Tag: Senior students

  • ವಸತಿ ಶಾಲೆಯ ನಾಲ್ವರು ವಿದ್ಯಾರ್ಥಿಗಳಿಂದ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‍ರೇಪ್!

    ವಸತಿ ಶಾಲೆಯ ನಾಲ್ವರು ವಿದ್ಯಾರ್ಥಿಗಳಿಂದ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‍ರೇಪ್!

    ಡೆಹ್ರಾಡೂನ್: ಉತ್ತರಾಖಂಡದ ಡೆಹ್ರಾಡೂನ್ ವಸತಿ ಶಾಲೆಯೊಂದರಲ್ಲಿ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳ ಮೇಲೆ ನಾಲ್ವರು ಹಿರಿಯ ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರ ಎಸೆಗಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

    ಆರೋಪಿಗಳನ್ನು ಬಂಧಿಸಲಾಗಿದ್ದು, ಅವರೆಲ್ಲರೂ 17 ವರ್ಷದವರಾಗಿದ್ದಾರೆ. ಹಾಸ್ಟೆಲ್‍ನಲ್ಲಿ ಇದ್ದ ಸಂತ್ರಸ್ತ ವಿದ್ಯಾರ್ಥಿ ಅಸ್ವಸ್ಥಗೊಂಡು ಮಲಗಿದ್ದಾಗ, ತನ್ನ ಮೇಲೆ ಅತ್ಯಾಚಾರವಾಗಿದೆ ಎಂದು ಸಹೋದರಿಗೆ ತಿಳಿಸಿದ್ದಾಳೆ. ಅಷ್ಟೇ ಅಲ್ಲದೆ ವಿದ್ಯಾರ್ಥಿ ಮೂರು ತಿಂಗಳ ಗರ್ಭಿಣಿ ಎಂದು ವರದಿಯಾಗಿದೆ.

    ಆಗಸ್ಟ್ 14ರಂದು ಶಾಲೆಯ ಆವರಣದಲ್ಲಿಯೇ ನಾಲ್ವರು ಹಿರಿಯ ವಿದ್ಯಾರ್ಥಿಗಳು 16 ವರ್ಷದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಪ್ರಕರಣವನ್ನು ಶಾಲೆಯ ಆಡಳಿತ ಮಂಡಳಿ ಮುಚ್ಚಿಹಾಕಲು ಯತ್ನಿಸಿದ ಆರೋಪ ಕೇಳಿಬಂದಿದ್ದು, ಶಾಲೆಯ ನಿರ್ದೇಶಕ, ಪ್ರಾಚಾರ್ಯ, ಆಡಳಿತಾಧಿಕಾರಿ ಹಾಗೂ ಅವರ ಪತ್ನಿ ಮತ್ತು ಹಾಸ್ಟೆಲ್ ವಾರ್ಡನ್‍ನನ್ನು ವಶಕ್ಕೆ ಪಡೆಯಲಾಗಿದೆ ಎಂದು ಡಿಜಿಪಿ ಅಶೋಕ್ ಕುಮಾರ್ ತಿಳಿಸಿದ್ದಾರೆ.

    ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಯುವತಿಯ ಪೋಷಕರು ಶಾಲೆಗೆ ದೌಡಾಯಿಸಿದ್ದಾರೆ. ಪೊಲೀಸರ ಜೊತೆಗೆ ಬಂದ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಹಾಗೂ ಮಕ್ಕಳ ಕಲ್ಯಾಣ ಆಯೋಗ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿನಿ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ.

    ಬಂಧಿತ ನಾಲ್ವರು ವಿದ್ಯಾರ್ಥಿಗಳ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv