Tag: Seemantha Program

  • ಆರೋಗ್ಯ ಇಲಾಖೆಯಿಂದ 40 ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ

    ಆರೋಗ್ಯ ಇಲಾಖೆಯಿಂದ 40 ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ

    ಮಡಿಕೇರಿ: ಬಡತನ ರೇಖೆಗಿಂತ ಕೆಳಗೆ ಇರುವ ಗರ್ಭಿಣಿಯರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಸೀಮಂತ ಕಾರ್ಯಕ್ರಮವನ್ನು ಮಡಿಕೇರಿ ನಗರದ ಮಹದೇವ್ ಪೇಟೆಯಲ್ಲಿ ಇರುವ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿತ್ತು.

    ಮಡಿಕೇರಿ ನಗರದ ಸುತ್ತಮುತ್ತಲಿನ 40 ಗರ್ಭಿಣಿಯರಿಗೆ ಇಲಾಖೆಯ ಮಹಿಳಾ ಅಧಿಕಾರಿಗಳು ಬಳೆ, ರವಿಕೆ, ಹಣ್ಣು, ಹೂವು ನೀಡಿ ಉಡಿತುಂಬಿ ಹಾರೈಸಿದರು. ಇದನ್ನೂ ಓದಿ: ಸೂರ್ಯಕಾಂತಿ ಮಾತ್ರ ಅಲ್ಲ ಬೇರೆ ಖಾದ್ಯ ತೈಲ ಖರೀದಿಗೆ ಪರ್ಯಾಯ ಮಾರ್ಗಗಳ ಬಗ್ಗೆ ಚಿಂತನೆ: ನಿರ್ಮಲಾ ಸೀತಾರಾಮನ್

    ಇದಕ್ಕೂ ಮುನ್ನ ನಡೆದ ಕಾರ್ಯಕ್ರಮದಲ್ಲಿ ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ಮಾತನಾಡಿ, ಮಹಿಳೆಯರು ತರಕಾರಿ, ಹಣ್ಣು ಮತ್ತಿತರೆ ಪೌಷ್ಟಿಕ ಆಹಾರ ಸೇವಿಸಬೇಕು. ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸದೆ ಅನೇಕ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಉತ್ತಮ ಆರೋಗ್ಯ ಹೊಂದಲು ಪೌಷ್ಟಿಕಾಂಶದ ಆಹಾರವನ್ನು ಮನೆಯಲ್ಲಿಯೇ ತಯಾರಿಸಿ ಸೇವಿಸಬೇಕು. ಸರ್ಕಾರಿ ಅಸ್ಪತ್ರೆಗಳಲ್ಲಿ ಯಾವುದೇ ಭಯ ವಿಲ್ಲದೆ ಎಚ್‍ಐವಿ ತಪಾಸಣೆ ಮಾಡಿಕೊಳ್ಳಬೇಕೆಂದು ಮಾಹಿತಿ ಹಂಚಿಕೊಂಡರು. ಇದನ್ನೂ ಓದಿ: ಐಷಾರಾಮಿ ಜೀವನಕ್ಕಾಗಿ ಡ್ರಗ್ಸ್ ಡೀಲ್ ಮಾಡ್ತಿದ್ದ ಬೆಂಗಳೂರಿನ ಲವರ್ಸ್ ಬಂಧನ

    ಎಚ್‍ಐವಿ ಹೈ ರಿಸ್ಕ್ ಇದ್ದರೆ, ಅಸ್ಪತ್ರೆಗಳಲ್ಲೇ ಉಚಿತವಾಗಿ ತಪಾಸಣೆ ನಡೆಸಲಾಗುತ್ತದೆ. ವೈದ್ಯಕೀಯವಾಗಿ ಸಿಕ್ಕುವ ಔಷಧಿಗಳು ಚಕಪ್‍ಗಳು ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳು ಬಳಸಿಕೊಳ್ಳಬೇಕು. ಹಾಗೆಯೇ ಬಡತನ ರೇಖೆಗಿಂತ ಕೆಳಗೆ ಇರುವ ಗರ್ಭಿಣಿಯರಿಗೆ ಸರ್ಕಾರದಿಂದಲ್ಲೇ ಸೀಮಂತ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ತಿಳಿಸಿದರು.