Tag: seized

  • ವಿಮಾನದ ಶೌಚಾಲಯದಲ್ಲಿ 2 ಕೆ.ಜಿ 116 ಗ್ರಾಂ ಚಿನ್ನ ಪತ್ತೆ

    ವಿಮಾನದ ಶೌಚಾಲಯದಲ್ಲಿ 2 ಕೆ.ಜಿ 116 ಗ್ರಾಂ ಚಿನ್ನ ಪತ್ತೆ

    ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2 ಕೆ.ಜಿ 116 ಗ್ರಾಂ ಚಿನ್ನ ಪತ್ತೆಯಾಗಿದೆ.

    ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ ವೇಳೆ ವಿಮಾನದಲ್ಲಿ 2 ಕೆ.ಜಿ 116 ಗ್ರಾಂ ತೂಕದ 66.67 ಲಕ್ಷ ರೂ. ಮೌಲ್ಯದ ಚಿನ್ನ ಪತ್ತೆಯಾಗಿದೆ.

    ಎಸ್‍ಜಿ 479 ಸ್ಪೈಸ್ ಜೆಟ್ ವಿಮಾನದ ಶೌಚಾಲಯದಲ್ಲಿ ಚಿನ್ನ ಪತ್ತೆಯಾಗಿದ್ದು, ಈ ವಿಮಾನ ಮುಂಬೈಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿತ್ತು. ಈ ವೇಳೆ ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳ ಕಾರ್ಯಾಚರಣೆ ನಡೆಸಿದ್ದರು.

    ಆಗ 2 ಕೆಜಿ 116 ಗ್ರಾಂ ಚಿನ್ನದ ಬಿಲ್ಲೆ ಪತ್ತೆಯಾಗಿದೆ. ಸದ್ಯಕ್ಕೆ ಅಧಿಕಾರಿಗಳು ಚಿನ್ನವನ್ನು ವಶಪಡಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.

  • ಪೊಲೀಸ್ ದಾಳಿ – ಲಕ್ಷಾಂತರ ರೂ. ಮೌಲ್ಯದ ಅಕ್ರಮ ಮದ್ಯ ಜಪ್ತಿ

    ಪೊಲೀಸ್ ದಾಳಿ – ಲಕ್ಷಾಂತರ ರೂ. ಮೌಲ್ಯದ ಅಕ್ರಮ ಮದ್ಯ ಜಪ್ತಿ

    ರಾಯಚೂರು: ಕರ್ನಾಟಕ ವಿಧಾನಸಭಾ ಚುಣಾವಣೆ ಹಿನ್ನೆಲೆಯಲ್ಲಿ ಎಲ್ಲಾ ಕಡೆಯೂ ದಾಳಿ ಮಾಡಿ ಹಣವನ್ನು ಅಧಿಕಾರಿಗಳು ಜಪ್ತಿ ಮಾಡುತ್ತಿದ್ದಾರೆ. ಈಗ ಬೊಮ್ಮನಾಳ ಬಳಿ ಲಕ್ಷಾಂತರ ರೂಪಾಯಿ ಮದ್ಯ ಅಕ್ರಮ ಸಾಗಣೆ ಮಾಡುತ್ತಿದ್ದ ಇಬ್ಬರನ್ನ ಬಂಧಿಸಿದ್ದು, ಮದ್ಯವನ್ನು ಜಪ್ತಿ ಮಾಡಲಾಗಿದೆ.

    ಮುದಗಲ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ 300 ಬಾಕ್ಸ್ ನಲ್ಲಿದ್ದ 2,592 ಲೀಟರ್ ವಿಸ್ಕಿ ಮತ್ತು ಎರಡು ಟಾಟಾ ಏಸ್ ವಾಹನ ಜಪ್ತಿ ಮಾಡಿದ್ದಾರೆ. ಅಂದಾಜು 4 ಲಕ್ಷದ 32 ಸಾವಿರ ರೂ. ಮೌಲ್ಯದ ಮದ್ಯ ಜಪ್ತಿಯಾಗಿದೆ. ಆರೋಪಿಗಳಾದ ಮುತ್ತು ಮತ್ತು ಸದ್ದಾಂ ಎಂಬುವರನ್ನ ಬಂಧಿಸಲಾಗಿದೆ. ಬಾಗಲಕೋಟೆಯಿಂದ ಬೊಮ್ಮನಾಳ ಮಾರ್ಗವಾಗಿ ಮದ್ಯ ಸಾಗಣೆ ಮಾಡಲಾಗುತ್ತಿದ್ದ ವೇಳೆ ದಾಳಿ ಮಾಡಲಾಗಿದೆ.

    ಈ ಘಟನೆ ಸಂಬಂಧ ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ವಿಚಾರಣೆ ಮುಂದುವರಿದಿದೆ.