Tag: Senior Leaders

  • ದಿಗ್ವಿಜಯ್ ಸಿಂಗ್, ವೇಣುಗೋಪಾಲ್ ಸೇರಿ ಕೇಂದ್ರದ ನಾಯಕರನ್ನು ಭೇಟಿಯಾದ ಸಿದ್ದರಾಮಯ್ಯ

    ದಿಗ್ವಿಜಯ್ ಸಿಂಗ್, ವೇಣುಗೋಪಾಲ್ ಸೇರಿ ಕೇಂದ್ರದ ನಾಯಕರನ್ನು ಭೇಟಿಯಾದ ಸಿದ್ದರಾಮಯ್ಯ

    ನವದೆಹಲಿ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇಂದು ಕಾಂಗ್ರೆಸ್ ಹೈ ಕಮಾಂಡ್‍ನ ವಿವಿಧ ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್, ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿಯಾಗಿದ್ದಾರೆ. ಅಲ್ಲದೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಭೇಟಿಯಾಗಿ ಹುಟ್ಟುಹಬ್ಬಕ್ಕೆ ಶುಭಾಶಯ ತಿಳಿಸಿದ್ದಾರೆ.

    ಕಾಂಗ್ರೆಸ್ ಹಿರಿಯ ನಾಯಕ ಎ.ಕೆ.ಆಂಟನಿ ಅವರನ್ನು ಸಹ ಭೇಟಿಯಾಗಿ ವಿವಿಧ ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ. ಹೀಗೆ ಕಾಂಗ್ರೆಸ್‍ನ ವಿವಿಧ ಹಿರಿಯ ನಾಯಕರನ್ನು ಭೇಟಿ ಮಾಡಿ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದಾರೆ.

    ಇದೇ ವೇಳೆ ಮಾತನಾಡಿದ ಸಿದ್ದರಾಮಯ್ಯ, ಕಾಂಗ್ರೆಸ್ ಲಿಂಗಾಯತ ನಾಯಕರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಬೆಂಬಲ ಸೂಚಿಸಿರುವ ಕುರಿತು ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ನಾಯಕರ ಜೊತೆ ಮಾತನಾಡುತ್ತೇನೆ. ಎಂ.ಬಿ.ಪಾಟೀಲ್, ಶಿವಶಂಕರಪ್ಪ ಜೊತೆ ಈ ಕುರಿತು ಚರ್ಚಿಸುತ್ತೇನೆ ಎಂದು ತಿಳಿಸಿದ್ದಾರೆ.

    ದೆಹಲಿ ಪ್ರವಾಸ ಮುಗಿಸಿರುವ ಸಿದ್ದರಾಮಯ್ಯ, ಇಂದು ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ಕೆ.ಸಿ.ವೇಣುಗೋಪಾಲ್ ಅವರ ಭೇಟಿ ಮುಗಿಸಿ ಬೆಂಗಳೂರಿಗೆ ಮರಳಿದ್ದಾರೆ.