Tag: seetharama serial

  • ಭಾವಿ ಪತಿ ಜೊತೆ ವೈಷ್ಣವಿ ರೊಮ್ಯಾಂಟಿಕ್ ಡಿನ್ನರ್ ಡೇಟ್- ಸೂಪರ್‌ ಜೋಡಿ ಎಂದ ಫ್ಯಾನ್ಸ್

    ಭಾವಿ ಪತಿ ಜೊತೆ ವೈಷ್ಣವಿ ರೊಮ್ಯಾಂಟಿಕ್ ಡಿನ್ನರ್ ಡೇಟ್- ಸೂಪರ್‌ ಜೋಡಿ ಎಂದ ಫ್ಯಾನ್ಸ್

    ‘ಸೀತಾರಾಮ’ ನಟಿ ವೈಷ್ಣವಿ ಗೌಡ (Vaishnavi Gowda) ಇತ್ತೀಚೆಗೆ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದರು. ಈ ಬೆನ್ನಲ್ಲೇ ಭಾವಿ ಪತಿ ಜೊತೆಗೆ ವೈಷ್ಣವಿ ಡಿನ್ನರ್ ಡೇಟ್‌ಗೆ ತೆರಳಿದ್ದಾರೆ. ಇಬ್ಬರ ರೊಮ್ಯಾಂಟಿಕ್ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:18ನೇ ಆ್ಯನಿವರ್ಸರಿ ಸಂಭ್ರಮ: ಪತಿಯೊಂದಿಗಿನ ಫೋಟೋ ಹಂಚಿಕೊಂಡ ಐಶ್ವರ್ಯಾ ರೈ

    ಅನುಕೂಲ್ ಮಿಶ್ರಾ (Anukool Mishra) ಜೊತೆ ನಟಿ ಸ್ವಿಮ್ಮಿಂಗ್ ಪೂಲ್ ಬಳಿ ಊಟ ಸವಿದಿದ್ದಾರೆ. ರೊಮ್ಯಾಂಟಿಕ್‌ ಆಗಿ ಸಮಯ ಕಳೆದಿದ್ದಾರೆ. ಈ ಕುರಿತು ಅನುಕೂಲ್ ಪೋಸ್ಟ್‌ ಹಂಚಿಕೊಂಡಿದ್ದಾರೆ. ಈ ಹೊಸ ಜೋಡಿ ಸದಾ ಚೆನ್ನಾಗಿರಲಿ‌, ಸೂಪರ್‌ ಜೋಡಿ ಅಂತ ಅಭಿಮಾನಿಗಳು ವಿಶ್ ಮಾಡುತ್ತಿದ್ದಾರೆ. ಇದನ್ನೂ ಓದಿ:ಆಗೋದೆಲ್ಲಾ ಒಳ್ಳೆಯದಕ್ಕೆ ಭಗವಂತ ನಮ್ಮೊಂದಿಗೆ ಇದ್ದಾನೆ: ಕಹಿ ಘಟನೆ ನೆನೆದ ವೈಷ್ಣವಿ

     

    View this post on Instagram

     

    A post shared by @aekay_14

    ಏ.14ರಂದು ಏರ್‌ಫೋರ್ಸ್ ಲೆಫ್ಟಿನೆಂಟ್ ಆಗಿರುವ ಛತ್ತೀಸ್‌ಗಢ ಮೂಲದ ಅನುಕೂಲ್ ಜೊತೆ ವೈಷ್ಣವಿ ಗೌಡ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಒಂದು ವರ್ಷದಿಂದ ಅನುಕೂಲ್ ಪರಿಚಯವಿದೆ. ಇದು ಲವ್ ಮ್ಯಾರೇಜ್ ಎಂದು ಎಲ್ಲರೂ ಅಂದುಕೊಂಡಿದ್ದಾರೆ. ಆದರೆ ಇದು ಅರೇಂಜ್ ಮ್ಯಾರೇಜ್. ಇದು ಹಿರಿಯರು ನೋಡಿ ನಿಶ್ಚಯಿಸಿದ ಮದುವೆ ಎಂದು ವೈಷ್ಣವಿ ಕ್ಲ್ಯಾರಿಟಿ ನೀಡಿದ್ದಾರೆ.

    ಮ್ಯಾಟ್ರಿಮೋನಿ ಮೂಲಕ ಜಾತಕ ಶೇರ್ ಆದ ಬಳಿಕ ಪೋಷಕರು ಈ ಮದುವೆ ನಿಶ್ಚಯಿಸಿದರು. ನಾವಿಬ್ಬರೂ ಒಬ್ಬರಿಗೊಬ್ಬರು ಅರ್ಥ ಮಾಡಿಕೊಳ್ಳಲು 1 ವರ್ಷ ಸಮಯ ತೆಗೆದುಕೊಂಡಿದ್ದೆವು. ಮದುವೆ ತಯಾರಿ ನಡೀತಿದೆ. ಶೀಘ್ರದಲ್ಲೇ ಮದುವೆ ಆಗುತ್ತೇನೆ ಎಂದರು.

  • ನಮ್ದು ಅರೇಂಜ್ ಮ್ಯಾರೇಜ್ – ನಾವು ಬೆಂಗಳೂರಿನಲ್ಲೇ ಇರ‍್ತೀವಿ: ವೈಷ್ಣವಿ ಗೌಡ

    ನಮ್ದು ಅರೇಂಜ್ ಮ್ಯಾರೇಜ್ – ನಾವು ಬೆಂಗಳೂರಿನಲ್ಲೇ ಇರ‍್ತೀವಿ: ವೈಷ್ಣವಿ ಗೌಡ

    – ಮದುವೆ ಆದ್ಮೇಲೂ ಆಕ್ಟ್ ಮಾಡುತ್ತೇನೆ
    – ನಾನು ಬಯಸಿದಂಥ ಹುಡುಗ ಸಿಕ್ಕಿದ್ದಾರೆ

    ಬೆಂಗಳೂರು: ನನ್ನದು ಲವ್ ಮ್ಯಾರೇಜ್ ಅಲ್ಲ, ಅರೇಂಜ್ ಮ್ಯಾರೇಜ್ ಎಂದು ಸೀತಾರಾಮ ಖ್ಯಾತಿಯ ನಟಿ ವೈಷ್ಣವಿ ಗೌಡ (Vaishnavi Gowda) ಎಲ್ಲಾ ಗಾಸಿಪ್‌ಗಳಿಗೆ ತೆರೆ ಎಳೆದಿದ್ದಾರೆ.

    ಕಳೆದ ಸೋಮವಾರವಷ್ಟೇ ಏರ್‌ಫೋರ್ಸ್ ಲೆಫ್ಟಿನೆಂಟ್ ಆಗಿರುವ ಛತ್ತೀಸ್‌ಗಢ (Chhattisgarh) ಮೂಲದ ಅನುಕೂಲ್ ಜೊತೆ ವೈಷ್ಣವಿ ಗೌಡ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಈ ಬಗ್ಗೆ ನಟಿ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿ, ಒಂದು ವರ್ಷದಿಂದ ಅನುಕೂಲ್ ಪರಿಚಯವಿದೆ. ಇದು ಲವ್ ಮ್ಯಾರೇಜ್ ಎಂದು ಎಲ್ಲರೂ ಅಂದುಕೊಂಡಿದ್ದಾರೆ. ಆದರೆ ಇದು ಅರೇಂಜ್ ಮ್ಯಾರೇಜ್. ಇದು ಹಿರಿಯರು ನೋಡಿ ನಿಶ್ಚಯಿಸಿದ ಮದುವೆ ಎಂದು ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಅದ್ಧೂರಿಯಾಗಿ ಎಂಗೇಜ್‌ಮೆಂಟ್‌ ಮಾಡಿಕೊಂಡ ನಟಿ ವೈಷ್ಣವಿ ಗೌಡ

    ಮ್ಯಾಟ್ರಿಮೋನಿ (Matrimony) ಮೂಲಕ ಜಾತಕ ಶೇರ್ ಆದ ಬಳಿಕ ಅಪ್ಪ ಅಮ್ಮ ಈ ಮದುವೆ ನಿಶ್ಚಯಿಸಿದ್ದಾರೆ. ನಾವಿಬ್ಬರೂ ಒಬ್ಬರಿಗೊಬ್ಬರು ಅರ್ಥ ಮಾಡಿಕೊಳ್ಳಲು 1 ವರ್ಷ ಸಮಯ ತೆಗೆದುಕೊಂಡಿದ್ದೆವು. ಮದುವೆ ತಯಾರಿ ನಡೀತಿದೆ. ಶೀಘ್ರದಲ್ಲೇ ಮದುವೆ ಆಗುತ್ತೇನೆ ಎಂದರು. ಇದನ್ನೂ ಓದಿ: ‘ಅಗ್ನಿಸಾಕ್ಷಿ’ ನಟಿ ವೈಷ್ಣವಿ ಗೌಡ ಎಂಗೇಜ್‌ಮೆಂಟ್ ಫೋಟೋ ಗ್ಯಾಲರಿ

    ಮದುವೆ ಬಳಿಕವೂ ಆಕ್ಟಿಂಗ್
    ಮದುವೆಯ ಬಳಿಕವೂ ಆಕ್ಟ್ ಮಾಡಲು ಅನುಮತಿ ಇದೆ. ಅವರು ನನ್ನ ಸೀರಿಯಲ್ ದಿನಾ ನೋಡುತ್ತಾರಂತೆ. ಸೀರಿಯಲ್ ಬಗ್ಗೆ ನನಗಿಂತ ಹೆಚ್ಚು ಅವರು ಅಪ್‌ಡೇಟ್ ಇದ್ದಾರೆ. ಮದುವೆ ಬಗ್ಗೆ ಅಮೂಲ್ಯ ಸೇರಿ ಕೆಲವರಿಗೆ ಮಾತ್ರ ಗೊತ್ತಿತ್ತು. ಅನುಕೂಲ್ ಅವರು ಬೆಂಗಳೂರಿನಲ್ಲೇ ಇರೋದ್ರಿಂದ ಮದುವೆ ಬಳಿಕವೂ ಇಲ್ಲೇ ಇರುತ್ತೇವೆ. ದೇವರು ತಡ ಮಾಡೋದು ಒಳ್ಳೆಯದನ್ನ ಮಾಡೋದಕ್ಕಾಗಿ ಎಂದು ನಂಬುತ್ತೇನೆ ಎಂದು ಹೇಳಿದರು.

    ಅವರು ನನ್ನ ವೈಶ್ ಅಂತಾರೆ
    ನಾನು ಅವರನ್ನು ಹೆಸರು ಹೇಳೇ ಕರೆಯುತ್ತೇನೆ. ಅವರು ನನ್ನ ವೈಶ್ ಅಂತಾರೆ. 300 ಪ್ರಪೋಸಲ್ ಬಂದ್ರೂ ಇಷ್ಟ ಆಗಿಲ್ಲ ಅಂತ ಸುದೀಪ್ ಸರ್ ಬಳಿ ಹೇಳಿದ್ದೆ ಅಲ್ವಾ. ಯೋಚನೆ ಮಾಡಿ ಇವರು ಎಂಥಾ ಹುಡುಗ ಅಂತ. ನಾನು ಎಂಥಾ ಹುಡುಗ ಸಿಗ್ಬೇಕು ಅಂತ ಬಯಸಿದ್ನೋ ಅದೇ ಥರ ಹುಡುಗ ಇವರು ಎಂದು ಭಾವಿ ಪತಿಯ ಬಗ್ಗೆ ಮಾತನಾಡಿದರು. ಇದನ್ನೂ ಓದಿ: ಮುದ್ದು ಮಗಳಿಗೆ ಸುಂದರ ಹೆಸರಿಟ್ಟ ಅಥಿಯಾ ಶೆಟ್ಟಿ ದಂಪತಿ- ಅದರ ಅರ್ಥವೇನು ಗೊತ್ತಾ?

    ಕೆಲವರು ಟ್ರೋಲ್ ಮಾಡುತ್ತಾರೆ. ಅವರಿಗೆ ಸರಿಯಾಗಿ ಏನು ಮಾಹಿತಿ ಇರಲ್ಲ. ತಪ್ಪು ಅದು, ನಾವು ಹೇಳೋವರೆಗೂ ಕಾಯಬೇಕಲ್ಲ. ನನ್ನ ಹಿಂದೆ ಏನೇನಾಗಿತ್ತೋ ಅದೆಲ್ಲಾ ಪಾಠ ನನಗೆ. ಆಗೋದೆಲ್ಲ ಒಳ್ಳೆಯದಕ್ಕೆ ಅನ್ನೋದು ಇದಕ್ಕೆ ಅಲ್ವೇ. ನನ್ನದಲ್ಲದ ತಪ್ಪಿಗೆ ನಾನು ತೊಂದರೆ ಅನುಭವಿಸುವಂತಾಯಿತು. ಮದುವೆ ಆದ್ಮೇಲೂ ಹೀಗೇ ಆಕ್ಟ್ ಮಾಡುತ್ತೇನೆ ಎಂದು ಹೇಳುವ ಮೂಲಕ ಅಭಿಮಾನಿಗಳಿಗೆ ಗುಡ್‌ನ್ಯೂಸ್ ನೀಡಿದರು.

  • ದಾಂಪತ್ಯ ಜೀವನಕ್ಕೆ ‘ಕಾಲಿಟ್ಟ’ ಸೀತಾರಾಮ ನಟಿ ಮೇಘನಾ ಶಂಕರಪ್ಪ

    ದಾಂಪತ್ಯ ಜೀವನಕ್ಕೆ ‘ಕಾಲಿಟ್ಟ’ ಸೀತಾರಾಮ ನಟಿ ಮೇಘನಾ ಶಂಕರಪ್ಪ

    ‘ಕಿನ್ನರಿ’, ‘ಸೀತಾರಾಮ’ ಸೀರಿಯಲ್‌ಗಳ ಮೂಲಕ ಮನೆ ಮಾತಾದ ನಟಿ ಮೇಘನಾ ಶಂಕರಪ್ಪ (Meghana Shankarappa) ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಜಯಂತ್ (Jayanth) ಜೊತೆ ನಟಿ ಹಸೆಮಣೆ ಏರಿದ್ದಾರೆ. ಹೊಸ ಜೋಡಿಗೆ ಅಭಿಮಾನಿಗಳು ಶುಭಕೋರಿದ್ದಾರೆ. ಇದನ್ನೂ ಓದಿ:ಸಾಧನೆಗೆ ವಿಶ್ವಾಸವನ್ನು, ನಾಳೆಗೆ ಭರವಸೆಯನ್ನು ತಂದವಳು- ಪತ್ನಿಗೆ ರಿಷಬ್ ಆ್ಯನಿವರ್ಸರಿ ವಿಶ್

    ಫೆ.9ರಂದು ಜಯಂತ್ ಜೊತೆ ಮೇಘನಾ ಮದುವೆ ಬೆಂಗಳೂರಿನಲ್ಲಿ ಜರುಗಿದೆ. ಗುರುಹಿರಿಯರ ಸಮ್ಮುಖದಲ್ಲಿ ಮದುವೆ ಸಂಭ್ರಮದಿಂದ ನಡೆದಿದೆ. ಕಾವ್ಯ ಶೈವ, ‘ಸೀತಾರಾಮ’ ಸೀರಿಯಲ್ ಟೀಮ್ ಸೇರಿದಂತೆ ಅನೇಕರು ಮದುವೆಗೆ (Wedding) ಹಾಜರಿ ಹಾಕಿದ್ದಾರೆ.

    ಇನ್ನೂ ಇತ್ತೀಚೆಗೆ ಜಯಂತ್ ಜೊತೆ ನಟಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದು ಗುರುಹಿರಿಯರು ನಿಶ್ಚಯಿಸಿದ ಮದುವೆ ಇದಾಗಿದೆ.

  • ರೊಮ್ಯಾಂಟಿಕ್ ಪ್ರಿ ವೆಡ್ಡಿಂಗ್ ವಿಡಿಯೋ ಹಂಚಿಕೊಂಡ ‘ಸೀತಾರಾಮ’ ನಟಿ

    ರೊಮ್ಯಾಂಟಿಕ್ ಪ್ರಿ ವೆಡ್ಡಿಂಗ್ ವಿಡಿಯೋ ಹಂಚಿಕೊಂಡ ‘ಸೀತಾರಾಮ’ ನಟಿ

    ‘ಸೀತಾರಾಮ’ ಸೀರಿಯಲ್‌ನಲ್ಲಿ ನಾಯಕಿ ಸೀತಾ ಪಾತ್ರಧಾರಿಯ ಸ್ನೇಹಿತೆಯಾಗಿ ಗಮನ ಸೆಳೆದಿರುವ ಮೇಘನಾ ಶಂಕರಪ್ಪ (Meghana Shankarappa) ಹಸೆಮಣೆ (Wedding) ಏರಲು ಸಜ್ಜಾಗಿದ್ದಾರೆ. ಮದುವೆ ಸಂಭ್ರಮದಲ್ಲಿರುವ ನಟಿ ಸದ್ಯ ಭಾವಿ ಪತಿ ಜೊತೆಗಿನ ಸುಂದರ ಪ್ರಿ ವೆಡ್ಡಿಂಗ್‌ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ನಿರ್ದೇಶನದತ್ತ ರಂಜನಿ ರಾಘವನ್- ಕನ್ನಡತಿಯ ಚಿತ್ರಕ್ಕೆ ಇಳಯರಾಜ ಸಾಥ್

    ಹೊಸ ವರ್ಷದಂದು ಭಾವಿ ಪತಿ ಜೊತೆಗಿನ ರೊಮ್ಯಾಂಟಿಕ್ ವಿಡಿಯೋ ಹಂಚಿಕೊಂಡಿದ್ದಾರೆ. ದೇವಸ್ಥಾನವೊಂದರಲ್ಲಿ ವಿಡಿಯೋ ಶೂಟ್ ಮಾಡಿಸಿದ್ದು, ನಟಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಬಾದಮಿ ಬಣ್ಣದ ಉಡುಗೆಯಲ್ಲಿ ಇಬ್ಬರೂ ಮಿಂಚಿದ್ದಾರೆ. ಹೊಸ ಜೋಡಿಗೆ ಫ್ಯಾನ್ಸ್ ಶುಭಕೋರಿದ್ದಾರೆ.

    ಸಾಫ್ಟ್‌ವೇರ್ ಇಂಜಿನಿಯರ್ ಜಯಂತ್ ಜೊತೆ ನಟಿಯ ಮದುವೆ ಫೆಬ್ರವರಿಯಲ್ಲಿ ಫಿಕ್ಸ್ ಆಗಿದೆ. ಇಬ್ಬರೂ ಸ್ನೇಹಿತರಾಗಿದ್ದರು. ಆ ಸ್ನೇಹ ಪ್ರೀತಿಗೆ ತಿರುಗಿ ಇದೀಗ ಗುರುಹಿರಿಯರ ಸಮ್ಮತಿಯ ಮೇರೆಗೆ ಮದುವೆಗೆ ಸಜ್ಜಾಗಿದ್ದಾರೆ.

    ಇತ್ತೀಚೆಗೆ ನಟಿ ಎಂಗೇಜ್ ಆಗಿರುವ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಅನೌನ್ಸ್ ಮಾಡಿದ್ದರು. ಭಾವಿ ಪತಿ ಜೊತೆಗಿನ ಫೋಟೋ ಶೇರ್ ಮಾಡಿ ಸಂಬಂಧದ ಬಗ್ಗೆ ಅಧಿಕೃತಪಡಿಸಿದ್ದರು.