Tag: seetharamam film

  • ಮತ್ತೆ ಒಂದೇ ಸಿನಿಮಾದಲ್ಲಿ ನಟಿಸಲಿದ್ದಾರೆ ‘ಸೀತಾರಾಮಂ’ ಜೋಡಿ

    ಮತ್ತೆ ಒಂದೇ ಸಿನಿಮಾದಲ್ಲಿ ನಟಿಸಲಿದ್ದಾರೆ ‘ಸೀತಾರಾಮಂ’ ಜೋಡಿ

    ‘ಸೀತಾರಾಮಂ’ (Seetha Ramam) ಸಿನಿಮಾ ಮೂಲಕ ಅಪಾರ ಅಭಿಮಾನಿಗಳ ಮನಗೆದ್ದ ಜೋಡಿ ದುಲ್ಕರ್ ಸಲ್ಮಾನ್ (Dulquer Salmaan) ಮತ್ತು ಮೃಣಾಲ್ ಠಾಕೂರ್ ಈಗ ಗುಡ್ ನ್ಯೂಸ್ ಕೊಟ್ಟಿದ್ದಾರೆ. 2 ವರ್ಷಗಳ ನಂತರ ಮತ್ತೆ ಒಂದೇ ಸಿನಿಮಾದಲ್ಲಿ ಸೀತಾ ಮತ್ತು ರಾಮ್ ಕಾಣಿಸಿಕೊಳ್ಳಲಿದ್ದಾರೆ.

    2022ರಲ್ಲಿ ಸೀತಾರಾಮಂ ಸಿನಿಮಾ ರಿಲೀಸ್ ಆಗಿ ಸೂಪರ್ ಡೂಪರ್ ಹಿಟ್ ಆಗಿತ್ತು. ಸೀತಾ ಮತ್ತು ರಾಮ್ ಲವ್ ಸ್ಟೋರಿ ನೋಡಿ ಪ್ರೇಕ್ಷಕರ ಕಣ್ಣಂಚಿನಲ್ಲಿ ನೀರು ಬಂದಿತ್ತು. ಈ ಜೋಡಿ ಮತ್ತೆ ಒಂದಾದ್ರೆ ಚೆನ್ನಾಗಿರುತ್ತೆ ಎಂದು ಅನೇಕರು ಆಸೆಪಟ್ಟಿದ್ದರು. ಇದೀಗ ಅದೇ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

    ‘ಕಲ್ಕಿ 2898 ಎಡಿ’ (Kalki 2898 AD) ಸಿನಿಮಾದಲ್ಲಿ ಮೃಣಾಲ್ (Mrunal Thakur) ನಟಿಸುವ ಬಗ್ಗೆ ಈ ಹಿಂದೆಯೇ ವರದಿಯಾಗಿತ್ತು. ಆದರೆ ಈಗ ದುಲ್ಕರ್ ಸಲ್ಮಾನ್ ಕೂಡ ನಟಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಇಬ್ಬರೂ ಅತಿಥಿ ಪಾತ್ರವಾಗಿದ್ರೂ ಚಿತ್ರದಲ್ಲಿ ತಿರುವು ಕೊಡಲಿರುವ ಪಾತ್ರಕ್ಕೆ ಜೀವತುಂಬಲಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ:ಬ್ರೇಕ್ ಬಳಿಕ ಮತ್ತೆ ಸಿನಿಮಾಗಳಲ್ಲಿ ಶ್ರೀಲೀಲಾ ಬ್ಯುಸಿ

    ಪ್ರಭಾಸ್ (Prabhas) ಸಿನಿಮಾದಲ್ಲಿ ಜೊತೆಯಾಗುತ್ತಿರುವ ಸುದ್ದಿ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಯಾವದಕ್ಕೂ ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರಬೀಳಲಿದೆ ಎಂದು ಎದುರು ನೋಡ್ತಿದ್ದಾರೆ.

    ಅಂದಹಾಗೆ, ‘ಕಲ್ಕಿ 2898 ಎಡಿ’ (Kalki 2898 AD) ಸಿನಿಮಾ ಇದೇ ಜೂನ್ 27ಕ್ಕೆ ಬಹುಭಾಷೆಗಳಲ್ಲಿ ರಿಲೀಸ್ ಆಗ್ತಿದೆ. ಬೆಂಗಳೂರಿನ ಬೆಡಗಿ ದೀಪಿಕಾ ಪಡುಕೋಣೆ (Deepika Padukone) ಮೊದಲ ಬಾರಿಗೆ ಮಾತೃಭಾಷೆ ಕನ್ನಡದಲ್ಲಿ ಡಬ್ ಮಾಡಿರೋದು ವಿಶೇಷ.

  • ಹಾಟ್ ಆದ ಮೃಣಾಲ್- ನಟಿಯ ಮೈಮಾಟಕ್ಕೆ ಪಡ್ಡೆಹುಡುಗರು ಫಿದಾ

    ಹಾಟ್ ಆದ ಮೃಣಾಲ್- ನಟಿಯ ಮೈಮಾಟಕ್ಕೆ ಪಡ್ಡೆಹುಡುಗರು ಫಿದಾ

    ಬಾಲಿವುಡ್ ಬೆಡಗಿ ಮೃಣಾಲ್ ಠಾಕೂರ್ (Mrunal Thakur) ಇದೀಗ ಶರ್ಟ್ ಜಾರಿಸಿ ಹಾಟ್ ಆಗಿ ಪೋಸ್ ಕೊಟ್ಟಿದ್ದಾರೆ. ‘ಸೀತಾರಾಮಂ’ (Seetharamam) ನಟಿ ಬೋಲ್ಡ್ ಆಗಿ ಕಾಣಿಸಿಕೊಂಡಿರೋದನ್ನು ನೋಡಿ ಫ್ಯಾನ್ಸ್ ಅಚ್ಚರಿ ವ್ಯಕ್ತಪಡಿಸಿದ್ದಾರೆ.

    ಸದಾ ಸಿನಿಮಾಗಳ ಮೂಲಕ ಸದ್ದು ಮಾಡುತ್ತಿದ್ದ ನಟಿ ಈಗ ಗ್ಲ್ಯಾಮರಸ್‌ ಆಗಿ ಕಾಣಿಸಿಕೊಂಡು ಪಡ್ಡೆಹುಡುಗರ ನಿದ್ದೆ ಕದ್ದಿದ್ದಾರೆ. ವಿವಿಧ ಭಂಗಿಯ ಹಾಟ್ ಫೋಟೋಸ್ ಶೇರ್ ಮಾಡಿದ್ದಾರೆ. ಸಖತ್ ಸೆಕ್ಸಿಯಾಗಿ ನಟಿ ಪೋಸ್ ನೀಡಿದ್ದಾರೆ. ಮೃಣಾಲ್ ಮೈಮಾಟಕ್ಕೆ ಬಗೆ ಬಗೆಯ ಕಾಮೆಂಟ್‌ಗಳು ಹರಿದು ಬರುತ್ತಿವೆ.

    ಮೃಣಾಲ್ ಲುಕ್‌ಗೆ ಕೆಲವರು ಮೆಚ್ಚುಗೆ ಸೂಚಿಸಿದ್ರೆ, ಇನ್ನೂ ಕೆಲವರು ಹೀಗೆಲ್ಲಾ ಫೋಟೋಶೂಟ್ ಮಾಡಿಸಬೇಡಿ ಎಂದು ಫ್ಯಾನ್ಸ್‌ ಮನವಿ ಮಾಡಿದ್ದಾರೆ. ಇದನ್ನೂ ಓದಿ:ರಶ್ಮಿಕಾ, ಶ್ರೀಲೀಲಾ ಅಬ್ಬರದ ನಡುವೆ ಕಾಣೆಯಾದ ಕೃತಿ ಶೆಟ್ಟಿ

    ಮೃಣಾಲ್ ಠಾಕೂರ್‌ಗೆ ಇದೀಗ ಟಾಲಿವುಡ್, ಕಾಲಿವುಡ್, ಬಾಲಿವುಡ್‌ನಲ್ಲಿ ಭಾರೀ ಬೇಡಿಕೆಯಿದೆ. ‘ಸೀತಾರಾಮಂ’ ಸಕ್ಸಸ್ ನಂತರ ಸಾಲು ಸಾಲು ಸಿನಿಮಾಗಳು ನಟಿಯ ಕೈಯಲ್ಲಿವೆ. ಸ್ಟಾರ್ ನಟರ ಸಿನಿಮಾಗೆ ಮೃಣಾಲ್‌ನೇ ಬೇಕು ಎನ್ನುವಷ್ಟರ ಮಟ್ಟಿಗೆ ಡಿಮ್ಯಾಂಡ್ ಇದೆ.

  • ಮೃಣಾಲ್ ಠಾಕೂರ್‌ಗೆ ಮದುವೆ- ಹುಡುಗ ಯಾರು ಗೊತ್ತಾ?

    ಮೃಣಾಲ್ ಠಾಕೂರ್‌ಗೆ ಮದುವೆ- ಹುಡುಗ ಯಾರು ಗೊತ್ತಾ?

    ಸೌತ್ ನಟಿ ಮೃಣಾಲ್ ಠಾಕೂರ್ (Mrunal Thakur) ಅವರು ಅದೆಷ್ಟೋ ಹುಡುಗರ ಪಾಲಿಗೆ ಕ್ರಶ್ ಆಗಿದ್ದಾರೆ. ಸದಾ ಸಿನಿಮಾಗಳ ಮೂಲಕ ಸುದ್ದಿಯಾಗುವ ನಟಿ ಈಗ ಮದುವೆಯ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಕೆಲದಿನಗಳ ಹಿಂದೆ, ಚಿತ್ರವೊಂದರ ನಾನಿ (Nani) ಜೊತೆಗಿನ ಲಿಪ್ ಲಾಕ್ ದೃಶ್ಯ ವೈರಲ್ ಆಗಿ ಸಖತ್ ಸದ್ದು ಮಾಡಿತ್ತು. ಈಗ ಮೃಣಾಲ್ ಮದುವೆ (Wedding) ಮ್ಯಾಟರ್ ಗಾಸಿಪ್‌ ಪ್ರಿಯರ ಚರ್ಚೆಗೆ ಗ್ರಾಸವಾಗಿದೆ.

    ಇತ್ತೀಚೆಗೆ ನಡೆದ ಪ್ರಶಸ್ತಿ ಪ್ರದಾನ ಸಮಾರಂಭವೊಂದರಲ್ಲಿ ಬೆಸ್ಟ್ ನಟಿ ಎಂದು ಮೃಣಾಲ್‌ಗೆ ಅವಾರ್ಡ್ ಸಿಕ್ಕಿತ್ತು. ಈ ವೇಳೆ, ನಿರ್ಮಾಪಕ ಅಲ್ಲು ಅರವಿಂದ್ ಮಾತನಾಡಿ, ಶೀಘ್ರದಲ್ಲಿ ಮೃಣಾಲ್‌ಗೆ ಹೈದರಾಬಾದ್ ಹುಡುಗನ ಜೊತೆ ಮದುವೆಯಾಗಲಿ ಎಂದು ಶುಭಹಾರೈಸಿದ್ದರು. ಇದನ್ನೂ ಓದಿ:ಪಾರ್ಟ್‌ನರ್ ಎಂದು ಅದಿತಿ ಜೊತೆಗಿನ ಪ್ರೀತಿ ಒಪ್ಪಿಕೊಂಡ ಸಿದ್ಧಾರ್ಥ್

    ಅಲ್ಲು ಅರವಿಂದ್ (Allu Aravind) ಅವರ ಮಾತು ಕೇಳಿ ಅಭಿಮಾನಿಗಳು ಹುಬ್ಬೇರಿಸಿದ್ದಾರೆ. ಈ ಹಿಂದೆ ಲಾವಣ್ಯ ತ್ರಿಪಾಠಿಗೆ(Lavanya Tripathi) ಹೀಗೆ ಶುಭಹಾರೈಸಿದ್ದರು. ಅದರಂತೆ ಈಗ ನ.1ರಂದು ವರುಣ್ ತೇಜ್ ಜೊತೆ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಈಗ ಮೃಣಾಲ್, ಮುಂದಿನ ದಿನಗಳಲ್ಲಿ ಯಾರ ಜೊತೆ ಮದುವೆಯಾಗುತ್ತಾರೆ ಕಾದುನೋಡಬೇಕಿದೆ.

    ‘ಸೀತಾರಾಮಂ’ ಚಿತ್ರ ಮೂಲಕ ಗಮನ ಸೆಳೆದ ನಟಿ ಮೃಣಾಲ್‌ಗೆ ಬೇಡಿಕೆಯಿದೆ. ತೆಲುಗು, ತಮಿಳು, ಹಿಂದಿ ಸಿನಿಮಾಗಳಲ್ಲಿ ನಟಿಸುತ್ತಾ ನಟಿ ಬ್ಯುಸಿಯಾಗಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮತ್ತೆ ಹಾಟ್ ಅವತಾರದಲ್ಲಿ ಕಾಣಿಸಿಕೊಂಡ ‘ಸೀತಾರಾಮಂ’ ನಟಿ

    ಮತ್ತೆ ಹಾಟ್ ಅವತಾರದಲ್ಲಿ ಕಾಣಿಸಿಕೊಂಡ ‘ಸೀತಾರಾಮಂ’ ನಟಿ

    ಹುಡುಗರ ಪಾಲಿನ ಇಷ್ಟದೇವತೆ ಸೀತೆ ಮೃಣಾಲ್ ಠಾಕೂರ್ (Mrunal Thakur) ಇದೀಗ ಕಡಲ ಕಿನಾರೆಯಲ್ಲಿ ವೆಕೇಷನ್ ಎಂಜಾಯ್ ಮಾಡ್ತಿದ್ದಾರೆ. ಮತ್ತೆ ಹಾಟ್ ಅವತಾರದಲ್ಲಿ ‘ಸೀತಾರಾಮಂ’ (Seetharamam) ಸುಂದರಿ ಕಾಣಿಸಿಕೊಂಡಿದ್ದಾರೆ.

    ‘ಸೀತಾರಾಮಂ’ ಸಿನಿಮಾದಲ್ಲಿ ದುಲ್ಕರ್ ಸಲ್ಮಾನ್‌ಗೆ ಜೋಡಿಯಾಗಿ ನಟಿಸಿದ್ದ ಮೃಣಾಲ್ ಅಭಿನಯಕ್ಕೆ ಅಭಿಮಾನಿಗಳು ಫಿದಾ ಆಗಿದ್ದರು. ಚಿತ್ರದ ಕಥೆ ಸೀತೆಯ ನಟನೆ ಎಲ್ಲವೂ ಫ್ಯಾನ್ಸ್‌ಗೆ ಮೋಡಿ ಮಾಡಿತ್ತು. ಈ ಸಿನಿಮಾದ ಬಳಿಕ ಮೃಣಾಲ್ ಬಂಪರ್ ಆಫರ್ ಸಿಕ್ತು. ಇದೀಗ ಸಾಲು ಸಾಲು ಸಿನಿಮಾಗಳಿಗೆ ಮೃಣಾಲ್ ನಾಯಕಿಯಾಗಿದ್ದಾರೆ.

    ಚಿತ್ರೀಕರಣಕ್ಕೆ ಬ್ರೇಕ್ ಹಾಕಿ ಕಡಲ ಕಿನಾರೆಯಲ್ಲಿ ನಟಿ ವೆಕೇಷನ್ ಎಂಜಾಯ್ ಮಾಡ್ತಿದ್ದಾರೆ. ಲೈಟ್ ಬಣ್ಣದ ಡ್ರೆಸ್ ಧರಿಸಿ ಹಾಟ್ ಆಗಿ ಕ್ಯಾಮೆರಾ ಕಣ್ಣಿಗೆ ಪೋಸ್ ಕೊಟ್ಟಿದ್ದಾರೆ. ಕಳೆದ ಬಾರಿ ಮೃಣಾಲ್ ಬೋಲ್ಡ್ ಆಗಿ ಕಾಣಿಸಿಕೊಂಡು ಪಡ್ಡೆಹುಡುಗರು ಹುಬ್ಬೇರಿಸುವಂತೆ ಮಾಡಿದ್ದರು. ಇದೀಗ ಮತ್ತೆ ಬೋಲ್ಡ್ ಅವತಾರ ತಾಳಿದ್ದಾರೆ. ಇದನ್ನೂ ಓದಿ:ಮೈಸೂರು ಚಾಮುಂಡೇಶ್ವರಿ ದೇವಸ್ಥಾನದಲ್ಲಿ ದೀಪಿಕಾ ದಾಸ್

     

    View this post on Instagram

     

    A post shared by Mrunal Thakur (@mrunalthakur)

    ಮೃಣಾಲ್ ವೆಕೇಷನ್ ಫೋಟೋ ವೈರಲ್ ಆಗ್ತಿದ್ದಂತೆ ದಯವಿಟ್ಟು ಈ ರೀತಿ ಡ್ರೆಸ್‌ನ ಧರಿಸಬೇಡಿ ಎಂದು ಮನವಿ ಮಾಡಿದ್ದಾರೆ. ಸೀತೆಯಾಗಿ ನೋಡಿರೋ ನೆಟ್ಟಿಗರು ನಟಿಯ ಹಾಟ್ ಅವತಾರಕ್ಕೆ ಕ್ಲಾಸ್ ತೆಗೆದುಕೊಂಡಿದ್ದಾರೆ.