ಪ್ರವೇಶ ಮಾಡಲಿದ್ದು, ಮಳೆಯ ನಿರೀಕ್ಷೆ ಹಿನ್ನೆಲೆ ರೈತರು ಬೀಜ, ಗೊಬ್ಬರವನ್ನು ಖರೀದಿಸುತ್ತಿದ್ದಾರೆ. ಅದರಲ್ಲೂ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‍ಡೌನ್ ವಿಧಿಸಲಾಗಿದ್ದು, ವಾರದಲ್ಲಿ 2 ದಿನ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ರೈತರು ತಂಡೋಪತಂಡವಾಗಿ ಆಗಮಿಸಿ ಬೀಜ, ಗೊಬ್ಬರ ಖರೀದಿಸುತ್ತಿದ್ದಾರೆ.

  • ರೈತರಿಗೆ ತೊಂದರೆ ಕೊಟ್ಟರೆ ಹುಷಾರ್- ಬಿ.ಸಿ.ಪಾಟೀಲ್ ಎಚ್ಚರಿಕೆ

    ರೈತರಿಗೆ ತೊಂದರೆ ಕೊಟ್ಟರೆ ಹುಷಾರ್- ಬಿ.ಸಿ.ಪಾಟೀಲ್ ಎಚ್ಚರಿಕೆ

    ಚಿಕ್ಕಬಳ್ಳಾಪುರ: ಕೊರೊನಾ ಸಂದರ್ಭದ ದುರ್ಲಾಭ ಪಡೆದು ಬಿತ್ತನೆ ಬೀಜ, ಕ್ರಿಮಿನಾಶಕ ಹಾಗೂ ರಸಗೊಬ್ಬರಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವವರು ಮತ್ತು ಸರ್ಕಾರ ನಿಗದಿಪಡಿಸಿದ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.

    ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಕೃಷಿ, ರೇಷ್ಮೆ ಮತ್ತು ತೋಟಗಾರಿಕೆ ಇಲಾಖೆಗಳ ಅಧಿಕಾರಿಗಳು ಹಾಗೂ ರೈತ ಪ್ರತಿನಿಧಿಗಳ ಸಭೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಹಿನ್ನೆಲೆಯಲ್ಲಿ ತುಂಬಾ ಬಿಕ್ಕಟ್ಟಿನ ಪರಿಸ್ಥಿತಿ ಇದೆ. ಕೃಷಿ ಕ್ಷೇತ್ರ ಅನುಭವಿಸಿದ ನಷ್ಟದ ಪ್ರಮಾಣದಷ್ಟು ಮತ್ಯಾವ ಕ್ಷೇತ್ರವೂ ನಷ್ಟ ಅನುಭವಿಸಿಲ್ಲ. ಆದರೂ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಾಧ್ಯವಾದಷ್ಟೂ ರೈತರ ಬೆಂಬಲಕ್ಕೆ ನಿಂತಿದ್ದಾರೆ ಎಂದು ತಿಳಿಸಿದರು.

    ಈ ಮಧ್ಯೆ ಕೆಲವು ರಸಗೊಬ್ಬರಗಳ ಅಂಗಡಿಯ ಮಾಲೀಕರು ರಸಗೊಬ್ಬರ, ಕ್ರಿಮಿನಾಶಕ ಮತ್ತು ಬಿತ್ತನೆ ಬೀಜಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ ಎಂಬ ದೂರುಗಳು ಬಂದಿವೆ. ಈ ರೀತಿ ಪರಿಸ್ಥಿತಿಯ ದುರ್ಲಾಭ ಪಡೆದು ಮೊದಲೇ ಕಷ್ಟನಷ್ಟಕ್ಕೆ ಸಿಲುಕಿರುವ ರೈತರನ್ನು ಶೋಷಿಸುವವರನ್ನು ಸರ್ಕಾರ ಸಹಿಸುವ ಪ್ರಶ್ನೆಯೇ ಇಲ್ಲ. ಅಂತವರ ವಿರುದ್ಧ ಸರ್ಕಾರ ಪ್ರಕರಣ ದಾಖಲಿಸಲಿದೆ ಎಂದು ಎಚ್ಚರಿಸಿದರು.

    ಬೇಗ ಕೊಳೆಯುವ ಕೃಷಿ ಉತ್ಪನ್ನಗಳನ್ನು ಕೆಲಕಾಲ ಶೇಖರಿಸಿಡಲು ಅಗತ್ಯವಿರುವ ಶೀಥಲ ಗೃಹಗಳು ಹಾಗೂ ಹಣ್ಣು ಮತ್ತು ತರಕಾರಿ ಸಂಸ್ಕರಣಾ ಘಟಕಗಳನ್ನು ತೆರೆಯಲು ಅವಶ್ಯಕತೆ. ಇದು ಸರ್ಕಾರದ ಗಮನಕ್ಕೂ ಬಂದಿದೆ. ಈ ಸಲಹೆಗಳನ್ನು ಸಿಎಂ ಯಡಿಯೂರಪ್ಪ ಅವತಿಗೂ ಶಿಫಾರಸು ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಈ ಕುರಿತು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.

    ರಾಜ್ಯ ಕೃಷಿ ಇಲಾಖೆಯಲ್ಲಿ ಶೇ.50ರಷ್ಟು ಹುದ್ದೆಗಳು ಖಾಲಿಯಿದ್ದು, ಇದರಿಂದ ಇಲಾಖೆ ಸಮರ್ಪಕವಾಗಿ ಕಾರ್ಯನಿರ್ವಸಹಿಲು ಸಾಧ್ಯವಾಗುತ್ತಿಲ್ಲ. ರಾಜ್ಯದ ಕೆಲವೆಡೆ ಕಳಪೆ ಕೀಟನಾಶಕ, ಬಿತ್ತನೆ ಬೀಜ ಮಾರಾಟವಾಗುತ್ತಿದ್ದು, ಈವರೆಗೆ 370 ಮಾದರಿಗಳನ್ನು ಸಂಗ್ರಹಿಸಲಾಗಿದೆ. ಈ ಪೈಕಿ 175 ಮಾದರಿಗಳು ಕಳಪೆ ಎಂದು ಖಚಿತ ಪಟ್ಟಿವೆ. 32 ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದೆ. ಚಿಕ್ಕಬಳ್ಳಾಪುರದ ಅಂಗಡಿಯೊಂದರಲ್ಲಿ 20 ಲಕ್ಷ ರೂ.ಗಳ ಕಳಪೆ ಸರಕನ್ನು ಜಫ್ತಿ ಮಾಡಲಾಗಿದೆ ಎಂದು ತಿಳಿಸಿದರು.

  • ಉಪನಯನದಲ್ಲಿ ಸಿಹಿ ಬದಲಾಗಿ ಬೀಜದುಂಡೆ ನೀಡಿ ಪರಿಸರ ಕಾಳಜಿ ಮೆರೆದ ಕುಟುಂಬ

    ಉಪನಯನದಲ್ಲಿ ಸಿಹಿ ಬದಲಾಗಿ ಬೀಜದುಂಡೆ ನೀಡಿ ಪರಿಸರ ಕಾಳಜಿ ಮೆರೆದ ಕುಟುಂಬ

    ಕಾರವಾರ: ಯಾವುದೇ ಕಾರ್ಯಕ್ರಮವಿರಲಿ ಬಂದ ಅಥಿತಿಗಳಿಗೆ ಸಿಹಿ ನೀಡಿ ಮೃಷ್ಟಾನ್ನ ಭೋಜನ ನೀಡುವ ಮೂಲಕ ಅತಿಥಿ ಸತ್ಕಾರ ಮಾಡುವುದು ಸಂಪ್ರದಾಯ .

    ಯಲ್ಲಾಪುರ ತಾಲೂಕಿನ ಚಂದಗುಳಿಯಲ್ಲಿ ಬುಧವಾರ ನಡೆದ ಉಪನಯನವೊಂದರಲ್ಲಿ ವಿತರಿಸಿದ ವಿಭಿನ್ನ ಉಂಡೆ ಅತಿಥಿಗಳನ್ನು ಮೆಚ್ಚಿಸುವಂತೆ ಮಾಡಿತ್ತು. ಅಲ್ಲಿ ವಿತರಿಸಿದ್ದು ಯಾವುದೇ ಸಿಹಿಯಾದ ಉಂಡೆಯಾಗಿರದೇ ಪ್ಯಾಕ್ ಮಾಡಿದ ಬೀಜದುಂಡೆಯಾಗಿತ್ತು. ವೀಣಾ ಹಾಗೂ ರಾಮಚಂದ್ರ ವೈದ್ಯ ದಂಪತಿಗಳ ಪುತ್ರನಾದ ಆದಿತ್ಯ (ಜಯಶೀಲ)ನ ಉಪನಯನವನ್ನು ತಾಲೂಕಿನ ಚಂದಗುಳಿ ಗಂಟೆ ಗಣಪತಿ ದೇವಾಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿತ್ತು.

    ನಮ್ಮ ಮಗನ ಉಪನಯನ ವಿಭಿನ್ನವಾಗಿರಬೇಕು ಮತ್ತು ಈ ಶುಭಕಾರ್ಯದ ಸವಿನೆನಪು ಚಿರಸ್ಥಾಯಿಯಾಗಿರಬೇಕು ಎನ್ನುವ ಉದ್ದೇಶದಿಂದ ಈ ದಂಪತಿ ಆಯ್ಕೆ ಮಾಡಿಕೊಂಡಿದ್ದು ಪರಿಸರ ಜಾಗೃತಿ. ಮಗನ ಉಪನಯನದ ಹೆಸರಿನಲ್ಲಿ ನೂರಾರು ಗಿಡಗಳು ಅಲ್ಲಲ್ಲಿ ಬೆಳೆದು ನಿಲ್ಲಲಿ, ಈ ಮೂಲಕ ಹಸಿರು ಪರಿಸರ ಹೆಚ್ಚಾಗಲಿ ಎಂಬ ಉದ್ದೇಶದಿಂದ ಬೀಜದುಂಡೆಗಳನ್ನು ತಯಾರಿಸಿ, ಬಂದಂತಹ ಅತಿಥಿಗಳಿಗೆ ಆದಿತ್ಯನ ಆಧ್ಯಾತ್ಮಿಕ ಪಯಣಕ್ಕೆ ಸಾಕ್ಷಿಯಾಗಿ ಹರಸಿ. ಪ್ರೀತಿಯಿಂದ ನಾವು ನೀಡುವ ಜೀವಗಾಳು ಪಸರಿಸಿ ಎಂಬ ಸಂದೇಶದೊಂದಿಗೆ ವಿತರಿಸಿದ್ದಲ್ಲದೇ, ಇದನ್ನು ನಿಮ್ಮ ಮನೆಯ ಸುತ್ತಮುತ್ತಲಿನ ಖಾಲಿ ಪ್ರದೇಶದಲ್ಲಿ ಹಾಕುವುದರ ಮೂಲಕ ಹಸಿರು ಪರಿಸರ ಹೆಚ್ಚಾಗಲು ಕೈಜೋಡಿಸಿ ಎಂಬ ಮನವಿಯನ್ನೂ ಮಾಡಿಕೊಳ್ಳಲಾಯಿತು.

    ಈ ವಿಚಾರದ ಬಗ್ಗೆ ಮಾತನಾಡಿರುವ ಈ ಬೀಜದುಂಡೆ ವಿತರಣೆಯ ರೂವಾರಿ ಆದಿತ್ಯನ ಕುಟುಂಬದವರಾದ ವಾನಳ್ಳಿಯ ನಾಗವೇಣಿ ಹೆಗಡೆ, ಅತಿಥಿಗಳಿಗೆ ವಿತರಿಸಲು ಎರಡು ಜಾತಿಯ ಮರಗಳಾದ ನೇರಳೆ, ಹಲಸು ಮುಂತಾದ ಬೀಜಗಳುಳ್ಳ ಸುಮಾರು 1200 ಹೆಚ್ಚು ಬೀಜದುಂಡೆಗಳನ್ನು ತಯಾರಿಸಿ ವಿತರಿಸಿದ್ದೇವೆ. ಅವುಗಳಲ್ಲಿ ನೂರು ಗಿಡಗಳು ಹುಟ್ಟಿ, ಮರವಾಗಿ ಬೆಳೆದು ನಿಂತರೆ ಪರಿಸರಕ್ಕೊಂದು ಕೊಡುಗೆ ನೀಡಬೇಕೆಂದ ನಮ್ಮ ಅಭಿಲಾಶೆ ಎಂದು ತಿಳಿಸಿದ್ದಾರೆ.

    ಒಟ್ಟಿನಲ್ಲಿ ಈ ರೀತಿ ಶುಭ ಕಾರ್ಯಗಳಲ್ಲಿ ಸಾಮಾಜಿಕ ಸಂದೇಶವನ್ನು, ಪರಿಸರ ಜಾಗೃತಿಯನ್ನು ಮೂಡಿಸುವಂತಾದರೆ ಶುಭ ಕಾರ್ಯ ಸಾಮಾಜಿಕ ಕಾರ್ಯವಾಗುವುದರಲ್ಲಿ ಸಂಶಯವಿಲ್ಲ.

  • ರಾಯಚೂರು: ನಕಲಿ ಹತ್ತಿಬೀಜ ಮಾರಾಟ ಜಾಲ ಪತ್ತೆ

    ರಾಯಚೂರು: ನಕಲಿ ಹತ್ತಿಬೀಜ ಮಾರಾಟ ಜಾಲ ಪತ್ತೆ

    ರಾಯಚೂರು: ನಕಲಿ ಹತ್ತಿ ಬೀಜ ಮಾರಾಟ ಜಾಲವನ್ನ ರಾಯಚೂರಿನ ಕ್ರೈಂ ಬ್ರ್ಯಾಂಚ್ ಹಾಗೂ ಮಾನ್ವಿ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದಾರೆ.

    ಆಂಧ್ರಪ್ರದೇಶದಲ್ಲಿ ತಯಾರಾಗುವ ಕಾವ್ಯ ಹೆಸರಿನ ನಕಲಿ ಹತ್ತಿ ಬೀಜವನ್ನ ಮಾರುತ್ತಿದ್ದ ಇಬ್ಬರು ಆರೋಪಿಗಳನ್ನ ಬಂಧಿಸಲಾಗಿದೆ. ಮಾನ್ವಿಯ ಕಲಂಗೇರಾ ಗ್ರಾಮದ ಅಶೋಕ್ ಹಾಗೂ ಭೀಮಣ್ಣ ಬಂಧಿತ ಆರೋಪಿಗಳು. 4 ಲಕ್ಷ 73 ಸಾವಿರ ರೂಪಾಯಿ ಮೌಲ್ಯದ ಒಟ್ಟು 520 ಪ್ಯಾಕೇಟ್‍ಗಳನ್ನ ಮಾರಾಟ ಮಾಡಿದ್ದ ಆರೋಪಿಗಳಿಂದ 1 ಲಕ್ಷ ರೂಪಾಯಿ ನಗದು ಜಪ್ತಿ ಮಾಡಲಾಗಿದೆ.

    ಆಂಧ್ರಪ್ರದೇಶದ ನಂದ್ಯಾಲ ಮೂಲದ ರಹಿಮಾನ್ ಎಂಬವನಿಂದ ಕಮಿಷನ್ ಆಧಾರದ ಮೇಲೆ ಇಬ್ಬರು ಆರೋಪಿಗಳು ನಕಲಿ ಬೀಜ ಮಾರಾಟ ಮಾಡುತ್ತಿದ್ದರು. ಆದ್ರೆ ಕಡಿಮೆ ಬೆಲೆಯ ಆಸೆ ಹಾಗೂ ಸುಳ್ಳು ಭರವಸೆಗಳಿಂದಾಗಿ ಸಿಕ್ಕ ಬೀಜಗಳನ್ನ ಕೊಂಡು ಬಿತ್ತನೆ ಮಾಡುವ ರೈತರು ಈಗ ಆತಂಕಕ್ಕೊಳಗಾಗಿದ್ದಾರೆ.

    ಪೊಲೀಸರ ದಾಳಿ ಹಿನ್ನೆಲೆ ಪ್ರಕರಣ ಬೆಳಕಿಗೆ ಬಂದಿದ್ದು ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.